Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತೀವ್ರವಾಗಿ ಗಾಯಗೊಂಡಿದ್ದ ಕಡಲಾಮೆಯನ್ನು ಬುಧವಾರ ಕೋಡಿ ಕಿನಾರ ಬಳಿಯ ಕಡಲ ತಡಿಯಲ್ಲಿ ರಕ್ಷಿಸಲಾಗಿದೆ. ವಲಯ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಅವರ ನೇತೃತ್ವದಲ್ಲಿ ಕ್ಲೀನ್ ಕುಂದಾಪುರ ಪ್ರಾಜೆಕ್ಟ್‌ನ ಭರತ್ ಬಂಗೇರ, ರೀಫ್ ವಾಚ್ ಇಂಡಿಯಾದ ಶಂತನು, ತೇಜಸ್ವಿನಿ, ಎಫ್.ಎಸ್.ಎಲ್ ಇಂಡಿಯಾದ ದಿನೇಶ್ ಸಾರಂಗ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಗ್ರಾಮದ ಬೇಬಿ ದೇವಾಡಿಗ ಅವರ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಹಾಗೂ ಹಾಗೂ ಗೃಹ ಪ್ರವೇಶದ ದಿನ ಊಟೋಪಚಾರಕ್ಕೆ ದೇಣಿಗೆ ನೀಡಿದ ಉದ್ಯಮಿ ಗುರುರಾಜ ಪೂಜಾರಿ ಅವರಿಗೆ ಉಪ್ಪುಂದ ದೇವಾಡಿಗ ಸಂಘದಿಂದ ಗೌರವಿಸಲಾಯಿತು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯರಾದ ಜಗದೀಶ್ ದೇವಾಡಿಗ ಹಾಗೂ ಪ್ರಮೀಳಾ ದೇವಾಡಿಗ, ಉಪ್ಪುಂದ ದೇವಾಡಿಗ ಸಂಘದ ಅದ್ಯಕ್ಷರಾದ ಮಾಧವ ದೇವಾಡಿಗ, ಕಾರ್ಯದರ್ಶಿ ನರಸಿಂಹ ದೇವಾಡಿಗ, ಉಪಾಧ್ಯಕ್ಷ ರಾಮಚಂದ್ರ ದೇವಾಡಿಗ, ದೇವಾಡಿಗ ಮಹೀಳಾ ಸಂಘದ ಅಧ್ಯಕ್ಷರಾದ ನಾಗಮ್ಮ ದೇವಾಡಿಗ ಹಾಗೂ ಸದಸ್ಯರು ಉಪಸ್ಥಿತರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶೆಫ್‌ಟಾಕ್ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಬಿಜೂರಿನ ಗೋವಿಂದ ಬಾಬು ಪೂಜಾರಿ ಅವರು ಶ್ರೀ ನಾರಾಯಣಗುರು ಕೋ-ಆಪರೇಟೀವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರ ಮಾತೃಸಂಸ್ಥೆ ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ ವತಿಯಿಂದ ಕಚೇರಿಯಲ್ಲಿ ಬುಧವಾರ ಗೌರವಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ರಾಘವೇಂದ್ರ ಪೂಜಾರಿ, ಜಯರಾಮ ಶೆಟ್ಟಿ ಬಿಜೂರು, ಮಂಜುನಾಥ ಪೂಜಾರಿ, ಪ್ರಬಂಧಕರಾದ ನಾಗರಾಜ ಪೂಜಾರಿ, ವಿಲಿಯಂ ಗೋಮ್ಸ್, ಸಿಬ್ಬಂದಿಗಳಾದ ಅಶ್ವಿನಿ, ಸೌಮ್ಯಾ ಶೆಟ್ಟಿ, ಲೋಕೇಶ ಪೂಜಾರಿ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಚಿಕನ್‌ಸಾಲ್ ರಸ್ತೆ ವಾರ್ಡಿನ 58 ವರ್ಷದ ವ್ಯಕ್ತಿ ಹಾಗೂ 50 ವರ್ಷದ ಅವರ ಪತ್ನಿಗೆ ಕೋವಿಡ್ ಪಾಸಿಟಿವ್ ಇರುವುದು ಬುಧವಾರ ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿಗಳ ಸಂಬಂಧಿಕರೊಬ್ಬರು ಇತ್ತೀಚೆಗಷ್ಟೇ ಬೆಂಗಳೂರಿನಿಂದ ಬಂದಿದ್ದರು. ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಆ ಮನೆಯಲ್ಲಿದ್ದ ನಾಲ್ವರನ್ನು ಕ್ವಾರಂಟೈನ್ ಮಾಡಿ, ಅವರ ಗಂಟಲ ದ್ರವದ ವರದಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ದಂಪತಿಯ ವರದಿ ಪಾಸಿಟಿವ್ ಬಂದಿದ್ದು, ಉಳಿದ ಇಬ್ಬರದು ನೆಗೆಟಿವ್ ಬಂದಿದೆ. ಸದ್ಯ ಮನೆಯನ್ನು ಸೀಲ್ಡೌನ್ ಮಾಡಿ, ದಂಪತಿಗಳನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಮಂಗಳವಾರ ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾಲಿಗ್ರಾಮದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಮುಖಂಡ ಎಂ.ಎ.ಗಫೂರ್ ಮಾತನಾಡಿ, ‘ಕೇಂದ್ರ ಸರ್ಕಾರ ಜನರ ಜೀವನದ ಜತೆ ಚೆಲ್ಲಾಟ ಆಡುತ್ತಿದೆ. ಜಾಗತಿಕವಾಗಿ ಪೆಟ್ರೋಲ್ ದರ ಭಾರಿ ಇಳಿಕೆಯಾಗಿದ್ದರೂ, ದೇಶದಲ್ಲಿ ದಿನದಿಂದ ದಿನಕ್ಕೆ ದರ ಏರಿಕೆ ಆಗುತ್ತಿದೆ. ಬಾಯಿ ತೆರೆದರೆ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಅನ್ನುತ್ತಾರೆ. ಜನರಿಗಾಗಿ ಏನು ಮಾಡಿದ್ದಾರೆ ? ಬಣ್ಣಬಣ್ಣದ ಮಾತನ್ನಾಡಿ ಜನರ ತಲೆ ಕೆಡಿಸಿದ್ದಾರೆ,ಇನ್ನಾವ ಕಾರ್ಯ ಮಾಡಲ್ಲಿಲ್ಲ. ಇದನ್ನು ಜನಸಾಮಾನ್ಯ ಅರ್ಥೈಸಿಕೊಳ್ಳಬೇಕು’ ಎಂದು ಹೇಳಿದರು. ಕಾಂಗ್ರೆಸ್ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಂದಾಪುರ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವೈ.ಬಿ. ರಾಘವೇಂದ್ರ, ನಟರಾಜ್ ಹೊಳ್ಳ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಾಲಕೃಷ್ಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯ ಸರಕಾರದ ಆದೇಶದಂತೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ, ಖಾಸಗಿ ಆಸ್ಪತ್ರೆಗಳಲ್ಲಿ ಸಹ ಕೋವಿಡ್ 19 ಸೋಂಕಿತರು ಚಿಕಿತ್ಸೆಯನ್ನು ಪಡೆಯಬಹುದಾಗಿದ್ದು, ಇದಕ್ಕಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಹೊಂದಿರಬೇಕಾಗುತ್ತದೆ. ಇದನ್ನು ಬಿಪಿಎಲ್, ಎಪಿಎಲ್ ಹಾಗೂ ಕಾರ್ಡ್ ಇಲ್ಲದವರು ಸಹ ಸೇರಿದಂತೆ, ವಿವಿಧ ಸರ್ಕಾರಿ ನೌಕರರಿಗೆ ಈ ಕಾರ್ಡ್ ಪಡೆಯಲು ಅವಕಾಶವಿರುತ್ತದೆ. ಆದ್ದರಿಂದ ಸಾರ್ವಜನಿಕರು ಸದರಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಮಾಡಿಸಿಕೊಳ್ಳಲು, ನಿಮ್ಮ ಹತ್ತಿರದ ಸೇವಾ ಸಿಂಧು ಕೇಂದ್ರದಲ್ಲಿ ಕಾಗದದ ಪ್ರತಿ 10 ರೂ ಹಾಗೂ ಸ್ಮಾರ್ಟ್ ಕಾರ್ಡ್ ಪ್ರತಿಗೆ 35 ರೂ ಪಾವತಿಸಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸುವoತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.8ರ ಬುಧವಾರ 31 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 236 ನೆಗೆಟಿವ್: ಈ ತನಕ ಒಟ್ಟು 20,493 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,992 ನೆಗೆಟಿವ್, 1,421 ಪಾಸಿಟಿವ್ ಬಂದಿದ್ದು, 3,080 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 236 ನೆಗೆಟಿವ್, 31 ಪಾಸಿಟಿವ್ ಬಂದಿದೆ. ಒಟ್ಟು 1,197 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 229 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,421ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,189 ಮಂದಿ ಬಿಡುಗಡೆಯಾಗಿದ್ದು, 205 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯ ಕೋವಿಡ್ -19 ಸರ್ಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ – https://kundapraa.com/?p=39353 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ ಕೋವಿಡ್-19 ಸರ್ಕಾರಿ ಪರೀಕ್ಷಾ ಲ್ಯಾಬನ್ನು ರಾಜ್ಯದ ಮುಜರಾಯಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ರಾಜ್ಯದಲ್ಲೇ ಕೊರೋನಾ ಆರಂಭದಲ್ಲಿ ಕೇವಲ ಒಂದು ಪರೀಕ್ಷಾ ಲ್ಯಾಬ್ ಮಾತ್ರ ಇದ್ದು, ಆದರೆ ಈ ಲ್ಯಾಬಿನೊಂದಿಗೆ ರಾಜ್ಯದಲ್ಲಿನ ಕೋವಿಡ್ ಪರೀಕ್ಷಾ ಲ್ಯಾಬ್ ಗಳ ಸಂಖ್ಯೆ 82 ಕ್ಕೇರಿದೆ. ಜಿಲ್ಲೆಯಲ್ಲಿ ಮೊದಲು ಟೆಸ್ಟಿಂಗ್ ಗಾಗಿ ಮಂಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳನ್ನು ಅವಲಂಬಿಸಬೇಕಿತ್ತು, ಈಗ ಇಲ್ಲಿಯೇ ಲ್ಯಾಬ್ ಆರಂಬಿಸಿರುವುದರಿಂದ ಇನ್ನು ಮುಂದೆ ಇಲ್ಲಿಯೇ ಶೀಘ್ರದಲ್ಲಿ ವರದಿ ಪಡೆಯಬಹುದಾಗಿದೆ. ಹೊರ ರಾಜ್ಯ, ದೇಶಗಳಿಂದ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವವರಿಗಾಗಿ, ಇಲ್ಲಿ ಲ್ಯಾಬ್ ನ ಆರಂಭಿಸಬೇಕಾದ ಅವಶ್ಯಕತೆ ಮನಗಂಡು ಮಾನ್ಯ ಮುಖ್ಯಮಂತ್ರಿಗಳು ಈ ಲ್ಯಾಬ್ ನ್ನು ಉಡುಪಿ ಜಿಲ್ಲೆಗೆ ವಿಶೇಷವಾಗಿ ಮಂಜೂರು ಮಾಡಿದ್ದಾರೆ ಎಂದು ಸಚಿವ ಕೋಟ ತಿಳಿಸಿದರು. ಕೋರೋನಾ ನಿಯಂತ್ರಣ ಮತ್ತು ನಿರ್ವಹಣೆ ಕುರಿತಂತೆ, ಉಡುಪಿ ಜಿಲ್ಲಾಡಳಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.7ರ ಮಂಗಳವಾರ 28 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 466 ನೆಗೆಟಿವ್: ಈ ತನಕ ಒಟ್ಟು 19,773 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,756 ನೆಗೆಟಿವ್, 1,390 ಪಾಸಿಟಿವ್ ಬಂದಿದ್ದು, 2,627 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 466 ನೆಗೆಟಿವ್, 40 ಪಾಸಿಟಿವ್ ಬಂದಿದೆ. ಒಟ್ಟು 1170 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 205 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,390 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,182 ಮಂದಿ ಬಿಡುಗಡೆಯಾಗಿದ್ದು, 205 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಅನುಮತಿಯಿಲ್ಲದೇ ಸಭೆ – ಸಮಾರಂಭ ನಡೆಸಿದಲ್ಲಿ ಪ್ರಕರಣ ದಾಖಲು: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=39331 . ► ಕೋವಿಡ್ ಪರೀಕ್ಷೆ ಮಾಡಿಸಿದವರು ವರದಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಅ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು ಈ ಸಂದರ್ಭದಲ್ಲಿ ಪೂರ್ವಾನುಮತಿ ಇಲ್ಲದೆ, ನಿಯಮ ಬಾಹಿರವಾಗಿ ಹುಟ್ಟುಹಬ್ಬದ ಆಚರಣೆ, ಮೆಹಂದಿ ಕಾರ್ಯಕ್ರಮಗಳು, ಸನ್ಮಾನ ಕಾರ್ಯಕ್ರಮ ಮುಂತಾದವುಗಳು ನಡೆಯುತ್ತಿದೆ. ಇಂತಹ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂಬ ಅಂಶವನ್ನು ಸಂಘಟಕರು ಅರಿತುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳಿಂದಾಗಿ ಕೋವಿಡ್ -19 ನ್ನು ಹರಡುವ ಸಾಧ್ಯತೆಯಿದ್ದು, ಈ ಕಾರ್ಯಕ್ರಮಗಳ ಸಂಘಟಕರ ಮೇಲೆ ಕಡ್ಡಾಯವಾಗಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಪೂರ್ವಾನುಮತಿಯ ಮೇರೆಗೆ ಜರುಗುವ ಮದುವೆ / ಇತರೆ ಸಭೆ ಸಮಾರಂಭ, ಸನ್ಮಾನ ಇತ್ಯಾದಿ ಕಾರ್ಯಕ್ರಮಗಳಲ್ಲಿ ಸರ್ಕಾರದ ಆದೇಶದನ್ವಯ , ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಗ್ಲೌಸ್, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಶುಚಿತ್ವ ಕಾಪಾಡಿಕೊಳ್ಳುವಿಕೆಗೆ ಹಾಗೂ ಇತರ ಎಸ್.ಓ.ಪಿ. ಕ್ರಮಗಳು ಯಥಾ ರೀತಿಯಲ್ಲಿ ಪಾಲನೆಯಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಲು ಸಂಬಂಧಿಸಿದ ತಹಶೀಲ್ದಾರರು/ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು/ ಉಡುಪಿ ನಗರಸಭೆ ಪೌರಾಯುಕ್ತರು / ಮುಖ್ಯಾಧಿಕಾರಿಗಳು/ ಗ್ರಾಮ…

Read More