ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಾಡೋಜ ಜಿ. ಶಂಕರ್ ಅವರ ವ್ಯಕ್ತಿತ್ವ ವಿಭಿನ್ನವಾದದ್ದು ಸಮಾಜಕ್ಕಾಗಿ ತನ್ನ ಸರ್ವಸ್ವವನ್ನೂ ಧಾರೆ ಎರೆದ ಮಹಾನ್ ಶಕ್ತಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಟದ ಮಾಂಗಲ್ಯ ಮಂದಿದ ಸಮೀಪ ಹಿರೇ ಮಹಾಲಿಂಗೇಶ್ವರ ರಥಬೀದಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸದ್ಭಾವನಾ- 2026ರ ಶೀರ್ಷಿಕೆಯಡಿ ನಡೆದ ಪಂಚವರ್ಣ ಕನ್ನಡ ರಾಜ್ಯೋತ್ಸವ ಗೌರವ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿ ಜಿ. ಶಂಕರ್ ಎನ್ನುವ ಒರ್ವ ವ್ಯಕ್ತಿಯಾಗಿರದೆ ಅವರೊಬ್ಬ ಶಕ್ತಿಯಾಗಿ ಸಮಾಜದ ಕಣ್ಣು ತೆರೆಸುವುದರ ಜೊತೆಗೆ ಜಗತ್ತಿಗೆ ಸಂತನಂತೆ ಕಾರ್ಯನಿರ್ವಹಿಸಿದ ಮೇಧಾವಿ ಅಂತಹ ಶಕ್ತಿ ಯಾವುದೇ ಪ್ರಶಸ್ತಿ ಹಿಂದೆ ಹೊದವರಲ್ಲಿ ಆದರೆ ಅವರು ತನ್ನ ಹುಟ್ಟೂರ ಸಮೀಪ ಪಂಚವರ್ಣ ಎಂಬ ಒಂದು ಸಮಾಜಮುಖಿ ಪರಿಸರದ ಬಗ್ಗೆ ಕಾಳಜಿ ಇರುವ ಸಂಸ್ಥೆಯ ಗೌರವಗೆ ಪಾತ್ರರಾಗಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದರು. ಪಂಚವರ್ಣ ರಾಜ್ಯೋತ್ಸವ ಗೌರವ ಸ್ವೀಕರಿಸಿ ಮಾತನಾಡಿದ ನಾಡೋಜ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಹೆಜಮಾಡಿಯಿಂದ ಬೈಂದೂರು ವರೆಗಿನ ನಿರಂತರ ಅಪಘಾತಗಳು ಮತ್ತು ಮೂಲಭೂತ ಸೌಕರ್ಯದ ಕೊರತೆ, ಹೆದ್ದಾರಿ ವಿಭಜಕಗಳ ಮಧ್ಯೆ ತಡೆಗೋಡೆ, ಅಪಘಾತ ಸಂಭವಿಸುವ ಬ್ಲಾಕ್ಸ್ಪಾಟ್ ವಲಯಗಳಲ್ಲಿ ಡಿವೈಡರ್ಗಳ ಮಧ್ಯೆ ತಡೆಬೇಲಿ ರಚನೆ, ಜನಜಂಗುಳಿ ಮತ್ತು ಬೇಡಿಕೆ ಇರುವ ಕಡೆ ಎಫ್.ಓ.ಬಿ ನಿರ್ಮಾಣ, ಉಡುಪಿಯ ಅಂಬಾಗಿಲು, ಕೋಟ ಪಡುಬಿದ್ರೆಗಳಲ್ಲಿ ಟ್ರಾಫಿಕ್ ಸಿಗ್ನಲ್ಗಳ ಅಳವಡಿಕೆ ಹಾಗೂ ಎನ್.ಹೆಚ್-66 ರ ಅಪಘಾತ ನಿಯಂತ್ರಣ ಮತ್ತು ಅಭಿವೃದ್ಧಿಯ ಬಗ್ಗೆ ನನ್ನ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ನಾಗಸಂದ್ರದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಅಧಿಕಾರಿ ವಿಲಾಸ್ ಬ್ರಾಹ್ಮಣ್ಕರ್ ರವರ ಕಚೇರಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ತುರ್ತು ಸಭೆ ನಡೆಸಿದರು. ಈ ವೇಳೆ ಸಂಸದರು ಮಾತನಾಡಿ, ಹೆಜಮಾಡಿಯಿಂದ ಬೈಂದೂರುವರೆಗೆ ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕೇವಲ 10 ತಿಂಗಳಲ್ಲಿ 94 ಮಂದಿ ಅಪಘಾತಕ್ಕೆ ಬಲಿಯಾಗಿ ಸಾವನಪ್ಪಿದ್ದಾರೆ. 14 ಸ್ಥಳ ಅಪಘಾತದ ಬ್ಲಾಕ್ಸ್ಪಾಟ್ಗಳೆಂದು ಗುರುತಿಸಲಾಗಿದ್ದರೂ ಇಲಾಖೆ ನಿರ್ವಹಣೆ ನಿರ್ಲಕ್ಷದಿಂದ ಸಮಸ್ಯೆ ಗಂಭೀರವಾಗುತ್ತಿದೆ. ಪ್ರಸ್ತಾಪಿತ ಎನ್.ಹೆಚ್ 66 ಸಮಗ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ಭಾಗದ ಮಕ್ಕಳು ಬಿಸಿಲು-ಮಳೆಗಳನ್ನು ಲೆಕ್ಕಿಸದೇ ದೈಹಿಕ ಶ್ರಮ ವಹಿಸಲು ಶಕ್ತರು. ಅನನುಕೂಲ ವಾತಾವರಣದಲ್ಲೂ ತಮ್ಮನ್ನು ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರಿಗೆ ಸಹಜ ದೇಹದಾರ್ಢ್ಯತೆ ಬರುವುದರಿಂದ ವಿದ್ಯಾರ್ಥಿಗಳಿಗೆ ಕ್ರೀಡಾಸಾಧನೆ ಮಾಡಲು ಸಹಾಯಕ ಎಂದು ಅರೆಶಿರೂರಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಹೈಸ್ಕೂಲಿನ ದೈಹಿಕ ಶಿಕ್ಷಕರಾದ ರಾಜೀವ ಶೆಟ್ಟಿ ಹೇಳಿದರು. ಅವರು ಇಲ್ಲಿನ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡೋತ್ಸವಕ್ಕೆ ಅತಿಥಿಯಾಗಿ ಆಗಮಿಸಿದ ನೇಂಪು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕರಾದ ವಸಂತ ರಾಜ್ ಶೆಟ್ಟಿ ಅವರು ಶಿಕ್ಷಣದ ಜೊತೆಗೆ ಕ್ರೀಡೆ ಇದ್ದರೆ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು. ಕಾಲೇಜಿನ ಸಂಚಾಲಕರಾದ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಬೈಂದೂರಿನ ಮಾಜಿ ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಕುಂದಾಪುರ ತಾಲೂಕಿನ ಜನರ ವ್ಯಾಪಾರ ವ್ಯವಹಾರ, ಆಹಾರೋದ್ಯಮ, ಸುವ್ಯವಸ್ಥೆ ಎಲ್ಲರನ್ನೂ ಬೆರಗುಗೊಳಿಸುತ್ತಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬೀದರ್ನಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಸ್ಪರ್ಧೆಯ ಫಲಿತಾಂಶ :ಟ್ರೆಡಿಶನಲ್: ಬಾಲಕರ ವಿಭಾಗದಲ್ಲಿ ಶಿವಕುಮಾರ್ ವಿ ಜಿ- ಪ್ರಥಮ ಸ್ಥಾನಆರ್ಟಿಸ್ಟಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕಾ ಜೆ ಎಂ ಮತ್ತು ಅನನ್ಯ ಎಸ್.ಜಿ. – ಪ್ರಥಮ ಸ್ಥಾನರಿದಮಿಕ್ ಪೇರ್: ಬಾಲಕರ ವಿಭಾಗದಲ್ಲಿ ಶ್ರೀವತ್ಸರಾಜ್ ಮತ್ತು ಪೃಥ್ವಿಚಾರ್ ಎನ್ – ಪ್ರಥಮ ಸ್ಥಾನರಿದಮಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಪೂರ್ವಿಕಾ ಜೆ ಎಂ ಮತ್ತು ಅನನ್ಯ ಎಸ್ ಜಿ – ಪ್ರಥಮ ಸ್ಥಾನಆರ್ಟಿಸ್ಟಿಕ್ ಸಿಂಗಲ್ : ಬಾಲಕರ ವಿಭಾಗದಲ್ಲಿ ಶಿವಕುಮಾರ್ ವಿ ಜಿ – ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷg ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಧನಾತ್ಮಕ ಚಿಂತನೆ ಬೆಳೆಯುತ್ತದೆ. ಸಹಾಯ, ಸಹಕಾರಗಳು ಸಾಧ್ಯವಾಗುವುದು ಇಂತಹ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಶಿಕ್ಷಣದ ನಿಜವಾದ ಅರ್ಥವನ್ನು ಅರ್ಥೈಸಿಕೊಳ್ಳಿ ಎಂದು ಅರಣ್ಯ ಗುತ್ತಿಗೆದಾರ, ಉದ್ಯಮಿ ಜಯಪ್ರಕಾಶ್ ಶೆಟ್ಟಿ ಕಟ್ಕೇರಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿ-ಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ʼಉಗಮ 2026ʼನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಕಾಸ್ ಶೆಟ್ಟಿ, ಎಸ್ಕ್ಯೂಎಸಿ ಪ್ರತಿನಿಧಿ ಖುಷಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ.ಯು ಕಾಲೇಜಿನಲ್ಲಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೆಸ್ಕುತ್ತೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಅಬ್ದುಲ್ ರವೂಫ್ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಇದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕೆಂದು ತಿಳಿಸಿದರು. ಕ್ರೀಡೆಯಲ್ಲಿ ಕಲೆ ಮತ್ತು ಸಂಸ್ಕ್ರತಿಯನ್ನು ಉಳಿಸಿ ಬೆಳೆಸುವ ಅಂಶಗಳು ಒಳಗೊಂಡಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು. ಕ್ರೀಡೋತ್ಸವದಂದು ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ವಿವಿಧ ಆಟೋಟ ಹಾಗೂ ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಅತ್ಯುನ್ನತ ಅಂಕಗಳನ್ನು ಗಳಿಸಿ ಯಮುನಾ ತಂಡದ ವಿದ್ಯಾರ್ಥಿಗಳು 2026-27ನೇ ಸಾಲಿನ ಚಾಂಪಿಯನ್ ತಂಡವಾಗಿ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು. ಗಂಗಾ ತಂಡದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿ ರನ್ನರ್ ಅಪ್ ಟ್ರೋಪಿಯನ್ನು ಪಡೆದರು. ಕಾರ್ಯಕ್ರಮದಲ್ಲಿ ಡ್ರಿಲ್, ಯೋಗ, ಲೇಜಿಮ್, ಡಂಬಲ್ಸ್, ಹೂಪ್ಸ್, ಕರಾಟೆ, ಪಿರಾಮಿಡ್ ಮೊದಲಾದ ಸಾಹಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸ್ನೇಹಿತನ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ ಹಣದ ಬೇಡಿಕೆಯ ಸಂದೇಶ ಕಳುಹಿಸಿದ ಸೈಬರ್ ವಂಚಕರು, ವ್ಯಕ್ತಿಯೊಬ್ಬರಿಂದ 52,000 ರೂ. ಹಣವನ್ನು ವರ್ಗಾಯಿಸಿಕೊಂಡ ಘಟನೆ ನಡೆದಿದೆ. ಕೋಟದ ದಯಾನಂದ (64) ಅವರಿಗೆ ತೆಕ್ಕಟ್ಟೆಯ ಅನಂತ ಎಂಬುವವರು ಸ್ನೇಹಿತರಾಗಿದ್ದರು. ಸೆಪ್ಟೆಂಬರ್ 22ರಂದು ಅನಂತ ಅವರ ಹೆಸರಿನ ವಾಟ್ಸಾಪ್ ಖಾತೆಯಿಂದ ದಯಾನಂದ ಅವರಿಗೆ ಸಂದೇಶವೊಂದು ಬಂದಿತ್ತು. ತುರ್ತಾಗಿ ಹಣದ ಅಗತ್ಯವಿದ್ದು ಕಳುಹಿಸಿರುವ ಕ್ಯೂಆರ್ ಕೋಡ್ಗೆ 52,000 ರೂ. ವರ್ಗಾಯಿಸುವಂತೆ ಅದರಲ್ಲಿ ಮನವಿ ಮಾಡಲಾಗಿತ್ತು. ಸ್ನೇಹಿತನೇ ಹಣ ಕೇಳಿದ್ದಾರೆಂದು ನಂಬಿದ ದಯಾನಂದ ಅವರು, ಯಾವುದೇ ಅನುಮಾನವಿಲ್ಲದೆ ತಮ್ಮ ಬ್ಯಾಂಕ್ ಖಾತೆಯಿಂದ ಕ್ಯೂಆರ್ ಕೋಡ್ ಮೂಲಕ 52,000 ರೂ. ಹಣವನ್ನು ವರ್ಗಾಯಿಸಿದ್ದರು. ಬಳಿಕ ಅನಂತ ಅವರನ್ನು ಸಂಪರ್ಕಿಸಿ ವಿಚಾರಿಸಿದಾಗ, ಅವರ ಮೊಬೈಲ್ ಹ್ಯಾಕ್ ಆಗಿರುವುದು ತಿಳಿದು ಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರಬ್ಬರ್ ಪ್ಲಾಂಟ್ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರದಲ್ಲಿ ಉಂಟಾದ ವೈಮನಸ್ಸು ಹಿಂಸಾತ್ಮಕ ಘಟನೆಗೆ ತಿರುಗಿದ್ದು, ವ್ಯಕ್ತಿಯೊಬ್ಬರ ಮೇಲೆ ಏರ್ ಗನ್ನಿಂದ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಜಾನುವಾರುಕಟ್ಟೆ ಸಮೀಪ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕೇರಳ ಮೂಲದ, ಬಿಲ್ಲಾಡಿ ಗ್ರಾಮದ ನಿವಾಸಿ ಬಿಬಿನ್ ಮ್ಯಾಥ್ಯ ಎಂದು ಗುರುತಿಸಲಾಗಿದೆ. ಇವರು ಕಳೆದ ಸುಮಾರು 18 ವರ್ಷಗಳಿಂದ ಬಿಲ್ಲಾಡಿಯಲ್ಲಿ ವಾಸವಾಗಿದ್ದು, ರಬ್ಬರ್ ಪ್ಲಾಂಟ್ ವ್ಯವಹಾರ ನಡೆಸುತ್ತಿದ್ದಾರೆ. ಬಿಬಿನ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಜೋಸ್ ಮತ್ತು ಸುರೇಶ್ ಎಂಬವರು ಸರಿಯಾಗಿ ಕೆಲಸ ಮಾಡದೆ ಪದೇ ಪದೇ ಹಣ ಕೇಳುತ್ತಿದ್ದ ಕಾರಣ ಕೆಲಸ ಬಿಟ್ಟು, ಬಿಲ್ಲಾಡಿಯಲ್ಲಿ ರಬ್ಬರ್ ಪ್ಲಾಂಟ್ ಹೊಂದಿರುವ ಸಂತೋಷ್ ಎಂಬವರ ಬಳಿ ಕೆಲಸಕ್ಕೆ ಸೇರಿಕೊಂಡಿದ್ದರು. ಇದೇ ವಿಚಾರದಲ್ಲಿ ಆರೋಪಿಗಳ ನಡುವೆ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ. ನವೆಂಬರ್ 5ರಂದು ರಾತ್ರಿ ಸುಮಾರು 10.10ರ ವೇಳೆಗೆ ಬಿಬಿನ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಅಜಯ್ ಎಂಬಾತ ಕರೆ ಮಾಡಿ, ಜಾನುವಾರುಕಟ್ಟೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ರೋಶನಿ ಪಿ. ದೇವಾಡಿಗ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ-ಮುಳ್ಳಿಕಟ್ಟೆ ಫ್ಲೈ ಓವರ್ ಮೇಲೆ ಮೀನು ಸಾಗಾಟದ ವಾಹನವೊಂದು ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ವಾಹನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ನೋಂದಣಿಯ ಈ ವಾಹನವು ಮುಂಬಯಿಯಿಂದ ಮಂಗಳೂರಿಗೆ ಮೀನು ಸಾಗಿಸುತ್ತಿತ್ತು. ಫ್ಲೈ ಓವರ್ ಮೇಲೆ ಚಲಿಸುತ್ತಿದ್ದಾಗ ವಾಹನದ ಒಂದು ಬದಿಯ ಆಕ್ಸಲ್ ತುಂಡಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯ ಡಿವೈಡರ್ ಮೇಲೆ ಪಲ್ಟಿಯಾಗಿದೆ. ವಾಹನದಲ್ಲಿ ಚಾಲಕನೊಬ್ಬನೇ ಇದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್ಐ ಆನಂದ ಹಾಗೂ ಸಿಬ್ಬಂದಿ ಮತ್ತು ಹೆದ್ದಾರಿ ಗಸ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಕ್ರೇನ್ ಮೂಲಕ ಪಲ್ಟಿಯಾದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
