ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ. ಇಬ್ರಾಹಿಮಾಪೂರ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಆರ್ಟ್ ಗ್ಯಾಲರಿ, ರಂಗ ಮಂದಿರ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿದರು. ವೀಕ್ಷಿಸಿ ಮಾತನಾಡಿದ ಎಚ್.ವಿ. ಇಬ್ರಾಹಿಮಾಪೂರ, ಕಾರಂತರು ನಮಗಾಗಿ ತುಂಬಾ ನೆನಪುಗಳನ್ನು, ಬದುಕಿನ ಪಾಠಗಳನ್ನು ನೀಡಿದ್ದಾರೆ ಅದನ್ನು ಜನರಿಗೆ ತಲುಪಿಸುವ ಕಾರ್ಯ ಕಾರಂತ ಥೀಮ್ ಪಾರ್ಕ್ನಿಂದ ಆಗುತ್ತಿದ್ದೆ, ಇದು ಇನ್ನಷ್ಟೂ ಪ್ರಸಿದ್ದಿ ಹೊಂದಿ ಇನ್ನಷ್ಟೂ ಪ್ರವಾಸಿಗರು ಆಗಮಿಸಿ ಕಾರಂತ ಬದುಕು – ಬರಹ ಎಲ್ಲಾರಿಗೂ ತಲುಪುವಂತೆ ಆಗಲಿ ಎಂದು ಹೇಳಿದರು. ಅಂಗನವಾಡಿಯ ಸ್ತ್ರೀ – ಶಕ್ತಿ ಸಂಘದ ಸದಸ್ಯರಿಗೆ ಬಚ್ಚಲು ಗುಂಡಿ ನಿರ್ಮಾಣ – ಪೌಷ್ಠಿಕ ತೋಟದ ನಿರ್ಮಾಣಕ್ಕೆ ಸರಕಾರಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಪಂಚಾಯತ್ ಪ್ರಭಾರ ಸಹಾಯಕ ನಿರ್ದೇಶಕ ಮಹೇಶ್ , ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ಶೈಲಾ ಎಸ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಹಸಿರು ಪಟಾಕಿ ಗಳನ್ನು ಮಾತ್ರ ಮಾರಾಟಬೇಕು ಹಾಗೂ ಸಾರ್ವಜನಿಕರು ಪಟಾಕಿ ಸಿಡಿಸುವ ಸಮಯವನ್ನು ಸರ್ಕಾರದ ಅದೇಶದಂತೆ ರಾತ್ರಿ 8 ರಿಂದ 10 ರ ವರಗೆ ಮಾತ್ರ ಸಿಡಿಸಬೇಕು, ನಿಗಧಿತ ಅವಧಿಗಿಂತ ಮುಂಚೆ ಹಾಗೂ ನಿಗಧಿತ ಅವಧಿಯ ನಂತರ ಪಟಾಕಿ ಸಿಡಿಸುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸುರಕ್ಷಿತ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಬೇಕು, ಈ ಕುರಿತ ಪರಿಶೀಲಿಸಲು ಬೀಟ್ ನಲ್ಲಿರುವ ಪೊಲೀಸ್ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ಪೊಲೀಸ್ ಇಲಾಖೆಗೆ ಮತ್ತು ಎಲ್ಲಾ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಪಟಾಕಿ ಮಳಿಗೆಗಳಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು, ನಿಷೇಧಿತ ಪಟಾಕಿಯನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಅಂಗಡಿಗಳ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ನ.17ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು, ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ/ ಖಾಸಗಿ/ ಅನುದಾನಿತ/ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು, ಪ್ರಮಾಣಿತ ಕಾರ್ಯಾಚರಣ ವಿಧಾನ ಮಾರ್ಗಸೂಚಿಯನ್ವಯ ಪ್ರಾರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ತಮ್ಮ ಪೋಷಕರಿಂದ ನಿಗಧಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರದೊಂದಿಗೆ ಕಾಲೇಜಿಗೆ ಹಾಜರಾಗಬಹುದು. ತರಗತಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ಕಾಲೇಜು ಆರಂಭದ ಕನಿಷ್ಠ 3 ದಿನಗಳ ಮುಂಚೆ ಎಲ್ಲಾ ಅಧ್ಯಾಪಕರು, ಕಾಲೇಜು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ಪಡೆದಿರಬೆಕು, ಕಾಲೇಜಿನ ಎಲ್ಲಾ ಕೊಠಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಬೇಕು, ಕಾಲೇಜುಗಳಲ್ಲಿ ಅಧ್ಯಾಪಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಫೇಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಾಗದ ಕನ್ವರ್ಶನ್ ಮಾಡಿಕೊಡಲು ವ್ಯಕ್ತಿಯೋರ್ವರ ಬಳಿ ಲಂಚಕ್ಕಾಗಿ ಬೇಡಿಕೆಯಿಟ್ಟಿದ್ದ ಕಂದಾಯ ಇಲಾಖೆಯ ಅಧಿಕಾರಿ, ಎಸಿಬಿ ಅಧಿಕಾರಿಗಳಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಗುರುವಾರ ನಡೆದಿದೆ. ಕುಂದಾಪುರ ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕ ಭರತ್ ವಿ. ಶೆಟ್ಟಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಸಿಕ್ಕಿಬಿದ್ದ ಅಧಿಕಾರಿ. ಈತ ಖಾಸಗಿ ವ್ಯಕ್ತಿಯೋರ್ವರಿಂದ ಜಾಗದ ಕನ್ವರ್ಶನ್ ಮಾಡಿಕೊಡಲು ರೂ.೧೨೦೦೦ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಎಸಿಬಿಗೆ ದೂರು ನೀಡಿದ್ದರು. ಅದರಂತೆಯೇ ಇಂದು ಕಾರ್ಯಾಚರಣೆ ನಡೆಸಿದ್ದು, ರೂ. ೫೦೦೦ ಲಂಚ ಸ್ವೀಕರಿಸುತ್ತಿರುವಾಗಲೇ ಭರತ್ ಶೆಟ್ಟಿ ಸಿಕ್ಕಿಬಿದ್ದಿದ್ದು, ವಿಚಾರಣೆ ನಡೆಸಿ ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಎಸಿಬಿ ಉಡುಪಿ ಡಿವೈಎಸ್ಪಿ ಮಂಜುನಾಥ ಕವರಿ, ಇನ್ಸ್ಪೆಕ್ಟರ್ ಸತೀಶ್ ಬಿ.ಎಸ್., ಚಂದ್ರಕಲಾ, ಎಸಿಬಿ ಸಿಬ್ಬಂದಿಗಳಾದ ಯತೀನ್ ಕುಮಾರ್, ಪ್ರಸನ್ನ, ರವೀಂದ್ರ ಗಾಣಿಗ, ಅಬ್ದುಲ್ ಜಲಲ್, ರಾಘವೇಂದ್ರ ಹೊಸ್ಕೋಟೆ, ಸೂರಜ್, ಅಬ್ದುಲ್ ಲತೀಪ್, ಪ್ರತೀಮಾ ಮೊದಲಾದವರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಉಪನ್ಯಾಸಕ ವರ್ಗದವರಿಗೆ ಆಯೋಜಿಸಿದ್ದ ಎರಡು ದಿನಗಳ ಆನ್ಲೈನ್ ಹಾಗೂ ಆಫ್ಲೈನ್ ಸ್ಟೂಡೆಂಟ್ ಮೆಂಟರಿಂಗ್ ಕಾರ್ಯಗಾರ ನಡೆಯಿತು. ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗದ ಸಂಯೋಜಕಿ ಡಾ. ಆಡ್ರೇ ಪಿಂಟೋ ಮಾತನಾಡಿ, ಪ್ರತಿಯೊಬ್ಬ ಶಿಕ್ಷಕನು ತನ್ನ ನೆಲೆಯಲ್ಲಿ ಮಾದರಿಯಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು, ಸ್ಟೂಡೆಂಟ್ ಮೆಂಟರ್ ಆದ ಶಿಕ್ಷಕನು ತನ್ನ ಎಲ್ಲಾ ವೈಯಕ್ತಿಕ ಸಮಸ್ಯೆಗಳನ್ನು ಬದಿಗೊತ್ತಿ ವಿದ್ಯಾರ್ಥಿಗಳ ತೊಂದರೆಗಳನ್ನು ಪರಿಹರಿಸಬೇಕು. ವಿದ್ಯಾರ್ಥಿಯಲ್ಲಿರುವ ಋಣಾತ್ಮಕ ಗುಣಗಳನ್ನು ಹೆಚ್ಚು ಚರ್ಚಿಸದೆ, ಧನಾತ್ಮಕ ಗುಣಗಳನ್ನು ಮುನ್ನಲೆಗೆ ತರುವಂತೆ ನೋಡಿಕೊಳ್ಳಬೇಕು. ಒಬ್ಬ ವ್ಯಕ್ತಿಯು ಸೀಸದ ಪೆನ್ಸಿಲ್ನಂತೆ ಕಾರ್ಯನಿರ್ವಹಿಸಬೇಕು, ಪೆನ್ಸಿಲ್ನ ಮೌಲ್ಯ ಅದರ ಒಳಗೆ ಅಡಗಿದೆ. ಪ್ರತಿ ಭಾರಿ ನಾವು ಪೆನ್ಸಿಲ್ನ್ನು ಮೊನಚು ಮಾಡಿದಾಗ ಅದರ ಉಪಯೋಗತೆ ಜಾಸ್ತಿಯಾಗುವಂತೆ, ನಮ್ಮನ್ನು ನಾವು ಪ್ರತಿ ಹಂತದಲ್ಲೂ ಹೊಸತನಕ್ಕೆ ಒಗ್ಗಿಕೊಂಡು ಪರಿಷ್ಕರಣೆ ಮಾಡಿಕೊಳ್ಳಬೇಕು ಎಂದರು. ಅಲ್ಲದೆ ಪೆನ್ಸಿಲ್ನಿಂದ ಬರೆದದನ್ನು ಸುಲಭವಾಗಿ ಅಳಿಸಲು ಸಾದ್ಯವಾಗುವಂತೆ ನಮ್ಮ ವ್ಯಕ್ತಿತ್ವವು ಎಲ್ಲಾ ಸನ್ನಿವೇಶಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಪ್ರಾಂಶುಪಾಲರ ಸಭೆಯಲ್ಲಿ2020-21 ನೇ ಸಾಲಿನ ಆಡಳಿತ ಮತ್ತು ಶೈಕ್ಷಣಿಕ ಚಟುವಟಿಗಳ ಬಗ್ಗೆ ಚರ್ಚಿಸಲಾಯಿತು. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಕರಾದ ಭಗವಂತ ಕಟ್ಟಿಮನಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕೊರೊನಾ ಎಂಬ ಮಹಾಮಾರಿಯಿಂದಾಗಿ ಪ್ರಸ್ತುತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಆತಂಕ ಉಂಟು ಮಾಡಿದರೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಯೂಟ್ಯೂಬ್ ತರಗತಿಗಳನ್ನು ನಡೆಸುತ್ತಿದ್ದು ಇದನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗಬೇಕು, ಡಿಸೆಂಬರ್ ಪ್ರಥಮ ವಾರದಲ್ಲಿ ಪದವಿಪೂರ್ವ ಕಾಲೇಜುಗಳು ಆರಂಭವಾಗಬಹುದು ಎಂಬ ಆಶಯವನ್ನು ವ್ಯಕ್ತಪಡಿಸಿದರು. ಕಾಲೇಜು ಪ್ರಾರಂಭವಾದರೆ ಕಾಲೇಜಿನಲ್ಲಿ ಯಾವ ರೀತಿಯ ಮುಂಜಾಗೃತಾ ಕ್ರಮವನ್ನು ಅನುಸರಿಸಬೇಕು ಎಂದು ತಿಳಿಸಿದರು. ತರಗತಿಯ ಅವಧಿಯನ್ನು ಕಡಿತಗೊಳಿಸುವುದರ ಬಗ್ಗೆ ಸುಳಿವು ನೀಡಿದ ಉಪನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿರುವ ಪ್ರಾಂಶುಪಾಲರುಗಳಿಗೆ ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕರ್ನಾಟಕ ಸರಕಾರ ಆರೋಗ್ಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಕೋವಿಡ್-19 ಪರೀಕ್ಷಾ ಶಿಬಿರ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖಗೊಳ್ಳುತ್ತಿದೆ. ಎಲ್ಲರೂ ಸ್ವಯಂಪ್ರೇರಿತರಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಕರೋನಾ ಇನ್ನೊಬ್ಬರಿಗೆ ಹರಡುವುದನ್ನು ತಪ್ಪಿಸಬಹುದು. ಕರೋನಾ ಪಾಸಿಟಿವ್ ಬಂದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದುಕೊಳ್ಳಬಹುದು ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕೆಂಬ ಸೂಚನೆ ಹಿನ್ನಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ನಿರ್ಭಿತಿಯಿಂದ ಕೋವಿಡ್ ತಪಾಸಣೆ ನಡೆಸಬೇಕು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋವಿಡ್ ಪರೀಕ್ಷಾ ಶಿಬಿರ ಆಯೋಜಿಸಲಾಗಿದ್ದು, ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಹೇಳಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ. ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನೆಟ್ಫಿಶ್ – ಎಂಪಿಡಾ, ಮೀನುಗಾರಿಕಾ ಇಲಾಖೆ, ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ ಮತ್ತು ಗಂಗೊಳ್ಳಿಯ ವಿವಿಧ ಮೀನುಗಾರಿಕಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಬಂದರು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಮೀನುಗಾರಿಕಾ ಬಂದರುಗಳ ಅಭಿವೃದ್ಧಿ ಹಾಗೂ ಮೀನುಗಾರರಿಗೆ ವಿವಿಧ ಸೌಲಭ್ಯಗಳನ್ನು ಸರಕಾರ ನೀಡುತ್ತಿದೆ. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಪುನರ್ ನಿರ್ಮಾಣಕ್ಕೆ12 ಕೋಟಿ ರೂ. ಮಂಜೂರಾಗಿದ್ದು, ಆದಷ್ಟು ಶೀಘ್ರ ಕಾಮಗಾರಿ ಆರಂಭವಾಗಲಿದೆ. ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಉಳಿದ1.35 ಕೋಟಿ ರೂ.ಗಳನ್ನು ಹರಾಜು ಪ್ರಾಂಗಣ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಬಂದರು ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ನಮ್ಮ ಹೃದಯವನ್ನು ಕೂಡ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಅಂಜನಾದೇವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಐಕ್ಯೂಎಸಿ, ಮತ್ತು ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ಆನ್ಲೈನ್ ಮಾಧ್ಯಮದಲ್ಲಿ ವೃತ್ತಿ ಅವಕಾಶಗಳು ಕುರಿತು ರಾಷ್ಟ್ರೀಯ ವೆಬಿನಾರ್ ನಡೆಯಿತು. ಮಣಿಪಾಲ ಸ್ಕೂಲ್ ಆಫ್ ಕಮ್ಯೂನಿಕೇಶನ್ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಸಹಪ್ರಾಧ್ಯಾಪಕಿ ಕವಿತಾ ನಾಗಸಂಪಿಗೆ ಅವರು ಮಾತನಾಡಿ ಆನ್ಲೈನ್ ಮಾಧ್ಯಮದಲ್ಲಿ ವೃತ್ತಿ ಅವಕಾಶಗಳಿಗೆ ತೆರೆದುಕೊಳ್ಳುವುದಕ್ಕೆ ಮುನ್ನ ಆನ್ಲೈನ್ ಮಾಧ್ಯಮದಲ್ಲಿ ವೃತ್ತಿಯನ್ನು ಮಾಡಲು ಇಚ್ಚಿಸುವವರಿಗೆ ಅಗತ್ಯ ಶೈಕ್ಷಣಿಕ ಅರ್ಹತೆ ಮತ್ತು ಸೃಜನಶೀಲ ಕೌಶಲಗಳ ಕುರಿತು ತಿಳಿಸಿದರು. ಆನ್ಲೈನ್ ಮಾಧ್ಯಮದಲ್ಲಿ ಬರುವಂತಹ ಕ್ಷೇತ್ರಗಳನ್ನು ಮತ್ತು ಅಲ್ಲಿ ಇರುವಂತಹ ವೃತ್ತಿಗಳನ್ನು ಕುರಿತು ತಿಳಿಸಿದರು. ಬೇರೆ ಬೇರೆ ಕ್ಷೇತ್ರಗಳ ವೃತ್ತಿಗೆ ಪೂರಕವಾಗಿ ಬೇಕಾಗುವಂತಹ ಜ್ಞಾನವನ್ನು ಯಾವ ರೀತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ.ನಾರಾಯಣ ಶೆಟ್ಟಿ, ಐಕ್ಯೂಎಸಿ ಸಂಯೋಜಕರಾದ ಪ್ರೊ. ಶಶಿಕಾಂತ್ ಹತ್ವಾರ್ ಮತ್ತು ಐಟಿ ತಂಡದ ಸಂಯೋಜಕರಾದ ಡಾ. ನಟರಾಜ್ ಎಂ. ಬಿ ಉಪಸ್ಥಿತರಿದ್ದರು. ಐಟಿ ತಂಡದ ಸದಸ್ಯರಾದ ಅಮರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಮೀಪದ ಮಾರಣಕಟ್ಟೆಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡಬಳ್ಳಿ ಜಯರಾಮ ಶೆಟ್ಟಿ ಅವರಿಗೆ ಸನ್ಮಾನ ಸಮಾರಂಭ ನಡೆಯಿತು. ಸನ್ಮಾನಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ, ಸ್ವಾರ್ಥ ಚಿಂತನೆ ಗಳನ್ನು ಆಳವಡಿಸಿಕೊಳ್ಳದೆ, ಸಮಾಜಮುಖಿಯಾಗಿ ಬೆಳೆದಾಗ, ಸಮಾಜ ಅಂತಹವರನ್ನು ಗುರುತಿಸುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ದೇವಸ್ಥಾನದ ಆಡಳಿತ ಮೊಕ್ತೇಸರ ಬಸ್ರೂರು ಅಪ್ಪಣ್ಣ ಹೆಗ್ಡೆ, ಸಮಾಜ ಸೇವೆಯಲ್ಲಿಯೇ ಭಗವಂತನನ್ನು ಕಾಣುವವರಿಗೆ ಭಗವಂತನ ಶ್ರೀರಕ್ಷೆ ಯಾವಾಗಲೂ ಇರುತ್ತದೆ ಎಂದರು. ಸಮಾಜದೊಂದಿಗೆ ಬೆಳೆಯುತ್ತಾ, ನಮ್ಮ ದುಡಿಮೆಯ ಒಂದು ಪಾಲನ್ನು ಸಮಾಜಕ್ಕೆ ನೀಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಹೇಳಿದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ. ಅತುಲ್ಕುಮಾರ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಉದಯ ಜಿ.ಪೂಜಾರಿ, ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಬ್ಲಾಡಿ ಎನ್.ಮಂಜಯ್ಯ ಶೆಟ್ಟಿ,…
