ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಕ್ಷಯರೋಗ ತಪಾಸಣೆ ಮಾಡುವುದರೊಂದಿಗೆ ಪ್ರಾಥಮಿಕ ಹಂತದಲ್ಲಿಯೇ ಇದನ್ನು ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ನೀಡಿ, ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಟಿ.ಬಿ ಫೋರಂ ಸಮಿತಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ 3 ವರ್ಷಗಳಿಂದ ಕ್ಷಯರೋಗಿಗಳ ಸಂಖ್ಯೆಯು ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕಂಡು ಬರುತ್ತಿದೆ. ಇದರ ಸಂಪೂರ್ಣ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಸಂಶಯಾಸ್ಪದ ಕ್ಷಯರೋಗ ಲಕ್ಷಣ ಹೊಂದಿರುವವರನ್ನು ಗುರುತಿಸಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದಾಗ ಇದರ ನಿಯಂತ್ರಣ ಸಾಧ್ಯ ಎಂದರು. ಕ್ಷಯರೋಗದ ಹರಡುವಿಕೆ, ಅವುಗಳ ಸಾಮಾನ್ಯ ಲಕ್ಷಣ ಬಗ್ಗೆ ಜನರಲ್ಲಿ ಅರಿವು ಮೂಡಿಸಿದಾಗ ಜನರು ಆ ಬಗ್ಗೆ ಕಾಳಜಿ ತೋರಿ ನಿರ್ಲಕ್ಷö್ಯ ವಹಿಸದೇ ಸೂಕ್ತ ಪರೀಕ್ಷೆ ಹಾಗೂ ಚಿಕಿತ್ಸೆಗೆ ಒಳಗೊಳ್ಳುತ್ತಾರೆ. ಇದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದರು. ಜಿಲ್ಲೆಯ ಯಾವ ಗ್ರಾಮ ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಚಿನ್ನಕ್ಕಿಂತ ಅನ್ನ ಶ್ರೇಷ್ಠ, ಅನ್ನಕ್ಕಿಂತ ಮಣ್ಣು ಶ್ರೇಷ್ಠ ಎನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಮಣ್ಣಿನಲ್ಲಿ ಅನ್ನ ಬೆಳೆಯುವ ರೈತ ಎಲ್ಲರಿಗಿಂತ ಶ್ರೇಷ್ಠ. ರೈತರು ಮಣ್ಣಿನ ಫಲವತ್ತತೆ ಉಳಿಸಿಕೊಳ್ಳಬೇಕಾದರೆ ಸಾವಯವ ಗೊಬ್ಬರ ತಯಾರಿಗೆ ಅಗತ್ಯವಾದ ಹೈನುಗಾರಿಕೆ ಕೂಡ ನಡೆಸಬೇಕು ಎಂದು ದಕ್ಷಿಣ ಕನ್ನಡ-ಉಡುಪಿ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಹೇಳಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಮತ್ತು ರೈತಸಿರಿ, ರೈತಸೇವಾ ಒಕ್ಕೂಟದ ಆಶ್ರಯದಲ್ಲಿ ನಾಗೂರು ಶ್ರೀಕೃಷ್ಣಲಲಿತ ಕಲಾಮಂದಿರದಲ್ಲಿ ಗುರುವಾರ ನಡೆದ ರೈತರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ಸಂಕಷ್ಟದ ಕಾಲದಲ್ಲಿ ಎಲ್ಲ ಉತ್ಪಾದಕ ವೃತ್ತಿಗಳಂತೆ ರೈತರೂ ತಮ್ಮ ವೃತ್ತಿಯಿಂದ ಬಿಡುವು ಪಡೆದಿದ್ದರೆ ಏನಾಗುತ್ತಿತ್ತು ಎನ್ನುವುದನ್ನು ಊಹಿಸುವುದೂ ಅಸಾಧ್ಯ. ಆದರೆ ಸಮುದಾಯ, ಸರ್ಕಾರ ರೈತರನ್ನು ಅವರ ಘನತೆಗೆ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅವರು ವಿಷಾದಿಸಿದರು. ಅಧ್ಯಕ್ಷತೆವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸಂಘದ ಲಾಭಾಂಶದಲ್ಲಿ ಈ ಬಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ 2020-21 ನೇ ಸಾಲಿನ ವಾರ್ಷಿಕ ಮಹಾಸಭೆ ಉಪ್ಪುಂದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ವೆಂಕಟರಮಣ ಖಾರ್ವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಸದಸ್ಯರ ಶ್ರೇಯೋಭಿವೃದ್ಧಿಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ. ಸಂಘದ ಸಲಹೆ ಸೂಚನೆಗಳನ್ನು ಸದಸ್ಯರು ಅನುಸರಿಸಬೇಕು ಎಂದ ಅವರು ಕೊಡೇರಿ ಬಂದರಿನ ನಿಧಾನಗತಿಯ ಕಾಮಗಾರಿಕೆ ಆಕ್ಷೇಪ ವ್ಯಕ್ತಪಡಿಸಿ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ವೀನುಗಾರರ ಸಮಸ್ಯೆಗಳಿಗೆ ತ್ವರಿತ ಗತಿಯಲ್ಲಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಮೀನುಗಾರಿಕೆ ಸಂದರ್ಭ ಮರಣ ಹೊಂದುವ ಸಂಘದ ಸದಸ್ಯರಿಗೆ ರೂ.5ಲಕ್ಷ ಹಾಗೂ ಇತರೆ ಸಂದರ್ಭದಲ್ಲಿ ರೂ.2ಲಕ್ಷ ಸಹಾಯಧನ ಮತ್ತು ಶೇ.25ರಷ್ಟು ವೈದ್ಯಕೀಯ ವೆಚ್ಚ ಭರಿಸಲು ಹಾಗೂ ದೋಣಿ ಮತ್ತು ಸಲಕರಣೆಗಳಿಗೆ ಶೇ.10ರಷ್ಟು ಪರಿಹಾರ ಧನ ನೀಡುವ ತೀರ್ಮಾನ ಕೈಗೊಳ್ಳಲಾಯಿತು. ಕೊಡೇರಿ ಬಂದರು ನಿಧಾನಗತಿಯ ಕಾಮಗಾರಿ ಮತ್ತು ಹೈಕೋರ್ಟ್ನಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಚರ್ಚೆ ನಡೆಯಿತು. ಉಪ್ಪುಂದ ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಲ್ಲಾ ಧರ್ಮಗಳ ಹಬ್ಬದ ಆಚರಣೆಯ ಹಿಂದೆಯೂ ಉತ್ತಮವಾದ ಸಂದೇಶವಿದೆ. ಹಬ್ಬ, ಉತ್ಸವಗಳ ಆಚರಣೆಯ ಸಂದರ್ಭಗಳಲ್ಲಿ ಕಷ್ಟದಲ್ಲಿರುವವರಿಗೆ ಆದಷ್ಟು ಸಹಾಯ ಮಾಡುವ ಕೆಲಸ ಮಾಡಬೇಕು ಎಂದು ಕುಂದಾಪುರ ಹೋಲಿ ರೋಸರಿ ಚರ್ಚ್’ನ ಸಹಾಯಕ ಧರ್ಮಗುರು ವಂ| ವಿಜಯ್ ಜಾಯ್ಸನ್ ಡಿ’ಸೋಜಾ ಹೇಳಿದರು. ಅವರು ಶುಕ್ರವಾರ ಕೋಟೇಶ್ವರ ಸಮೀಪದ ಸುಣ್ಣಾರಿಯ ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ 2021ರ ಕ್ರಿಸ್ಮಸ್ ಆಚರಣೆ ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿ ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವ ಗುಣ, ಎಲ್ಲಾ ಧರ್ಮವನ್ನು ಪ್ರೀತಿಸುವ ವಿಶಾಲ ಮನಸ್ಸು ಈ ಗುಣಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಸಲುವಾಗಿ ಎಲ್ಲಾ ಧರ್ಮಗಳ ಹಬ್ಬದ ಆಚರಣೆಯನ್ನು ವಿದ್ಯಾರ್ಥಿಗಳ ಮುಖಾಂತರ ಮಾಡುತ್ತಿದ್ದೇವೆ. ದೇಶದಲ್ಲಿ ಜಾತಿ, ಧರ್ಮಗಳ ಹೆಸರಿನಲ್ಲಿ ನಮ್ಮನ್ನಮ್ಮಲ್ಲಿ ಹೊಡೆದಾಟ ನಡೆಯುತ್ತಿದೆ. ಯಾವ ಧರ್ಮದಲ್ಲಿಯೂ ಇನ್ನೊಂದು ಧರ್ಮವನ್ನು ಅನ್ಯಾಯ ಮಾಡಲು ಹೇಳುದಿಲ್ಲ. ಎಲ್ಲಾ ಧರ್ಮದಲ್ಲಿಯೂ…
ಯುವಜನತೆಗೆ ಸೇನೆಯ ಬಗ್ಗೆ ಅರಿವು ಮಾರ್ಗದರ್ಶನ ಅಗತ್ಯ: ಡಾ. ಗೋವಿಂದ ಬಾಬು ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೇನೆಯ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಯುವಕರಿಗೆ ಮಾರ್ಗದರ್ಶನ ಮಾಡಿ ಅವರನ್ನು ತರಬೇತುಗೊಳಿಸುವುದು ಮತ್ತು ಜಿಲ್ಲೆಯಲ್ಲಿ ಯುವಕರು ಸೇನೆಗೆ ಸೇರಿ ದೇಶಸೇವೆಯಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸುವುದು ಅಗತ್ಯವಾಗಿದೆ ಎಂದು ಉದ್ಯಮಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ನೇಷನ್ಸ್ ಲವರ್ಸ್ ಬೈಂದೂರು ಸಂಸ್ಥೆಯ ಆಶ್ರಯದಲ್ಲಿ ಇಲ್ಲಿನ ರೋಟರಿ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸೇನಾ ಪಡೆಗಳಲ್ಲಿ ಉದ್ಯೋಗಾವಕಾಶ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಯುವಕರು ದಾರಿ ತಪ್ಪುತ್ತಿದ್ದಾರೆ ಎಂಬ ಸಮಾಜದ ಮಾತಿಗೆ ಅಪವಾದ ಎಂಬಂತೆ ನೇಷನ್ಸ್ ಲವರ್ಸ್ ತಂಡ ಸೇನೆಯ ಬಗ್ಗೆ ನಿರಂತರ ತರಬೇತಿ, ಮಾಹಿತಿ ಹಾಗೂ ಪ್ರೋತ್ಸಾಹ ನೀಡುತ್ತಿದೆ. ಇಂತಹ ಕಾರ್ಯಗಳು ಸಮಾಜದಲ್ಲಿ ಹೆಚ್ಚೆಚ್ಚು ಆಗಲಿ ಎಂದು ಹಾರೈಸಿದರು. ಇತ್ತಿಚಿಗೆ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಜನರರ್ ಬಿಪಿನ್ ರಾವತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈತರು ದೇಶದ ಬೆನ್ನೆಲುಬು ಎಂದು ಕರೆಯುತ್ತಾರೆ. ಆದರೆ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸಗಳು ನಮ್ಮನ್ನಾಳುವ ಸರ್ಕಾರಗಳು ಮಾಡುತ್ತಿಲ್ಲ ಎಂದು ಉಡುಪಿ ಜಿಲ್ಲಾ ರೈತ ಸಂಘದ ತ್ರಾಸಿ ವಲಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಕಳವಳ ವ್ಯಕ್ತಪಡಿಸಿದರು. ಅವರು ಗುರುವಾರ ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ರೈತ ಸಂಘ ತ್ರಾಸಿ ವಲಯ, ಮಹಾವಿಷ್ಣು ಯುವಕ ಮಂಡಲ, ಮಾನಸ ಯುವತಿ ಮಂಡಲ ಹಾಗೂ ಗಂಗೊಳ್ಳಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಗ್ರಾಮೀಣ ಭಾಗದ ರೈತರ ಮನೆಗೆ ತೆರಳಿ ರೈತರನ್ನು ಸನ್ಮಾನಿಸಿ ಮಾತನಾಡಿದರು. ಕೃಷಿಕರಾದ ಸರೋಜ ಮತ್ತು ಬಚ್ಚು ದೇವಾಡಿಗ ಎಲ್ಲರಿಗೂ ಮಾದರಿ. ಇದ್ದ ಭೂಮಿಯನ್ನು ಬಳಸಿಕೊಂಡು ವರ್ಷದ ಅನು ದಿನವೂ ಶ್ರಮವಹಿಸಿ ಕೃಷಿಯಲ್ಲಿ ತೊಡಗುವ ಇಂತಹ ಕೃಷಿಕರು ನಮ್ಮಹೆಮ್ಮೆ. ಓರ್ವ ಸಾಮಾನ್ಯ ಮಹಿಳೆ ತುಂಡು ಭೂಮಿಯಲ್ಲಿ ತರಕಾರಿಗಳನ್ನು ಬೆಳೆದು ಸಂತೆ ಮಾರುಕಟ್ಟೆಗೆ ತೆರಳಿ ಅಲ್ಲಿ ಮಾರಾಟ ಮಾಡಿ ತಮ್ಮ ಜೀವನವನ್ನು ನಿರ್ವಹಣೆ ಮಾಡುತ್ತಾರೆಂದರೆ ಅವರಿಂದ ನಾವೆಲ್ಲರೂ ನೋಡಿ…
ಕುಂದಾ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ 94ಸಿ ಅಡಿ ಸಲ್ಲಿಸಿದ ಅರ್ಜಿಗಳಲ್ಲಿ ಡೀಮ್ ಫಾರೆಸ್ಟ್ ಹಾಗೂ ಭಾಗಶಃ ಡೀಮ್ ಫಾರೆಸ್ಟ್ ಎಂಬ ಕಾರಣಕ್ಕೆ ಭೂ ಮಂಜೂರಾತಿ ತಡೆಹಿಡಿಲಾಗುತ್ತಿದೆ. ಇದರಿಂದ ಕುಂದಾಪುರ, ಬೈಂದೂರು, ಉಡುಪಿ, ಕಾರ್ಕಳ, ಬ್ರಹ್ಮಾವರ, ಕಾಪು, ಹೆಬ್ರಿಗಳಲ್ಲಿ 7,754 ಕುಟುಂಬಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ದೊರೆಯಲೇಬೇಕು, ಸರಕಾರದಿಂದ ಸಮರ್ಪಕ ಉತ್ತರ ದೊರೆಯಬೇಕು ಎಂದು ಕಾಂಗ್ರೆಸ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಪಟ್ಟು ಹಿಡಿದು ಬಾವಿಗಿಳಿದ ಘಟನೆ ವಿಧಾನ ಪರಿಷತ್ ಕಲಾಪದಲ್ಲಿ ನಡೆಯಿತು. ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಕೆ. ಪ್ರತಾಪಚಂದ್ರ ಶೆಟ್ಟಿಯ ಅವರು, ಉಡುಪಿ ಜಿಲ್ಲೆಯಲ್ಲಿ ನಮೂನೆ 50, 53ಹಾಗೂ 94ಸಿ ಅಡಿ ಸಲ್ಲಿಸಿದ ಅರ್ಜಿಗಳಲ್ಲಿ ಡೀಮ್ ಫಾರೆಸ್ಟ್ ಹಾಗೂ ಭಾಗಶಃ ಡೀಮ್ಸ್ ಫಾರೆಸ್ಟ್ ಎಂಬ ಕಾರಣಕ್ಕೆ ಭೂ ಮಂಜೂರಾತಿ ತಡೆಹಿಡಿಲಾಗುತ್ತಿದೆ. 94ಸಿ ಕಲಂ ಅಡಿ ಮಂಜೂರಾದ ಮೇಲೆ ಡೀಮ್ಸ್ ಫಾರೆಸ್ಟ್ ನಿಯಮ ಅನ್ವಯಿಸಿ ತೊಂದರೆ ನೀಡುತ್ತಿದ್ದಾರೆ. ಇವತ್ತು ನನಗೆ ಸಮಾಧಾನಕರ ಉತ್ತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗಮಕ ಎಂಬುದು ಅತೀ ಪ್ರಾಚೀನ ಕಲೆ. ಕವಿ ರಚಿತ ಕಾವ್ಯಗಳ ಸಾಹಿತ್ಯದ ಅರ್ಥ ಕೆಡದಂತೆ, ಪದ ವಿಂಗಡನೆ ಮಾಡಿ, ರಾಗ-ಭಾವ, ಪದ-ಭಾವ ಸಮನ್ವಯಗೊಳಿಸಿ ಸಂಗೀತದ ವಿವಿಧ ರಾಗಗಳನ್ನು ಅಳವಡಿಸಿ ಹಾಡುವ ಕ್ರಮವೇ ಗಮಕ ಕಲೆ. ಕವಿ, ಗಮಕಿ, ವಾದಿ, ವಾಗ್ಮಿ ಇವರುಗಳು ಸಾಹಿತ್ಯ ಚತರ್ಮುಖರೆಂದೆ ಪ್ರತೀತಿ. ಕವಿಗೆ ಮೊದಲ ಸ್ಥಾನವಾದರೆ, ಗಮಕಿಗೆ ಎರಡನೆ ಸ್ಥಾನ. ರಸ ಭಾವಗಳಿಗೆ ಅನುಗುಣವಾಗಿ ರಾಗಗಳು ಸೇರಿದರೆ ಸಾಹಿತ್ಯದ ಮೌಲ್ಯ ಹೆಚ್ಚುತ್ತದೆ, ಹೃದಯಕ್ಕೆ ಹತ್ತಿರವಾಗುತ್ತದೆ. ಗಮಕ ಕಲೆ ಉಳಿದು ಬೆಳೆಯುವುದಕ್ಕೆ ಶಾಲಾ ಕಾಲೇಜುಗಳಲ್ಲಿ ಗಮಕ ಕಲೆಯ ಅಧ್ಯಯನ ಯಶಸ್ಸಿನ ಮೆಟ್ಟಿಲು ಎಂದು ಹಾಸನ ಜಿಲ್ಲೆಯ ಗಮಕಕಲಾ ಪರಿಷತ್ತಿನ ಅಧ್ಯಕ್ಷ ಕರ್ನಾಟಕ ಕಲಾಶ್ರೀ ಗಣೇಶ ಉಡುಪ ಹೇಳಿದರು. ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪ್ರೌಢ ಶಾಲೆಯಲ್ಲಿ ಕುಂದಾಪುರ ಗಮಕ ಕಲಾ ಪರಿಷತ್ತು೬೬ ನೇ ರಾಜ್ಯೋತ್ಸವ ಹಾಗೂ ಸ್ವಾಂತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪಠ್ಯಾಧಾರಿತ ಗಮಕವಾಚನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭೆಗಳಲ್ಲಿ ಕೊರತೆಯಲ್ಲಿ ಆದರೆ ಮೂಲಭೂತ ಸೌಲಭ್ಯಗಳ ಕೊರತೆ ಎದುರಾಗುತ್ತದೆ ಅಂತಹ ಸಂದರ್ಭದಲ್ಲಿ ಸಮಾಜ ಸ್ಪಂದಿಸುವ, ಅದನ್ನು ಅಭಿವೃದ್ಧಿಪಡಿಸುವ ಕಾರ್ಯ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಬ್ಯಾಂಕ್ ಎಂ.ಡಿ ಮಹಾಬಲೇಶ್ವರ ಎಂ. ಎಸ್ ಹೇಳಿದರು. ಅವರು ಬೈಂದೂರಿನ ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಯು.ಬಿ ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಶಾಲಾ ವಾಹನಗಳನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಯು. ಬಿ. ಶೆಟ್ಟಿ ನೀಡುತ್ತಿರುವ ಶೈಕ್ಷಣಿಕ ಕೊಡುಗೆ ಅಭಿನಂದನೀಯ. ಉತ್ತಮ ಶೈಕ್ಷಣಿಕ ವಾತಾವರಣ, ಶಿಕ್ಷಕರ ತಂಡ ಆಡಳಿತ ಮಂಡಳಿ ಸಹಕಾರ ಇಲ್ಲಿರುವುದು ತಿಳಿಯುತ್ತದೆ. ಸಾಮಾಜಿಕ ಚಿಂತನೆ ಹಾಗೂ ಕಳಕಳಿ ಇದ್ದಾಗ ಇಂತಹ ಕಾರ್ಯ ಸಾಧ್ಯವಾಗುತ್ತದೆ ಎಂದರು. ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ (ಐ.ಪಿ.ಎಸ್) ಮಾತನಾಡಿ ವಿದ್ಯೆ ಅತ್ಯಮೂಲ್ಯ ಆಸ್ತಿ. ವಿದ್ಯಾರ್ಥಿಗಳು ಪಾಲಕರ ಕನಸನ್ನು ಸಾಕಾರಗೊಳಿಸುವ ಜವಾಬ್ದಾರಿಯ ಜೊತೆಗೆ ಸಮರ್ಪಕ ಗುರಿಯೊಂದಿಗೆ ಮುನ್ನಡೆಯುವುದು ಅಗತ್ಯ. ಹೀಗಾಗಿ ಶೈಕ್ಷಣಿಕ ಬದುಕನಲ್ಲಿ ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲಮಾಧ್ಯಮ ಪ್ರೌಢಶಾಲೆಗಳಲ್ಲಿ 6, 7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸುರಕ್ಷತಾ ಕಾರ್ಯಾಗಾರ ಜರುಗಿತು. ಕುಂದಾಪುರದ ಸಂಚಾರಿ ಪೊಲೀಸ್ ಠಾಣೆಯ ಆರಕ್ಷಕ ನವೀನ್ ಕುಮಾರ್ ಮಾತನಾಡಿ, ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಸಂಸ್ಥೆಯ ಉಪಪ್ರಾಂಶುಪಾಲೆ ಶುಭಾ ಕೆ ಎನ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯಶಿಕ್ಷಕಿ ಕವಿತಾ ಭಟ್, ಪ್ರೌಢಶಾಲಾ ಸಂಯೋಜಕ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಸಂಯೋಜಕ ಶಿಕ್ಷಕರಾದ ಕವಿತಾ ಪಿ ಮತ್ತು ವೀರೇಂದ್ರ ನಾಯಕ್ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕಿ ಭಾಗ್ಯ ಸ್ವಾಗತಿಸಿ, ವಂದಿಸಿದರು.
