ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಅವರ 15 ದಿನಗಳ ರಜೆ ಹಿನ್ನೆಲೆ ಅವರ ಸ್ಥಾನಕ್ಕೆ ಓ.ಓ.ಡಿಯಾಗಿ ಕುಂದಾಪುರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರನ್ನು ನಿಯೋಜಿಸಲಾಗಿದೆ. ಮಂಗಳೂರು ಸಿಟಿ ಡಿಸಿಪಿ ಅರುಣಾಂಗ್ಷು ಗಿರಿ ಅವರ ಕೋರಿಕೆಯಂತೆ ನ.18 ರಿಂದ ಡಿ.2 ರ ತನಕ ವೈಯಕ್ತಿಕ ಕಾರಣದ ಮೇರೆಗೆ 15 ದಿನಗಳ ಗಳಿಕೆ ರಜೆ ನೀಡಿದ್ದು ಆ ಸ್ಥಾನಕ್ಕೆ ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ಅವರನ್ನು ನಿಯೋಜಿಸಲಾಗಿದೆ. ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿಯವರು ಅಲ್ಲಿನ ಕರ್ತವ್ಯದ ಜೊತೆ ತಾತ್ಕಾಲಿಕ ನೆಲೆಯಲ್ಲಿ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹರ್ಕೂರು ಮೀಸಲು ಅರಣ್ಯ ಪ್ರದೇಶದಲ್ಲಿ ಆಕ್ರಮವಾಗಿ ಬೇಟೆಗೆ ಮುಂದಾಗಿದ್ದ ತಂಡದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು, ಅಧಿಕಾರಿಗಳನ್ನು ಕಂಡು ಬೇಟೆಗಾರರು ಪರಾರಿಯಾದ ಘಟನೆ ನಡೆದಿದೆ. ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್ ನೇತೃತ್ವದ ತಂಡ ಬುಧವಾರ ತಡರಾತ್ರಿ 2 ಗಂಟೆಗೆ ಗಸ್ತು ತಿರುಗುತ್ತಿದ್ದ ವೇಳೆ, ಹರ್ಕೂರು ಮೀಸಲು ಅರಣ್ಯದಲ್ಲಿ ಬೊಲೆರೊ ವಾಹನ ಅನುಮಾನಾಸ್ಪದ ರೀತಿಯಲ್ಲಿ ಸಂಚರಿಸುತ್ತಿತ್ತು. ಈ ವೇಳೆ ವಿಚಾರಣೆಗೆ ಮುಂದಾಗಿದ್ದ ಅಧಿಕಾರಿಗಳನ್ನು ಕಂಡು ಪರಾರಿಯಾಗಲು ಯತ್ನಿಸಿದರು. ಈ ವೇಳೆ ಅಧಿಕಾರಿಗಳು ಬೆನ್ನಟ್ಟಿದ ಪರಿಣಾಮ ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನ ಹಾಗೂ ಬೇಟೆಗೆ ಬಳಸಿದ್ದ ಕಬ್ಬಿಣದ ರಾಡ್, ಟಾರ್ಪಲ್ ಹಾಗೂ ಮೊಬೈಲ್ ಪೋನ್ ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್, ಉಪ ವಲಯ ಅರಣ್ಯಾಧಿಕಾರಿ ದಿಲೀಪ್, ಅರಣ್ಯ ರಕ್ಷಕರಾದ ಮಂಜುನಾಥ ನಾಯ್ಕ್, ಬಂಗಾರಪ್ಪ, ಜೀಪು ಚಾಲಕ ಅಶೋಶ್ ಕಾರ್ಯಾಚರಣೆಯಲ್ಲಿ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಅಲ್ಪೈನ್ ಅಸೋಸಿಯೇಟ್ಸ್ ಇದರ ವತಿಯಿಂದ ಗಂಗೊಳ್ಳಿ ಪೊಲೀಸ್ ಠಾಣೆಗೆ ಎರಡು ಬ್ಯಾರಿಕೇಡ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ನಾಯಕವಾಡಿ – ಗುಜ್ಜಾಡಿಯಲ್ಲಿರುವ ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಚೆಕ್ಪೋಸ್ಟ್ ಬಳಿ ನಡೆದ ಸರಳ ಸಮಾರಂಭದಲ್ಲಿ ಅಲ್ಪೈನ್ ಅಸೋಸಿಯೇಟ್ಸ್ನ ಮಾಲೀಕ ಜಹೀರ್ ಅಹಮ್ಮದ್ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್. ಅವರಿಗೆ ಬ್ಯಾರಿಕೇಡ್ಗಳನ್ನು ಹಸ್ತಾಂತರಿಸಿದರು. ಗಂಗೊಳ್ಳಿ ಜಮಾತುಲ್ ಮುಸ್ಲಿಮಿನ್ ಅಧ್ಯಕ್ಷ ಪಿ.ಎಂ.ಹಸೈನಾರ್, ಉಪಾಧ್ಯಕ್ಷ ಇಬ್ರಾಹಿಂ ಗಂಗೊಳ್ಳಿ, ಕಾರ್ಯದರ್ಶಿ ರೆಹಾನ್ ಅಹಮ್ಮದ್, ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ದೀಪಾವಳಿ ಆಚರಣೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ದೀಪಾವಳಿ ಹಬ್ಬಕ್ಕೆ ಮಹತ್ವದ ಸ್ಥಾನವಿದೆ. ಪ್ರದೇಶವಾರು ಅನನ್ಯತೆಯನ್ನು ಹೊಂದಿರುವ, ಕೃಷಿ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಹಬ್ಬ ದೀಪಾವಳಿ. ಜಾಗತೀಕರಣಕ್ಕೆ ತೆರೆದುಕೊಂಡ ಬಂಡವಾಳಶಾಹಿ ಮನಸ್ಸಿನ ಇಂದಿನ ಜಗತ್ತಿನಲ್ಲಿ ಹಬ್ಬಗಳು ತಮ್ಮ ನೈಜತೆಯನ್ನು ಕಳೆದುಕೊಳ್ಳುತ್ತಿರುವುದು ವಿಷಾಧನೀಯ. ವಿದ್ಯಾರ್ಥಿಗಳು ಸಾಂಸ್ಕೃತಿಕ ಅನನ್ಯತೆಯನ್ನು ಹೊಂದಿರುವ ಹಬ್ಬಗಳನ್ನು ಸಂಭ್ರಮಿಸಬೇಕು ಎಂದು ಹೇಳಿದರು. ವಿಭಾಗದ ಮುಖ್ಯಸ್ಥ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಛೇರಿ ಸಿಬ್ಬಂದಿ ಸುಧೀಂದ್ರ ಕೆ. ಎಸ್. ದೀಪಾವಳಿ ಹಬ್ಬದ ಬಲೀಂದ್ರನನ್ನು ಕರೆಯುವ ಸೊಲ್ಲುಗಳನ್ನು ಹೇಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಪ್ರವೀಣಾ ಮಹಾಬಲ ಪೂಜಾರಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ವ್ಯಾಪ್ತಿಗೊಳಪಡುವ 118-ಬೈಂದೂರು, 119 -ಕುಂದಾಪುರ, 120 -ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರಗಳಿಗೆ ಸಂಬAಧಿಸಿದ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 18 ರಂದು ಚುನಾವಣಾ ಆಯೋಗದ ವೆಬ್ಸೈಟ್ https://www.ceokarnataka.kar.nic.in ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದಲ್ಲಿ ಪ್ರಕಟಿಸಲಾಗಿದೆ. ಜಿಲ್ಲೆಯ ಮತದಾರರು ಪ್ರಕಟಿಸಲಾದ ಕರಡು ಮತದಾರ ಪಟ್ಟಿಯನ್ನು ಸ್ವತಃ ಪರಿಶೀಲಿಸಿ, ಅವರವರ ಹೆಸರು ಇರುವುದನ್ನು ದೃಢಪಡಿಸಿಕೊಳ್ಳಬೇಕು. ಒಂದು ವೇಳೆ ತಮ್ಮ ವಾಸಸ್ಥಾನದ ವ್ಯಾಪ್ತಿಯ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಆಗದೆ ಇದ್ದಲ್ಲಿ ಜನವರಿ 1, 2021 ಕ್ಕೆ 18 ವರ್ಷ ಪೂರ್ಣಗೊಳ್ಳಲಿರುವ ಅರ್ಹ ಭಾರತೀಯ ನಾಗರಿಕರು ನವೆಂಬರ್ 18 ರಿಂದ ಡಿಸೆಂಬರ್ 17 ರ ವರೆಗೆ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಅವಧಿಯಲ್ಲಿ ನಿಗದಿತ ನಮೂನೆ-6 ರಲ್ಲಿ ಕ್ಷೇತ್ರದ ಮತಗಟ್ಟೆ ಹಂತದ ಅಧಿಕಾರಿ(ಬಿ.ಎಲ್.ಓ) ರವರಿಗೆ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಲು, ಮತದಾರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ ಇತ್ಯಾದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಸಾಮಥ್ರ್ಯಕ್ಕೆ ಮೇಲ್ದರ್ಜೆಗೇರಿಸಿ, ಇತರೆ ಮೂಲಭೂತ ಸೌಕರ್ಯಗಳೊಂದಿಗೆ 115 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗೊಳ್ಳಲು ಈಗಾಗಲೇ ಅನುಮೋದನೆ ದೊರೆತಿದ್ದು, ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡ ಪೂಣಗೊಳ್ಳುವವರೆಗೆ, ಈಗಿರುವ ಜಿಲ್ಲಾಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವ ಕುರಿತಂತೆ , ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಯಿತು. ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯು 2021 ರ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಆರಂಭಗೊಳ್ಳಲಿದ್ದು, ನೂತನ ಕಟ್ಟಡ ಕಾಮಗಾರಿಯ ಸಂದರ್ಭದಲ್ಲಿ ರೋಗಿಗಳನ್ನು ಹಾಗೂ ಸಂಪೂರ್ಣ ಉಪಕರಣಗಳನ್ನು ಸ್ಥಳಾಂತರಿಸುವುದು ಅಗತ್ಯವಿದ್ದು, ಅದಕ್ಕಾಗಿ ಹೊಸ ಕಟ್ಟಡ ಪೂರ್ಣಗೊಳ್ಳುವರೆಗೆ ತಾತ್ಕಾಲಿಕವಾಗಿ ಬ್ರಹ್ಮಾವರಕ್ಕೆ ಸ್ಥಳಾಂತರಿಸುವುದು ಅಗತ್ಯವಿದೆ ಎಂದು ಶಾಸಕ ರಘುಪತಿ ಭಟ್ ಮತ್ತು ಎಲ್ಲಾ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು, ಈ ಕುರಿತಂತೆ ಬ್ರಹ್ಮಾವರದಲ್ಲಿ ಸ್ಥಳ ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಕೊಕ್ಕರ್ಣೆ ಗ್ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪಥಿ ಪುಣೆ ಮತ್ತು ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈಸ್ಸ್ ಸಹಯೋಗದಲ್ಲಿ ”ಸಂಘಟಿತವಾಗಿ ಪ್ರಕೃತಿ ಚಿಕಿತ್ಸೆಯ ಮೂಲಕ ಚೈತನ್ಯವನ್ನು ವರ್ಧಿಸುವುದು” ಎಂಬ ವಿಷಯವನ್ನು ಆದರಿಸಿ ಮೂರನೇ ನ್ಯಾಷನಲ್ ನ್ಯಾಚುರೋಪಥಿ ದಿನವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿಯ ಬೀಚ್ ಹೀಲಿಂಗ್ ಹೋಮ್ ಸಮಗ್ರ ಸ್ವಾಸ್ಥ್ಯ ಕೇಂದ್ರದ ನಿರ್ದೇಶಕ ಡಾ. ಮಹಮ್ಮದ್ ರಫೀಕ್ ಮಾತನಾಡಿ, ಪ್ರಕೃತಿ ಚಿಕಿತ್ಸೆಗೆ ನಮ್ಮ ದೇಶ ದೊಡ್ಡ ಕೊಡುಗೆ ನೀಡಿರುವುದು ಹೆಮ್ಮೆಯ ವಿಷಯ. ಆದರೆ ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಕ್ಯಾನ್ಸರ್ ಕಾಯಿಲೆಗಳಲ್ಲಿ ನಮ್ಮ ದೇಶವೇ ದಾಪುಗಾಲು ಇಡುತ್ತಿರುವುದು ಬೇಸರದ ಸಂಗತಿ ಎಂದರು. ಹುರುಪು ಜೀವನಶಕ್ತಿ ಹಣಕೊಟ್ಟು ,ಮಾತ್ರೆ ತಿಂದು ಬರಲು ಸಾಧ್ಯವಿಲ್ಲ, ಅವು ಕೇವಲ ನಮ್ಮ ಜೀವನ ಶೈಲಿಯಿಂದ ಮಾತ್ರ ಕಾಪಡಿಕೊಳ್ಳಲು ಸಾಧ್ಯ. ನಾವು ಯಾವಾಗ ಸಂತೋಷವಾಗಿರುತ್ತೇವೆಯೋ ಆಗ ನಮ್ಮ ಚೈತನ್ಯ ಉತ್ಸಾಹ ಹೆಚ್ಚಾಗುತ್ತದೆ. ಮಾತ್ರವಲ್ಲದೇ ಯೋಗ ಧ್ಯಾನ ಮಾಡುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಜಿ.ವಿ ಅಶೋಕ ಸಂಪಾದಿಸಿದ ದಿ. ಜಿ. ವಾಸುದೇವ ಹೇರ್ಳೆ ಆತ್ಮಕಥನ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಲೋಕಾರ್ಪಣೆಗೊಳಿಸಿದರು. ಕೃತಿ ಆನಾವರಣಗೊಳಿಸಿ ಮಾತನಾಡಿದ ನೀಲಾವರ ಸುರೇಂದ್ರ ಅಡಿಗ, ಆತ್ಮಕಥನಗಳು ನಮ್ಮ ಬದುಕಿಗೆ ದಾರಿದೀಪವಾಗಿದ್ದು ನಮ್ಮನ್ನು ಅವಲೋಕನ ಮಾಡಿಕೊಳ್ಳಲು ಒಂದು ಅವಕಾಶ, ಇದರಿಂದ ಬದುಕಿನ ಪಾಠಗಳ ಬಗ್ಗೆ ಅಥವಾ ಬದುಕಿನ ಬಗ್ಗೆ ಇರುವ ಹೆಜ್ಜೆಗುರುತನ್ನು , ಸಾಧಕನು ಸಾಧಿಸಿದ ಸಾಧನೆ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಆರಂಭಿಕ ಮಾತುಗಳನ್ನಾಡಿದ ಸಂಪಾದಕ ಜಿ.ವಿ ಹೇರ್ಳೆರವರು ತಂದೆಯವರ ಕುರಿತು ಮಾಡಿದ ಪುಸ್ತಕದ ಬಗ್ಗೆ ಅನಿಸಿಕೆ ಹಂಚಿಕೊಂಡರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಬ್ರಹ್ಮಾವರ ತಾಲೂಕು ಕ.ಸಾ.ಪ ಅಧ್ಯಕ್ಷರಾದ ನಾರಾಯಣ ಮಡಿ, ಕಾರ್ಕಳ ಕ.ಸಾ.ಪ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಹೆಬ್ರಿ ತಾಲೂಕು ಕ.ಸಾ.ಪ ಅಧ್ಯಕ್ಷರಾದ ಆನಂದ್ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ, ಜಿ. ಅಶೋಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರ ಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣಕಾಮತ್ರ ಹೆಸರಿನಲ್ಲಿ ನೀಡುವ 2020-21 ರ ಸಾಲಿನ ಪ್ರಶಸ್ತಿಯನ್ನು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ, ಉಪ್ಪಿನಕುದ್ರು ಇದರ ಅರ್ಥಧಾರಿ ನಾರಾಯಣ ಬಿಲ್ಲವರಿಗೆ ನೀಡಲು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಸಮಿತಿ ಆಯ್ಕೆ ಮಾಡಲಾಗಿದೆ 2021 ಜನವರಿಯಲ್ಲಿ ನಡೆಯುವ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಭಾಗವಹಿಸುವ ವಿಶೇಷ ಗಣ್ಯರಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಮಂಗಳೂರು ವಿಭಾಗದಿಂದ ವಿದ್ಯಾರ್ಥಿ ರಿಯಾಯಿತಿ ದರದ ಬಸ್ಸ್ಪಾಸು, ವಿಕಲಚೇತನರ ರಿಯಾಯಿತಿ ಬಸ್ಸ್ಪಾಸು, ಅಂಧರ ಉಚಿತ ಬಸ್ಸ್ ಪಾಸ್ ಸ್ವಾತಂತ್ರ್ಯ ಹೋರಾಟಗಾರರ ಉಚಿತ, ಬಸ್ಸ್ ಪಾಸ್ ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್ ಮತ್ತು ಅಪಘಾತ ಪರಿಹಾರ ನಿಧಿಗಳನ್ನು ಪಡೆಯಲುಸೇವಾಸಿಂಧು ಪೋರ್ಟಲ್ನಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಪ್ಲೋಡ್ ಮಾಡಿದ ಅರ್ಜಿ ಪ್ರತಿ ಹಾಗೂ ಪಾಸಿನ ಶುಲ್ಕವನ್ನು ವಿದ್ಯಾರ್ಥಿಗಳು ಶಾಲಾಕಾಲೇಜು ಮುಖಾಂತರ ಕರಾರಸಾ ನಿಗಮದ ಬಸ್ಸು ನಿಲ್ದಾಣದ ಪಾಸ್ ಕೌಂಟರ್ ನಲ್ಲಿ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಿದ ಸೂಕ್ತ ದಾಖಲೆಗಳನ್ನು ಹಾಗೂ ಪಾಸ್ ಶುಲ್ಕವನ್ನು ನಿಗಮದ ಪಾಸ್ ಕೌಂಟರ್ ನಲ್ಲಿ ನೀಡಿ ಬಸ್ ಪಾಸುಗಳನ್ನು ಪಡೆಯಬಹುದಾಗಿದೆ ಎಂದು ಮಂಗಳೂರು ಕರಾರಸಾಂ ವಿಭಾಗದ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
