Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮತ್ಸ್ಯ ಸಂಪತ್ತನ್ನು ಬಳಸಿಕೊಳ್ಳುವ ಮೂಲಕ ಮೀನುಗಾರಿಕೆಗೆ ಸಹಕಾರಿಯಾಗುವ ಉದ್ಯಮ ಈ ಭಾಗಕ್ಕೆ ಅಗತ್ಯವಾಗಿದೆ. ಬಲಿತ ಮೀನುಗಳನ್ನು ಬಳಸಿಕೊಂಡು, ಮೀನುಗಾರಿಕೆಗೆ ಆಶ್ರಯವಾಗುವ ಈ ಉದ್ಯಮ ಯಶಸ್ವಿಯಾಗಿ ಬೆಳೆಯಲಿ. ಗೋವಿಂದ ಬಾಬು ಪೂಜಾರಿಯವರಲ್ಲಿನ ಪರಿಶ್ರಮ, ಶೃದ್ದೆಯು ಅವರನ್ನು ಯಶಸ್ಸಿನೆಡೆಗೆ ಕೊಂಡೊಯ್ಯಲಿದೆ ಎಂದು ಮುಜರಾಯಿ, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬೈಂದೂರು ತಾಲೂಕು ಗೋಳಿಹೊಳೆ ಗ್ರಾಮದ ಎಲ್ಲೂರಿನಲ್ಲಿ ಮತ್ಸ್ಯ ಬಂಧನ ಪ್ರೈವೆಟ್ ಲಿಮಿಟೆಡ್ ವತಿಯಿಂದ ನಿರ್ಮಾಣವಾಗುವ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಮತ್ಸ್ಯಬಂಧನ ಮೀನಿನ ಮೌಲ್ಯವರ್ಧಿತ ಖಾದ್ಯಗಳನ್ನು ರಾಜ್ಯದ ಮುಖ್ಯಮಂತ್ರಿಗಳು ಜೂನ್‌ನಲ್ಲಿಯೇ ಬಿಡುಗಡೆಗೊಳಿಸಿದ್ದಾರೆ. ಮೀನಿನ ಖಾದ್ಯಗಳ ಮಾರುಕಟ್ಟೆ ವ್ಯವಸ್ಥೆಗೆ ರೈಲ್ವೆ ನಿಲ್ದಾಣಗಳಲ್ಲಿ ಅಳವಡಿಸಿಕೊಂಡರೆ ಲಕ್ಷಾಂತರ ಜನರಿಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಈ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂದರು. ಇವತ್ತು ರಾಜ್ಯದ ಮೂರು ಜಿಲ್ಲೆಗಳಲ್ಲಿ ಕಡಲ ಮೀನುಗಾರಿಕೆ ನಡೆಯುತ್ತದೆ. 27 ಜಿಲ್ಲೆಗಳಲ್ಲಿ ಒಳನಾಡು ಮೀನುಗಾರಿಕೆ ನಡೆಯುತ್ತದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ತನ್ನ ರೈತಮಿತ್ರ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಅದರ 3686 ಸದಸ್ಯರಿಗೆ ರೂ 34.24 ಕೋಟಿ ಸಾಲ ನೀಡಿದೆ. ಅವರಲ್ಲಿ 410 ಸದಸ್ಯರಿಂದ ಬಾಕಿಯಾಗಿರುವ ರೂ. 4.85 ಕೋಟಿ ಸಾಲಕ್ಕೆ ಶೇ.2 ಬಡ್ಡಿ ರಿಯಾಯಿತಿ ನೀಡಲು ಹಾಗೂ ದಂಡನೆ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಸಂಘದ ನಾವುಂದ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಇದನ್ನು ಪ್ರಕಟಿಸಿದರು. ಮಾರ್ಚ್ 31ಕ್ಕೆ ಮುನ್ನ ಸಾಲ ಮರುಪಾವತಿ ಮಾಡುವವರಿಗೆ ಇದು ಅನ್ವಯವಾಗಲಿದೆ. ಇದರ ಮೊತ್ತ ರೂ. 65 ಲಕ್ಷ ಆಗಲಿದೆ. ಸಂಘವು ಸದಸ್ಯರಿಗೆ ರೂ. 2 ಲಕ್ಷ ವರೆಗಿನ ಬಡ್ಡಿ ರಹಿತ ಬೆಳೆಸಾಲ ನೀಡುತ್ತಿದೆ. ವ್ಯಾಪ್ತಿಯಲ್ಲಿ ಕೃಷಿಭೂಮಿ ಪಹಣಿ ಹೊಂದಿರುವ ಎಲ್ಲ ಸದಸ್ಯರು ಹಾಗೂ ವ್ಯವಸಾಯಗಾರರು ಇದರ ಲಾಭ ಪಡೆಯಬೇಕು ಎಂಬ ದೃಷ್ಟಿಯಿಂದ ಅಭಿಯಾನದ ಮೂಲಕ ಮಾಹಿತಿ ನೀಡಲಾಗುತ್ತಿದೆ ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲೋಕಸಭೆಯಲ್ಲಿ ಎರಡೇ ಎರಡು ಸಂಸದರು ಮತ್ತು ವಿಧಾನ ಸಭೆಯಲ್ಲಿ ಇಬ್ಬರು ಶಾಸಕ ಹೊಂದಿದ್ದ ಬಿಜೆಪಿ ಇಂದು ಲೋಕಸಭೆ ಹಾಗೂ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ. ಪ್ರಸಕ್ತ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಅತೀ ಹೆಚ್ಚು ಗ್ರಾಮಗಳು ಬಿಜೆಪಿ ಬೆಂಬಲಿತರು ಆರಿಸಿ ಬರುವ ಮೂಲಕ ಗ್ರಾಮಗಳಲ್ಲೂ ಬಿಜೆಪಿ ಆಳ್ವಿಕೆ ಶಖೆ ಆರಂಭವಾಗಿದ್ದು ಬಿಜೆಪಿ ಹೆಮ್ಮರವಾಗಿ ಬೆಳೆಯುತ್ತಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಹೇಳಿದರು. ಅವರು ಮಂಗಳವಾರ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾವೇಶ ಉದ್ಘಾಟಸಿ ಮಾತನಾಡಿ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸದಸ್ಯರ ಜವಾಬ್ದಾರಿ ಹೆಚ್ಚಿದ್ದು, ಗ್ರಾಮದ ಸಮಸ್ಯೆ ಅರಿತು ಗ್ರಾಮಕ್ಕೆ ಬರುವ ಅನುದಾನ ಸಮರ್ಥವಾಗಿ ಬಳಸಿಕೊಂಡು ಕೆಲಸ ಮಾಡಿ ಬಿಜೆಪಿ ಮತ್ತಷ್ಟು ಬಲ ಪಡಿಸುವಂತೆ ಕರೆಕೊಟ್ಟರು. ರಾಜ್ಯದಲ್ಲಿ 76,183 ಸಾವಿರ ಗ್ರಾಮ ಪಂಚಾಯಿತಿ ಸದಸ್ಯರ ಪೈಕಿ 42,163 ಸಾವಿರ ಬಿಜೆಪಿ ಬೆಂಬಲಿತರು ಆಯ್ಕೆ ಆಗಿದ್ದಾರೆ. ಉಡುಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿಎಂ ಸ್ನೇಹಿತ ಬೀಜಾಡಿ ರಾಘವೇಂದ್ರ ರಾವ್ ಹಾಸನ ಅವರು ಲೋಕಕಲ್ಯಾಣಾರ್ಥ ಕೈಗೊಂಡ 1008 ಕಾಯಿ ಗಣಹೋಮದಲ್ಲಿ ಪಾಲ್ಗೊಳ್ಳಲು ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬಿಕರ ಜೊತೆ ದೇವಸ್ಥಾನಕ್ಕೆ ಆಗಮಿಸಿದರು. ಮುಖ್ಯಮಂತ್ರಿಯಾಗಿ ಆನೆಗುಡ್ಡೆಗೆ ಮೊದಲ ಭೇಟಿಯಾಗಿದ್ದು, ಇದೂವರೆಗೆ ಮೂರನೇ ಬಾರಿ ಅವರು ಕ್ಷೇತ್ರಕ್ಕೆ ಬರುತ್ತಿದ್ದಾರೆ. ವೇ.ಮೂ.ಸೀತಾರಾಮ ಐತಾಳ್, ವೇ.ಮೂ.ಸುಬ್ರಹ್ಮಣ್ಯ ಉಪಾಧ್ಯಾಯ, ಪ್ರಾಣೇಶ್ ತಂತ್ರಿ, ಅಸೋಡು ಶ್ರೀಧರ ಉಪಾಧ್ಯಾಯ, ರಾಘವೇಂದ್ರ ಉಪಾಧ್ಯಾಯ, ಶ್ರೀನಿವಾಸ ಉಪಾಧ್ಯಾಯ ನೇತೃತ್ವದಲ್ಲಿ 28 ಜನ ವೈದರು 1008 ಕಾಯಿ ಗಣಹೋಮ ನೆರೆವೇರಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದೇವಸ್ಥಾನದ ಹಿಂದಿನ ಮೊಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯ ಮತ್ತು ಈಗಿನ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ ಬರಮಾಡಿಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೇವಸ್ಥಾನ ವತಿಯಿಂದ ಗೌರವಿಸಿದರು. ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಗಣಹೋಮದಲ್ಲಿ ಪಾಲ್ಗೊಂಡು, ಪ್ರಸಾದ ಭೋಜನ ಸ್ವೀಕರಿಸಿ, ಕೋಟೇಶ್ವರ ಯುವ ಮೆರಿಡಿಯನ್ ಹೆಲಿಪ್ಯಾಡ್ ಮೂಲಕ ಬೆಂಗಳೂರಿಗೆ ನಿರ್ಗಮಿಸಿದರು. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆನೆಗುಡ್ಡೆ ಶ್ರೀ ವಿನಾಯಕ ದೇವಳಕ್ಕೆ ಮಂಗಳವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ನೀಡಿ ೧೦೦೮ ಕಾಯಿ ಗಣಹೋಮದಲ್ಲಿ ಪಾಲ್ಗೊಂಡರು. ಆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ ವಿಧಾನ ಮಂಡಲ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ನೂತನ ಸಚಿವರಿಗೆ ಇನ್ನೆರಡು ದಿನದಲ್ಲಿ ಖಾತೆ ಹಂಚಿಕೆ ಮಾಡಲಾಗುತ್ತದೆ. ಕರೋನಾ ವೈರಸ್ ಲಾಕ್‌ಡೌನ್ ಇನ್ನಿತರ ಕಾರಣದಿಂದ ಆರ್ಥಿಕ ಹಿನ್ನೆಡೆಯ ಕಾರಣ ಎಚ್ಚರಿಕೆಯಿಂದ ಇತಿಮಿತಿಯಲ್ಲಿ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಳೆದ ಎರಡು ದಿನದಿಂದ ಲೋಕಕಲ್ಯಾಣ ಹಾಗೂ ರಾಜ್ಯದ ಮಳೆ ಬೆಳೆ ಸಂಮೃದ್ದಿಗಾಗಿ ಉಡುಪಿ ಜಿಲ್ಲೆಯಲ್ಲಿ ಧಾರ್ಮಿಕ ಪ್ರವಾಸ ಮಾಡಿದ್ದು, ದೇವರ ಬಗ್ಗೆ ವಿಶ್ವಾಸ ಇರುವ ಸಮಾಜ ಬಂಧುಗಳು ನಾವಾಗಿರುವುದರಿಂದ ಜೀವನದ ಪ್ರತಿ ಹಂತದಲ್ಲಿಯೂ ಹೆಜ್ಜೆ ಹೆಜ್ಜೆಗಳಿಗೂ ಇರುವ ಸವಾಲಗಳನ್ನು ಎದುರಿಸಲು ದೇವರ ಮೊರೆ ಹೋಗುತ್ತೇವೆ. ವಿಘ್ನ ನಿವಾರಕನಾದ ಕುಂಭಾಸಿಯ ವಿನಾಯಕನಲ್ಲಿಯೂ ವಿಘ್ನ ನಿವಾರಣೆ ಮಾಡಿ ಲೋಕ ಕಲ್ಯಾಣಾವಾಗಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ವತಿಯಿಂದ ಪ್ರಾಡಕ್ಟ್ ಡೆವಲಪ್ಮೆಂಟ್ & ಪೇಟೆಟಿಂಗ್ ವಿಷಯದ ಮೇಲೆ ವೆಬಿನಾರ್ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಅಮೇರಿಕಾದ ಕೂಪರ್ ಲೈಟಿಂಗ್ ಸೊಲ್ಯೂಷನ್ಸ್ ಕಂಪನಿಯ ಪ್ರವೀರ್ ಮಂಜಪ್ಪರವರು ಭಾಗವಹಿಸಿದ್ದರು. ತಮ್ಮದೇ ಕಂಪನಿಯ ಉತ್ಪನ್ನಗಳ ಅಭಿವೃದ್ಧಿ ಮತ್ತು ವಿನ್ಯಾಸಗಳ ಮಾಹಿತಿ ನೀಡುತ್ತಾ ಇಂಜಿನಿಯರ್ ಗಳಿಗೆ ಪೆಟೆಂಟ್ ಎಷ್ಟು ಪ್ರಾಮುಖ್ಯತೆ ಹೊಂದಿದೆ ಎಂದು ಹಲವು ಉದಾಹರಣೆಗಳ ಮೂಲಕ ವಿವರಿಸಿದರು. ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗಳು ಸಂಪನ್ಮೂಲ ವ್ಯಕ್ತಿಯೊಂದಿಗೆ ಪ್ರಶ್ನೆಯೊತ್ತರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾರವರ ಉಪಸ್ಥಿತಿಯಲ್ಲಿ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಪ್ರೊ ತಿಮ್ಮಪ್ಪ ಡಿ. ಎಸ್. ರವರು ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಗಂಗೊಳ್ಳಿ ಮತ್ತು ಅಂಗನವಾಡಿ ಕೇಂದ್ರ ಮೇಲ್‌ಗಂಗೊಳ್ಳಿ ಇವರ ಆಶ್ರಯದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಅನ್ನಪ್ರಾಶನ ಕಾರ್ಯಕ್ರಮ ಇಲ್ಲಿನ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ವೇತಾ ಮಾಹಿತಿ ನೀಡಿ ಮಾತನಾಡಿದರು. ಅವಿನಾಶ್, ಪತ್ರಕರ್ತ ಬಿ.ರಾಘವೇಂದ್ರ ಪೈ, ಭಾರತೀಯ ವಿಕಾಸ ಟ್ರಸ್ಟ್‌ನ ಮುಖ್ಯ ವ್ಯವಸ್ಥಾಪಕ ಅರುಣ್ ಪಟವರ್ಧನ್ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಸ್ವಾಗತಿಸಿದರು. ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನೌಷಧಿ ಅರಿವು ಕಾರ‍್ಯಕ್ರಮ ನಡೆಯಿತು. ಇಂಡಿಯನ್ ರೆಡ್‌ಕ್ರಾಸ್ ಕುಂದಾಪುರ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಮಾತನಾಡಿ, ದುಬಾರಿ ಔಷಧಿ ಯಾವಾಗಲೂ ಗುಣ ಮಟ್ಟದ ಔಷಧಿಯಾಗಿರಬೇಕೆಂದಿಲ್ಲ, ಜನೌಷಧಿ ಕೇಂದ್ರದಲ್ಲಿ ಶೇಕಡಾ 50-90ರಷ್ಟು ಕಡಿಮೆ ದರದಲ್ಲಿ ದೊರೆಯುವ ಔಷಧಿಗಳು ಬೇರೆ ಕಡೆ ದೊರೆಯುವ ಔಷಧಿಗಳಿಗಿಂತ ಗುಣಮಟ್ಟದ್ದಾಗಿರುತ್ತದೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು, ಯುವ ರೆಡ್‌ಕ್ರಾಸ್ ಕುಂದಾಪುರ ಘಟಕದ ಖಜಾಂಚಿಗಳಾದ ಶಿವರಾಮ್ ಶೆಟ್ಟಿ, ಜನೌಷಧಿ ಉಸ್ತುವಾರಿಗಳಾದ ಗಣೇಶ್ ಆಚಾರ್, ಯುವ ರೆಡ್‌ಕ್ರಾಸ್ ಕುಂದಾಪುರದ ಕಾರ್ಯಕ್ರಮ ಸಂಯೋಜಕರಾದ ಸತ್ಯನಾರಾಯಣ ಪುರಾಣಿಕ್, ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಹಸಂಯೋಜಕಿ ಸೌಮ್ಯ ಕುಂದರ್ ವಂದಿಸಿದರು. ವಿದ್ಯಾರ್ಥಿನಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಥೊಲಿಕ್ ಸಭಾ ವಲಯ ಸಮಿತಿಯ ಆಶ್ರಯದಲ್ಲಿ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ, ಪ್ರಸಾದ್ ನೇತ್ರಾಲಯ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣ ವಿಭಾಗ ಉಡುಪಿ, ಇವರ ಸಂಯೋಕತ್ವದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಮತ್ತು ಆಯುರ್ವೇದ ಸೌಂದರ್ಯ ಮಾಹಿತಿ ಹಾಗೂ ತಪಾಸಣೆ ಶಿಬಿರವು ಕುಂದಾಪುರ ಸೈಂಟ್ ಮೇರಿಸ್ ಪಿ.ಯು.ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕುಂದಾಪುರ ವಲಯ ಪ್ರಧಾನ ಧರ್ಮಗುರು, ಕಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿಯ ಅಧ್ಯಾತ್ಮಿಕ ನಿರ್ದೇಶಕ ಅ|ವಂ|ಸ್ಟ್ಯಾನಿ ತಾವ್ರೊ, ಭಾಹ್ಯ ಬೆಳಕು ಎಷ್ಟೊ ಮುಖ್ಯವೊ ಅಷ್ಟೆ ಅಂತರ್ಯದ ಬೆಳಕು ಅಷ್ಟೆ ಮುಖ್ಯ, ಸೌಂದರ್ಯ  ಹೆಚ್ಚಿಸಿಕೊಳ್ಳುವುದರ ಜೊತೆಗೆ ಅಂತರಾತ್ಮದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವುದು ಮುಖ್ಯ. ನೀವು ಸಮಾಜದ ಬೆಳಕಾಗಬೇಕು ಎಂದು ಯೇಸು ಸ್ವಾಮಿ ಹೇಳಿದ್ದು ನೆನಪಿಸಿಕೊಂಡು ನಾವು ಹಾಗೆ ನಡೆಯೋಣ, ಹಾಗೇಯೆ ಇಂತಹ ಶಿಬಿರಗಳಿಂದ ನಾವು ಆರೋಗ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶತಮಾನೋತ್ಸವದ ಸವಿನೆನಪಿಗಾಗಿ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶತಮಾನೋತ್ಸವ ಭವನ ಹಾಗೂ ರಂಗ ಮಂದಿರದ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟಿ, ಸರಕಾರ ಶಾಲೆಗಳಲ್ಲಿ ನೂತನ ಕೊಠಡಿಗಳನ್ನು ನಿರ್ಮಿಸಿದರಷ್ಟೇ ಸಾಲದು. ಮಕ್ಕಳ ದಾಖಲಾತಿ ಕೂಡ ಪ್ರತಿವರ್ಷ ಹೆಚ್ಚಳವಾಗಬೇಕು. ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕಾರಣವಾಗಬೇಕು. ಶತಮಾನೋತ್ಸವನ್ನು ಆಚರಿಸಿಕೊಳ್ಳುತ್ತಿರುವ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ತಾಲೂಕಿನಲ್ಲೇ ಅತ್ಯುತ್ತಮವಾದ ಶಾಲೆಯಾಗಿದ್ದು, ಬೈಂದೂರು ವಲಯದಲ್ಲಿ ಅತಿ ಹೆಚ್ಚು ಮಕ್ಕಳ ದಾಖಲಾತಿ ಹೊಂದಿರುವ ಎರಡನೇ ದೊಡ್ಡ ಸರಕಾರಿ ಶಾಲೆಯಾಗಿರುವುದು ಪ್ರಶಂಸನಾರ್ಹವಾದುದು ಎಂದು ಹೇಳಿದರು. ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ದಾನಿಗಳ ಸಹಾಯದಿಂದ ಸುಸಜ್ಜಿತವಾದ ಶಾಲಾ ಕೊಠಡಿ, ವಿಸ್ತಾರದ ರಂಗ ಮಂದಿರ, ಸ್ಮಾರ್ಟ್ ಕ್ಲಾಸ್, ಶೌಚಾಲಯ, ಆವರಣ ಗೋಡೆ, ಸಭಾಂಗಣ ನವೀಕರಣ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದ್ದು, ಎಲ್ಲರ ಸಹಕಾರದಿಂದ ಇನ್ನಷ್ಟು ಅಭಿವೃದ್ಧಿ…

Read More