ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಬಂದರು ಇಲಾಖೆಯ ಜಂಟಿ ನಿರ್ದೇಶಕ ಗೋಪಾಲ್ ನಾಯರಿ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ ಗ್ರಂಥಾಲಯ ವೀಕ್ಷಿಸಿದರು ವೀಕ್ಷಿಸಿ ಮಾತನಾಡಿದ ಬಂದರು ಇಲಾಖೆಯ ಜಂಟಿ ನಿರ್ದೇಶಕ ಗೋಪಾಲ್ ನಾಯರಿ, ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ಜೊತೆಗೆ ಹಲವಾರು ಪ್ರಶಸ್ತಿಗಳನ್ನು ಪಡೆದು ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಕಾರಂತರದ್ದು ಎಲ್ಲಾರಿಗೂ ಮಾದರಿಯಾದ ಬದುಕು, ಇದನ್ನು ಮುಂದಿನ ಜನಾಂಗಕ್ಕೆ ತಲುಪಿಸುವ ಜವಬ್ದಾರಿ ನಮ್ಮ ಮೇಲಿದೆ, ಈ ನಿಟ್ಟಿನಲ್ಲಿ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇದರ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಟ್ರಸ್ಟಿ ಸುಬ್ರಾಯ್ ಆಚಾರ್ಯ, ಉಡುಪಿ ಜಿಲ್ಲೆಯ ಬಂದರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಾಂತಕರಾದ ಉದಯ ಕುಮಾರ್, ದ.ಕ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೊಚ್ಚಕ್ಕಿ ಕುಡಿಗಳು ಕುಂದಾಪ್ರ ಕನ್ನಡದ ಸಾಮಾಜಿಕ ಜಾಲತಾಣ ಬಳಗ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕುಂದಗನ್ನಡ ಕವನ ರಚನಾ ಸ್ಪರ್ಧೆಯಲ್ಲಿ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. ಇವರು ರಚಿಸಿದ ‘ನಮ್ ಭಾಷಿ ನಮ್ ಗತ್’ ಎನ್ನುವ ಕವನ ಈ ಗೌರವಕ್ಕೆ ಪಾತ್ರವಾಗಿದೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಗೋಳಿಹೊಳೆ ಯಲ್ಲಿ ಶ್ರೀ ವಿನಾಯಕ ಆಟೋರಿಕ್ಷಾ ಗೂಡ್ಸ್ ಟೆಂಪೋ ಮತ್ತು ಟ್ಯಾಕ್ಸಿ ಚಾಲಕ-ಮಾಲಕರ ಸಂಘದಿಂದ 65ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಮತ್ತು ವಾಹನದ ಮೆರವಣಿಗೆ ಆಚರಿಸಲಾಯಿತು . ಸಮಾರಂಭಕ್ಕೆ ಬೈಂದೂರು ಪೊಲೀಸ್ ಠಾಣಾಧಿಕಾರಿ ಸಂಗೀತ ರವರು ತಾಯಿ ಭುವನೇಶ್ವರಿ ಮಾಲಾರ್ಪಣೆ ಮಾಡಿ ನಂತರ ಧ್ವಜರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಮೂಕಾಂಬಿಕಾ ದೇವಳದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶಿವರಾಮ್ ಭಟ್ಟರು ಶ್ರೀ ಭುವನೇಶ್ವರಿ ತಾಯಿ ರಥಕ್ಕೆ ಪೂಜೆಯನ್ನು ಮಾಡಿ ರಾಜ್ಯೋತ್ಸವದ ಸಂದೇಶವನ್ನು ಹೇಳಿದರು ಈ ಕಾರ್ಯಕ್ರಮದಲ್ಲಿ ಚಾಲಕ – ಮಾಲಕ ಸಂಘದ ಅಧ್ಯಕ್ಷರಾದ ಮಂಜು ಪೂಜಾರಿ ಸಸಿಹಿತ್ಲು ಮತ್ತು ಕಾರ್ಯದರ್ಶಿ ನಾರಾಯಣ ಪೂಜಾರಿ ಹಾಗೂ ಖಜಾಂಚಿ ಯವರಾದ ಗೋಪಾಲ್ ಮರಾಠಿ ಮತ್ತು ಗೋಳಿಹೊಳೆ ಅರೆಶಿರೂರು ಎಲ್ಲೂರು ಎಳಜಿತ ಘಟಕದ ಸರ್ವ ಸದಸ್ಯರು ಊರಿನ ಗ್ರಾಮಸ್ಥರು ಹಾಜರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು ಧ್ವಜಾರೋಹಣ ಮಾಡಿ ಮಾತನಾಡಿದ ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ಎಲ್ಲ ಭಾಷೆಗಳನ್ನು ಪ್ರೀತಿಸುವ ಜತೆ ಮಾತೃ ಭಾಷೆಯನ್ನು ರಕ್ಷಿಸುವ ಬದ್ಧತೆಯನ್ನು ಕನ್ನಡ ನಾಡು ಹೊಂದಿದೆ’. ಆಚರಣೆ, ಸಂಸ್ಕೃತಿ, ಪರಂಪರೆ, ಆಹಾರ ಹಾಗೂ ಭಾಷಾ ಸೊಗಡಿನಲ್ಲಿ ವಿಭಿನ್ನತೆ ಇದ್ದರೂ, ನಮ್ಮೆಲ್ಲರ ಹೃದಯ ಭಾಷೆ ಕನ್ನಡ ಒಂದೇ ಆಗಿದೆ. ಜನಪದ, ಜಾನಪದವನ್ನು ಉಳಿಸಿ ಬೆಳೆಸಬೇಕಿದೆ’ ಎಂದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಎಚ್.ಇಂದಿರಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಸದಸ್ಯರಾದ ದೇವಕಿ ಪಿ. ಸಣ್ಣಯ್ಯ, ಪ್ರಭಾಕರ್ ವಿ, ಶ್ರೀಧರ ಶೇರೆಗಾರ್, ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣಿಕರ್, ತಾಲ್ಲೂಕು ಯುವಜನ ಸೇವಾ ಮತ್ತು ಕ್ರೀಡಾಕಾರಿ ಕುಸುಮಾಕರ್ ಶೆಟ್ಟಿ ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯ ಪತ್ರಕರ್ತ, ಚಂದನ ವಾಹಿನಿಯ ವರದಿಗಾರ ಉದಯ ಪಡಿಯಾರ್ ಅವರಿಗೆ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮೊದಲಾದವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. 1997ರಲ್ಲಿ ಡಿಡಿ ಚಂದನ ವಾಹಿನಿ ಮೂಲಕ ಪತ್ರಿಕೋದ್ಯಮ ಪ್ರವೇಶ ಮಾಡಿದ ಉದಯ ಪಡಿಯಾರ್ ಅವರು ಸತತ 23 ವರ್ಷಗಳಿಂದ ಅದೇ ವಾಹಿನಿಯಲ್ಲಿ ಮುಂದುವರಿದಿದ್ದಾರೆ. 2001ರಿಂದ 2 ವರ್ಷ ಈಟಿವಿ ಅನ್ನದಾತ ಕಾರ್ಯಕ್ರಮಕ್ಕಾಗಿಯೂ ವರದಿ ಮಾಡಿದ್ದರು. ಕೋವಿಡ್ ಸಂದರ್ಭದಲ್ಲಿ ಅವರು ಮಾಡಿದ ವರದಿಗಾಗಿ ಚಂದನ ವಾಹಿನಿಯಿಂದ ಮನ್ನಣೆ ದೊರೆತಿದೆ. 1984ರಲ್ಲಿ ಧಾರವಾಡದಲ್ಲಿ ಪೋಟೋಗ್ರಫಿಯೊಂದಿಗೆ ವೃತ್ತಿ ಬದುಕು ಆರಂಭಿಸಿ ಬಳಿಕ ಸ್ವಂತ ಸ್ವುಡಿಯೋ ಆರಂಭಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿರಿಯ ಪತ್ರಕರ್ತ ಶ್ರೀಪತಿ ಹೆಗಡೆ ಹಕ್ಲಾಡಿ ಅವರಿಗೆ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮೊದಲಾದವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ನೇರ, ದಿಟ್ಟ ವರದಿಗಾರಿಕೆಯ ಮೂಲಕ ಪತ್ರಿಕಾರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ ಹಿರಿಯ ಪತ್ರಕರ್ತ, ವಿಜಯವಾಣಿ ಪತ್ರಿಕೆಯ ಜಿಲ್ಲಾ ವರದಿಗಾರ ಶ್ರೀಪತಿ ಹೆಗಡೆ ಹಕ್ಲಾಡಿ ಅವರ ಹತ್ತಾರು ವರದಿಗಳು ಮಹತ್ತರ ಸಾಮಾಜಿಕ ಬದಲಾವಣೆಗೆ ಕಾರಣವಾಗಿರುವುದಲ್ಲದೇ, ಆಡಳಿತಯಂತ್ರವನ್ನು ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದೆ. ಹಕ್ಲಾಡಿ ಅವರಿಗೆ ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆಯು ಕೊಡಮಾಡುವ ಆರನೇ ವರ್ಷದ `ಕಡಲ ತೀರದ ಭಾರ್ಗವ ಡಾ.ಕೆ.ಶಿವರಾಮ ಕಾರಂತ ಸದ್ಭಾವನಾ ರಾಜ್ಯ ಪ್ರಶಸ್ತಿ’,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜನರ ಕೈಗೆ ಅಧಿಕಾರ ಕೊಡಬೇಕು ಎನ್ನುವ ನಿಲುವು ಇದ್ದರೂ ಕೂಡಾ ಅದು ಪರಿಣಾಮಕಾರಿಯಾಗಿ ಅನುಷ್ಠಾನ ಆಗದೇ ಇರುವುದನ್ನು ಕಾಣುತ್ತೇವೆ. ವ್ಯವಸ್ಥೆಯೊಳಗಿರುವ ಭ್ರಷ್ಟಚಾರ ಹೊರ ಬಂದರೆ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತದೆ. ಪಂಚಾಯತಿ ಪ್ರತಿನಿಧಿಗಳು ಕಾಯ್ದೆಗಳನ್ನು ತಿಳಿದುಕೊಂಡು ತಮ್ಮ ಹಕ್ಕು, ಕರ್ತವ್ಯಗಳನ್ನು ಪಾಲಿಸಬೇಕು. ಆ ಹಿನ್ನೆಲೆಯಲ್ಲಿ ’ಜನಾಧಿಕಾರ’ ಕೃತಿ ಮಾರ್ಗದರ್ಶಿಯಾಗಬಲ್ಲದು ಎಂದು ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಹೇಳಿದರು. ಗ್ರಾಮ ಪಂಚಾಯತ್ ಹಕ್ಕೋತ್ತಾಯ ಆಂದೋಲನ ಮತ್ತು ಪಂಚಾಯತ್ ರಾಜ್ ಒಕ್ಕೂಟ ಇವರ ಸಹಕಾರದೊಂದಿಗೆ ಕುಂದಾಪುರ ತಾಲೂಕು ಪಂಚಾಯತಿ ಸಭಾಭವನದಲ್ಲಿ ನಡೆದ ಜನಪ್ರತಿನಿಧಿ ಪ್ರಕಾಶನ ಕುಂದಾಪುರ ಪ್ರಕಟಿಸಿರುವ ಪಂಚಾಯತ್ ರಾಜ್ ತಜ್ಞ ಎಸ್.ಜನಾರ್ದನ ಮರವಂತೆ ಸಂಕಲಿಸಿರುವ ಜನಾಧಿಕಾರ ಗ್ರಾಮ ಪಂಚಾಯಿತಿ ಮಾರ್ಗದರ್ಶಿ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರಗಳು ಜನಹಿತವಾಗಿ ಕೆಲಸ ಮಾಡಬೇಕು. ಆದರೆ ಇವತ್ತು ಕೆಳಸ್ತರದಿಂದ ಲೋಕಸಭೆಯ ತನಕ ಮನಸ್ಸು ಬಿಚ್ಚಿ ಮಾತನಾಡುವ ಸ್ಥಿತಿ ಇದ್ದಂತಿಲ್ಲ. ಕೆಲವೊಂದು ಬಾರಿ ಅಧಿಕಾರವನ್ನು ಅಧಿಕಾರಿಗಳು ಕಬಳಿಸುತ್ತಾರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಭಿನವ ಕಲಾ ತಂಡದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಕುಂದಾಪುರದ ವಿಠಲವಾಡಿಯಲ್ಲಿ ನಡೆಯಿತು. ಕುಂದಗನ್ನಡದ ರಾಯಾಭಾರಿ ಅಧ್ಯಾಪಕರು ಮನು ಹಂದಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ನಾಟಕ ನಿರ್ದೇಕರಾದ ರಾಮಚಂದ್ರ ಉಡುಪ ವಹಿಸಿದ್ದರು. ಕಲಾ ತಂಡದ ಚೊಚ್ಚಲ ನಾಟಕ ಕೃತಿ ‘ರತ್ನ ಶ್ಯಾಮಿಯಾನ’ ಇದರ ಬಿಡುಗಡೆಯನ್ನು ದಿನೇಶ ಗೋಡೆ ನೆರವೇರಿಸಿದರು. ಸಂಸ್ಥೆಯ ಸಾಮಾಜಿಕ ಜಾಲತಾಣವನ್ನು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ರಾಯಪ್ಪನ ಮಠ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ನಾಟಕ ನಿರ್ದೇಶಕರಾದ ರಾಮಚಂದ್ರ ಉಡುಪ ಇವರಿಗೆ ಗುರುವಂದನೆ ಸಲ್ಲಿಸಲಾಯಿತು. ಸಂಸ್ಥೆಯ ಸ್ಥಾಪಕರಾದ ನಾಗರಾಜ ವಿಠಲವಾಡಿ, ಗುರು ಕುಂದಾಪುರ, ಉದಯ ಪೂಜಾರಿ, ಉಪಸ್ಥಿತರಿದ್ದರು. ಶ್ರೀನಿವಾಸ ಪೈ ಸ್ವಾಗತಿಸಿದರು, ಚೈತ್ರ ಕಾರ್ಯಕ್ರಮ ನಿರೂಪಿಸಿದರು, ಗುರು ಕುಂದಾಪುರ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಯನ್ಸ್ ಕ್ಲಬ್ ವತಿಯಿಂದ ಕೋಟೇಶ್ವರದ ಗಣೇಶ್ ಕಲ್ಪತರು ಇಂಡಸ್ಟ್ರೀಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಕುಂದಾಪುರದ ನಂದಾ ಡೆಂಟಲ್ ಕ್ಲಿನಿಕ್ನ ವೈದ್ಯರಾದ ಡಾ. ಸ್ಮಿತಾ ಆರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ಕಾರ್ಯದರ್ಶಿ ರಾಜೇಂದ್ರ, ಮಾಜಿ ಅಧ್ಯಕ್ಷರಾದ ರಾಜೀವ ಕೋಟ್ಯಾನ್, ಕೋಶಾಧಿಕಾರಿ ಕಿರಣ್ ಕುಮಾರ್, ಮಾಜಿ ಅಧ್ಯಕ್ಷರಾದ ರಮಾನಂದ ಇಂಜಿನಿಯರ್, ಸದಸ್ಯರಾದ ನಾರಾಯಣ ಶೆಟ್ಟಿ ಉಪಸ್ಥಿತರುದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕೈಗಾರಿಕಾ ಭೇಟಿಯ ಭಾಗವಾಗಿ ಕೋಟೇಶ್ವರದ ಸನ್ರೈಸ್ ಪೈಪ್ ಇಂಡಸ್ಟ್ರಿ ಮತ್ತು ರಾಜಾರಾಮ್ ಪೊಲಿಮರ್ಸ್ ಇಂಡಸ್ಟ್ರಿ ಕೋಟೇಶ್ವರ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸನ್ರೈಸ್ ಕೈಗಾರಿಕೆಯ ವ್ಯವಸ್ಥಾಪಕರಾದ ಕುಮಾರ್ ಹಾಗೂ ರಾಜರಾಮ್ ಪೊಲಿಮರ್ಸ್ ಇಂಡಸ್ಟ್ರಿಯ ಪಾಲುದಾರರಾದ ವಿಘ್ನೇಶ್ ಕಾಮತ್ರವರು ಉತ್ಪನ್ನಗಳ ತಯಾರಿಕೆ ಮತ್ತು ಪ್ರಾತ್ಯಕ್ಷಿಕೆಯ ಕುರಿತು ಉಪನ್ಯಾಸ ನೀಡಿದರು. ಜೊತೆಗೆ ಯಂತ್ರಗಳ ಕಾರ್ಯವೈಖರಿಯನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಅವಕಾಶ ಮತ್ತು ಮಾರ್ಗದರ್ಶನ ನೀಡಿದ ಆಡಳಿತ ಮಂಡಳಿಗೆ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ವೇತಾ ಯು. ಶೆಟ್ಟಿಯವರು ವಂದಿಸಿದರು. ಕಾಲೇಜಿನ ವತಿಯಿಂದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಚೈತ್ರಾ ಹಾಗೂ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಿರುಷಾ ಶೆಟ್ಟಿಯವರು ಸ್ಮರಣಿಕೆ ನೀಡಿ ಗೌರವಿಸಿದರು.
