ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ, ಶ್ರೀ ಇಂದುಧರ ಯುವಕ ಮಂಡಲ ಗಂಗೊಳ್ಳಿ, ಶ್ರೀ ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸೋಮವಾರ ಜರಗಿದ ಕಾರ್ಯಕ್ರಮದಲ್ಲಿ ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಸುಮನಾ ಪಡಿಯಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉದ್ಯಮಿ ಎಚ್.ಗಣೇಶ ಕಾಮತ್ ಮಾತನಾಡಿ, ಸುಮನಾ ಪಡಿಯಾರ್ ಮಕ್ಕಳನ್ನು ಬರೀ ಅಂಗಳಿಗೆ ಮಾತ್ರ ಸೀಮಿತಗೊಳಿಸದೆ ಅವರ ಮನಸ್ಸು ಮತ್ತು ಭಾವನೆಗಳಿಗೆ ಪೂರಕವಾಗಿ ಸ್ಥೈರ್ಯ, ಆತ್ಮವಿಶ್ವಾಸ, ಪ್ರೀತಿ ತುಂಬಿಸಿ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ಮಾಡಿಸಿದ್ದಾರೆ. ಇವರ ಸೇವೆ ಅವಿಸ್ಮರಣೀಯವಾದುದು ಎಂದರು. ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಪೂಜಾರಿ, ಸಮಾಜ ಸೇವಕ ಜಿ.ಗಣಪತಿ ಶಿಪಾ, ಮತ್ಸ್ಯೋದ್ಯಮಿ ಮಂಜುನಾಥ ಜಿ.ಟಿ., ಶಾಲೆಯ ಮುಖ್ಯೋಪಾಧ್ಯಾಯ ಜಿ.ವಿಶ್ವನಾಥ ಭಟ್ ಶುಭ ಹಾರೈಸಿದರು. ದೇವಸ್ಥಾನದ ಮುಕ್ತೇಸರ ಸಂಜೀವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಭಿಮಾನ, ಸ್ವಾತಂತ್ರ್ಯ ಪ್ರಿಯತೆ ಮತ್ತು ಸಾಹಸ ಪ್ರವೃತ್ತಿಯನ್ನು ಮೂಲದ್ರವ್ಯವನ್ನಾಗಿರಿಸಿಕೊಂಡವರು ಜೀವನದಲ್ಲಿ ಯಶಸ್ಸನ್ನು ಕಾಣುತ್ತಾರೆ. ಉತ್ತಮ ಶಿಕ್ಷಕರು ವೃತ್ತಿಪರತೆ ಮತ್ತು ವ್ಯಕ್ತಿ ವಿಶಿಷ್ಟತೆಯನ್ನು ಹೊಂದಿದಲ್ಲಿ ಯುವ ಸಮಾಜವನ್ನು ರೂಪಿಸುವಲ್ಲಿ ಸಾರ್ಥಕಭಾವ ಕಾಣುತ್ತಾರೆ. ತೆರೆಮರೆಯಲ್ಲಿ ಶ್ರದ್ಧೆ ಮತ್ತು ಶಿಸ್ತಿನಿಂದ ಕಾಯಕಗೈಯುವ ಶಿಕ್ಷಕರು ವಿಶೇಷ ಗೌರವಾರ್ಹರು ರಾಜ್ಯ ಪ್ರಶಸ್ತಿ ಪುರಸ್ಕೃತ ಲಲಿತಾ ಅಂಬಾಗಿಲು ನುಡಿದರು. ಉಪ್ಪುಂದ ಮಹಿಳಾ ವಿವಿದೋದ್ಧೇಶ ಸಹಕಾರಿ ಸಂಘದ ಇಪ್ಪತ್ತೈದನೆ ಮಹಿಳಾ ಸ್ನೇಹ ಸಮ್ಮಿಲನ-೨೦೧೯ರಲ್ಲಿ ಅವರು ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಉಪ್ಪುಂದ ಮಹಿಳಾ ವಿವಿದೋದ್ಧೇಶ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷೆ ಯು. ವರಮಹಾಲಕ್ಷ್ಮೀ ಹೊಳ್ಳ ಮಾತನಾಡಿ ಸಂಘದ ಸಿದ್ಧಿ-ಸಾಧನೆ ಮತ್ತು ವಿಶಿಷ್ಟ ಸೇವೆಗಳ ವಿವರ ನೀಡಿ ಹೊಸತಲೆಮಾರಿನವರು ಮುಂದೆ ಎಂದು ನಿಸ್ವಾರ್ಥ ಸೇವೆ ಸಲ್ಲಿಸಬೇಕೆಂದು ಕರೆ ನೀಡಿದರು. ವೀಣಾ ಶ್ಯಾನುಭೋಗ್ ಮತ್ತು ರಮಾ ಆಚಾರ್ಯ ಪ್ರಾರ್ಥಿಸಿದರು. ಸಂಘದ ಕಾರ್ಯನಿರ್ವಹಣಾಧಿಕಾರಿ ಯು. ಗಣೇಶ ಪ್ರಸನ್ನ ಮಯ್ಯ ಸ್ವಾಗತಿಸಿದರು. ಯು. ವರಮಹಾಲಕ್ಷ್ಮೀ ಹೊಳ್ಳರು ಸನ್ಮಾನಿಸಿದರು. ಮುಖ್ಯ ಅತಿಥಿ ಲಲಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘವು 2018-19 ಆರ್ಥಿಕ ವರ್ಷದಲ್ಲಿ 16.20 ಕೋಟಿ ರೂ. ಠೇವಣಿ ಸಂಗ್ರಹಿಸಿ, 13.19 ಕೋಟಿ ರೂ. ಸಾಲ ನೀಡಿ ಉತ್ತಮ ವ್ಯವಹಾರ ನಡೆಸಿ ವಾರ್ಷಿಕ 31.20 ಲಕ್ಷ ರೂ. ಲಾಭ ಗಳಿಸಿದ್ದು ಸಂಘದ ಸದಸ್ಯರಿಗೆ ಶೇ.15ರ ಡಿವಿಡೆಂಟ್ ವಿತರಿಸಲಾಗುತ್ತಿದೆ. ಆಡಿಟ್ ವರ್ಗೀಕರಣದಲ್ಲಿ ’ಎ’ ದರ್ಜೆಯನ್ನು ಪಡೆದುಕೊಂಡಿದೆ ಎಂದು ಸಂಘದ ಅಧ್ಯಕ್ಷ ಮೋಹನ ಪೂಜಾರಿ ಉಪ್ಪುಂದ ಹೇಳಿದರು. ಅವರು ಉಪ್ಪುಂದ ಶಾಲೆಬಾಗಿಲು ಮಾತೃಶ್ರೀ ಸಭಾಭವನದಲ್ಲಿ ಭಾನುವಾರ ಜರುಗಿದ ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇದರ 28ನೇ ವಾರ್ಷಿಕ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮುದಾಯದ ಜನರಿಗೆ ಉತ್ತಮ ಸೇವೆ ಒದಗಿಸಲು ಸಂಸ್ಥೆ ಬದ್ಧವಾಗಿದ್ದು, ಮುಂದಿನ ಆರ್ಥಿಕ ವರ್ಷಗಳಲ್ಲಿ ಸಂಘದ ಪ್ರಧಾನ ಕಛೇರಿಗೆ ನೂತನ ಸಹಕಾರಿ ಕಟ್ಟಡ ನಿರ್ಮಾಣ, ಕಾರ್ಯಕ್ಷೇತ್ರದ ವ್ಯಾಪ್ತಿಯ ಶಿರೂರಿನಲ್ಲಿ ಶಾಖೆ ತೆರೆಯುವುದು, ಸಂಸ್ಥೆಯಲ್ಲಿ ಠೇವಣಿ ಹಾಗೂ ಸಾಲವನ್ನು ಹೆಚ್ಚಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ. ಪರಿಸರ ನಾಶದಿಂದ ಮತ್ತು ಪರಿಸರ ಮಾಲಿನ್ಯದಿಂದ ಪ್ರಾಕೃತಿಕ ವಿಕೋಪ ಸಂಭವಿಸಿ ಸಾವುನೋವು ಮತ್ತು ಅಪಾರ ಆಸ್ತಿಪಾಸ್ತಿಗಳ ನಾಶಕ್ಕೆ ಕಾರಣವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯ ಹೆಚ್ಚಳದಿಂದ ಅನಾಹುತಗಳು ಹೆಚ್ಚುತ್ತಿದ್ದು, ಪರಿಸರ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ, ಅರಿವು ಮೂಡಿಸುವ ಕೆಲಸ ನಡೆಯಬೇಕಿದೆ. ಸಮಾಜ ಸೇವಾ ಸಂಸ್ಥೆಗಳು, ಸಂಘ ಸಂಸ್ಥೆಗಳು ಇಂತಹ ಕಾರ್ಯಗಳಲ್ಲಿ ತೊಡಗಿಸಿಕೊಂಡು ಪರಿಸರವನ್ನು ರಕ್ಷಿಸಲು ಮುಂದಾಗಬೇಕು. ರಾಷ್ಟ್ರೀಯ ಸೇವಾ ಯೋಜನೆ ಈ ನಿಟ್ಟಿನಲ್ಲಿ ತೊಡಗಿಸಿಕೊಂಡು ಪರಿಸರ ಸಂಕರ‍್ಷಣೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ ಆಚಾರ್ಯ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯ, ಕುಂದಾಪುರ ಎಜ್ಯುಕೇಶನ್ ಸೊಸೈಟಿ ಕುಂದಾಪುರ, ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕುಂದಾಪುರ ಮತ್ತು ತ್ರಾಸಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದು ಮನೆಗಳಲ್ಲಿ ಮಕ್ಕಳಿಗೆ ನೈತಿಕ ಹಾಗೂ ಮೌಲ್ಯಯುತವಾದ ಶಿಕ್ಷಣ ದೊರೆಯುತ್ತಿಲ್ಲ. ಧಾರಾವಾಹಿ, ಟಿವಿಗಳಿಂದ ಸಿಗುವಂತಹ ಸಂದೇಶಗಳು ಉತ್ತಮ ಮೌಲ್ಯಗಳಿಂದ ಕೂಡಿಲ್ಲ. ಬದಲಾದ ಇಂತಹ ಜೀವನ ಕ್ರಮದಿಮದಾಗಿ ಮೌಲ್ಯದಲ್ಲಿ ಕುಸಿತ ಕಾಣುತ್ತಿದೆ. ಮೌಲ್ಯಯುವ ಶಿಕ್ಷಣ ಪಠ್ಯಪುಸ್ತಕದಿಂದ ಹೊರತಾಗಿ ಸಮಾಜದಿಂದಲೂ ದೊರೆಯುತ್ತದೆ ಎಂದು ಹೋಲಿ ರೋಜರಿ ಚರ್ಚ್‌ನ ಧರ್ಮಗುರು ಸ್ಟಾನಿ ತಾವ್ರೋ ಹೇಳಿದರು. ಅವರು ಇಲ್ಲಿನ ಭಂಡಾರ್‌ಕಾರ‍್ಸ್ ಪದವಿ ಹಾಗೂ ಪದವಿಪೂರ್ವ ಕಾಲೇಜು, ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಉಡುಪಿ ಮತ್ತು ಕುಂದೇಶ್ವರ ದೇವಸ್ಥಾನ ಕುಂದಾಪುರ ಇವರ ಸಹಯೋಗದಲ್ಲಿ ನಡೆದ ಜೀವನ ಮೌಲ್ಯ ಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಲೆಜಿನ ವಿಶ್ವಸ್ಥ ಮಂಡಳಿಯ ಸದಸ್ಯ ಕೆ.ಶಾಂತರಾಮ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಿ.ಎಂ.ಗೊಂಡ, ಸಂಯೋಜಕ ಅರುಣ್ ಕುಮಾರ್ ಉಪಸ್ಥಿತರಿದ್ದರು. ಪ್ರೊ. ರಾಮಚಂದ್ರ ಸ್ವಾಗತಿಸಿದರು. ಉಪನ್ಯಾಸಕ ಪ್ರಶಾಂತ್ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ಶುಭಕರ್ ಸದ್ಭಾವನಾ ದಿನಾಚರಣೆಯ ಪ್ರಮಾಣವಚನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯಾದ್ಯಂತ ದೊಡ್ಡ ಸಂಕಷ್ಟ ತಂದೊಡ್ಡಿದ್ದ ಈ ವರ್ಷದ ಭಾರಿ ಮಳೆಯಿಂದ ಉಂಟಾದ ನೆರೆಯು ಹಲವಾರು ಕುಟುಂಬಗಳನ್ನು ಬೀದಿಗೆ ತಂದು ಲಕ್ಷಾಂತರ ಮಂದಿಯ ಬದುಕನ್ನೇ ಆಪೋಷನ ಮಾಡಿದ್ದು, ಈ ಸಂದರ್ಭದಲ್ಲಿ ತಮ್ಮಿಂದಾದ ಸಹಕಾರ ನೀಡುವ ಮನಸ್ಥಿತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ಸಲುವಾಗಿ ಮತ್ತು ದುಃಖದಲ್ಲಿರುವವರ ಕಣ್ಣೀರೊರೆಸುವ ಕೆಲಸದಲ್ಲಿ ಅಳಿಲಸೇವೆ ಮಾಡುವುದಕ್ಕಾಗಿ ಉಡುಪಿ ಜಿಲ್ಲೆಯ ಪದವಿಪೂರ್ವ ಕಾಲೇಜುಗಳಲ್ಲಿನ ಎನ್.ಎಸ್.ಎಸ್ ಘಟಕಗಳು ಒಟ್ಟಾಗಿ ಕಾರ್ಯೋನ್ಮುಖರಾದರು. ಸ್ವಯಂಸೇವಕರು ತಮ್ಮಿಂದಾದ ಸಹಾಯ ಮಾಡೋಣವೆಂದು ಪಣತೊಟ್ಟಿದ್ದರು. ಕೆಲವು ಕಾಲೇಜುಗಳ ವಿದ್ಯಾರ್ಥಿಗಳು ಅಗತ್ಯ ವಸ್ತುಗಳನ್ನು ಪೂರೈಸಿದರೆ, ಇನ್ನು ಕೆಲವು ಕಾಲೇಜುಗಳ ವಿದ್ಯಾರ್ಥಿಗಳು ಮುಖ್ಯಮಂತ್ರಿ ನೆರೆಪರಿಹಾರ ನಿಧಿಗೆ ದೇಣಿಗೆ ಸಂಗ್ರಹಿಸಿದರು. ಮಂಗಳವಾರ ಸಾಂಕೇತಿಕವಾಗಿ ೨,೦೮,೭೪೩-೦೦ ರೂ. ಮೌಲ್ಯದ ಡಿಮಾಂಡ್ ಡ್ರಾಫ್ಟ್‌ನ್ನು ಉಡುಪಿ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸುಬ್ರಮ್ಮಣ್ಯ ಜೋಶಿಯವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಎಡಿಸಿಯವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜುಗಳ ಉಡುಪಿ ಜಿಲ್ಲಾ ಎನ್.ಎಸ್.ಎಸ್ ಅಧಿಕಾರಿ ಸವಿತಾ ಎರ್ಮಾಳ್, ವಿವಿಧ ಕಾಲೇಜುಗಳ ಎನ್.ಎಸ್.ಎಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕ್ಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ, ಜನರ ಸಮಸ್ಯೆ ಆಲಿಸಿ, ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ ಸಮಸ್ಯೆಗಳನ್ನು ಅರಿಯಬೇಕು ಮತ್ತು ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಬೇಕು ಹಾಗೂ ತಮ್ಮ ಅಧೀನ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯ ವೈಖರಿಯನ್ನು ಪರಿಶೀಲಿಸಬೇಕು , ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಚೇರಿಗೆ ಸಮಯಕ್ಕೆ ಸರಿಯಗಿ ಆಗಮಿಸಿ, ತಮ್ಮ ಕೆಲಸ ಕಾರ್ಯಗಳನ್ನು ಮುಗಿಸುವಂತೆ ಹಾಗೂ ಕರ್ತವ್ಯದ ಅವಧಿಯಲ್ಲಿ ವೃಥಾ ಕಾಲ ಹರಣ ಮಾಡದೇ ನಿಗಧಿತ ಸಮಯದಲ್ಲಿ ಗುಣಮಟ್ಟದ ಕೆಲಸ ನಿರ್ವಹಿಸುವುದಕ್ಕೆ ಆದ್ಯತೆ ನೀಡಬೇಕು, ಎಲ್ಲಾ ಜಿಲ್ಲಾ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಾನು ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು. ಕಚೇರಿಗೆ ಆಗಮಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಲಂಡನ್ ನಗರ ಕೆಲವು ದಶಕಗಳ ಹಿಂದಿದ್ದಂತೆ ಈಗಿಲ್ಲ. ತನ್ನ ಪರಂಪರೆಯ ಎಲ್ಲವನ್ನು ಉಳಿಸಿಕೊಳ್ಳುವುದರ ಜತೆಗೆ ಜಗತ್ತಿನ ಅತ್ಯಂತ ದಟ್ಟ ಚಟುವಟಿಕೆಗಳ ನಗರಗಳಲ್ಲಿ ಒಂದಾಗಿ ಬದಲಾಗಿದೆ. ಭಾರತೀಯರ ದೃಷ್ಟಿಯಿಂದ ಹೇಳುವುದಾದರೆ ಇಂಗ್ಲೆಂಡ್‌ನ ಎಲ್ಲ ಪ್ರಮುಖ ನಗರಗಳು ಈಗ ಮಿನಿ ಭಾರತದಂತೆ ಭಾಸವಾಗುತ್ತವೆ ಎಂದು ಯೋಗೀಂದ್ರ ಮರವಂತೆ ಹೇಳಿದರು. ವಿ. ಕೃ. ಗೋಕಾಕರು ಮೂವತ್ತರ ದಶಕದಲ್ಲಿ ಬರೆದಿರುವ ’ಲಂಡನ್ ನಗರ’ ಬರಹ 10ನೆ ತರಗತಿಯ ಪಠ್ಯ ಪುಸ್ತಕದಲ್ಲಿದೆ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅದರ ಕುರಿತು ಪೂರಕ ಮಾಹಿತಿ ಒದಗಿಸುವ ಉದ್ದೇಶದಿಂದ ಇಂಗ್ಲಂಡ್‌ನಲ್ಲಿ ಉದ್ಯೋಗ ನಿಮಿತ್ತ ನೆಲೆಸಿರುವ, ಇತ್ತೀಚಿಗಷ್ಟೆ ’ಲಂಡನ್ ಡೈರಿ’ ಹೆಸರಿನ ತಮ್ಮ ಪುಸ್ತಕ ಹೊರತಂದಿರುವ ಯೋಗೀಂದ್ರ ಮರವಂತೆ ಅವರೊಡನೆ ಬುಧವಾರ ಶಾಲೆಯ ಸಾಹಿತ್ಯ ಸಂಘದ ಆಶ್ರಯದಲ್ಲಿ ಮಾತುಕತೆ ಏರ್ಪಡಿಸಲಾಗಿತ್ತು. ಲಂಡನ್ ಸೇರಿದಂತೆ ಇಂಗ್ಲೆಂಡ್‌ನ ಎಲ್ಲ ಪ್ರಮುಖ ನಗರಗಳಲ್ಲಿ ಗಣನೀಯ ಸಂಖ್ಯೆಯ ಭಾರತೀಯರು ಉದ್ಯೋಗ ನಿರತರಾಗಿದ್ದಾರೆ. ಅಲ್ಲೆಲ್ಲ ಅವರು ರಾಜ್ಯ, ಭಾಷೆ, ಜಾತಿ ನೆಲೆಯಲ್ಲಿ ಸಂಘಟಿತರಾಗಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಯೋಗಭ್ಯಾಸದಿಂದ ಆರೋಗ್ಯ ವೃದ್ಧಿಸುವುದಲ್ಲದೇ ಮನಸ್ಸು ಉಲ್ಲಾಸಗೊಳ್ಳುತ್ತದೆ. ಆಧುನಿಕ ಜಗತ್ತಿನ ವೇಗದ ಬದುಕಿನಲ್ಲಿ ದೈಹಿಕ ಮಾನಸಿಕ ಸಮತೋಲಕ ಕಾಯ್ದುಕೊಳ್ಳಲು ನಿರಂತವಾಗಿ ಯೋಗಾಸನ ಮಾಡುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಯೋಗ ಬಗೆಗೆ ಆಸಕ್ತಿ ಮೂಡಿಸಲು ಸ್ವರ್ಧೆ ಆಯೋಜಿಸಿರುವುದು ಶ್ಲಾಘನಾರ್ಹ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ. ರಮೇಶ್ ಗಾಣಿಗ ಹೇಳಿದರು. ಅವರು ಕೊಲ್ಲೂರು ಶ್ರೀ ಮುಕಾಂಬಿಕಾ ಸಭಾಭವನದಲ್ಲಿ ಬುಧವಾರ ಶ್ರೀ ಮೂಕಾಂಬಿಕಾ ದೇವಳ ಪದವಿಪೂರ್ವ ಕಾಲೇಜು ಕೊಲ್ಲೂರು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇದರ ಸಹಯೋಗದೊಂದಿಗೆ ಆಯೋಜಿಸಲಾದ ಜಿಲ್ಲಾ ಮಟ್ಟದ ಯೋಗಾಸನ ಸ್ವರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕುಮಾರ್ ಪ್ರಾಸ್ತಾವಿಕ ಮಾತನಾಡಿ ಮಾಡುವ ಕೆಲಸವನ್ನು ಕೌಲಶ್ಯಯುತವಾಗಿ ಮಾಡಿದರೆ ಅದೇ ಯೋಗವೆಂದೆನಿಸಿಕೊಳ್ಳಲಿದೆ. ಯೋಗವು ಬದುಕಿನಲ್ಲಿ ದೈಹಿಕವಾಗಿ, ಭೌತಿಕವಾಗಿ ಹಾಗೂ ಮಾನಸಿಕವಾಗಿ ಸಮತ್ವವನ್ನು ಕಾಯ್ದುಕೊಳ್ಳಲು ಸಹಕಾರಿ. ವಿದ್ಯಾರ್ಥಿಗಳಲ್ಲಿ ನಿಯಮಿತ ಯೋಗಾಭ್ಯಾಸದಿಂದ ಮನಸ್ಸಿನ ಚಂಚಲತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ರಾಜ್ಯದಲ್ಲಿ ಕಂಡು ಕೇಳರಿಯದ ಪ್ರವಾಹ ಎದುರಾಗಿದ್ದರೂ ಈವರೆಗೆ ಕೇಂದ್ರದಿಂದ ಸೂಕ್ತ ಪರಿಹಾರ ದೊರೆತಿಲ್ಲ. ಅರ್ಧ ದೇಶವೇ ನೀರಿನಲ್ಲಿ ಮುಳುಗಿದ್ದರೂ ಇಂದಿನ ಪ್ರಧಾನಿಯವರು ವಿದೇಶ ಪ್ರವಾಸದ ಮೂಡಿನಲ್ಲಿರುವುದು ಖೇದಕರ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಬುಧವಾರ ಉಡುಪಿ ಜಿಲ್ಲೆಯಲ್ಲಾದ ಆಸ್ತಿ ಪಾಸ್ತಿ ನಷ್ಟದ ಸಮೀಕ್ಷೆಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ರಚಿಸಿದ ನಿಯೋಗದ ನೇತೃತ್ವ ವಹಿಸಿ ಕುಂದಾಪುರ ಹಾಗೂ ಬೈಂದೂರಿನಲ್ಲಿ ನೆರೆ ನಷ್ಟದ ಬಗೆಗೆ ಅಹವಾಲು ಸ್ವೀಕರಿಸಿ ಬಳಿಕ ಮಾತನಾಡಿದರು. ಈ ಹಿಂದೆಯೂ ಕೆಂದ್ರದಲ್ಲಿ ಯುಪಿಎ ಸರಕಾರವಿದ್ದಾಗ, ರಾಜ್ಯದಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದ ಸಂದರ್ಭ ರಾಜ್ಯದಲ್ಲಿ ನೆರೆ ಪರಿಸ್ಥಿತಿ ಎದುರಾದಾಗ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ವೈಮಾನಿಕ ಸಮೀಕ್ಷೆ ನಡೆಸಿ ಸ್ಥಳದಲ್ಲಿಯೇ ರಾಜ್ಯಕ್ಕೆ ಪರಿಹಾರ ಘೋಷಿಸಿದ್ದರು. ಇಂದಿನ ಪ್ರಧಾನಿಗೆ ವೈಮಾನಿಕ ಸಮೀಕ್ಷೆ ನಡೆಸಲು ಸಮಯವಿಲ್ಲ ಎಂದರು. ಕರಾವಳಿಯ ಉಭಯ ಜಿಲ್ಲೆಯಳಲ್ಲಿಯೂ ಅಪಾರವಾದ ಮಳೆ ಹಾನಿಯಾಗಿದ್ದು, ಜಿಲ್ಲೆಯ ಬೈಂದೂರಿನಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಹಾಗಾಗಿ…
