Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಜ.21: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕಳ್ಳಂಗಡಿ ಸಮೀಪದ ರೈಲ್ವೆ ಟ್ರ್ಯಾಕ್‌ನಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕಿರಿಮಂಜೇಶ್ವರ ಸಮೀಪದ ಶಾಲೆಬಾಗಿಲು ರಸ್ತೆ ನಿವಾಸಿ ರಾಮ ಪೂಜಾರಿ (32) ಎಂದು ಗುರುತಿಸಲಾಗಿದೆ. ಈ ಪ್ರಕರಣದ ಪೂರ್ವದಲ್ಲಿ ಪೊಲೀಸರ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಕುಟುಂಬಿಕರು ಶವವನ್ನು ರೈಲ್ವೆ ಹಳಿಯ ಪಕ್ಕಕ್ಕಿಟ್ಟು ಮಧ್ಯಾಹ್ನದ ತನಕವೂ ಪ್ರತಿಭಟಿಸಿದ ಘಟನೆಯೂ ನಡೆಯಿತು. ಘಟನೆಯ ವಿವರ: ಚಾಲಕ ವೃತ್ತಿ ಮಾಡಿಕೊಂಡಿರುವ ರಾಮ ಪೂಜಾರಿಯನ್ನು ಸೋಮವಾರ ಮಧ್ಯಾಹ್ನ 3:30ರ ಸುಮಾರಿಗೆ ಪೊಲೀಸರು ಗಂಗೊಳ್ಳಿ ಠಾಣೆಗೆ ಕರೆದೊಯ್ದಿದ್ದರು. ಈ ಬಗ್ಗೆ ಅವರ ಸ್ನೇಹಿತರು ವಿಚಾರಿಸಿದಾಗ, ರಾಮ ಪೂಜಾರಿ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದು, ಅದರ ವಿಚಾರಣೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದ್ದರು ಎನ್ನಲಾಗಿದೆ. ವಿಚಾರಣೆಯ ಬಳಿಕ ರಾತ್ರಿ ರಾಮ ಪೂಜಾರಿ ಮನೆಗೆ ಮರಳಿದ್ದು, ಸೋಮವಾರ ಬೆಳಿಗ್ಗೆ ನಾಗೂರು ಸಮೀಪದ ರೈಲ್ವೇ ಟ್ರ್ಯಾಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಛಿದ್ರಗೊಂಡ ದೇಹ ಪತ್ತೆಯಾಗಿದೆ. ಕುಂದಾಪ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಭಟ್ಕಳ: ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಜೆಇಇ) ಮೈನ್ಸ್ ಇದರ 2020ನೇ ಸಾಲಿನ ಪ್ರಥಮ ಹಂತದ ಫಲಿತಾಂಶ ಪ್ರಕಟವಾಗಿದ್ದು, ಭಟ್ಕಳ ತಾಲೂಕಿನ ಸಿದ್ಧಾರ್ಥ ಪದವಿಪೂರ್ವ ಕಾಲೇಜಿನ 30ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಉತ್ತೀರ್ಣರಾಗಿ, 10ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಶೇಕಡಾವಾರು 90ಕ್ಕಿಂತ ಹೆಚ್ಚಿನ ಅಂಕ ಪಡೆದು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಅಭಿಷೇಕ ಎನ್.ಎನ್ 98%, ಅಭಿಷೇಕ್ ವಿ. ನಾಯ್ಕ್ 98%, ಜಯದೀಪ ಪ್ರಭು 95%, ಆದರ್ಶ ಎಸ್. ನಾಯ್ಕ್ 94%, ಪ್ರಸನ್ನ ನಾಯ್ಕ್ 94%, ಅಶ್ವಿನಿ 93%, ಪ್ರಶಾಂತ ನಾಯ್ಕ್ 94%, ಸಾಗರ್ ಎಸ್. ನಾಯ್ಕ್ 89%, ಪುಂಡಲೀಕ ನಾಯಕ್ 86%, ದರ್ಶನ್ 82% ಫಲಿತಾಂಶ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಕ್ಯಾ. ಕೆ.ಆರ್. ನಾಯ್ಕ್ ಹಾಗೂ ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಎಸ್. ಪ್ರಕಾಶ್ಚಂದ್ರ ಶೆಟ್ಟಿ ನೇತೃತ್ವದ ತಂಡಕ್ಕೆ ಜಯ ದೊರಕಿದ್ದು, ಈ ಹಿಂದಿನ ಆಡಳಿತ ಮಂಡಳಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಸಫಲವಾಗಿದೆ. ಪ್ರಕಾಶ್ಚಂದ್ರ ಶೆಟ್ಟಿ, ಬಿ. ರಘುರಾಮಶೆಟ್ಟಿ, ಬಿ. ಎಸ್. ಸುರೇಶ್ ಶೆಟ್ಟಿ, ಗುರುರಾಜ್ ಹೆಬ್ಬಾರ್, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ ಹಾಗೂ ಮೋಹನ ಪೂಜಾರಿ ಚುನಾವಣೆಯಲ್ಲಿ ಜಯಗಳಿಸಿ ನೂತನ ಆಡಳಿ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 2200 ಮತಗಳಿದ್ದು, ಅದರಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ 1920 ಮತಗಳು ಚಲಾವಣೆಗೊಂಡು ಶೇ.92 ಮತದಾನವಾಗಿತ್ತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ಒಟ್ಟು 13 ಸದಸ್ಯರ ನಿರ್ದೇಶಕ ಮಂಡಳಿ ಇದ್ದು ಹಿಂದಿನಿಂದಲೂ ಇಲ್ಲಿ ಚುನಾವಣೆ ನಡೆದಿರಲಿಲ್ಲ. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಇವರ ನೇತೃತ್ವದ ತಂಡಕ್ಕೆ ಈ ಬಾರಿಯ ಚುನಾವಣೆ ಸವಾಲಾಗಿ ಪರಿಣಮಿಸಿತ್ತು. ಆದರೆ ರಾಜಕೀಯ ಕಸರತ್ತಿನ ಬಳಿಕ ಮೀಸಲು ಕ್ಷೇತ್ರಗಳಲ್ಲಿ ಬಹುತೇಕ ಎಲ್ಲಾ ಸ್ಥಾನಗಳಿಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವವರು ಕೀಳರಿಮೆ ಹೊಂದಬೇಕಾಗಿಲ್ಲ. ಅಲ್ಲಿ ಓದಿದ ಅದೆಷ್ಟೋ ಮಂದಿ ದೊಡ್ಡ ಸಾಧನೆ ಮಾಡಿದ್ದಾರೆ ಎನ್ನುವುದಕ್ಕೆ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಐ.ಪಿ.ಎಸ್ ಅಧಿಕಾರಿಯಾಗಿರುವ ನಾನು ಉದಾಹರಣೆ ಎಂದು ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್ ಹೇಳಿದರು. ಈಚೆಗೆ ನಡೆದ ಉಪ್ಪುಂದ ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಎರಡನೆಯ ದಿನದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿದ್ದರು. ವಿದ್ಯಾರ್ಥಿಗಳು ಸಾಧನೆಯ ಆಕಾಂಕ್ಷೆ ಇರಿಸಿಕೊಂಡು ಅಧ್ಯಯನ ನಡೆಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಬೇಕು. ಅಂತವರಿಗೆ ಅವಕಾಶದ ಹಲವು ಬಾಗಿಲುಗಳು ತೆರೆದುಕೊಳ್ಳುತ್ತವೆ. ರಾಷ್ಟ್ರ ಮತ್ತು ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದೂ ಅವುಗಳಲ್ಲಿ ಒಂದು ಎಂದು ಅವರು ಹೇಳಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಯ ಗಣಪತಿ ಎಸ್. ಭಟ್ ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎಂ. ರಾಜಶೇಖರ ಹೆಬ್ಬಾರ್ ಸಂಸ್ಥೆಯ ಈ ವರೆಗಿನ ಪ್ರಗತಿಯನ್ನು ವಿವರಿಸಿ,…

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಟಾರ್ ರಸ್ತೆಯ ಬಾಳಿಕೆ ಹೆಚ್ಚಿಸಲು ಟಾರ್‌ಗೆ ಪ್ಲಾಸ್ಟಿಕ್ ಹುಡಿ ಸೇರಿಸುವ ಕೆರಳ ಮಾದರಿಯ ಪ್ರಯೋಗ ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಈಚೆಗೆ ಅಲ್ಲಿನ 160 ಮೀಟರ್ ಉದ್ದದ ರಸ್ತೆಗೆ ಟಾರ್ ಹಾಕುವಾಗ ಈ ಪ್ರಯೋಗ ನಡೆಸಲಾಗಿದೆ. ಹೆಚ್ಚು ಮಳೆಯಾಗುವ ಪ್ರದೇಶದಲ್ಲಿ ಟಾರ್ ರಸ್ತೆಯ ಮೇಲ್ಮೈ ಸವಕಳಿಯಾಗಿ, ಎರಡು, ಮೂರು ವರ್ಷಗಳಲ್ಲಿ ಕಿತ್ತುಹೋಗಿ ಗುಂಡಿಗಳು ಬೀಳುತ್ತವೆ. ಕೇರಳದಲ್ಲಿ ಟಾರ್‌ಗೆ ಪ್ಲಾಸ್ಟಿಕ್ ಸೇರಿಸಿ ರಸ್ತೆ ನಿರ್ಮಿಸುವ ಪ್ರಯೋಗ ನಡೆದಿದ್ದು, ಅದು ಯಶಸ್ವಿಯಾಗಿದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಅಲ್ಲಿ ಈ ಪ್ರಯೋಗ ನಡೆಸಿ ಯಶಸ್ಸು ಕಂಡ ಸ್ವಾಮಿನಾಥನ್ ಎಂಬವರನ್ನು ಈಚೆಗೆ ಉಡುಪಿಗೆ ಕರೆಸಿ ಜಿಲ್ಲೆಯ ಎಂಜಿನಿಯರ್‌ಗಳಿಗೆ ತರಬೇತಿ ನೀಡಲಾಗಿತ್ತು. ಉಡುಪಿಯ ಅಲೆವೂರು ಗ್ರಾಮ ಪಂಚಾಯಿತಿ ಈ ಕ್ರಮವನ್ನು ಅನುಸರಿಸಿ ಮೊದಲಾಗಿ ರಸ್ತೆ ನಿರ್ಮಿಸಿತ್ತು. ಅದರಿಂದ ಪ್ರೇರಿತವಾದ ಮರವಂತೆ ಗ್ರಾಮ ಪಂಚಾಯಿತಿ ಹೆಚ್ಚು ಮಳೆನೀರಿನ ಬಾಧೆಗೆ ಒಳಗಾಗುವ ಊರಿನ ಒಂದು ರಸ್ತೆಯಲ್ಲಿ ಅದನ್ನು ಮಾಡಿದೆ. ಅಲೆವೂರಿನಲ್ಲಿ ಬಳಸಿ ಉಳಿದಿದ್ದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಸುನಿಲ್ ಪುರಾಣಿಕ ಅವರು ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶಿಸಿರುವ ಬ್ಯಾರಿ ಭಾಷೆಯ ‘ಟ್ರಿಪಲ್ ತಲಾಖ್ ‘ ಸಿನಿಮಾದ ಫಸ್ಟ್‌ಲುಕ್/ಪೋಸ್ಟರನ್ನು ಬೆಂಗಳೂರಿನ ಅಕಾಡೆಮಿಯ ಕಛೇರಿಯಲ್ಲಿ ಬಿಡುಗಡೆ ಮಾಡಿದರು. ಯಾಕೂಬ್ ಖಾದರ್ ಗುಲ್ವಾಡಿ ಅವರು ಈ ಮೊದಲು ರಾಷ್ಟ್ರಪ್ರಶಸ್ತಿ ಪುರಸ್ಕೃತ ರಿಸರ್ವೇಶನ್ ಸಿನೆಮಾವನ್ನು ನಿರ್ಮಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಗಳು ಕೇವಲ ಅಕ್ಷರಸ್ಥರಾದರೆ ಸಾಲದು. ಸಮಾಜವನ್ನು ಮಾನವೀಯ ಅಂತಕರಣದಿಂದ ನೋಡುವ ವಿದ್ಯಾವಂತರಾಗಬೇಕಿದೆ. ವಿದ್ಯಾರ್ಥಿಗಳ ನಡವಳಿಕೆ, ಹಾವಭಾವ, ವೇಷಭೂಷಣಗಳು ಅವರಲ್ಲಿನ ಶಿಸ್ತು, ಹಾಗೂ ಪ್ರಜ್ಞೆಯನ್ನು ಪ್ರತಿಫಲಿಸುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಅಪ್ಪಾಜಿ ಗೌಡ ಹೇಳಿದರು. ಅವರು ಶನಿವಾರ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾದ ಅಂತರ್ ಕಾಲೇಜು ಪ್ರತಿಭಾ ಪ್ರದರ್ಶನ ಸ್ವರ್ಧೆ ಚಿಲುಮೆ – ೨೦೨೦ ಉದ್ಘಾಟಿಸಿ ಮಾತನಾಡಿ ಬದುಕಿನಲ್ಲಿ ಸಮಯದ ಮಹತ್ವ ದೊಡ್ಡದು. ವಿದ್ಯಾರ್ಥಿ ಜೀವನವೂ ಮಹತ್ವದ್ದು. ಇವೆರಡನ್ನೂ ವ್ಯಥ್ಯವಾಗಿ ಕಳೆಯದೇ ಸರಿಯಾಗಿ ಬಳಸಿಕೊಂಡರೆ ಭವಿಷ್ಯದಲ್ಲಿ ಸಾಧಕರಾಗಲು ಸಾಧ್ಯವಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ ಕೆ., ಬೈಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾಗೀರಥಿ ಎಸ್., ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮುತ್ತಯ್ಯ ಪೂಜಾರಿ, ಉದ್ಯಮಿಗಳಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೆಹರು ಯುವ ಕೇಂದ್ರ ಉಡುಪಿ ಹಾಗೂ ಸಮ್ಮಿಲನ ರಿ. ಯಳಜಿತ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನದ ಅಂಗವಾಗಿ ಶನಿವಾರ ಬೈಂದೂರಿನ ಪ್ರಮುಖ ಬೀದಿಗಳಲ್ಲಿ ಸೈಕಲ್ ರ‍್ಯಾಲಿ ಹಮ್ಮಿಕೊಳ್ಳಲಾಯಿತು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಭಟ್ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯರಾದ ಜನಾರ್ದನ್, ಸಮ್ಮಿಲನ ರಿ. ಯಳಜಿತದ ಅಧ್ಯಕ್ಷರಾದ ರಂಗು ಮರಾಠಿ, ಕಾರ್ಯದರ್ಶಿ ವೆಂಕಟರಮಣ ಮರಾಠಿ, ಹಿರಿಯ ಶಿಕ್ಷಕರುಗಳಾದ ಮುಕ್ತ, ನಾರಾಯಣ ದೇವಾಡಿಗ, ವೀಣಾ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಬೈಂದೂರು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು. ನೆಹರು ಯುವ ಕೇಂದ್ರ ಸುನಿಲ್ ಹೆಚ್. ಜಿ ಸೈಕಲ್ ರ‍್ಯಾಲಿಯ ಉದ್ದೇಶವನ್ನು ವಿವರಿಸಿದರು. ಬೈಂದೂರು ಸರಕಾರಿ ಜ್ಯೂನಿಯರ್ ಕಾಲೇಜು ಹಾಗೂ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸೈಕಲ್ ರ‍್ಯಾಲಿಯಲ್ಲಿ ಭಾಗವಹಿಸಿ ಸಾರ್ವಜನಿಕರಲ್ಲಿ ಜಾಗೃತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿ.ಸಿ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಚೊಚ್ಚಲ ಚಿತ್ರ ’ದಿ ಸ್ಟ್ರೆಂಜ್ ಕೇಸ್ ಆಫ್ ಕುಂದಾಪುರ’ ಇದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ಜರುಗಿತು. ಚಿತ್ರದ ಮೊದಲ ಪೋಸ್ಟರನ್ನು ಸದಾಚಂದ್ರ ಬಸ್ರೂರು ಸಂಸ್ಥೆಯ ಸುರೇಶ್ ನಾಯಕ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭ ಉದ್ಯಮಿ ಪ್ರವೀಣ ಕುಮಾರ್, ದಿ ಸ್ಟ್ರೆಂಜ್ ಕೇಸ್ ಆಫ್ ಕುಂದಾಪುರ ಚಿತ್ರದ ನಿರ್ದೇಶಕ, ನಿರ್ಮಾಪಕ ಓಂಗುರು ಬಸ್ರೂರು, ಇನ್ನೋರ್ವ ನಿರ್ಮಾಪಕ ಚಂದ್ರಶೇಖರ ಬಸ್ರೂರು, ಸಂಗೀತ ನಿರ್ದೇಶಕ ಉತ್ತಮ್ ಸಾರಂಗ ಸೇರಿದಂತೆ ಚಿತ್ರತಂಡದ ಸದಸ್ಯರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸೌಮ್ಯ ಓಂಗುರು ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಗ್ಗರ್ಸೆ ಶ್ರೀ ಬ್ರಹ್ಮಲಿಂಗೇಶ್ವರ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಇಲ್ಲಿನ ಕಂಬಳಗದ್ದೆಯ ಹತ್ತಿರ ನಡೆದ ದ್ವಿತೀಯ ವರ್ಷದ ಹಗಲು-ರಾತ್ರಿಯ ’ಶ್ರೀ ಬ್ರಹ್ಮಲಿಂಗೇಶ್ವರ ಟ್ರೋಫಿ 2020’ ಕ್ರಿಕೆಟ್ ಪಂದ್ಯಾಟದಲ್ಲಿ 8 ಸ್ಟಾರ್ ಉಪ್ಪುಂದ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ಓಂ ಕಲಾ ಮೊಗೇರಿ ತಂಡ ದ್ವಿತೀಯ ಸ್ಥಾನವನ್ನು ಪಡೆದು ಬಹುಮಾನ ಸ್ವೀಕರಿಸಿದರು. ಕ್ರಿಕೆಟ್ ಪಂದ್ಯಾಟದಲ್ಲಿ 60ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು, ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ, ಉತ್ತಮ ಎಸೆತಗಾರ, ಗೂಟರಕ್ಷಕ, ದಾಳಿಗಾರ, ಕ್ಷೇತ್ರರಕ್ಷಕ ಮತ್ತು ಬೆಸ್ಟ್ ರನೌಟ್ ಪ್ರಶಸ್ತಿಗಳನ್ನು ಆಟಗಾರರಿಗೆ ನೀಡಲಾಯಿತು. ಈ ಸಂದರ್ಭ ಆಯೋಜಕರಾದ ಪ್ರಮೋದ್ ಆಚಾರ್ಯ, ಹರ್ಷೆಂದ್ರ ಆಚಾರ್ಯ, ರವಿ ಗಾಣಿಗ, ಶ್ರೀನಿವಾಸ ಆಚಾರ್ಯ, ಸಂತೋಷ ಆಚಾರ್ಯ, ಪ್ರವೀಣ ಆಚಾರ್ಯ, ಅಣ್ಣಪ್ಪ ಮೊದಲಾದವರು ಇದ್ದರು.

Read More