ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೂತನ ಡಿವೈಎಸ್ಪಿ ಆಗಿ 2012 ಬ್ಯಾಚಿನ ಐಪಿಎಸ್ ಅಧಿಕಾರಿ ಹರಿರಾಂ ಶಂಕರ್ ಗುರುವಾರ ಅಧಿಕಾರ ಸ್ವೀಕರಿಸಿದ್ದು, ಇಲ್ಲಿನ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ನಿರ್ಗಮಿತ ಡಿವೈಎಸ್ಪಿ ಬಿ. ಪಿ. ದಿನೇಶ್ ಕುಮಾರ್ ಅಧಿಕಾರ ಹಸ್ತಾಂತರ ಮಾಡಿದರು. ಕೇರಳದ ತ್ರಿಶೂರ್ ಮೂಲದ ಹರಿರಾಂ ಶಂಕರ್ 2012 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು ಟ್ರೈನಿಂಗ್ ಮುಗಿಸಿ ಬೆಳಗಾಂನ ಅಥಣಿಯಲ್ಲಿ ಪ್ರೊಬೇಶನರಿ ಎಎಸ್ಪಿಯಾಗಿದ್ದು ಬಳಿಕ ಎರಡು ತಿಂಗಳು ಹೈದರಬಾದಿನಲ್ಲಿ ಎರಡನೇ ಹಂತದ ತರಬೇತಿ ಮುಗಿಸಿ ಕುಂದಾಪುರ ಎಎಸ್ಪಿ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಕ್ಯಾಲಿಕಟ್ ಎನ್.ಐ.ಟಿ.ಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ವ್ಯಾಸಂಗ ಮಾಡಿ ಸಿವಿಲ್ ಸರ್ವೀಸ್ ಪರೀಕ್ಷೆ ಬರೆದಿದ್ದರು. ಹಲವು ವರ್ಷಗಳ ಬಳಿಕ ಕುಂದಾಪುರಕ್ಕೆ ಐಪಿಎಸ್ ದರ್ಜೆ ಅಧಿಕಾರಿ ನೇಮಿಸಿದ್ದು ನಾಗರಿಕರಲ್ಲಿ ಪೊಲೀಸ್ ವ್ಯವಸ್ಥೆ ಬಗ್ಗೆ ಇನ್ನಷ್ಟು ನಿರೀಕ್ಷೆಗಳು ಮೂಡಿಸಿದೆ. ಈ ಸಂದರ್ಭ ಕುಂದಾಪುರ ಸಿಪಿಐ ಮಂಜಪ್ಪ, ಬೈಂದೂರು ಸಿಪಿಐ ಪರಮೇಶ್ವರ್ ಗುನಗ, ಕುಂದಾಪುರ ಎಸ್ಸೈ ಹರೀಶ್ ಆರ್. ನಾಯಕ್ ವಿವಿಧ ಠಾಣೆ ಪಿಎಸ್‌ಐ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಕಾರಣರಾಗುವ, ದೇಶ ಕಟ್ಟುವ ಶಕ್ತಿ ಇರುವ ಅಧ್ಯಾಪನವೇ ಶ್ರೇಷ್ಠ ವೃತ್ತಿ. ದೇವರಿಗೂ ಗುರುವಿಗೂ ಸಮಾನ ಸ್ಥಾನ ನೀಡುವುದರ ಹಿಂದೆ ಆ ವೃತ್ತಿಯ ಘನತೆ ಅಡಗಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಕ್ಷೇತ್ರ ಸಂಪನ್ಮೂಲ ಕಛೇರಿ ಸಂಯುಕ್ತಾಶ್ರಯದಲ್ಲಿ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಾಥಮಿಕ ಹಂತದಲ್ಲಿ ಗುರು ಶಿಷ್ಯರ ಸಂಬಂಧ ಗಾಡವಾಗಿರುತ್ತದೆ. ಶಿಕ್ಷಕರ ಮಾತೇ ಮಕ್ಕಳಿಗೆ ವೇದವಾಕ್ಯದಂತಿರುತ್ತದೆ. ವ್ಯಕ್ತಿ ಎಷ್ಟೇ ದೊಡ್ಡವನಾದರೂ ತನ್ನ ಬಾಲ್ಯದಲ್ಲಿ ಕಲಿಸಿದ ಶಿಕ್ಷಕರನ್ನು ಮರೆಯಲಾರ ಎಂದ ಅವರು ಸಮಾಜ ಕಟ್ಟ ಕಡೆಯ ಮಗುವಿಗೂ ಶಿಕ್ಷಣ ದೊರೆಯುವಂತಾದರೆ ದೇಶ ಉನ್ನತಿಯನ್ನು ಸಾಧಿಸಲು ಸಾಧ್ಯ ಎಂದರು. ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಟಿ. ಬಾಬು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ೨೬ ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಸಿಬ್ಬಂದಿ ರಮೇಶ್ ಅಡಿಗ ಅವರಿಗೆ ಅವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಚಿನ್ನದ ಉಂಗುರ ತೊಡಿಸಿ ಸನ್ಮಾನಿಸಿ ಮಾತನಾಡಿ ಯಾವುದೇ ಸಂಸ್ಥೆಯಲ್ಲಿ ಸೇವಾ ಮನೋಭಾವದ ಆಡಳಿತ ಮಂಡಳಿಯ ಜೊತೆಗೆ ಉತ್ತಮ ಸಿಬ್ಬಂದಿ ಇದ್ದರೆ ಅದರ ಯಶಸ್ಸು ಕಾಣಲು ಸಾಧ್ಯವಿದೆ. ರಮೇಶ್ ಅಡಿಗ ಅವರು ಶಿಸ್ತು ಹಾಗೂ ಸಂಸ್ಥೆಯ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿ ಸಂಸ್ಥೆಯ ಏಳ್ಗೆಯಲ್ಲಿ ಶ್ರಮಿಸಿದ್ದಾರೆ ಎಂದರು. ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ಭೋಜ ನಾಯ್ಕ್, ಜಗದೀಶ್ ಪಿ. ಪೂಜಾರಿ, ರಾಮಕೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ನಾಗಮ್ಮ, ಮಂಜು ಪೂಜಾರಿ, ವಿಠಲ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮಡಿವಾಳ ಇದ್ದರು. ನಿರ್ದೇಶಕ ಎಂ. ವಿನಾಯಕ ರಾವ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಕರು ಇತಿಹಾಸ ಗುರುತಿಸುವ ಗುರು ಆಗಬೇಕೇ ವಿನಃ ಯಾವತ್ತು ಲಘು ಆಗಬಾರದು. ಶಿಕ್ಷಕ ದಾಖಲೆಯಲ್ಲಿ ನಿವೃತ್ತರಾದರೂ ಅವರು ಹವ್ಯಾಸಿಯಾಗಿ ಶಿಕ್ಷಕನಾಗಿಯೇ ಉಳಿದು ಸಮಾಜ ತಿದ್ದುವ ಕೆಲಸ ಮಾಡಬೇಕು. ಕನ್ನಡ, ಸಂಸ್ಕೃತಿ, ಭಾಷೆ ಹೇಳಿಕೊಡುವ ಜೊತೆ ಪ್ರಜ್ಞಾವಂತ ನಾಗರಿಕರ ಸೃಷ್ಟಿಸುವ ಕೆಲಸ ಶಿಕ್ಷಕರಿಂದ ಆಗುತ್ತಿದೆ ಎಂದು ಜಾನಪದ ವಿದ್ವಾಂಸ ಎ. ವಿ. ನಾವಡ ಹೇಳಿದರು. ಉಡುಪಿ ಜಿಲ್ಲಾ ಪಂಚಾಯಿತಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ತಾಲೂಕು ಸಂಪನ್ಮೂಲ ಕೇಂದ್ರ ಆಶ್ರಯದಲ್ಲಿ ಕುಂದಾಪುರ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಗುರುವಾರ ನಡೆದ ಶಿಕ್ಷಕ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು. ಕನ್ನಡ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತೆರೆಯುವ ಮೂಲಕ ಸರ್ಕಾರ ತಪ್ಪು ಹೆಜ್ಜೆ ಇಟ್ಟಿದೆ. ಇಂಗ್ಲಿಷ್ ಭಾಷೆಯಾಗಿ ಒಂದನೇ ತಗತಿಯಿಂದ ಕಲಿಸಿ, ಇಂಗ್ಲೀಷ್ ಜೊತೆ ಕನ್ನಡ ಕಲಿಸುವದಲ್ಲದೆ, ನಮ್ಮ ಮಣ್ಣಿನ ಭಾಷೆ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಕವಿ ಸಾಹಿತಿಗಳ ಪರಿಚಯಿಸುವ ಕೆಲಸ ಮಾಡಬೇಕಿತ್ತು. ಕನ್ನಡ ಕೇವಲ ಭಾಷೆಯಲ್ಲ ನಮ್ಮ ಸಂಸ್ಕೃತಿಯ ಪ್ರತೀಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2019-20ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದವರ ವಿವರ ಪ್ರೌಢಶಾಲಾ ಶಿಕ್ಷಕರು: ರಾಜಶೇಖರ ಎಂ. ತಾಳಿಕೋಟೆ ಚಿತ್ರಕಲಾ ಶಿಕ್ಷಕರು ಸರಕಾರಿ ಪ್ರೌಢಶಾಲೆ ಆಲೂರು( ಬೈಂದೂರು ವಲಯ), ಶ್ರೀಕಾಂತ್ ವಿ. ಸಹ ಶಿಕ್ಷಕರು ಸರಕಾರಿ ಪ್ರೌಢಶಾಲೆ ಬಸ್ರೂರು (ಕುಂದಾಪುರ ವಲಯ), ಕೆ.ದಿನಮಣಿ ಶಾಸ್ತ್ರೀ ಚಿತ್ರಕಲಾ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ಬ್ರಹ್ಮಾವರ( ಬ್ರಹ್ಮಾವರ ವಲಯ), ವೆಂಕಟರಮಣ ಉಪಾಧ್ಯಾಯ ಸಹ ಶಿಕ್ಷಕರು ಸರಕಾರಿ ಪ್ರೌಢಶಾಲೆ ವಳಕಾಡು( ಉಡುಪಿ ವಲಯ), ದಿನೇಶ್ ಶೆಟ್ಟಿಗಾರ್ ಸಹ ಶಿಕ್ಷಕರು ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ( ಕಾರ್ಕಳ ವಲಯ). ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಶೇಖರ ಯು ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು (ಕುಂದಾಪುರ ವಲಯ), ಆನಂದ ಶೆಟ್ಟಿ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ತೂರು (ಬೈಂದೂರು ವಲಯ), ಶೋಭ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂದಿಸಿದಂತೆ ಜಿಲ್ಲಾಧಿಕಾರಿಗಳಿಗೆ ರೂ. 1 ಕೋಟಿ ವರೆಗೆ ಮಂಜೂರಾತಿ ಅಧಿಕಾರ ನೀಡುವ ಪ್ರಸ್ತಾವನೆ ರಾಜ್ಯ ಸರಕಾರದ ಮುಂದೆ ಇದೆ ಎಂದು ಮುಜರಾಯಿ, ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಂಗಳವಾರ ನಡೆದ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು. ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ಪ್ರಸಕ್ತ ರೂ. 50 ಲಕ್ಷದವರೆಗಿನ ಯೋಜನೆಗಳಿಗೆ ಮಂಜೂರಾತಿ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ಇದೆ. ಇದನ್ನು ಒಂದು ಕೋಟಿ ರೂಪಾಯಿಗೆ ಏರಿಕೆ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ಸಚಿವ ಸಂಪುಟದ ಮುಂದೆ ಇದು ಬರಲಿದೆ. ಇದರಿಂದ ಪ್ರಮುಖ ದೇವಸ್ಥಾನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬಹುದಾಗಿದೆ ಎಂದು ಸಚಿವರು ತಿಳಿಸಿದರು. ಕೊಲ್ಲೂರಿನಲ್ಲಿ ಒಳಚರಂಡಿ ಹಾಗೂ ಕಿಂಡಿ ಅಣೆಕಟ್ಟು ನಿರ್ಮಾಣ ಸಂಬಂಧ ಶೀಘ್ರವೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಳೆದ ಎಂಟು ವರ್ಷಗಳಿಂದ ಕ್ರೀಡಾ ಸೇವೆಯನ್ನು ಮಾಡುತ್ತಾ ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡುತ್ತಾ ಬಂದಿರುವ ಪ್ರದೀಪ್ ಕುಮಾರ್ ಶೆಟ್ಟಿಯ ಅವರನ್ನು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ಈ ಸಾಲಿನಿಂದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ಸಲಹೆಗಾರರಾಗಿ ನೇಮಕ ಮಾಡಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಸರಕಾರ, ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಅಂಬೇಡ್ಕರ್ ಕಾರ್ಮಿಕ ಹಸ್ತ ಯೋಜನೆಯಡಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ರೋಟರಿ ಕ್ಲಬ್ ಬೈಂದೂರು ಹಾಗೂ ಸಿಐಟಿಯು ಬೈಂದೂರು ತಾಲೂಕು ಇವರ ಸಹಯೋಗದಲ್ಲಿ ಶನಿವಾರ ಬೈಂದೂರು ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಬೈಂದೂರು ಆಟೋರಿಕ್ಷಾ ಮತ್ತು ವಾಹನ ಚಾಲಕರಿಗೆ ಅಪಘಾತ ಜೀವ ರಕ್ಷಕ ಯೋಜನೆಯಡಿ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿ ಜರುಗಿತು. ಸಮಾರಂಭವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಸಭಾಪತಿ ಎಸ್. ಜಯಕರ ಶೆಟ್ಟಿ ಉದ್ಘಾಟಿಸಿ ಮಾತನಾಡಿ ಆಟೋರಿಕ್ಷಾ ಮತ್ತು ಖಾಸಗಿ ವಾಣಿಜ್ಯ ವಾಹನ ಚಾಲಕರು ಕರ್ನಾಟಕ ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿ ಮಂಡಳಿಯು ಜಾರಿಗೊಳಿಸುತ್ತಿರುವ ಅಪಘಾತ ಪರಿಹಾರದ ವಿವಿಧ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಸಂಘಟಿತ ಪ್ರಯತ್ನ ಮಾಡಬೇಕು. ರಸ್ತೆ ಸಂಚಾರದಲ್ಲಿ ವಾಹನ ಅಪಘಾತವಾದ ಸಂದರ್ಭ ಆಟೋರಿಕ್ಷಾ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶ್ರೀ ರಾಮಕ್ಷತ್ರಿಯ ಗಣೇಶೋತ್ಸವ ಸಮಿತಿ ಗಂಗೊಳ್ಳಿ ಇದರ 26ನೇ ವರ್ಷದ ಗಣೇಶೋತ್ಸವದ ಸಂದರ್ಭ ಭಕ್ತರಿಗೆ ಗಿಡಗಳನ್ನು ವಿತರಿಸಲಾಯಿತು. ಗಣೇಶೋತ್ಸವದಲ್ಲಿ ಆಯೋಜಿಸಲಾದ ಮನೆಗೊಂದು ಮರ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷರಾದ ಗಿರೀಶ್ ದೇವರುಮನೆ, ಕಾರ್ಯದರ್ಶಿ ರಾಮಪ್ರಸಾದ್ ಸಸಿಗಳನ್ನು ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಉಸ್ತುವಾರಿಯನ್ನು ಸಕಲಾತಿ ನಾಗರಾಜ್, ಬಟ್ವಾಡಿ ಸಂದೀಪ್, ವಿಶ್ವನಾಥ್, ಉಗ್ರಾಣಿ ಲಕ್ಷ್ಮೀನಾರಾಯಣ, ಮಹೇಶ್, ಮಾಪಾರಿ ಸುರೇಶ್ ನೋಡಿಕೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಂಗೊಳ್ಳಿ ಬಿಜೆಪಿ ಮುಖಂಡರ ನಿಯೋಗ ರಾಜ್ಯದ ಬಂದರು, ಮೀನುಗಾರಿಕೆ ಮತ್ತು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಭೇಟಿ ಮಾಡಿ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಮತ್ತು ಗಂಗೊಳ್ಳಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮನವಿ ಸಲ್ಲಿಸಿದರು. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಸ್ಲ್ಯಾಬ್ ಕುಸಿತ, ಬಂದರು ಅಭಿವೃದ್ಧಿ ಹಾಗೂ ಗಂಗೊಳ್ಳಿಯಲ್ಲಿ ಕೈಗೆತ್ತಿಕೊಳ್ಳಬೇಕಾದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸಚಿವರ ಗಮನ ಸೆಳೆದ ಗಂಗೊಳ್ಳಿ ಬಿಜೆಪಿ ಮುಖಂಡರ ನಿಯೋಗ, ಆದಷ್ಟು ಶೀಘ್ರ ಬಂದರಿನ ಸಮಸ್ಯೆಗಳನ್ನು ಬಗೆಹರಿಸುವಂತೆ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಮನವಿ ಮಾಡಿ, ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಿದರು. ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಈಗಾಗಲೇ ಚರ್ಚಿಸಲಾಗಿದ್ದು, ಅಧಿಕಾರಿಗಳೊಂದಿಗೆ ಗಂಗೊಳ್ಳಿ ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ಶಾಸಕರ ಜೊತೆಗೂಡಿ ಮಾಡಲಾಗುವುದು ಅಲ್ಲದೆ ಗಂಗೊಳ್ಳಿಯ…
