ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ಹರೆಗೋಡು ಮಹಾವಿಷ್ಣು ಯುವಕ ಮಂಡಲ, ಮಾನಸ ಯುವತಿ ಮಂಡಲ ಇವರ ಜಂಟಿ ಆಶ್ರಯದಲ್ಲಿ ಹೆಮ್ಮಾಡಿಯ ನಾಟಿ ವೈದ್ಯ ಗೋಪಾಲ ಗಾಣಿಗ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಗಂಗೊಳ್ಳಿ ರೋಟರಿ ಅಧ್ಯಕ್ಷ ರಾಜೇಶ್ ಎಂ.ಜಿ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಸದಸ್ಯ ಪ್ರದೀಪ ಡಿ.ಕೆ., ಚಂದ್ರ ನಾಯ್ಕ್, ನರಸಿಂಹ ಗಾಣಿಗ, ಯುವಕ ಮಂಡಲದ ಅಧ್ಯಕ್ಷ ಶ್ರೀಕಾಂತ ಆಚಾರ್ಯ, ಗಂಗಮ್ಮ, ನಾಗರಾಜ ಗಾಣಿಗ, ರಾಜು ಗಾಣಿಗ, ಪ್ರದೀಪ ದೇವಾಡಿಗ, ರವಿ ಉಪ್ಪುಂದ, ರಾಮಚಂದ್ರ ಕುಲಾಲ್ ಮತ್ತು ದೀಪಕ ಕುಮಾರ್ ಉಪಸ್ಥಿತರಿದ್ದರು. ಪ್ರಸಾದ ಆಚಾರ್ಯ ಸ್ವಾಗತಿಸಿದರು. ರವೀಶ ಡಿ.ಎಚ್. ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಗುರುರಾಜ ಗಾಣಿಗ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲ್ಲೂಕು ವಲಯದಲ್ಲಿ ರೈತರ ಸಾಧನೆಯನ್ನು ಗುರುತಿಸಿ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕೃಷಿ ಚಟುವಟಿಕೆಗಳಡಿ ಆಯ್ಕೆಯಾದ 10 ಮಂದಿ ರೈತರಿಗೆ ತಲಾ ರೂ.25000 ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಗೆ 5 ಮಂದಿ ರೈತರಿಗೆ ತಲಾ ರೂ.10000 ವನ್ನು ವಿತರಿಸಲಾಗುವುದು. ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ತಂತ್ರಜ್ಞಾನ ಅಳವಡಿಕೆ (ಹಸಿರು ಮನೆ, ಕಸಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ ಹಾಗೂ ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ರೈತರು ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಅರ್ಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು, ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಶಿಷ್ಟಾಚಾರಗಳ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಕರೋನಾ ಸಂಬಂಧಿತ ಸರ್ಕಾರದ ಇತರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿರುತ್ತದೆ. ಅದಾಗ್ಯೂ ಜಿಲ್ಲೆಯಲ್ಲಿ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ, ತೀರ ನಿರಾಸದಾಯಕ ವರ್ತನೆಯನ್ನು ತೋರುತ್ತಿರುವುದರಿಂದ, ಕರೋನಾ ಸಾಂಕ್ರಮಿಕವು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಮಧ್ಯೆ ಕೋವಿಡ್-19 ರೋಗದ 3 ನೇ ಅಲೆಯು ತಲೆದೋರುತ್ತಿರುವುದನ್ನು ಆರೋಗ್ಯ ಇಲಾಖೆಯು ಎಚ್ಚರಿಸಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂತಹ ಸನ್ನಿವೇಶದಲ್ಲಿ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಹಾಗೂ ಇನ್ನಿತರ ಕೋವಿಡ್-19ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತೀ ಅನಿವಾರ್ಯವಾಗಿದ್ದು, ಜಿಲ್ಲೆಯ ಜನರ ಆರೋಗ್ಯ ಹಿತದೃಷ್ಟಿಯಿಂದ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುವಂತೆ ಮಾಡಲು, ಇನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ಲೈಓವರ್ ಮೂಲಕ ನಗರಕ್ಕೆ ಸಂಪರ್ಕಿಸಲು ಪ್ರವೇಶ ಮಾಡಿಕೊಡುವ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದು ಅವರ ಮನವಿಯನ್ನು ಹೆದ್ದಾರಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ ಸಚಿವೆಯಾದ ಬಳಿಕ ಗುರುವಾರ ಕುಂದಾಪುರಕ್ಕೆ ಮೊದಲ ಬಾರಿಗೆ ಆಗಮಿಸಿದ ಅವರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ನೂತನಾಗಿ ನಿರ್ಮಾಣಗೊಂಡ ಆಕ್ಸಿಜನ್ ಉತ್ಪಾದನಾ ಘಟಕವನ್ನು ವೀಕ್ಷಿಸಿ ಬಳಿಕ ಮಾತನಾಡಿ ಕುಂದಾಪುರದ ಫ್ಲೈಓವರ್ ಜನರೇ ಉದ್ಘಾಟಿಸಿದ್ದಾರೆ. ಸ್ಥಳೀಯ ಶಾಸಕರು ಉದ್ಘಾಟನಾ ಕಾರ್ಯಕ್ರಮಗಳಿಗೆಲ್ಲ ಬರುವವರಲ್ಲ. ಹಾಗಾಗಿ ನಾವು ಉದ್ಘಾಟಿಸುವುದೇನಿಲ್ಲ ಎಂದು ಹಾಸ್ಯಚಟಾಕಿ ಹಾರಿಸಿದರು. ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಮಿಷಕ್ಕೆ 500 ಲೀ ಆಕ್ಸಿಜನ್ ಉತ್ಪಾದಿಸುವ ಘಟಕ ಉದ್ಘಾಟನೆಗೆ ಸಿದ್ಧವಾಗಿದೆ. ಅದು ತಕ್ಷಣವೇ ಕಾರ್ಯಾಚರಿಸಲಿದ್ದು, ಉದ್ಘಾಟನೆಗೆ ಪೆಟ್ರೋಲಿಯಂ ಸಚಿವರು ಬರುವ ಮಾಹಿತಿಯಿದ್ದು ಹಾಗಾಗಿ ಸ್ವಲ್ಪ ದಿನ ಮುಂದೂಡಲಾಗಿದೆ ಎಂದರು. ಸೌದಿ ರಾಜನ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂಬ ಆರೋಪದಡಿಯಲ್ಲಿ ಅವರನ್ನು ಬಂಧಿಸಲಾಗಿದ್ದ ಹರೀಶ್ ಬಂಗೇರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಯುವ ಪೀಳಿಗೆಗೆ ಕೃಷಿ ಹಾಗೂ ನಮ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಕರ್ತವ್ಯ ಎಲ್ಲರ ಮೇಲಿದೆ. ಈ ಬಗ್ಗೆ ಹಿರಿಯರ ಮೇಲೆ ಹೆಚ್ಚಿನ ಹೊಣೆಗಾರಿಕೆ ಇದೆ ಎಂದು ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ರಾಧಾಕೃಷ್ಣ ರೂಪಂ ಹೇಳಿದರು. ಲಯನ್ಸ್ ಕ್ಲಬ್ ಕುಂದಾಪುರ ಹಾಗೂ ಮಹಾವಿಷ್ಣು ಯುವಕ ಮಂಡಲ ಇವರ ಜಂಟಿ ಆಶ್ರಯದಲ್ಲಿ ಕಟ್ಬೆಲ್ತೂರು ಹರೆಗೋಡು ಸಂಘದ ವಠಾರದಲ್ಲಿ ನಡೆದ ರೈತರಿಗೆ ಕೃಷಿ ಪರಿಕರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುಂದಾಪುರ ಲಯನ್ಸ್ ಕ್ಲಬ್ನ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್ ಕಲ್ಪತರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಕೃಷಿಕ ಸೂರ ದೇವಾಡಿಗ, ವಿಶ್ವನಾಥ ಗಾಣಿಗ, ಮರಿಯ ಪೂಜಾರಿ, ಕೃಷ್ಣ ಗಾಣಿಗ, ಸುಬ್ಬ ದೇವಾಡಿಗ, ಸಂಜು ದೇವಾಡಿಗ, ಕೊಗ್ಗ ಗಾಣಿಗ, ಕೃಷ್ಣ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಯುವಕ ಮಂಡಲದ ಮೊದಲ ಧ್ಯೇಯವಾಗಿ ಸ್ವಚ್ಚತೆಯಾಗಿದ್ದು, ಯುವಕ ಮಂಡಲವು ಸಮಾಜಮುಖಿ ಕಾರ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ, ಶ್ರೀ ವಿನಾಯಕ ಯುವಕ ಮಂಡಲ ಈ ನಿಟ್ಟಿನಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ಉತ್ತಮ ಹೆಜ್ಜೆಯನ್ನಿಡುತ್ತಿದೆ ಎಂದು ಮಹಾತ್ಮ ಗಾಂಧಿ ಫ್ರೌಡಶಾಲೆಯ ಮುಖ್ಯೋಪಾಧ್ಯಯ ಸತೀಶ್ ನಾಯ್ಕ್ ಅವರು ಹೇಳಿದರು. ಅವರು ಶ್ರೀವಿನಾಯಕ ಯುವಕ ಮಂಡಲ ರಿ. ಸಾಬ್ರಕಟ್ಟೆ-ಯಡ್ತಾಡಿ ಇವರ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಹಾತ್ಮ ಗಾಂಧಿ ಫ್ರೌಡಶಾಲೆ ಸಾಬ್ರಕಟ್ಟೆಯಲ್ಲಿ ಶಾಲಾ ವಠಾರ ಸ್ವಚ್ಚತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಪುರೋಹಿತರಾದ ರಾಜೇಶ್ ಐತಾಳ್ ಎತ್ತಿನಟ್ಟೆ, ಯುವಕ ಮಂಡಲದ ಅಧ್ಯಕ್ಷ ರತ್ನಾಕರ ಪೂಜಾರಿ, ನೆಹರು ಯುವ ಕೇಂದ್ರ, ಉಡುಪಿ ಇದರ ಪ್ರದೀಪ್,s ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಶೆಟ್ಟಿ ಕೊಳ್ಕೆಬೈಲು, ಯುವಕ ಮಂಡಲದ ಕಾರ್ಯದರ್ಶಿ ಪ್ರಶಾಂತ್ ಸೂರ್ಯ, ಉಪಾಧ್ಯಕ್ಷ ರಾಜೇಶ್ ದೇವಾಡಿಗ, ಹಾಗೂ ಅಧ್ಯಪಾಕ ವೃಂದ, ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೊಡಪಾಡಿ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಗಳು ಆಂಬ್ಯುಲೆನ್ಸ್ ಮೂಲಕ ಕಾಲೇಜಿಗೆ ಬಂದು ಪರೀಕ್ಷೆಗೆ ಹಾಜರಾದ ಘಟನೆ ನಡೆದಿದೆ. ಗಾಯಗೊಂಡವರನ್ನು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ವಿದ್ಯಾರ್ಥಿಗಳಾದ ಮಸಾಯಿದ್ ಮತ್ತು ವಾಜಿದ್ ಎಂದು ಗುರುತಿಸಲಾಗಿದೆ. ಪ್ರಥಮ ವರ್ಷದ ಪದವಿ ಪರೀಕ್ಷೆ ಬರೆಯಲು ಶಿರೂರಿನಿಂದ ಬೈಕ್ ಮೂಲಕ ಬಂದಿದ್ದ ಮಸಾಯಿದ್ ಗಂಗೊಳ್ಳಿಗೆ ತೆರಳಿ ಅಲ್ಲಿಂದ ಸ್ನೇಹಿತ ವಾಜಿದ್ ಅವರನ್ನು ಕರೆದುಕೊಂಡು ತೆರಳುತ್ತಿದ್ದ ಸಂದರ್ಭ ಕೊಡಪಾಡಿ ಬಳಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಢಿಕ್ಕಿಯಾಗಿದೆ. ತೀವ್ರ ಗಾಯಗೊಂಡ ವಿದ್ಯಾರ್ಥಿಗಳನ್ನು ಗಂಗೊಳ್ಳಿಯ ಆಪತ್ಬಾಂಧವ ಆಂಬುಲೆನ್ಸ್ ನ ನಿರ್ವಾಹಕ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ವಿದ್ಯಾರ್ಥಿಗಳು ಆಂಬುಲೆನ್ಸ್ ಭಂಡಾರ್ಕಾರ್ಸ್ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದಾರೆ. ಕಾಲೇಜು ಆಡಳಿತ ಅವರಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಟ್ಟಿದೆ. ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗಳಾಗಿರುವುದರಿಂದ ಪರೀಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಹಾಗೂ ಇದರ ವಿರುದ್ದ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವರ ಕಚೇರಿಗೆ ಮಾರ್ಚ್ ನಡೆಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷರ ಸಹಿತ ವಿದ್ಯಾರ್ಥಿಗಳ ಬಂಧನವಾಗಿದ್ದು, ತಕ್ಷಣ ಬಿಡುಗಡೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಕುಂದಾಪುರ ಜಿಲ್ಲಾ ಸಮಿತಿಯ ವತಿಯಿಂದ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಮುಖಂಡರಾದ ನವಾಜ್ ಶೇಕ್ ಮಾತನಾಡಿ, ಹೊಸ ಶಿಕ್ಷಣ ನೀತಿಯನ್ನು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಚರ್ಚೆ ನಡೆಸದೆ, ತಾರಾತುರಿಯಲ್ಲಿ ಹಿಂಬಾಗಿಲಿನ ಮೂಲಕ ಜಾರಿಗೊಳಿಸಲು ಸರಕಾರವು ಹೊರಟಿದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಇದು ಸಂಪೂರ್ಣವಾಗಿ ಶಿಕ್ಷಣ ವ್ಯವಸ್ಥೆಯನ್ನು ಕೇಸರಿಕರಣ ಗೊಳಿಸುವ ಮತ್ತು ಖಾಸಗೀಕರಣಗೊಳಿಸುವ ಹುನ್ನಾರವಾಗಿದೆ ಆದ್ದರಿಂದ ಈ ಅಸಮರ್ಪಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್, ಕುಂದಾಪುರ ಜಿಲ್ಲಾ ಸಮಿತಿ ಸದಸ್ಯರಾದ ಝೆಶನ್ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ 2021 ರ ಶಿಕ್ಷಕರ ಅರ್ಹತಾ ಪರೀಕ್ಷೆಯು ಆಗಸ್ಟ್ 22ರಂದು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ನಡೆಯುವ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 1176 ಮತ್ತು ಮಧ್ಯಾಹ್ನ 1848 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕೋವಿಡ್ ಮಾರ್ಗಸೂಚಿಯಂತೆ ಥರ್ಮಲ್ ಸ್ಕಾö್ಯನರ್ ಮೂಲಕ ಪರೀಕ್ಷಿಸುವಂತೆ ಹಾಗೂ ಮಾಸ್ಕ್ ಧರಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪ್ರಶ್ನೆಪತ್ರಿಕೆ ಸಾಗಾಟ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿಗಳು , ಉಡುಪಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾಗುವಂತೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ 2 ವರ್ಷಗಳಿಂದ ವಸತಿ ಯೋಜನೆಯಡಿ ಗ್ರಾಮ ಪಂಚಾಯತಗಳಿಗೆ ಈ ತನಕ ಒಂದು ಮನೆಗಳನ್ನು ಸಹ ಮಂಜೂರು ಮಾಡಿಲ್ಲ. ಆದ್ದರಿಂದ ವಸತಿ ಯೋಜನೆಯಡಿ ಕೂಡಲೇ ಪ್ರತಿ ಗ್ರಾಮ ಪಂಚಾಯತಗೆ 100 ಮನೆ ಮಂಜೂರು ಮಾಡಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ. ವಸತಿ ಯೋಜನೆಯಡಿ 4 ತಿಂಗಳ ಹಿಂದೆ ಪ್ರತಿ ಗ್ರಾಮ ಪಂಚಾಯತಗಳಿಗೆ ಮಂಜೂರು ಮಾಡಿದ 20 ಮನೆಗಳ ಆದೇಶ ಸರಕಾರ ಹಿಂತೆಗೆದುಕೊಂಡಿದೆ. ಗ್ರಾಮ ಪಂಚಾಯತ ಫಲಾನುಭವಿಗಳ ಆಯ್ಕೆ ಮಾಡಿ ವಸತಿ ನಿಗಮಕ್ಕೆ ಕಳುಹಿಸಿದ ನಂತರ ಫಲಾನುಭವಿಗಳು ಮನೆ ಪ್ರಾರಂಭಿಸಿ ಪಂಚಾಂಗ ಗೋಡೆ ಹಂತ ತಲುಪಿದೆ. ನಂತರ ಸಕಾರಣವಿಲ್ಲದೆ ಸರಕಾರ ಮನೆ ಮಂಜೂರಾತಿ ಆದೇಶ ರದ್ದು ಮಾಡಿರುವುದರಿಂದ ಬಡ ಫಲಾನುಭವಿಗಳು ಆತಂಕದಲ್ಲಿದ್ದಾರೆ. ಮನೆಗಳು ಪ್ರಗತಿ ಹಂತದಲ್ಲೇ ನಿಂತಿವೆ. ಈ ಕುರಿತು ಬಿ ಜೆ ಪಿ ಶಾಸಕರು, ಸಂಸದರು, ಸಚಿವರು ಮೌನಕ್ಕೆ ಶರಣಾಗಿದ್ದು, ಇದರಿಂದ…
