ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಹಾಗೂ ಲಾವಣ್ಯ ರಿ. ಬೈಂದೂರು ಸಹಯೋಗದಲ್ಲಿ ವಿಶ್ವರಂಗಭೂಮಿ ದಿನಾಚರಣೆ 2021 ಮಾ.27ರ ಶನಿವಾರ ಸಂಜೆ5.30ಕ್ಕೆ ಮಯ್ಯಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಾರ್ಥಮಿಕ ಶಾಲೆಯ ವಠಾರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಉದಯ್ ಆಚಾರ್ ತಿಳಿಸಿದರು. ಬೈಂದೂರು ಪ್ರೆಸ್ ಕ್ಲಬ್‌ನಲ್ಲಿ ಜರುಗಿದ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಲಿದ್ದು, ರಂಗಭೂಮಿ ದಿನಾಚರಣೆ ಕುರಿತು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ರಘು ನಾಯ್ಕ್ ಉಪನ್ಯಾಸಗೈಯಲಿದ್ದಾರೆ. ಮುಖ್ಯ ಅಥಿತಿಗಳಾಗಿ ಬೈಂದೂರು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಮಾಲಿನಿ ಕೆ., ಜಿಲ್ಲಾ ಪಂಚಯತ್ ಸದಸ್ಯರಾದ ಶಂಕರ್ ಪೂಜಾರಿ, ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾದ ಎಂ. ಕೆ. ಮಠ ಉಪ್ಪಿನಂಗಡಿ, ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯ ಮುಖ್ಯೋಪಾಧ್ಯರಾದ ರಾಜು ಎಸ್. ಇವರು ಉಪಸ್ಥಿತರಿರಲಿದ್ದಾರೆ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ರಂಗ ನಿರ್ದೇಶಕರಾದ ಕೋ. ಶಿವಾನಂದ ಕಾರಂತ್ ಹಾಗೂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಾರ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರ ಯುವಮೋರ್ಚಾ ವತಿಯಿಂದ ಅಪ್ರತಿಮ ದೇಶಭಕ್ತರು, ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ರವರ ಬಲಿದಾನದ ಸ್ಮರಣೆಯಲ್ಲಿ ‘ಶಹಿದ್ ದಿವಸ್’ ಪಂಜಿನ ಮೆರವಣಿಗೆ ಬೈಂದೂರು ಸರ್ಕಲ್ ನಿಂದ ಬಲಿದಾನಗೈದ ದೇಶಭಕ್ತರ ಘೋಷಣೆ ಕೂಗುತ್ತ ಜೈಕಾರ ಹಾಕುತ್ತ ಸಾಗಿ ಸೇನೇಶ್ವರ ದೇವಸ್ಥಾನದಲ್ಲಿ ಮೆರವಣಿಗೆ ಅಂತ್ಯಗೊಳಿಸಲಾಯಿತು ಪಂಜಿನ ಮೆರವಣಿಗೆಗೆ ಮಂಡಲದ ಅಧ್ಯಕ್ಷರಾದ ದೀಪಕ್ ಶೆಟ್ಟಿ ನೆಲ್ಯಾಡಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರಜ್ವಲ್ ಶೆಟ್ಟಿ ಕಾಲ್ತೊಡ್, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಜೇಡ್ಡು,ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಂತೋಷ ಎಮ್, ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ, ಉಪಾಧ್ಯಕ್ಷರಾದ ಲೋಹಿತ್ ಶೆಟ್ಟಿ ಗಂಟಿಹೊಳೆ , ಕಾರ್ಯದರ್ಶಿ ನಿಧಿತ್ ಶೆಟ್ಟಿ ಬೈಂದೂರ್ ಹಾಗೂ ಮಂಡಲದ, ಮಹಾಶಕ್ತಿ ಕೇಂದ್ರದ ಶಕ್ತಿಕೇಂದ್ರದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿಯಲ್ಲಿ ಪರಿವಾರ ಶಕ್ತಿಗಳ ನೂತನ ಶಿಲಾಮಯ ದೇಗುಲ ಸಮರ್ಪಣೆ – ಬ್ರಹ್ಮಕಲಶೋತ್ಸವ ಮೊದಲಾದ ಕಾರ್ಯಕ್ರಮಗಳು ಎಪ್ರಿಲ್ 22ರಿಂದ 29 ತನಕ ನಡೆಯಲಿರುವ ಪೂರ್ವಭಾವಿಯಾಗಿ, ಚಪ್ಪರ ಮುಹೂರ್ತ ಕಾರ್ಯಕ್ರಮ ಆಗಮ ಪಂಡಿತರಾದ ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಬುಧವಾರ ಜರುಗಿತು. ಕಾರ್ಯಕ್ರಮದಲ್ಲಿ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶಿರೂರು ಬಿಲ್ಲವ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಸಸಿಹಿತ್ಲು, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಆನಂದ ಶೆಟ್ಟಿ ನಾಕಟ್ಟೆ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು, ಮಂಜಯ್ಯ ಪೂಜಾರಿ ಏಳಜಿತ, ರಘುರಾಮ ಪೂಜಾರಿ ಶಿರೂರು, ಶೇಖರ ಪೂಜಾರಿ ಉಪ್ಪುಂದ, ಮುತ್ತಯ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯು ಪ್ರಾರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳಾದ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರಪಾಲನೆ ಮಾಡದೇ ಇರುವುದು ಕಂಡು ಬರುತ್ತಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ .ಜಗದೀಶ್ ಸೂಚನೆ ನೀಡಿದ್ದಾರೆ. ಅವರು ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಉಡುಪಿ ನಗರಸಭೆಯ ಪೌರಾಯುಕ್ತರು, ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಝೂಮ್ ಮೀಟಿಂಗ್ ಮೂಲಕ ಸಭೆ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಸೂಚನೆ ನೀಡಿದರು. ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುವಂತೆ, ಸಾಮಾಜಿಕ ಪಾಲನೆ ಕುರಿತಂತೆ ವಿವಿಧ ಮಾಲ್ಗಳು, ಹಾಲ್ಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ನಿಗಧಿಪಡಿಸಿರುವ ಸಂಖ್ಯೆಗಿಂತ ಹೆಚ್ಚಿನ ಸಾರ್ವಜನಿಕರು ಸೇರಿದ್ದರೆ ಸಂಬಂಧಪಟ್ಟವರ ವಿರುದ್ಧ ಸುತ್ತೋಲೆಯಂತೆ ಸೂಕ್ತ ಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಲೋಕಾಯುಕ್ತದಲ್ಲಿ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ, ಬೈಂದೂರು ಮೂಲದ ರಾಘವೇಂದ್ರ ಎಮ್. ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ. 1997ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಪೇದೆಯಾಗಿ ವೃತ್ತಿ ಜೀವನ ಆರಂಭಿಸಿದ ರಾಘವೇಂದ್ರ ಅವರು ಜಿಲ್ಲೆಯ ಶಂಕರನಾರಾಯಣ, ಉಡುಪಿ ಟೌನ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ 2007ರಲ್ಲಿ ಪಿಎಸ್ಐ ಆಗಿ ಭಡ್ತಿ ಹೊಂದಿದರು. ಬೆಂಗಳೂರಿನ ಯಶವಂತಪುರ, ಆರ್.ಎನ್.ಎಸ್ ಯಾರ್ಡ್, ಸಿಸಿಬಿ, ಹೆಬ್ಬಾಳ, ಮಾದನಾಯಕನ ಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಮಂಚೇನಹಳ್ಳಿಯಲ್ಲಿ ಸೇವೆ ಸಲ್ಲಿಸಿದ ಅವರು ಭಡ್ತಿ ಹೊಂದಿ ಪ್ರಸ್ತುತ ಬೆಂಗಳೂರಿನ ಕೆ.ಎಲ್.ಎನಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೈಂದೂರು ಬಾಡದ ನಿವೃತ್ತ ಮುಖ್ಯೋಪಧ್ಯಾಯರಾದ ದಿ. ನಾರಾಯಣ ಶೇರುಗಾರ್ ಹಾಗೂ ದಿ. ಜಯಲಕ್ಷ್ಮೀ ಅವರ ಪುತ್ರರಾದ ರಾಘವೇಂದ್ರ ಅವರು ಪ್ರಸ್ತುತ ಮಡದಿ ಶ್ರೀನೇತ್ರಾ ಹಾಗೂ ಇಬ್ಬರ ಮಕ್ಕಳೊಂದಿಗೆ ಬೆಂಗಳೂರಿನಲ್ಲಿಯೇ ವಾಸವಾಗಿದ್ದಾರೆ. ಇದನ್ನೂ ಓದಿ ► ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ. ಮೂಲತಃ ಬೈಂದೂರು ತಾಲೂಕು ಬಿಜೂರಿನವರಾದ ಶಂಕರ ಪೂಜಾರಿ ಅವರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ್ದು, ಓಟ, ರಿಲೇ ಮೊದಲಾದ ವಿಭಾಗದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಕವೂ ಭಾಗವಹಿಸಿದ್ದಾರೆ. 2014ರಲ್ಲಿ ನಡೆದ 26ನೇ ಮಲೇಷಿಯಾ ಅಥ್ಲೆಟಿಕ್ ಚಾಂಪಿಯನ್’ಶಿಪ್’ನಲ್ಲಿ 2 ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆದ್ದಿದ್ದರು. ಇತ್ತಿಚಿಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟ್ ಸ್ಪೋರ್ಟ್ಸ್ 2021 ಕ್ರೀಡಾಕೂಟ 100 ಹಾಗೂ 200 ಮೀಟರ್ ಓಟದ ಸ್ವರ್ಧೆಯಲ್ಲಿ ಅವರು ಬೆಳ್ಳಿಯ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಶಂಕರ ಪೂಜಾರಿ ಅವರು ಪ್ರಸ್ತುತ ಅವರು ಯಡ್ತಾಡಿ ಸೈಬ್ರಕಟ್ಟೆಯಲ್ಲಿ ನೆಲೆಸಿದ್ದಾರೆ. ಇದನ್ನೂ ಓದಿ ► ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾದ ಲೋಕಾಯುಕ್ತ ಇನ್ಸ್‌ಪೆಕ್ಟರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಸಿಕೆಯಿಂದ ಮಾತ್ರ ಕೊರೊನಾ ಮಣಿಸಲು ಸಾಧ್ಯವಾಗುವುದರಿಂದ ಎಲ್ಲರೂ ತಮ್ಮ ಸರತಿ ಬಂದಾಗ ತಪ್ಪದೆ ಲಸಿಕೆ ತೆಗೆದುಕೊಳ್ಳಬೇಕು ಎಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಹೇಳಿದರು. ಮರವಂತೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಶೇ 25 ಮೀಸಲು ನಿಧಿಯ ಸೌಲಭ್ಯ ವಿತರಣೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಎರಡನೆ ಬಾರಿ ಕಾಣಿಸಿಕೊಂಡಿರುವುದರಿಂದ ಎಲ್ಲರೂ ಸರ್ಕಾರ ವಿಧಿಸಿದ ನಿರ್ಬಂಧಗಳನ್ನು ತಪ್ಪದೆ ಪಾಲಿಸಬೇಕು. ಲಸಿಕೆ ಪಡೆದವರು ಸಂಪೂರ್ಣ ಸುರಕ್ಷತಾ ಭಾವ ತಾಳಬಾರದು. ಎಲ್ಲರಂತೆ ಅವರೂ ಕೊರೊನಾ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದರು. ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆ ವಹಿಸಿದ್ದರು. ರೂ ೫ಲಕ್ಷಕ್ಕಿಂತ ಅಧಿಕ ಮೀಸಲು ನಿಧಿಯಿಂದ ಆಯ್ದ ಅರ್ಹ ಫಲಾನುಭವಿಗಳಿಗೆ ಲ್ಯಾಪ್‌ಟಾಪ್, ಶೈಕ್ಷಣಿಕ ಪ್ರೋತ್ಸಾಹಧನ, ವೈದ್ಯಕೀಯ ವೆಚ್ಚ, ಹೊಲಿಗೆ ಯಂತ್ರ. ಗಾಲಿಕುರ್ಚಿ, ಕ್ರೀಡಾ ಉಪಕರಣ, ಕುಲಕಸುಬು ಬೆಂಬಲ ಸಹಾಯಧನ, ಮೂಲಭೂತ ಸೌಲಭ್ಯ ವಿತರಿಸಲಾಯಿತು. ಉಪಾಧ್ಯಕ್ಷ ಲೋಕೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೆಳೆಯರ ಬಳಗ ಶ್ರೀ ಆನಗಳ್ಳಿ ಇದರ ವಾರ್ಷಿಕೋತ್ಸವ ಸಮಾರಂಭವು ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಕೊರೊನ ವಾರಿಯರ್ಸ್ ಆದ ಕುಂದಾಪುರ ಸರಕಾರಿ ಆಸ್ಪತ್ರೆ ವೈದ್ಯರಾದ ಡಾ. ನಾಗೇಶ್, ಆಶಾ ಕಾರ್ಯಕರ್ತರಾದ ನಾಗರತ್ನ, ಫಿಲೋಮಿನ ಡಿ’ಸೋಜಾ, ಪೊಲೀಸ್ ಇಲಾಖೆಯ ರೊನಾಲ್ಡ್ ಡಿ’ಸೋಜಾ, ರಕ್ತದಾನಿ ಸತೀಶ್ ಸಾಲಿಯಾನ್ ಇವರನ್ನು ಸನ್ಮಾನಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ರವಿ ಬಿ ನಾಯ್ಕ್ ಆನಗಳ್ಳಿ, ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸುರೇಶ ಆರ್ ನಾಯ್ಕ್, ಸಂಸ್ಥೆಯ ಹಿರಿಯರಾದ ಮಂಜುನಾಥ್ ಹೆಬ್ಬಾರ್, ರಾಮಚಂದ್ರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಸಹಕಾರಿ ಸಂಘಗಳ ಮೈಸೂರು ವಿಭಾಗದ ಜಂಟಿ ನಿಬಂಧಕರಾದ ಪ್ರಕಾಶ ರಾವ್ ಭೇಟಿ ನೀಡಿದರು. ಸಂಘದ ವ್ಯವಹಾರಗಳನ್ನು ಪರಿಶೀಲಿಸಿ ಸಂಘದ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ., ಸಂಘದ ಉಪಾಧ್ಯಕ್ಷ ಎಂ. ವಿನಾಯಕ ರಾವ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ 2020-21ನೇ ಸಾಲಿನ ವರ್ಗ 1ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಶೇ.25ರ ಅನುದಾನದಲ್ಲಿ ವಿದ್ಯಾರ್ಥಿ ವೇತನ ವೈದ್ಯಕೀಯ ವೆಚ್ಚ ಮತ್ತು ಪುಸ್ತಕ ಇಡುವ ಕಪಾಟು ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಗೀತಾ ಉಪಾಧ್ಯಕ್ಷರಾದ ಶೇಖರ ಖಾರ್ವಿ, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿ, ದ್ವೀತಿಯ ದರ್ಜೆ ಲೆಕ್ಕ ಸಹಾಯಕರು, ಸಿಬ್ಬಂದಿ ವರ್ಗ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
