ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಸಮುದ್ರ ಹಾಗೂ ನದಿ ವ್ಯಾಪ್ತಿಯಲ್ಲಿನ ಹಿನ್ನೀರಿನ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಣೆಗಾಗಿ ತೇಲುವ ರೆಸ್ಟೋರೆಂಟ್ಗಳನ್ನು ಅಭಿವೃದ್ಧಿಪಡಿಸಬಹುದಾಗಿದ್ದು, ಈ ಕುರಿತಂತೆ ಖಾಸಗಿ ಸಂಸ್ಥೆ/ವ್ಯಕ್ತಿಗಳಿಂದ ಆಸಕ್ತಿ ವ್ಯಕ್ತಪಡಿಸುವ ಕುರಿತು ಅರ್ಜಿ ಆಹ್ವಾನಿಸಿ, ನಂತರ ಟೆಂಡರ್ ಕರೆಯುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಸಾಕಷ್ಟು ಅವಕಾಶಗಳಿದ್ದು, ಪಡುಬಿದ್ರೆಯ ನಂತರ ಕುಂದಾಪುರದ ಕೋಡಿ ಬೀಚ್ನ್ನು ಬ್ಲೂಫ್ಲಾಯಗ್ ಮಾನ್ಯತೆ ಪಡೆಯುವ ಕುರಿತಂತೆ ಅಭಿವೃದ್ಧಿ ಪಡಿಸಲು ಪ್ರಾಥಮಿಕ ಸರ್ವೆ ನಡೆಸಲಾಗಿದೆ. ಪಡುವರಿ ಬೀಚ್ನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ತಯಾರಿಸಲಾಗುತ್ತಿದೆ. ಒತ್ತಿನೆಣೆಯಲ್ಲಿ ಟ್ರೀಪಾರ್ಕ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಸೌಲಭ್ಯಗಳುಳ್ಳ ಟೂರಿಸಂ ಹಬ್ ಮಾಡಲು ಮಾಸ್ಟರ್ ಪ್ಲಾನ್ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲಾ ಬೀಚ್ಗಳು ತಮ್ಮದೇ ಆದಾಯದಿಂದ, ಬೀಚ್ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ, ಆರ್ಥಿಕವಾಗಿ ಸಶಕ್ತ ಬೀಚ್ಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಹಾರಾಷ್ಟ್ರದ ಸೊಲ್ಲಾಪುರದಿಂದ ಕಾಸರಗೋಡಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾರಿಯನ್ನು ಶುಕ್ರವಾರ ಬೆಳಗಿನ ಜಾವ ತ್ರಾಸಿ ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದ ಪೊಲೀಸರ ತಂಡ 16 ಜಾನುವಾರುಗಳನ್ನು ರಕ್ಷಿಸಿ ವಾಹನದಲ್ಲಿದ್ದ ಹಾಸನದ ನಜರುಲ್ಲಾ (43) ಹಾಗೂ ಮೈಸೂರು ಮೂಲದ ರಾಘವೇಂದ್ರ(25) ಎನ್ನುವವರನ್ನು ವಶಕ್ಕ ಪಡೆದಿದ್ದಾರೆ. ತ್ರಾಸಿ ಜಂಕ್ಷನ್ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭ ಮಹಾರಾಷ್ಟ್ರ ಕೊಲ್ಲಾಪುರದಿಂದ ಮಂಗಳೂರಿಗೆ ಲಾರಿಯಲ್ಲಿ ಸಾಗಿಸುತ್ತಿದ್ದ 18 ಎತ್ತುಗಳನ್ನು ಕೊಂಡೊಯ್ಯುತ್ತಿರುವುದು ಗಮನಕ್ಕೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರನನ್ನು ವಶಕ್ಕೆ ಪಡೆದು ವಾಹನವನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ. ಲಾರಿಯಲ್ಲಿದ್ದ ಎತ್ತುಗಳಲ್ಲಿ ಎರಡು ಎತ್ತುಗಳು ಮೃತಪಟ್ಟಿವೆ. 16 ಗೋವುಗಳನ್ನು ರಕ್ಷಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ತಪಾಸಣೆ ನಡೆಸಿದ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ ಹಾಗೂ ಬೈಂದೂರು ಸರ್ಕಲ್ ಇನಸ್ಪೆಕ್ಟರ್ ಸಂತೋಷ ಕಾಯ್ಕಿಣಿ ಹಾಗೂ ಸಿಬ್ಬಂದಿಗಳ ತಂಡದ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ ಮತ್ತು ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಹಾಗೂ ಲಯನ್ಸ್ ಕ್ಲಬ್, ಕುಂದಾಪುರದ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಜರುಗಿತು. ಶಿಬಿರದಲ್ಲಿ ಸುಮಾರು124 ಯುನಿಟ್ಗಳಷ್ಟು ರಕ್ತವನ್ನು ರಕ್ತದಾನಿಗಳಿಂದ ಸಂಗ್ರಹಿಸಲಾಯಿತು. ಇದೇ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಡಿಸ್ಟ್ರಿಕ್ ಗವರ್ನರ್ ಲಯನ್ ಎಮ್. ಎಮ್. ಹೆಗ್ಡೆ, ಅವರ ಪತ್ನಿ ಸಂಧ್ಯಾ ಹೆಗ್ಡೆ, ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಚಂದ್ರಶೇಖರ್ ಕೆ., ಕಾರ್ಯದರ್ಶಿಗಳಾದ ರಾಜೇಂದ್ರ, ಖಜಾಂಚಿ ಕಿರಣ್ ಕುಮಾರ್ ಮತ್ತು ಸದಸ್ಯರು ಹಾಗೂ ಕುಂದಾಪುರ ರೆಡ್ಕ್ರಾಸ್ ಘಟಕದ ಚೇರ್ಮನ್ ಜಯಕರ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕ್ರಮ ಅಧಿಕಾರಿ ಸತ್ಯನಾರಾಯಣ ಪುರಾಣಿಕ್, ಜನೌಷಧಿ ಉಸ್ತುವಾರಿ ಗಣೇಶ್ ಆಚಾರ್, ಕಾರ್ಯದರ್ಶಿ ಸೀತಾರಾಮ್ ಶೆಟ್ಟಿ, ಡಾ. ಸೋನಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಅಂಚೆ ಇಲಾಖೆಯು ನೀಡುವ ರಾಷ್ಟ್ರ ಪ್ರಶಸ್ತಿಯನ್ನು ಬೈಂದೂರು ಅಂಚೆ ಕಛೇರಿಯಲ್ಲಿ ಅಂಚೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಂದ್ರ ಡಿ. ಅವರು ಪಡೆದುಕೊಂಡಿದ್ದಾರೆ. ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಜೀವ ವಿಮಾ ವಿಭಾಗದಲ್ಲಿ 2019-20ನೇ ಸಾಲಿಗೆ ಸಂಬಂಧಿಸಿದಂತೆ ರಾಷ್ಟ್ರಮಟ್ಟದಲ್ಲಿ ಅತಿ ಹೆಚ್ಚಿನ ವಹಿವಾಟನ್ನು ಮಾಡಿಸಿರುವ ಸುರೇಂದ್ರ ಅವರಿಗೆ ಭಾರತೀಯ ಅಂಚೆ ಇಲಾಖೆಯಿಂದ ಬೆಂಗಳೂರಿನ ಜನರಲ್ ಪೋಸ್ಟ್ ಆಫೀಸಿನಲ್ಲಿರುವ ಮೇಘಧೂತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯ ಜೊತೆಗೆ ನಗದು ಬಹುಮಾನವನ್ನು ನೀಡಿ ಗೌರವಿಸಲಾಗಿದೆ. ಅವರು ತಮ್ಮ ಹನ್ನೇರಡು ವರ್ಷದ ಸೇವಾ ಅವಧಿಯಲ್ಲಿ ಏಳು ಬಾರಿ ವಿಭಾಗಿಯ ಮಟ್ಟದ ಮತ್ತು ಮೂರು ಬಾರಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸಮಾರಂಭದಲ್ಲಿ ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್, ಡೈರೆಕ್ಟರ್ ಆಫ್ ಪೋಸ್ಟಲ್ ಸರ್ವಿಸ್ ಮಹೇಂದ್ರ ಗಜ್ಭಾಯ್, ಹಾಗೂ ಕರ್ನಾಟಕ ವೃತ್ತದ ಇಲಾಖೆಯ ಮೇಲಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಸ್ನಾತಕೋತ್ತರ ಕಾಲೇಜಿನ ಮನೋವಿಜ್ಞಾನ ವಿಭಾಗದ ವಿದ್ಯಾರ್ಥಿ ಸಂಘ ‘ತನು – ಮನ’ದ 2021ರ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಕುರಿಯನ್, ಉತ್ತಮ ನಡವಳಿಕೆ ನಮ್ಮ ಅಸ್ತಿತ್ವವನ್ನು ರೂಪಿಸುತ್ತದೆ, ನಾವು ಮಾಡುವ ಕಾರ್ಯಗಳೇ ನಮ್ಮ ಅಸ್ತಿತ್ವ ಎಂದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ‘ಮನೋವಿಜ್ಞಾನದ ವಿಚಾರಗಳನ್ನು ಅರ್ಥೈಸಿಕೊಳ್ಳುವುದು ಸವಾಲಿನ ಕೆಲಸ ಅದರಲ್ಲೂ ಅಸ್ತಿತ್ವವನ್ನು ರೂಪಿಸಿಕೊಳ್ಳಬೇಕಾದರೆ ಹವ್ಯಾಸಗಳನ್ನು ಉದ್ಯೋಗವನ್ನಾಗಿ ಪರಿವರ್ತಿಸಬೇಕು’ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಘದ ನೂತನ ಸದಸ್ಯರಿಗೆ ಪದಗ್ರಹಣ ಮಾಡಿದರು. ಸಂಘದ ಅಧ್ಯಕ್ಷೆ ವೈಶಾಲಿ ಹೆಗ್ಡೆ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿಭಾಗದ ಸಂಯೋಜಕರಾದ ಡಾ. ಆಡ್ರಿ ಪಿಂಟೋ, ಉಪನ್ಯಾಸಕರಾದ ರಶ್ಮಿ ,ಮೇಘಾ ಮತ್ತು ಸಾರ್ಥಕ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರುಕ್ಸಾನ ಸ್ವಾಗತಿಸಿದರು. ಶೀಬಾ ವಂದಿಸಿದರು ಹಾಗೂ ಜೆಮ್ಶೆರಾ ಸುಲ್ತಾನ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನಗರದ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವಾಗ ಪಾರ್ಕಿಂಗ್ಗೆ ಜಾಗ ಮೀಸಲಿಟ್ಟು, ನಿರ್ಮಾಣದ ನಂತರ ಪಾರ್ಕಿಂಗ್ಗೆ ಜಾಗ ಬಿಡದೇ ಆ ಸ್ಥಳವನ್ನು ಅತಿಕ್ರಮಿಸಿರುವವರ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರದಲ್ಲಿ ಪಾರ್ಕಿಂಗ್ ಸಮಸ್ಯೆಯಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಮತ್ತು ವಾಹನಗಳ ಪಾರ್ಕಿಂಗ್ಗೆ ತೀವ್ರ ಸಮಸ್ಯೆಯಾಗುತ್ತಿದ್ದು, ವಾಣಿಜ್ಯ ಕಟ್ಟಡಗಳು ಮತ್ತು ವಸತಿ ಸಮುಚ್ಛಯಗಳನ್ನು ನಿರ್ಮಿಸುವಾಗ, ಪಾರ್ಕಿಂಗ್ಗೆ ಜಾಗ ಮೀಸಲಿಟ್ಟು, ನಿರ್ಮಾಣದ ನಂತರ ಆ ಸ್ಥಳವನ್ನು ಅತಿಕ್ರಮಿಸಿ, ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಿಸಿರುವ ಸಂಬಂದಪಟ್ಟ ಮಾಲೀಕರಿಗೆ 15 ದಿನದಲ್ಲಿ ತೆರವುಗೊಳಿಸುವ ಕುರಿತು ನೊಟೀಸ್ ನೀಡಿ, ಅತಿಕ್ರಮಣ ತೆರವು ಆಗದಿದಲ್ಲಿ ಸಂಬಂದಪಟ್ಟ ವಾಣಿಜ್ಯ ಸಂಸ್ಥೆಯ ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವುದು ಸೇರಿದಂತೆ ಅತಿಕ್ರಮಣ ಪ್ರದೇಶವನ್ನು ನಗರಸಭೆ ವತಿಯಿಂದ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚ್ನಲ್ಲಿ ವಾರ್ಷಿಕ ಹಬ್ಬ ತೆರಾಲಿ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಮುಖ್ಯ ಧರ್ಮಗುರುಗಳಾಗಿ ಮಾತನಾಡಿದ ಪಾಂಗಾಳ ಚರ್ಚಿನ ಸಹಾಯಕ ಧರ್ಮಗುರು ರೆ. ಫಾ ರೋಶನ್ ಡಿ ಕುನ್ನಾ, ಈ ಸಮಾಜದಲ್ಲಿ ನಾವೆಲ್ಲರೂ ಸಹೋದರ ಸಹೋದರಿಯರು ಎಂದು ಹೇಳಿದರು. ಈ ಸಂದರ್ಭದಲ್ಲಿ ಕುಂದಾಪುರ ವಲಯ ಧರ್ಮಗುರು ರೆ. ಫಾ. ಸ್ಟ್ಯಾನಿ ತ್ರಾವ್ರೂ, ಗಂಗೊಳ್ಳಿಯ ರೆ. ಫಾ. ಆಲ್ಪರ್ಟ್ ಕ್ರಾಸ್ತಾ, ರೆ. ಫಾ ಚಾರ್ಲ್ಸ್ ನೊರೆನ್ಹೆ, ಮುಂತಾದವರು ಉಪಸ್ಥಿತರಿದ್ದರು. ಬೈಂದೂರು ಚರ್ಚಿನ ಧರ್ಮಗುರು ರೆ. ಫಾ ವಿನ್ಸೆಂಟ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೊಶ ಆಶ್ರಯದಲ್ಲಿ ರಾಮಕೃಷ್ಣ ಮಿಶನ್ ಮಂಗಳೂರು ಇವರ ಸಹಯೋಗದಲ್ಲಿ ವಿವೇಕಾನಂದ ಮತ್ತು ಯುವಜನತೆ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಾಜಿ ಸೈನಿಕ ಗೋಪಿನಾಥ್ ರಾವ್ ಮಾತನಾಡಿ, ನಮ್ಮ ಬದುಕು ನಾವು ಏಣಿಸಿದಂತೆ ಆಗುತ್ತದೆ, ವಿವೇಕಾನಂದರ ಆಲೋಚನೆಗಳು ಪ್ರತಿಯೊಬ್ಬರ ಬದುಕಿನುದ್ದಕ್ಕೂ ಆದರ್ಶ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಲು ನೆರವಾಗುತ್ತದೆ. ಅಲ್ಲದೇ ನಮ್ಮ ಯಶಸ್ವಿ ಬದುಕಿನ ನೆಲೆಗಳು ನಾವೆ ಎಣಿಸಿದಂತೆ ಆಗುತ್ತದೆ. ನಾವು ಒಳ್ಳೆಯ ದಾರಿಯನ್ನೇ ಕಂಡುಕೊಂಡರೆ ಒಳ್ಳೆಯ ದಾರಿಗಳೆ ಸಿಗುತ್ತದೆ. ಹಾಗೆಯೇ ಒಳ್ಳೆಯ ಯಶಸ್ಸು ಸಿಗುತ್ತದೆ. ನಾವು ದುರ್ಬಲರೆಂದು ಭಾವಿಸಿದರೆ ದುರ್ಬಲತೆ ನಮ್ಮನ್ನು ಆವರಿಸುತ್ತದೆ. ಆದರೆ ಸಬಲತೆಯನ್ನು ಸ್ವೀಕರಿಸಿ ಅಚಲ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ತಾನಾಗೆ ನಮ್ಮೊಳಗಾಗುತ್ತದೆ ಎಂದು ತಿಳಿಸಿದರಲ್ಲದೇ ಸೈನ್ಯದ ಕೆಲವು ಉದಾಹರಣೆಗಳನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಪಿ. ನಾರಾಯಣ ಶೆಟ್ಟಿ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಪೆಟ್ರೋಲ್ ಬಂಕ್ ಸಮೀಪದ ದೀಪಾ ಕಾಂಪ್ಲೆಕ್ಸ್ನ ಮೊದಲನೆ ಮಹಡಿಯಲ್ಲಿ ಫೆ. 17ರ ಬುಧವಾರ ‘ಸ್ಪೀಡ್ ಮೊಬೈಲ್’ ಮಳಿಗೆ ಶುಭಾರಂಭಗೊಳ್ಳಲಿದೆ. ಸ್ಪೀಡ್ ಮೊಬೈಲ್ ಮಳಿಗೆಯು ಉಡುಪಿ ಜಿಲ್ಲೆಯಲ್ಲಿ ಕಳೆದ 7 ವರ್ಷಗಳಿಂದ ಮೊಬೈಲ್ ಮತ್ತು ಮೊಬೈಲ್ ಬಿಡಿಭಾಗಗಳ ಮಾರಾಟದಲ್ಲಿ ಉತ್ಕೃಷ್ಟ ಹಾಗೂ ತ್ವರಿತ ಸೇವೆ, ಉತ್ತಮ ಗುಣಮಟ್ಟ, ಸ್ಪರ್ಧಾತ್ಮಕ ಬೆಲೆ ನೀಡಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರರಾಗಿದೆ. ಕುಂದಾಪುರದಲ್ಲಿ ಮೂರು ಶಾಖೆಗಳು, ಸಾಲಿಗ್ರಾಮ ಉಡುಪಿ, ಗಂಗೊಳ್ಳಿ, ನಾವುಂದ, ತೀರ್ಥಹಳ್ಳಿಯಲ್ಲಿ ಶಾಖೆಗಳನ್ನು ಹೊಂದಿರುವ ಸಂಸ್ಥೆಯು ಇದೀಗ ಬೈಂದೂರಿನಲ್ಲಿ ನೂತನ ಶಾಖೆಯನ್ನು ತೆರೆಯುತ್ತಿದೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಿಡಬ್ಲ್ಯು ಪ್ರಥಮ ದರ್ಜೆ ಗುತ್ತಿಗೆದಾರರು ಹಾಗೂ ಕಟ್ಟಡ ಮಾಲೀಕರಾದ ಎನ್. ಜಗನ್ನಾಥ್ ಶೆಟ್ಟಿ, ಬೈಂದೂರು ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷರಾದ ಎಮ್. ಗೋವಿಂದ, ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಎ. ಕಾಯ್ಕಿಣಿ, ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾದ ಗೋಪಾಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನೇತೃತ್ವದಲ್ಲಿ ಸುಗ್ಗಿ – ಹುಗ್ಗಿ ಜಾನಪದ ಉತ್ಸವ – 2021 ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಎದುರಿನ ವೇದಿಕೆಯಲ್ಲಿ ಫೆ.13ರ ಸಂಜೆ 5.30ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರಲಿದ್ದು, ಕಾರ್ಯಕ್ರದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯಸಭೆ ಸಂಸದರಾದ ಓಸ್ಕರ್ ಫೆರ್ನಾಂಡಿಸ್, ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ. ರಾಘವೆಂದ್ರ, ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಚಂದ್ರ ಶೆಟ್ಟಿ, ಆಯನೂರು ಮಂಜುನಾಥ್, ಎಲ್. ಎಸ್. ಭೋಜೇಗೌಡ, ಡಾ. ತೇಜಸ್ವಿನಿ ಗೌಡ, ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಂಕರ ಪೂಜಾರಿ ಹಾಗೂ…
