ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳಿಗೆ ವೇಗ ನೀಡಿ ಅವಧಿಯೊಳಗಡೆ ಪೂರ್ಣಗೊಳಿಸಬೇಕು. ಪಡುಬಿದ್ರಿ ರಸ್ತೆಕಾಮಗಾರಿ ಮತ್ತು ಕುಂದಾಪುರದ ಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್ 31ರ ದಿನ ನಿಗದಿಪಡಿಸಿದ್ದು, ಹೇಳಿದ ದಿನಾಂಕದಂದು ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ ಎಂದು ಉಡುಪಿ ಜಿಲ್ಲಾ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಜಿಲ್ಲಾ ಪಂಚಾಯತ್ನ ವಿ.ಎಸ್ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಡ್ಡಿಯಾಗುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಯುದ್ದೋಪಾದಿಯಲ್ಲಿ ಕೆಲಸ ಮಾಡಿ, ಮಳೆಗಾಲಕ್ಕೂ ಮೊದಲೆ ಹೆದ್ದಾರಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಏಪ್ರಿಲ್ ಅಂತ್ಯದೊಳಗೆ ಪಡುಬಿದ್ರಿ ಮತ್ತುಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ಹೇಳಿದರು. ಕಾಮಗಾರಿಗಳಲ್ಲಿ ವಿಳಂಬ ತೋರುವ ಗುತ್ತಿಗೆ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸಂಸದೆ ಅಧಿಕಾರಿಗಳಿಗೆ ಸೂಚಿಸಿದರು. ಅಲೆವೂರಿನಲ್ಲಿ ಕೇಂದ್ರೀಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಹಾಲಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ಈಶ್ವರ ಹಕ್ಲತೋಡು ಆಯ್ಕೆಗೊಂಡರು. ಬುಧವಾರ ಸಂಘದ ಮುಖ್ಯ ಕಛೇರಿಯಲ್ಲಿ ಜರುಗಿದ ಆಯ್ಕೆ ಪ್ರಕ್ರಿಯೆಯಲ್ಲಿ ಇಬ್ಬರೂ ಅವಿರೋಧವಾಗಿ ಚುನಾಯಿತರಾದರು. ಕೃಷಿ ಇಲಾಖೆಯ ಅಧಿಕಾರಿ ಶಂಕರ ಶೇರ್ವೆಗಾರ್ ಚುನಾವಣಾಧಿಕಾರಿ ಆಗಿದ್ದರು. ಈ ಸಂದರ್ಭ ನಿರ್ದೇಶಕರಾದ ಗುರುರಾಜ ಹೆಬ್ಬಾರ್, ನಾಗರಾಜ ಖಾರ್ವಿ, ಮಂಜು ದೇವಾಡಿಗ, ಮೋಹನ ಪೂಜಾರಿ, ರಘುರಾಮ ಶೆಟ್ಟಿ, ಸುರೇಶ ಶೆಟ್ಟಿ, ದಿನಿತಾ ಶೆಟ್ಟಿ, ಜಲಜಾಕ್ಷಿ, ಭರತ ದೇವಾಡಿಗ, ವೀರೇಂದ್ರ ಶೆಟ್ಟಿ, ಹೂವ ನಾಯ್ಕ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ವಿಠಲ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ ಪೈ ಇದ್ದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ನಿರ್ದೇಶಕರು ಮತ್ತು ಸಿಬ್ಬಂದಿ ಅಭಿನಂದಿಸಿದರು. ರೈತರ ಸೇವೆಯೇ ಪ್ರಥಮ ಆದ್ಯತೆ: ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ಪ್ರಕಾಶ್ಚಂದ್ರ ಶೆಟ್ಟಿ ಇಪ್ಪತ್ತೆರಡು ವರ್ಷಗಳಿಂದ ಅಧ್ಯಕ್ಷನಾಗಿದ್ದೇನೆ. ಈ ಬಾರಿ ಶೇ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಟಿ. ನಾರಾಯಣ ಹೆಗ್ಡೆ ಅವಿರೋಧವಾಗಿ ಮೂರನೇ ಭಾರಿಗೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ನಿರ್ದೇಶಕರುಗಳಾಗಿ ವೆಂಕ್ಟ ಪೂಜಾರಿ, ಕೃಷ್ಣ ದೇವಾಡಿಗ, ಗಿರೀಶ್ ಮೇಸ್ತ, ಚಿಕ್ಕು ಪೂಜಾರಿ, ವಸಂತಕುಮಾರ್ ಶೆಟ್ಟಿ, ನಾಗರಾಜ ಶೆಟ್ಟಿ, ಡಿ. ಸದಾಶಿವ ಶೇರುಗಾರ್, ಕೆ. ಬಾಬು ಶೆಟ್ಟಿ, ಟಿ. ಕೃಷ್ಣ ನಾಯ್ಕ್, ಶಂಕರ ನಾಯ್ಕ್, ಜ್ಯೋತಿ ಶೇರುಗಾರ್, ರಜನಿ ಶ್ಯಾನುಭಾಗ್ ಈ ಮೊದಲು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಅವಿರೋಧವಾಗಿ ನಡೆಸಿದರು. ಬಳಿಕ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಮಾತನಾಡಿ ಸಂಸ್ಥೆಯಲ್ಲಿ ಹನ್ನೊಂದು ಸಾವಿರಕ್ಕೂ ಅಧಿಕ ಸದಸ್ಯರಿದ್ದು, ಉತ್ತಮ ಸೇವೆ ನೀಡುತ್ತಾ ಬರಲಾಗಿದೆ. ಇನ್ನು ಮುಂದೆಯೂ ಹಲವಾರು ಜವಾಬ್ದಾರಿಗಳಿದ್ದು, ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನೆರವೇರಿಸುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭ ಚುನಾವಣಾಧಿಕಾರಿ ವೇಣುಗೋಪಾಲ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ವಿಠಲ ಗೌಡ, ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಾಂತಾನಂದ ಶೆಟ್ಟಿ ಸ್ವಾಗತಿಸಿ, ಶಾಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಚಾರಿ ಪೋಲೀಸ್ ಠಾಣೆ ಮತ್ತು ರೋಟರಿ ಕ್ಲಬ್ ಮಿಡ್ಟೌನ್ ಕುಂದಾಪುರ ಇವರ ಸಹಯೋಗದೊಂದಿಗೆ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷ್ಷತಾ ಮಾಹಿತಿ ಶಿಬಿರವನ್ನು ಏರ್ಪಡಿಸಲಾಯಿತು. ಟ್ರಾಫಿಕ್ ಎಎಸ್ಐ ಪುಷ್ಪಾ ಅವರು ರಸ್ತೆ ಸಂಚಾರದ ವೇಳೆಯಲ್ಲಿ ಅನುಸರಿಸಬೇಕಾದ ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಅವಶ್ಯಕ ಮಾಹಿತಿಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ವಲಯ 1 ರ ರೋಟರಿ ಸಹಾಯಕ ಗವರ್ನರ್ ರವಿರಾಜ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಿ ಕ್ಲಬ್ ಮಿಡ್ಟೌನ್ ಕುಂದಾಪುರ ಇದರ ಅದ್ಯಕ್ಷರಾದ ಶಶಿಧರ ಶೆಟ್ಟಿ, ಕಾರ್ಯದರ್ಶಿ ರಂಜಿತ್ ಕುಮಾರ್ ಶೆಟ್ಟಿ, ರಸ್ತೆ ಸುರಕ್ಷತಾ ವಿಭಾಗದ ನಿರ್ದೇಶಕರಾದ ನಿರಂಜನ್ ಶೆಟ್ಟಿ, ಕಾಲೇಜಿನ ಪ್ರಾಶುಪಾಲರಾದ ಗಣೇಶ ಮೊಗವೀರ, ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಕೃಷ್ಣ ಅಡಿಗ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷರಾಗಿ ಹಾಲಿ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ನಿರ್ದೇಶಕರುಗಳಾಗಿ ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ವಾಸು ಪೂಜಾರಿ, ರಾಮಕೃಷ್ಣ ಖಾರ್ವಿ, ನಾರಾಯಣ ಶೆಟ್ಟಿ, ಎಂ. ನಾಗಮ್ಮ, ಸರೋಜಾ, ಪ್ರಕಾಶ ದೇವಾಡಿಗ, ರಾಮ ಗಾಂಧಿನಗರ, ಭೋಜ ನಾಯ್ಕ್ ಆಯ್ಕೆಯಾಗಿದ್ದು, ಅವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಸತತ ಹತ್ತನೇ ಭಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಎಸ್. ರಾಜು ಪೂಜಾರಿ ಅವರು ಮಾತನಾಡಿ ಕಳೆದ 25 ವರ್ಷಗಳಲ್ಲಿ ಹಲವರು ಒಗ್ಗಟ್ಟಾಗಿ ಶ್ರಮಿಸಿದ್ದರಿಂದ ಸಂಸ್ಥೆ ಉತ್ತಮ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಭವಿಷ್ಯದಲ್ಲಿಯೂ ಹಲವಾರು ಯೋಜನೆಗಳು ನಮ್ಮ ಮುಂದಿದ್ದು, ಎಲ್ಲಾ ನಿರ್ದೇಶಕರುಗಳ ಸಹಕಾರದೊಂದಿಗೆ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದ ಅವರು ಆಯ್ಕೆಯಾಗುವಲ್ಲಿ ಸಹಕರಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಚುನಾವಣಾ ಅಧಿಕಾರಿಯಾಗಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ, ಜ.26: ದೇಶದಲ್ಲಿ ನೂರ ಮೂವತ್ತು ಕೋಟಿ ಜನಸಂಖ್ಯೆ ಇದ್ದರೂ ಅಬ್ದುಲ್ ಕಲಾಂ ಕಂಡ 2020ಯ ಕನಸನ್ನು ಪೂರ್ಣವಾಗಿ ಸಾಕಾರಗೊಳಿಸಲು ವಿಫಲರಾಗಿದ್ದೇವೆ. ಸಾಧಿಸಬೇಕಾದ ವಿಷಯಗಳು ಇನ್ನು ತುಂಬಾ ಇವೆ. ಭಾರತದಲ್ಲಿ ಪ್ರತಿದಿನವು ಹೊಸ ಹೊಸ ಸಮಸ್ಯೆಗಳು ಎದುರಾಗುತ್ತಿವೆ. ದೇಶದಲ್ಲಿ 40ಕೋಟಿ ಜನರು ತಿನ್ನಲು ಅನ್ನ ಸಿಗದೆ ನರಳುತ್ತಿದ್ದಾರೆ. ನಮ್ಮ ರಕ್ಷಣೆಯಿಂದ ಹಿಡಿದು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವವರೆಗೆ ಪ್ರತೀ ವ್ಯವಸ್ಥೆಯನ್ನು ದೇಶ ಮಾಡಿಕೊಟ್ಟಿದೆ ಹೀಗಿರುವಾಗ ದೇಶ ಚೆನ್ನಾಗಿರಲು ನಾವೇನು ಕೊಡುಗೆ ನೀಡಿದ್ದೇವೆ ಎಂಬುದನ್ನು ಚಿಂತಿಸುವ ಅನಿವಾರ್ಯತೆ ಇದೆ ಎಂದು ಮಾಜಿ ಐಪಿಎಸ್ ಆಫೀಸರ್ ಅಣ್ಣಾಮಲೈ ಹೇಳಿದರು. ಪುತ್ತಿಗೆಯ ವನಜಾಕ್ಷಿ ಕೆ ಶ್ರೀಪತಿ ಭಟ್ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 71ನೇ ಗಣರಾಜ್ಯೋತ್ಸವದ ದ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ’ಗಣರಾಜ್ಯೋತ್ಸವ ಆಚರಿಸುವುದು ನಮ್ಮ ಕರ್ತವ್ಯಗಳನ್ನು ತಿಳಿಯಲು. ದೊಡ್ಡ ಮಟ್ಟಿನ ದೇಶ ಸೇವೆ ಸಾಧ್ಯವಾಗದಿದ್ದರೂ ನಮ್ಮ ಊರಿನಲ್ಲಿ ಪರಿಸರಕ್ಕಾಗಿ ಅಥವಾ ಜನರಿಗಾಗಿ ಮಾಡುವ ಸೇವೆಗಳು ದೇಶಕ್ಕಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಆಡಳಿತ, ಕುಂದಾಪುರ ಪುರಸಭೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ 71ನೇ ಗಣರಾಜ್ಯೋತ್ಸವದ ದ್ವಜಾರೋಹಣವನ್ನು ಕುಂದಾಪುರ ಸಹಾಯಕ ಆಯುಕ್ತ ಕೆ. ರಾಜು ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ನಮ್ಮ ದೇಶದಲ್ಲಿ ಮೂರುವರೆ ಸಾವಿರ ಜಾತಿಗಳಿದ್ದರೂ ಎಲ್ಲಾ ಜಾತಿ-ಧರ್ಮಗಳ ಜನರು ಸಮಾನವಾಗಿ ಬದುಕುವ ಹಕ್ಕನ್ನು ಈ ದೇಶದ ಸಂವಿಧಾನ ನೀಡಿದ್ದು, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳು ನಮ್ಮೊಳಗೆ ಐಕ್ಯತೆ, ಒಗ್ಗಟ್ಟನ್ನು ಬೆಳೆಸಬೇಕು. ನಾವೆಲ್ಲರೂ ತಾಯಿ ಭಾರತಾಂಬೆಯ ಮಕ್ಕಳೆಂಬ ಹೆಮ್ಮೆ ಹೆಚ್ಚಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ತಿಪ್ಪೇಸ್ವಾಮಿ, ಎಎಸ್ಪಿ ಹರಿರಾಮ್ ಶಂಕರ್, ಪುರಸಭೆ ಸದಸ್ಯರಾದ ಶ್ರೀಧರ್ ಶೇರುಗಾರ್, ಪ್ರಭಾಕರ ವಿ, ವೃತ್ತ ನಿರೀಕ್ಷಕ ಗೋಪಿಕೃಷ್ಣ, ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ಅಧಿಕಾರಿ ಕುಸುಮಾಕರ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಪುರಸಭೆ ಮಾಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ರಿ. ಕುಂದಾಪುರ ತಾಲೂಕು ಘಟಕ ಹಾಗೂ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ತಾಲೂಕು ಘಟಕದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ರಾಜ್ಯ ಕಾರ್ಯದರ್ಶಿ ರಘುನಂದನ್ ಭಟ್ ಮಾತನಾಡಿ ಭಾರತ ಜಗತ್ತಿಗೆ ಎಲ್ಲವನ್ನೂ ನೀಡಿದೆ. ಇಲ್ಲಿನ ಮಣ್ಣಿಗೆ ವಿಶೇಷ ಶಕ್ತಿಯಿದ್ದು, ತಪಸ್ಸಿನಂತೆ ತೊಡಗಿ ರಚಿಸಿದ ಸಾಹಿತ್ಯ ಬಹುಕಾಲ ಉಳಿಯುತ್ತದೆ. ಅದಕ್ಕೆ ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳೇ ಸಾಕ್ಷಿ. ಯಾವುದೇ ತಾಂತ್ರಿಕ ಸೌಕಲ್ಯಗಳಿಲ್ಲದ ಕಾಲದಲ್ಲಿಯೂ ಅದು ಜಗತ್ತನ್ನು ವ್ಯಾಪಿಸಿತ್ತು. ಎಂದರು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ ಮಾತನಾಡಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಎಲ್ಲಾ ಭಾಷೆಗಳನ್ನು ಸಮಾನವಾಗಿ ಕಾಣುವ ಸಂಸ್ಥೆ. ಯುವ ಸಮುದಾಯಲ್ಲಿ ಭಾಷೆ, ಸಾಹಿತ್ಯದ ಕುರಿತು ಅಭಿರುಚಿ ಮೂಡಿಸುವ ಸಲುವಾಗಿ ವಿವಿಧ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ…
ಸುನಿಲ್ ಹೆಚ್. ಜಿ., | ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪುರದ ಕೋಡಿ ಕಡಲ ಕಿನಾರೆ ಬಣ್ಣಗಳಿಂದ ಕಳೆಗಟ್ಟಿತ್ತು. ಕಲಾವಿದನ ಕೈಚಳಕ, ಕಸುಬುದಾರನ ಉತ್ಪನ್ನ, ರುಚಿಯಾದ ಖಾದ್ಯ, ವಿಹಾರ – ಅರಿವಿನೊಂದಿಗೆ, ಸಾಂಸ್ಕೃತಿಕ ಲೋಕದ ಅನಾವರಣ. ಅಲ್ಲೊಂದು ವಿಶೇಷ; ಘನ ಉದ್ದೇಶದೊಂದಿಗೆ ಜೊತೆಯಾಗಿತ್ತು. ಇವೆಲ್ಲವೂ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ನೇತೃತ್ವದಲ್ಲಿ ಎಸ್ಎಫ್ಎಲ್ ಇಂಡಿಯಾ, ಗೀತಾನಂದ ಫೌಂಡೇಶನ್ ಮಣೂರು, ಮಾತಾ ಅಮೃತಾನಂದಮಯಿ ಸಂಸ್ಥೆ, ಸಾಧನ ಕಲಾಸಂಗಮ ಕುಂದಾಪುರ, ಎನ್.ಹೆಚ್-66 ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಕ್ಲೀನ್ ಕುಂದಾಪುರ ಪ್ರೊಜೆಕ್ಟ್ ೫೦ನೇ ವಾರ ಪೂರೈಸಿದ ನಿಮಿತ್ತ ಶನಿವಾರ ಕೋಡಿ ಕಡಲ ಕಿನಾರೆಯಲ್ಲಿ ಆಯೋಜಿಸಲಾದ ಪ್ಲಾಸ್ಟಿಕ್ ಮುಕ್ತ ಬೀಚ್ ಉತ್ಸವ ನಿರ್ವಾಣ 2020ರಲ್ಲಿ ಕಂಡ ದೃಶ್ಯಕಾವ್ಯಗಳು. ಅಲ್ಲಿ ಪ್ಲಾಸ್ಟಿಕ್ ಬಳಸದೇ ತಯಾರಿಸಿದ ಡಿಸೈನ್ ಡಿಸೈನ್ನಲ್ಲಿ ಹಾಳೆ ತಟ್ಟೆಗಳು, ಪ್ಲೇಟ್, ಹೂಕುಂಡ, ಪೆನ್, ಪೆನ್ಸಿಲ್, ಮನೆ ಅಲಂಕಾರಿಕಾ ವಸ್ತುಗಳು, ಪರಿಸರ ಸ್ನೇಹಿ ಬ್ಯಾಗ್, ಖಾದಿ ಬಟ್ಟೆಗಳು, ಮೊಬೈಲ್ ಕವರ್, ಪಾಕೇಟ್, ಬೆತ್ತ-ಬಿದಿರಿನಿಂದ ತಯಾರಿಸಿ ವಿವಿಧ ಕರಕುಶಲ ವಸ್ತುಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಛಂದೋಬದ್ಧವಾಗಿ ಬರೆಯುವವರೆ ವಿರಳರಾದ ಈ ಕಾಲಘಟ್ಟದಲ್ಲಿ ನೀತಿಬೋಧೆಯಂತಿರುವ ಸುಮಾರು 250 ಕುಸುಮ ಷಟ್ಪದಿಯ ಪದ್ಯಗಳನ್ನು ಒಳಗೊಂಡ ಪುಸ್ತಕವನ್ನು ಬರೆದಿರುವುದು ನಿಜಕ್ಕೂ ಶ್ಲಾಘನೀಯ ಎಂದು ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಸಂಯೋಜಕರಾದ ಡಾ. ಮಹಾಬಲೇಶ್ವರ ರಾವ್ ಹೇಳಿದರು. ಅವರು ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಾಗರಾಜ ಖಾರ್ವಿ ಅವರು ಬರೆದ ಕಮಲತನಯನ ಷಟ್ಪದಿ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಬೈಂದೂರಿನ ಕ್ಷೇತ್ರ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಪುಸ್ತಕದ ಪರಿಚಯ ಮಾಡಿದರು. ಶಿಕ್ಷಕ, ಯಕ್ಷಗಾನ ಪ್ರಸಂಗಕರ್ತ ಪಿ.ವಿ.ಆನಂದ ಸಾಲಿಗ್ರಾಮ ಆಯ್ದ ಕುಸುಮ ಷಟ್ಪದಿಯ ಪದ್ಯಗಳನ್ನು ಗಮಕ ಮತ್ತು ಯಕ್ಷಗಾನ ಶೈಲಿಯಲ್ಲಿ ಹಾಡಿದರು. ಅನ್ನಪೂರ್ಣ ಬಿ.ಎಂ. ಕವಿ ಪರಿಚಯ ಮಾಡಿದರು. ವಿದ್ಯಾರ್ಥಿನಿ ಅಶ್ವಿನಿ ಶಾಸ್ತ್ರಿ ಸ್ವಾಗತಿಸಿ, ನಾಗರಾಜ ಖಾರ್ವಿ ವಂದಿಸಿದರು. ಅನುಷ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
