ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎನ್ಸಿಸಿ ಭೂದಳ ಹಾಗೂ ಎನ್ಎಸ್ಎಸ್ ಘಟಕವು ಮಂಗಳೂರಿನ ವೆನ್ಲಾಕ್ ಆಸ್ಪçತ್ರೆಯ ರಕ್ತನಿಧಿ ಕೇಂದ್ರ, ಆಳ್ವಾಸ್ ರೋಟರಿ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನ ಕಾಮಾರ್ಸ ಸೆಮಿನಾರ್ ಹಾಲ್ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ ಶರತ್ ಕುಮಾರ್ ರಾವ್ ಜೆ. ಮಾತನಾಡಿ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮನಸ್ಥಿತಿಯುಳ್ಳವರಿಂದಾಗಿ ಸಮಾಜದಲ್ಲಿಂದು ತುರ್ತು ರಕ್ತ ಅನಿವಾರ್ಯವಾದಾಗ ಸೂಕ್ತ ಸಮಯದಲ್ಲಿ ರಕ್ತದ ಪೂರೈಕೆ ಸಾದ್ಯವಾಗುತ್ತಿದೆ. ಇಂತಹವರ ಸಂಖ್ಯೆ ಸಮಾಜದಲ್ಲಿ ದ್ವಿಗುಣವಾಗುತ್ತಾ ಸಾಗಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತಾನಾಡಿ, ಸಮಾಜದಲ್ಲಿ ನಮ್ಮ ಹೆಸರು ಶಾಶ್ವತವಾಗಿ ಉಳಿಯಬೇಕೆಂದರೆ ನಾವು ವಾಸಿಸುವ ಪರಿಸರಕ್ಕೆ ನಾವೆಷ್ಟು ಕೊಡುಗೆ ನೀಡಿದ್ದೇವೆ ಎಂಬುದನ್ನು ಅವಲಂಭಿಸಿರುತ್ತದೆಯೇ ಹೊರತು ವೈಯಕ್ತಿಕ ಲಾಭಕ್ಕಾಗಿ ಮಾಡಿದ ಕೆಲಸಗಳಿಂದಲ್ಲ ಎಂದರು. ಆಳ್ವಾಸ್ ಬೆಸ್ಟ್ ಬ್ಲಡ್ ಡೋನರ್ ಇನ್ಸ್ಟಿಟ್ಯೂಷನ್ :ಕೋವಿಡ್ ಸಂಧರ್ಭದಲ್ಲಿ ಅತೀ ಹೆಚ್ಚು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಫೆ.9ರಂದು ಮುಚ್ಚಿದ್ದ ಪದವಿಪೂರ್ವ, ಪದವಿ ಕಾಲೇಜುಗಳು ಇಂದು ಪುನರಾರಂಭವಾಗಿದ್ದು, ಇತರೆ ವಿದ್ಯಾರ್ಥಿಗಳು ಎಂದಿನಂತೆ ತರಗತಿಗೆ ಹಾಜರಾಗಿದ್ದರೇ, ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಪಟ್ಟು ಹಿಡಿದ ವಿದ್ಯಾರ್ಥಿನಿಯರು ಗೈರು ಹಾಜರಾಗಿದ್ದಾರೆ. ಕುಂದಾಪುರ ಪದವಿ ಪೂರ್ವ ಕಾಲೇಜಿನ 28 ವಿದ್ಯಾರ್ಥಿನಿಯರ ಪೈಕಿ, 2 ವಿದ್ಯಾರ್ಥಿನಿಯರು ಧೀರ್ಘಾವಧಿ ಗೈರಾಗಿದ್ದು, ಓರ್ವ ವಿದ್ಯಾರ್ಥಿನಿ ಎಂದಿನಂತೆ ಕಾಲೇಜಿಗೆ ಹಿಜಾಬ್ ತೆಗೆದು ಹಾಜರಾಗಿದ್ದಾಳೆ. ಉಳಿದ 25 ಮಂದಿ ವಿದ್ಯಾರ್ಥಿನಿಯರು ಗೈರಾಗಿದ್ದಾರೆ. ತಾಲೂಕಿನ ಇತರ ಸರಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿಯೂ ಬಹುಪಾಲು ವಿದ್ಯಾರ್ಥಿನಿಯರು ತರಗತಿಗೆ ಗೈರಾಗಿದ್ದಾರೆ ಎನ್ನಲಾಗಿದೆ. ಕಾಲೇಜು ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಫೆ.16ರಿಂದ 23ರ ತನಕ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಬೀಗು ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು. ಕಾಲೇಜು ಗೇಟಿನ ಬಳಿ ನಿಷೇಧಾಜ್ಞೆ ಜಾರಿಯಾಗಿರುವ ನೋಟಿಸು ಅಂಟಿಸಲಾಗಿತ್ತು. ಉಪನ್ಯಾಸರು ಕಾಲೇಜು ಆವರಣದಲ್ಲಿ ನಿಂತು ಪರಿಶೀಲಿಸುತ್ತಿರುವುದು ಕಂಡುಬಂತು. ಎಎಸ್ಪಿ ಸಿದ್ಧಲಿಂಗಪ್ಪ, ಎಸಿ ರಾಜು ಕಾಲೇಜಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಡಿ.ವೈ.ಎಸ್.ಪಿ ಶ್ರೀಕಾಂತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಕೇವಲ ಓದು ಮತ್ತು ಬರಹಕ್ಕೆ ಸೀಮಿತವಾಗಿರದೆ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಬೇಕು ಎಂದು ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠ ಮ. ನಿ. ಪ್ರ. ಗುರು ಮಹಾಂತ ಸ್ವಾಮೀಜಿ ಹೇಳಿದರು. ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಧರ್ಮದರ್ಶಿ, ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ನಿರ್ಮಾತೃ ದಿ. ವೇದಮೂರ್ತಿ ಹೆಚ್. ರಾಮಚಂದ್ರ ಭಟ್ಟರ ತೃತೀಯ ವರ್ಷದ ಸಂಸ್ಮರಣೆ ಅಂಗವಾಗಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಸೋಮವಾರ ನಡೆದ ಸಂಸ್ಥಾಪಕರ ದಿನಾಚರಣೆ ಹಾಗೂ ಅಪ್ರಮೇಯ ಸ್ಮಾರಕ ಮತ್ತು ಮತಂಗವನ ಉದ್ಯಾನವನ ಉದ್ಘಾಟಿಸಿ ಮಾತನಾಡಿ ಒಳ್ಳೆಯ ಕೆಲಸ ಮಾಡಿದ್ದೇನೆ ಎಂಬ ಭಾವನೆ ಹೊಂದಿರಬಾರದು ಎಂಬ ಬಸವಣ್ಣನವರ ಮಾತನ್ನು ರಾಮಚಂದ್ರ ಭಟ್ಟರು ಜೀವನದಲ್ಲಿ ಅಕ್ಷರಶಃ ಅಳವಡಿಸಿಕೊಂಡಿದ್ದರು. ಸುಜ್ಞಾನವಂತ, ಸದ್ಭಾವಯುತ, ಸಂಸ್ಕಾರಯುತ ಮಕ್ಕಳ ಸಮಾಜಕ್ಕೆ ಕಟ್ಟಿಕೊಟ್ಟಿದ್ದಾರೆ ಎಂದರು. ಅಪ್ರಮೇಯ ಸ್ಮಾರಕ ಉದ್ಘಾಟಿಸಿ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಸಂಚಾಲಕ ಚಂದ್ರಶೇಖರ ಭಟ್ ಮಾತನಾಡಿ, ಮಕ್ಕಳು ಬೆಳೆಯುತ್ತಾ ಹೋದಂತೆ ಅವರ ಆಸೆ-ಆಕಾಂಕ್ಷೆಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜ್ ಪ್ರಾರಂಭದಲ್ಲಿ ಕಟ್ಟಡ ಕಾರ್ಮಿಕರಿಗೆ ಅಂದು ಊಟ-ಚಾ-ತಿಂಡಿ ನೀಡಲು ಸಣ್ಣ ಮಟ್ಟದಲ್ಲಿ ಪ್ರಾರಂಭವಾದ ಅಮ್ಮಾ ಕ್ಯಾಂಟೀನ್ ೬೪ ವರ್ಷಕ್ಕೆ ಕಾಲಿಟ್ಟಿದೆ. ಪತಿ ನಿಧನದ ನಂತರ ಅಮ್ಮಾ ಕ್ಯಾಂಟೇನ್ ಮ ಉಂದುವರಿಸಿಕೊಂಡ ಬಂದ ಪತ್ನಿ ಸುಲೋಚನಮ್ಮಾ (೮೫) ಗ್ರಾಹಕರ ಒತ್ತಾಸೆಗೆ ಒಬ್ಬಂಟಿಯಾಗಿ ಇಂದಿಗೂ ಅದೇ ರೀತಿ ಬೆಳಿಗ್ಗೆ ಇಡ್ಲಿ ವಡೆ ಚಟ್ನಿ ಸಾಂಬಾರ್ ನೀಡುತ್ತಿದ್ದು ಅವರ ಅವಿರತ ಶ್ರಮ ಪರಿಗಣಿಸಿ ಶಂಕರನಾರಾಯಣ ಶ್ರೀ ಪಾರಿಜಾತ ಕಟ್ಟೆ ಫ್ರೆಂಡ್ಸ್ ಮತ್ತು ಊರಿನ ಹತ್ತು ಸಮಸ್ತರು ಪ್ರತಿ ವರುಷದ ತಮ್ಮ ಬಯಲಾಟದ ಸೇವೆಯಲ್ಲಿ ಸೌಕೂರು ಮೇಳದ ವೇದಿಕೆಯಲ್ಲಿ ಭಾನುವಾg ಸಾರ್ವಜನಿಕರು ಸನ್ಮಾನಿಸಿದರು. ಕ್ರೋಡ ಶಂಕರನಾರಾಯಣ ದೇಗುಲದ ಆಡಳಿತ ಮೊಕ್ತೇಸರ ಲಕ್ಷ್ಮೀನಾರಾಯಣ ಉಡುಪ ಸನ್ಮಾನಿಸಿಸಿದರು. ಶಂಕರನಾರಾಯಣ ತಾಲೂಕು ರಚನಾ ಹೋರಾಟ ಸಮಿತಿ ಸಂಚಾಲಕ ಚಿಟ್ಟೆ ರಾಜಗೋಪಾಲ ಹೆಗ್ಡೆ, ಶ್ರೀ ಪಾರಿಜಾತ ಕಟ್ಟೆ ಫ್ರೆಂಡ್ಸ್ ಸದಸ್ಯಋಆದ ಉದಯಚಂದ್ರ ಶೆಟ್ಟಿಗಾರ, ನಾರಾಯಣ ನಾಯ್ಕ್ ಕುಪ್ಪೆಬಚಲು, ಉದಯ ದೇವಾಡಿಗ, ಉಮೇಶ್ ಆಚಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.16: ವಿದ್ಯಾರ್ಥಿಗಳು ಹಿಜಬ್ ಧಾರಣೆ, ಮಾಡುವ ಸಂಬAದ ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವನ್ನು ಜಿಲ್ಲೆಯಲ್ಲಿ ಪಾಲನೆ ಮಾಡುವುದರೊಂದಿಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕುತ್ತು ಬಾರದೇ ಇರುವ ರೀತಿಯಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾದಿಕಾರಿ ಕೂರ್ಮಾರಾವ್ ಎಂ. ಮನವಿ ಮಾಡಿದರು. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ, ಶಾಂತಿ ಸಭೆಯ ಆದ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ವಸ್ತçಸಂಹಿತೆ ಪಾಲನೆ ಸಂಬAದ ವಿವಾದವು ಈಗಾಗಲೇ ನ್ಯಾಯಾಲಯದ ಮುಂದೆ ಇದ್ದು ಕೆಲವೇ ದಿನಗಳಲ್ಲಿ ಪೂರ್ಣ ಪ್ರಮಾಣದ ಆದೇಶ ಬರಲಿದ್ದು, ಪ್ರಸ್ತುತ ನ್ಯಾಯಾಲಯವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಮಧ್ಯಂತರ ಆದೇಶವನ್ನು ನೀಡಿದ್ದು, ಇದನ್ನು ಪಾಲನೆ ಮಾಡುವುದು ಪ್ರತಿಯೊಬ್ಬ ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದರು. ಸಂವಿಧಾನಾತ್ಮಕ ನ್ಯಾಯಾಲಯದಿಂದ ಹೊರಡಿಸಿರುವ ಮಧ್ಯಂತರ ಆಧೇಶವನ್ನು ವಿದ್ಯಾರ್ಥಿಗಳು ಪಾಲನೆ ಮಾಡುವಂತೆ ಪೋಷಕರು, ವಿವಿಧ ಸಂಘಟನೆಗಳ ಮುಖ್ಯಸ್ಥರು, ಧಾರ್ಮಿಕ ಮುಖಂಡರು, ರಾಜಕೀಯ ಪಕ್ಷದ ಮುಖಂಡರುಗಳು ಸೇರಿದಂತೆ ಸಾರ್ವಜನಿಕರು ಮನವೊಲಿಸಬೇಕು ಎಂದರು. ಮಧ್ಯಂತರ ಆದೇಶದಲ್ಲಿ ನ್ಯಾಯಾಲಯವು ಶಾಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಒಂದು ಶತಮಾನದಿಂದ ಊರಿನ ಮಕ್ಕಳಿಗೆ ವಿದ್ಯಾದಾನ ಮಾಡುತ್ತ ಬಂದಿದೆ. ಅಭಿವೃದ್ಧಿ ಸಮಿತಿ, ಹಳೆವಿದ್ಯಾರ್ಥಿ ಸಂಘ ಮತ್ತು ಶಿಕ್ಷಕರ ಸಮನ್ವಯದ ದುಡಿಮೆಯಿಂದ ಈಚಿನ ದಿನಗಳಲ್ಲಿ ವಿದ್ಯಾರ್ಥಿ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಇನ್ನಷ್ಟು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ನೆರೆಯೂರುಗಳ ಮಕ್ಕಳನ್ನೂ ಆಕರ್ಷಿಸುವಂತಾಗಲಿ. ಶಾಲೆಯ ಎಲ್ಲ ಅಗತ್ಯಗಳನ್ನು ಪೂರೈಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿಹೇಳಿದರು. ಶಾಲೆಯಲ್ಲಿ ರೂ ೧೨ ಲಕ್ಷ ವೆಚ್ಚದಲ್ಲಿ ನಿರ್ಮಾಣ ಆಗಲಿರುವ ತರಗತಿ ಕೊಠಡಿ ನಿರ್ಮಾಣ ಕಾಮಗಾರಿಗೆ ಅವರು ಭಾನುವಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ ಸ್ವಾಗತಿಸಿದರು. ಶಾಲೆಯ ಹಿರಿಯ ಹಳೆವಿದ್ಯಾರ್ಥಿ ಎಸ್. ಜನಾರ್ದನ ಮರವಂತೆ ಶಾಲೆಯ ತಕ್ಷಣದ ಅಗತ್ಯಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಮಾಡಿದರು. ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಅನಿತಾ ಆರ್. ಕೆ ವಂದಿಸಿದರು. ಅರ್ಚಕ ಪರಮೇಶ್ವರ ಅಡಿಗ ಭೂಮಿಪೂಜೆ ನೆರವೇರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವಾರಾಧನೆ ಮತ್ತು ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರನ್ನು ಗೌರವಿಸಲಾಯಿತು. ಕಿರಿಮಂಜೇಶ್ವರ ಶುಭದಾ ಆಂಗ್ಲಮಾಧ್ಯಮ ಶಾಲೆಯ ಸ್ಥಾಪಕ ಅಧ್ಯಕ್ಷ ಡಾ. ಎನ್.ಕೆ. ಬಿಲ್ಲವ ಗೌರವಿಸಿ ಮಾತನಾಡಿ “ನಾವುಂದ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಂದರ್ಭದಲ್ಲಿ ಹಲವಾರುಬಾರಿ ಆಗಮಿಸಿ, ವಾಸ್ತುವಿನ್ಯಾಸ, ಪಾರಂಪರಿಕ ವಿಚಾರಗಳ ಕುರಿತು ಸಲಹೆ ನೀಡಿದ್ದನ್ನು ನೆನಪಿಸಿಕೊಂಡು, ಅಮೀನರದು ನಿಜವಾದ ಅರ್ಥದಲ್ಲಿ ಹೋರಾಟದ ಬದುಕು, ಹಲವು ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆ ಬೆರಗು ಹುಟ್ಟಸುವಂತಹದ್ದು, ಮುಂಬೈಯಲ್ಲಿ ನನ್ನ ನಿಕಟವರ್ತಿಗಳಾಗಿದ್ದ ಒಬ್ಬ ಸಾಮಾನ್ಯ ವ್ಯಕ್ತಿ ಶ್ರದ್ಧೆ, ಕುತೂಹಲ,ಆಸಕ್ತಿ, ನಿರಂತರ ಶ್ರಮ ಮತ್ತು ಸಂಸ್ಕೃತಿ ಪ್ರೀತಿಯಿಂದ ಹೇಗೆ ಅ¸Áಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳಬಹುದು ಎಂಬುದಕ್ಕೆ ಬನ್ನಂಜೆ ಬಾಬು ಅಮೀನರ ಜೀವನ ನಮಗೆಲ್ಲ ಮಾದರಿ ಎಂದರು”. ಬಿ.ಎ.ಹಂಝಾ ನಾವುಂದ, ರಮೇಶ್ ಎಮ್. ಹುಬ್ಳಿ ಆಲೂರು, ಆಡಳಿತ ಮಂಡಳಿಯ ಸದಸ್ಯರು,ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆನ್ಲೈನ್ ನ್ಯಾಷನಲ್ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ಶಿಪ್ ಮತ್ತು ಇಂಟರ್ನಾಷನಲ್ ವರ್ಕ್ಶಾಪ್ ನಡೆಸಿದ ಫೈಸ್ಟಾರ್ ನ್ಯಾಷನಲ್ ಯೋಗಾಸನ ಸ್ಟಾರ್ ಪ್ಲೇಯರ್ ಅವಾರ್ಡ್ ಇದರಲ್ಲಿ ಧನ್ವಿ ಮರವಂತೆಗೆ ಪ್ರಥಮ ಸ್ಥಾನ ದೊರೆತಿದೆ. ತ್ರಾಸಿಯ ಡಾನ್ ಬೊಸ್ಕೋ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ಧನ್ವಿ, ಜ್ಯೋತಿ ಚಂದ್ರಶೇಖರ್ ಇವರ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬಾರಕೂರು ಚೌಳಿ ಕೆರೆಯ ಸಮೀಪದ ಶ್ರೀ ಗೌರೀಶ್ವರ ದೇವಸ್ಥಾನದ ಸ್ವಚ್ಛತಾ ಕಾರ್ಯ ಯುವಾ ಬ್ರಿಗೇಡ್ ಕುಂದಾಪುರ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಭಾನುವಾರ ನಡೆಯಿತು. ಕ್ರಿ.ಶ.11ನೇ ಶತಮಾನದ್ದೆಂದು ಹೇಳಲಾಗುತ್ತಿರುವ ಶ್ರೀ ಗೌರೀಶ್ವರ ದೇವಸ್ಥಾನ ಹಿಂದೆ ವೈಭವದಿಂದ ಮೆರೆದ ದೇಗುಲವಾಗಿದೆ. ಇಲ್ಲಿಯ ಮಿಥುನ ನಾಗ ಶಿಲ್ಪ, ಅವಳೀ ನಾಗ ಶಿಲ್ಪ, ಬಿಳಿಯ ಶಿಲೆಯಿಂದ ಶ್ರೀ ಗೌರೀಶ್ವರ ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿದೆ. ಶೈವ ಹಾಗೂ ವೈಷ್ಣವ ದೇವಾಲಯ ಇರುವ ಅಪರೂಪದ ಸಂಗಮ ಸ್ಥಳದಂತಿದೆ ಈ ದೇಗುಲ. ಶಾಸನ ಉಲ್ಲೇಖದಂತೆ ಬಾರಕನ್ಯಾಪುರವೆಂದು ಕರೆಯಲ್ಪಡುವ ಈ ಊರು ಪ್ರವಾಸಿಗರ ನೆಚ್ಚಿನ ಕೇಂದ್ರದ ಸ್ಥಳದಂತೆ ಕಾಣಲ್ಪಟ್ಟಿದೆ. ಹಾಗಾಗಿ ಈ ಸಂದಭ೯ದಲ್ಲಿ ಯುವಾ ಬ್ರಿಗೇಡ್ ನ ನಿರಂಜನ್ ಶೆಟ್ಟಿ ತಲ್ಲೂರು, ಪ್ರಮೋದ್, ಪ್ರದೀಪ, ಶಶಿ ,ಸುಬ್ರಹ್ಮಣ್ಯ, ಇತಿಹಾಸ ಉಪನ್ಯಾಸಕರು ಆಗಿರುವ ಅರುಣ್ ಕುಮಾರ್, ಸತೀಶ್ ಗುಂಡ್ಮಿ,ಭರತ್ ಗುಡಿಗಾರ್,ಪ್ರಶಾಂತ್ ಖಾವಿ೯ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪತ್ರಿಕೋದ್ಯಮ ಎನ್ನುವುದು ಅಭೂತಪೂರ್ವ ಶಕ್ತಿ. ಮಾಧ್ಯಮದ ವಿದ್ಯಾರ್ಥಿಗಳು ಜಗತ್ತಿನ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳುವುದರ ಜತೆಗೆ, ತಾವು ವಾಸಿಸುವ ಪರಿಸರದಲ್ಲಿ ನಡೆಯುವ ಕ್ರಿಯೆಗಳಿಗೆ ಪ್ರತಿಕ್ರಿಯಿಸುವ ಮನೋಭಾವವನ್ನು ಎಳವೆಯಲ್ಲಿಯೇ ಬೆಳೆಸಿಕೊಳ್ಳಬೇಕು ಎಂದು ಆಳ್ವಾಸ್ ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕ ಅಶೋಕ್ ಕೆ. ಜಿ. ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಅಭಿವ್ಯಕ್ತಿ ವೇದಿಕೆಯ ವತಿಯಿಂದ ’ಆಳ್ವಾಸ್ ನ್ಯೂಸ್ ಇನ್ ಕ್ಯಾಪ್ಸೂಲ್’ ವ?ಚರಣೆ ಸಂಭ್ರಮವನ್ನು ನೆರವೇರಿಸಲಾಯಿತು. ಕಾಲೇಜಿನಲ್ಲಿ ಈಗಾಗಲೇ ಪತ್ರಿಕೋದ್ಯಮ ವಿಭಾಗ ಸಾಕಷ್ಟು ಹೆಗ್ಗಳಿಕೆಯನ್ನು ಪಡೆದಿದೆ. ನಿರಂತರ ಚಟುವಟಿಕೆಯಿಂದ ವಿದ್ಯಾರ್ಥಿಗಳು ಎಲ್ಲರ ಗಮನವನ್ನು ಸೆಳೆಯುತ್ತಿದ್ದಾರೆ. ಇದು ಹೀಗೆ ಮುಂದುವರೆದು, ಅಭಿವ್ಯಕ್ತಿ ವೇದಿಕೆ ಮುಖಾಂತರ ಇನ್ನ? ಕಾರ್ಯಕ್ರಮಗಳು ಮೂಡಿ ಬರಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿ.ಎಸ್ಸಿ. ಆನಿಮೇಶನ್ ವಿಭಾಗದ ಮುಖ್ಯಸ್ಥ ರವಿ ಮೂಡುಕೊಣಾಜೆ ಮಾತಾನಾಡಿ, “ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆ, ಆಗ ಮಾತ್ರ ಹೊಸತನ ಮೂಡಲು ಸಾಧ್ಯ” ಎಂದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಕಾರ್ಯಕ್ರಮದ ಅಧ್ಯಕ್ಷತೆ…
