Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2019-20 ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಆನ್‌ಲೈನ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ www.kacdc.karnataka.gov.in ನಲ್ಲಿ ಮಾರ್ಚ್ 12 ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಮಾತ್ರ ಸ್ವೀಕರಿಸಲಾಗುವುದು. ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು: ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು, ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು: ಈ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 3 ಲಕ್ಷ ರೂ.ಗಳ ಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಉಡುಪಿ ಜಿಲ್ಲೆಯ ಕೃಷಿ ಇಲಾಖೆಯ ಮಣ್ಣು ಆರೋಗ್ಯ ಕೇಂದ್ರಕ್ಕೆ ಬೇಕಾದ ಪ್ರಯೋಗಶಾಲಾ ವಿಶ್ಲೇಷಕರು, ಪ್ರಯೋಗಾಲಯ ಸಹಾಯಕರು, ಪ್ರಯೋಗಶಾಲಾ ಪರಿಚಾರಕರು ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯುವ ಬಗ್ಗೆ ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ದಸ್ತಾವೇಜಿನಲ್ಲಿ ತಿಳಿಸಿರುವ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಟೆಂಡರ್‌ನ್ನು ಆಹ್ವಾನಿಸಲಾಗಿದೆ. ಇಚ್ಛೆಯುಳ್ಳ ಸಂಸ್ಥೆಯವರು ಟೆಂಡರ್ ಅರ್ಜಿಯನ್ನು ಇ-ಪೇಮೆಂಟ್ ಮುಖಾಂತರ ಸಲ್ಲಿಸಬೇಕು. ಭರ್ತಿ ಮಾಡಿದ ಇ-ಟೆಂಡರ್‌ಗಳನ್ನು ಮಾರ್ಚ್ 19 ರ ಸಂಜೆ 4 ಗಂಟೆ ಮುಂಚಿತವಾಗಿ www.karnataka public procurement portal ನಲ್ಲಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಇ-ಟೆಂಡರ್‌ನ್ನು ಮಾರ್ಚ್ 20 ರ ಸಂಜೆ 4 ಗಂಟೆಗೆ ತೆರೆಯಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಿನಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಕಳೆದ ಬಾರಿ ಬೇಸಿಗೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ತಲೆದೋರಿದ ನೀರಿನ ಸಮಸ್ಯೆ ಕುರಿತು ಪ್ರಸ್ತಾಪಿಸಿದ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಈ ಬಾರಿ ಮೇ ಅಂತ್ಯದವರೆಗೂ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ನಗರಸಭೆಯ ಪೌರಾಯುಕ್ತರಿಗೆ ಸೂಚಿಸಿದ ಅವರು, ನೀರಿನ ಕಡಿತಗೊಳಿಸುವ ನಿರ್ಣಯ ಕೈಗೊಳ್ಳುವ ಮೊದಲು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ, ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯ ತತ್ಪರರಾಗಿ ಎಂದು ತಿಳಿಸಿದರು. ಬೇಸಿಗೆ ಸಮಯದಲ್ಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ವಿತರಿಸುವ ಕುರಿತಂತೆ ಆಪ್ ಅಭಿವೃದ್ದಿಪಡಿಸಲಾಗಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಪ್ರಕೃತಿಯು ನಮ್ಮ ಅವಶ್ಯಕತೆಗಳನ್ನು ಪೂರೈಸುತ್ತಿದ್ದು, ಅದರ ರಕ್ಷಣೆ ನಮ್ಮ ಜವಬ್ದಾರಿ. ಮಾಧ್ಯಮಗಳು ಪರಿಸರದ ಪ್ರತಿಯೊಂದು ಸೂಕ್ಷ್ಮ ವಿಚಾರಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕರ್ತವ್ಯವನ್ನು ನಿಭಾಯಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ನ ಆದಾಯತೆರಿಗೆಯ ಡೈರೆಕ್ಟರ್ ಜನರಲ್ ನರೋತ್ತಮ್ ಮಿಶ್ರ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಹಾಗೂ ಪದವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ಎರಡು ದಿನಗಳ ಕಾಲ ನಡೆಯಲಿರುವ ‘ಮೀಡಿಯಾ ಆಂಡ್ ಕ್ಲೈಮೇಟ್ ಆಕ್ಷನ್’ ಎಂಬ ವಿಚಾರದ ಕುರಿತು ನಡೆದ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ‘ಮೀಡಿಯಾ ಬಝ್ – ೨೦೨೦’ ಮಾಧ್ಯಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಮಾತೆಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಏಕೆಂದರೆ ಪ್ರಕೃತಿಯು ಸಮತೋಲನದಲ್ಲಿದ್ದರೆ ನಾವು ಬದುಕಲು ಸಾಧ್ಯ. ಪ್ರಕೃತಿ ಮುನಿಸಿಕೊಂಡರೆ ಬದುಕು ಸರ್ವನಾಶವಾಗುವುದುಖಚಿತ. ಪ್ರಕೃತಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಯಾವ ರೀತಿಯಲ್ಲಿ ನಾವು ಕಾರ್ಯ ನಿರ್ವಹಿಸಬಹುದು ಎಂಬುದನ್ನು ಮಾಧ್ಯಮಗಳ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು. ನಕಾರಾತ್ಮಕ ವಿಚಾರಗಳನ್ನು ಬದಿಗೊತ್ತಿ ಪ್ರತಿಯೊಂದು ಸೂಕ್ಷ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮೊದಲು ನಿಮ್ಮ ಬಗ್ಗೆ ನಂಬಿಕೆ ಇಡಬೇಕು. ಜೀವನದಲ್ಲಿ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು  ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಯುಥ್ ರೆಡ್ ಕ್ರಾಸ್ ವಿಂಗ್ ಎನ್.ಎಸ್.ಎಸ್ ಮತ್ತು ರುಡಸೆಟ್ ಬ್ರಹ್ಮಾವರ ಮತ್ತು ಆಸರೆ ಸಂಸ್ಥೆ ಇವರ ಸಹಯೋಗದಲ್ಲಿ ನಡೆದ ಮಾಹಿತಿ ಕಾಯಾಗಾರದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಸಕಾರಾತ್ಮಕ ಆಲೋಚನೆಗಳಿದ್ದಾಗ ಆತ್ಮಸ್ಥೈರ್ಯ ಹೆಚ್ಚುತ್ತದೆ. ಸ್ಪರ್ಧೆ ಇದ್ದಾಗ ಮತ್ತಷ್ಟು ಪರಸ್ಪರರ ಮಧ್ಯೆ ಸ್ಪರ್ಧೆ ಏರ್ಪಡುತ್ತದೆ. ಆಗ ಸ್ಪರ್ಧೆಯ ಮಟ್ಟವನ್ನು ಅರ್ಥ ಮಾಡಿಕೊಳಳಬೇಕು. ಅಲ್ಲದೇ ಸೇವೆಗೆ ಸೇರಿದ ಮೇಲೆ ಇನ್ನ್ನ್ಷ್ಟು ಸ್ಪರ್ಧೆ ಎದುರಾಗುತ್ತದೆ. ಜೊತೆಗೆ ಜನಸಾಮಾನ್ಯರ ಮಟ್ಟಕ್ಕೆ ನಮ್ಮ ಸೇವೆ ತಲುಪಬೇಕು ಎನ್ನುವುದುಆಶಯವಾಗಿರಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ರುಡಸೆಟ್ ಬ್ರಹ್ಮಾವರ ಇದರ ಪ್ರಾಂಶುಪಾಲ ಕರುಣಾಕರ ಜೈನ್ ಸ್ವ-ಉದ್ಯೋಗದ ಕುರಿತು ಉದಾಹರಣೆ ಸಹಿತ ಮಾಹಿತಿ ತಿಳಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕುಂದಾಪುರ ತಾಲೂಕಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದು ಹೇಳಬೇಕಾದ್ದನ್ನು ನೇರವಾಗಿ ಹೇಳುವ, ವಿರೋಧಿಸಬೇಕಾದ್ದನ್ನು ಸ್ಪಷ್ಟ ಧ್ವನಿಯಲ್ಲಿ ವಿರೋಧಿಸುವ ಸ್ವಾತಂತ್ರ್ಯ ಕಳೆದುಕೊಂಡಿದ್ದೇವೆ. ಸ್ವತಂತ್ರರು ಎನ್ನುತ್ತಲೇ ಬಂಧಿಗಳಾಗಿಯೇ ಬದುಕುತ್ತಿದ್ದೇವೆ. ಇಂತಹ ಸಂಧಿಗ್ಧತೆಯ ನಡುವೆ ಗಟ್ಟಿಯಾದ ಧನಿಯಲ್ಲಿ ವಿವರಿಸುವ, ಒಪ್ಪುವ ಹಾಗೂ ವಿರೋಧಿಸುವ ಶಕ್ತಿಯಿರುವುದು ಕಲಾ ಮಾಧ್ಯಮಕ್ಕೆ ಮಾತ್ರ ಎಂದು ಮಂಗಳೂರು ಅರೆಹೊಳೆ ಪ್ರತಿಷ್ಠಾನದ ಅರೆಹೊಳೆ ಸದಾಶಿವ ರಾವ್ ಹೇಳಿದರು. ಅವರು ಪರಿಶಿಷ್ಟ ಪಂಗಡದ ರಂಗತಂಡ ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಮಂಗಳವಾರ ಹೊಸೂರಿನ ಕೆ.ವಿ ಸುಬ್ಬಣ್ಣ ವನರಂಗದಲ್ಲಿ ಆಯೋಜಿಸಲಾದ ಹನ್ನೆರಡನೇ ವರ್ಷದ ವಾರ್ಷಿಕ ಸಂಭ್ರಮ ವನಸಿರಿಯಲ್ಲೊಂದು ರಂಗಸುಗ್ಗಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಹಿಂದಿನಿಂದಲೂ ಕಲೆಯನ್ನು ಬೆಳೆಸಿಕೊಂಡು ಬಂದ್ದದ್ದು ಶ್ರಮಿಕ ವರ್ಗ. ಗ್ರಾಮೀಣ ಪ್ರದೇಶಗಳಲ್ಲಿ ಗಟ್ಟಿಯಾಗಿ ಉಳಿದುಕೊಂಡಿದೆ. ಕಲೆ ಸರ್ವವ್ಯಾಪಿಯಾಗಿದ್ದು ಸಮಾಜಕ್ಕೆ ಎಲ್ಲವನ್ನೂ ಸಶಕ್ತವಾಗಿ ತಲುಪಿಸುವ ಶಕ್ತಿ ಹೊಂದಿದೆ ಎಂದರು. ಸಹಕಾರಿ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಎಸ್. ರಾಜು ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ರಿಚರ್ಡ ಅಲ್ಮೇಡಾ ಮೆಮೋರಿಯಲ್ ಕಾಲೇಜ್ ನಾವುಂದ ಇದರ ಉದ್ಯೋಗ ಮಾರ್ಗದರ್ಶನ ಘಟಕದ ಆಶ್ರಯದಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿಗಳಿಗೆ ನಂದಿ ಟೋಯೊಟಾ ಕಂಪೆನಿ ಬೆಂಗಳೂರು ಅವರು ಕ್ಯಾಂಪಸ್ ಆಯ್ಕೆ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತು. ಈ ಕಾರ‍್ಯಕ್ರಮದ ಉದ್ಘಾಟನೆಯನ್ನು ಮಾಡಿದ ಸಂಸ್ಥೆಯ ಪ್ರಧಾನ ಸಂಚಾಲಕರಾದ ಸಿಲ್ವೆಸ್ಟರ್ ಡಿ’ಅಲ್ಮೇಡಾರವರು, ವಿದ್ಯಾರ್ಥಿಗಳಿಗೆ ಇದರ ಪ್ರಯೋಜನವನ್ನು ಪಡೆಯಲು ಹಾರೈಸಿದರು. ಪ್ರಾಂಶುಪಾಲರಾದ ಪ್ರೋ. ಜಿ.ಎಸ್.ಹೆಗಡೆ ಪ್ರಾಸ್ತಾವಿಕವಾಗಿ ಈ ಕಾರ‍್ಯಕ್ರಮದ ಪ್ರಯೋಜನವನ್ನು ಪಡೆಯಬೇಕೆಂದು ತಿಳಿಸಿದರು. ನಂದಿ ಟೋಯೊಟಾ ಕಂಪೆನಿಯ ಮನವ ಸಂಪನ್ಮೂಲ ವಿಭಾಗದ ಮುಖ್ಯಸ್ಠರಾದ ಅಖಿನ ಸೈಮನ್ ಹಾಗೂ ಶಕುಲ್ ರವರು ಆಯ್ಕೆಯ ವಿವಿಧ ಹಂತಗಳನ್ನು ನಡೆಸಿಕೊಟ್ಟರು. ಕಾಲೇಜಿನ ಕೆಲವು ವಿದ್ಯಾರ್ಥಿಗಳು ಆಯ್ಕೆ ಆಗಿದ್ದಾರೆ. ಉದ್ಯೋಗ ಮಾರ್ಗದರ್ಶನ ಘಟಕದ ಅಧ್ಯಾಪಕ ಸಲಹೆಗಾರರಾದ ರಾಮದಾಸ್ ಪ್ರಭು ಕಾರ‍್ಯಕ್ರಮವನ್ನು ಸಂಯೋಜಿಸಿದರು. ಅಂತಿಮ ಬಿ.ಕಾಂ ವಿಧ್ಯಾರ್ಥಿನಿ ಡೆಲಿನಾ ನಿರೂಪಿಸಿದರು, ಸುಶ್ಮಿತಾ ಸ್ವಾಗತಿಸಿದರು, ಶ್ರೀದೇವಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಡುಪಿ ಜಿಲ್ಲೆ ತೋಟಗಾರಿಕೆ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಉಡುಪಿ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನವು ಫೆ. 29 ರಿಂದ ಮಾರ್ಚ್ 2 ರ ವರೆಗೆ ಉಡುಪಿ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ರೈತ ಸೇವಾ (ಪುಷ್ಪ ಹರಾಜು) ಕೇಂದ್ರದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್ ತಿಳಿಸಿದ್ದಾರೆ. ಅವರು ತೋಟಗಾರಿಕಾ ಇಲಾಖೆಯಲ್ಲಿ ನಡೆದ ಫಲಪುಷ್ಪ ಪ್ರದರ್ಶನ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತೋಟಗಾರಿಕೆ ಫಲಪುಷ್ಪ ಪ್ರದರ್ಶನವನ್ನು ಫೆ. 29 ರಂದು ಸಂಜೆ 4.30 ಕ್ಕೆ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಸಮುದ್ರ ನೀರಿನಲ್ಲಿ ವಾಸಿಸುವ ಜಲಚರಗಳ ಆಕೃತಿಗಳನ್ನು ತಯಾರಿಸುವುದು ಮುಖ್ಯ ವಿಷಯವಾಗಿರುತ್ತದೆ. ಪ್ರಮುಖವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಫೆಬ್ರವರಿ ೨೭ರಿಂದ ೨೯ರ ತನಕ ಉಚಿತವಾಗಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೋರಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಬಾಪೂಜಿ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ ಕಾರ್ಡ್ ವಿತರಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಕೂಡಲೇ ನೊಂದಾಯಿಸಿಕೊಂಡು ಕಾರ್ಡ್ ಪಡೆದುಕೊಳ್ಳಬಹುದಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅವರ ಮುತುವರ್ಜಿಯ ಮೇರೆಗೆ ಶಿವಮೊಗ್ಗ ಪ್ರೇರಣಾ ಎಜುಕೇಶನಲ್ & ಸೋಶಿಯಲ್ ಟ್ರಸ್ಟ್ ಮೂಲಕ ಮೂರು ದಿನಗಳ ಕಾಲ ಎಲ್ಲಾ ಪಂಚಾಯತಿಗಳಲ್ಲಿ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪಠ್ಯದ ಓದಿನ ಜೊತೆಯಾದ ಪಠ್ಯೇತರ ಚಟುವಟಿಕೆಗಳ ಭಾಗವಹಿಸುವಿಕೆ ವಿದ್ಯಾರ್ಥಿ ಸಮೂಹಕ್ಕೆ ವಿದ್ಯುನ್ಮಾನ ಜಗತ್ತಿನ ಬೇಡಿಕೆಗಳನ್ನು ಪೂರೈಸಿಕೊಳ್ಳುವ ಜಾಣ್ಮೆಯನ್ನು ತಿಳಿಯಪಡಿಸುವುದು. ಈ ತೆರನಾಗಿ ಬೋಧನಾ ಪ್ರಕ್ರಿಯೆಯ ಜೊತೆಯಾಗಿ ವಿದ್ಯಾರ್ಥಿಗಳನ್ನು ಸಾಹಿತ್ಯಿಕ – ಸಾಂಸ್ಕೃತಿಕ – ಕ್ರೀಡಾ ನೆಲೆಗಳಲ್ಲಿ ಅಣಿಗೊಳಿಸುವ ಕಾರ್ಯದಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ನಿರತವಾಗಿದೆ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಹೇಳಿದರು. ಇವರು ಇಲ್ಲಿನ ದಶಮ ಸಂಭ್ರಮಾಚರಣೆಯಲ್ಲಿರುವ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಉಪಾಧ್ಯಕ್ಷ ಪ್ರೊ. ಎ. ಪಿ. ಮಿತ್ತಂತಾಯ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಸೂಕ್ತ ವೇದಿಕೆಗಳನ್ನು ಕಲ್ಪಿಸುವಲ್ಲಿ ಯಶಸ್ವಿಯಾದ ಈ ಕಾಲೇಜು ಮಾದರಿ ವಿದ್ಯಾಸಂಸ್ಥೆಯಾಗಿದೆ ಎಂದರು. ಇಲ್ಲಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಪ್ರಾಸ್ತಾವಿಸಿದರು. ಇಂಗ್ಲೀಷ್ ಉಪನ್ಯಾಸಕಿ ಅಮೃತಾ ಉಪಸ್ಥಿತರಿದ್ದರು. ಉಪ…

Read More