ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆನರಾ ಬ್ಯಾಂಕ್ ಸಂಸ್ಥಾಪಕರಾದ ದಿ.ಅಮ್ಮಂಬಾಳ ಸುಬ್ಬರಾವ್ ಪೈಯವರ ಸಮಾಜದ ಏಳ್ಗೆಯ ಬಗ್ಗೆ ಅವರಿಗಿದ್ದ ಕಳಕಳಿ ಇಡೀ ಸಮಾಜಕ್ಕೆ ಮಾದರಿಯಾಗಿದೆ. ಇವರ ಸೇವೆ ನಮಗೆಲ್ಲ ದಾರಿ ದೀಪವಾಗಬೇಕು. ಇಂತಹ ವ್ಯಕ್ತಿಯ ಮೂಲಕ ಸ್ಥಾಪಿಸಲ್ಪಟ್ಟ ಕೆನರಾ ಬ್ಯಾಂಕಿನ ಅಧಿಕಾರಿಗಳ ಸಂಘಟನೆಯ ಮೂಲಕ ಈ ಸಂಸ್ಥೆಗೆ ಉತ್ತಮವಾದ ಪ್ರಯೋಗಲಾಯವನ್ನು ಕೊಡುಗೆಯಾಗಿ ನೀಡಿದೆ. ಈ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಮೂಡಿಬರಬೇಕು ಎಂದು ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿಗಳ ಸಂಘಟನೆ ಅಧ್ಯಕ್ಷ ನಾಗರಾಜ್ ಹೇಳಿದರು. ಅವರು ತೆಕ್ಕಟ್ಟೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೆನರಾ ಬ್ಯಾಂಕಿನ ನಿವೃತ್ತ ಅಧಿಕಾರಿಗಳ ಸಂಘಟನೆ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ೭೭.೧೦೦ ರೂಪಾಯಿಗಳಷ್ಟು ಧನ ಸಹಾಯದಿಂದ ನೀಡಲಾದ ನವೀಕರಣಗೊಂಡ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮಲ್ಯಾಡಿ ಶಿವರಾಮ್ ಶೆಟ್ಟಿ, ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಉಡುಪಿ ಜಿಲ್ಲಾ ಸಂಘಟನೆಯ ಜತೆ ಕಾರ್ಯದರ್ಶಿ ಯೋಗೀಶ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಗೀತ, ನಾಟಕ, ಸಾಹಿತ್ಯ ಇವೆಲ್ಲವೂ ನಮ್ಮಲ್ಲಿ ಆತ್ಮ ವಿಶ್ವಾಸವನ್ನು ಮೂಡಿಸಿದರೆ ಅದೇ ದೊಡ್ಡ ಯಶಸ್ಸು. ಸತೀಶ್ ಭಟ್ ಮಾಳಕೋಡ್ ಅದೃಷ್ಟವಶಾತ್ ಈ ಕರಾವಳಿ ಭಾಗದಲ್ಲಿ ನೆಲೆ ನಿಂತು ಅನೇಕ ಶಿಷ್ಯರನ್ನು ಹೊಂದಿರುವಂತದ್ದು ನಮಗೆಲ್ಲ ಅತ್ಯಂತ ಸಂತೋಷದ ವಿಷಯವಾಗಿದೆ ಎಂದು ಉಪನ್ಯಾಸಕ ಸುಜಯೀಂದ್ರ ಹಂದೆ ಹೇಳಿದರು. ಯಶಸ್ವಿ ಕಲಾವೃಂದ ಕೊಮೆ-ತೆಕ್ಕಟ್ಟೆ ಇವರ ಆಶ್ರಯದಲ್ಲಿ ಗುರು ಪರಂಪರಾ ಸಂಗೀತ ಸಭಾ ಕುಂದಾಪುರ ಇವರ ಸಂಗೀತೋಪಾಸನ ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಜರುಗಿದ ಗುರುವಂದನಾ ಕಾರ್ಯಕ್ರಮದಲ್ಲಿ ಭಾರತೀಯ ಸಂಗೀತ ಗುರುಗಳನ್ನು ಅಭಿನಂದಿಸಿ ಮಾತನಾಡಿದರು. ಅವರು ಇಂತಹ ಕರಾವಳಿ ಭಾಗದಲ್ಲಿ ಹಿಂದೂಸ್ಥಾನಿ ಸಂಗೀತವನ್ನು ಬೆಳೆಸುವಲ್ಲಿ, ಉಳಿಸುವಲ್ಲಿ, ಆಸಕ್ತಿ ಮೂಡಿಸುವಲ್ಲಿ ಸತೀಶ್ ಭಟ್ ಹಾಗೂ ಪ್ರತಿಮಾ ಭಟ್ ಸಾಕಷ್ಟು ಕೆಲಸ ಮಾಡುತ್ತಿರುವುದು ನಿಜಕ್ಕೂ ಸ್ತುತ್ಯರ್ಹ. ಮನೆಮನೆಗೆ ಹೋಗಿ ಪಾಠ ಮಾಡುತ್ತ ಶಿಷ್ಯರ ಜೊತೆಗೆ ಸಲುಗೆ ಮೂಡಿಸಿಕೊಂಡು, ಪ್ರೀತಿಯಿಂದ ವಿದ್ಯಾರ್ಥಿಗಳಲ್ಲಿ ಆಸಕ್ತಿ ಹುಟ್ಟಿಸುವ ಮುಖೇನ ಹಿಂದೂಸ್ಥಾನಿ ಸಂಗೀತ ಬೆಳಿಸುವ ಕಾರ್ಯ ಸಮಾಜಕ್ಕೆ ಆರೋಗ್ಯಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಗವಂತನ ಸೇವೆಯಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಇತಂಹ ಅತಿ ಶ್ರೇಷ್ಠವಾದ ಈ ಬ್ರಹ್ಮಕಲಶೋತ್ಸವ ಸೇವೆ ಮಾಡಲು ಸಿಕ್ಕಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಇತಂಹ ಅವಕಾಶ ಸಿಗುವುದು ಕೆಲವು ಭಕ್ತರಿಗೆ ಮಾತ್ರ. ಅಪಾಯದಂಚಿನಲ್ಲಿದ್ದ ಧ್ವಜಮರವನ್ನು ಭಕ್ತರೆಲ್ಲರ ಏಕತೆಯಿಂದ ನೂತನವಾಗಿ ಪ್ರತಿಷ್ಠಾಪಿಸುವ ಕೆಲಸದೊಂದಿಗೆ ಒಗ್ಗಟ್ಟಿನಿಂದ ದೇವರ ಸೇವೆ ಮಾಡೋಣಾ ಎಂದು ಸಮಾಜ ಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ ಹೇಳಿದರು. ಕೋಟೇಶ್ವರ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸೋಮವಾರ ಸಂಜೆ ಜರುಗಿದ ದೇವಳದ ನೂತನ ಧ್ವಜಸ್ಥಂಭ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್ ಮಾತನಾಡಿ, 68 ವರ್ಷಗಳ ನಂತರ ಈ ಒಂದು ಬ್ರಹ್ಮಕಲಶೋತ್ಸವ ಮಾಡುವ ಸೌಭಾಗ್ಯ ಸಿಕ್ಕಿರುವುದು ನಮ್ಮಲ್ಲರ ಭಾಗ್ಯ. ಈ ಸೇವೆ ಮಾಡಲು ಪ್ರತಿಯೊಬ್ಬರಿಗೂ ಭಗವಂತ ಅವಕಾಶ ನೀಡಿದ್ದಾನೆ. ಕೋವಿಡ್ ಕಾರಣಗಳಿಂದ 2 ವರ್ಷಗಳಿಂದ ಮುಂದೂಡಲ್ಪಟ್ಟ ಈ ಕಾರ್ಯಕ್ರಮ ಈ ಬಾರಿ ಅತಿ ಶ್ರದ್ಧೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಹಾರ ಪದ್ಧತಿ, ಅತಿಯಾದ ಮೊಬೈಲ್ ಬಳಕೆಯ ಕಾರಣದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿದೆ ಎಂದು ಖ್ಯಾತ ಮನೋವೈದ್ಯ ಡಾ. ಪಿ. ವಿ. ಭಂಡಾರಿಯವರು ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮಾತನಾಡಿ ದುರ್ಬಲ ಮನಸ್ಸಿನ ಮಕ್ಕಳ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು. ಇಂತಹ ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಸಾಮೂಹಿಕವಾಗಿ ವಿಚಾರಿಸುವುದಕ್ಕಿಂತ ಸಾಧ್ಯವಾದಷ್ಟು ಪ್ರತ್ಯೇಕವಾಗಿ ವಿಚಾರಣೆ ಅತಿ ಅವಶ್ಯಕ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ.ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಲ್ಲಿ ಕಾಲೇಜಿನಲ್ಲಿ ಆಯೋಜಿಸುತ್ತಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಅನೇಕ ಸೌಲಭ್ಯಗಳ ಕುರಿತಾಗಿ ಸವಿಸ್ತಾರವಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಡಾ.ಪಿ.ವಿ. ಭಂಡಾರಿಯವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು, ವಕೀಲರಾದ ಕೆ. ರಾಜಾರಾಮ್ ಶೆಟ್ಟಿ ರಕ್ಷಕ ಶಿಕ್ಷಕ ಸಂಘದ ಸಹ ಕಾರ್ಯದರ್ಶಿಯಾದ ಲಕ್ಷ್ಮಿ ಸಿ. ನಾಯಕ್ ಉಪಸ್ಥಿತರಿದ್ದರು.ರಕ್ಷಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.1: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬಂದಿರುವುದರಿಂದ ಸರ್ಕಾರದ ಆದೇಶದಲ್ಲಿ ಕೆಲವೊಂದು ಮಾರ್ಪಾಡು ಮಾಡಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಜನವರಿ 31 ರಿಂದ ಜಾರಿಗೆ ಬರುವಂತೆ ಫೆಬ್ರವರಿ 15 ರ ವರೆಗೆ ಈ ಕೆಳಗಿನಂತೆ ಮಾರ್ಗಸೂಚಿ/ನಿಬಂಧನೆಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಯನ್ನು ದಿನಾಂಕ:31.01.2022 ರಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ . ಪಬ್ ಗಳು/ ಕ್ಲಬ್ ಗಳು/ಹೋಟೆಲ್ ಗಳು/ರೆಸ್ಟೋರೆಂಟ್ ಗಳು/ ಬಾರ್ ಗಳು/ಹೋಟೆಲ್ ಗಳಲ್ಲಿನ ತಿನಿಸು ಕೇಂದ್ರಗಳು ಇತ್ಯಾದಿಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ. 100% ಸಾಮರ್ಥ್ಯದೊಂದಿಗೆ ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಕಾರ್ಯ ನಿರ್ವಹಿಸತಕ್ಕದ್ದು. ಸದರಿ ಘಟಕಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು 2 ಡೋಸ್ ಗಳ ಕೋವಿಡ್ ವ್ಯಾಕ್ಸಿನೇಷನ್ ಪಡೆದಿರತಕ್ಕದ್ದು ,ಈ ಸ್ಥಳಗಳಲ್ಲಿ ವ್ಯಾಕ್ಸಿನೇಷನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.1: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಸಂಸ್ಥೆಗಳ 2 ಮತ್ತು 10 ಹೊಸ ಅಧಿಸೂಚಿತ ಸಂಸ್ಥೆ ಹಾಗೂ ದೇವಸ್ಥಾನಗಳಿಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಹ ಭಕ್ತಾಧಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ ಸಿ ಸಂಸ್ಥೆಗಳು: ಬ್ರಹ್ಮಾವರ ತಾಲೂಕು ಕೆಂಜೂರು ಶ್ರೀ ವೀರೇಶ್ವರ ದೇವಸ್ಥಾನ, ಹಾರ್ಡಳ್ಳಿ ಮಂಡಳ್ಳಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಹಾಗೂ ಉಡುಪಿ ತಾಲೂಕಿನ ಹೆರ್ಗ ಅಗ್ರಹಾರ ವಿಷ್ಣುಮೂರ್ತಿ ಮುಖ್ಯಪ್ರಾಣ ದೇವಸ್ಥಾನ ಮತ್ತು ಉದ್ಯಾವರ ಶ್ರೀ ಪಿತ್ರೋಡಿ ಗೋಪಾಲಕೃಷ್ಣ ದೇವಸ್ಥಾನ. ಹೊಸ ಅಧಿಸೂಚಿತ ಸಂಸ್ಥೆಗಳು: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಶ್ರೀ ಸೋಮೇಶ್ವರ ದೇವಸ್ಥಾನ, ಚಿತ್ರಪಾಡಿ ಶ್ರೀ ಪುಟ್ಟನಕಟ್ಟೆ ವಿನಾಯಕ ದೇವಸ್ಥಾನ ಹಾಗೂ ಗಿಳಿಯಾರು ಶ್ರೀ ಶಂಕರನಾರಾಯಣ ದೇವಸ್ಥಾನ, ಕುಂದಾಪುರ ತಾಲೂಕಿನ ವಕ್ವಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಬಸ್ರೂರು ಶ್ರೀ ಆಧಿನಾಥೇಶ್ವರ ದೇವಸ್ಥಾನ ಹಾಗೂ ಜಪ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ, ವಿಧ್ಯಾರ್ಥಿಗಳಿಗೆ ನೆನಪಿನ ಶಕ್ತಿ ವೃದ್ಧಿಸುವ ಹಾಗೂ ಪರಿಣಾಮಕಾರಿ ಕಲಿಕೆ ಕುರಿತಾದ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿಸೋಜ ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ತಮ್ಮ ಎಡ ಹಾಗೂ ಬಲ ಭಾಗದ ಮೆದುಳನ್ನು ಸಮತೋಲನದಲ್ಲಿ ಇರಿಸಿಕೊಂಡು ನೆನಪಿನ ಶಕ್ತಿ ಹೆಚ್ಚಿಸ ಬೇಕು ಎಂಬುದನ್ನು ತಿಳಿಸಿಕೊಟ್ಟರು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ ಇವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೂಡ್ಲಕಟ್ಟೆ ಎಂ ಟಿ ಪಬ್ಲಿಸಿಟಿ ಅಂಡ್ ಡೆವಲಪ್ಮೆಂಟ್ ವಿಭಾಗದ ಡೀನ್ ಪ್ರೊ. ಕಿಶೋರ್ ಕುಮಾರ್ ಆರೂರ್ ಹಾಗೂ ಎಕ್ಸಲೆಂಟ್ ಕಾಲೇಜಿನ ಅನೇಕ ಉಪನ್ಯಾಸಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಹಿಂಸೆ ಎನ್ನುವ ಪದ ಹಿಂಸೆಯನ್ನೇ ನೆನಪಿಸುತ್ತೆ. ಈ ಪದಕ್ಕೆ ಪರ್ಯಾಯವಾಗಿ ಬೇರೆ ಪದಗಳು ಕನ್ನಡಕ್ಕೆ ಬೇಕು. ಈ ಕುರಿತು ಪ್ರಾಜ್ಞರು ಹುಡುಕ ಬೇಕಾಗಿದೆ. ಕರಾವಳಿ ಭಾಗದಲ್ಲಿ ರಂಗ ಚಟುವಟಿಕೆಗಳು ಹೆಚ್ಚಳವಾಗಿ ನಡೆಯುತ್ತಿರುವುದು ಸಂತಸದ ವಿಷಯ. ಕಲೆ ವ್ಯವಹಾರಿಕವಾಗಿ ಇರಬಾರದು ಎಂದು ನಾಟ್ಯ ಶಾಸ್ತ್ರದಲ್ಲಿ ಪ್ರಸ್ತಾಪವಿದೆ. ಆದರೆ ಇಂದು ಹಣ ರಂಗ ಚಟುವಟಿಕೆಗೆ ಬೇಕೇ ಬೇಕಾಗಿದೆ. ಮಾಧವಿ ನಾಟಕ ಅತೀ ಕಡಿಮೆ ಹಣ ಬಳಕೆಯಿಂದ ರಂಗ ಪ್ರಯೋಗಗೊಳ್ಳುತ್ತಿರುವುದು ಗಮನಿಸಬೇಕಾದ ಸಂಗತಿ ಎಂದು ರಾಷ್ಟ್ರೀಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ ಹೇಳಿದರು. ಅವರು ಶ್ರೀ ಕೈಲಾಸ ಕಲಾಕ್ಷೇತ್ರ ಟ್ರಸ್ಟ್ ತೆಕ್ಕಟ್ಟೆ ಹಾಗೂ ದಿಮ್ಸಾಲ್ ಮಕ್ಕಳ ನಾಟಕ ಶಾಲೆ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ತೆಕ್ಕಟ್ಟೆ ಹಯಗ್ರೀವ ಕಲ್ಯಾಣ ಮಂಟಪದಲ್ಲಿ ಕೈವಲ್ಯ ಕಲಾಕೇಂದ್ರ ಪ್ರಸ್ತುತಿಯ ದ್ವಿವ್ಯಕ್ತಿ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು. ನಿರ್ದೇಶಕ ಶ್ರೀಪಾದ ಭಟ್ ಮಾತನಾಡಿ, ಗಾಂಧಿಯನ್ನು ಅರ್ಧ ಹೆಣ್ಣು ಅಂತ ಕರೆದರು. ಮೌನ, ಉಪವಾಸ, ಸತ್ಯಕ್ಕಾಗಿ ಮಾಡುವ ಹಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿ ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಇವರು ಪ್ರಾರಂಭಿಸಿದ ” ಸ್ವಚ್ಛ ಕಡಲ ತೀರ -ಹಸಿರು ಕೋಡಿ” 2022 ರ ಅಭಿಯಾನದ ಪ್ರಥಮ ಹಂತದ ಸ್ವಚ್ಛತಾ ಕಾರ್ಯಕ್ರಮ ಕೋಡಿಯಲ್ಲಿ ಭಾನುವಾರ ಜರುಗಿತು. ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು, ರಕ್ಷಕ- ಶಿಕ್ಷಕ ಸಂಘದ ಸದಸ್ಯರು, ಪೋಷಕರು, ಪ್ರಾಕ್ತನ ವಿದ್ಯಾರ್ಥಿಗಳು, ಊರಿನ ಪ್ರಮುಖರು ಹಾಗೂ ಮಹಾಜನರು ಮತ್ತು ನಿಸರ್ಗ ಪ್ರಿಯರು ಈ ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಕೋಡಿಯ ಕಡಲ ತೀರವನ್ನು ಸ್ವಚ್ಛಗೊಳಿಸಿದರು. ಸ್ವಚ್ಛ ಮನಸ್ಸುಗಳಿಂದ ನೆರೆವೇರಿಸುತ್ತಿರುವ ಈ ಸ್ವಚ್ಚತಾ ಅಭಿಯಾನ, ಜನರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಮತ್ತು ಯುವಕರಲ್ಲಿ ಪರಿಸರದ ಸದ್ಭಳಿಕೆ ಮತ್ತು ಸಂರಕ್ಷಣೆಯ ಕುರಿತು ಕೆಲಸ ಮಾಡುವ ಪ್ರವೃತ್ತಿಯನ್ನು ಹುಟ್ಟುಹಾಕುವದೆಂಬ ನಂಬಿಕೆ ಮತ್ತು ವಿಶ್ವಾಸವನ್ನು ಬ್ಯಾರೀಸ್ ವಿದ್ಯಾ ಸಂಸ್ಥೆಗಳ ಛೇರ್ಮನ್ ಸಯ್ಯದ್ ಮಹಮದ್ ಬ್ಯಾರಿಯವರು ವ್ಯಕ್ತಪಡಿಸಿದ್ದಾರೆ. ಈ ಕಾರ್ಯದಲ್ಲಿ ನಿರಂತರವಾಗಿ ನಮಗೆ ಸಹಕಾರವನ್ನು ನೀಡುತ್ತಿರುವ ಕುಂದಾಪುರ ಪುರಸಭೆಯ ಚೀಫ್ ಆಫೀಸರ್ ಹಾಗೂ ಪದಾಧಿಕಾರಿಗಳಿಗೆ ಮತ್ತು ಎಲ್ಲಾ ಸಿಬ್ಬಂದಿವರ್ಗದವರಿಗೆ, ಕೋಟೇಶ್ವರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿ ಸೀತಾರಾಮ ಭಜನಾ ಮಂದಿರ ಬಳಿ ಶನಿವಾರ ಕಡಲಾಮೆ ಮೊಟ್ಟೆ ಪತ್ತೆಯಾಗಿದ್ದು, ಹ್ಯಾಚರ್ ಮೂಲಕ ರಕ್ಷಣೆ ಮಾಡಲಾಗಿದೆ. ಸೀತಾರಾಮ ಭಜನಾ ಮಂದಿರದ ಬಳಿ ಕಡಲಾಮೆ ಮೊಟ್ಟೆ ಸಿಕಿರುವುದು ಮೂರನೇ ಬಾರಿಯಾಗಿದೆ. ಮೊದಲೆರಡು ಕಡೆ ಮೊಟ್ಟೆ ಪತ್ತೆಮಾಡಿದ ಬಾಬು ಮೊಗವೀರ ಕಡಲಾಮೆ ಮೊಟ್ಟೆ ಪತ್ತೆ ಮಾಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ, ಆಮೆ ಮೊಟ್ಟೆ ಸಂರಕ್ಷಣೆ ಮಾಡುವ ಎಸ್ಎಫ್ಎಲ್ ಸದಸ್ಯರಿಗೆ ಹಾಗೂ ಕ್ಷೀನ್ ಕುಂದಾಪುರ ಪ್ರೊಜೆಕ್ಟ್ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ಕೋಡಿ ಅರಣ್ಯ ಇಲಾಖೆ ಫಾರೆಸ್ಟ್ ರಂಜಿತ, ಎಸ್ಎಫ್ಎಲ್ ವೆಂಕಟೇಶ್, ದಿನೇಶ್ ಸಾರಂಗ, ರಾಘು ಮೊಗವೀರ, ಭರತ್ ಬಂಗೇರ, ಸಂತೋಷ ಕೋಡಿ, ಮೊಟ್ಟೆ ದೊರತ ಸ್ಥಳದ ಸುತ್ತಾ ಬಲೆ ಕಟ್ಟಿ ಹ್ಯಾಚರ್ ನಿರ್ಮಿಸಿ ರಕ್ಷಣೆ ಮಾಡಲಾಗಿದೆ.
