Author: ನ್ಯೂಸ್ ಬ್ಯೂರೋ

ಕುಂದುದ್ರಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ಸೇವೆಗೆ ಸೇರ್ಪಡೆಗೊಳ್ಳಬೆಕು, ಈ ಮೂಲಕ ಸಮಾಜದಲ್ಲಿ ತಮ್ಮ ಚಿಂತನೆಯ ಬದಲಾವಣೆಯನ್ನು ತರಬಹುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಸಹಯೋಗದಲ್ಲಿ ಶುಕ್ರವಾರ ಮಣಿಪಾಲ ರಜತಾದ್ರಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ’ ಕುರಿತು ಹಮ್ಮಿಕೊಂಡ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ತರಬೇತಿ ಕಾರ್ಯಾಗಾರವನ್ನು ಆಫ್ಲೈನ್ ಮತ್ತು ಆನ್ ಲೈನ್ ಎರಡೂ ಮಾದರಿಯಲ್ಲಿ ನಡೆಸುವ ಚಿಂತನೆಯಿದ್ದು, ಸ್ಪರ್ದಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮೊದಲು ತಮ್ಮ ಬಗ್ಗೆ ತಾವೇ ಅರಿತಿರಬೇಕು,ಆಸಕ್ತಿಯಿರುವ ಕ್ಷೇತ್ರಗಳ ಬಗ್ಗೆ ತಿಳಿದಿರಬೇಕು. ಸಾಧನೆಯ ಹಾದಿಯಲ್ಲಿ ವೈಪಲ್ಯಗಳು ಎದುರಾದರೂ ಮುನ್ನೆಡೆದು ಗುರಿ ಸಾಧಿಸಬೇಕು , ಶ್ರಮ ಪಟ್ಟರೆ ಸ್ಪರ್ದಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು ಜಿಲ್ಲಾ ಪಂಚಾಯತ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಾಸ್ತ್ರೀ ವೃತ್ತದ ಬಳಿ ಬ್ರೌನ್ ಶುಗರ್, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಮತ್ತು ತಂಡ ಸೊತ್ತುಗಳ ಸಹಿತ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರಕನ್ನಡ ಜಿಲ್ಲೆಯ ನಿವಾಸಿ ಮಹಮ್ಮದ್ ಜಾಫರ್ ಗುಡುಮಿಯಾ (28) ಎಂದು ಗುರುತಿಸಲಾಗಿದೆ. ಆರೋಪಿಯ ಬಳಿ ಇದ್ದ 1 ಕೆ.ಜಿ 800 ಗ್ರಾಂ ತೂಕದ ಗಾಂಜಾ ಅಂದಾಜು ಮೌಲ್ಯ ನಲವತ್ತು ಸಾವಿರ ರೂಪಾಯಿ ಹಾಗೂ 1 ಗ್ರಾಂ ಬ್ರೌನ್ ಶುಗರ್ ಅಂದಾಜು ಮೌಲ್ಯ ಹತ್ತು ಸಾವಿರ ರೂಪಾಯಿ, ಎರಡು ಮೊಬೈಲ್ ಪೋನ್, ಒಂದೂವರೆ ಸಾವಿರ ರೂಪಾಯಿ ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ನಿರ್ದೇಶನದಲ್ಲಿ ಎಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಶ್ರೀಕಾಂತ್ ಕೆ. ಹಾಗೂ ಡಿವೈಎಸ್ಪಿ ಕಚೇರಿಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ರಾಘವೇಂದ್ರ ಉಪ್ಪುಂದ, ವಿಜಯ ಕುಂದಾಪುರ, ರಾಮು ಹೆಗ್ಡೆ, ರಮೇಶ್ ಕುಲಾಲ್, ಕುಂದಾಪುರ ಪೊಲೀಸ್ ಠಾಣೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆದರ್ಶ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕೆರಾಡಿ ಗ್ರಾಮ ಪಂಚಾಯತ್‌ನಲ್ಲಿ ಕ್ಷಯ ಮುಕ್ತ ಗ್ರಾಮ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮವನ್ನು ಕೆರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಿರಿಜಾ ಶೆಟ್ಟಿ ಉದ್ಘಾಟಿಸಿದರು. ಪಂಚಾಯಿತಿನ ಸದಸ್ಯರಾದ ರಾಘವೇಂದ್ರ ಕೊಠಾರಿ ಹಾಗೂ ಮಂಜುನಾಥ ಕೊಠಾರಿ ಮಾತನಾಡಿ ಇಡೀ ಗ್ರಾಮವನ್ನು ಕ್ಷಯ ಮುಕ್ತ ಮಾಡಲು ಕೆರಾಡಿ ಗ್ರಾಮ ಪಂಚಾಯತ್ ಸಹಕರಿಸುವುದಾಗಿ ತಿಳಿಸಿದರು. ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗುರುಮೂರ್ತಿ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರವೀಣ್ ಶೆಟ್ಟಿ, ಕುಂದಾಪುರ ತಾಲೂಕು ಆಸ್ಪತ್ರೆಯ ಎನ್ಸಿಡಿ ವಿಭಾಗದ ವೈದ್ಯಾಧಿಕಾರಿ ಡಾ. ರಂಜಿತಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಕುಂದಾಪುರ ತಾಲೂಕಿನ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಗುರುದಾಸ್ ಕಾರ್ಯಕ್ರಮವನ್ನು ನಿರೂಪಿಸಿದರು, ಕಾರ್ಯಕ್ರಮದ ಉದ್ದೇಶದ ಕುರಿತು ಹಿರಿಯ ಮೇಲ್ವಿಚಾರಕ ಆಲ0ದೂರು ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಿಪಿಎಂಒ ಸುರೇಶ್ ಸಾಲಿಗ್ರಾಮ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕೆರಾಡಿ ಗ್ರಾಮದ ಸಾರ್ವಜನಿಕರಿಗೆ ಮಧುಮೇಹ, ರಕ್ತದೊತ್ತಡ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯ ಶಿಕ್ಷಕರ ಸಂಘದ ನಿರ್ದೇಶನದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಮಾನ್ಯ ಶಿಕ್ಷಣ ಸಚಿವರಿಗೆ/ ಪ್ರಧಾನ ಕಾರ್ಯದರ್ಶಿಗಳು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ / ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ಮನವಿಯನ್ನು ಕಚೇರಿಯ ಮುಖ್ಯಾಧಿಕಾರಿ ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳ ಮೂಲಕ ಇಂದು ಸಲ್ಲಿಸಲಾಯಿತು. ಈ ಸಂದರ್ಭ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಹೋರಾಟದ ರೂಪುರೇಷೆಗಳನ್ನು ಸವಿಸ್ತಾರವಾಗಿ ಹಾಗೂ ತರಬೇತಿ ಬಹಿಷ್ಕಾರ ಕಪ್ಪುಪಟ್ಟಿ ಧರಿಸಿ ಮಕ್ಕಳೊಂದಿಗೆ ಇದ್ದು ನಿರಂತರ ಹೋರಾಟ ಮಾಡಲು ಶಿಕ್ಷಕ ರ ಸಹಕಾರ ಕೋರಿ ಮನವಿ ಸಲ್ಲಿಸಿದರು. ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಗಣಪತಿ ಹೋಬಳಿದಾರ್ ಪದವೀಧರ ಶಿಕ್ಷಕರ ಸಮಸ್ಯೆ ವ್ರಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಮುಖ್ಯೋಪಾಧ್ಯಾಯರ ವೇತನ ಬಡ್ತಿ ಸಮಸ್ಯೆ ನೂತನ ಪಿಂಚಣಿ ರದ್ದತಿ ಕುರಿತು ಗ್ರಾಮೀಣ ಕೃಪಾಂಕದ ಶಿಕ್ಷಕರ ಸಮಸ್ಯೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ವಿನಾಯಕ ಯುವಕ ಮಂಡಲ ರಿ. ಸಾಬ್ರಕಟ್ಟೆ-ಯಡ್ತಾಡಿ ಇದರ 11ನೇ ವರ್ಷದ ಸಾಲಿನ ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಭಾಕರ ಪೂಜಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಂದೀಶ್ ನಾಯ್ಕ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೋಪಾಲ ನಾಯ್ಕ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಂಜುನಾಥ ನಾಯ್ಕ, ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವನಾಥ ಸಾಬ್ರಕಟ್ಟೆ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರಾಜೇಂದ್ರ ಪೂಜಾರಿ ಅವರನ್ನು ಸದಸ್ಯರ ಸಮ್ಮುಖದಲ್ಲಿ ಮುಂದಿನ ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ್ ನಿಷೇಧ ಕಾನೂನನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮ್ಯಾನುವಲ್ ಸ್ಕ್ಯಾವೆಂಜರ್ ಗಳ ನಿಷೇಧ ಮತ್ತು ಪುನರ್ವಸತಿ ಅಧಿನಿಯಮವು 2013ರಿಂದ ಜಾರಿಗೆ ಬಂದಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಇವುಗಳನ್ನು ಉಲ್ಲಂಘಿಸಿ ಕೆಲಸ ಮಾಡಿಸಿದ್ದಲ್ಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. ಸಫಾಯಿ ಕರ್ಮಾಚಾರಿ ಮತ್ತು ಅವರ ಕುಟುಂಬ ವರ್ಗದವರ ಕಲ್ಯಾಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ತಪ್ಪದೇ ಮಾಡಬೇಕೆಂದು ತಿಳಿಸಿದ ಅವರು, ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಸರಕಾರದಿಂದ ಸಿಗುವ ಸೌಲಭ್ಯದ ಬಗ್ಗೆ ಹಾಗೂ ಮ್ಯಾನುವಲ್ ಸ್ಕ್ಯಾವೆಂಜರ್ನಿ ಷೇಧದ ಕುರಿತ ಮಾಹಿತಿ ಕಾರ್ಯಾಗರಾವನ್ನು ನಾಳೆ ಆಯೋಜಿಸಬೇಕು. ಸಾಧ್ಯವಾದಲ್ಲಿ ಅಲ್ಲಿಯೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವ್ಯಕ್ತಿತ್ವದ ಬೆಳವಣಿಗೆ, ನಾಯಕತ್ವ ಗುಣ ಕಲಿಕೆ, ಸಮಾಜದ ಆಗುಹೋಗುಗಳ ಬಗ್ಗೆ ಸ್ಪಂದಿಸುವ ಗುಣ, ಪರಿಸರ ಸಂರಕ್ಷಣೆ ಮುಂತಾದ ಸೃಜನಾತ್ಮಕ ಹವ್ಯಾಸಗಳನ್ನು ವಿದ್ಯಾರ್ಥಿದೆಸೆಯಲ್ಲಿಯೇ ಬೆಳೆಸುವ ಉದ್ದೇಶವನ್ನು ರೋಟರಾಕ್ಟ್ ಕ್ಲಬ್ ಹೊಂದಿದೆ ಎಂದು ಆರ್.ಐ 3182 ಜಿಲ್ಲಾ ಗವರ್ನರ್ ಎಂ ರಾಮಚಂದ್ರಮೂರ್ತಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಆಶ್ರಯದಲ್ಲಿ ಆರಂಭಗೊಂಡ ರೋಟರಾಕ್ಟ್ ಕ್ಲಬ್ ನ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ರೋಟರಾಕ್ಟ್ ಕಬ್ಬಿನ ಅಧ್ಯಕ್ಷೆಯಾಗಿ ಅಮೀಕ್ಷಾ ಡಿ ನಾಯ್ಕ್ ಇವರ ಪದ ಪ್ರಧಾನ ಕಾರ್ಯಕ್ರಮವು ನಡೆಯಿತು. ಜಿಲ್ಲಾ ರೋಟರಾಕ್ಟ್ ಚೇರ್ಮನ್ ಕಮಿಟಿ ಕೆ. ಕೆ ಕಾಂಚನ್ ಅವರು ರೋಟರ್ಯಾಕ್ಟ್ ಕ್ಲಬ್ ಬಗ್ಗೆ ಮಾಹಿತಿಯನ್ನು ನೀಡಿದರು. ಅಸಿಸ್ಟೆಂಟ್ ಗವರ್ನರ್ ರೋಟೇರಿಯನ್ ಜಯಪ್ರಕಾಶ್ ಶೆಟ್ಟಿ, ಡಿ ಆರ್ ಆರ್ ಗ್ಲಾಡ್ಸನ್, ಮಾಜಿ ಅಸಿಸ್ಟೆಂಟ್ ಗವರ್ನರ್ ಎಚ್ ಗಣೇಶ್ ಕಾಮತ್, ಜೋನಲ್ ಲೆಫ್ಟಿನೆಂಟ್ ರಾಮನಾಥ್ ನಾಯಕ್ ಕಬ್ಬಿನ ಕಾರ್ಯದರ್ಶಿ ನಾರಾಯಣ ಈ ನಾಯ್ಕ್ ಮತ್ತು ರೋಟರಾಕ್ಟ್ ಕ್ಲಬ್‌ನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.22: ತಾಲೂಕಿನ ಅಂಪಾರು ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ನಾಗರಾಜ (36) ಎಂಬುವವರ ಸಾವಿನ ಪ್ರಕರಣಕ್ಕೆ ತಿರುವು ದೊರಕಿದ್ದು ಪತ್ನಿ, ಸಂಬಂಧಿ ಹಾಗೂ ನೆರಮನೆಯಾತ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಆರೋಪಿಗಳಾದ ಪತ್ನಿ ಮಮತಾ (34), ಆಕೆಯ ಭಾವ ಕುಮಾರ್, ಪಕ್ಕದ ಮನೆಯ ಯುವಕ ದಿನಕರ ಮತ್ತು ಕುಮಾರ್ ಅವರ ಇಬ್ಬರು ಮಕ್ಕಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಬಾಲಕರನ್ನು ರೀಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಒಂದು ವರ್ಷದಿಂದ ಸಂಚು, ಕೊಲೆ ಮಾಡಿ ಸುಳ್ಳು ಪ್ರಕರಣ ದಾಖಲು:ಸಾಗರ ತಾಲೂಕಿನವರಾದ ನಾಗರಾಜ ಹಾಗೂ ಮಮತಾ ಕಳೆದ ಹತ್ತು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು ಅವರಿಗೆ ಮೂವರು ಮಕ್ಕಳಿದ್ದಾರೆ. ಅಂಪಾರು ಮೂಡುಬಗೆಯ ವಿವೇಕ ನಗರದಲ್ಲಿ ವಾಸವಾಗಿದ್ದ ನಾಗರಾಜ್ ವಿಪರೀತ ಕುಡಿತದ ಚಟ ಹೊಂದಿದ್ದು ಮನೆಯಲ್ಲಿ ಪ್ರತಿದಿನ ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಹೊರಗಿನವರೊಂದಿಗೂ ಜಗಳವಾಡುವುದು, ಖ್ಯಾತೆ ತೆಗೆಯುವುದು ಮಾಡುತ್ತಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಿಂದ ಇಲ್ಲಿಂದ ಮಂಗಳೂರಿಗೆ ತೆರಳುವ ಖಾಸಗಿ ಎಕ್ಸ್‌ಪ್ರೆಸ್ ಬಸ್ ಏರಿದ್ದ ಯುವಕ ಚಿನ್ನಾಭರಣ ಸಹಿತ ಅಮೂಲ್ಯ ದಾಖಲೆಗಳನ್ನು ಕಳೆದುಕೊಂಡಿದ್ದು, ಕಂಡಕ್ಟರ್ ಪ್ರಾಮಾಣಿಕತೆಯಿಂದ ಮರಳಿ ಪಡೆದುಕೊಂಡಿದ್ದಾನೆ. ಕುಂದಾಪುರದಲ್ಲಿ ಬಸ್ ಏರಿದ್ದ ಯುವಕ ತೆಕ್ಕಟ್ಟೆಯಲ್ಲಿ ಇಳಿದುಹೋಗಿದ್ದಾನೆ. ಆತ ಕುಳಿತಿದ್ದ ಸೀಟು ನೋಡಿದಾಗ ಅಲ್ಲೊಂದು ಬ್ಯಾಗ್ ಇತ್ತು. ಅದರಲ್ಲಿ ಕರಿಮಣಿ ಸರ, ಮೂರು ಬಳೆಗಳು ಮತ್ತು ಒಂದು ಮೊಬೈಲ್ ಇತ್ತು. ಬ್ಯಾಗ್ ನೋಡಿದ ಕಂಡಕ್ಟರ್ ವಿಟ್ಲದ ಗೋಪಾಲ್ ಎಂಬಾತ, ಬಸ್ ಚಾಲಕ ಪ್ರತಾಪ್ ಎಂಬರಿಗೆ ತಿಳಿಸಿದ್ದಾರೆ. ಇದೇ ವೇಳೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೋಟ ಪೊಲೀಸ್ ಸಿಬ್ಬಂದಿಗೆ ಬ್ಯಾಗ್ ಹಸ್ತಾಂತರಿಸಿ ವಿಷಯ ತಿಳಿಸಿದ್ದಾರೆ. ನಂತರ ಜಾಲತಾಣದಲ್ಲಿ ಯುವಕ ಕಳೆದುಕೊಂಡ ಸೊತ್ತುಗಳ ಪೋಟೋ ಹಾಕಿ ಈ ನಂಬರ್‌ಗೆ ಕರೆ ಮಾಡಿ ಎಂದು ಸಂದೇಶ ರವಾನಿಸಿದ್ದರು. ಸಂದೇಶ ಹೇಗೋ ಯುವಕನಿಗೆ ತಲುಪಿದ್ದು, ಬ್ಯಾಗ್ ಕಳೆದುಕೊಂಡಿದ್ದ ಠಾಣೆಗೆ ತೆರಳಿ ಬ್ಯಾಗ್ ಪಡೆದುಕೊಂಡಿದ್ದಾನೆ. ಬಸ್ ಚಾಲಕ ಪ್ರತಾಪ್ ಮತ್ತು ಕಂಡಕ್ಟರ್ ವಿಟ್ಲ ಗೋಪಾಲ್ ಅವರ ಕಾರ್ಯ ಮೆಚ್ಚುಗೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮಾಜದಲ್ಲಿ ಸರಿಯಾಗಿ ಜೀವಿಸಬೇಕಾದರೆ ಕಾನೂನಿನ ಅಗತ್ಯತೆ ಇದೆ. ಪ್ರತಿಯೊಂದು ಕಾನೂನು ಒಂದಲ್ಲ ಒಂದು ಪ್ರಯೋಜನವನ್ನು ನೀಡುತ್ತದೆ. ಕಾನೂನಿನ ಅರಿವು ಇಲ್ಲದಿದ್ದಲ್ಲಿ ನಾವು ನೀವೆಲ್ಲ ಒಳ್ಳೆಯ ಪ್ರಜೆಗಳಾಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಬಹುಸಂಖ್ಯೆಯ ವಿದ್ಯಾರ್ಥಿ ಸಮೂಹಕ್ಕೆ ಅರಿವು ಮೂಡಿಸುವುದು ಕಾನೂನು ಪ್ರಾಧಿಕಾರದ ಧ್ಯೇಯವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಕಾನೂನಿನ ಪ್ರಕ್ರಿಯೆಗಳನ್ನು ಮನವರಿಕೆ ಮಾಡಿಕೊಂಡು ಗೌರವದಿಂದ ಜೀವನ ನಡೆಸುವಂತಾಗಬೇಕು ಎಂದು ಬೆಂಗಳೂರು ಜಿಲ್ಲಾ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಇದರ ಸದಸ್ಯ ಎಚ್. ಶಶಿಧರ್ ಶೆಟ್ಟಿ ಹೇಳಿದರು. ಅವರು, ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನುನು ಸೇವಾ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ ಕುಂದಾಪುರ (ರಿ), ಲಯನ್ಸ್ ಕ್ಲಬ್ ಬನ್ನಾಡಿ, ವಡ್ಡರ್ಸೆ, ಲಯನ್ಸ್ ಕ್ಲಬ್ ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ…

Read More