Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ 4 ಅಂಗನವಾಡಿ ಕಾರ್ಯಕರ್ತೆ ಮತ್ತು 9 ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿಯ ನೋಟೀಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಜುಲೈ 13 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಲ್ಪಸಂಖ್ಯಾತ ಇಲಾಖೆಯಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯು ಕಠಿಣವಾಗಿದ್ದು, ಮೂರ್ನಾಲ್ಕು ಮಟ್ಟದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಕೇವಲ ಹೆಸರಿನಲ್ಲಿ ಒಂದೆರಡು ಅಕ್ಷರಗಳು ತಾಂತ್ರಿಕ ಕಾರಣದಿಂದಾಗಿ ಬದಲಾಗಿದ್ದರೆ ಅವರಿಗೆ ಸಿಗಬೇಕಾದ ವಿದ್ಯಾರ್ಥಿವೇತನದಿಂದ ಅವರು ವಂಚಿತರಾಗುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸರಕಾರವು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸುವ ಕ್ರಿಯೆಯನ್ನು ಸರಳಗೊಳಿಸಿ ಅಗತ್ಯ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಈ ಹಿಂದೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿವೇತನ ಸಿಗದೇ ಹೆಚ್ಚು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಮತ್ತು ಅಗಾಧ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೋವಿಡ್ ಹಿನ್ನೆಲೆಯಿಂದ ಘೋಷಿಸಲಾದ ಲಾಕ್ ಡೌನ್ ಸಮಸ್ಯೆಯಿಂದಾಗಿ ಆರ್ಥಿಕ ಸಂಕಷ್ಟದಿಂದ ಶಿಕ್ಷಣವನ್ನು ಮೊಟಕುಗೊಳಿಸಿ ಕೂಲಿ ಕೆಲಸ, ಉದ್ಯೋಗದ ಕಡೆಗೆ ಒಲವು ತೋರುತ್ತಿದ್ದಾರೆ. ಇದು ಬಹಳ ಗಂಭೀರವಾದ ಪಿಡುಗಾಗಿ ಸಮಾಜವನ್ನು ಉನ್ನತ ಶಿಕ್ಷಣದಿಂದ ವಂಚಿತ ಸಮಾಜವಾಗಿ ಪರಿವರ್ತಿಸುತ್ತಿದೆ. ಇದನ್ನು ಸರಿದೂಗಿಸಲು ಸರಕಾರ ಕ್ರಿಯಾಶೀಲ ಕ್ರಮಗಳನ್ನು ತಗೆದುಕೊಂಡು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸಂಪೂರ್ಣ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜುಲೈ 19 ಮತ್ತು 22ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಕೈಗೊಂಡಿರುವ ಸಿದ್ದತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 7597 ಬಾಲಕರು , 6787 ಬಾಲಕಿಯರು ಸೇರಿದಂತೆ ಒಟ್ಟು 14384 ವಿದ್ಯಾರ್ಥಿಗಳು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಲಿದ್ದು, ಇದಕ್ಕಾಗಿ 88 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ತಲಾ 88 ಮುಖ್ಯ ಅಧೀಕ್ಷಕರು , ಕಸ್ಟೋಡಿಯನ್, ಸ್ಥಾನಿಕ ಜಾಗೃತದಳ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಸೇರಿ ಒಟ್ಟು 2266 ಸಿಬ್ಬಂದಿಗಳನ್ನು ವಿವಿಧ ಕಾರ್ಯಗಳಿಗೆ ನಿಯೋಜಿಸಿದ್ದು, ಈ ಎಲ್ಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮೂಲಕ ವಿದ್ಯಾರ್ಥಿಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಆರೆಸೆಸ್ಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಪತ್ನಿ ಡಾ. ಕಮಲ ಪ್ರಭಾಕರ್ ಭಟ್ ಅವರು ಭೇಟಿ ನೀಡಿ ವೀಕ್ಷಿಸಿದರು. ಕೆರೆಯ ಮಧ್ಯದ ಕಾರಂತರ ಕಂಚಿನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರಂಗಮಂದಿರ, ಆರ್ಟ್ ಗ್ಯಾಲರಿ, ಮಿನಿ ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಕಾರಂತ ಥೀಮ್ ನಲ್ಲಿ ನಡೆಯುವ ಕಾರ್ಯಕ್ರಮ , ಚಟುವಟಿಗೆ ಬಗ್ಗೆ ಮಾಹಿತಿ ಪಡೆದುಕೊಂಡರು. ನೂತನವಾಗಿ ನಿರ್ಮಾಣವಾಗುತ್ತಿರುವ ಸಂಗೀತ ಕಾರಂಜಿಯ ರೂಪುರೇಷೆ ಬಗ್ಗೆ ಚರ್ಚಿಸಿದರು. ಥೀಮ್ ಪಾರ್ಕ್ ಅಭಿವೃದ್ಧಿಗೊಳ್ಳುತ್ತಿರುವುದು ಸಂತಸದ ವಿಷಯ ಇನ್ನಷ್ಟೂ ಅಭಿವೃದ್ಧಿ ಜೊತೆಗೆ ಚಟುವಟಿಕೆ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಪ್ರತಿಷ್ಠಿತ ಇಂಡಿಯಾ ಟುಡೇ ನಿಯತಕಾಲಿಕೆ ನಡೆಸಿದ ರಾಷ್ಟ್ರಮಟ್ಟದ ಸಮೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ವಿವಿಧ ವಿಭಾಗಗಳು ಜತೆಗೆ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಅತ್ಯುನ್ನತ ಸ್ಥಾನ ಪಡೆದಿವೆ. ಅಖಿಲ ಭಾರತ ಮಟ್ಟದಲ್ಲಿ ಅತ್ಯುತ್ತಮ ಕಾಲೇಜುಗಳನ್ನು ಗುರುತಿಸುವುದಕ್ಕಾಗಿ ಪ್ರತೀವರ್ಷವೂ ಇಂಡಿಯಾ ಟುಡೆ ಸಮೀಕ್ಷೆಯನ್ನು ನಡೆಸುತ್ತಾ ಬಂದಿದ್ದು ಇದು 25ನೇ ವರ್ಷದ ಸಮೀಕ್ಷೆಯಾಗಿದೆ. ಇಂಡಿಯಾ ಟುಡೇ-2021ನ ಈ ಸರ್ವೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ವಿವಿಧ ವಿಭಾಗಗಳು ದೇಶದಲ್ಲಿಯೇ ಅತ್ಯುನ್ನತ ಸಾಧನೆ ಮಾಡಿದ, ಕ್ಷಮತೆ ಹೊಂದಿದ ಕಾಲೇಜುಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ. ಕಲೆ, ವಿಜ್ಞಾನ, ವಾಣಿಜ್ಯ, ವೈದ್ಯಕೀಯ, ಕಾನೂನು, ಸಮೂಹಸಂವಹನ, ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್, ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕಂಪ್ಯೂಟರ್ ಅಪ್ಲಿಕೇಶನ್, ಹೊಟೇಲ್ ಮ್ಯಾನೇಜ್‌ಮೆಂಟ್ ಸೇರಿದಂತೆ ವಿವಿಧ 14 ವಿಭಾಗಗಳಲ್ಲಿ ಸಮೀಕ್ಷೆ ನಡೆಸಿದ್ದು, 112 ವೈವಿಧ್ಯಮಯ ಕಾರ‍್ಯ ಕ್ಷಮತೆಯ ಸೂಚಕಗಳನ್ನು ಗುಣಮಟ್ಟದ ಮಾಪನಕ್ಕಾಗಿ ಪರಿಗಣಿಸಲಾಗಿತ್ತು. ಈ ಸೂಚಕಗಳನ್ನೊಳಗೊಂಡಂತೆ ವಿದ್ಯಾರ್ಥಿ ದಾಖಲಾತಿ ಪ್ರಮಾಣ ಹಾಗೂ ಸಂಸ್ಥೆಯ ಆಡಳಿತ, ಶೈಕ್ಷಣಿಕ ಶ್ರೇಷ್ಠತೆ, ಮೂಲಭೂತ ಸೌಕರ‍್ಯ ನಿರ್ವಹಣೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಅಂಚೆ ಇಲಾಖೆಯಲ್ಲಿ 41 ವರ್ಷ ಹಾಗೂ ಗಂಗೊಳ್ಳಿ ಉಪ ಅಂಚೆ ಕಛೇರಿಯಲ್ಲಿ ಪೋಸ್ಟ್‌ಮ್ಯಾನ್ ಆಗಿ 11ವರ್ಷ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಬಾಬಣ್ಣ ಬಳೆಗಾರ್ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕಾರ್ಯದರ್ಶಿ ಎಂ.ನಾಗೇಂದ್ರ ಪೈ, ರೋಟರಿ ಜಿಲ್ಲೆಯ ಮಾಜಿ ಅಸಿಸ್ಟೆಂಟ್ ಗವರ್ನರ್ ಎಚ್.ಗಣೇಶ ಕಾಮತ್, ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಮಾಜಿ ಅಧ್ಯಕ್ಷರಾದ ಉಮೇಶ ಮೇಸ್ತ, ಕೆ.ರಾಮನಾಥ ನಾಯಕ್, ವಾಸುದೇವ ಶೇರುಗಾರ್, ಶಿವಾನಂದ ಪೂಜಾರಿ, ನಿಯೋಜಿತ ಅಧ್ಯಕ್ಷ ರಾಜೇಶ ಎಂ.ಜಿ, ಗಂಗೊಳ್ಳಿ ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಡುಪಿ ಜಿಲ್ಲಾ ಉಪನಿರ್ದೇಶಕ ಎಂ. ಎಚ್. ನಾಗೂರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜು.19ರಂದು ಪ್ರಾರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಾಡಿಕೊಳ್ಳಬೇಕಿರುವ ಸಿದ್ಧತೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಕೇಂದ್ರದ ಅಧಿಕಾರಿಗಳಿಗೆ ಮಾಹಿತಿ ನೀಡಿ ಶಾಲೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕೋವಿಡ್-19 ಹಿನ್ನಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಮಾನಸಿಕ ಸ್ಥೈರ್ಯ ತುಂಬುವ ಕೆಲಸ ನಡೆಸಬೇಕು. ವಿದ್ಯಾರ್ಥಿಗಳು ಯಾವುದೇ ಹೆದರಿಕೆ ಇಲ್ಲದೆ ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆಯನ್ನು ಬರೆಯುವ ನಿಟ್ಟಿನಲ್ಲಿ ಅಧ್ಯಾಪಕರು ಶ್ರಮಿಸಬೇಕು ಎಂದರು. ಇದೇ ಸಂದರ್ಭ ಚಂದನ ವಾಹಿನಿ ಮೂಲಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ಮಾರ್ಗದರ್ಶನ ನೀಡಿದರು ಹಾಗೂ ಪರೀಕ್ಷೆಯ ಒಎಂಆರ್ ಶೀಟ್‌ನ್ನು ಭರ್ತಿ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ಅಗತ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ 3 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ವಿವರ: ಅಕೌಂಟೆಂಟ್ ಕಂ ಕ್ಲರ್ಕ್/ ಸ್ಟೋರ್ ಕೀಪರ್ನ 1 ಹುದ್ದೆಗೆ ಬಿ.ಕಾಂ ಪದವಿ ಮತ್ತು ಕಂಪ್ಯೂಟರ್ ಅನುಭವ ಹೊಂದಿರುವವರು (ಮಾಸಿಕ ಗೌರವಧನ 12,000), ಕೃತಕಾಂಗ ಜೋಡಣೆ ಪಿ & ಓ ಅಭಿಯಂತರು 1 ಹುದ್ದೆಗೆ ಪಿ & ಓ ಇಂಜಿನಿಯರಿಂಗ್ ಪದವಿ/ ಡಿಪ್ಲೋಮಾ ವಿದ್ಯಾರ್ಹತೆ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷದ ಅನುಭವ ಹೊಂದಿರುವವವರು (ಮಾಸಿಕ ಗೌರವಧನ 25,000) ಹಾಗೂ ಮೊಬಿಲಿಟಿ ಇನ್ಸ್ಟ್ರಕ್ಟರ್ 1 ಹುದ್ದೆಗೆ ಸರ್ಟಿಫಿಕೇಟ್ ಕೋರ್ಸ್ ಇನ್ ಓ & ಎಂ ವಿದ್ಯಾರ್ಹತೆ ಹೊಂದಿರುವ (ಮಾಸಿಕ ಗೌರವಧನ 8,000 ರೂ.) ಅರ್ಹ ಅಭ್ಯರ್ಥಿಗಳು ಜುಲೈ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಯಡಮೊಗೆಯಲ್ಲಿ ಇತ್ತೀಚಿಗೆ ಕೊಲೆಯಾದ ಯಡಮೊಗೆ ಉದಯ್ ಗಾಣಿಗ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಕಾಂಗ್ರೆಸ್ ಪಕ್ಷದಿಂದ ಒಂದು ಲಕ್ಷದ ಇಪ್ಪತೈದು ಸಾವಿರ ಮೊತ್ತದ ಚೆಕ್ ಹಸ್ತಾಂತರಿಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉದಯ್ ಗಾಣಿಗ ಅವರದ್ದು ಒಂದೇ ಕೊಲೆಯಲ್ಲ, ಹಲವು ಕೊಲೆಗಳು ಆಗಿವೆ ಎಲ್ಲ ಕೊಲೆಗಳನ್ನು ಮುಚ್ಚಿ ಹಾಕುವ ದೊಡ್ಡ ಪ್ರಯತ್ನ ನಡೆಯುತ್ತಿದೆ. ಬೇರೆ ಕೊಲೆಗಳು ನಡೆದಾಗ ಸಿಬಿಐಗೆ ವಹಿಸಿದ್ದಾರೆ ಇದನ್ನು ಕೂಡ ಸಿಬಿಐಗೆ ವಹಿಸಿ, ಸಾವಿಗೆ ನ್ಯಾಯ ದೊರಕಿಸಿ ಕೊಡಿ ಉದಯ್ ಗಾಣಿಗ ಬಿಜೆಪಿ ಪಕ್ಷಕ್ಕೆ, ಬೆಳಗ್ಗೆ ಸಂಜೆ ದುಡಿದಿದ್ದಾನೆ ಅಂತ ಹೆಣ್ಣು ಮಗಳು ಹೇಳುತ್ತಾಳೆ ಕೊಲೆ ಮಾಡಿದ್ದು, ಬಿಜೆಪಿಯ ಪಂಚಾಯತ್ ಅಧ್ಯಕ್ಷನೇ ಅಂತ ಹೇಳಿದ್ದಾಳೆ ನ್ಯಾಯ ಒದಗಿಸಿ, ಕುಟುಂಬಕ್ಕೆ ಸೂಕ್ತ ಒದಗಿಸಬೇಕು ಈ ಬಗ್ಗೆ ವಿಧಾನಸಭೆಯಲ್ಲಿ ಹೋರಾಟ ಮಾಡುತ್ತೇವೆ ಸಿಎಂ, ಗೃಹ ಸಚಿವರಲ್ಲಿ ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದರು. ಈ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜು.6: ತಾಲೂಕಿನ ಬಸ್ರೂರು ಮೂಡ್ಕೇರಿ ಕೋಟಿಚೆನ್ನಯ್ಯ ಪಂಜುರ್ಲಿ ಗರಡಿಗೆ ಮಂಗಳವಾರ ಸಂಜೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ. ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಕುಂದಾಪುರ ಬಿಲ್ಲವ ಸಂಘದಿಂದ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಆ ಬಳಿಕ ಅವರು ಯಡಮೊಗೆಯಲ್ಲಿ ಕೊಲೆಯಾದ ಉದಯ ಗಾಣಿಗ ಅವರ ನಿವಾಸಕ್ಕೆ ತೆರಳಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭ ಕೆಪಿಸಿಸಿ ಕಾರ್ಯಧ್ಯಕ್ಷ ದ್ರುವ ನಾರಾಯಣ, ಮಾಜಿ ಸಚೊವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ‌ ಪೂಜಾರಿ, ಎಐಸಿಸಿ ಸದಸ್ಯ ಪಿ.ವಿ ಮೋಹನ್, ಬಸ್ರೂರು ಮೂಡ್ಕೇರಿ ಗರಡಿ ಆಡಳಿತ ವ್ಯವಸ್ಥಾಪಕ ಬಿ. ಗೋಪಾಲ ಪೂಜಾರಿ, ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಎಸ್. ರಾಜು ಪೂಜಾರಿ, ಮದನ್ ಕುಮಾರ್, ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘಧ…

Read More