ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇಶದಲ್ಲಿ ನಾವು ಮತ್ತು ನಮ್ಮ ಕುಟುಂಬ ಎಂಬ ಸ್ವಾರ್ಥದಲ್ಲಿ ಬದುಕುತ್ತಿದ್ದೇವೆ. ನಾವು ನಿಶ್ಚಿಂತೆಯಿಂದ ಸುಂದರ ಬದುಕು ಕಾಣಲು ತಮ್ಮ ಜೀವದ ಹಂಗು ತೊರೆದು ನಮ್ಮನ್ನು ನಮ್ಮ ದೇಶವನ್ನು ಹಗಲಿರುಳು ಕಾಯುತ್ತಿರುವ ಸೈನಿಕರ ನೆನಪು ಯಾರಿಗೂ ಆಗದಿರುವುದು ಬೇಸರದ ಸಂಗತಿ ಎಂದು ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಹೇಳಿದರು. ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ದೇವಳದ ಸಭಾಂಗಣದಲ್ಲಿ ಭಾನುವಾರ ಲೇಖಕ ಬೈಂದೂರು ಚಂದ್ರಶೇಖರ ನಾವಡರ ’ಸೈನಿಕನ ಆಂತರ್ಯದ ಪಿಸುನುಡಿ ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ದೇಶದ ಭದ್ರತೆ ಮತ್ತು ರಕ್ಷಣೆಗೆ ಗಡಿಭಾಗದಲ್ಲಿ ಹಗಲಿರುಳು ಕಾಯುತ್ತಿರುವ ಸೈನಿಕರ ದೈನಂದಿನ ಚಟುವಟಿಕೆಗಳು, ಅವರ ಜೀವನಶೈಲಿಯನ್ನು ನಿವೃತ್ತ ಸೈನಿಕ, ಲೇಖಕರು ಎಳೆಎಳೆಯಾಗಿ ತಮ್ಮ ಕೃತಿಯಲ್ಲಿ ಬಿಚ್ಚಿಟ್ಟಿದ್ದಾರೆ. ತಮ್ಮ ನೈಜ ಅನುಭವದ ಘಟನಾವಳಿಗಳನ್ನು ಭಾವನಾತ್ಮಕವಾಗಿ ಪುಸ್ತಕ ರೂಪದಲ್ಲಿ ಮೆಲುಕು ಹಾಕಿರುವುದು ಖುಷಿ ನೀಡಿದೆ ಎಂದರು. ದೇವಳದ ಸೇವ ಸಮಿತಿ ಅಧ್ಯಕ್ಷ ನಾಕಟ್ಟೆ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸೇನೆಯ ಮೂರೂ ಪಡೆಗಳಲ್ಲಿ ಸೇವೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮನರಂಜನಾ ಕಲಾ ಪ್ರಕಾರಗಳಲ್ಲಿ ಯಕ್ಷಗಾನ ಇಂದಿಗೂ ಪ್ರಥಮ ಸ್ಥಾನದಲ್ಲಿದೆ. ಸರ್ವಾಂಗ ಸುಂದರವಾದ ಕಲಾ ಪ್ರಕಾರ, ಸಂಗೀತ, ಸಾಹಿತ್ಯ, ನಾಟ್ಯ, ವೇಷಭೂಷಣ, ಕುಣಿತ ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಜನತೆಗೆ ಉತ್ತಮ ಸಂದೇಶ ನೀಡುವ ಮೂಲಕ ಜ್ಞಾನ ತುಂಬುವ ಕೆಲಸ ಯಕ್ಷಗಾನಗಳಿಂದಾಗುತ್ತಿವೆ ಎಂದು ಉಪ್ಪುಂದ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಯು. ರಾಜೇಶ ಪೈ ಹೇಳಿದರು. ಉಪ್ಪುಂದ ಶ್ರೀಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಭಾನುವಾರ ಸ್ಥಳೀಯ ವೃತ್ತಿಪರ ಯಕ್ಷಗಾನ ಕಲಾವಿದರ ಶ್ರೀ ದುರ್ಗಾಪರಮೇಶ್ವರಿ ಯಕ್ಷಕಲಾ ಟ್ರಸ್ಟ್ ವತಿಯಿಂದ ನಡೆದ ಯಕ್ಷಗಾನ ಮುಖವರ್ಣಿಕೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಕಾರ್ಯಕ್ರಮಗಳಲ್ಲಿ ಹಿರಿಯರು ಹೆಚ್ಚು ಹೆಚ್ಚು ಯುವ ಪೀಳಿಗೆಯನ್ನು ಕರೆತರುವ ಪ್ರಯತ್ನ ಮಾಡಿದರೆ ಈ ಕರಾವಳಿ ಕಲೆ ಇನ್ನಷ್ಟು ಜನಪ್ರಿಯತೆಯನ್ನು ಪಡೆದುಕೊಳ್ಳಬಹುದು. ನಮ್ಮ ಬದುಕಿಗೆ ಬೇಕಾದ ಪ್ರತಿಯೊಂದು ಜೀವನ ಸಂದೇಶಗಳು ಯಕ್ಷಗಾನದಲ್ಲಿ ದೊರೆಯುವುರಿಂದ ನಮ್ಮ ಸಮಾಜವನ್ನು ಸುಸಂಸ್ಕೃಗೊಳಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು. ಬೈಂದೂರು ಲಾವಣ್ಯ ಕಲಾಸಂಸ್ಥೆ ಉಪಾಧ್ಯಕ್ಷ ನರಸಿಂಹ ಬಿ. ನಾಯಕ್ ಅಧ್ಯಕ್ಷತೆ ವಹಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾವು ವಿದ್ಯಾರ್ಥಿ ದೆಸೆಯಿಂದಲೇ ಸಾಧಕರನ್ನು ಅನುಕರಿಸುತ್ತಾ ಸಾಧನೆಗೆ ಬೇಕಾದ ಅವಕಾಶ ಸೃಷ್ಠಿಸಿಕೊಳ್ಳಬೇಕು. ಸಾಧನೆ ಮತ್ತು ಖುಷಿಯೇ ಗಮ್ಯಸ್ಥಾನವೆಂದು ಹೇಳಲಾಗದು. ಆದರೆ ಇದು ಜೀವನದಲ್ಲಿ ಒಂದು ಮಹತ್ತರ ಮೈಲಿಗಲ್ಲಂತೂ ಹೌದು ಎಂದು ಡಾ. ಮಾಧವ ಶೆಟ್ಟಿ ಹೇಳಿದರು. ಉಪ್ಪುಂದ ಶ್ರೀ ವಿವೇಕಾನಂದ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಶಾಲೆಯ ವಾರ್ಷಿಕೋತ್ಸವ ’ಸೃಜನ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹಳೆಯ ಶಿಕ್ಷಣ ಪದ್ದತಿ ಈಗ ಅರ್ಥ ಕಳೆದುಕೊಂಡು ಅದರ ಸ್ಥಾನದಲ್ಲಿ ಹೊಸ ವ್ಯಾಖ್ಯೆ ರೂಢಿಗೆ ಬಂದಿದೆ. ವಿದ್ಯಾರ್ಥಿಯ ಸರ್ವಾಂಗೀಣ ಅಭಿವೃದ್ದಿ ಶಿಕ್ಷಣದ ಗುರಿಯೆನಿಸಿದ್ದು, ಅದರ ಸಾಧನೆಗೆ ವಿದ್ಯಾರ್ಥಿ, ಶಿಕ್ಷಕ, ಪೋಷಕರ ಸಂಯೋಜಿತ ತ್ರಿಕೋನ ಸ್ಪಂದನೆ ಅಗತ್ಯವೆನಿಸಿದೆ ಎಂದರು. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು. ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಎರಡೂ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಅಗತ್ಯವಾದ ಎಲ್ಲಾ ರೀತಿಯ ಪಾಠ ಹಾಗೂ ಪಾಠೇತರ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಲಾಗುತ್ತಿದೆ ಅನುಭವಿ ಪದವೀಧರ ಶಿಕ್ಷಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರದ ಬಡವರು, ಅಶಕ್ತರಿಗಾಗಿ ಹತ್ತಾರು ಯೋಜನೆಗಳನ್ನು ರೂಪಿಸಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಇದರ ಪ್ರಯೋಜನ ದೊರೆಯುವಂತೆ ಮಾಡುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿ ಕಂದಾಯ ಇಲಾಖೆ ಶ್ರಮಿಸುತ್ತಿದೆ ಎಂದು ಬೈಂದೂರು ತಹಶಿಲ್ದಾರರಾದ ಶ್ರೀಕಾಂತ್ ಎಸ್. ಹೆಗ್ಡೆ ಹೇಳಿದರು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ನಾವುಂದ, ಮರವಂತೆ ಶಾಖೆ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಆಶ್ರಯದಲ್ಲಿ ಶನಿವಾರ ಮರವಂತೆ ಶಾಖಾ ವಠಾರದಲ್ಲಿ ಆಯೋಜಿಸಲಾದ ಗ್ರಾಹಕರ ಸಭೆ, ಕಂದಾಯ ಇಲಾಖೆ ಮಾಹಿತಿ ಹಾಗೂ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಸಾರ್ವಜನಿಕರು ಸಾಧ್ಯವಾದಷ್ಟು ನೇರವಾಗಿ ಕಛೇರಿಗೆ ಬಂದರೆ ಅಗತ್ಯ ಸೌಲಭ್ಯ ದೊರಕಿಸಿಕೊಡುವುದು ನಮ್ಮ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯೋನ್ಮಖರಾಗಿದ್ದೇವೆ ಎಂದರು. ಹಿರಿಯ ಪತ್ರಕರ್ತರಾದ ಎಸ್. ಜನಾರ್ದನ ಮರವಂತೆ, ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಾಸು ಪೂಜಾರಿ, ಎಂ. ವಿನಾಯಕ ರಾವ್, ಭೋಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೆಶ್ವರ ಕಾಮತ್ ಪೆಟ್ರೋಲ್ ಪಂಪ್ ಪ್ರಸನ್ನ ನಾರಾಯಣ ಆಚಾರ್ಯ (47) ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು ಚಿನ್ನಾಭರಣಗಳನ್ನು ಹಾಗೂ ನಗದು ಹಣ ಕಳವುಗೈದ ಪ್ರಕರಣಕ್ಕೆ ಸಂಬಂದಿಸಿದಂತೆ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವೃತ್ತಿಪರ ಕಳವು ಆರೋಪಿಗಳಾದ ಕಾಸರಗೋಡಿನ ಹಾಶಿಮ್ ಎ ಎಚ್ (42 ವರ್ಷ) ಮಜೇಂಶ್ವರದ ಅಬೂಬಕ್ಕರ್ ಸಿದ್ದಿಕ್ (48 ವರ್ಷ) ಎಂಬಾತನನ್ನು ಮಡಿಕೇರಿಯಲ್ಲಿ ಡಿ.27ರಂದು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆಪಾದಿತರು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ. ಮಲ್ವೆ ಪೋಲೀಸ್ ಠಾಣೆ. ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿದ್ದಾಗಿ ತಿಳಿಸಿ ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ಗೆ ಮಾರಾಟ ಮಾಡಿದ್ದರು. ಸದ್ರಿ ಜುವೆಲ್ಲರಿ ಅಂಗಡಿಯವನು ಹಾಜರುಪಡಿಸಿದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಧನವಂತರಿಗೆಲ್ಲಾ ಪರರಿಗೆ ಸಹಾಯ ಮಾಡುವಷ್ಟು ಔದಾರ್ಯವಿರಲ್ಲ. ಹೃದಯವಂತರು ಮಾತ್ರ ಇನ್ನೊಬ್ಬರ ಕಷ್ಟಕ್ಕೆ ಸ್ಪಂಧಿಸುತ್ತಾರೆ ಎಂದು ಅವಧೂತ ವಿನಯ್ ಗುರೂಜೀ ಹೇಳಿದರು. ಅವರು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಇದರ ವತಿಯಿಂದ ಮರವಂತೆ ಗಾಂಧಿನಗರದ ಹಿಂದೂ ಕಾರ್ಯಕರ್ತ ರಾಜು ಮರವಂತೆ ಅವರಿಗೆ ನಿರ್ಮಿಸಿಕೊಡಲಾದ ‘ಶ್ರೀ ವರಲಕ್ಷ್ಮೀ ನಿಲಯ’ ಉದ್ಘಾಟಿಸಿ ಆಶೀರ್ವದಿಸಿ, ಪರರ ಕಷ್ಟಕ್ಕೆ ಸ್ಪಂದಿಸುವ ಶ್ರೇಷ್ಠ ಚಿಂತನೆಗಳು ಮುಖ್ಯ. ಪರರಿಗೆ ಒಳಿತಾಗಲು ಶ್ರಮಿಸುತ್ತಿರುವ ಡಾ. ಗೋವಿಂದ ಬಾಬು ಪೂಜಾರಿಯವರ ಸೇವಾ ಕೈಂಕರ್ಯ ಶ್ರೇಷ್ಠವಾದುದು ಎಂದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ ಪ್ರಾಸ್ತಾವಿಕ ಮಾತನಾಡಿ, ಧರ್ಮ ಜಾಗೃತಿಗಾಗಿ ಹಾಗೂ ಹಿಂದುತ್ವದ ರಕ್ಷಣೆಗಾಗಿ ವೈಯಕ್ತಿಕ ಬದುಕನ್ನು ಮರೆತು ಧರ್ಮ ಕಾರ್ಯದಲ್ಲಿ ತೊಡಗುವ ಸಂಘಟನೆಯ ಕಾರ್ಯಕರ್ತರ ಪರಿಶ್ರಮ, ತ್ಯಾಗ ಸದಾ ಸ್ಮರಣೀಯವಾಗಿದೆ. ಅವರ ಕಷ್ಟ, ನೋವುಗಳಿಗೆ ಸ್ಪಂದಿಸಬೇಕಾಗಿರುವುದು ಧರ್ಮ. ಹೀಗಾಗಿ ಎಲ್ಲಾ ಪ್ರಮುಖರ ಮಾರ್ಗದರ್ಶನದಲ್ಲಿ ಹಿಂದೂ ಕಾರ್ಯಕರ್ತರ ಕಷ್ಟಕ್ಕೆ ಸ್ಪಂದಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಹಾಲ್ಕಲ್‌ನಲ್ಲಿ ನಡೆದ ಒಂಭತ್ತನೇ ’ಕರ್ನಾಟಕ ಹಕ್ಕಿ ಹಬ್ಬ’ವನ್ನು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ಕೊಲ್ಲೂರು ಅಭಯಾರಣ್ಯ ಸೇರಿದಂತೆ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿರುವ ಹಲವು ಬಗೆಯ ಅಪರೂಪದ ಹಕ್ಕಿಗಳ ಬಗ್ಗೆ ಹಕ್ಕಿ ಹಬ್ಬದ ಮೂಲಕ ನಾಡಿಗೆ ಪರಿಚಯಿಸುವ ಕಾರ್ಯ ಉತ್ತಮವಾದುದು ಎಂದು ಹೇಳಿದರು. ಅರಣ್ಯ ಇಲಾಖೆ ಮೂಲಕ ಅರಣ್ಯ ಹಾಗೂ ಇಲ್ಲಿನ ಪ್ರಾಣಿ-ಪಕ್ಷಿಗಳ ರಕ್ಷಣೆ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಆದರೆ ಈ ಕಾಡಿನ ತಪ್ಪಲು ಪ್ರದೇಶದಲ್ಲಿ ಶೇ.95ರಷ್ಟು ಬಡತನ ರೇಖೆಗಿಂತ ಕೆಳಗಿರುವ ಬುಡಕಟ್ಟು ಜನಾಂಗದವರು ಕೃಷಿಯನ್ನೇ ನಂಬಿ ಬದುಕುತ್ತಿದ್ದಾರೆ. ಅವರಿಗೆ ಮೂಕಸೌಕರ್ಯ ಒದಗಿಸುವುದಕ್ಕೆ ಆರಣ್ಯ ಇಲಾಖೆ ಕಾನೂನುಗಳು ತೊಡಕಾಗುತ್ತಿದೆ. ಈ ನೆಲೆಯಲ್ಲಿ ಅರಣ್ಯ ಇಲಾಖೆಯ ಕಾನೂನುಗಳನ್ನು ಸ್ವಲ್ಪಮಟ್ಟಿಗೆ ಸಡಿಲಿಸುವ ಮೂಲಕ ಈ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸಹಕಾರ ನೀಡಬೇಕಿದೆ. ಕಾಡುಪ್ರಾಣಿಗಳ ರಕ್ಷಣೆಯೊಂದಿಗೆ ಕಾಡಂಚಿನಲ್ಲಿ ಬದುಕು ಕಟ್ಟಿಕೊಂಡವರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ ಕೆಲವು ವರ್ಷಗಳಿಂದೀಚೆಗೆ ಸರಕಾರಿ ಶಾಲೆಯೊಂದನ್ನು ಮಾದರಿಯಾಗಿ ರೂಪಿಸಿ, ಎಲ್ಲವೂ ಸಸೂತ್ರವಾಗಿ ನಡೆಯುತ್ತಿರುವಾಗ ಏಕಾಏಕಿ ಹೆಚ್ಚುವರಿ ಕಾರಣ ಮುಂದಿಟ್ಟು ಶಿಕ್ಷಕರ ವರ್ಗಾವಣೆ ಮಾಡುತ್ತಿರುವುದು ಸರಿಯಲ್ಲ. ಶಿಕ್ಷಣ ಇಲಾಖೆ ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು, ಶಾಲೆಯಲ್ಲಿ ಕೊರತೆಯಿರುವ ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ್ ನಾವುಂದ ಆಗ್ರಹಿಸಿದರು. ಆವರು ಶುಕ್ರವಾರ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಜಿಪಿಟಿ ಶಿಕ್ಷಕರನ್ನು ಹೆಚ್ಚುವರಿ ಮಾಡಿರುವುದನ್ನು ಕೈಬಿಡಲು ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು, ಪೋಷಕರು, ಹಳೆವಿದ್ಯಾರ್ಥಿಗಳು ಹಮ್ಮಿಕೊಂಡ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, 63 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ, ಇದೀಗ 305 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ 10 ಶಿಕ್ಷಕರು ಇರಬೇಕಿದ್ದು, ಪ್ರಸ್ತುತ 7 ಮಂದಿ ಶಿಕ್ಷಕರು ಮಾತ್ರವೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಮತ್ತೆ ಇಬ್ಬರು ಶಿಕ್ಷಕರನ್ನು ಹೆಚ್ಚುವರಿಯನ್ನಾಗಿಸಿ ವರ್ಗಾವಣೆ ಮಾಡಿದರೆ ಮಕ್ಕಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬದುಕಿನಲ್ಲಿ ಎದುರಾಗಬಹುದಾದ ಸವಾಲು ಸ್ವೀಕರಿಸಿ ಮುನ್ನಡೆಯಲಷ್ಟೆ ಶಿಕ್ಷಣ ನೀಡಲಾಗುತ್ತದೆ. ಶಿಕ್ಷಣದೊಂದಿಗೆ ಯಾವ ವಿಭಾಗದಲ್ಲಿ ಹೆಚ್ಚಿನ ಆಸಕ್ತಿ ಇದೆ ಎಂಬುದನ್ನು ಗುರುತಿಸಿ, ಅದರಲ್ಲಿ ಹೆಚ್ಚಿನ ಕೌಶಲ್ಯ ಹೊಂದಲು ವಿದ್ಯಾರ್ಥಿ ದೆಸೆಯಿಂದಲೇ ತಯಾರಿ ನಡೆಸುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಬೇಕು ಎಂದು ನಿವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ್ ಶೆಟ್ಟಿ ಹೇಳಿದರು. ಅವರು ಗುರುವಾರ ಇಲ್ಲಿನ ಯು. ಬಿ. ಶೆಟ್ಡಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ‘ಚೈತನ್ಯ’ ಉದ್ಘಾಟಿಸಿ ಮಾತನಾಡಿ, ಭಾರತವು ಯುವಜನರ ದೇಶವಾಗಿದ್ದು, ವಿದ್ಯಾರ್ಥಿಗಳು ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾದರೂ ಅದೇ ನಾವು ದೇಶಕ್ಕೆ ಸಲ್ಲಿಸಬಹುದಾದ ಕೊಡುಗೆಯಾಗಿದೆ. ಆಧುನಿಕ ಯುಗದಲ್ಲಿ ನೂರಾರು ಕೆಲಸದ ಅವಕಾಶ ತೆರೆದುಕೊಂಡಿದ್ದು, ಅದಕ್ಕೆ ತಕ್ಕಂತೆ ಸಿದ್ಧರಾಗುವ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿದೆ ಎಂದರು. ಅಧಿಕಾರ ಮತ್ತು ಹುದ್ದೆಯನ್ನು ಕೇವಲ ತೋರಿಕೆಗೆ ಹೊಂದದೇ ಬದ್ಧತೆಯಿಂದ ಕೆಲಸ ಮಾಡಬೇಕಿದೆ. ಯು.ಪಿ.ಎಸ್.ಸಿ ಪರೀಕ್ಷೆ ಬರೆದು ಸಾರ್ವಜನಿಕ ಸೇವೆಗೆ ಸೇರುವುದರಿಂದ ದೇಶದಲ್ಲಿ ಮಹತ್ತರ ಬದಲಾವಣೆ ತರಲು ಸಾಧ್ಯವಿದ್ದು, ಕರಾವಳಿಯ ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇವರ ಚೈತನ್ಯಶಕ್ತಿ ವೃದ್ಧಿಗೆ ಪ್ರತಿ 12 ವರ್ಷಕ್ಕೊಮ್ಮೆ ಬ್ರಹ್ಮಕಲಶೋತ್ಸವ ನಡೆಸುವ ಕ್ರಮವಿದ್ದು, ದೊಡ್ಡ ಭಕ್ತಗಣವನ್ನೇ ಹೊಂದಿರುವ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿಯೂ ಈ ಕಾರ್ಯ ಶೀಘ್ರ ನಡೆಯುವಂತಾಗಲಿ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಬುಧವಾರ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ 11 ದಿನಗಳ ಕಾರ್ಯಕ್ರಮಕ್ಕೆ 1 ಕೋಟಿ ರೂ. ಖರ್ಚಾಗಬಹು. ಉತ್ತಮವಾದ ಸಮಿತಿ ನೇಮಿಸಿಕೊಂಡು ಭಕ್ತರ ದೇಣಿಗೆ ಎಲ್ಲಿಯೂ ವ್ಯರ್ಥವಾಗದಂತೆ ಕಾರ್ಯಕ್ರಮ ಆಯೋಜಿಸುವುದು ದೇವಸ್ಥಾನ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಹೊಣೆಯಾಗಿದೆ ಎಂದರು. ತಂತ್ರಿಗಳಾದ ಕೆ. ಮಂಜುನಾಥ ಅಡಿಗ ಮಾತನಾಡಿ, 25 ವರ್ಷದಿಂದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದಿಲ್ಲ. ಗ್ರಾಮಸ್ಥರು, ಭಕ್ತರ ಸಹಕಾರ ಪಡೆದು ಅಷ್ಟಬಂಧ ಕಾರ್ಯಕ್ರಮ ಮಾಡಬೇಕಾಗಿದೆ. ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದರು. ಪ್ರಧಾನ ಅರ್ಚಕ ಪ್ರಕಾಶ್ ಉಡುಪ, ಬೈಂದೂರು ತಹಶಿಲ್ದಾರ್ ಶ್ರೀಕಾಂತ್ ಹೆಗ್ಡೆ, ಸಿಇಓ ಬಿಮಪ್ಪ ಬಿಲ್ಲಾರ, ಬೈಂದೂರು ಪೊಲೀಸ್…
