Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಎಲ್ಲಾ ಜಿಲ್ಲೆಗಳನ್ನು ಗಣನೆಗೆ ತೆಗೆದುಕೊಂಡಾಗ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿರುವುದು ಕೆಲವೇ ಜಿಲ್ಲೆಗಳು ಮಾತ್ರ. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನದಲ್ಲಿರುವುದು ಒಂದು ಹೆಮ್ಮೆಯ ಸಂಗತಿ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕಾಲ್ತೋಡು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಭಾನುವಾರ ೨೦೨೧-೨೨ನೇ ಸಾಲಿನ ಎಸ್‌ಸಿ ಎಸ್‌ಟಿ, ಟಿಎಸ್‌ಪಿ ಯೋಜನೆಯಡಿ ಆಯುಷ್ ಸೇವಾ ಗ್ರಾಮ ಅನುಷ್ಠಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿಂದಿನ ತಲೆಮಾರಿನಿಂದ ಬಂದಿರುವ ಖಾಸಗಿ ಆರೋಗ್ಯ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾಡಿರುವ ದೂರಗಾಮಿ ಯೋಚನೆಗೆ ಇಂದು ಈ ಎರಡೂ ವಿಭಾಗದಲ್ಲಿ ನಮ್ಮ ಜಿಲ್ಲೆ ಎತ್ತರದ ಸ್ಥಾನಕ್ಕೇರಲು ಸಾಧ್ಯವಾಯಿತು. ಇಂತಹ ಸಂದರ್ಭಗಳಲ್ಲಿ ಆರೋಗ್ಯವನ್ನು ಕೇವಲ ಆಸ್ಪತ್ರೆಗೆ ಸೀಮಿತಗೊಳಿಸದೇ ಸಮಾಜದ ಕಟ್ಟಕಡೆಯ ಸಾಮನ್ಯ ವ್ಯಕ್ತಿಯ ಮನೆ ಮತ್ತು ಮನಸ್ಸಿನವರೆಗೂ ತಲುಪಿ ಆರೋಗ್ಯವನ್ನು ಕಾಪಾಡಬೇಕಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾರ್ವಜನಿಕರು, ಸದಸ್ಯರ ಸಕ್ರೀಯ ಪಾಲ್ಗೊಳ್ಳುವಿಕೆಯಿಂದಲೇ ಸಹಕಾರಿ ಸಂಘಗಳು ಅಭಿವೃದ್ಧಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಆರ್ಥಿಕ ಸಂಸ್ಥೆಗಳು ಸೇವೆಯ ದೃಷ್ಟಿಯಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಬೆಳವಣಿಗೆಗೂ ಇದು ಸಹಾಯವಾಗಿದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಶನಿವಾರ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಇದರ ಗೋಳಿಹೊಳೆ ಶಾಖೆಯ ವಾರ್ಷಿಕೋತ್ಸವದ ಅಂಗವಾಗಿ ಗೊಳಿಹೊಳೆ ಶ್ರೀ ಮಹಿಷಾಮರ್ದಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವ-ಸಹಾಯ ಸಂಘದ ಸದಸ್ಯರು ಸಂಸ್ಥೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅವರು ಸಾಲ ಪಡೆಯುವ ಜೊತೆಗೆ ಉಳಿತಾಯ ಮಾಡುವ ಮನೋಭಾವನೆಯನ್ನು ರೂಡಿಸಿಕೊಳ್ಳುವುದು ಅಗತ್ಯ. ಅದು ತುರ್ತು ಸಂದರ್ಭದಲ್ಲಿ ನೆರವಿಗೆ ಬರುವುದಲ್ಲದೇ ಬದುಕಿನಲ್ಲಿಯೂ ಭದ್ರತೆ ಭಾವ ಮೂಡುವಂತೆ ಮಾಡುತ್ತದೆ ಎಂದ ಅವರು ಸಂಸ್ಥೆಯ ಮೂಲಕ ಸಾಕಷ್ಟು ಸೇವಾ ಕಾರ್ಯಗಳನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿವೇತನ, ಅಶಕ್ತರಿಗೆ ನೆರವು ಮೊದಲಾದ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜ01: ಹೊಸ ವರ್ಷದ ಅಂಗವಾಗಿ 50 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ ಸಂಸ್ಥೆಯಿಂದ ಉಚಿತವಾಗಿ ಗ್ಲುಕೋಮೀಟರ್ (ಮಧುಮೇಹ ಅಳೆಯುವ ಉಪಕರಣ) ಕೊಡುಗೆ ನೀಡಲಾಗುತ್ತಿದೆ. ಈ ಕೊಡುಗೆ ಜನವರಿ 15ರ ತನಕ ಮಾತ್ರ ಇರಲಿದ್ದು, ಅರ್ಹ ಹಿರಿಯ ನಾಗರಿಕರು ತಮ್ಮ ಆಧಾರ್ ಕಾರ್ಡ್ ತೋರಿಸಿ ಗ್ಲುಕೋಮೀಟರ್ ಪಡೆದುಕೊಳ್ಳಬಹುದಾಗಿದೆ. ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ ಸಂಸ್ಥೆಯ ಉಡುಪಿ, ಮಂಗಳೂರು ಹಾಗೂ ಕುಂದಾಪುರ ಶಾಖೆಗೆ ತೆರಳಿ ಹಿರಿಯ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ ದೂರವಾಣಿ: 9901424485 ಗಿರಿಜಾ ಹೆಲ್ತ್ ಕೇರ್ ಉಡುಪಿ, ಮಂಗಳೂರು ಹಾಗೂ ಕುಂದಾಪುರದಲ್ಲಿ ಉತ್ತಮ ಸೇವೆ ನೀಡುತ್ತಿದ್ದು, ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿದೆ. ಒಂದೇ ಸೂರಿನಡಿಯಲ್ಲಿ ಎಲ್ಲಾ ಬಗೆಯ ಸರ್ಜಿಕಲ್ ಪ್ರಾಡೆಕ್ಟ್ ಲಭ್ಯವಿರುವುದು ಇಲ್ಲಿನ ವಿಶೇಷತೆಯಾಗಿದೆ. ಗುಣಮಟ್ಟದ ಪ್ರಾಡೆಕ್ಟ್ ಜೊತೆಗೆ ವೆರೈಟಿ ಪ್ರಾಡೆಕ್ಟ್’ಗಳು ಕೂಡ ಇಲ್ಲಿ ಲಭ್ಯವಿದ್ದು, ಗ್ರಾಹಕರಿಗೂ ಉತ್ತಮ ಆಯ್ಕೆ ದೊರೆಯಲಿದೆ. ಕೊಂಡುಕೊಳ್ಳುವ ಪ್ರಾಡೆಕ್ಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೊರಗ ಕಾಲನಿಯಲ್ಲಿ ಮೆಹೆಂದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿದ್ದಕ್ಕೆ ಹಲ್ಲೆ ನಡೆಸಿದ ಪೊಲೀಸರ ಮೇಲೆ ಕ್ರಮಕೈಗೊಳ್ಳಲಾಗಿದೆ. ಪೊಲೀಸರು ಮಾಡಿದ ತಪ್ಪಿಗೆ ತಪ್ಪಿತಸ್ಥರು ಬೆಲೆತೆರಬೇಕು. ಈ ನಿಟ್ಟಿನಲ್ಲಿ ಸಿಓಡಿ ತನಿಖೆಗೆ ಪ್ರಕರಣ ರವಾನಿಸಲಾಗುತ್ತದೆ. ಕೊರಗರು ಅನೇಕ ಸಮಸ್ಯೆಗಳನ್ನು ಹೇಳಿದ್ದು ಅದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಜಾಗರೂಕತೆ ವಹಿಸಲಾಗುತ್ತದೆ. ಪೊಲೀಸರು ನೊಂದವರ ಮೇಲೆ ಹಾಕಿದ ಕೇಸು ಸುಳ್ಳು ಎಂಬುದು ಅರಿವಿದ್ದು ಇದರ ಬಗ್ಗೆ ತನಿಖೆ ನಡೆಯುತ್ತದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕೋಟತಟ್ಟು ಗ್ರಾಮದ ಬಾರಿಕೆರೆ ಕೊರಗ ಕಾಲನಿಯಲ್ಲಿ ಮೆಹೆಂದಿ ವೇಳೆ ಪೊಲೀಸರಿಂದ ಹಲ್ಲೆಗೊಳಗಾದ ಕೊರಗ ಸಮುದಾಯದವರನ್ನು ಭೇಟಿಮಾಡಿ ಅವರು ಮಾತನಾಡಿ ತಳಮಟ್ಟದ ಸಮುದಾಯದ ಯಾರು ಹೆದರುವ ಅಗತ್ಯವಿಲ್ಲ, ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಬ್ಬರ ಅಮಾನತು ಮಾಡಲಾಗಿದೆ. ಉಳಿದವರ ವರ್ಗಾವಣೆ ಮಾಡಲಾಗಿದ್ದು ಮುಂದಿನ ಕ್ರಮದ ಬಗ್ಗೆ ಅವಲೋಕನ ಮಾಡಲಾಗುತ್ತದೆ. ಈ ಪ್ರಕರಣವನ್ನು ನಾನು ಸಿಒಡಿಗೆ ನೀಡುತ್ತೇವೆ. ಈ ಪ್ರಕರಣಕ್ಕೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೋಟತಟ್ಟು ಗ್ರಾಮದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಸರಣಿ ಮಾಡಿರುವ ಅವರು, “ಕೊರಗ ಸಮುದಾಯದ ಮೇಲೆ ಕೋಟ ಪೊಲೀಸರು ಪ್ರಕರಣ ದಾಖಲಿಸಿರುವುದು, ಅಮಾನವೀಯವಾದುದು ಮಾತ್ರವಲ್ಲ ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಪ್ರಕರಣವನ್ನು ತಕ್ಷಣ ವಾಪಸು ಪಡೆಯಲು ಸಿಎಂ ಸೂಚನೆ ನೀಡಿ, ಕಾರಣಕರ್ತ ಪೊಲೀಸರ ವಿರುದ್ದ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿ ಬ್ರಾಂಡಿನ ಹಿಂದೂ ಧರ್ಮದಲ್ಲಿ ಕೊರಗ ಸಮುದಾಯ ಸೇರಿಲ್ಲವೇ? ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ? ಎಂದು ಪ್ರಶ್ನಿಸಿದ್ದಾರೆ. ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೊರಗರು, ಗಿರಿಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ. ನಾನು, ಗೃಹ ಸಚಿವರು, ಸರ್ಕಾರ ನಿಮ್ಮ ಜೊತೆಯಿದೆ. ಅವಶ್ಯವಿದ್ದರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟದಲ್ಲಿ ಗಿರಿಜನರ ಮೇಲೆ ಪೋಲಿಸರಿಂದ ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿ.ಎಸ್.ಐ ಸಸ್ಪೆಂಡ್ ಮಾಡಿ ಆರು ಮಂದಿ ಪೊಲೀಸರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್ಪಿ ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಅಲ್ಲಿರುವ ಪರಿಸ್ತಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೇನೆ ಎಂದರು. ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್ಪಿ ಅವರಿಗೆ ಕರೆ ಮಾಡಿ ಪ್ರಕರಣದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆ ಬಡಾಕರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಜ.7ರ ಶುಕ್ರವಾರ ಬೆಳಿಗ್ಗೆ 10-30ಕ್ಕೆ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ನಾವುಂದದಲ್ಲಿನ ಸಂಘದ ಪ್ರಧಾನ ಕಛೇರಿಯಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಸಂಘದ ಪ್ರಧಾನ ಕಛೇರಿ ಹಾಗೂ ಎಲ್ಲಾ ಶಾಖೆಗಳು ಸ್ವಂತ ನಿವೇಶನದಲ್ಲಿ ಕಟ್ಟಡ ಹೊಂದಿದೆ. ಮರವಂತೆ ಶಾಖೆಗೂ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದ್ದು, ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ನೀಡುವ ಗುರಿ ಹೊಂದಲಾಗಿದೆ ಎಂದರು. ಜ.7ರ ಬೆಳಿಗ್ಗೆ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೂತನ ಕಟ್ಟಡವನ್ನು ಉದ್ಘಾಟಿಸಲಿದಾರೆ. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಗೋದಾಮು ಉದ್ಘಾಟನೆ ಮಾಡಲಿದ್ದಾರೆ. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಶುಭಶಂಸನೆಗೈಯಲಿದ್ದು, ಮರವಂತೆ ಗ್ರಾಪಂ ಅಧ್ಯಕ್ಷೆ ರುಕ್ಮಿಣಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.31: ಕುಂದಾಪುರದ ಕೆನರಾ ಬ್ಯಾಂಕ್ ನ ಅಚಾತುರ್ಯದಿಂದ ಸೀಝ್ ಆಗಬೇಕಿದ್ದ ಖಾಲಿ ಜಾಗದ ಬದಲು ಕೋರ್ಟ್ ನಲ್ಲಿ ಪ್ರಕರಣ ಚಾಲ್ತಿಯಲ್ಲಿದ್ದ ಅಂಗಡಿಯನ್ನು ಸೀಝ್ ಮಾಡಿರುವ ಘಟನೆ ಕುಂದಾಪುರದ ಆಲೂರಿನಲ್ಲಿ ನಡೆದಿದ್ದು, ಇಂದು ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ತೆರಳಿ ಅಂಗಡಿಯ ಸೀಝ್ ತೆರವುಗೊಳಿಸಿ ಮಾಲೀಕರಿಗೆ ಅಂಗಡಿಯ ಕೀಯನ್ನು ಹಿಂದಿರುಗಿಸಿದ್ದಾರೆ. ಕುಂದಾಪುರದ ಕೆನರಾ ಬ್ಯಾಂಕಿನ ಕಣ್ತಪ್ಪಿನಿಂದ ಇದೀಗ ಅಂಗಡಿ ಮಾಲಕರು ನಷ್ಟು ಅನುಭವಿಸುವಂತಾಗಿದ್ದು, ಈ ಅಚಾತುರ್ಯ ತಮ್ಮ ಕಣ್ತಪ್ಪಿನಿಂದಲೇ ಆಗಿದ್ದಾಗಿ ಬ್ಯಾಂಕಿನವರೂ ಕೋರ್ಟ್ ನಲ್ಲಿ ಒಪ್ಪಿಕೊಂಡಿದ್ದಾರೆ. ಬ್ಯಾಂಕ್ ನವರು ಯಾವುದೇ ಸೂಚನೆ ನೀಡದೆ ಅಂಗಡಿ ಮುಚ್ಚಿದ್ದರು. ಅಲ್ಲದೆ ಈ ವೇಳೆ ಅಂಗಡಿ ಸಾಮಾನುಗಳನ್ನು ತೆರವುಗೊಳಿಸುವುದಾಗಿ ಸೂಚನೆ ನೀಡಿದರೂ ಅದಕ್ಕೆ ಅವಕಾಶ ನೀಡದೇ ಅಂಗಡಿ ಸೀಝ್ ಮಾಡಿದ ಕಾರಣ ಅಂಗಡಿ ಒಳಗಿದ್ದ ಅಪಾರ ಪ್ರಮಾಣದ ವಸ್ತುಗಳು ನಿರುಪಯುಕ್ತವಾಗಿದ್ದು ಇದರಿಂದ ತುಂಬಾ ನಷ್ಟವಾಗಿದೆ ಎಂದು ಅಂಗಡಿ ಮಾಲಕ ನಾಗರಾಜ್ ಹೇಳಿದ್ದಾರೆ. ಈ ಬಗ್ಗೆ ಕಟ್ಟಡದ ಮಾಲಕರಾದ ಗುರುಪ್ರಸಾದ್ ಅವರು ಮಾತನಾಡಿ, ತಾವ ಕುಂದಾಪುರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮಗ್ರ ಕೃಷಿ ಪದ್ದತಿಯಿಂದ ಯಶಸ್ಸು ಸಾಧ್ಯವಿದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ಹೆಚ್ಚು ಹೆಚ್ಚು ಕೃಷಿ ಕಾಯಕದಲ್ಲಿ ತೋಡಗಿಸಿ ಕೊಳ್ಳುವಂತಾಗಬೇಕು. ಆ ಮೂಲಕ ನಮ್ಮ ದೇಶವನ್ನು ರೈತ ಪ್ರಧಾನ ದೇಶ ಎಂಬುದಾಗಿ ಮತ್ತೊಮ್ಮೆ ಸಾಬೀತು ಪಡಿಸಬೇಕಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಕೃಷಿ ಉಳಿವಿಗಾಗಿ ರೈತ ಬೆಳೆದ ಎಲ್ಲಾ ಬೆಳೆಗಳಿಗೂ ಸರಕಾರವೇ ನಿಗದಿತ ನಿರ್ದಿಷ್ಟ ದರ ನಿಗದಿಪಡಿಸಬೇಕು. ಈ ಮೂಲಕ ರೈತನಿಗೆ ನೈತಿಕವಾಗಿ ಬೆಂಬಲ ಸೂಚಿಸಿದಂತಾಗುತ್ತದೆ ಎಂದು ಯುವ ಸಾಧಕ ಕೃಷಿಕ ರಾಜೇಶ್ ಕಾಂಚನ್ ಕೊರವಡಿ ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಇವರ ನೇತ್ರತ್ವದಲ್ಲಿ ರೈತಧ್ವನಿ ಸಂಘ ಕೋಟ, ಗಿಳಿಯಾರು ಯುವಕ ಮಂಡಲ ಗಿಳಿಯಾರು, ಗೀತಾನಂದ ಫೌಂಡೇಶನ್ ಮಣೂರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ಬೇಳೂರಿನಲ್ಲಿ ಜರುಗಿದ ೧೨ನೇ ಸರಣಿ ಮಾಲಿಕೆ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಬೇಳೂರಿನ ಯುವ ಸಾಧಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಸೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಕರ್ಕುಂಜೆ ಶಾಲೆಗೆ ವರ್ಗಾವಣೆಗೊಂಡಿರುವ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಚಂದ್ರ ಶೆಟ್ಟಿ ಇವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡುವ ಕಾರ‍್ಯಕ್ರಮ ಜರುಗಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅರುಣಾ ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ, ಕಾಳಾವರ ಗ್ರಾಮ ಪಂಚಾಯತ್ ಸದಸ್ಯರುಗಳಾದ ಚಂದ್ರ ಪೂಜಾರಿ, ಪಾರ್ವತಿ ಶೇರೆಗಾರ್, ಅಸೋಡು ಹಾಲು ಉತ್ಪಾದಕರ ಸಂಘ ಮಾಜಿ ಅಧ್ಯಕ್ಷ ದಯಾನಂದ ಹೆಗ್ಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗಪ್ಪಯ್ಯ ಶೇರಿಗಾರ್, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ನಾಗರಾಜ್ ಶೆಟ್ಟಿಗಾರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗಾಯತ್ರಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ದಾನಿಗಳಾದ ಅಶೋಕ್ ಶೋಭರಾವ್ ಇವರ ಮಕ್ಕಳಿಂದ ಸಮವಸ್ತ್ರ ವಿತರಣೆ, ಹಾಗೂ ವೆಂಕಟ ರಮಣ ಇವರ ಮಕ್ಕಳಿಂದ ಬಿಸಿಯೂಟ ಯೋಜನೆಗೆ ಗ್ರೈಂಡರ್‌ಗಳನ್ನು ಶಾಲೆಗೆ ಹಸ್ತಾಂತರ ಮಾಡಲಾಯಿತು. ಪ್ರಭಾರ ಮುಖ್ಯ ಶಿಕ್ಷಕಿ ಗಾಯತ್ರಿ ಸ್ವಾಗತಿಸಿದರು. ಅತಿಥಿ ಶಿಕ್ಷಕ…

Read More