ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುಸ್ಥಿರ ಗ್ರಾಮದ ಪರಿಕಲ್ಪನೆಯಲ್ಲಿ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳಿಗೆ ಸೋಲಾರ್ ಅಳವಡಿಸುವ ’ಸೋಲಾರ್ ಗ್ರಾಮ ಯೋಜನೆ’ಯಲ್ಲಿ ಗೋಳಿಹೊಳೆ ಗ್ರಾಮ ಪಂಚಾಯತ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗೋಳಿಹೊಳೆ, ಸೆಲ್ಕೋ ಸೋಲಾರ್ ಲೈಟ್ಸ್ ಪ್ರೈ ಲಿ., ಕುಂದಾಪುರ ಶಾಖೆಯ ವತಿಯಿಂದ ಮೊದಲ ಹಂತವಾಗಿ ಗೋಳಿಹೊಳೆ ಮೂರ್ಕೈ ಎಂಬಲ್ಲಿ ಎಂಬಲ್ಲಿ ನಾಗರತ್ನ ಶೇಖರ ಪೂಜಾರಿ ಎನ್ನುವವರ ಅಂಗಡಿಗೆ ಸೋಲಾರ್ ಡಿಸಿ ಪ್ರಿಡ್ಜ್ನ್ನು ಅಳವಡಿಸಿದ್ದು ಇದನ್ನು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ನ ಆರ್.ಎಂ.ರಮೇಶ ತುಂಗಾ ಉದ್ಘಾಟಿಸಿದರು. ಸೆಲ್ಕೋದ ಜಿ.ಎಂ ಜಗದೀಶ ಪೈ, ಎ.ಜಿ.ಎಂ ಗುರುಪ್ರಕಾಶ್ ಶೆಟ್ಟಿ, ಸೀನಿಯರ್ ಮ್ಯಾನೇಜರ್ ಶೇಖರ ಶೆಟ್ಟಿ, ಸ್ಥಳೀಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ನ ಮ್ಯಾನೇಜರ್ ಅರುಣ್ ಕುಮಾರ್ ಹಾಗೂ ಸೆಲ್ಕೋದ ಪ್ರತಿನಿಧಿಗಳಾದ ರವಿ, ಗೋಪಾಲ ನಾಯ್ಕ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಳೆದ 7 ವರ್ಷಗಳಿಂದ ರಾಜ್ಯದಲ್ಲಿಯೇ ವಿಶಿಷ್ಠವಾದ ದಿನದರ್ಶಿಕೆ ತಯಾರಿಸಿ, ಬಿಡುಗಡೆಗೊಳಿಸುತ್ತಿರುವ ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯ ಸ್ತುತ್ಯರ್ಹ. ಕ್ಯಾಲೆಂಡರ್ ವರ್ಷದಲ್ಲಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಗೊಳಿಸುವುದು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಉತ್ತಮ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಆಧಾರಿತ ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸುವುದು ಉಳಿದ ಸಂಘಗಳಿಗೆ ಮಾದರಿ. 2020ರ ದಿನದರ್ಶಿಕೆಯಲ್ಲಿ ಶಿಕ್ಷಕರಿಗೆ ಅಗತ್ಯವಾದ ಎಲ್ಲಾ ಮಾಹಿತಿಗಳಿದ್ದು ಶಿಕ್ಷಕರಿಗೆ ಬಹಳ ಉಪಯುಕ್ತವಾಗಿದೆ ಎಂದು ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶೇಷಶಯನ ಕಾರಿಂಜ ಹೇಳಿದರು. ಅವರು ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೨೦೨೦ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಕುಂದಾಪುರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ದಿನಕರ ಶೆಟ್ಟಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ ಕುಮಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಸ್ತು ಕೇಂದ್ರಿತ ಶೈಕ್ಷಣಿಕ ವಾತಾವರಣದ ಜೊತೆಗೆ ಸಾಹಿತ್ಯ-ಕ್ರೀಡೆ-ಸಾಂಸ್ಕೃತಿಕ ಅಭಿರುಚಿಯ ಮುಖೇನ ತೀರಾ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಧಾರೆಯೆರೆಯುವಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಶ್ರಮಿಸುತ್ತಿದೆ ಎಂದು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು. ಇವರು ಸ. ಹಿ. ಪ್ರಾ. ಶಾಲೆ ಕಾಲ್ತೋಡಿನಲ್ಲಿ ಒಂದು ವಾರದ ಕಾಲ ಆಯೋಜಿಸಲಾದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಬಿರವನ್ನು ಉದ್ಘಾಟಿಸಿದ ಕಾಲ್ತೋಡು ಗ್ರಾಮ ಪಂಚಾಯತ್ನ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಬಟ್ನಾಡಿ ಮಾತನಾಡಿ, ಆಧುನಿಕತೆಗೆ ಅತಿಯಾಗಿ ತೆರೆದುಕೊಳ್ಳದ ಕಾಲ್ತೋಡು ಗ್ರಾಮದಲ್ಲಿ ಆಕೃತಿಗೊಂಡಿರುವ ಈ ಶಿಬಿರವು ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವುದರ ಜೊತೆಗೆ ಸಹಬಾಳ್ವೆ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಡುಪಿ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ಚುನಾಯಿಸಲು ಡಿ.೨೫ ರಂದು ನಿಗದಿಯಾಗಿರುವ ಚುನಾವಣೆಗೆ ಈ ಕೆಳಕಂಡ ಅಭ್ಯರ್ಥಿಗಳು ಚುನಾವಣಾ ದಿನಾಂಕದಿಂದ ಮುಂದಿನ ಮೂರು ವರ್ಷಗಳ ಅವಧಿಗೆ ಉಡುಪಿ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳಾಗಿ ಅವಿರೋಧವಾಗಿ ಆಯ್ಕೆಯಾದರು. ಮಂಜುನಾಥ ಪಿ.ಶೆಟ್ಟಿ (ಅಧ್ಯಕ್ಷರು), ಮಹಿಮ ಶೆಟ್ಟಿ ಕೆ (ಉಪಾಧ್ಯಕ್ಷರು), ರಾಜೇಶ್ವರಿ ಎನ್ (ಉಪಾಧ್ಯಕ್ಷರು-ಮಹಿಳೆ), ಮಹೇಶ್ ಕೆ (ಸಂಘಟನಾ ಕಾರ್ಯದರ್ಶಿ), ಪ್ರಮೀಳಾ ನಾಯಕ್ (ಸಂಘಟನಾ ಕಾರ್ಯದರ್ಶಿ-ಮಹಿಳೆ), ಗಿರೀಶ್ ಕುಮಾರ್ ಶೆಟ್ಟಿ (ಕ್ರೀಡಾ ಕಾರ್ಯದರ್ಶಿ), ಫರ್ಜಾನ ಎಂ (ಸಾಂಸ್ಕೃತಿಕ ಕಾರ್ಯದರ್ಶಿ-ಮಹಿಳೆ), ಸತೀಶ್ (ಖಜಾಂಜಿ), ದಯಾನಂದ ಬೆನ್ನೂರ (ರಾಜ್ಯ ಪರಿಷತ್ ಸದಸ್ಯ), ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ದಶಮ ಸಂಭ್ರಮದ ನೆನಪಿಗಾಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರತಿ ತರಗತಿಗೆ ’ಲೆಕ್ಚರ್ ಪೋಡಿಯಂ’ನ್ನು ಕೊಡುಗೆಯಾಗಿ ನೀಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಕಾರ್ಯಕ್ರಮದಲ್ಲಿ ತರಗತಿವಾರು ವಿದ್ಯಾರ್ಥಿ ಪ್ರತಿನಿಧಿಗಳು ಸಾಂಕೇತಿಕವಾಗಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಉಮೇಶ್ ಶೆಟ್ಟಿ ಕೊತ್ತಾಡಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಇವರಿಗೆ ಹಸ್ತಾಂತರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆ ಮತ್ತು ಯುತ್ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಭಾಗವಹಿಸಿಸದ್ದ ಕುಂದಾಪುರದ ಮನಿಷ್ ಆಸ್ಪತ್ರೆಯ ವೈದ್ಯರಾದ ಡಾ. ಪ್ರಮೀಳಾ ನಾಯಕ್ ಮಾತನಾಡಿ ಜಾಗತಿಕ ವ್ಯವಸ್ಥೆಯಲ್ಲಿ ಪರಿಸರ ಮಾಲಿನ್ಯ, ಪ್ಲಾಸ್ಟಿಕ್ ನಿರ್ಮೂಲನೆ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಮಹಿಳಾ ಆರೋಗ್ಯದ ಕುರಿತು ವಿಶೇಷ ಮಾಹಿತಿ ನೀಡಿದರು. ನಮ್ಮ ನಮ್ಮಲ್ಲಿ ಜಾಗೃತಿ ಮೂಡಬೇಕು. ಪ್ರಸ್ತುತದ ಜಗತ್ತಿನಲ್ಲಿ ಪರಿಸರ ಮಾಲಿನ್ಯದಿಂದಾಗಿ ಶುದ್ಧ ಆಹಾರ ವಾಯು ಮತ್ತು ನೀರು ಸಿಗುವುದು ದುಸ್ತರವಾಗಿದೆ. ಇಂತಹ ವಿಷಮ ಸ್ಥಿತಿಯಲ್ಲಿ ನಾವಿರುವಾಗ ನಾವು ಪರಿಸರ ಉಳಿಸಿಕೊಳ್ಳುವತ್ತ ಗಮನಹರಿಸಬೇಕಾಗಿದೆ. ಅದಕ್ಕಾಗಿ ಹಲವು ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಅನಿವಾರ್ಯತೆ ಇದೆ ಎಂದು ತಿಳಿಸಿದರಲ್ಲದೇ ಮಹಿಳೆಯರು ತಮ್ಮ ಆರೋಗ್ಯವನ್ನು ಕಾಯ್ದುಕೊಳ್ಳುವುದು ಮತ್ತು ಕೆಲವು ಸರಳ ಮಾರ್ಗಗಳನ್ನು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮಹಿಳಾ ವೇದಿಕೆಯ ಸಂಚಾಲಕರಾದ ಡಾ. ಯಶವಂತಿ ಕೆ. ಮತ್ತು ಸದಸ್ಯರು ಮತ್ತುಯುತ್ ರೆಡ್ಕ್ರಾಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ನಂಟು ಹೊಂದಿದ್ದು, ಜೀವನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದವರಿಗೆ ಕುಂದಪ್ರಭ ಪ್ರತಿಷ್ಠಾನ ಪ್ರತಿವರ್ಷ ನೀಡುತ್ತಿರುವ ಕೋ.ಮ.ಕಾರಂತ ಪ್ರಶಸ್ತಿಗೆ “ಫಾದರ್ ಆಫ್ ಕಾಂಕ್ರಿಟ್” ಎಂದೇ ಬಿರುದಾಂಕಿತರಾದ ಪ್ರೊ.ಎಂ.ಎಸ್.ಶೆಟ್ಟಿ ಕೋಟೇಶ್ವರ ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ ದಿ.ಕೆ.ಎಂ. ಕಾರಂತರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುತ್ತದೆ. ವಕ್ವಾಡಿ, ಕೋಟೇಶ್ವರದಲ್ಲಿ ಪ್ರಾಥಮಿಕ ಶಿಕ್ಷಣ, ಕುಂದಾಪುರ ಬೋರ್ಡ್ ಹೈಸ್ಕೂಲ್ನಲ್ಲಿ ಪ್ರೌಢಶಿಕ್ಷಣ ಪಡೆದು ನಂತರ ಉನ್ನತ ಶಿಕ್ಷಣಕ್ಕೆ ತೆರಳಿದ ಎಂ.ಸುಬ್ಬಣ್ಣ ಶೆಟ್ಟಿಯವರು ಇಂಜಿಯರ್ ಆಗಿ ಕಾಲೇಜ್ ಆಫ್ ಮಿಲಿಟರಿ ಇಂಜಿನಿಯರಿಂಗ್ ಸೇರಿದ ಮೇಲೆ ಸಾಧಿಸಿರುವುದು ಅಪಾರ. ಎರಡು ಲಕ್ಷಕ್ಕೂ ಹೆಚ್ಚು ಆರ್ಮಿ ಇಂಜಿನಿಯರ್ರನ್ನು ತರಬೇತುಗೊಳಿಸಿದ ಖ್ಯಾತಿ ಪಡೆದಿರುವ ಇವರು ಉನ್ನತ ಶಿಕ್ಷಣ ಪಡೆಯುವ ಇಂಜಿನಿಯರ್ಗೂ ಮಾರ್ಗದರ್ಶನ ನೀಡಿದವರು. ಇವರು ಬರೆದ “ಕಾಂಕ್ರಿಟ್ ಟೆಕ್ನಾಲಜಿ” ಪುಸ್ತಕ 50 ಬಾರಿ ಮರುಮುದ್ರಣಗೊಂಡು ವಿಶ್ವಾದ್ಯಂತ ಮಾರ್ಗದರ್ಶಕ ಪಠ್ಯವಾಗಿ ಪರಿಗಣಿಸಲ್ಪಟ್ಟಿದೆ. ದೇಶದಲ್ಲಿ ಹತ್ತು ಹಲವು ನಿರ್ಮಾಣ ಕಾರ್ಯಗಳಿಗೆ ಮಾರ್ಗದರ್ಶಕ, ಸಲಹೆಗಾರರಾಗಿ ಸೇವೆ ಸಲ್ಲಿಸಿದ ಇವರಿಗೆ “ಲೈಫ್ ಟೈಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕರ್ನಾಟಕದ ಪಂಚಾಯತ್ರಾಜ್ ವ್ಯವಸ್ಥೆ ಸದೃಢವಾಗಿ ಬೆಳೆದು ಇಡೀ ದೇಶಕ್ಕೆ ಮಾದರಿಯಾಗಿದೆ. ಇದನ್ನು ಇನ್ನಷ್ಟು ಬಲಪಡಿಸಲು ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಶನಿವಾರ ಕೋಟತಟ್ಟ ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತರ ಪ್ರತಿಷ್ಠಾನದ ವತಿಯಿಂದ ಶನಿವಾರ ಕೋಟ ವಿವೇಕ ಕಾಲೇಜಿನ ಕ್ರೀಡಾಂಗಣದಲ್ಲಿ ಅವಿಭಜಿತ ದ.ಕ. ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹೊಳಪು-2019’ ಉದ್ಘಾಟಿಸಿ ಮಾತನಾಡುತಿದ್ದರು. ಅಧಿಕಾರ ವಿಕೇಂದ್ರೀಕರಣದ ಆಶಯ ಬಹಳ ದೊಡ್ಡದು. ಗ್ರಾಮಸಭೆಗಳ ಮಟ್ಟದಿಂದಲೇ ಆಯಾ ಪ್ರದೇಶಗಳಿಗೆ ಅಗತ್ಯವಾದ ಯೋಜನೆಗಳು ರೂಪುಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಮತ್ತು ಕಾರ್ಯನಿರ್ವಹಣಾ ಸ್ವಾತಂತ್ರ್ಯ ಇರಬೇಕು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ, ರಸ್ತೆಗಳು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು. ಪಂಚಾಯತ್ರಾಜ್ ವ್ಯವಸ್ಥೆ ಅಧಿಕಾರ ವಿಕೇಂದ್ರೀಕರಣ ಆಗಿದೆಯೇ ಅಥವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೀನುಗಾರರ ಸಾಲ ಮನ್ನಾದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಕೆಲವೇ ದಿನಗಳಲ್ಲಿ ಉಡುಪಿ ಜಿಲ್ಲೆಯ 20,197 ಮೀನುಗಾರರ 55 ಕೋಟಿ ರೂ ಸಾಲ ಸಂಪೂರ್ಣ ಮನ್ನಾ ಆಗಲಿದ್ದು, ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಅವರು ಶನಿವಾರ ವಂಡ್ಸೆ ಪ್ರೌಢಶಾಲಾ ವಠಾರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 387 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ವೀನುಗಾರರ ಸಾಲಮನ್ನ ವಿಳಂಬವಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಉದ್ಧೇಶದಿಂದ, ಸ್ತ್ರೀಶಕ್ತಿ ಸಂಘಗಳನ್ನು ಬಲಗೊಳಿಸಲು ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗುವುದು ಎಂದು ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೆತ್ರವನ್ನಾಗಿ ಅಭಿವೃದ್ದಿಪಡಿಸುವ ಉದ್ದೇಶದಿಂದ ನಡೆಯುತ್ತಿರುವ 387 ಕೋಟ ರೂ ಮೊತ್ತದ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ಅನುಷ್ಠಾನಗೊಳಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು, ತಮ್ಮ ಸರ್ಕಾರದ ಅವಧಿಯಲ್ಲಿ ಕಳಪೆ ಕಾಮಗಾರಿಗಳನ್ನು ನಿರ್ಮಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರ್ವರ ಸಹಕಾರವಿದ್ದಾಗ ಮಾತ್ರ ಸರಕಾರಿ ಶಾಲೆ ಪ್ರಗತಿ ಸಾಧಿಸಲು ಸಾಧ್ಯ. ಮೂಲಭೂತ ಸೌಕರ್ಯ, ನುರಿತ ಅಧ್ಯಾಪಕ ವರ್ಗ, ಎಸ್ಡಿಎಂಸಿ, ಹಳೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಪರಸ್ಪರ ಹೊಂದಾಣಿಕೆಯಿಂದ ಮುಂದುವರಿದರೆ ಶಾಲೆಯನ್ನು ಮಾದರಿಯನ್ನಾಗಿ ರೂಪಿಸುವುದು ಕಷ್ಟಸಾಧ್ಯವಲ್ಲ ಎಂದು ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಹೇಳಿದರು. ಅವರು ಶುಕ್ರವಾರ ಜರುಗಿದ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ಉತ್ತಮ ವೇದಿಕೆ. ಶಾಲಾ ವಾರ್ಷಿಕೋತ್ಸವ ಎಂದರೆ ಊರಿನವರಿಗೊಂದು ಹಬ್ಬದ ವಾತಾವರಣ ಎಂದರು. ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ ಕೆ., ಬೈಂದೂರು ಗ್ರಾಮ ಪಂಚಾಯತ್ ಸದಸ್ಯೆ ಭಾಗೀರಥಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ಕುಮಾರ್…
