ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಎಲ್ಲಾ ಧರ್ಮದ ತಿರುಳನ್ನು ತಿಳಿಸುವ ಕೆಲಸವಾಗಬೇಕು. ಅದು ನಡೆಯದಿರುವುದರಿಂದಲೇ ಯುವಜನರು ಯಾರಿಂದಲೋ ಪ್ರೇರಿತರಾಗಿ ಮತ್ತೊಂದು ಧರ್ಮವನ್ನು ದೂಷಿಸುವ ಕಾರ್ಯದಲ್ಲಿ ತೊಡಗುತ್ತಾರೆ ಎಂದು ಗೌರಿಗದ್ದೆ ದತ್ತಾಶ್ರಮದ ಶ್ರೀ ವಿನಯ ಗುರೂಜಿ ಹೇಳಿದರು. ಅವರು ಶುಕ್ರವಾರ ಬೈಂದೂರು ರತ್ತುಬಾಯಿ ಜನತಾ ಪ್ರೌಢಶಾಲೆಯ ಸುವರ್ಣ ಸಂಭ್ರಮ ಸಮಾರಂಭವನ್ನು ಉದ್ಘಾಟಿಸಿದ ಬಳಿಕ ಆಶೀರ್ವಚನ ನೀಡಿ ಕೈಯಲ್ಲಿ ಬಗೆ ಬಗೆಯ ಉಂಗುರು ಧರಿಸುವುದರಿಂದ ಅದೃಷ್ಟ ಕುಲಾಯಿಸುವುದಿಲ್ಲ. ಇಂತಹ ಅಂಧ ವಿಶ್ವಾಸವನ್ನು ಬಿಟ್ಟು ಜ್ಞಾನದ ಕಡೆ ನಡೆಯಿರಿ. ಬದುಕಿನಲ್ಲಿ ಅದೃಷ್ಟ ಎನ್ನುವ ಶಬ್ದವೇ ಇಲ್ಲ. ಕೆಲಸ ಮಾಡಿದವರಿಗೆ ಪ್ರತಿಫಲ ಸಿಕ್ಕೆ ಸಿಗುತ್ತದೆ. ಶಾಸ್ತ್ರವನ್ನು ಸತ್ಯದ ಆಧಾರದ ಮೇಲೆ ಅರಿತು ನಡೆದರೆ, ಶ್ರಮವಹಿಸಿ ದುಡಿದರೆ ಎಲ್ಲವೂ ಸಿದ್ಧಿಸುತ್ತದೆ ಎಂದರು. Video ದೊಡ್ಡ ದೇವಸ್ಥಾನ, ಉತ್ಸವಗಳನ್ನು ಮಾಡುವ ಜೊತೆಗೆ ಊರಿನ ಅಭಿವೃದ್ಧಿಯ ಬಗೆಗೂ ಗಮನ ಹರಿಸಿ. ಎಲ್ಲವನ್ನೂ ಸರಕಾರದಿಂದ ನಿರೀಕ್ಷಿಸುವ ಮೊದಲು ನಮ್ಮ ಊರಿಗೆ ನಾವೇನು ಮಾಡಬಹುದೆಂಬುದನ್ನು ಯೋಚಿಸಬೇಕಿದೆ. ಶಿಕ್ಷಣ ಮತ್ತು ಆರೋಗ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ನಿವಾಸಕ್ಕೆ ಅವಧೂತ ಶ್ರೀ ವಿನಯ ಗುರೂಜಿ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭ ಕೆ. ಗೋಪಾಲ ಪೂಜಾರಿ ಹಾಗೂ ಪತ್ನಿ ಮಮತಾ ಜಿ. ಪೂಜಾರಿ ಅವರು ಗುರೂಜಿ ಅವರ ಪಾದ ಪೂಜೆ ನೆರವೇರಿಸಿದರು. ಈ ವೇಳೆ ಅವರು ಸಮೀಪದ ಭದ್ರಮಹಾಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ನಿವಾಸದಲ್ಲಿ ನೆರೆದಿದ್ದವರನ್ನು ಆಶೀರ್ವದಿಸಿದರು. ಈ ಸಂದರ್ಭ ಕೆ. ಗೋಪಾಲ ಪೂಜಾರಿ ಅವರ ಕುಟುಂಬಿಕರು ಹಾಗೂ ಹಿತೈಶಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಜನವರಿ 2 ರಿಂದ 6ರವರೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ನಡೆಯಲಿರುವ ೮೦ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಫ್‌ಗೆ ಚಾಲನೆ ನೀಡಲಾಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿದ ಭಾರತ ಸರ್ಕಾರದ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ಮಾತನಾಡಿ, ಕ್ರೀಡೆಯು ಕೇವಲ ಪಠ್ಯೇತರ ಚಟುವಟಿಕೆಯಲ್ಲ ಬದಲಾಗಿ ಶಿಕ್ಷಣದ ಒಂದು ಭಾಗ. ಕ್ರೀಡೆಯನ್ನು ಪ್ರೋತ್ಸಾಹಿಸುವ ಮೂಲಕ ಸಂಸ್ಕೃತಿಯಾಗಿ ಬೆಳೆಸಬೇಕು. ಮುಂಬರುವ ದಿನಗಳಲ್ಲಿ ಸೀಮಿತ ಅವಧಿ ಹಾಗೂ ಸಂಪನ್ಮೂಲಗಳನ್ನು ಬಳಸಿಕೊಂಡು, ಭಾರತೀಯ ಕ್ರೀಡಾಪಟುಗಳನ್ನು ಸಧೃಢವಾಗಿ ಬೆಳೆಸಬೇಕು. 2024ರ ಒಲಿಪಿಂಕ್ಸ್ನಲ್ಲಿ ಇತರ ದೇಶಗಳಿಗೆ ಸಮವಾದ ಕಠಿಣ ಸ್ಪರ್ಧೆ ನೀಡುವಂತೆ ಭಾರತೀಯ ಕ್ರೀಡಾಪಟುಗಳನ್ನು ತಯಾರು ಮಾಡುವುದು ಭಾರತಕ್ಕಿರುವ ಸವಾಲು ಎಂದರು. ನ್ಯೂ ಇಂಡಿಯಾ ನಿರ್ಮಾಣದೊಂದಿಗೆ ಫಿಟ್ ಇಂಡಿಯಾ ಎಂಬ ಹೊಸ ಆಂದೋಲನವು ಭಾರತೀಯರಲ್ಲಿ ಆರೋಗ್ಯದ ಅರಿವನ್ನು ಇನ್ನಷ್ಟು ಹೆಚ್ಚಿಸಲಿದೆ. ಕೇವಲ ಕ್ರೀಡೆಗಾಗಿ ಮಾತ್ರವಲ್ಲದೇ…
ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಬೈಂದೂರು, ಯಡ್ತರೆ ಮತ್ತು ಪಡುವರಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ಬೈಂದೂರನ್ನು ಪಟ್ಟಣ ಪಂಚಾಯಿತಿ ಆಗಿ ರಾಜ್ಯ ಸರ್ಕಾರವು ಮೇಲ್ದರ್ಜೆಗೇರಿಸಿದೆ. ಈ ಸಂಬಂಧ ನಗರಾಭಿವೃದ್ಧಿ ಸಚಿವಾಲಯ ಹೊರಡಿಸಿದ ಅಧಿಸೂಚನೆಯನ್ನು ಡಿ. 31ರ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ನೂತನ ಪಟ್ಟಣ ಪಂಚಾಯಿತಿ ಪ್ರದೇಶವು 2011ರ ಜನಗಣತಿಯ ಪ್ರಕಾರ 24,957ಜನಸಂಖ್ಯೆ, 433 ಜನಸಾಂದ್ರತೆ ಮತ್ತು ಶೇ. 55 ಕೃಷಿಯೇತರ ಚಟುವಟಿಕೆಗಳ ಉದ್ಯೋಗ ಹೊಂದಿರುವುದರಿಂದ ಪಟ್ಟಣ ಪಂಚಾಯಿತಿ ಆಗುವ ಅರ್ಹತೆ ಪಡೆದಿದೆ ಎಂದು ಅಧಿಸೂಚನೆ ತಿಳಿಸಿದೆ. ಕುಂದಾಪ್ರ ಡಾಟ್ ಕಾಂ ವರದಿ. ಹೊಸ ಪಟ್ಟಣ ಪಂಚಾಯಿತಿಯು 54.24 ಚದರ ಕಿಲೋಮೀಟರು ವ್ಯಾಪ್ತಿ ಹೊಂದಿರುತ್ತದೆ. ಪೂರ್ವಕ್ಕೆ ಪಶ್ಚಿಮ ಘಟ್ಟ ಮತ್ತು ಯಳಜಿತ ಗ್ರಾಮ, ಪಶ್ಚಿಮಕ್ಕೆ ಅರಬೀ ಸಮುದ್ರ, ಉತ್ತರದಲ್ಲಿ ಭಾಗಶ: ಶಿರೂರು ಗ್ರಾಮ ಮತ್ತು ಪಶ್ಚಿಮ ಘಟ್ಟ ಹಾಗೂ ದಕ್ಷಿಣದಲ್ಲಿ ಸುಮನಾವತಿ ನದಿ ಇದರ ಗಡಿಯಾಗಿರುತ್ತವೆ. ಕುಂದಾಪ್ರ ಡಾಟ್ ಕಾಂ ವರದಿ. ತಗ್ಗರ್ಸೆ ಗ್ರಾಮ ಸೇರ್ಪಡೆ : ಹಿಂದಿನ ಗ್ರಾಮ ಪಂಚಾಯಿತಿ ಮರುಸಂಘಟನೆಯ ಕಾಲದಲ್ಲಿ…
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ನುಡಿ ಬೈಂದೂರು ಎಂಬ ಗ್ರಾಮೀಣ ಪ್ರದೇಶದಲ್ಲಿ ನಿಜಾರ್ಥದಲ್ಲಿ ಸಾಕಾರಗೊಳ್ಳುವ ದಿನಗಳು ಆರಂಭಗೊಂಡದ್ದುಎಪ್ಪತ್ತರ ದಶಕದಲ್ಲಿ. 1970 ಅಂತಾರಾಷ್ಟ್ರೀಯ ಶೈಕ್ಷಣಿಕ ವರ್ಷ. ಮಹಿಳಾ ವಿಮೋಚನಾ ಆಂದೋಲನ ಮುನ್ನೆಲೆಗೆ ಬಂದ ಕಾಲಘಟ್ಟ. ಅದು ಬೈಂದೂರು ಸುತ್ತಲಿನ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿಯೇ ಪ್ರೌಢಶಾಲೆಯೊಂದು ಅಸ್ತಿತ್ವಕ್ಕೆ ಬಂದ ವರ್ಷವೂ ಹೌದು. ಅಂದು ಹೆಮ್ಮಾಡಿಯ ಶ್ರೀ ವಿ. ವಿ. ವಿ. ಮಂಡಳಿ (ರಿ) ಇದರ ಸ್ಥಾಪಕಾಧ್ಯಕ್ಷರಾದ ದಿವಂಗತ ಕೆ. ಎಸ್ ರಾಮ್‌ರಾವ್ ಅವರು; ಬೈಂದೂರು ಆಸುಪಾಸಿನ ಶಿಕ್ಷಣಾಭಿಮಾನಿಗಳ ಇಚ್ಛಾಶಕ್ತಿಯನ್ನು ಸಂಘಟಿಸಿ ‘ಜನತಾ ಗರ್ಲ್ಸ್ ಹೈಸ್ಕೂಲ್’ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದರು. ಪ್ರಾರಂಭದಲ್ಲಿ ಬಾಡಿಗೆ ಕಟ್ಟಡದಲ್ಲಿ ಶಾಲೆ ಆರಂಭಗೊಂಡರೂ, ಆ ಸಂದರ್ಭ ಮುಖ್ಯೋಪಾಧ್ಯಾಯರಾಗಿದ್ದ ದಿವಂಗತ ಸದಾಶಿವ ಭಟ್ಟರು ಹಾಗೂ ಸಹೋದ್ಯೋಗಿಗಳ ಶ್ರಮದ ಫಲ ಹಾಗೂ ದಾನಿಗಳ ನೆರವಿನಿಂದ ಸ್ವಂತ ನಿವೇಶನದ ಕಟ್ಟಡಕ್ಕೆ ಸ್ಥಳಾಂತರಗೊಂಡು ರತ್ತುಬಾಯಿ ಜನತಾ ಗರ್ಲ್ಸ್ ಹೈಸ್ಕೂಲ್ ಎಂದು ಎಂದು ಮರುನಾಮಕರಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೃಷಿ, ಹೈನುಗಾರಿಕೆ ಹಾಗೂ ಇನ್ನಿತರೆ ಸ್ವ-ಉದ್ಯೋಗವನ್ನು ಆರಂಭಿಸಿ ಬದುಕು ಕಟ್ಟಿಕೊಳ್ಳುವ ಆಕಾಂಕ್ಷಿಗಳಿಗೆ ಸಹಕಾರಿ ಸಂಸ್ಥೆಗಳು ಆರ್ಥಿಕ ನೆರವನ್ನು ನೀಡಿ ಅವರನ್ನು ಸ್ವಾವಲಂಭಿಗಳನ್ನಾಗಿಸಲು ಪ್ರೇರೇಪಿಸುತ್ತದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಬುಧವಾರ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಇದರ ಗೋಳಿಹೊಳೆ ಶಾಖೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವ-ಸಹಾಯ ಸಂಘದ ಸದಸ್ಯರು ಸಂಸ್ಥೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅವರು ಸಾಲ ಪಡೆಯುವ ಜೊತೆಗೆ ಉಳಿತಾಯ ಮಾಡುವ ಮನೋಭಾವನೆಯನ್ನು ರೂಡಿಸಿಕೊಳ್ಳುವುದು ಅಗತ್ಯ. ಅದು ತುರ್ತು ಸಂದರ್ಭದಲ್ಲಿ ನೆರವಿಗೆ ಬರುವುದಲ್ಲದೇ ಬದುಕಿನಲ್ಲಿಯೂ ಭದ್ರತೆ ಭಾವ ಮೂಡುವಂತೆ ಮಾಡುತ್ತದೆ ಎಂದರು. ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಬಟ್ನಾಡಿ, ಎಪಿಎಂಸಿ ಸದಸ್ಯ ವಸಂತ ಹೆಗ್ಡೆ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಚುಚ್ಚಿ ನಾರಾಯಣ ಶೆಟ್ಟಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಜ.01: ಸರಕಾರದ ಹೊಸ ಆದೇಶದಂತೆ ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ನೀಶಾ ಜೇಮ್ಸ್ ಅವರನ್ನು ವರ್ಗಾವಣೆಗೊಳಿಸಿ ಆ ಸ್ಥಳಕ್ಕೆ ಕಲಬುರ್ಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಹಾಕೆ ಅಕ್ಷಯ್ ಮಚ್ಚಿಂದ್ರ ಅವರನ್ನು (ಡಿ.31) ನೇಮಕ ಮಾಡಲಾಗಿತ್ತು. ಆದರೆ ಹಿಂದಿನ ಆದೇಶದಲ್ಲಿ ಮಾರ್ಪಾಡಾಗಿದ್ದು, ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ಉಡುಪಿ ಜಿಲ್ಲೆಯ ಕಾರ್ಕಳದ ನಕ್ಸಲ್ ನಿಗ್ರಹ ಪಡೆಗೆ ವರ್ಗಾವಣೆ ಮಾಡಲಾಗಿದೆ. ನೂತನ ಎಸ್ಪಿ ವಿಷ್ಣುವರ್ಧನ್ ಅವರು 2015 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರು ನಗರದ ಡಿಸಿಪಿ ಆಗಿದ್ದರು. ಇದೀಗ ಅವರನ್ನು ಉಡುಪಿಗೆ ವರ್ಗಾವಣೆ ಮಾಡಲಾಗಿದೆ. ಅವರು ಈ ಹಿಂದೆ ಉಡುಪಿಯಲ್ಲಿ ಹೆಚ್ಚುವರಿ ಎಸ್ಪಿಯಾಗಿಯೂ ಕಾರ್ಯನಿರ್ವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ನೇಮಕಗೊಳಿಸಿರುವ ಕರ್ನಾಟಕ ಸರಕಾರ ಹೊಸ ವರ್ಷದ ಮುನ್ನಾದಿನ ಆದೇಶ ಹೊರಡಿಸಿದೆ. ಈವರೆಗೆ ಜಿಲ್ಲೆಯ ಎಸ್ಪಿಯಾಗಿದ್ದ ಐಪಿಎಸ್ ನಿಶಾ ಜೇಮ್ಸ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮಚ್ಚಿಂದ್ರ ಅವರು ಕಲುಬುರಗಿ ಜಿಲ್ಲೆಯ ಚಿಂಚೋಳೀ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಜನವರಿ 2ರಿಂದ 6ರವರೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ 80ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಫ್ ಅನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟವು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ಕ್ರೀಡಾಕೂಟದಲ್ಲಿ ದೇಶದ ೪೦೦ಕ್ಕೂ ಅಧಿಕ ವಿಶ್ವವಿದ್ಯಾಲಯಗಳ ಸುಮಾರು 5000 ಅಥ್ಲೀಟ್‌ಗಳು ಹಾಗೂ 2000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕ್ರೀಡಾಕೂಟದ ವ್ಯವಸ್ಥೆಗಾಗಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಿಂದ ಒಂದು ಕೋಟಿ ರೂ. ಅನುದಾನ ದೊರೆತಿದೆ. ಇದರೊಟ್ಟಿಗೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ನೀಡುವ ಕುರಿತು ಕ್ರೀಡಾ ಮಂತ್ರಿ ಕೆ.ಎಸ್.ಈಶ್ವರಪ್ಪ ವಾಗ್ದಾನ ನೀಡಿದ್ದಾರೆ ಎಂದು ಅವರು ವಿವರಿಸಿದರು. ಉದ್ಘಾಟನೆಗೆ ಕಿರಣ್ ರಿಜಿಜು: ಜ.2ರಂದು ಸಂಜೆ 5:45ಕ್ಕೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, ಭಾರತ ಸರ್ಕಾರದ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪೌರತ್ವ ತಿದ್ದುಪಡಿ ಕಾಯಿದೆಯ ಹೆಸರಿನಲ್ಲಿ ಮತೀಯವಾದವನ್ನು ಮುನ್ನೆಲೆಗೆ ತಂದು ದೇಶದಲ್ಲಿ ಕುಸಿಯುತ್ತಿರುವ ಕೈಗಾರಿಕೆಗಳು, ಹೆಚ್ಚುತ್ತಿ ನಿರುದ್ಯೋಗ ಹಾಗೂ ಆರ್ಥಿಕ ಬಿಟ್ಟಕ್ಕು, ಸಂಕಷ್ಟದಲ್ಲಿರುವ ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಮರೆಮಾಚುವ ವ್ಯವಸ್ಥಿತ ಹುನ್ನಾರವನ್ನು ಕೇಂದ್ರ ಸರಕಾರ ಮಾಡಿದೆ ಎಂದು ಡಿವೈಎಫ್‌ಐ ಕರ್ನಾಟಕ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು. ಅವರು ಸೋಮವಾರ ಶಿರೂರು ಗ್ರಾಮ ಪಂಚಾಯತ್ ಎದುರು ಶಿರೂರು ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟ ಸಮಿತಿ ಆಯೋಜಿಸಿದ್ದ ಪ್ರತಿಭಟನಾ ಸಮಿತಿಯ ನೇತೃತ್ವ ವಹಿಸಿ ಮಾತನಾಡಿದರು. ರಾಜಕೀಯ ಲಾಭಕ್ಕಾಗಿ ಹಿಂದೂಗಳು ಹಾಗೂ ಮುಸ್ಲಿಂಮರನ್ನು ಒಡೆದು ಆಳುವ ನೀತಿಯನ್ನು ಚುನಾವಣಾ ಪೂರ್ವವೇ ಬಿಜೆಪಿ ಪಕ್ಷ ಪರೋಕ್ಷವಾಗಿ ತಿಳಿಸಿರುವುದನ್ನು ಕೇಂದ್ರ ಸರಕಾರ ಇಂದು ಸಿಎಬಿ ಹಾಗೂ ಎನ್‌ಆರ್‌ಸಿ ಕಾಯಿದೆಗಳ ಮೂಲಕ ಮುನ್ನೆಲೆಗೆ ತಂದು ಇದು ಕೇವಲ ಮುಸ್ಲಿಂರ ಸಮಸ್ಯೆಗೆ ಎಂದು ಬಿಂಬಿಸಿ ಹಿಂದೂ ವೋಟ್‌ಬ್ಯಾಂಕ್ ಭದ್ರಪಡಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದೆ. ಸಿಎಬಿ ಹಾಗೂ ಎನ್‌ಆರ್‌ಸಿಯಿಂದ ಕೇವಲ ಮುಸ್ಲಿಂಮರಿಗಷ್ಟೇ ಸಮಸ್ಯೆ ಎಂದು ಭಾವಿಸಿರುವುದು ತಪ್ಪು.…
