ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೃಷಿ ಕೂಲಿಕಾರರ ಕೊರತೆ, ಕಾಡು ಪ್ರಾಣಿಗಳ ಹಾವಳಿ ಹಾಗೂ ರಾಜಕಾರಣಿಗಳ ಸುಳ್ಳು ಆಶ್ವಾಸನೆಗಳ ನಡುವೆ ರೈತ ಕೃಷಿಯನ್ನು ನೆಚ್ಚಿಕೊಂಡು ಮುಂದುವರಿಯಲು ಸಾಧ್ಯವಾಗದ ಸ್ಥಿತಿ ಇದೆ. ಹಠವಿದ್ದ ರೈತರು ನಿರಂತರವಾಗಿ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಭಾರತೀಯ ಕಿಸಾಸ್ ಸಂಘದ ರಾಜ್ಯ ಕಾರ್ಯಕಾರಿ ಮಂಡಳಿಯ ಸದಸ್ಯ ಬಿ. ವಿ ಪೂಜಾರಿ ಹೇಳಿದರು. ಅವರು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಹಾಗೂ ರೈತ ಸಿರಿ, ರೈತ ಸೇವಾ ಒಕ್ಕೂಟ ಉಪ್ಪುಂದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ರೈತಸಿರಿ ಸಭಾಭವನದಲ್ಲಿ ಜರುಗಿದ ರೈತರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯ ರೈತ ಗೋಪಾಲ ಉಡುಪ ಮೂಡುಮಠ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ೨೦೨೦ರ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಸಂಘದ ನಿರ್ದೇಶಕರಾದ ಮೋಹನ ಪೂಜಾರಿ ಉಪ್ಪುಂದ, ಸುರೇಶ್ ಶ್ಯಾನುಭೋಗ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸೌದಿ ದೊರೆ ಹಾಗೂ ಮೆಕ್ಕಾದ ವಿರುದ್ಧ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಸೌದಿಯಲ್ಲಿ ಉದ್ಯೋಗದಲ್ಲಿದ್ದ ತಾಲೂಕು ಕೋಟೇಶ್ವರ ಸಮೀಪದ ಬೀಜಾಡಿ ಗೋಯಾಡಿಬೆಟ್ಟು ನಿವಾಸಿ ಹರೀಶ್ ಬಂಗೇರ ಅಲ್ಲಿನ ಪೊಲೀಸರಿಂದ ಬಂಧಿತರಾಗಿದ ಘಟನೆ ನಡೆದಿದೆ. ಘಟನೆಯ ವಿವರ: ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಮರ್ಥಿಸಿ ಹರೀಶ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು. ಇದನ್ನು ಗಮನಿಸಿದ ಸೌದಿ ದೇಶದ ಯುವಕರು ಹರೀಶ್ ಕೆಲಸ ನಿರ್ವಹಿಸುತ್ತಿರುವ ಕಚೇರಿಗೆ ತೆರಳಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಘಟನೆಯ ಬಗ್ಗೆ ಹರೀಶ್ ಕ್ಷಮೆ ಕೇಳಿ ವೀಡಿಯೊವೊಂದನ್ನು ಅಪ್ಲೋಡ್ ಮಾಡಿದ್ದರು. ಬಳಿಕ ಡಿ.19 ರಾತ್ರಿ ತನ್ನ ಫೇಸ್ ಬುಕ್ ಖಾತೆ ಡಿ-ಆಕ್ಟಿವೇಟ್ ಮಾಡಿದ್ದರು. ಆದರೆ ಮತ್ತೆ ಹರೀಶ್ ಬಂಗೇರ ಎನ್ನುವ ನಕಲಿ ಫೇಸ್ ಬುಕ್ ಖಾತೆಯಿಂದ ಮೆಕ್ಕಾ ಕುರಿತು, ಸೌದಿ ದೊರೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಅಪ್ಲೋಡ್ ಆಗಿದ್ದು ಅದು ವೈರಲ್ ಆಗಿ ಆತ ಕೆಲಸ ನಿರ್ವಹಿಸುತ್ತಿದ್ದ ಕಂಪೆನಿಯೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕಳೆದ 10 ವರ್ಷಗಳಿಂದ ಕುಂದಾಪುರದಲ್ಲಿ ಶಾಸ್ತ್ರಿ ಸರ್ಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಪ್ಲೈಓವರ್ ಕಾಮಗಾರಿ ಕೆಲಸ ನಡೆಯುತ್ತಿದ್ದ ಈವರೆಗೂ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾನುವಾರ ಟೀಂ ಕುಂದಾಪುರಿಯನ್ಸ್ ಸಂಘಟನೆ ಬೆಂಗಳೂರಿನ ಕಬ್ಬನ್ ಪಾರ್ಕಿನಲ್ಲಿ ಪತ್ರ ಚಳವಳಿ ನಡೆಸಿತು. ಉಡುಪಿ ಜಿಲ್ಲಾಧಿಕಾರಿಗಳು, ಉಡುಪಿ ಭಾಗದ ಶಾಸಕರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಕೇಂದ್ರ ನಾಯಕರು ಮತ್ತು ಪ್ರಧಾನ ಮಂತ್ರಿಗಳಿಗೂ ಪತ್ರ ಕಳುಹಿಸಲಾಯಿತು. ಜೊತೆಗೆ ಕಾಮಗಾರಿ ವಹಿಸಿಕೊಂಡ ನವಯುಗ ಕಂಪೆನಿಗೂ ಪತ್ರ ರವಾನಿಸಲಾಯಿತು. ಇದನ್ನೂ ಓದಿ: ► ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ಈವರೆಗೂ ಅಪೂರ್ಣ – https://kundapraa.com/tag/nh66/ ಕುಂದಾಪುರದ ಶಾಸ್ತ್ರಿ ಸರ್ಕಲ್ನಲ್ಲಿ ಫ್ಲೈ ಓವರ್ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಇದರಿಂದ ವಾಹನ ಸವಾರರಿಗೆ ಅಡಚಣೆ ಉಂಟಾಗಿ ಅಪಘಾತಗಳು ಸಂಭವಿಸುತ್ತಿದೆ. ಅಲ್ಲದೇ ಸ್ಥಳದಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೇ ಚರಂಡಿ ನೀರು ರಸ್ತೆ ಮೇಲೆ ನೀರು ಹರಿಯುತ್ತಿದೆ. ಹಲವು ವರ್ಷಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ (ರಿ,) ಆಶ್ರಯದಲ್ಲಿ ನಡೆಯುವ ಅಭಿಮತ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಶತಾಯುಷಿ, ಹಿರಿಯ ಕೃಷಿಕರೂ ಆದ ಮಿಜಾರುಗುತ್ತು ಆನಂದ ಆಳ್ವ ಅವರು ತಮ್ಮ ಸ್ವಗೃಹದಲ್ಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಉತ್ಸವ, ಸಂಭ್ರಮ, ಮಹೋತ್ಸವಗಳಲ್ಲಿ ಏರ್ಪಡಿಸುವ ಸಾಂಸ್ಕೃತಿಕ ವೈಭವಗಳು ಕೇವಲ ಮನೋರಂಜನಗಷ್ಟೇ ಸೀಮಿತವಾಗಿರದೆ ಮನೋವಿಕಾಸಕ್ಕೂ ಪ್ರೇರಣೆಯಾಗಬೇಕು. ಮೊದಲು ದಣಿವ ಮರೆಯಲು ಮನೋರಂಜನೆಗಾಗಿ ಜನಪದ ನಡೆಗಳು ಸಾಗಿ ಬಂದವು, ಅದರಲ್ಲಿ ನೈತಿಕ ಶಿಕ್ಷಣವೂ ಅಂತರ್ಗತವಾಗಿದ್ದವು. ಇಂದು ಅದರ ಮೂಲ ಗಂಧವನ್ನ ಉಳಿಸಿಕೊಂಡು ಮುಂದಿನ ಪೀಳಿಗೆಗೂ ಕೊಂಡೊಯ್ಯಬೇಕಾದ ಅಗತ್ಯ, ಅನಿವಾರ್ಯತೆ ಇದೆ ಎಂದರು. ಫೆಬ್ರವರಿ 8ನೇ ತಾರೀಕಿನಂದು ನಡೆಯುವ ಅಭಿಮತ ಸಂಭ್ರಮದಲ್ಲಿ ಚಿತ್ರನಿರ್ದೇಶಕ ಯೋಗರಾಜ್ ಭಟ್ ರಿಗೆ ಕೀರ್ತಿಕಳಶ ಪುರಸ್ಕಾರ ಮತ್ತು ಶ್ರಮಜೀವಿ ಕೂಸ ಪೂಜಾರಿ, ಕ್ರೀಡಾ ಸಾಧಕ ಸೀತಾರಾಮ ಶೆಟ್ಟಿ, ಕರಕುಶಲ ಕಲೆಯ ಸಾಧಕಿ ಲಲಿತಾ ಪೂಜಾರಿ ಯವರಿಗೆ ಯಶೋಗಾಥೆ ಗೌರವಾರ್ಪಣೆ ನಡೆಯಲಿದ್ದು ಆ ಸಂಧರ್ಭದಲ್ಲಿ ಆಳ್ವಾಸ್ ವಿಧ್ಯಾರ್ಥಿಗಳ ಸಾಂಸ್ಕೃತಿಕ ವೈಭವ, ಜೀವನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘದ ವತಿಯಿಂದ ಪ್ರತಿಭಾ, ಪುರಸ್ಕಾರ, ಅಶಕ್ತರಿಗೆ ನೆರವು, ಹುಟ್ಟೂರ ಸನ್ಮಾನ ಹಾಗೂ ೬೦ ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ್ – ಬೈಂದೂರು ಚಾಂಪಿಯನ್ ಟ್ರೋಫಿ ೨೦೧೯ ಇದರ ಉದ್ಘಾಟನಾ ಸಮಾರಂಭ ಶನಿವಾರ ಗಾಂಧಿ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಬೈಂದೂರು ತಾಲೂಕು ಹೋರಾಟ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ ಮಾತನಾಡಿ ಸಂಘ ಸಂಸ್ಥೆಗಳು ಗ್ರಾಮೀಣ ಭಾಗದ ಪ್ರತಿಭೆಗಳನ್ನು ಗುರುತಿಸಿ, ಅವರ ಪ್ರತಿಭೆಯ ಅನಾವರಣಕ್ಕೆ ಸೂಕ್ತ ಅವಕಾಶಕಲ್ಪಿಸಿಕೊಡಬೇಕಾಗಿದೆ ಎಂದರು. ಈ ಸಂಘ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಉತ್ತೇಜಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಈ ಸಂಘಟನೆ ಇನ್ನಷ್ಟು ಸಮಾಜಮುಖಿ ಕೈಂಕರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಶುಭ ಹಾರೈಸಿದರು. ಗ್ರಾ.ಪಂ. ಅಧ್ಯಕ್ಷೆ ಮೂಕಾಂಬು ದೇವಾಡಿಗ, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಮೋಕ್ತೇಸರ ಬಿ. ಅಪ್ಪಣ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಕಳಕಳಿಯೊಂದಿಗೆ ಸ್ಥಾಪನೆಯಾಗಿರುವ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ದಶಮಾನೋತ್ಸವದ ಸಂಭ್ರಮಾಚರಣೆಯಲ್ಲಿದೆ. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿರುವ ಬಿ.ಅಪ್ಪಣ್ಣ ಹೆಗ್ಡೆಯವರಿಗೆ 85 ವರ್ಷಗಳು ತುಂಬುತ್ತಿದ್ದು, ಇದರ ಅಂಗವಾಗಿ ಡಿ.24 ರಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ಬಯಲು ರಂಗ ಮಂದಿರದಲ್ಲಿ ಜನ್ಮ ದಿನಾಚರಣೆ, ಪ್ರಶಸ್ತಿ ಪ್ರದಾನ ಹಾಗೂ ಅಶಕ್ತರಿಗೆ ದತ್ತಿನಿಧಿ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಸಂಚಾಲಕ ರಾಮಕಿಶನ್ ಹೆಗ್ಡೆ ಹೇಳಿದರು. ಅವರು ಶುಕ್ರವಾರ ಬಸ್ರೂರು ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರತಿಷ್ಠಾನದ ವತಿಯಿಂದ ಅನಾರೋಗ್ಯ ಹೊಂದಿರುವವರಿಗೆ ಹಾಗೂ ಅರ್ಹ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ದತ್ತಿನಿಧಿಯನ್ನು ವಿತರಿಸಲಾಗುವುದು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವಾ ಅವರಿಗೆ ಬಸ್ರೂರು ಅಪ್ಪಣ್ಣ ಹೆಗ್ಡೆ ಶಿಕ್ಷಣ ಪ್ರಶಸ್ತಿಯನ್ನು ನೀಡಲಾಗುವುದು. ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತರಾದ ಡಾ.ಜಿ .ಭೀಮೇಶ್ವರ ಜೋಷಿ ಪ್ರಶಸ್ತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿ ಶುಕ್ರವಾರ ಸುವರ್ಣ ಮಹೋತ್ಸವ ಸಮಾರಂಭ ಹಾಗೂ ಸ್ವರ್ಣರೇಖಾ ನೂತನ ರಂಗ ಮಂದಿರವನ್ನು ಶಾಸಕ ಬಿ. ಎಂ.ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ಕುಗ್ರಾಮದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕುವಂತಾಗಬೇಕು ಎಂಬ ಹೆಬ್ಬಯಕೆಯಿಂದ ಅಂದಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಧರ್ಮದರ್ಶಿಯಾಗಿದ್ದ ಕೀರ್ತಿಶೇಷ ಯಡ್ತರೆ ಮಂಜಯ್ಯ ಶೆಟ್ಟಿಯವರು ದೇವಳದ ವತಿಯಿಂದ ನಿರ್ಮಾಣ ಮಾಡಿದ ಈ ವಿದ್ಯಾಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಸೇರಿದಂತೆ ಆರ್ಥಿಕವಾಗಿ ಸಧೃಢವಾದ ದೇವಾಲಯಗಳು ಶಿಕ್ಷಣ ಸಂಸ್ಥೆಗಳನ್ನು ಕಟ್ಟುವ ಮೂಲಕ ಅದೆಷ್ಟೋ ಮಕ್ಕಳಿಗೆ ಅನುಕೂಲವಾಗಿದೆ. ಗ್ರಾಮೀಣ ಭಾಗಗಳಲ್ಲಿ ದೇವಳದ ಪ್ರೌಢಶಾಲೆಯನ್ನು ತೆರೆಯುವ ಮೂಲಕ ಈ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಹೆಣ್ಣೊಬ್ಬಳು ಶಿಕ್ಷಿತಳಾದರೆ ಇಡೀ ಕುಟುಂಬ ಸುಶಿಕ್ಷಿತವಾಗುತ್ತದೆ ಎಂದರು. ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಅಂಚೆ ಕಚೇರಿ, ಜೆಸಿಐ ಬೈಂದೂರು ಸಿಟಿ ಹಾಗೂ ಜೆಸಿಐ ಶಿರೂರು ಇವರ ಸಹಯೋಗದೊಂದಿಗೆ ಆಧಾರ ಕಾರ್ಡ್ ನೊಂದಣಿ ಶಿಬಿರವು ಬೈಂದೂರು ಅಂಚೆ ಕಚೇರಿ ಇಲ್ಲಿ ಜರುಗಿತು. ಕಾರ್ಯಕ್ರಮವನ್ನು ಜೆಸಿಐ ಬೈಂದೂರು ಸಿಟಿ ಅಧ್ಯಕ್ಷಮಣಿಕಂಠ ಎಸ್ ಉದ್ಘಾಟಿಸಿದರು. ಅಂಚೆ ಇಲಾಖೆಯ ಉಡುಪಿ ಅಧಿಕ್ಷಕರಾದ ಸುಧಾಕರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜೆಸಿ ಶಿರೂರು ಅಧ್ಯಕ್ಷ ನಾಗೇಶ್, ಬೈಂದೂರು ಜೆಸಿಯ ನಿಯೋಜಿತ ಅಧ್ಯಕ್ಷೆ ಜೆಸಿ ಪ್ರಿಯದರ್ಶಿನಿ ಬೆಸ್ಕೂರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬೈಂದೂರು ಅಂಚೆ ಕಚೇರಿ ಮುಖ್ಯಸ್ಥೆ ರತ್ನಾ ಗೀರಿಶ್ ಸ್ವಾಗತಿಸಿದರು, ಜೆಸಿ ಗೀರಿಶ್ ಮೆಸ್ತಾ ಅವರು ವಂದಿಸಿದರು, ಜೆಸಿ ಪ್ರಕಾಶ್ ಅವರು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಇದರ ಎ ಪಿ ಭಟ್ ಮತ್ತು ಅತುಲ್ ಭಟ್ ಮಾರ್ಗದರ್ಶನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಡಿಸೆಂಬರ್ 26ರಂದು ಸಂಭವಿಸಲಿರುವ ಕಂಕಣ ಸೂರ್ಯಗ್ರಹಣದ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಬುಧವಾರ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾತ್ಯಕ್ಷಿಕೆ ನಡೆಸಲಾಯಿತು. ಪೂರ್ಣಪ್ರಜ್ಞಾ ಕಾಲೇಜಿನ ವಿದ್ಯಾರ್ಥಿಗಳಾದ ಜೇಷ್ಠಾ ಪ್ರಭು, ಶಾಂಭವಿ ವಿ ಭಟ್, ಕುಮಾರ ಚವ್ವನ ಹೆಗ್ಡೆ ಮತ್ತು ಮಹಮ್ಮದ್ ಹಶಿಮ್ ಅನ್ವರ್ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳಿಗೆ ತೆರಳಿ ಪ್ರಾತ್ಯಕ್ಷಿಕೆ ನೀಡಿದರು. ವಿದ್ಯಾರ್ಥಿಗಳು ಗ್ರಹಣ ವೀಕ್ಷಿಸಲು ಪಿನ್ಹೋಲ್ ಯಂತ್ರ ಹಾಗೂ ಕನ್ನಡಕವನ್ನು ನೀಡಿದರು. ಈ ಸಂದರ್ಭ ಉದ್ಯಮಿಗಳಾದ ಶ್ರೀನಿವಾಸ ಪ್ರಭು ಉಪಸ್ಥಿತರಿದ್ದರು. ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ಧನ ದೇವಾಡಿಗ ಸ್ವಾಗತಿಸಿದರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಸಂಚಾಲಕರಾದ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು.
ಕಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಈ ಇಲ್ಲಿಗೆ ಸಮೀಪದ ಆನಗಳ್ಳಿಯ ಹೆಬ್ಬಾರ ಬೆಟ್ಟುವಿನ ಶ್ರೀ ದತ್ತಾಶ್ರಮ, ಶ್ರೀ ಆದಿ ಶಕ್ತಿ ಮಠದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಯ ವಿನಯ್ ಗುರೂಜಿ ಹಾಗೂ ದೆಹಲಿಯ ನಾಗ ಸಾಧುಗಳ ಪಂಥದ ರಾಷ್ಟ್ರೀಯ ಜೂನಾ ಅಖಾಡದ ಉಪಾಧ್ಯಕ್ಷ ಅಗಸ್ತ್ಯಗಿರಿ ಮಹಾರಾಜ್ ನೇತ್ರತ್ವದಲ್ಲಿ ಬ್ರಹತ್ ನರ್ಮದೇಶ್ವರ ಲಿಂಗದ ಪ್ರತಿಷ್ಠಾಪನೆ ನಡೆಯಿತು. ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಬುಧವಾರ ಮುಂಜಾನೆಯಿಂದ ಶಂಕರನಾರಾಯಣದ ಶ್ರೀಶ ಜೋಯಿಸರ ನೇತ್ರತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ನರ್ಮದಾ ಲಿಂಗಕ್ಕೆ ಹಾಲು, ತುಪ್ಪ, ಜೇನು, ಸಿಯಾಳ, ನೀರು, ರಕ್ತಚಂದನ, ಅರಶಿನ-ಕುಂಕುಮ, ಭಸ್ಮ, ಸಕ್ಕರೆ, ಕಬ್ಬಿನ ಹಾಲು ಸೇರಿದಂತೆ ಪುಣ್ಯ ದ್ರವ್ಯಗಳಿಂದ ಅಭಿಷೇಕ ನೆರವೇರಿಸಲಾಯಿತು. ಈ ವೇಳೆ ನೆರೆದ ಭಕ್ತಸಾಗರವು ಹರಹರ ಮಹಾದೇವ ಘೋಷಣೆಯನ್ನು ಅರ್ಪಿಸಿದರು. ಆದಿವಾಸ ಹೋಮ, ದತ್ತಾಭಿಷೇಕ, ಶತ ರುದ್ರಾಭಿಷೇಕ, ಪವನ ಹೋಮ, ದುರ್ಗಾಷಟಿ ಹೋಮ ಮೊದಲಾದ ಧಾರ್ಮಿಕ ಪೂಜೆ ನಡೆಯಿತು.…
