Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಸೇರಿಕೊಳ್ಳಲಿರುವ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಕ್ರಿಯೇಟಿವ್‌ನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ, ನೀಟ್ ಪರೀಕ್ಷೆಯಲ್ಲಿ ಕಠಿಣ ಪ್ರಯತ್ನಪಟ್ಟು ಸಾಧನೆಗೈದಿರುವ ವಿದ್ಯಾರ್ಥಿಗಳನ್ನು ಮತ್ತು ಅವರ ಹೆತ್ತವರನ್ನು ಗೌರವಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಕ್ರಿಯೇಟಿವ್ ಪ್ರತಿಭಾ ಪರ್ವ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಅನೇಕ ಗೊಂದಲಗಳ ನಡುವೆಯೂ ಸಂಕಟಗಳನ್ನು, ಒತ್ತಡಗಳನ್ನು ದಾಟಿ ಗೆದ್ದು ವಿಶಿಷ್ಟ ಸಾಧನೆ ಗೈದಿರುವ ವಿದ್ಯಾರ್ಥಿಗಳನ್ನು ವಿಶೇಷವಾಗಿ ಗುರುತಿಸಲು ಅತೀವ ಸಂತೋಷವಾಗುತ್ತದೆ. ಕೇವಲ ವಿದ್ಯಾರ್ಥಿಗಳಿಗೆ ಅಂಕ ಗಳಿಕೆ ಮಾತ್ರವಲ್ಲದೆ ಭವಿಷ್ಯತ್ತಿನಲ್ಲಿ ಉತ್ತಮ ನಾಗರಿಕರನ್ನಾಗಿ ಮಾಡುವಲ್ಲಿ ಕ್ರಿಯೇಟಿವ್ ಸಂಸ್ಥೆ ಸದಾ ಶ್ರಮಿಸುತ್ತಿದೆ ಎಂದು ನುಡಿದರು. ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್. ಅವರು, ಕಾರ್ಯಕ್ರಮದ ಕುರಿತು ಇದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಪರಿಸರದ ಮಾಧವ ಶೆಣೈ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದು ಪ್ರಸ್ತುತ ಕೆ.ಎಂ.ಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಆರ್ಥಿಕ ಸಹಕಾರಕ್ಕೆ ಸ್ಥಳೀಯ ಸಂಘಸಂಸ್ಥೆಗಳ ಮೊರೆಹೋಗಿದ್ದಾರೆ. ಈ ದಿಸೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಹಾಗೂ ದಾನಿಗಳ ಸಹಕಾರದೊಂದಿಗೆ ಸುಮಾರು 45 ಸಾವಿರೂ ರೂಗಳನ್ನು ಒಗ್ಗೂಡಿಸಿ ಅದನ್ನು ಭಾನುವಾರ ಮಾಧವ ಶೆಣೈ ಇವರಿಗೆ ಹಸ್ತಾಂತರಿಸಲಾಯಿತು. ಇದರ ಚೆಕ್ ಅನ್ನು ಮುಂಬೈ ಒಎನ್‌ಜಿಸಿ ಇದರ ನಿವೃತ್ತ ಅಧಿಕಾರಿ ಬನ್ನಾಡಿ ನಾರಾಯಣ ಆಚಾರ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಕಡ್ ಫೌಂಡೇಶನ್ ಮುಖ್ಯಸ್ಥ ಶ್ರೀಕಾಂತ್ ಶೆಣೈ, ಕೋಟ ಪಂಚಾಯತ್ ಮಾಜಿ ಸದಸ್ಯ ಎಂ. ಜಯರಾಮ ಶೆಟ್ಟಿ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ, ಉಪಾಧ್ಯಕ್ಷ ದಿನೇಶ್ ಆಚಾರ್, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಮಹಿಳಾ ಅಧ್ಯಕ್ಷೆ ಲಲಿತಾ ಪೂಜಾರಿ, ಸಂಚಾಲಕಿ ಸುಜಾತ ಬಾಯರಿ ಮತ್ತಿತರರು ಇದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026 ಕಾರ್ಯವು ಸಮರ್ಪಕವಾಗಿ ನಡೆಯುತ್ತಿದ್ದು ಈವರೆಗೆ ಜಿಲ್ಲೆಯಾದ್ಯಂತ 100% ರಷ್ಟು ಏನ್ಯೂಮರೇಷನ್ ನಮೂನೆಗಳನ್ನು ವಿತರಿಸಲಾಗಿದೆ. ನಿಖರ ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ತಯಾರಿಸಲು ಈ ಪ್ರಕ್ರಿಯೆಯು ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ನಿಮಗೆ ತಲುಪಿಸಲಾಗಿರುವ ನಮೂನೆಗಳಲ್ಲಿರುವ ವಿವರಗಳನ್ನು ಪರಿಶೀಲಿಸಿ, ಎಲ್ಲಾ ಮಾಹಿತಿಯನ್ನು ತಪ್ಪಿಲ್ಲದಂತೆ ಭರ್ತಿ ಮಾಡಿ ಭರ್ತಿ ಮಾಡಿದ ನಮೂನೆಗಳನ್ನು ನಿಮ್ಮ ವ್ಯಾಪ್ತಿಯ ಬೂತ್ ಮಟ್ಟದ ಗಳಿಗೆ ಹಿಂತಿರುಗಿಸಬೇಕು. ನಮೂನೆಗಳನ್ನು ಭರ್ತಿ ಮಾಡುವಲ್ಲಿ ಯಾವುದೇ ತೊಂದರೆ ಅಥವಾ ಗೊಂದಲಗಳಿದ್ದರೆ, ಹತ್ತಿರದ BLO Facilitation Centre (BFC) ಮತ್ತು Voter facilitation Centre (VFC) ಗೆ ಭೇಟಿ ನೀಡಿದಲ್ಲಿ ಅಲ್ಲಿನ ಸಿಬ್ಬಂದಿಗಳು ನಮೂನೆಗಳನ್ನು ಭರ್ತಿ ಮಾಡುವ ಕುರಿತು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಹೆಚ್ಚಿನ ಮಾಹಿತಿ ಅಥವಾ ನಿಮ್ಮ ವ್ಯಾಪ್ತಿಯ BLO ಮತ್ತು Facilitationಗಳ ವಿವರಗಳನ್ನು ಜಿಲ್ಲಾಡಳಿತದ ಅಧಿಕೃತ ವೆಬ್ https://udupi.nic.in/en/special-intensive-revision – 2026/ ಅನ್ನು ಸಂಪರ್ಕಿಸಬಹುದಾಗಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಮುಂಬರುವ ದಿನಗಳಲ್ಲಿ ಬರಬಹುದಾದ ಮೇವಿನ ಕೊರತೆಯನ್ನು ನೀಗಿಸಲು ಅಲ್ಪಾವಧಿ ಹಾಗೂ ಧೀರ್ಘಾವಧಿ ತಳಿಯ ಮೇವು ಉತ್ಪಾದನೆಯನ್ನು ಬೇಡಿಕೆಗೆ ಅನುಗುಣವಾಗಿ ರೈತರು ಹುಲ್ಲನ್ನು ಬೆಳೆಯಲು ಅನುಕೂಲವಾಗುವಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.  ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇವು ಅಭಿವೃದ್ಧಿ ಕಾರ್ಯಪಡೆ ಸಮಿತಿ ಸಭೆ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಡಿದರು. ಪ್ರಸ್ತುತ ಮಾನ್ಸೂನ್ ಮಳೆಗಾಲದಲ್ಲಿ ಹವಾಮಾನ ವೈಪರಿತ್ಯದಿಂದಾಗಿ ವಾಡಿಕೆಗಿಂತ ಕಡಿಮೆ ಬೀಳುತ್ತಿದ್ದು, ಮುಂದಿನ ದಿನಗಳಲ್ಲಿ ಬರಪರಿಸ್ಥಿತಿ ಉಂಟಾಗುವ ಸಾಧ್ಯತೆಗಳು ಇವೆ. ಜಿಲ್ಲೆಯಲ್ಲಿ ಪ್ರಸ್ತುತ ಮುಂಬರುವ 42 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿದೆ. ಆದರೆ ಕುಂದಾಪುರ ಹಾಗೂ ಬೈಂದೂರು ತಾಲೂಕುಗಳಲ್ಲಿ ಮೇವಿನ ಪ್ರಮಾಣ ಇತರೆ ತಾಲೂಕುಗಳಿಗೆ ಹೋಲಿಸಿದ್ದಲ್ಲಿ ಕಡಿಮೆ ಇದೆ. ಕುಂದಾಪುರ ತಾಲೂಕಿನಲ್ಲಿಯೇ ಹೆಚ್ಚು ರಾಸುಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಕಷ್ಟಪಟ್ಟು ಕೆಲಸ ಮಾಡಬೇಕು. ಪ್ರಾಮಾಣಿಕ ಪ್ರಯತ್ನ ಇದ್ದರೆ ಅದಕ್ಕೆ ಪ್ರತಿಫಲ ಸಿಗುತ್ತದೆ.ಸಿ . ಎ ಮತ್ತು ಸಿ.ಎಸ್. ಪೂರ್ಣಗೊಳಿಸುವುದು ಕಷ್ಟ ಅಂತ ಭಾವಿಸುವುದು ತಪ್ಪು ಕಲ್ಪನೆ. ನಿರಂತರ ಪರಿಶ್ರಮ ಇದ್ದರೆ ಸಿ.ಎ. ಮತ್ತು ಸಿ.ಎಸ್. ಸುಲಭವಾಗಿ ಪೂರ್ಣಗೊಳಿಸಬಹುದು. ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶಿಕ್ಷಣದ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳು ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಅಭಿಪ್ರಾಯಪಟ್ಟರು. ಅವರು ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಿಭಾಗದ ಸಿ.ಇ., ಸಿ.ಎಸ್. ವಾಣಿಜ್ಯಿಕ ಓರಿಯೋಟೇಷನ್ ಕಾರ್ಯಕ್ರಮದಲ್ಲಿ ಮಾತನಾಡಿದರು. ವಾಣಿಜ್ಯ ವಿಭಾಗದಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳು ಮುಂದಿನವು ದಿನಗಳಲ್ಲಿ ಸಿ.ಎ, ಸಿ.ಎಸ್. ಜೊತೆಗೆ ವಿಪುಲ ಅವಕಾಶಗಳು ಗ್ರಾಮೀಣ ಭಾಗದಲ್ಲಿರುವ ಜನತಾ ಪಿಯು ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಶೈಕ್ಷಣಿಕ ಸಾಧನೆಗಳು ಸಿಗುವ ಅವಕಾಶ ಉತ್ತಮ ವ್ಯಕ್ತಿಗಳಾಗಿ ಎಂದು ಅರಿವು ಮೂಡಿಸಿದರು. ವೇದಿಕೆಯಲ್ಲಿ ಜನತಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಶಿಕ್ಷಣ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳ ಬಗೆಗಿನ ಅರಿವನ್ನು ಮೂಡಿಸಿ ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ  ವಿಶಿಷ್ಟ ಶೈಲಿಯ ಕಾರ್ಯಕ್ರಮ ʼಕ್ರಿಯೇಟಿವ್ ಕೆಸರ್ಡೊಂಜಿ  ದಿನ 2026ʼ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ವಿಜೃಂಭಣೆಯಿಂದ ಜರುಗಿತು. ರಾಜರಾಜೇಶ್ವರಿ ಸಂಸ್ಥೆಯ ಸಂಸ್ಥಾಪಕರಾದ ದೇವಿ ಪ್ರಸಾದ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆಧುನಿಕರಣಕ್ಕಾಗಿ ಪ್ರಕೃತಿಯನ್ನು ನಾಶ ಮಾಡದೆ ಅದನ್ನು ಉಳಿಸಿಕೊಂಡು ಹೋಗಬೇಕು. ಈ ಭೂಮಿ ನಮಗೆ ನೀರು, ಗಾಳಿ, ಅನ್ನವನ್ನು ನೀಡಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಭೂಮಿತಾಯಿಗೆ ಸದಾ ಋಣಿಗಳಾಗಿರಬೇಕು. ನಮ್ಮ ಬದುಕಿನ ಸ್ವಲ್ಪ ಭಾಗವಾದರೂ ಪ್ರಕೃತಿಗೋಸ್ಕರ ದೇಶಕ್ಕೋಸ್ಕರ ಮೀಸಲಿಡಬೇಕು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರವೀಂದ್ರ ಪ್ರಭು ಕಡಾರಿ ಅವರು ಮಾತನಾಡಿ, ಹಿರಿಯರು ಈ ಮಣ್ಣಿನೊಂದಿಗೆ ಹೋರಾಟವನ್ನು ನಡೆಸಿ ತಮ್ಮ ಬದುಕನ್ನು ಕಟ್ಟಿಕೊಂಡವರು. ಪ್ರಕೃತಿ ಪರಂಪರೆಯನ್ನು ಉಳಿಸುವ ಕಾರ್ಯಕ್ರಮವನ್ನು ಕ್ರಿಯೇಟಿವ್ ಸಂಸ್ಥೆ ವಿದ್ಯಾರ್ಥಿಗಳಿಂದ ಮಾಡಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ನುಡಿದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಹ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ 2026ರ ಆಗಸ್ಟ್ 1 ರಿಂದ 31ರ ವರೆಗೆ ಶೇ. ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಆನ್‌ಲೈನ್ www.kuvempubhashabharathi.karnataka.gov.in ಹಾಗೂ ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಲ್ಲಿ ಕೂಡ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತಿದ್ದು, ಓದುಗರು ಪುಸ್ತಕಗಳನ್ನು ಖರೀದಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0820-2986168 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100 ಚಾಪಾ ಕಾಗದದೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಫ್ರೂಟ್ಸ್ ಐ.ಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಫ್ರೂಟ್ಸ್ ಐ.ಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದರದೇ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಫ್ರೂಟ್ಸ್ ಐ.ಡಿಗೆ ಜೋಡಣೆ ಮಾಡಿಕೊಳ್ಳುವಂತೆ ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಅ.01: ನಗರದ ಚರ್ಚ್ ರಸ್ತೆಯಲ್ಲಿ ವ್ಯಕ್ತಿಯೊರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಡೇರಿಕ್‌ ಕ್ರಾಸ್ಟಾ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭಟ್ಕಳ ತಾಲೂಕು ಬೆಳಕೆ ಗ್ರಾಮದ ಹೇರಬುಡಿಕೆ ಎಂಬಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕುಂದಾಪುರ ಚರ್ಚ್ ಎದುರಿಗೆ ಶುಕ್ರವಾರ ಬೆಳಗಿನ ಜಾವ 03:30ರ ಸುಮಾರಿಗೆ ಪಿಸ್ತೂಲ್ ಮೂಲಕ ಆರೋಪಿ ಗುಂಡು ಹೊಡೆದು ಪರಾರಿಯಾಗಿದ್ದು ತೀವ್ರ ರಕ್ತಸ್ರಾವದಿಂದ ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಸ್ಥಳದಲ್ಲೇ ಮೃತಪಟ್ಟಿದ್ದರು. ಈ ವೇಳೆ ಐವನ್‌ ಅವರೊಂದಿಗಿದ್ದ ಎರಡನೇ ಪತ್ನಿ ಎನ್ನಲಾದ ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದರು. ಆರೋಪಿಯ ಪತ್ತೆಗೆ ಪೊಲೀಸರು ಮೂರು ವಿಶೇಷ ತಂಡವನ್ನು ರಚಿಸಿದ್ದರು. ಕುಂದಾಪುರ ಚರ್ಚ್‌ ರಸ್ತೆಯ ನಿವಾಸಿಯಾದ ಡೇರಿಕ್‌ ಕ್ರಾಸ್ತಾ, ಹಣಕಾಸು ಅಥವಾ ಬೇರೆ ಯಾವುದೇ ವ್ಯವಹಾರದಿಂದ ಈ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಶನಿವಾರ ಆರೋಪಿಯನ್ನು ಬಂಧಿಸಲಾಗಿದ್ದು, ತನಿಕೆ ಪ್ರಗತಿಯಲ್ಲಿದೆ. ಇದನ್ನೂ ಓದಿ: ಕುಂದಾಪುರ: ನಡು ರಸ್ತೆಯಲ್ಲೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ, ಅಪಘಾತಗಳಿಗೆ ಮಾದಕ ದ್ರವ್ಯ ಕಾರಣವಾಗುತ್ತಿದೆ. ಯುವ ಜನತೆ ಇತ್ತೀಚಿಗೆ ಪಬ್, ಬಾರ್, ಗಾಂಜಾ, ಅಫೀಮು ಮೊದಲಾದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಅದರ ಮೂಲಕ ಅನೇಕ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸಿರುವುದು ಕಂಡು ಬಂದಿದೆ. ಹೀಗಾಗಿ ಯಾರು ಕೂಡ ತಪ್ಪು ದಾರಿ ಹಿಡಿದು ಇಡೀ ಮನೆಯನ್ನು ಸ್ಮಶಾನ ಮಾಡಬಾರದೆಂಬ ಉದ್ದೇಶದಿಂದ ಮಾದಕ ವಸ್ತು ಹಾಗೂ ಮಾದಕ ದ್ರವ್ಯಗಳ ಬಗ್ಗೆ ಮಾಹಿತಿಯನ್ನು ನೀಡಿ, ಜಾಗೃತಿ ಮೂಡಿಸುವ ಕೆಲಸವನ್ನು ಸರಕಾರ ಮತ್ತು ಇನ್ನಿತರ ಸಂಘ ಸಂಸ್ಥೆಗಳು ನಿರಂತರವಾಗಿ ಮಾಡುತ್ತಿದೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್ ಹೇಳಿದರು. ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಜನಜಾಗೃತಿ ವೇದಿಕೆ ತ್ರಾಸಿ ವಲಯ ಮತ್ತು ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ…

Read More