ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಕಷ್ಟಪಟ್ಟು ಕೆಲಸ ಮಾಡಬೇಕು. ಪ್ರಾಮಾಣಿಕ ಪ್ರಯತ್ನ ಇದ್ದರೆ ಅದಕ್ಕೆ ಪ್ರತಿಫಲ ಸಿಗುತ್ತದೆ.ಸಿ . ಎ ಮತ್ತು ಸಿ.ಎಸ್. ಪೂರ್ಣಗೊಳಿಸುವುದು ಕಷ್ಟ ಅಂತ ಭಾವಿಸುವುದು ತಪ್ಪು ಕಲ್ಪನೆ. ನಿರಂತರ ಪರಿಶ್ರಮ ಇದ್ದರೆ ಸಿ.ಎ. ಮತ್ತು ಸಿ.ಎಸ್. ಸುಲಭವಾಗಿ ಪೂರ್ಣಗೊಳಿಸಬಹುದು. ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶಿಕ್ಷಣದ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳು ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಅಭಿಪ್ರಾಯಪಟ್ಟರು. ಅವರು ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವಿಭಾಗದ ಸಿ.ಇ., ಸಿ.ಎಸ್. ವಾಣಿಜ್ಯಿಕ ಓರಿಯೋಟೇಷನ್ ಕಾರ್ಯಕ್ರಮದಲ್ಲಿ ಮಾತನಾಡಿದರು. ವಾಣಿಜ್ಯ ವಿಭಾಗದಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳು ಮುಂದಿನವು ದಿನಗಳಲ್ಲಿ ಸಿ.ಎ, ಸಿ.ಎಸ್. ಜೊತೆಗೆ ವಿಪುಲ ಅವಕಾಶಗಳು ಗ್ರಾಮೀಣ ಭಾಗದಲ್ಲಿರುವ ಜನತಾ ಪಿಯು ಕಾಲೇಜಿನಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಶೈಕ್ಷಣಿಕ ಸಾಧನೆಗಳು ಸಿಗುವ ಅವಕಾಶ ಉತ್ತಮ ವ್ಯಕ್ತಿಗಳಾಗಿ ಎಂದು ಅರಿವು ಮೂಡಿಸಿದರು. ವೇದಿಕೆಯಲ್ಲಿ ಜನತಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಗೆ ಶಿಕ್ಷಣ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳ ಬಗೆಗಿನ ಅರಿವನ್ನು ಮೂಡಿಸಿ ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿಶಿಷ್ಟ ಶೈಲಿಯ ಕಾರ್ಯಕ್ರಮ ʼಕ್ರಿಯೇಟಿವ್ ಕೆಸರ್ಡೊಂಜಿ ದಿನ 2026ʼ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ವಿಜೃಂಭಣೆಯಿಂದ ಜರುಗಿತು. ರಾಜರಾಜೇಶ್ವರಿ ಸಂಸ್ಥೆಯ ಸಂಸ್ಥಾಪಕರಾದ ದೇವಿ ಪ್ರಸಾದ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆಧುನಿಕರಣಕ್ಕಾಗಿ ಪ್ರಕೃತಿಯನ್ನು ನಾಶ ಮಾಡದೆ ಅದನ್ನು ಉಳಿಸಿಕೊಂಡು ಹೋಗಬೇಕು. ಈ ಭೂಮಿ ನಮಗೆ ನೀರು, ಗಾಳಿ, ಅನ್ನವನ್ನು ನೀಡಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಭೂಮಿತಾಯಿಗೆ ಸದಾ ಋಣಿಗಳಾಗಿರಬೇಕು. ನಮ್ಮ ಬದುಕಿನ ಸ್ವಲ್ಪ ಭಾಗವಾದರೂ ಪ್ರಕೃತಿಗೋಸ್ಕರ ದೇಶಕ್ಕೋಸ್ಕರ ಮೀಸಲಿಡಬೇಕು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರವೀಂದ್ರ ಪ್ರಭು ಕಡಾರಿ ಅವರು ಮಾತನಾಡಿ, ಹಿರಿಯರು ಈ ಮಣ್ಣಿನೊಂದಿಗೆ ಹೋರಾಟವನ್ನು ನಡೆಸಿ ತಮ್ಮ ಬದುಕನ್ನು ಕಟ್ಟಿಕೊಂಡವರು. ಪ್ರಕೃತಿ ಪರಂಪರೆಯನ್ನು ಉಳಿಸುವ ಕಾರ್ಯಕ್ರಮವನ್ನು ಕ್ರಿಯೇಟಿವ್ ಸಂಸ್ಥೆ ವಿದ್ಯಾರ್ಥಿಗಳಿಂದ ಮಾಡಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ನುಡಿದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ 2026ರ ಆಗಸ್ಟ್ 1 ರಿಂದ 31ರ ವರೆಗೆ ಶೇ. ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಆನ್‌ಲೈನ್ www.kuvempubhashabharathi.karnataka.gov.in ಹಾಗೂ ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಲ್ಲಿ ಕೂಡ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತಿದ್ದು, ಓದುಗರು ಪುಸ್ತಕಗಳನ್ನು ಖರೀದಿಸಿ, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0820-2986168 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಕೃಷಿ ಯಂತ್ರೋಪಕರಣಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್ ಪ್ರತಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ರೂ. 100 ಚಾಪಾ ಕಾಗದದೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ. ಸದ್ರಿ ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಫ್ರೂಟ್ಸ್ ಐ.ಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಫ್ರೂಟ್ಸ್ ಐ.ಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದರದೇ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿ ಗಳನ್ನು ಫ್ರೂಟ್ಸ್ ಐ.ಡಿಗೆ ಜೋಡಣೆ ಮಾಡಿಕೊಳ್ಳುವಂತೆ ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.01: ನಗರದ ಚರ್ಚ್ ರಸ್ತೆಯಲ್ಲಿ ವ್ಯಕ್ತಿಯೊರ್ವನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಡೇರಿಕ್ ಕ್ರಾಸ್ಟಾ ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭಟ್ಕಳ ತಾಲೂಕು ಬೆಳಕೆ ಗ್ರಾಮದ ಹೇರಬುಡಿಕೆ ಎಂಬಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕುಂದಾಪುರ ಚರ್ಚ್ ಎದುರಿಗೆ ಶುಕ್ರವಾರ ಬೆಳಗಿನ ಜಾವ 03:30ರ ಸುಮಾರಿಗೆ ಪಿಸ್ತೂಲ್ ಮೂಲಕ ಆರೋಪಿ ಗುಂಡು ಹೊಡೆದು ಪರಾರಿಯಾಗಿದ್ದು ತೀವ್ರ ರಕ್ತಸ್ರಾವದಿಂದ ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಸ್ಥಳದಲ್ಲೇ ಮೃತಪಟ್ಟಿದ್ದರು. ಈ ವೇಳೆ ಐವನ್ ಅವರೊಂದಿಗಿದ್ದ ಎರಡನೇ ಪತ್ನಿ ಎನ್ನಲಾದ ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದರು. ಆರೋಪಿಯ ಪತ್ತೆಗೆ ಪೊಲೀಸರು ಮೂರು ವಿಶೇಷ ತಂಡವನ್ನು ರಚಿಸಿದ್ದರು. ಕುಂದಾಪುರ ಚರ್ಚ್ ರಸ್ತೆಯ ನಿವಾಸಿಯಾದ ಡೇರಿಕ್ ಕ್ರಾಸ್ತಾ, ಹಣಕಾಸು ಅಥವಾ ಬೇರೆ ಯಾವುದೇ ವ್ಯವಹಾರದಿಂದ ಈ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಶನಿವಾರ ಆರೋಪಿಯನ್ನು ಬಂಧಿಸಲಾಗಿದ್ದು, ತನಿಕೆ ಪ್ರಗತಿಯಲ್ಲಿದೆ. ಇದನ್ನೂ ಓದಿ: ಕುಂದಾಪುರ: ನಡು ರಸ್ತೆಯಲ್ಲೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ, ಅಪಘಾತಗಳಿಗೆ ಮಾದಕ ದ್ರವ್ಯ ಕಾರಣವಾಗುತ್ತಿದೆ. ಯುವ ಜನತೆ ಇತ್ತೀಚಿಗೆ ಪಬ್, ಬಾರ್, ಗಾಂಜಾ, ಅಫೀಮು ಮೊದಲಾದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಅದರ ಮೂಲಕ ಅನೇಕ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸಿರುವುದು ಕಂಡು ಬಂದಿದೆ. ಹೀಗಾಗಿ ಯಾರು ಕೂಡ ತಪ್ಪು ದಾರಿ ಹಿಡಿದು ಇಡೀ ಮನೆಯನ್ನು ಸ್ಮಶಾನ ಮಾಡಬಾರದೆಂಬ ಉದ್ದೇಶದಿಂದ ಮಾದಕ ವಸ್ತು ಹಾಗೂ ಮಾದಕ ದ್ರವ್ಯಗಳ ಬಗ್ಗೆ ಮಾಹಿತಿಯನ್ನು ನೀಡಿ, ಜಾಗೃತಿ ಮೂಡಿಸುವ ಕೆಲಸವನ್ನು ಸರಕಾರ ಮತ್ತು ಇನ್ನಿತರ ಸಂಘ ಸಂಸ್ಥೆಗಳು ನಿರಂತರವಾಗಿ ಮಾಡುತ್ತಿದೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಪವನ್ ನಾಯಕ್ ಹೇಳಿದರು. ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಜನಜಾಗೃತಿ ವೇದಿಕೆ ತ್ರಾಸಿ ವಲಯ ಮತ್ತು ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿ ಕನ್ಯಾಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 32 ವರ್ಷಗಳ ದೀರ್ಘ ಸೇವೆ ಸಲ್ಲಿಸಿದ ನಿವೃತ್ತರಾದ ವಿಜಯ ಕೆ. ನಾಯರಿ ಅವರಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯಿಂದ ನಿವೃತ್ತಿ ಸನ್ಮಾನ ಸಮಾರಂಭವನ್ನು ಶುಕ್ರವಾರ ಶಾಲಾ ಸಭಾಂಗಣದಲ್ಲಿ ಜರಗಿತು. ನಿವೃತ್ತ ಶಿಕ್ಷಕ ವಿಜಯ ನಾಯರಿ ಅವರನ್ನು ಸನ್ಮಾನಿಸಿ ಗೌರವಿಸಿ ಬಿಳ್ಕೋಡುಗೆ ಗೌರವ ನೀಡಲಾಯಿತು. ಸಹದ್ಯೋಗಿ ಬಂಧುಗಳು, ಅಭಿಮಾನಿಗಳು, ಗ್ರಾಮಸ್ಥರು, ದೈಹಿಕ ಶಿಕ್ಷಕರ ಸಂಘ ಬ್ರಹ್ಮಾವರ, ಶ್ರೀ ರಾಮಪ್ರಸಾದಿತ ಯಕ್ಷಗಾನ ಮಂಡಳಿ ಕೋಡಿ ಕನ್ಯಾಣ ಅವರುಗಳ ವತಿಯಿಂದ ಗೌರವಿಸಲಾಯಿತು. ಇದೇ ವೇಳೆ ವರ್ಗಾವಣೆಗೊಂಡ ಶಿಕ್ಷಕಿ ರಮಣಿ ಅವರನ್ನು ಗೌರವಿಸಿಕೊಳ್ಳಲಾಯಿತು. ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಉದ್ಯಮಿ ಶಿವ ಕರ್ಕೇರ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಕೋಟ ಮೂರ್ತೆದಾರ ಸಹಕಾರಿ ಸಂಘದ ಅಧ್ಯಕ್ಷ ಕೊರಗ ಪೂಜಾರಿ, ಕೋಡಿ ಪಂಚಾಯತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ಆತ್ಮಯೋಜನೆಯಡಿ ಇಲಾಖೆಯ ಇತರೆ ಯೋಜನೆಗಳಾದ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗೆ ಸಮಾನಾಂತರವಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿ ರೈತರ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮವಿರುತ್ತದೆ. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಯ್ಕೆಯಾದ ಜಿಲ್ಲೆಯ ಒಟ್ಟಾರೆ 10 ಮಂದಿ ರೈತರಿಗೆ (ತಲಾ ರೂ. 25,000/-) ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಆಯ್ಕೆಯಾದ ಆಯಾ ತಾಲ್ಲೂಕಿನ ಒಟ್ಟಾರೆ ೫ ಮಂದಿ ರೈತರಿಗೆ (ತಲಾ ರೂ. 10,000/-) ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರು ಹಾಗೂ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ೩೧.೦೮.೨೦೨೬ ರೊಳಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ತಡವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಪಂಡಿತ ಪ್ರಶಸ್ತಿಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಆಗಸ್ಟ್ 31 ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಡ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಪಹಣಿ, ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ವಿವರದ ಪ್ರತಿ, ನಿಗಧಿತ ಛಾಪಾ ಕಾಗದದಲ್ಲಿ ಹಬ್ ಪರಭಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ ಇತ್ಯಾದಿ ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ನಮೂನೆಯಲ್ಲಿ ವಿವರ ಭರ್ತಿ ಮಾಡಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಆಗಸ್ಟ್ 19ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
