ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ, ಉಡುಪಿ ಹಾಗೂ ಸಹಕಾರ ಇಲಾಖೆ ಜಂಟಿಯಾಗಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಿದ್ದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ 2019ರ ಕಾರ್ಯಕ್ರಮದಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಈ ಸಂಸ್ಥೆಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಪ್ಪುಂದ ಮೂರ್ತೇದಾರರ ಸೇವಾ ಸಹಕಾರಿ ಸಂಘದ ಪರವಾಗಿ ಅಧ್ಯಕ್ಷ ಮೋಹನ ಪೂಜಾರಿ ಉಪ್ಪುಂದ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಎಚ್. ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಉಡುಪಿ ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಎನ್. ಗಂಗಣ್ಣ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ…
Author: ನ್ಯೂಸ್ ಬ್ಯೂರೋ
ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಒಂದೇ ನೋಟಕ್ಕೆ ಮನತುಂಬಿದ ನಗು ಇಲ್ಲವೇ ಸೆಡವು. ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿ ಗೊಂದು ಚಾಟಿ. ಜನಸಾಮಾನ್ಯರಿಗೆ ನಗುವಿನ ಚಟಾಕಿ. ವಾಸ್ತವದ ಅನಾವರಣ. ನೂರು ಪದಗಳಲ್ಲಿ ಹೇಳಬಹುದಾದದ್ದನ್ನು ಒಂದು ರೇಖೆಯಲ್ಲಿ ಹೇಳಿ ಮುಗಿಸುವ ಛಾತಿ. ಇಂತಹ ಕಾರ್ಟೂನಿಷ್ಠ ರನ್ನು ಕಾರ್ಟೂನಿಷ್ಠರ ತವರು, ಕುಂದಾಪುರದಲ್ಲಿ ಒಗ್ಗೂಡಿಸಿ ಕಳೆದ ಐದು ವರ್ಷಗಳಿಂದ ಆಯೋಜಿಸುತ್ತಿರುವ ಕಾರ್ಟೂನು ಹಬ್ಬ, ಈ ಭಾರಿ ನ.23ರಿಂದ ನ.26ರ ತನಕ ನಡೆಯಲಿದೆ. ಖ್ಯಾತ ವ್ಯಂಗ್ಯಚಿತ್ರಕಾರ ಕುಂದಾಪುರದ ಸತೀಶ್ ಆಚಾರ್ಯರ ಅವರ ಸಾರಥ್ಯದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ತಂಡದ ಕಾರ್ಟೂನಿಷ್ಠರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಟೂನು ಹಬ್ಬ ಹತ್ತಾರು ವಿಶೇಷತೆಗಳೊಂದಿಗೆ ರಂಗು ರಂಗಾಗಿ ನಡೆಯುತ್ತಿದ್ದು ನಾಲ್ಕು ದಿನಗಳ ಕಾಲ ಕುಂದಾಪುರದ ಕಲಾಮಂದಿರದಲ್ಲಿ ಜರುಗಲಿದೆ. ಹಬ್ಬದಲ್ಲಿ ಕಾರ್ಟೂನು ಪ್ರದರ್ಶನ, ಸ್ಕೂಲ್ ಟೂನ್ ಚಾಂಪಿಯನ್ಶಿಪ್ ಕಾರ್ಟೂನು ಸ್ವರ್ಧೆ, ಲೈವ್ ಕ್ಯಾರಿಕೇಚರಿಂಗ್, ಎಡಿಟೂನ್ಸ್, ಮಾಸ್ಟರ್ ಸ್ಟ್ರೋಕ್, ನಿತ್ಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಕೆಲವು ದಿನಗಳ ಹಿಂದೆ ರಕ್ತದ ಕ್ಯಾನ್ಸರ್’ನಿಂದಾಗಿ ಮೂಳೆ ಮಜ್ಜೆಯ ಕಸಿ ಚಿಕಿತ್ಸೆಗೆ ಒಳಗಾಗಿದ್ದ ಬೈಂದೂರು ತಾಲೂಕಿನ ಕಳವಾಡಿ ನಿವಾಸಿ ಸಂಜೀವ ದೇವಾಡಿಗರ ಪುತ್ರ ಸುಜನ್ ದೇವಾಡಿಗ (17) ಬೆಂಗಳೂರಿನ ಆಸ್ಪತ್ರೆಯಲ್ಲಿ ಭಾನುವಾರ ಚಿಕಿತ್ಸೆ ಫಲಿಸದೆ ನಿಧನರಾದರು. ಬ್ಲಡ್ ಕ್ಯಾನ್ಸರ್’ಗೆ ತುತ್ತಾಗಿದ್ದ ಸುಜನ್ ದೇವಾಡಿಗ ಅವರನ್ನು ಉಳಿಸಿಕೊಳ್ಳುವ ಸಲುವಾಗಿ ಅವರ ಕುಟುಂಬ ಇನ್ನಿಲ್ಲದ ಪ್ರಯತ್ನ ನಡೆಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕುಟುಂಬಕ್ಕೆ ಉಂಟಾದ ಆರ್ಥಿಕ ಅಡಚಣೆಯ ಬಗ್ಗೆ ತಿಳಿದುಬಂದಾಗ ನೂರಾರು ಮಂದಿ ಸ್ಪಂದಿಸಿದ್ದರಲ್ಲದೇ, ಚಿಕಿತ್ಸೆಯನ್ನೂ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಜನ್ ದೇವಾಡಿಗ ಮೃತರಾಗಿದ್ದಾರೆ. ಮೃತರು ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದು, ಅವರ ನೆರಳಕಟ್ಟೆಯ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಂಗಳೂರಿನ ಖ್ಯಾತ ಜ್ಯೋತಿಷಿ ಡಾ. ಮಹೇಂದ್ರ ಭಟ್ ಅವರಿಗೆ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ಜೆಸಿಐ ಬೈಂದೂರು ಸಿಟಿ ಆಯೋಜಿಸಿದ ಜೇಸಿ ಸಂಭ್ರಮ-2019ರ ಕಾರ್ಯಕ್ರಮದಲ್ಲಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಖ್ಯಾತ ಜ್ಯೋತಿಷಿ ಡಾ. ಮಹೇಂದ್ರ ಭಟ್: ಡಾ. ಮಹೇಂದ್ರ ಭಟ್ ಅವರು ಮೂಲತಃ ಬೈಂದೂರು ತಾಲೂಕಿನ ಯಡ್ತರೆ ರಾಹುತನಕಟ್ಟೆಯವರಾಗಿದ್ದು, ಬಾಲ್ಯದಿಂದಲೇ ಅಜ್ಜನಾದ ದಿ. ವಾಸುದೇವ ಭಟ್ ಅವರಿಂದ ಜ್ಯೋತಿಷ್ಯ ಅಭ್ಯಾಸ ಮಾಡಿದ್ದರು. ಪಿಯುಸಿ ತನಕದ ಶಿಕ್ಷಣವನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಯೂ, ಪದವಿ ಶಿಕ್ಷಣವನ್ನು ಭಟ್ಕಳದ ಅಂಜುಮಾನ್ ಕಾಲೇಜಿನಲ್ಲಿಯೂ, ಎಂಬಿಎ ಪದವಿಯನ್ನು ಸಿಕ್ಕಿಂ ಮಣಿಪಾಲ್ ಒಪನ್ ಯುನಿವರ್ಸಿಟಿಯಲ್ಲಿಯೂ ಹಾಗೂ ಬೆಂಗಳೂರಿನ ಇಂದಿಯಾ ಪ್ರಿಯದರ್ಶಿನಿ ಕಾಲೇಜ್ ಆಫ್ ಲಾ ಇಲ್ಲಿ ಎಲ್‌ಎಲ್‌ಬಿ ಪದವಿಯನ್ನು ಪಡೆದಿದ್ದಾರೆ. ಜ್ಯೋತಿಷ್ಯಶಾಸ್ತ್ರದಲ್ಲಿ ಆಸಕ್ತರಾಗಿದ್ದ ಮಹೇಂದ್ರ ಭಟ್ ಅವರು ಜ್ಯೋತಿಷ್ಯದಲ್ಲಿ ಬಿ.ಎ ಪದವಿ ಪಡೆದಿರುವುದಲ್ಲದೇ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರದ ಕುರಿತಾಗಿಯೂ ಅಧ್ಯಯನ ನಡೆಸಿದ್ದಾರೆ. ಲಾಯಲ್ ಅಕಾಡೆಮಿ ಆಫ್ ಗ್ಲೋಬಲ್ ಪೀಸ್ ಸಂಸ್ಥೆಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ಸಮಾಜಕ್ಕೆ ಉತ್ತಮ ನಾಯಕರನ್ನು ನೀಡುವ ಕೆಲಸ ಮಾಡುತ್ತಿರುವುದು ಶ್ಲಾಘನಾರ್ಹ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಜೆಸಿಐ ಬೈಂದೂರು ಸಿಟಿ ಆಯೋಜಿಸಿದ ಜೇಸಿ ಸಂಭ್ರಮ-2019ರ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬೈಂದೂರು ಕ್ಷೇತ್ರದ ಅಭಿವೃದ್ಧಿಯ ಬಗೆಗೆ ಹಲವು ಯೋಜನೆಗಳಿದ್ದು, ನನ್ನ ಅಧಿಕಾರಾವಧಿಯೊಳಗೆ ಎಲ್ಲವನ್ನು ಅನುಷ್ಠಾನಗೊಳಿಸಲು ಸಂಪೂರ್ಣ ಪ್ರಯತ್ನ ಮಾಡಲಾಗುವುದು ಎಂದರು. ಈ ಸಂದರ್ಭ ಸಹಕಾರಿ ಕ್ಷೇತ್ರದ ಸಾಧನೆಗಾಗಿ ಎಸ್. ರಾಜು ಪೂಜಾರಿ ಹಾಗೂ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ಡಾ. ಮಹೇಂದ್ರ ಭಟ್ ಅವರಿಗೆ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೆಸಿಐ ಬೈಂದೂರು ಸಿಟಿ ಅಧ್ಯಕ್ಷ ಮಣಿಕಂಠ ಎಸ್. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಪ್ರಗತಿ ಕ್ರೆಡಿಟ್ ಕೋ-ಆಪರೇಟಿವ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತುಳುನಾಡ ಪರಂಪರೆಯ ವೀರ ಪುರುಷರಾದ ಕೋಟಿ ಚೆನ್ನಯ್ಯರು ತಮ್ಮ ಮೌಲ್ಯಯತ ಬದುಕಿನ ಮೂಲಕ ಸಮಾಜಕ್ಕೆ ಸಂದೇಶವನ್ನು ನೀಡಿದ ವೀರ ಪುರುಷರು. ಅವರ ಕೊನೆಯ ಗರಡಿ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತೋಷದ ಸಂಗತಿಯಾಗಿದ್ದು ಎಲ್ಲರೂ ಭಕ್ತಿಪೂರ್ವಕವಾಗಿ ಕೈಜೋಡಿಸಬೇಕಿದೆ ಎಂದು ವೇದಮೂರ್ತಿ ಕೇಂಜ ಶ್ರೀಧರ ತಂತ್ರಿ ಹೇಳಿದರು. ಭಾನುವಾರ ಅವರು ಜೀರ್ಣೋದ್ಧಾರಗೊಳ್ಳುತ್ತಿರುವ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ಪುನರ್ ಪ್ರತಿಷ್ಠೆ, ಬ್ರಹ್ಮಕಶೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ದಿನ ನಿಗದಿಪಡಿಸಿ ಬಳಿಕ ಮಾತನಾಡಿದರು. 2020ರ ಎಪ್ರಿಲ್ 5 ರಿಂದ 12ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಎ.5ರಂದು ವಿಗ್ರಹ ತರುವುದು, ಎ.6ರಂದು ಆಚಾರಿ ಸೇವೆ, ವಾಸ್ತು, ಹೊರೆಕಾಣಿಕೆ, ಎ.7ರಂದು ಶಯ್ಯಾಧಿವಾಸ, ಎ.8ರಂದು ಪ್ರತಿಷ್ಠೆ, ಎ.9ರಂದು ಬ್ರಹ್ಮಕಲಶೋತ್ಸವ, ಎ.10ರಂದು ಅಗೆಲು ಸೇವೆ, ಎ.11 ಗೆಂಡ ಸೇವೆ, ಪಂಜುರ್ಲಿ ಕೋಲ, ಎ.12ರಂದು ಬ್ರಹ್ಮಬೈದರ್ಕಳ ಕೋಲ ನಡೆಯುವ ಬಗ್ಗೆ ದಿನ ನಿಗದಿಪಡಿಸಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ಮಾಜಿ ಶಾಸಕ ಕೆ. ಗೋಪಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಹೆದ್ದಾರಿ ಜಾಗೃತ ಸಮಿತಿ ನೇತೃತ್ವದಲ್ಲಿ ಶನಿವಾರ ಕುಂದಾಪುರದ ನಾಗರಿಕರು ಸಭೆ ನಡೆಸಿದ್ದು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವ್ಯವಸ್ಥೆಯ ಆಗರವಾಗಿರುವ ನಗ್ಗೆ ಅಸಮಾಧಾನ ವ್ಯಕ್ತಪಡಿದ್ದಲ್ಲದೇ, ಸಂಘಟಿತ ಹೋರಾಟದ ಮೂಲಕ ಜನಪ್ರತಿನಿಧಿಗಳು, ಗುತ್ತಿಗೆದಾರರು ಹಾಗೂ ಸರಕಾರದ ಗಮನ ಸೆಳೆಯುವುದು, ಕಾಮಗಾರಿಯ ಅವ್ಯವಸ್ಥೆ ಹಾಗೂ ವಿಳಂಬ ನೀತಿಯನ್ನು ತೀವ್ರವಾಗಿ ಖಂಡಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. Video ಸಭೆಯಲ್ಲಿ ಹೆದ್ದಾರಿ ಜಾಗೃತ ಸಮಿತಿಯ ಅಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಗೊಂಡ ಕಳೆದ 10 ವರ್ಷಗಳಲ್ಲಿ ಓರ್ವ ಅಧಿಕಾರಿಯೂ ಈ ಭಾಗಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿಲ್ಲ. ಸುರತ್ಕಲ್‌ನಿಂದ ಕುಂದಾಪುರದ ತನಕ 76ಕಿ.ಮೀ ಉದ್ದದ ಹೆದ್ದಾರಿ ಚತುಷ್ಪಥ ಕಾಮಗಾರಿ ಶೇ.90ರಷ್ಟು ಮುಗಿದೆದೆ ಎಂದು ಹೇಳುತ್ತಾರೆ ಆದರೆ ಕಾಮಗಾರಿಯ ಸಮರ್ಪಕ ಬ್ಲೂಪ್ರಿಂಟ್ ಯಾರ ಬಳಿಯೂ ಇಲ್ಲ. ಈ ಭಾಗದ ಯಾವೊಬ್ಬ ಜನಪ್ರನಿಧಿಗಳಿಗೂ ಇದರ ಸಮರ್ಪಕ ಮಾಹಿತಿ ಇಲ್ಲ. ರಸ್ತೆ ಮಧ್ಯದಲ್ಲಿ ನೀರು ನಿಲ್ಲುವುದು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಕಾಲ್ತೋಡು ಗ್ರಾಮದ ಚಪ್ಪರಿಕೆ ಪಾಯಪ್ಪ ಶೆಟ್ಟಿ(80) ಕೆಲಕಾಲದ ಅಸ್ವಾಸ್ಥ್ಯದ ಕಾರಣ ಬೆಂಗಳೂರಿನ ಮಗನ ಮನೆಯಲ್ಲಿ ಸೋಮವಾರ ನಿಧನರಾದರು. ನಾಗೂರಿನಲ್ಲಿ ದೀರ್ಘಕಾಲ ಹೋಟೆಲ್ ಉದ್ಯಮ ನಡೆಸಿ ಜನಾನುರಾಗಿ ಆಗಿದ್ದ ಅವರು 30ವರ್ಷ ಚಪ್ಪರಿಕೆಯ ಹೊಸಾಡು ಎಂಬಲ್ಲಿನ ಶ್ರೀ ನಂದಿಕೇಶ್ವರ ದೈವಸ್ಥಾನದ ನೇತೃತ್ವ ವಹಿಸಿ, ಅದರ ಜೀರ್ಣೋದ್ಧಾರ ನಡೆಸಿದ್ದರು. ಅವರು ಪತ್ನಿ, ಖ್ಯಾತ ಪತ್ರಕರ್ತ ಹಾಗೂ ಲೇಖಕ ಆಗಿರುವ ಪುತ್ರ ಸತೀಶ ಚಪ್ಪರಿಕೆ ಅವರನ್ನು ಅಗಲಿದ್ದಾರೆ. ಪಾಯಪ್ಪ ಶೆಟ್ಟಿ ಅವರ ಅಪೇಕ್ಷೆಯಂತೆ ದೇಹವನ್ನು ಶಿಕ್ಷಣ ಹಾಗೂ ಸಂಶೋಧನೆಗೆ ಬಳಸಿಕೊಳ್ಳಲು ಬೆಂಗಳೂರು ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾಧ್ಯಮ ಕ್ಷೇತ್ರವನ್ನು ವೃತ್ತಿಯಾಗಿ ನೋಡಿದರೆ ಅದು ಓದುಗನ ಋಣದಲ್ಲಿಯೂ ಇಲ್ಲ. ಉದ್ಯಮವಾಗಿ ಪರಿಗಣಿಸಿದರೆ ಅದು ಬಳಕೆದಾರನ ಋಣದಲ್ಲಿಯೂ ಇಲ್ಲ. ಬಂಡವಾಳ ಹೂಡಿ ಲಾಭ ತೆಗೆಯುವ ಮಾಧ್ಯಮ ಕ್ಷೇತ್ರದಲ್ಲಿ ಒಡೆಯ ಮತ್ತು ಓದುಗನ ನಡುವೆ ಪತ್ರಕರ್ತ ದಿಕ್ಕೆಟ್ಟು ನಿಂತಿದ್ದಾನೆ ಎಂದು ಪತ್ರಕರ್ತ, ಚಿಂತಕ ದಿನೇಶ್ ಅಮೀನ್ ಮಟ್ಟು ಹೇಳಿದರು. ಅವರು ಕುಂದಾಪುರ ಜ್ಯೂನಿಯರ್ ಕಾಲೇಜಿನ ಕಲಾಮಂದಿರದಲ್ಲಿ ಮಂಗಳವಾರ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮದಲ್ಲಿ ಕವಲು ದಾರಿಯಲ್ಲಿ ಪತ್ರಕರ್ತ ವಿಷಯದ ಕುರಿತು ಅವರು ಮಾತನಾಡಿದರು. ಜಗತ್ತಿನಲ್ಲಿ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವ ಏಕೈಕ ವಸ್ತು ಪತ್ರಿಕೆ ಮಾತ್ರ. ಆದರೆ ಓದುಗ ಕೊಡುವ ಹಣದಿಂದ ಪತ್ರಿಕೆಯೂ ನಡೆಯುತ್ತಿಲ್ಲ. ಬಂಡವಾಳವಿಲ್ಲದೇ ಏನು ನಡೆಯುವುದೂ ಇಲ್ಲ. ಇಂತಹ ವ್ಯವಹಾರ ಮಾದರಿಯನ್ನು ಬದಲಾವಣೆ ಮಾಡುವವರೆಗೆ ಈ ಮಾಧ್ಯಮ ಕವಲು ದಾರಿಯಲ್ಲಿರುತ್ತದೆ. ಪಾಕಿಸ್ತಾನ, ಬಾಂಗ್ಲಾ ದೇಶಗಳಲ್ಲಿ ಪತ್ರಿಕೆಗಳಿಗೆ ಹತ್ತರಿಂದ ಹದಿನೈದು ರೂಪಾಯಿ ಇದೆ. ಭಾರತದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣ ತಜ್ನ, ರಾಷ್ಟೀಯ ಶಿಕ್ಷಕ ಪ್ರಸ್ತಿ ಪುರಸ್ಕೃತ, ಯಕ್ಷಗಾನ ಸವ್ಯಸಾಚಿ, ಯಕ್ಷಗಾನ ಕಲಾಕೇಂದ್ರ ಸಂಸ್ಥಾಪಕ ದಿವಂಗತ ಐರೋಡಿ ಸದಾನಂದ ಹೆಬ್ಬಾರರ ಪುಣ್ಯ ಸ್ಮರಣಾರ್ತ ಕಲಾಕೇಂದ್ರವು ಅವರ ಹೆಸರಿನಲ್ಲಿ ಪ್ರತೀ ವರ್ಷವೂ ಸದಾನಂದ ಪ್ರಶಸ್ಥಿಯನ್ನು ನೀಡುತ್ತಾ ಬಂದಿದ್ದು ಶಿಕ್ಷಣ, ಸಮುದಾಯಾಭಿವೃದ್ದಿ, ಸ್ಥಳಿಯಾಡಳಿತ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕಳೆದ ಐದು ದಶಕಗಳಿಂದ ಸೇವೆ ಸಲ್ಲಿಸುತ್ತಾ ಬಂದಿರುವ ನಿವೃತ್ತ ಉಪನ್ಯಾಸಕರಾದ ಮರವಂತೆಯ ಎಸ್ ಜನಾರ್ದನ ಇವರನ್ನು 2019 ರ ಸದಾನಂದ ಶಶಸ್ಥಿಗೆ ಆಯ್ಕೆ ಮಾಡಲಾಗಿದೆ. ಬೈಂದೂರು ವಲಯದ ಪತ್ರಕರ್ತ ಸಂಘದ ಅಧ್ಯಕ್ಷರಾಗಿರುವ ಮರವಂತೆ ಜನಾರ್ದನರವರು ರಾಜ್ಯದ ಪಂಚಾಯತ್‌ರಾಜ್ ವಿಷಯದಲ್ಲಿ ಪರಿಣತಲ್ಲೊಬ್ಬರು. ದೇಶದ ಯೋಜನಾ ಆಯೋಗ ನಡೆಸಿದ ವಿವಿಧ ಅಧ್ಯಯನ, ಬೋಧನೆ, ತರಬೇತಿ ಮತ್ತು ಸಂವಹನ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ತರಬೇತಿದಾರರಾಗಿ ಪಠ್ಯಕ್ರಮ ಮತ್ತು ಪಠ್ಯ ಸಿದ್ದತೆಯಲ್ಲಿ ದುಡಿದಿದ್ದಾರೆ. ಮರವಂತೆಯ ಪಂಚಾಯತ್ನ ಅಧ್ಯಕ್ಷರಾಗಿ,ಮರವಂತೆಯ ಸಾಧನಾ ಸಮಾಜ ಸೇವಾ ವೇದಿಕೆಯ ಸ್ಥಾಪಕರಾಗಿ ಊರಿನ ಆರೋಗ್ಯ, ಶೈಕ್ಷಣಿಕ, ಸಾಮಾಜಿಕ, ಸಾಸ್ಕೃತಿಕ ಅಭಿವೃದ್ದಿಯ ಹರಿಕಾರರಾಗಿದ್ದಾರೆ. ಈ…
