ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ನೊವಲ್ ಕರೋನಾ ವೈರಸ್ ಬಗ್ಗೆ ಇತ್ತೀಚೆಗೆ ಎಲ್ಲಡೆ ವ್ಯಾಪಕವಾಗಿ ಕೇಳಿಬರುತ್ತಿದ್ದು, ಇದು ಹೊಸ ವೈರಸ್ ಪ್ರಬೇಧವಾಗಿದ್ದು, ಈ ಹಿಂದೆ ಮನುಷ್ಯರಲ್ಲಿ ಕಂಡು ಬಂದಿರಲಿಲ್ಲ, ತಜ್ಞರ ಪ್ರಕಾರ ಇದು ಪ್ರಾಣಿ ಪ್ರಬೇಧದಲ್ಲಿ ಹುಟ್ಟಿದ್ದು, ನಂತರ ಮನುಷ್ಯರಲ್ಲಿ ಹರಡಿದೆ, ಇದು ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು, ವೈರಸ್ ಪೀಡಿತ ವ್ಯಕ್ತಿಯಿಂದ(ಕೆಮ್ಮ ಅಥವಾ ಸೀನಿನ ಮೂಲಕ) ಅಥವಾ ಕಲುಷಿತ ಕೈಗಳಿಂದ ಅನ್ಯ ಕರೋನ ವೈರಸ್ ತಳಿಗಳು ಒಬ್ಬರಿಂದ ಒಬ್ಬರಿಗೆ ಹರಡಲಿವೆ. ತೀವ್ರ ಜ್ವರದ ಪ್ರಾರಂಭ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿ ಈ ರೋಗದ ಲಕ್ಷಣಗಳಾಗಿದ್ದು, ವೈರಸ್ ಸೋಂಕಿದ 14 ದಿನಗಳ ನಂತರ ರೋಗದ ಲಕ್ಷಣಗಳು ಕಂಡುಬರುತ್ತವೆ. ರೋಗ ಲಕ್ಷಣಗಳು ಕಂಡು ಬಂದ ವ್ಯಕ್ತಿಯ ಮೂಗು, ಗಂಟಲಿನ ಸ್ರಾವದ ಲೆಪನ ಮತ್ತು ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ಸೋಕನ್ನು ದೃಡಪಡಿಸಿಕೊಳ್ಳಬಹುದು. ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿಯುವ ಮೂಲಕ ಮತ್ತು ನಿಮ್ಮ ಕೈಯನ್ನು ಚೆನ್ನಾಗಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ(ರಿ) ಬೆಂಗಳೂರು ಇವರು ಧಾರವಾಡದಲ್ಲಿ ನಡೆಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು, ನಿವಾಸಿ ಶಿಕ್ಷಕ ನಾಗರಾಜ ಖಾರ್ವಿ 50ಮೀ ಬ್ರೆಷ್ಟ್ ಸ್ಟ್ರೋಕ್ ಚಿನ್ನ, 100ಮೀ ಬ್ರೆಷ್ಟ್ ಸ್ಟ್ರೋಕ್ ಚಿನ್ನ, 200ಮೀ ಬ್ರೆಷ್ಟ್ ಸ್ಟ್ರೋಕ್ ಬೆಳ್ಳಿ, 4×100 ಮೆಡ್ಲೆ ರಿಲೇಯಲ್ಲಿ ಬೆಳ್ಳಿ, 4×100 ಫ್ರೀ ಸ್ಟೈಲ್ ರಿಲೇ ಬೆಳ್ಳಿ ಪಡೆದಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಗಂಗೊಳ್ಳಿ, ಸರಕಾರಿ ಪ್ರಾಥಮಿಕ ಶಾಲೆ ಗುಜ್ಜಾಡಿ ಮತ್ತು ಕಂಚುಗೋಡಿನ ಹಳೆವಿದ್ಯಾರ್ಥಿ.. ಇವರಿಗೆ ರೇಷ್ಮೆ ಇಲಾಖೆಯ ನಿರೀಕ್ಷಕರಾದ ಬಿ.ಕೆ.ನಾಯ್ಕ್ , ಶಿವಾನಂದ ಗಟ್ಟಿ, ಲೋಕರಾಜ್ ವಿಟ್ಲ ತರಬೇತಿ ನೀಡಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2019-20 ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ಪತ್ರ ಸಮಾರಂಭದಲ್ಲಿ ಉಡುಪಿ ಜಿಲ್ಲೆಯ ಕಬ್ಸ್-ಬುಲ್ ಬುಲ್, ಸ್ಕೌಟ್ಸ್-ಗೈಡ್ಸ್ ಮತ್ತು ರೋವರ‍್ಸ್ ರೇಂಜರ‍್ಸ್ ಸಾಧಕರಿಗೆ, ರಾಜ್ಯಪಾಲ ವಾಜುಬಾಯಿ ರೂಡಬಾಯಿ ವಾಲಾ ರವರು, ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಕಲ್ಯಾಣ್‌ಪುರ ಸಂತೆಕಟ್ಟೆಯ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ಆದಿತ್ಯ (ಕಬ್), ಬೈಂದೂರು ತಾಲೂಕಿನ ಹೇರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಮೃತಿ (ಬುಲ್ ಬುಲ್), ಬೈಂದೂರು ಚಪ್ಪರಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವೈಭವ್ (ಸ್ಕೌಟ್ಸ್), ಗಂಗೊಳ್ಳಿಯ ಸ್ಟೆಲ್ಲಾ ಮೇರಿಸ್ ಪ್ರೌಢ ಶಾಲೆಯ ಪ್ರೀತಿ(ಗೈಡ್ಸ್), ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಶ್ರೀಕರ ಆರ್.ಎನ್ (ರೋವರ್) ಹಾಗೂ ಕಾರ್ಕಳ ಮಂಜುನಾಥ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಕ್ಷೀತಾ (ರೇಂಜರ್) ಪ್ರಶಸ್ತಿ ಸ್ವೀಕರಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯ ಹಾಗೂ ಇತರ ಪದಾಧಿಕಾರಿಗಳು ಭಾಗವಹಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಹಾಗೂ ಮಂಗಳೂರಿನ ವಿ ಅಂಡ್ ಜಿ ಇಂಡಸ್ಟ್ರೀಸ್ ಟೆಸ್ಟಿಂಗ್ ಲ್ಯಾಬೊರೋಟರಿಸ್ ಪ್ರೈ.ಲಿನ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ ಪೀಟರ್ ಫೆರ್ನಾಂಡೀಸ್ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಗಿರೀಶ್ ಬಾಬು ಒಡಂಬಡಿಕೆಗೆ ಸಹಿ ಹಾಕಿದರು. ಈ ಒಡಂಬಡಿಕೆಯ ಪ್ರಕಾರ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಟ್ರೈನಿಂಗ್ ಮತ್ತು ಸರ್ಟಿಫಿಕೇಶನ್ ಕೋರ್ಸುಗಳನ್ನು ಕಾಲೇಜಿನಲ್ಲಿ ಆರಂಭಿಸಿಲಾಗುತ್ತದೆ. ಜತೆಗೆ ಎನ್.ಡಿ.ಟಿ ತಂತ್ರಜ್ಞಾನದ ಟ್ರೈನಿಂಗ್ ಮತ್ತು ಸರ್ಟಿಫಿಕೇಶನ್ ಕೋರ್ಸು ಆರಂಭಿಸಲಾಗುತ್ತದೆ. ಸಂಶೋಧನಾ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಹೆಚ್ಚಿನ ಮನ್ನಣೆಯನ್ನು ನೀಡಲಾಗುವುದು. ಈ ಸಂದರ್ಭದಲ್ಲಿ ಕಾಲೇಜಿನ ಡೀನ್ ಡಾ. ಪ್ರವೀಣ್ ಜೆ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ್, ಪ್ರಾಧ್ಯಪಕ ಕೆ.ವಿ ಸುರೇಶ್ ಮತ್ತು ವಿ ಅಂಡ್ ಜಿ ಯ ವೆಂಕಟ ಸುಬ್ರಮಣಿಯನ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಶಿಕ್ಷಣದ ದ್ಯೇಯ ಉದ್ದೇಶ ಬಗೆಗಿನ ಅಲ್ಪ ಜ್ಞಾನವೇ ವಿದ್ಯಾರ್ಥಿಗಳನ್ನ ನಿರುತ್ಸಾಹರನ್ನಾಗಿ ಮಾಡುತ್ತದೆಯೆ ಹೊರತು ಶಿಕ್ಷಣವಲ್ಲ ಎಂದು ಆಳ್ವಾಸ್ ಕಾಲೇಜಿನ ಮ್ಯಾನೆಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಮನೋಜ್, ನವೀನ್ ಮತ್ತು ಸಮರ್ಥ್ ರೂಪಿಸಿದ ವಿಸ್ಠಿ ಆಪ್‌ನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಶಿಕ್ಷಣ ಸಂಸ್ಥೆಗಳು ಕೇವಲ ಒಂದೇ ಉದ್ದೇಶದಿಂದ ಸಂಘಟಿತವಾದವಲ್ಲ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲೆಂದು ವಿವಿಧ ಬಗೆಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತವೆ. ಆ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಒಂದು ಕಂಪನಿಯನ್ನು ಪ್ರಾರಂಭಿಸುವುದು ಸುಲಭದ ಮಾತಲ್ಲ, ಆದರೆ ನಮ್ಮ ವಿದ್ಯಾರ್ಥಿಗಳು ಆದರತ್ತ ಹೆಜ್ಜೆ ಇಟ್ಟಿದ್ದಾರೆ. ಮೊದಲ ಹಂತದಲ್ಲಿ ಸುಲಭವೆನಿಸುವ ವಿಷಯಗಳು ಮುಂದಿನ ದಿನಗಳಲ್ಲಿ ಅನೇಕ ಸವಾಲುಗಳನ್ನ ತಂದೊಡ್ಡುತ್ತವೆ. ಅವೆಲ್ಲವನ್ನು ದಾಟಿ ಮುಂದೆ ಸಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿಸ್ಠಿ ಕಂಪನಿ ಪ್ರತಿಯೊಬ್ಬರನ್ನು ತಲುಪಿ, ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ಬ್ರಹ್ಮರಥೋತ್ಸವದ ಕೊನೆಯ ದಿನವಾದ ಮಂಗಳವಾರ ಸಂಜೆ ಅವಭೃತ ಉತ್ಸವ ವಿಜೃಂಭಣೆಯಿಂದ ಜರಗಿತು. ಮಂಗಳವಾರ ಸಂಜೆ ಅವಭೃತ ಉತ್ಸವ, ಧ್ವಜ ಅವರೋಹಣ, ಮಹಾಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಅವರ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಸೇನೆಯಲ್ಲಿ ಸೇರ್ಪಡೆಗೊಳ್ಳಲು ನೇಮಕಾತಿ ರ‍್ಯಾಲಿಯನ್ನು ಸೇನಾ ನೇಮಕಾತಿ ಕಚೇರಿಯಿಂದ ಏಪ್ರಿಲ್ 4 ರಿಂದ 14 ರ ವರೆಗೆ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಚಿಕ್ಕಮಗಳೂರು, ದಾವಣಗೆರೆ, ಉಡುಪಿ, ಗದಗ, ಹಾವೇರಿ, ಶಿವಮೊಗ್ಗ ಮತ್ತು ಉತ್ತರ ಕನ್ನಡದ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ಆನ್‌ಲೈನ್ www.JoinIndianarmy.nic.in ನಲ್ಲಿ ನೋಂದಣಿ ಮಾಡಬೇಕು. ಆನ್‌ಲೈನ್‌ನಲ್ಲಿ ಅರ್ಜಿಯನ್ನು ನೊಂದಾಯಿಸಲು ಮಾರ್ಚ್ 20 ರ ವರೆಗೆ ಅವಕಾಶವಿರುತ್ತದೆ. ಆನ್‌ಲೈನ್ ಮೂಲಕ ನೊಂದಾಯಿಸಿದ ಅಭ್ಯರ್ಥಿಗಳು ಮಾತ್ರ ರ‍್ಯಾಲಿಯಲ್ಲಿ ಭಾಗವಹಿಸಲು ಅನುಮತಿಸಲಾಗುತ್ತದೆ. ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟೆಕ್ ನರ್ಸಿಂಗ್ ಅಸಿಸ್ಟೆಂಟ್ (ಎಎಂಸಿ) / ನರ್ಸಿಂಗ್ ಸಹಾಯಕ ಪಶುವೈದ್ಯ, ಸೋಲ್ಜರ್ ಕ್ಲರ್ಕ್/ ಸ್ಟೋರ್ ಕೀಪರ್ ಟೆಕ್ನಿಕಲ್ (ಆಲ್ ಆರ್ಮ್ಸ್), ಸೋಲ್ಜರ್ ಟ್ರೇಡ್ಸ್‌ಮೆನ್ (ಆಲ್ ಆರ್ಮ್ಸ್), ಸೋಲ್ಜರ್ ಜನರಲ್ ಡ್ಯೂಟಿ (ಆಲ್ ಆರ್ಮ್ಸ್) 10 ನೇ ತರಗತಿ ಪಾಸ್ ಮತ್ತು ಸೋಲ್ಜರ್ ಟ್ರೇಡ್ಸ್‌ಮೆನ್ (ಆಲ್ ಆರ್ಮ್ಸ್) 8 ನೇ ತರಗತಿ ಪಾಸ್ ಆದವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತನಿಖೆಯಲ್ಲಿ ವೈಜ್ಞಾನಿಕತೆಯನ್ನು ಅಳವಡಿಸುವ ಕುರಿತು ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯಕೂಟದಲ್ಲಿ ನಗರದ ಜಿಲ್ಲಾ ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ವಿನಾಯಕ ಬಿಲ್ಲವ ಅವರಿಗೆ ಎರಡು ಚಿನ್ನದ ಪದಕಗಳು ಲಭಿಸಿವೆ. ಬೆಂಗಳೂರಿನ ಯಲಹಂಕದಲ್ಲಿ ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ವಿನಾಯಕ ಬಿಲ್ಲವ ವಿಧಿ ವಿಜ್ಞಾನ ಫೋಟೋಗ್ರಫಿ ಹಾಗೂ ಹ್ಯಾಂಡಿಂಗ್ ಲಿಫ್ಟಿಂಗ್ ಪ್ಯಾಕಿಂಗ್ (ಎಚ್.ಸಿ.ಪಿ) ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಹಿರಿಯ ಐಪಿಸಿ ಅಧಿಕಾರಿ ಪ್ರವೀಣ್ ಸೂದ್ ಪ್ರಶಸ್ತಿ ವಿತರಣೆ ಮಾಡಿದ್ದು, ರಾಜ್ಯ ಮಟ್ಟದಲ್ಲಿ ಚಿನ್ನದ ಪದಕವನ್ನು ಪಡೆಯುವ ಮೂಲಕ ವಿನಾಯಕ ಬಿಲ್ಲವ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಜೂರು ಮೂರ‍್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದ ವಾರ್ಷಿಕ ಭಜನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ರವಿವಾರ ನಡೆಯಿತು. ಬಿಜೂರು ಪ್ರಮೋದ್ ಭಟ್ ನೇತೃತ್ವದಲ್ಲಿ ಧಾರ್ಮಿಕ ಪೂಜೆ ಕಾರ್ಯ ನೆರವೇರಿತು. ಪುರಾಣ ಪ್ರಸಿದ್ಧ ಶ್ರೀ ನಂದಿಕೇಶ್ವರ ದೈವಸ್ಥಾನದ ವಾರ್ಷಿಕೋತ್ಸವ, ಏಕಾಹ ಅಖಂಡ ಭಜನೆ ಹಾಗೂ ಗೆಂಡ ಸೇವೆ ಕಾರ್ಯಕ್ರಮಗಳು ಎ.14ರಿಂದ 16ರ ವರೆಗೆ ನಡೆಯಲಿದೆ. ಎ.14ರಂದು ವೇದಮೂರ್ತಿ ಮಹಾಬಲ ಭಟ್ ಸಹಭಾಗಿತ್ವದಲ್ಲಿ ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ಶ್ರೀ ನಾಗದೇವರ ವಾರ್ಷಿಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಎ.15ರಂದು ಬೆಳಗ್ಗೆ ಗಂಟೆ 9.15ಕ್ಕೆ ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಎ.16ರಂದು 11.15ಕ್ಕೆ ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ. ಎ.15ರಂದು ರಾತ್ರಿ 8ಗಂಟೆಗೆ ಹಿಂದೂಸ್ತಾನಿಯ ಯುವ ಗಾಯಕ ರಜತ್ ಕುಲಕರ್ಣಿ ಇವರಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನಡೆಯಲಿದ್ದು, ಎ.16ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಯಕ್ಷಾರಾಧನ ಕಲಾ ಕೇಂದ್ರದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕಿರಿಮಂಜೇಶ್ವರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಕೃತಿ ಇಕೋ ಕ್ಲಬ್ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮಾಹಿತಿ ಕಾರ್ಯಾಗಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಈಶ್ವರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಗದೀಶ್ ಕೊಡೇರಿ ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶೇಖರ ಖಾರ್ವಿ ಶಾಲೆಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಶಾಲಾ ಮಕ್ಕಳಿಗಾಗಿ ಬೆಂಕಿ ರಹಿತ ಅಡುಗೆ ತಯಾರಿ, ಸ್ಥಳೀಯ ಹಣ್ಣುಗಳ ಪ್ರದರ್ಶನ, ಚಿತ್ರ ಪ್ರದರ್ಶನ ಮುಂತಾದ ಕಾರ‍್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಬಂಗ್ಲೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನ್ಯಾರಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನಾಣು.ಡಿ.ಚಂದನ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷ, ಸರ್ವಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಪುಷ್ಪಾ ಎನ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
