ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿನ ಯುವ ರೆಡ್ಕ್ರಾಸ್ ಘಟಕ ಹಾಗೂ ಭಾರತೀಯ ರೆಡ್ಕ್ರಾಸ್ ಘಟಕ ಕುಂದಾಪುರ ಮತ್ತು ಬೈಂದೂರು ಇವರ ಸಹಯೋಗದೊಂದಿಗೆ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಯಕರ ಶೆಟ್ಟಿ, ಅಧ್ಯಕ್ಷರು, ಭಾರತೀಯ ರೆಡ್ಕ್ರಾಸ್ ಘಟಕ ಕುಂದಾಪುರ ಇವರು ರೆಡ್ಕ್ರಾಸ್ ಸಂಸ್ಥೆಯ ಮೂಲಭೂತ ತತ್ವಗಳಾದ ಮಾನವೀಯತೆ, ಪಕ್ಷಪಾತರಾಹಿತ್ಯ, ತಾಟಸ್ಥ್ಯ, ಸ್ವಾತಂತ್ರ್ಯ, ಸ್ವಯಂಸೇವೆ, ಏಕತೆ ಮತ್ತು ವಿಶ್ವವ್ಯಾಪಕತೆ ಮತ್ತು ಸೇವಾ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಡಾ. ಸೋನಿ ಡಿಕೋಸ್ಟಾ, ಅಮೃತೇಶ್ವರಿ ಆಯುರ್ವೇದಿಕ್ ಕಾಲೇಜು, ಕುಂದಾಪುರ ಇವರು ಬೆಂಕಿ ಅನಾಹುತ, ರಕ್ತಸ್ರಾವ, ನೀರಿನ ಅವಘಡ ತುರ್ತಾಗಿ ಮಾಡಬೇಕಾದ ಪ್ರಥಮ ಚಿಕಿತ್ಸೆಯ ವಿಧಾನಗಳನ್ನು ಮತ್ತು ಹಾಗೂ ಬಹುಮುಖ್ಯವಾಗಿ ಹೃದಯಾಘಾತದ ಸಂದರ್ಭದಲ್ಲಿ ಮಾಡಬೇಕಾದ ಸಿ.ಪಿ.ಆರ್. ವಿಧಾನವನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟರು. ಡಾ. ಕೀರ್ತಿ ಪಾಲನ್ ಪ್ರಥಮ ಚಿಕಿತ್ಸೆ ತರಬೇತುದಾರರು, ರೆಡ್ಕ್ರಾಸ್ ಸಂಸ್ಥೆ, ಉಡುಪಿ. ಇವರು, ಮೂಳೆ ಮುರಿತದ ನಿರ್ವಹಣೆ ಮತ್ತು ಬ್ಯಾಂಡೇಜ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಡುಪಿ ಜಿಲ್ಲೆಯಲ್ಲಿ COTPA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬೈಂದೂರು ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್ಗಳು, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 20 ಪ್ರಕರಣ ದಾಖಲಿಸಿ ರೂ. 2400 ದಂಡ ವಸೂಲಿ ಮಾಡಲಾಯಿತು. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ದಾಳಿಯಲ್ಲಿ ವಿತರಿಸಲಾಯಿತು. ಹಾಗೂ ಎಲ್ಲಾ ಅಂಗಡಿ, ಹೋಟೇಲ್ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸಲಾಯಿತು. ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಉಡುಪಿ ಹಿರಿಯ ಆರೋಗ್ಯ ಸಹಾಯಕ ಸತೀಶ್ ರಾವ್, ಹಿರಿಯ ಆರೋಗ್ಯ ಸಹಾಯಕ ರಮೇಶ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ದತ್ತಾತ್ರೇಯ, ಜಿಲ್ಲಾ ಎನ್.ಸಿ.ಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪ ನಿರೀಕ್ಷಕರಾಗಿ ಸಂಗೀತಾ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಗುಲ್ಬರ್ಗದವರಾದ ಸಂಗೀತಾ ಅವರು ಬಿಎ ಶಿಕ್ಷಣ ಮುಗಿಸಿ ಪೊಲೀಸ್ ವೃತ್ತಿಗೆ ಸೇರ್ಪಡೆಯಾಗಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಹಾಗೂ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ತಲಾ ನಾಲ್ಕು ತಿಂಗಳು ಪ್ರೋಬೇಷನರಿ ಅವಧಿ ಪೂರ್ಣಗೊಳಿಸಿ ಇದೀಗ ಬೈಂದೂರಿನ ನೂತನ ಠಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಇಲ್ಲಿನ ಠಾಣಾಧಿಕಾರಿಯಾಗಿದ್ದ ತಿಮ್ಮೇಶ್ ಬಿ.ಎನ್. ಅವರು ಮಲ್ಪೆ ಠಾಣೆಗೆ ವರ್ಗಾವಣೆಗೊಂಡ ಬಳಿಕ, ಇಲ್ಲಿ ಠಾಣಾಧಿಕಾರಿ ಹುದ್ದೆ ಖಾಲಿಯಿದ್ದು, ಎಎಸ್ಎ ಮಹಾಬಲ ಅವರು ತಾತ್ಕಾಲಿಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಂಸ್ಕೃತಿಕ ಪ್ರಜ್ಞೆ ದೇಶದ ಅಭಿವೃದ್ಧಿಗೆ ಪೂರಕವಾಗಿ, ಪ್ರೇರಕವಾಗಿ ಕೆಲಸಮಾಡುತ್ತದೆ. ಕಲೆ, ಚರಿತ್ರೆ, ಪಾರಂಪರಿಕ ಜ್ಞಾನ ಹಿರಿಯ ಬಳುವಳಿಯಾಗಿದ್ದು, ಇವೆಲ್ಲದರ ಜೊತೆಗೆ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸಾಂಸ್ಕೃತಿಕ ಸಂಘಟನೆಗಳ ಪಾತ್ರ ದೊಡ್ಡದು ಎಂದು ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಾಂತಾನಂದ ಶೆಟ್ಟಿ ಹೇಳಿದರು. ಅವರು ಪರಿಶಿಷ್ಟ ಪಂಗಡದ ರಂಗತಂಡ ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಾನುವಾರ ಹೊಸೂರಿನ ಕೆ.ವಿ ಸುಬ್ಬಣ್ಣ ವನರಂಗದಲ್ಲಿ ಆಯೋಜಿಸಲಾದ ಹನ್ನೆರಡನೇ ವರ್ಷದ ವಾರ್ಷಿಕ ಸಂಭ್ರಮ ವನಸಿರಿಯಲ್ಲೊಂದು ರಂಗಸುಗ್ಗಿ ಎರಡನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು. ನಿವೃತ್ತ ಯೋಧ ಸಂಜೀವ ನಾಯ್ಕ್ ಹುಲ್ಕಡಿಕೆ ಅವರನ್ನು ಸನ್ಮಾನಿಸಲಾಯಿತು. ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ ಅಧ್ಯಕ್ಷತೆ ವಹಿಸಿ ಮಾತನಾಡಿ ಯಾವುದೇ ಕೆಲಸವಿರಲಿ ಅದನ್ನು ಧೈರ್ಯವಾಗಿ ಮಾಡಿ. ಬದುಕಿನಲ್ಲಿ ಸಾಧನೆ ಮಾಡುತ್ತಾ ನಾವು ಬೆಳೆಯುವುದರ ಜೊತೆಗೆ ತಂದೆ ತಾಯಿಯರು ಹೆಮ್ಮೆ ಪಡುವಂತೆ ಮಾಡುವುದು ಮಾಡಬೇಕು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನೆನಪು ಮೂವೀಸ್ ಕೋಟ ಅವರ ಸುಗಂಧಿ ಚಲನಚಿತ್ರ ವಿಶೇಷ ಚಲನಚಿತ್ರ ವಿಭಾಗದಲ್ಲಿ ಆಯ್ಕೆಯಾಗಿದೆ.ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕ ಜಿ.ಮೂರ್ತಿ ಅವರು ನಿರ್ದೇಶಿಸಿ,ಸಾಹಿತಿ ನರೇಂದ್ರ ಕುಮಾರ್ ನಿರ್ಮಾಪಕರಾಗಿರುವ ಚಿತ್ರಕ್ಕೆ ಪ್ರವೀಣ್ ಗೋಡ್ಖಿಂಡಿ ಸಂಗೀತವಿದ್ದು,ಪಿ.ಕೆ ದಾಸ್ ಕ್ಯಾಮರಾ ಕೈಚಳಕ ಮತ್ತು ಸಂಜೀವ ರೆಡ್ಡಿ ಸಂಕಲನ ಕೆಲಸ ನಿರ್ವಹಿಸಿದ್ದಾರೆ.ರವಿ ಪೂಜಾರಿ ಮತ್ತು ಖಾನ್ ಸಂಗೀತ ಮತ್ತು ನರೇಂದ್ರ ಕುಮಾರ್ ಮತ್ತು ಸತೀಶ್ ವಡ್ಡರ್ಸೆ ಅವರ ಸಂಭಾಷಣೆವಿದೆ.ಈ ಚಿತ್ರದಲ್ಲಿ ಮಗುವಿನ ಪಾತ್ರದಲ್ಲಿ ಸಾಸ್ತಾನದ ವೈಷ್ಣವಿ ಅಡಿಗ ಕಾಣಿಸಿಕೊಂಡಿದ್ದು,ತಾಯಿಯ ಪಾತ್ರದಲ್ಲಿ ವಿನಯ ಪ್ರಸಾದ್ ,ಗುರುವಿನ ಪಾತ್ರದಲ್ಲಿ ಬನ್ನಂಜೆ ಸಂಜೀವ್ ಸುವರ್ಣ ಅವರು ಅಭಿನಯಿಸಿದ್ದಾರೆ,ಅಲ್ಲದೇ ಕೋಟ ಪರಿಸರದ ೫೦ ಕ್ಕೂ ಹೆಚ್ಚು ಕಲಾವಿದರು ಈ ಚಲನಚಿತ್ರದಲ್ಲಿ ನಟಿಸಿದ್ದು ಪ್ರಮುಖರಾದ ಅಂಬಲಪಾಡಿಯ ಡಾ.ವಿಜಯ್ ಬಲ್ಲಾಳ್,ಕೋಟದ ಉದ್ಯಮಿ ಆನಂದ್ ಸಿ ಕುಂದರ್, ನೀಲಾವರ ಸುರೇಂದ್ರ ಅಡಿಗ ಸಹ ಮೊದಲ ಬಾರಿಗೆ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಕುಂದರ್, ಸಹ ನಿರ್ಮಾಪಕರಾಗಿ ಪ್ರಕಾಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ದಿನಾಂಕ 20.01.2020 ರ ಸೋಮವಾರದಂದು ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಸದರಿ ಶಾಲೆಯಲ್ಲಿ ಬೆಳಿಗ್ಗೆ 11-೦೦ ಗಂಟೆಗೆ ಪ್ರಧಾನಮಂತ್ರಿಯವರ ’ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದನೇರ ಪ್ರಸಾರವನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋರಿಸಲಾಯಿತು. 1೦ ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯವನ್ನು ಹೋಗಲಾಡಿಸಲು ಭಾರತ ಸರ್ಕಾರಕೈಗೊಂಡ ಈ ಕಾರ್ಯಕ್ರಮದಲ್ಲಿಎಲ್ಲಾ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿದರು. ಪ್ರಧಾನಮಂತ್ರಿಯವರು ವಿದ್ಯಾರ್ಥಿಗಳೊಡನೆ ನಡೆಸಿದ ಈ ಸಂವಾದಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಬಹಳ ಆಸಕ್ತಿಯಿಂದ ತೊಡಗಿಸಿಕೊಂಡು.ಪ್ರೇರಣೆಯನ್ನು ಪಡೆದರು.ಮುಂಬರುವ ಪರೀಕ್ಷೆಯ ಹಿನ್ನೆಲೆಯಲ್ಲಿ ನಡೆಸಲಾದ ಬಹಳ ಚೆನ್ನಾಗಿ ಮುಡಿಬಂದಿ ಪ್ರಧಾನಮಂತ್ರಿಯವರ ಉತ್ತರ ವಿದ್ಯಾರ್ಥಿಗಳಿಗೆ ಬಹಳ ಸ್ಫೂರ್ತಿದಾಯಕವಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ರಮ್ಯಶ್ರೀ ಶೆಟ್ಟಿ ಇವರು ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಬಿ.ಕಾಂ. ಪದವಿ ಐದನೇ ಮತ್ತು ಆರನೇ ಸೆಮಿಸ್ಟರ್ ಫಿನಾನ್ಶಿಯಲ್ ಅಕೌಂಟಿಂಗ್ ಪರೀಕ್ಷೆಯಲ್ಲಿ ೩೦೦ಕ್ಕೆ ೩೦೦ ಅಂಕ ಗಳಿಸಿ ಅಖಿಲ ಭಾರತ ಚಾರ್ಟೆಡ್ ಅಕೌಂಟೆಂಟ್ ಇನ್ಸ್ಟಿಟ್ಯೂಶನ್ನ ಚಿನ್ನದ ಪದಕ ಪಡೆದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬೆಂಗಳೂರಿನಲ್ಲಿ ನೆಲೆಸಿರುವ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹೋಟೆಲ್ ಗ್ರೀನ್ ಗಾರ್ಡೆನೀಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಡಾ ಮಹೇಂದ್ರ ಭಟ್ ಮಾತನಾಡಿ ಶಾಲಾ ಅಭಿವೃಧ್ಧಿ ನಮ್ಮೇಲ್ಲಾ ಹಳೆ ವಿದ್ಯಾರ್ಥಿಗಳ ಹೊಣೆಯಾಗಿದೆ ಎನ್ನುತ್ತಾ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಆರ್. ದೇವಾಡಿಗ ವಹಿಸಿ ಶಾಲಾ ಶತಮಾನೋತ್ಸವ ಸಂದರ್ಭದಲ್ಲಿ ಶಾಲೆಯಲ್ಲಿ ಕಲಿತ ಎಲ್ಲಾ ವಿಧ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸೋಣ ಎಂದರು. ವೇದಿಕೆಯಲ್ಲಿ ಹಳೆವಿದ್ಯಾರ್ಥಿಗಳಾದ ಉದ್ಯಮಿ ಶ್ರೀಧರ ಶೆಟ್ಟಿ, ಗಿರೀಶ್ ಬೈಂದೂರು ಹಳೆವಿದ್ಯಾರ್ಥಿ ಸಂಘದ ಖಜಾಂಚಿ ಜಯಾನಂದ ಹೋಬಳಿದಾರ್ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಚರಣ ಬೈಂದೂರು ಸ್ಟಾಗತಿಸಿದರು. ಶಾಲಾ ಪದವೀಧರ ಮುಖ್ಯೋಪಾದ್ಯಾಯ ಜನಾರ್ಧನ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ ವ್ಯಕ್ತಿಯಲ್ಲಿ ಸಂಸ್ಕಾರ ಹಾಗೂ ಸ್ವಾಭಿಮಾನವನ್ನು ಬೆಳೆಸುತ್ತದೆ. ಶಿಕ್ಷಣದ ಜೊತೆಗೆ ಕಲಾಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಆತ ಮತ್ತಷ್ಟು ಕ್ರೀಯಾಶೀಲನಾಗುತ್ತಾನೆ. ಕಲೆ, ಶಿಕ್ಷಣ ಎಲ್ಲದರ ಮೂಲ ಉದ್ದೇಶ ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯುವುದಾಗಿದೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಪರಿಶಿಷ್ಟ ಪಂಗಡದ ರಂಗತಂಡ ಸಂಚಲನ ರಿ. ಹೊಸೂರು ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಾನುವಾರ ಹೊಸೂರಿನ ಕೆ.ವಿ ಸುಬ್ಬಣ್ಣ ವನರಂಗದಲ್ಲಿ ಆಯೋಜಿಸಲಾದ ಹನ್ನೆರಡನೇ ವರ್ಷದ ವಾರ್ಷಿಕ ಸಂಭ್ರಮ ವನಸಿರಿಯಲ್ಲೊಂದು ರಂಗಸುಗ್ಗಿ ಕಾರ್ಯಕ್ರಮವನ್ನು ದೀಪ ಬೆಳಗಿ, ಮಡಿಕೆಗೆ ಹಾಲೆರೆದು ಉದ್ಘಾಟಿಸಿ ಮಾತನಾಡಿದರು. ಪರಿಶಿಷ್ಟ ಪಂಗಡ ಸಮುದಾಯದ ಅಭ್ಯುದಯಕ್ಕೆ ಬದ್ಧನಾಗಿದ್ದು, ಸಮುದಾಯಕ್ಕೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ತೂದಳ್ಳಿ ಕಿಂಡಿ ಅಣೆಕಟ್ಟಿಗೆ 3.75 ಲಕ್ಷ ರೂ., ಅತ್ಯಾಡಿ ತೂದಳ್ಳಿ ರಸ್ತೆಗೆ 1.64 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದ್ದು ಯಡ್ತರೆ ಗ್ರಾಮಕ್ಕೆ ಒಟ್ಟು8 ಕೋಟಿ ಅನುದಾನ ಈಗಾಗಲೇ ಬಿಡುಗಡೆಯಾಗಿದೆ ಎಂದರು. ಜಿಲ್ಲಾ ಕನ್ನಡ ಸಾಹಿತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳವಾಡಿ ಶ್ರೀ ಈಶ್ವರ ಮಾರಿಕಾಂಬ ದೇವಸ್ಥಾನದಲ್ಲಿ ಮಾ.೨೭ ರಿಂದ ಎ.೪ರ ವರೆಗೆ ನಡೆಯುವ ನವೀಕೃತ ಗರ್ಭಗುಡಿ ಮತ್ತು ನೂತನ ಶಿಲಾಮಯ ತೀರ್ಥ ಮಂಟಪ ಸಮರ್ಪಣೆ ಹಾಗೂ ಅಷಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಬಿ. ಜಗನ್ನಾಥ ಶೆಟ್ಟಿ ಬಿಡುಗಡೆಗೊಳಿಸಿದರು. ಧಾರ್ಮಿಕ ಮುಖಂಡರಾದ ಬಿ. ಅಪ್ಪಣ್ಣ ಹೆಗ್ಡೆ, ಶ್ರೀ ಈಶ್ವರ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿ ಅನುವಂಶಿಯ ಮೊಕ್ತೇಸರರು ಕೆ ಚಂದ್ರಶೇಖರ ಶೆಟ್ಟಿ ಹಾಗು ಕೆ ವಸಂತ ಕುಮಾರ್ ಶೆಟ್ಟಿ ಕಾರಿಕಟ್ಟೆ, ಉತ್ಸವ ಸಮಿತಿ ಅಧ್ಯಕ್ಷರಾದ ಎಚ್ ವಸಂತ ಹೆಗ್ಡೆ ಕಳವಾಡಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ದಿವಾಕರ್ ಹೆಗ್ಡೆ ಕಳವಾಡಿ, ಆಡಳಿತ ಮಂಡಳಿ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಕಾರಿಕಟ್ಟೆ, ತಗ್ಗರ್ಸೆ ಟಿ. ನಾರಾಯಣ ಹೆಗ್ಡೆ, ವೆಂಕ್ಟ ಪೂಜಾರಿ ಸಸಿಹಿತ್ಲು, ವತ್ತಿನಕಟ್ಟೆ ದೇವಳದ ಗೌರವಾಧ್ಯಕ್ಷರಾದ ರಾಜು ಪೂಜಾರಿ ಯಡ್ತರೆ, ಅಧ್ಯಕ್ಷರಾದ ನಾಗರಾಜ ಶೆಟ್ಟಿ ನಾಕಟ್ಟೆ, ಜಗನ್ನಾಥ ಶೆಟ್ಟಿ, ವೆಂಕಟಾಚಲ ಮಯ್ಯ ಮತ್ತು ಗಣಪಯ್ಯ…
