Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ:  ಗಂಗೊಳ್ಳಿ – ಕುಂದಾಪುರ ಸಂಪರ್ಕ ಸೇತುವೆ ಹೋರಾಟ ಸಮಿತಿ ವತಿಯಿಂದ ಗಂಗೊಳ್ಳಿ -ಕುಂದಾಪುರ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ ಸೋಮವಾರ ಮನವಿ ಸಲ್ಲಿಸಲಾಯಿತು. ಕಳೆದ ವರ್ಷಗಳಿಂದ ಗಂಗೊಳ್ಳಿ – ಕುಂದಾಪುರ ಸಂಪರ್ಕ ಸೇತುವೆ ನಿರ್ಮಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಲೇ ಬಂದಿದ್ದಾರೆ. ಗಂಗೊಳ್ಳಿ ಗ್ರಾಪಂ ಮತ್ತು ಕುಂದಾಪುರ ಪುರಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಸರಕಾರಕ್ಕೆ ಸಲ್ಲಿಸಲಾಗಿದೆ. ಸೇತುವೆ ನಿರ್ಮಾಣದಿಂದ ಸುತ್ತಮುತ್ತಲಿನ ಗ್ರಾಮದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ. ವ್ಯಾಪಾರ, ವಹಿವಾಟುಗಳಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ. ಹೀಗಾಗಿ ಗಂಗೊಳ್ಳಿ-ಕುಂದಾಪುರ ಸಂಪರ್ಕ ಸೇತುವೆ ನಿರ್ಮಿಸುವ ಸಂಬಂಧ ಗ್ರಾಮ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಂಡು ಸರಕಾರ, ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಲ್ಲಿಸಿ ಒತ್ತಡ ಹೇರಬೇಕು. ಶಾಸಕರು, ಸಂಸದರು ಗ್ರಾಮಸ್ಥರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಸಂಪರ್ಕ ಸೇತುವೆ ನಿರ್ಮಾಣವಾಗುವ ಭರವಸೆ ಇದೆ ಎಂದು ಸಮಿತಿ ಅಧ್ಯಕ್ಷ ಬಿ.ಸದಾನಂದ ಶೆಣೈ ಒತ್ತಾಯಿಸಿದರು. ಮನವಿ ಸ್ವೀಕರಿಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಲಾಕ್ಷೇತ್ರ ಕುಂದಾಪುರ ವತಿಯಿಂದ ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ನುಡಿನಮನ ಕಾರ್ಯಕ್ರಮ ಜೂನಿಯರ್ ಕಾಲೇಜಿನ ಕಲಾಮಂದಿರದಲ್ಲಿ ನೆಡೆಯಿತು. ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಕಲಾಕ್ಷೇತ್ರದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಮಾತನಾಡಿ, ಜಗತ್ತಿನ ಶ್ರೇಷ್ಠ ಗಾಯಕರಾಗಿ, ಯಾರೂ ಮರಿಯಲಾರದ ಸಾಧನೆ ಮಾಡಿ ೫೫ ವರ್ಷಗಳಲ್ಲಿ 40 ಸಾವಿರಕ್ಕಿಂತ ಅಧಿಕ ಹಾಡುಗಳನ್ನು ಹಾಡಿದ ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರು ದಕ್ಷಿಣ ಭಾರತಕ್ಕೆ ಸೀಮಿತರಾಗದೇ ಜಗತ್ತಿನೆಲ್ಲೆಡೆ ಗುರುತಿಸಿಕೊಂಡವರು ಎಂದು ಹೇಳಿದರು. ರೋಟರಿ ಕ್ಲಬ್‌ನ ಡಾ. ರಾಜಾರಾಮ್ ಶೆಟ್ಟಿ ಮಾತನಾಡಿ, ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಸೂಯೆ ಇಲ್ಲದ ಸಂಗೀತ ಸಾಮ್ರಾಜ್ಯ ಕಟ್ಟಿಕೊಂಡ ಧೀಮಂತ ಗಾಯಕ. ಆಡಂಭರ ಇಲ್ಲದ ವ್ಯಕ್ತಿತ್ವ, ಪ್ರತಿ ನಟನಿಗೂ ಬೇಕಾದ ಧ್ವನಿ ಕೊಡುವ ವಿಶಿಷ್ಟ ಸ್ವರ ಸಾಮರ್ಥ್ಯ ಹೊಂದಿದ ಅಪರೂಪದ ವ್ಯಕ್ತಿ ಎಂದರು. ಉದಯ್ ಶೆಟ್ಟಿ, ಉಡುಪಿ ಜಿಲ್ಲಾ ರೈತ ಸಂಘ ವಕ್ತಾರ ಕೆ. ವಿಕಾಸ ಹೆಗ್ಡೆ, ಮನೋಜ್ ನಾಯರ್ , ಡಿ. ಸತೀಶ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಳ್ವೆ ಪೇಟೆಯ ಆಸುಪಾಸಿನ ಒಂದು ಕಿ.ಮೀ ವ್ಯಾಪ್ತಿಯ ಅಲ್ಲಲ್ಲಿ ಅನೇಕ ಹೊಂಡಗಳು ಸೃಷ್ಟಿಯಾಗಿದ್ದು ವಾಹನ ಸವಾರರು ನಿತ್ಯ ಯಾತನೆ ಅನುಭವಿಸುವಂತಾಗಿದೆ. ಬೈಂದೂರು – ವಿರಾಜಪೇಟೆ ರಾಜ್ಯ ಹೆದ್ದಾರಿ – 90ರ ಬೆಳ್ವೆ ಪೇಟೆ ಭಾಗದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೊಲ್ಲುರು – ಶೃಂಗೇರಿಯನ್ನು ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿಯಾಗಿದ್ದರೂ ಇವರೆಗೆ ದುರಸ್ತಿ ಭಾಗ್ಯ ಕಂಡಿಲ್ಲ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನಹರಿಸದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತಿಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರ ವತಿಯಿಂದ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ ಸಂಸ್ಮರಣೆ ಕಾರ್ಯಕ್ರಮ ಪಕ್ಷದ ಕಚೇರಿಯಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಂಕರ್ ಅಂಕದಕಟ್ಟೆ ಮಾತನಾಡಿ, ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಅವರು ಉತ್ತಮ ಸಾಹಿತಿ, ಅಪ್ರತಿಮ ದೇಶಭಕ್ತ, ಆದರ್ಶ ಚಿಂತಕ, ಸಮಾಜ ಸುಧಾರಕ, ಪ್ರಬುದ್ದ ತತ್ವಜ್ಞಾನಿ, ಮೇಧಾವಿ ಅರ್ಥಶಾಸ್ತ್ರಜ್ಞ, ರಾಷ್ಟ್ರ ನಿರ್ಮಾಪಕ ಗುಣಗಳನ್ನೊಂಡ ಮಹಾನ್ ವ್ಯಕ್ತಿ. ಜನಸಂಘದಂತಹ ರಾಷ್ಟ್ರೀಯ ರಾಜಕೀಯ ಪಕ್ಷದ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿಪ್ರಬುದ್ದ ಭಾರತ ನಿರ್ಮಾಣದ ಹೋರಾಟ ನಡೆಸಿದ್ದರು ಎಂದು ಹೆಳಿದರು. ಭಾರತೀಯ ಜನತಾ ಪಕ್ಷದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್. ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಗುಣರತ್ನ, ಪುರಸಭೆ ಸದಸ್ಯರಾದ ಸಂದೀಪ್ ಖಾರ್ವಿ, ಪ್ರಭಾಕರ್ ವಿ., ಅಶ್ವಿನಿ ಪ್ರದೀಪ್, ಶ್ವೇತಾ ಸಂತೋಷ್, ವೀಣಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಬಹುದೊಡ್ಡ ಸೇತುವೆಗಳಲ್ಲಿ ಒಂದಾದ ಅರಾಟೆ ಸೇತುವೆ ಬಿರುಕು ಬಿಟ್ಟಿದ್ದು, ವಾಹನದ ಸವಾರರ ಆತಂಕಕ್ಕೆ ಕಾರಣವಾಗಿದೆ. ತಾಲೂಕಿನ ಮುಳ್ಳಿಕಟ್ಟೆ ಸಮೀಪ ಚತುಷ್ಟಥ ಕಾಮಗಾರಿ ಸಂದರ್ಭ ಹಳೆ ಸೇತುವೆ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಇಂದು ಹೊಸ ಸೇತುವೆಯ ಪಿಲ್ಲರ್ ಮೇಲಿನ ಜೋಡಣೆಯಲ್ಲಿ ಬಿರುಕು ಬಿಟ್ಟಿದ್ದು, ರಾಡ್‌ಗಳೂ ತುಂಡಾಗಿವೆ. ಸದ್ಯ ವಾಹನಗಳನ್ನು ಹಳೆ ಸೇತುವೆಯ ಮೂಲಕ ತೆರಳಲು ಅನುವು ಮಾಡಿಕೊಡಲಾಗಿದೆ. ಅರಾಟೆ ಸೇತುವೆಯ ಆರಂಭದಲ್ಲಿ ಈ ಹಿಂದೆಯೂ ಕುಸಿತ ಉಂಟಾಗಿತ್ತು. ಇದೀಗ ಇನ್ನೊಂದು ಕಡೆಯಲ್ಲಿ ಸೇತುವೆ ಬಿರುಕು ಉಂಟಾಗಿದ್ದು, ಹೊಸತರಲ್ಲೇ ಸೇತುವೆ ಕುಸಿದಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ. ಕಳಪೆ ಕಾಮಗಾರಿ ನಡೆದಿದೆಯೇ ಎಂಬ ಬಗ್ಗೆ ತನಿಖೆ‌ ನಡೆಸಿ ಗುತ್ತಿಗೆ ಕಂಪೆನಿಯ ವಿರುದ್ದ ಕ್ರಮ ಕೈಗೊಳ್ಳಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಹಾಗೂ ಹೈವೇ ಪ್ಯಾಟ್ರೋಲ್ ಭೇಟಿ ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮುಂಬಯಿ: ಮುಂಬಯಿ ಮಹಾನಗರದ ಪ್ರತಿಷ್ಠಿತ ಸಮುದಾಯ ಸಂಘಟನೆಗಳಲ್ಲಿ ಒಂದಾದ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ನೂತನ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಸಮುದಾಯ ಸಂಘಟನೆಯಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿರುವ ಅಶೋಕ ಎನ್. ಪೂಜಾರಿ ಸಂಘದಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅನುಭವವಿರುವ ಇವರು ಸಂಘದ ನೂತನ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿರುತ್ತಾರೆ ಎಂದು ಸಂಘದ ಅಧ್ಯಕ್ಷರಾದ ಸೂರ್ಯ ಎಸ್. ಪೂಜಾರಿ ತಿಳಿಸಿರುತ್ತಾರೆ. ಬೈಂದೂರು ತಾಲೂಕಿನ ಪಡುಕೋಣೆಯವರಾದ ಅಶೋಕ ಎನ್. ಪೂಜಾರಿ ಕಳೆದೆರಡು ದಶಕಗಳಿಂದ ಮುಂಬಯಿ ಮಹಾನಗರದಲ್ಲಿ ನೆಲೆಸಿದ್ದಾರೆ. ಸ್ನಾತಕೋತ್ತರ ಪದವೀಧರರಾಗಿದ್ದು ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ. ಸಮುದಾಯ ಸಂಘಟನೆಯಲ್ಲಿ ವಿಶೇಷ ಒಲವು ಹೊಂದಿರುವ ಇವರು ಸಂಘದ ಕ್ರಿಯಶೀಲ ಸದಸ್ಯನಾಗಿರುವುದಲ್ಲದೆ ಒರ್ವ ಸಂಘಟಕನಾಗಿ ನಿಷ್ಠಾವಂತ ಸಮಾಜಸೇವಕನಾಗಿ ಸಮುದಾಯದಲ್ಲಿ ಗುರುತಿಸಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನ ರಾಜ್ಯದ ಸರಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಅನ್‌ಲೈನ್ ನಾನ್-ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಎರಡು ವರ್ಷಗಳ ಐ.ಟಿ.ಐ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ / ತಾಂತ್ರಿಕ ವಿಷಯಗಳಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರೀ ಸ್ಕೀಂ ರಡಿಯಲ್ಲಿ 2 ನೇ ವರ್ಷ / 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟಂಬರ್ 28 ರಿಂದ ಅಕ್ಟೋಬರ್ 6 ರ ವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಪ್ರವೇಶ ಪ್ರಕ್ರಿಯೆಯ ಅಧಿಸೂಚನೆಯ ವಿವರಗಳನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ dtek.karnataka.gov.in ಅಥವಾ dtetech.karnataka.gov.in/kartechnical ನಿಂದ ಮಾಹಿತಿಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು ಅಥವಾ ಸಮೀಪದ ಸರ್ಕಾರಿ/ ಅನುದಾನಿತ ಪಾಲಿಟೆಕ್ನಿಕ್‌ಗಳಿಗೆ ಭೇಟಿ ನೀಡಿ ಸರ್ಜಿ ಸಲ್ಲಿಸಲು ಹಾಗೂ ಆಪ್ಷನ್ ಎನ್ಟಿç ಯನ್ನು ಆನ್‌ಲೈನ್‌ನಲ್ಲಿ ದಾಖಲಿಸಬಹುದು. ಪ್ರಸಕ್ತ ಸಾಲಿನ ಪ್ರಥಮ ಸೆಮಿಸ್ಟರ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಂದೂರು, ಯಡ್ತರೆ ಮತ್ತು ಪಡುವರಿ ಗ್ರಾಮಗಳನ್ನೊಳಗೊಂಡ ಗ್ರಾಮ ಪಂಚಾಯತ್ ಪ್ರದೇಶವನ್ನು ಬೈಂದೂರು ಪಟ್ಟಣ ಪಂಚಾಯತ್‌ಯನ್ನಾಗಿ ಮೇಲ್ದರ್ಜೇಗೇರಿಸಿ ರಾಜ್ಯ ಸರಕಾರ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ. ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಸೆಕ್ಷನ್ 315ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಕಾರ್ಯನಿರ್ವಹಣೆಗಾಗಿ ಪಟ್ಟಣ ಪಂಚಾಯತ್‌ಗೆ ಸಂಬಂಧಿಸಿದ ತಹಶೀಲ್ದಾರ್‌ರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಅಧಿಸೂಚನೆಯಲ್ಲಿ ನಿರ್ದೇಶನ ನೀಡಲಾಗಿದೆ. ಆದ್ದರಿಂದ ಪಟ್ಟಣ ಪಂಚಾಯತ್‌ನ ದೈನಂದಿನ ಕಾರ್ಯನಿರ್ವಹಣೆಗಾಗಿ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಬೈಂದೂರು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯಾಗಿ ಬೈಂದೂರು ತಹಶೀಲ್ದಾರರನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 4ರಂತೆ ಕುಂದಾಪುರ ತಾಲೂಕು ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇನಾಪುರ ಗ್ರಾಮವನ್ನು ಸೇರ್ಪಡೆಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ ಕುರಿತು ಸಾರ್ವಜನಿಕರು ಮೇಲ್ಮನವಿ ಸಲ್ಲಿಸುವುದಾದಲ್ಲಿ ಪ್ರಾದೇಶಿಕ ಆಯುಕ್ತರು, ಮೈಸೂರು ಇವರಿಗೆ ಅಧಿಸೂಚನೆ ಪ್ರಕಟಿಸಿದ 30 ದಿನಗಳ ಒಳಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯು ಜನವರಿ 1, 2019 ರಿಂದ ಡಿಸೆಂಬರ್ 31, 2019 ರ ವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ, ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು / ಪ್ರಕಾಶಕರು / ಸಂಪಾದಕರು ನಾಲ್ಕು ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, ಬೆಂಗಳೂರು ಇವರಿಗೆ ಅಕ್ಟೋಬರ್ ೨೫ ರ ಒಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸುವಂತೆ ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More