ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ) ಕುಂದಾಪುರ ವಲಯದ ಬೆಳ್ಳಿ ಹಬ್ಬದ ಸವಿ ನೆನೆಪು ಹಾಗೂ ೨೬ನೇ ಪದಗ್ರಹಣ ಸಮಾರಂಭ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಸುರೇಶ್ ಡಿ ಪಡುಕೋಣೆ ಮಾತನಾಡಿ ಛಾಯಾಗ್ರಾಹಕರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇತರರ ಬಾಳಿಗೆ ಬೆಳಕಾಗುವ ಕೆಲಸಕ್ಕೆ ಮುಂದಾಗಿರುವುದು ಶ್ಲಾಘನೀಯ ಕಾರ್ಯ. ತಮ್ಮ ಮನಸ್ಸು, ಕನಸುಗಳನ್ನು ಜನರಿಗೆ ಅರ್ಪಿಸಿ ಪ್ರಾಮಾಣಿಕ ಸೇವೆ ನೀಡುವ ಛಾಯಗ್ರಾಹಕರಿಗೆ ದೇವರು ಎಂದಿಗೂ ಒಳ್ಳೇದನ್ನೇ ಕರುಣಿಸುತ್ತಾನೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್‌ಕೆಪಿಎ ಉಡುಪಿ ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಮಾತನಾಡಿ, ಹಿಂದಿನಿಂದಲೂ ಎಸ್‌ಕೆಪಿಎ ಕುಂದಾಪುರ ವಲಯ ಸಮಾಜಸೇವೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದೆ. ಪ್ರಮೋದ್ ಚಂದನ್ ಅವರ ಮುಂದಾಳತ್ವದಲ್ಲಿ ಸಂಘವು ಅನೇಕ ಚಟುವಟಿಕೆಗಳನ್ನು ನಡೆಸಿದೆ. ನೂತನ ಅಧ್ಯಕ್ಷ ರಾಜಾ ಮಠದಬೆಟ್ಟು ನಾಯಕತ್ವದಲ್ಲಿ ಶೀಘ್ರವೇ ಈ ಭಾಗದಲ್ಲಿ ಛಾಯಾಗ್ರಾಹಕರಿಗೆ ಅಗತ್ಯವಿರುವ ಛಾಯಾ ಭವನ ನಿರ್ಮಾಣಗಳ್ಳಲಿ. ತನ್ಮೂಲಕ ಛಾಯಾಗ್ರಾಹಕರಿಗೆ ಈ…
Author: ನ್ಯೂಸ್ ಬ್ಯೂರೋ
ಬೈಂದೂರು ಚಂದ್ರಶೇಖರ ನಾವಡ. ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂದ ಕುವೆಂಪುರವರ ಸಂದೇಶವನ್ನು ಅಕ್ಷರಶ: ಪಾಲಿಸಿ ಕನ್ನಡ ನಾಡು-ನುಡಿ-ಸಂಸ್ಕೃತಿಯ ಕಂಪನ್ನು ಗಲ್ಫ್ ದೇಶಗಳಲ್ಲಿ ಪಸರಿಸಿದ ಪ್ರೀತಿಯಿಂದ ‘ಬೀಜಿ’ ಎಂದು ಕರೆಯಲ್ಪಡುವ ಬಿ ಜಿ ಮೋಹನ್ ದಾಸ್ ರವರ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಬೈಂದೂರು ತಾಲೂಕಿನ ಬಿಜೂರಿನಲ್ಲಿ ಜನಿಸಿ ಉದ್ಯೋಗ ನಿಮಿತ್ತ ದೀರ್ಘ ಕಾಲ ತಾಯ್ನಾಡಿನಿಂದ ದೂರದ ದುಬಾಯಿಯಲ್ಲಿ ವಾಸವಾಗಿದ್ದ ಅವರು ಅಲ್ಲಿ ನೆಲೆಸಿದ್ದ ಕನ್ನಡಿಗರಲ್ಲಿ ತಾಯ್ನಾಡಿನಿಂದ ದೂರವಿರುವ ನೋವು ಕಾಡದಂತೆ ಶ್ರಮಿಸಿದರು. ಸಾಹಿತ್ಯ, ಸಿನಿಮಾ, ನಾಟಕ, ಯಕ್ಷಗಾನ, ಕ್ರೀಢೆ ಮೊದಲಾದ ಚವಟುಟಿಕೆಗಳನ್ನು ನಿರಂತರವಾಗಿ ಸಂಘಟಿಸಿದರು. ನಾಡಿನ ಹಿರಿಯ ಕಲಾವಿದರು, ಸಾಹಿತಿಗಳು ಸಾಧಕರನ್ನು ದುಬಾಯಿ ಕನ್ನಡ ಸಂಘದ ಆಶ್ರಯದಲ್ಲಿ ಬರಮಾಡಿಕೊಂಡರು. ಕೊಲ್ಲಿಯಲ್ಲಿ ನೆಲೆಸಿದ ಮಣ್ಣಿನ ಮಕ್ಕಳಲ್ಲಿ ಧರ್ಮ-ಜಾತಿ ಮೀರಿದ ಭ್ರಾತ್ರತ್ವ ಪ್ರೇಮ ಬೆಳೆಸಿ, ಬದುಕಿನ ಕಷ್ಟ-ಸುಖಗಳಲ್ಲಿ ಪರಸ್ಪರ ಸಹಭಾಗಿಗಳಾಗುವಂತೆ ಪ್ರೋತ್ಸಾಹಿಸಿ ಕುವೆಂಪುರವರ ವಿಶ್ವಮಾನವ ಕಲ್ಪನೆಯನ್ನು ಸಾಕಾರಗೊಳಿಸಲು ಶ್ರಮಿಸಿದ…
ಕುಂದಾಪ್ರ ಡಾಟ್ ಕಾಂ’ ಸುದ್ದಿ. ಕುಂದಾಪುರ, ನ.26: ಕೋಡಿಯ ಶ್ರೀ ಚಕ್ರಮ್ಮ ದೇವಸ್ಥಾನದ ಆಡಳಿತ ಮೋಕ್ತೇಸರ, ಪಾತ್ರಿ,ಮಾಧವ ಪೂಜಾರಿ ನಿಧನರಾದರು. ಕುಂದಾಪುರದ ಹಿರಿಯ ಧಾರ್ಮಿಕ ನೇತಾರರಲ್ಲಿ ಓರ್ವರಾಗಿದ್ದ ಅವರು ತಮ್ಮ ಬರಹಗಳ ಮೂಲಕವೂ ಜನಪ್ರೀಯರಾಗಿದ್ದರು. ಸ್ವತಹ ಪತ್ರಿಕೆಯನ್ನೂ ನಡೆಸಿದ್ದರು. ಕೋಡಿಯ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯಲ್ಲೂ ಪಾಲ್ಗೊಂಡಿದ್ದರು. ಇವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ವೈದ್ಯರ ಜೀವನದಲ್ಲಿ ನೋವು ನಲಿವುಗಳ ಅಪಾರ ಅನುಭಗಳು ಉಂಟಾಗುತ್ತವೆ. ಕರ್ತವ್ಯನಿಷ್ಠ ವೈದ್ಯ, ಸಮಾಜಕ್ಕೆ ಅನುಕೂಲವಾಗುವ ಸೇವೆಯನ್ನೇ ನೀಡುತ್ತಾನೆ. ಹಲವು ಮನೋಭಾವದ ಜನರೊಂದಿಗೆ ಸ್ಪಂದಿಸಿದಾಗ ಇಲ್ಲಿ ತಾಳ್ಮೆ, ವೃತ್ತಿ ಪ್ರಜ್ಞೆ ಎರಡೂ ಬೇಕಾಗುತ್ತದೆ. ಅಂತಹ ಅಪೂರ್ವ ಅನುಭವಗಳನ್ನು ಸ್ವಾರಸ್ಯಕರವಾಗಿ ತನ್ನ “ನೆನಪಿನಾಳದಿಂದ” ಕೃತಿಯಲ್ಲಿ ಕುಂದಾಪುರದ ಖ್ಯಾತ ವೈದ್ಯ ಡಾ| ಎ. ರಂಜಿತ್ ಕುಮಾರ್ ಶೆಟ್ಟಿ ನಿರೂಪಿಸಿದ್ದಾರೆ. ಇದು ಸಮಾಜದ ಪ್ರತಿಯೊಬ್ಬರೂ ಓದಲೇ ಬೇಕಾದ ಪುಸ್ತಕ. ವೈದ್ಯರ ಹಾಗೂ ಸಮಾಜದ ಕೆಲವರ ನಡುವೆ ಸಂಬಂಧಗಳು ಸಡಿಲವಾಗುತ್ತಿರುವಾಗ ಇಂತಹ ಕೃತಿ ಓದಿದರೆ ತಿಳುವಳಿಕೆ ಮೂಡುತ್ತದೆ” ಎಂದು ಮೂಡಬಿದಿರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಹೇಳಿದರು. ಕುಂದಾಪುರ ಭಂಡಾರ್‌ಕಾರ‍್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ “ಕುಂದಪ್ರಭ” ಆಶ್ರಯದಲ್ಲಿ ನಡೆದ ಡಾ.ಎ. ರಂಜಿತ್ ಕುಮಾರ್ ಶೆಟ್ಟಿಯವರ “ನೆನಪಿನಾಳದಿಂದ” ಪುಸ್ತಕ ಬಿಡುಗಡೆ ಸಮಾರಂಭ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ವೈದ್ಯಕೀಯ ಸೇವೆಯಲ್ಲಿ ತನ್ನ ಅನುಭವಗಳ ಬುತ್ತಿ ಬಿಚ್ಚಿ ಹೇಳಿದ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸುವ ಸದುದ್ದೇಶದೊಂದಿಗೆ ಒಂದಿಷ್ಟು ಸಮಾನ ಮನಸ್ಕರು ಜೊತೆಯಾಗಿ ಹಮ್ಮಿಕೊಂಡಿರುವ ’ಕ್ಲೀನ್ ಕುಂದಾಪುರ ಪ್ರಾಜೆಕ್ಟ್’ ಅಭಿಯಾನಕ್ಕೆ ಕುಂದಾಪುರದ ಪೊಲೀಸರು ಕೈಜೋಡಿಸಿದ್ದು, ಭಾನುವಾರ ಕೋಡಿ ಕಡಲ ಕೀನಾರೆಯಲ್ಲಿ ಜರುಗಿದ ಸ್ವಚ್ಛತಾ ಕಾರ್ಯದಲ್ಲಿ ಕುಂದಾಪುರದ ಎಎಸ್ಪಿ ಹರಿರಾಮ್ ಶಂಕರ್ ಸೇರಿದಂತೆ ಉಪವಿಭಾಗದ ವಿವಿಧ ಪೊಲೀಸ್ ಠಾಣಾ ಸಿಬ್ಬಂಧಿಗಳು ಸ್ವಯಂಪ್ರೇರಣೆಯಿಂದ ಭಾಗವಹಿಸಿದರು. ಕೋಡಿ ಸೀವಾಕ್ ಸಮೀಪ ನಡೆಯುತ್ತಿದ್ದ ಸ್ವಚ್ಛತಾ ಕಾರ್ಯದಲ್ಲಿ ಕುಂದಾಪುರ ವಿಭಾಗದ ಎಎಸ್ಪಿ ಹರಿರಾಮ್ ಶಂಕರ್, ವೃತ್ತನಿರೀಕ್ಷಕ ಮಂಜಪ್ಪ ಡಿ.ಆರ್ ಅವರ ನೇತೃತ್ವದಲ್ಲಿ ಕುಂದಾಪುರ ವೃತ್ತ ನಿರೀಕ್ಷಕರ ಕಛೇರಿ, ಕುಂದಾಪುರ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ, ಕುಂದಾಪುರ ಸಂಚಾರಿ ಪೊಲೀಸ್ ಠಾಣೆ, ಕೊಲ್ಲೂರು, ಗಂಗೊಳ್ಳಿ ಹಾಗೂ ಅಮಾಸೆಬೈಲು ಪೊಲೀಸ್ ಠಾಣೆಯ ಸುಮಾರು ೩೦ಕ್ಕೂ ಹೆಚ್ಚು ಸಿಬ್ಬಂಧಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದದರು. ಎಎಸ್ಪಿ ಹರಿರಾಮ್ ಶಂಕರ್ ಅವರ ಪತ್ನಿ ಅನಂತಾ ಅವರು ಭಾಗವಹಿಸಿದ್ದು ವಿಶೇಷವಾಗಿತ್ತು. ಕಳೆದು ಕೆಲವು ತಿಂಗಳುಗಳಿಂದ ಪ್ರತಿ ಭಾನುವಾರ ನಿರಂತರವಾಗಿ ನಡೆಯುತ್ತಿರುವ…
ಕುಂದಾಪ್ರ ಡಾಟ್ ಕಾಂ ವರದಿ. ನ.26ರಂದು ಕುಂದಾಪುರದ ಅಧಿದೇವರಾದ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ದೀಪೋತ್ಸವ ಹಾಗೂ ರಥೋತ್ಸವದ ಸಂಭ್ರಮ. ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಈ ದೀಪಾರಾಧನೆಯನ್ನು ಊರಿನ ಜನ ಸಂಭ್ರಮದಿಂದ ಇದಿರು ನೋಡುತ್ತಿರುತ್ತಾರೆ. ಊರಿಗೆ ಊರೇ ಪಾಲ್ಗೊಳ್ಳುವ ಈ ಲಕ್ಷ ದೀಪೋತ್ಸವ ಅಕ್ಷರಶಃ ಒಂದು ಸಾರ್ವಜನಿಕ ಉತ್ಸವ. ಈ ಹಬ್ಬಕ್ಕೆ ಒಂದು ವಾರವಿರುವಾಗಲೇ ನಗರದ ಬೀದಿಗಳ ಬದಿಯಲ್ಲಿ ಸಂಚಾರೀ ಅಂಗಡಿಗಳವರು ಸಾಲುಗಟ್ಟಿ ಬೀಡು ಬಿಡುತ್ತಾರೆ. ದೇವಾಲಯದಲ್ಲಿ ದೀಪಾಲಂಕಾರ ಮತ್ತಿತರ ಸಿದ್ಧತೆಗಳು ಆರಂಭವಾಗುತ್ತವೆ. ಬೆಳಗ್ಗೆ ಶ್ರೀ ಕುಂದೇಶ್ವರನ ಸನ್ನಿಧಿಯಲ್ಲಿ ಶತರುದ್ರಾಭಿಷೇಕ; ಮಹಾಪೂಜೆ; ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆದರೆ, ರಾತ್ರಿ ರಂಗಪೂಜೆ ಮತ್ತು ಮಹಾಮಂಗಳಾರತಿ ನಡೆದು ಶ್ರೀ ದೇವರ ಉತ್ಸವಮೂರ್ತಿ ಗರ್ಭಗುಡಿಯಿಂದ ಹೊರಬರುತ್ತದೆ. ಈ ಸಂದರ್ಭದಲ್ಲಿ ರಥೋತ್ಸವದ ಮಾದರಿಯಲ್ಲೇ ಹಳಗ – ಜಾಗಟೆ ಮೊದಲಾದ ವಾದ್ಯೋಪಕರಣಗಳ ನಿನಾದ; ದೇವಾಲಯದ ತಂತ್ರಿಗಳ ನೇತೃತ್ವದಲ್ಲಿ ಒಳಗೆ ಮೂರು ಸುತ್ತು ಮತ್ತು ಹೊರಾಂಗಣದಲ್ಲಿ ಮೂರು ಸುತ್ತು – ಹೀಗೆ ಬಲಿಗಲ್ಲುಗಳ ಬಳಿ ಬಲಿ ಸಮರ್ಪಣೆ. ಕೊನೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಚಿತ್ರಗಾರರ ಮೇಲೆ ಹರಿಹಾಯುವ ಪ್ರವೃತ್ತಿ ಹೆಚ್ಚುತ್ತಿದೆ ಆದರೆ ಮಾಡುವ ಕೆಲಸದಲ್ಲಿ ಬದ್ಧತೆ ಇದ್ದರೆ ಅಂತಹ ಶಕ್ತಿಗಳಿಗೆ ಹೆದರುವ ಅಗತ್ಯವೇ ಇಲ್ಲ ಎಂದು ಸಿನೆಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು. ಅವರು ಶನಿವಾರ ಕುಂದಾಪುರದ ಕಲಾಮಂದಿರದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರದ ನೇತೃತ್ವದಲ್ಲಿ ನಡೆದ ನಾಲ್ಕು ದಿನಗಳ ಕಾರ್ಟೂನು ಹಬ್ಬ ಉದ್ಘಾಟಿಸಿ ಮಾತನಾಡಿ ಸಮಾಜವನ್ನು ವಿಡಂಬನಾ ದೃಷ್ಟಿಯಿಂದ ನೋಡಲು ಸಾಧ್ಯವಾದರೆ ಮಾತ್ರ ಉತ್ತಮ ಕಾರ್ಟೂನಿಷ್ಠ್ ಆಗಲು ಸಾಧ್ಯ. ಅದು ರಾಜಕೀಯ ಕಾರಣಗಳಿಂದಾಗಿ ವಿವಾದಕ್ಕೊಳಗಾದರೇ, ಅದಕ್ಕೆ ಪ್ರತಿಕ್ರಿಯಿಸುತ್ತಾ ಕೂರದೇ ಮುಂದೆ ಸಾಗುವುದು ಒಳಿತು ಎಂದರು. ಸಿನೆಮಾಗಳಲ್ಲಿ ನಮ್ಮ ಸುತ್ತಮುತ್ತಲಿನ ಕಥೆಯನ್ನೇ ಹೇಳಲು ಹೊರಟಾಗ ಅದರಲ್ಲಿನ ಕಥಾವಸ್ತು ಗಟ್ಟಿಯಾಗುತ್ತದೆ, ಜನರಿಗೂ ಹತ್ತಿರವಾಗುತ್ತದೆ. ಹಾಗೆಯೇ ಭಾರತೀಯ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಂಡಾಗ ನಾವು ಗಟ್ಟಿಯಾಗಲು, ನಮ್ಮತನ ಉಳಿಸಿಕೊಳ್ಳಲು ಸಾಧ್ಯವಿದೆ. ಬ್ರಿಟೀಷರ ಕಾಲದ ಗುಮಾಸ್ತವಾಗುವ ಶಿಕ್ಷಣ ಬದಲಾಗಬೇಕಿದೆ ಎಂದರು. ರಿಷಬ್ ಶೆಟ್ಟಿ ಅವರಿಗೆ ಕುಂದಾಪುರ ಸರಕಾರಿ ಶಾಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಾಂಧೀಜಿಯವರ ಚಿಂತನೆ ಬ್ರಿಟೀಷರಿಂದ ಸ್ವಾತಂತ್ರ್ಯ ಪಡೆಯುವುದಕ್ಕಷ್ಟೇ ಸೀಮಿತವಾಗಿರದೇ ಭಾರತೀಯರ ಆತ್ಮ ವಿಕಾಸ ಹಾಗೂ ಸ್ವರಾಜ್ ಕಲ್ಪನೆಯನ್ನು ಎಚ್ಚರಿಸುವುದೂ ಆಗಿತ್ತು. ನಮ್ಮೊಳಗಿನ ಸ್ವಾತಂತ್ರ್ಯ ಜಾಗೃತಗೊಳ್ಳಲು ಆತ್ಮ ವಿಕಾಸ ಅಗತ್ಯವೆಂಬುದನ್ನು ಅರಿತಿದ್ದ ಗಾಂಧಿ, ಭಾರತೀಯ ಶಿಕ್ಷಣ ಪದ್ದತಿಯಿಂದ ಅದು ಸಾಕಾರಗೊಳ್ಳುತ್ತದೆ ಎಂಬುದನ್ನೂ ಪ್ರತಿಪಾದಿಸಿದ್ದರು ಎಂದು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಹೇಳಿದರು. ಅವರು ಶನಿವಾರ ಕುಂದಾಪುರದ ಕಲಾಮಂದಿರದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರದ ನೇತೃತ್ವದಲ್ಲಿ ನಡೆದ ನಾಲ್ಕು ದಿನಗಳ ಕಾರ್ಟೂನು ಹಬ್ಬ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ 1915ರಲ್ಲಿ ದಕ್ಷಿಣ ಆಫ್ರಿಕಾದಿಂದ ಮರಳಿದಾಗ ಗಾಂಧೀಜಿ ನೋಡಿದ ಭಾರತ ಭಿನ್ನವಾಗಿತ್ತು. ಅಸ್ಪಶ್ಯತೆ ನಿವಾರಣೆ, ಮಹಿಳಾ ಸಬಲೀಕರಣ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡುವ ಬಗೆಗೆ ಅವರು ಒತ್ತು ನೀಡಿದ್ದರು. ಸ್ವಾತಂತ್ರ್ಯ ಚಳುವಳಿಯೊಂದಿಗೆ ದೇಶದ ಆಂತರಿಕ ಸ್ವಾತಂತ್ರ್ಯದ ಸಂಕೊಲೆಗಳ ವಿರುದ್ಧ ಹೋರಾಟ ಆರಂಭಿಸಿದ್ದರು. ಮಧ್ಯರಾತ್ರಿಯಲ್ಲಿ ಮಹಿಳೆ ಧೈರ್ಯವಾಗಿ ರಸ್ತೆಯಲ್ಲಿ ತಿರುಗುವಂತಾದರೇ ಅಂದೇ ದೇಶಕ್ಕೆ ನಿಜವಾಗಿಯೂ ಸ್ವಾತಂತ್ರ್ಯ ದೊರೆತಂತೆ ಎಂದಿದ್ದ ಗಾಂಧಿಜಿಯವರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ, ಉಡುಪಿ ಹಾಗೂ ಸಹಕಾರ ಇಲಾಖೆ ಜಂಟಿಯಾಗಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಿದ್ದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ 2019ರ ಕಾರ್ಯಕ್ರಮದಲ್ಲಿ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಕುಂದಾಪುರ ಈ ಸಂಸ್ಥೆಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಜಾನ್ಸನ್ ಡಿಅಲ್ಮೇಡಾ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಸ್ಕಲ್ ಡಿಸೋಜಾ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಉಡುಪಿ ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಎನ್. ಗಂಗಣ್ಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ನಿರ್ದೇಶಕ ಎಸ್. ರಾಜು ಪೂಜಾರಿ, ದಕ್ಷಿಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಅಧ್ಯಕ್ಷರ ಕಚೇರಿಯಲ್ಲಿ ಬುಧವಾರ ನಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ ಹೊಸ ಮರಳು ನೀತಿಗೆ ಅನುಸರಿಸುತ್ತಾ ಕುಳಿತರೆ ಮತ್ತೆ ಮಳೆಗಾಲ ಆರಂಭವಾಗುತ್ತದೆ. ಬಡವರಿಗೆ ಮರಳು ಅವಶ್ಯವಿದ್ದು, ಮರಳು ಎಲ್ಲರಿಗೂ ಸುಲಭ ಬೆಲೆಯಲ್ಲಿ ಸಿಗಬೇಕು. ಮರಳು ದಿಬ್ಬ ತೆರವು ಮಾಡಲು ಹೊಸ ಮರಳು ನೀತಿಗೆ ಕಾಯಿದೆ ವಾರಾಹಿ ನದಿಯಲ್ಲಿ ಬಾಕಿಯಾದ ಮರಳು ದಿಬ್ಬ ನಿರ್ಧಿಷ್ಟ ಕಾಲಾವಕಾಶದಲ್ಲಿ ತೆರವು ಮಾಡಲು ನಿರ್ಧಿಷ್ಠ ಸಮಯದಲ್ಲಿ ತೆರೆವು ಮಾಡಲು ಟೆಂಡರ್ ಕರೆಯುವಂತೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಹಾಯಕ ನಿರ್ದೇಶಕ ರಾಮ್‌ಜಿ ನಾಯ್ಕ್, ವಾರಾಹಿ ಹಾಗೂ ಹಾಲಾಡಿ ನದಿಯಲ್ಲಿ ಮರಳು ತೆಗೆಯುವ ೯ ದಿಬ್ಬ ಗುರುತಿಸಿದ್ದು, ಜಿಲ್ಲಾಧಿಕಾರಿ ಜೊತೆ ಮಾತನಾಡಿ ಟೆಂಡರ್ ಪ್ರಕ್ರಿಯೆಗೆ ಚಾಲನ ನೀಡಲಾಗುತ್ತದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಮರಳು ವಿತರಣೆ…
