ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕುಂಭಾಸಿ ಆನೆಗುಡ್ಡೆ ದೇವಸ್ಥಾನದ ಮುಖಮಂಟಪದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದ ಸಂದರ್ಭ ಗಾಯಗೊಂಡ ಮಹಿಳೆಯೊಬ್ಬರನ್ನು ಉಪಚರಿಸಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಲ್ಲದೇ ಅಸ್ತವ್ಯಸ್ತಗೊಂಡಿದ್ದ ವಾಹನ ಸಂಚಾರವನ್ನು ಸುಗಮಗೊಳಿಸುವ ಮೂಲಕ ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಮಾನವೀಯತೆ ಮೆರೆದ ಘಟನೆ ಶನಿವಾರ ನಡೆದಿದೆ. ಆರೋಗ್ಯ ಸಚಿವ ಶ್ರೀರಾಮುಲು ಉಡುಪಿಯಿಂದ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಉದ್ಘಾಟನೆಗಾಗಿ ಕಾಯುತ್ತಿದ್ದ ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ನಿಂದ ನಿರ್ಮಿಸಲಾದ ನೂತನ ಹೆರಿಗೆ ಆಸ್ಪತ್ರೆಯನ್ನು ಉದ್ಘಾಟಿಸಲು ಆಗಮಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಬರುತ್ತಿದ್ದ ವೇಳೆ ಕುಂಭಾಸಿ ಶ್ರೀ ಆನೆಗುಡ್ಡೆ ದೇವಸ್ಥಾನದ ದ್ವಾರಬಾಗಿಲಿನಲ್ಲಿ ಲಾರಿ ಬೈಕ್ ಹಾಗೂ ರಿಕ್ಷಾಗಳ ನಡುವೆ ಸಚಿವರ ಕಣ್ಣೆದುರೆ ಅಪಘಾತ ನಡೆದಿದೆ. ಕುಂಭಾಶಿ ರಸ್ತೆಯಲ್ಲಿ ಬೈಕ್ ಸವಾರರೋರ್ವರು ಲಾರಿಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದರು. ಇದೇ ಸಮಯದಲ್ಲಿ ಹಿಂದಿನಿಂದ ಬರುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪಲ್ಟಿಯಾಯಿತು. ಆಗ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಗಾಯಗೊಂಡಿದ್ದರು. ಹೆದ್ದಾರಿಯ ನಡುವೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿರುವ ಕೆರೆಗೆ ಅಲಂಕಾರಿಕ ಮೀನು ಸಾಕಣಕೆಗೆ ಮೀನುಕಾರಿಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸೆ.೨೫ ರಂದು ಮೀನುಗಳನ್ನು ಬಿಡುವುದರ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ ಪ್ರವಾಸಿ ಸ್ಥಳದ ಕೆರೆಗಳಿಗೆ ಅಲಂಕಾರಿಕ ಮೀನುಗಳನ್ನು ಸಾಕಣಿಕೆ ಮಾಡುವುದರಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ,ಮುಂದಿನ ದಿನಗಳಲ್ಲಿ ಪ್ರವಾಸಿ ತಾಣದ ಕೆರೆ,ದೇಸ್ಥಾನದ ಕೆರೆಗಳಿಗೆ ಅಲಂಕಾರಿಕ ಮೀನು ಬಿಡುವ ಯೋಜನೆ ರೂಪಿಸಲಾಗುವುದೆಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. ಇಲಾಖೆಯ ಉಪ ನಿರ್ದೇಕ ಗಣೇಶ್ ಮೀನು ಸಾಕಣಕೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಇಲಾಖೆಯ ಮುಖ್ಯಸ್ಥ ಶಿವಕುಮಾರ್, ಕಿರಣ್, ಚಂದ್ರಶೇಖರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ರಘು ತಿಂಗಳಾಯ, ಪಿ.ಡಿ.ಓ ಶೈಲಾ ಎಸ್ ಪೂಜಾರಿ, ಕಾರಂತ ಪ್ರತಿಷ್ಥಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಹಾಗೂ ಕಾರಂತ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಳವಾಡಿ ಯುವ ಗಾಯಕ ಸತೀಶ್ ರಾಮ್ ಕುಮಾರ್ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೆ.26ರಂದು ನಿಧನರಾದರು. ಸವಿ ಸವಿ ನೆನಪು ಕಲಾತಂಡವನ್ನು ಕಟ್ಟಿ ಸಾವಿರಾರು ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಿದ್ದ ಅವರು ಕಾರ್ಯಕ್ರಮ ಸಂಘಟನೆ, ನಿರೂಪಣೆ ಸೇರಿದಂತೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಸೌಂಡ್ಸ್ & ಲೈಟಿಂಗ್ಸ್ ಉದ್ಯಮವನ್ನು ಮಾಡಿಕೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾಲಾ ಕಾಲೇಜಿನಲ್ಲಿ ಉತ್ತಮ ಶಿಕ್ಷಣದ ಮೂಲಕ ಉತ್ತಮ ಬದುಕು ರೂಪಿಸುವ ಶಿಕ್ಷಕರಿಗೆ ಗೌರವ ಕೊಡುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಆದ್ಯ ಕರ್ತವ್ಯ. ತಂದೆ-ತಾಯಿಯ ಸಂಬಂಧದಂತೆ ಗುರು-ಶಿಷ್ಯರ ಸಂಬಂಧ ಅತ್ಯಂತ ಗೌರವಯುತವಾದುದು ಹಾಗೆಯೇ ಸಂಸ್ಥೆಯ ಶ್ರೇಯೋಭಿವೃದ್ಧಿಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದು ಬೈಂದೂರು ಶಾಸಕ, ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದಶಮಾನೋತ್ಸವ ವರ್ಷಾಚರಣೆಯ ಭಾಗವಾಗಿ ರಚಿಸಲಾದ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಹಳೆ ವಿದ್ಯಾರ್ಥಿ, ಉಡುಪಿ ಎಮ್.ಜಿ.ಎಮ್. ಕಾಲೇಜಿನ ಉಪನ್ಯಾಸಕ ರಾಮಚಂದ್ರ ಭಟ್ ದಿಕ್ಸೂಚಿ ಭಾಷಣ ಮಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶಟ್ಟಿ ಕೋವಾಡಿ, ಊರ್ಮನಿ ಅಂಗಡಿ ಡಾಟ್ಕಾಮ್ನ ಸಂಸ್ಥಾಪಕ ವಿ. ಗೌತಮ್ ನಾವಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರ್ಜುನ್ ಬಿ. ನಾಯ್ಕ್, ಕಾರ್ಯದರ್ಶಿ ಸುದೀಪ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ನಡೆದ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಕುಸ್ತಿ ಪಂದ್ಯಾಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಸಂದೇಶ್ ಪ್ರಭು, ಅಭಿಷೇಕ್ ಎಸ್ ಹಾಗೂ ವಿನಯ್ ಇವರು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ವಿನಯ್ ಕಂಚಿನ ಪದಕ ಪಡೆದಿರುತ್ತಾರೆ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಹಾಗೂ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಕೃಷ್ಣ ಮೊಗವೀರ ತರಬೇತಿಯನ್ನು ನೀಡಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ರಕ್ತಕ್ಕೆ ಪರ್ಯಾಯವಾದ ವಸ್ತುವಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತವನ್ನು ಮನುಷ್ಯರ ದಾನದಿಂದ ಮಾತ್ರ ಪಡೆಯಬಹುದು. ರಕ್ತದಾನ ಮಾಡುವುದು ಪ್ರತಿ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವೆಂದು ಭಾವಿಸಿ ಆಗಾದ ರಕ್ತದಾನ ಮಾಡಿದಲ್ಲಿ ಮಾತ್ರ ರೋಗಗ್ರಸ್ಥರು ಮತ್ತು ಗಾಯಗೊಂಡವರನ್ನು ಬದುಕಿಸಲು ಸಾಧ್ಯ ಎಂದು ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಚೇರ್ಮೆನ್ ಎಸ್.ಜಯಕರ ಶೆಟ್ಟಿ ಹೇಳಿದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ಕುಂದಾಪುರ ಘಟಕ, ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು. ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಆಗುತ್ತದೆ. ದೇಹದಲ್ಲಿ ಹೊಸ ರಕ್ತ ಚಾಲನೆಯಿಂದ ಕಾರ್ಯತತ್ಪರತೆ, ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಧಾರವಾಡ: ವೇಳಾಪಟ್ಟಿ ಇಲ್ಲದ ಬದುಕು ಹಳಿ ತಪ್ಪಿದ ರೈಲಿನಂತೆ ಇರುತ್ತದೆ. ಯುವಜನರು ನಿರ್ದಿಷ್ಟ ಗುರಿ ಇಟ್ಟುಕೊಳ್ಳುವುದಲ್ಲದೇ ಸಾಧನೆಗಾಗಿ ಸೂಕ್ತ ದಾರಿಯನ್ನು ಆಯ್ದುಕೊಳ್ಳುವುದು ಅತ್ಯಗತ್ಯ ಎಂದು ಧಾರವಾಡ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ರಾಹುಲ್ ಡೋಂಗ್ರೆ ಹೇಳಿದರು. ಅವರು ಶನಿವಾರ ನೆಹರು ಯುವ ಕೇಂದ್ರ ಸಂಘಟನಾ ಬೆಂಗಳೂರು ಹಾಗೂ ನೆಹರು ಯುವ ಕೇಂದ್ರ ಧಾರವಾಡ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಸಿಡಾಕ್ನಲ್ಲಿ ಆಯೋಜಿಸಲಾದ ಕ್ರಾಂತಿವೀರ ಭಗತ್ಸಿಂಗ್ ಅವರ ೧೧೨ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಗತ್ಸಿಂಗ್ ಅವರ ಭಾವಚಿತ್ರಕ್ಕೆ ಪುಪ್ಪಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ದೇಶಕ್ಕಾಗಿ ಸಾವಿರಾರು ಜನರು ಪ್ರಾಣತ್ಯಾಗ ಮಾಡಿದ್ದಾರೆ. ಆದರೆ ಕೆಲವರು ಇಂದಿಗೂ ಅಜರಾಮರಾಗಿ ಉಳಿದು ಭಾರತೀಯರ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಭಗತ್ಸಿಂಗ್ ಅವರಂತಹ ಕ್ರಾಂತಿವೀರರು ಭಾರತ ದೇಶದ ಯುವಕರಿಗೆ ನಿಜಕ್ಕೂ ಸ್ಥೂತಿಯಾಗಿದ್ದಾರೆ ಎಂದರು. ಈ ಸಂದರ್ಭ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಲಿಂಗರಾಜ್ ನಿಡುವಾನಿ, ನೆಹರು ಯುವ ಕೇಂದ್ರ ಧಾರವಾಡದ ಲೆಕ್ಕಾಧಿಕಾರಿಗಳಾದ ಎ. ಜಿ. ಪುರಾಣಿಕ್,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ಮುಚ್ಚಲು ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ನೆರೆ ಪರಿಹಾರ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ, ಜಿಲ್ಲಾ ಪಂಚಾಯತ್ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ ಉಸ್ತುವಾರಿ ಕಾರ್ಯದರ್ಶಿಗಳು ದುರಸ್ತಿ ಕಾರ್ಯಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಕುರಿತು ಜಿಲ್ಲಾಧಿಕರಿಗಳಿಗೆ ಪ್ರಸ್ತಾವನೆ ನೀಡುವಂತೆ ಸೂಚಿಸಿ, ಪಿ.ಡಬ್ಲ್ಯುಡಿ ರಸ್ತೆಗಳಲ್ಲಿ ಸಹ ಗುಂಡಿಗಳನ್ನು ಮುಚ್ಚುವಂತೆ ಸೂಚಿಸಿದರು. ಪಿ.ಡಬ್ಲ್ಯುಡಿ ಇಲಾಖೆಗೆ ಈಗಾಗಲೇ ೧೦.೮೫ ಕೋಟಿ ಅನುದಾನ ಬಿಡುಗಡೆಯಾಗಿದ್ದು, ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮರಳು ಸಮಸ್ಯೆಗೆ ಸಂಬಂದಿಸಿದಂತೆ, ಕೋಡಿ ಯಲ್ಲಿ ದಾಸ್ತಾನು ಮಾಡಿರುವ ಮರಳನ್ನು ಶೀಘ್ರದಲ್ಲಿ ವಿತರಿಸುವ ಕುರಿತು ಸಂಬಂದಪಟ್ಟ ಅಧಿಕಾರಿಗಳು ೨ ದಿನಗಳಲ್ಲಿ ಸ್ಥಳವನ್ನು ಪರಿಶೀಲಿಸಿ , ವರದಿ ನೀಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ತ್ರಾಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ತ್ರಾಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಇವರ ಸಂಯುಕ್ತ ಆಶ್ರಯದಲ್ಲಿ ತ್ರಾಸಿ ಗ್ರಾಮ ಮಟ್ಟದ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ತ್ರಾಸಿ ಅಂಬೇಡ್ಕರ್ ಸಭಾ ಭವನದಲ್ಲಿ ಶುಕ್ರವಾರ ಜರಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ನಮ್ಮ ಹಿಂದಿನ ಸಾಂಪ್ರದಾಯಿಕ ಅಡುಗೆ ಪದ್ಧತಿಯಿಂದ ನಾವೆಲ್ಲರೂ ಹಿಂದೆ ಸರಿಯುತ್ತಿದ್ದೇವೆ. ಇಂದಿನ ದಿನಗಳಲ್ಲಿ ಕೃತಕ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ ಅನೇಕ ರೀತಿಯ ಸಮಸ್ಯೆಗಳು ನಮ್ಮಲ್ಲಿ ಕಾಣಿಸಿಕೊಳ್ಳುತ್ತಿದೆ. ಆದ್ದರಿಂದ ನಮ್ಮ ಪೂರ್ವಜರು ಅಳವಡಿಸಿಕೊಂಡು ಬಂದಿರುವ ಅಹಾರ ಪದ್ಧತಿಯ ಬಳಕೆಗೆ ಎಲ್ಲರೂ ಮುಂದಾಗಬೇಕು. ಇದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಗರ್ಭಿಣಿಯರಲ್ಲಿ ಪೌಷ್ಠಿಕಾಂಶದ ಕೊರತೆಯಿಂದ ಹುಟ್ಟುವ ಮಕ್ಕಳಲ್ಲಿ ನ್ಯೂನತೆ ಕಂಡು ಬರುತ್ತದೆ. ಹೀಗಾಗಿ ಗರ್ಭಿಣಿಯರು ಸದಾ ಪೌಷ್ಠಿಕ ಆಹಾರ ಸೇವಿಸುತ್ತಿರಬೇಕು. ಎಲ್ಲರೂ ಪೌಷ್ಠಿಕಾಂಶದ ಆಹಾರವನ್ನು ಸೇವಿಸುವುದನ್ನು ರೂಢಿಮಾಡಿಕೊಳ್ಳಬೇಕು…
ಕುಂದಾಪ್ರ ಡಾಟ್ ಕಾಂ ಸುದ್ದಿ. ವಿದ್ಯಾಗಿರಿ: ಭಾರತದಲ್ಲಿ ಆರಾಧಿಸಬಹುದಾದ ಶ್ರೇಷ್ಠ ಗ್ರಂಥ ಸಂವಿಧಾನ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಪ್ರಜಾಪ್ರಭುತ್ವ ಮತ್ತು ಭಾರತೀಯ ಸಂವಿಧಾನದ ಅಡಿಪಾಯ ಎಂದು ಖ್ಯಾತ ವಕೀಲರು ಹಾಗೂ ವಾಗ್ಮಿ ಸುಧೀರ್ಕುಮಾರ್ ಮುರೋಳಿ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಲಾದ ಮಾಧ್ಯಮ ಮತ್ತು ಕಾನೂನು ಎಂಬ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಪತ್ರಕರ್ತರು ಯಾವಾಗಲೂ ಮಾಧ್ಯಮ ಕಾನೂನು ಮತ್ತು ಕಾಯ್ದೆಗಳ ಬಗ್ಗೆ ತಿಳಿದುಕೊಂಡಿರಬೇಕು. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಸುದ್ದಿಗಳ ನೈಜತೆಯನ್ನು ಅರಿತು ಪ್ರಸಾರ ಮಾಡಬೇಕು. ಕೆಲವೊಮ್ಮೆ ಸುದ್ದಿಗಳನ್ನು ಕೊಡುವುದರಿಂದ ಆಗುವ ಅಪಾರ್ಥಕ್ಕೆ ಇಡೀ ಸಮಾಜ ಬೆಲೆ ತೆರಬೇಕಾಗುತ್ತದೆ. ಏಕಾಧಿಪತ್ಯದಲ್ಲಿ ಜನರಿಗೆ ಪ್ರಶ್ನಿಸುವಂತಹ ಅವಕಾಶಗಳಿರುವುದಿಲ್ಲ. ನಮ್ಮಲ್ಲಿನ ಅಂತರಂಗದ ಸಿದ್ಧಾಂತಗಳು ಬದಲಾಗಬೇಕಿದೆ ಎಂದರು. ಅನುವಾದಕರಾದವರು ಪ್ರತಿಯೊಂದು ವಿಷಯವನ್ನು ಅರಿತು ಅನುವಾದಿಸಬೇಕು. ಎರಡನೇ ಮಹಾಯುದ್ಧದ ಸಂಧರ್ಭದಲ್ಲಿ ಜಪಾನ್ನ ವಿರುದ್ದ ದೇಶಗಳು ಜಪಾನ್ ಯುದ್ದ ಮಾಡುತ್ತದೋ ಅಥವಾ ಶರಣಾಗುತ್ತದೋ ಎಂದು ಕೇಳಿದಾಗ…
