ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:ತಾಲೂಕಿನ ತಲ್ಲೂರು ಫ್ಯಾಮಿಲಿ ಟ್ರಸ್ಟ್ ರಿ. ಪ್ರವರ್ತಿತ ನಾರಾಯಣ ವಿಶೇಷ ಮಕ್ಕಳ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ನೂತನ ತರಗತಿ ಕೊಠಡಿ ಮತ್ತು ಅಡುಗೆ ಕೋಣೆಯ ಉದ್ಘಾಟನಾ ಸಮಾರಂಭ ಭಾನುವಾರ ಶಾಲೆಯ ಬಯಲು ಆಂಗಣದಲ್ಲಿ ಜರುಗಿತು. ಶಾಲೆಯ ಮಧ್ಯಾಹ್ನದೂಟದ ಅಡುಗೆ ಕೋಣೆ ಹಾಗೂ ಅಡುಗೆ ಸಲಕರಣೆಗಳನ್ನು ಒದಗಿಸಿದ ಗೋವಿಂದ ಬಾಬು ಪೂಜಾರಿ ಅವರ ಹೆತ್ತವರಾದ ಬಾಬು ಪೂಜಾರಿ – ಮಂಜಮ್ಮ ದಂಪತಿಗಳು ಉದ್ಘಾಟಿಸಿದರು. ನೂತನ ಶಾಲಾ ಕೊಠಡಿಗಳನ್ನು ಸೆಲ್ಕೊ ಜನರಲ್ ಮ್ಯಾನೇಜರ್ ಜಗದೀಶ್ ಪೈ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಸೆಲ್ಕೊ ಇಂಡಿಯಾದ ಜನರಲ್ ಮ್ಯಾನೆಜರ್ ಜಗದೀಶ ಪೈ ಮಾತನಾಡಿ, ವಿಕಲಚೇತನರಿಗೆ ಕರುಣೆಯ ಅಗತ್ಯವಿಲ್ಲ. ಬದಲಿಗೆ ಅವಕಾಶಗಳು ಬೇಕಿದೆ. ಅವರಿಗೂ ತರಬೇತಿ ನೀಡುವುದು, ಮುಖ್ಯವಾಹಿನಿಯಲ್ಲಿ ಸೇರಿಸಿಕೊಂಡು ಎಲ್ಲರಂತೆ ಬದುಕುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಬದುಕಿನಲ್ಲಿ ಕಷ್ಟಪಟ್ಟು ಬೆಳೆದು ಬಂದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನುಷ್ಯನ ವ್ಯಕ್ತಿಯನ್ನು ಗುರುತಿಸುವುದು ಹಣಬಲ, ಜನಬಲ ಅಥವಾ ಬೇರಾವುದೇ ಬಲಗಳಿಂದಲ್ಲ, ಬದಲಾಗಿ ಆತನಲ್ಲಿರುವ ಸಜ್ಜನಿಕೆ, ಪ್ರಾಮಾಣಿಕತೆ, ಮಮತೆ ಹಾಗೂ ಎಲ್ಲರನ್ನೂ ಗೌರವಿಸುವ ಗುಣಗಳಿಂದ. ಅದಕ್ಕೆ ಅನ್ವರ್ಥವೆಂಬಂತೆ ಬದುಕುತ್ತಿರುವವರು ಹರೇಕಳ ಹಾಜಬ್ಬ ಎಂದು ರಾಜ್ಯ ಮುಜರಾಯಿ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ವೀಡಿಯೋ ನೋಡಿ ಅವರು ಸೋಮವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಜರುಗುತ್ತಿರುವ ಮೂರು ದಿನಗಳ ’ಸುರಭಿ ಜೈಸಿರಿ’ ಕಾರ್ಯಕ್ರಮದಲ್ಲಿ ಅಕ್ಷರಸಂತ ಹರೇಕಳ ಹಾಜಬ್ಬ ಅವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನಿಸಿ ಮಾತನಾಡಿ ಯಾವ ಸ್ವಾರ್ಥ, ದುರಾಲೋಚನೆ, ಫಲಾಪೇಕ್ಷೆ ಇಲ್ಲದೇ ಬದುಕೇ ಕಾಯಕ ಎಂದು ತಿಳಿದು ಬಸ್ ನಿಲ್ದಾಣದಲ್ಲಿ ಕಿತ್ತಲೆ ಮಾರಿ ಬದುಕು ಸಾಗಿಸುತ್ತಿದ್ದ ಒಬ್ಬ ಮನುಷ್ಯ ಶಾಲೆ ಕಟ್ಟಿ ನೂರಾರು ಮಕ್ಕಳ ವಿದ್ಯಾರ್ಜನೆಗೆ ದಾರಿ ಮಾಡಿಕೊಡುತ್ತಾರೆಂದರೆ ಅದಕ್ಕಿಂತ ದೊಡ್ಡ ಸಾಧನೆ ಯಾವುದಿದೆ ಎಂದರು. ಅಟಲ್ ಬಿಹಾರಿ ವಾಜಪೇಯಿ ಅವರು ಪದ್ಮವಿಭೂಷಣ ಪ್ರಶಸ್ತಿ ಪಡೆಯುವ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ವತ್ತಿನಕಟ್ಟೆ ತ್ರಿಶಕ್ತಿ ಸ್ವರೂಪಿಣಿ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಇದೇ 16 ರಿಂದ 19 ರವರೆಗೆ ಅಷ್ಟಬಂಧಪೂರ್ವಕ ಬ್ರಹ್ಮಕಲಶೋತ್ಸವ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಬಿ. ಕೃಷ್ಣಮೂರ್ತಿ ನಾವಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಮಹಾಸತಿ ಅಮ್ಮನವರನ್ನು ಆರಾಧಿಸುವ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಈ ಸಂದರ್ಭ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಾಲ್ಕು ದಿನ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ 35-40 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅದಕ್ಕೆ ಪೂರಕವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ’ ಎಂದರು. ಕಾರ್ಯಕ್ರಮಗಳ ವಿವರ: ಇದೇ 16ರ ಬೆಳಿಗ್ಗೆ ಸೇನೇಶ್ವರ ದೇವಸ್ಥಾನ ಮತ್ತು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಬಳಿಕ ವತ್ತಿನಕಟ್ಟೆಗೆ ಮೆರವಣಿಗೆ ನಡೆಯುವುದು. ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಬೈಂದೂರು ತಾಲ್ಲೂಕು ಘಟಕ, ಯೋಜನೆಯ ಬಿ. ಸಿ. ಟ್ರಸ್ಟ್ ಮತ್ತು ಹಿರಿಯ ಭಜನಾ ಹಾಡುಗಾರರ ಸಹಯೋಗದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಸೂಕ್ತ ಸಮಯದಲ್ಲಿ ಗುರುತಿಸಿ, ಪ್ರೋತ್ಸಾಹಿಸಿದರೆ ಭವಿಷ್ಯದಲ್ಲಿ ಅವರು ಉತ್ತಮ ವೇದಿಕೆಯನ್ನು ರೂಪಿಸಿಕೊಂಡು, ಬದುಕಿನ ದಾರಿ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ರವಿವಾರ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ವಿಂಶತಿ ಸಂಭ್ರಮದೊಂದಿಗೆ ಆಯೋಜಿಸಲಾದ ಸುರಭಿ ಜೈಸಿರಿ 2020 ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಮಾತನಾಡಿ ಕಲೆ, ಸಾಹಿತ್ಯ, ಸಂಗೀತ ಎಲ್ಲವೂ ಮನುಷ್ಯನ ಬದುಕನ್ನು ಉತ್ತಮಗೊಳಿಸುತ್ತವೆ. ಎಂತಹ ಸನ್ನಿವೇಶವನ್ನೂ ಎದುರಿಸುವ ಗಟ್ಟಿತನ ರೂಪಿಸುತ್ತವೆ. ಇಂತಹ ಚಟುವಟಿಕೆಗಳು ಗ್ರಾಮೀಣ ಭಾಗದಲ್ಲಿ ಹೆಚ್ಚೆಚ್ಚು ನಡೆಯಬೇಕು ಮತ್ತು ಇವೆಲ್ಲವನ್ನೂ ಸಂಘಟಿಸುವ ಸಂಸ್ಥೆಗಳಿಗೆ ಬಲ ತುಂಬುವ ಕೆಲಸವನ್ನು ಊರಿನವರು ಮಾಡಬೇಕು ಎಂದು ಆಶಿಸಿದರು. ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲರಾದ ಎಂ. ಬಾಲಕೃಷ್ಣ ಶೆಟ್ಟಿ ಮಾತನಾಡಿ ದೀಪವೊಂದನ್ನು ಪ್ರಜ್ವಲಿಸುವ ಬತ್ತಿ ತನ್ನನ್ನು ತಾನೇ ದಹಿಸಿಕೊಂಡು ಬೆಳಕು ನೀಡುವಂತೆ, ಸಂಘ ಸಂಸ್ಥೆಗಳು ಉಳಿದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮ ಬಿಗ್ ಬಾಸ್ ಸೀಸನ್-7ರ ವಿನ್ನರ್ ಆಗಿ ಕುಂದಾಪುರ ಮೂಲದ ನಟ ಶೈನ್ ಶೆಟ್ಟಿ ಅವರು ಮೂಡಿಬಂದಿದ್ದಾರೆ. ವಿಜೇತ ಶೈನ್ ಶೆಟ್ರಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ರೋಫಿ ಹಾಗೂ 50 ಲಕ್ಷ ರೂ. ನಗದು ಬಹುಮಾನವನ್ನು ವಿತರಿಸಿದರು. ಶೈನ್ ಶೆಟ್ಟಿ ಅವರು ಬಿಗ್‌ಬಾಸ್‌ನಲ್ಲಿ ತಮ್ಮ ಆಟ, ಚಟುವಟಿಕೆ, ಅವರ ಜಂಟಲ್‌ಮ್ಯಾನ್ ಅಟಿಟ್ಯೂಡ್‌ಗಳಿಂದಾಗಿ ಜನರಿಗೆ ದಿನದಿಂದ ದಿನಕ್ಕೆ ಇಷ್ಟವಾಗುತ್ತಾ ಹೋಗಿದ್ದರು. ಹಾಗಾಗಿ ಅವರನ್ನು ಕೊನೆಯವರೆಗೆ ಉಳಿಸಿಕೊಂಡು ಬಂದಿದ್ದು, ಅಂತಿಮವಾಗಿ ಜನರು ತಮ್ಮ ವೋಟಿಂಗ್ ಮೂಲಕ ಶೈನ್ ಶೆಟ್ಟಿಗೆ ಜಯ ತಂದುಕೊಟ್ಟಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮಜಾ ಟಾಕೀಸ್ ಖ್ಯಾತಿಯ ನಟ ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ. ಪ್ರತಿಭಾವಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ವಾಸುಕಿ ವೈಭವ್ ಅವರು ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಬಿಗ್ ಬಾಸ್ ನಲ್ಲಿ 18 ಜನ ಸ್ಪರ್ಧಿಗಳು ಮನೆಯೊಳಗೆ ಪ್ರವೇಶಿಸಿದ್ದರು. ಅಂತಿಮವಾಗಿ ಶೈನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನೂತನ ರಾಜಗೋಪುರ ನಿರ್ಮಾಣಕ್ಕೆ ಶಿಲನ್ಯಾಸ ಕಾರ್ಯಕ್ರಮ ಶುಕ್ರವಾರ ದೇವಸ್ಥಾನದಲ್ಲಿ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ನೆರವೇರಿತು. ತಂತ್ರಿ ಮಂಜುನಾಥ ಅಡಿಗ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆಸಿದರು. ರಾಜಗೋಪುರ ನಿರ್ಮಾಣದ ದಾನಿಗಳಾದ ಯು.ಬಿ.ಶೆಟ್ಟಿ ದಂಪತಿ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭ ಬೈಂದೂರು ತಹಶಿಲ್ದಾರ್ ಬಸಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಐಎಫ್‌ಎಸ್ ನಿವೃತ ಅಧಿಕಾರಿ ಜಗನಾಥ ಶೆಟ್ಟಿ ಉಪ್ಪುಂದ ಗ್ರಾಮ ಪಂಚಾಯತ್ ಸದಸ್ಯ ಸಂದೇಶ ಭಟ್, ನಾಗಾರಾಜ ಶೇಟ್, ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಧರ್ಮದರ್ಶಿ ಜಯರಾಮ ಶೆಟ್ಟಿ ಬಿಜೂರು, ಬೈಂದೂರು ವಲಯ ನಾಡ ದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಸ್ಥಳೀಯ ಮುಖಂಡರಾದ ಮದನ್ ಕುಮಾರ್ ಉಪ್ಪುಂದ, ಆಡಳಿತಾಧಿಕಾರಿ ಈ ಕುಮಾರ್, ಸೀತಾರಾಮ ಶೆಟ್ಟಿ, ದೇವಸ್ಥಾನದ ಪ್ರಧಾನ ಅರ್ಚಕ ಪ್ರಕಾಶ ಉಡುಪ ಹಾಗೂ ದೇವಸ್ಥಾನದ ಸಿಬಂದಿ ಸುರೇಶ ಭಟ್, ಗಣೇಶ ದೇವಾಡಿಗ, ಅರ್ಚಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಚುನಾವಣೆಗಳ ಸವಾಲು, ಪಕ್ಷದ ಕಾರ್ಯಕರ್ತನಿಗೆ ಸ್ಪಂದನೆ ಮತ್ತು ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ನಡುವೆ ಸಮನ್ವಯತೆ ಸಾಧಿಸುವುದು ಜವಾಬ್ದಾರಿ ನಿಭಾಯಿಸುವ ಹೊಣೆ ನನ್ನದಾಗಿದ್ದು, ಇದರಲ್ಲಿ ಯಾವುದೇ ರಾಜಿಯಿಲ್ಲದೇ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಬೈಂದೂರು ಮಂಡಲ ಬಿಜೆಪಿ ನೂತನ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಶುಕ್ರವಾರ ಜರುಗಿದ ಸಮಾರಂಭಲ್ಲಿ ನೂತನ ಅಧ್ಯಕ್ಷರಾಗಿ ಪಕ್ಷದ ಧ್ವಜ ಸ್ವೀಕರಿಸಿದ ಬಳಿಕ ಮಾತನಾಡಿ ಮಂಡಲ ಅಧ್ಯಕ್ಷ ಹುದ್ದೆ ದೊಡ್ಡ ಜವಾಬ್ದಾರಿಯಾಗಿದ್ದು ಎಲ್ಲಾ ಕಾರ್ಯಕರ್ತರ ಸಹಕಾರದೊಂದಿಗೆ, ಪಕ್ಷವನ್ನು ಕಟ್ಟುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಮುಂಬರುವ ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಸಂಘಟನಾತ್ಮವಾಗಿ ಎದುರಿಸಲು ಸಿದ್ದರಾಗೋಣ ಎಂದು ಕರೆ ನೀಡಿದರು. ಬೈಂದೂರು ಮಂಡಲದ ನಿರ್ಗಮಿತ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಮಾತನಾಡಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವಲ್ಲಿ ಹಾಗೂ ದೇಶ, ಹಿಂದೂತ್ವದ ವಿಚಾರಧಾರೆ, ನರೇಂದ್ರ ಮೋದಿಯವರ ವರ್ಚಸ್ಸನ್ನು ಮುಂದಿಟ್ಟುಕೊಂಡು ಪಕ್ಷದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಸ್ಥೆಯಲ್ಲಿ ಸಮಾಜಕ್ಕಾಗಿ ಏನಾದರೂ ಮಾಡಬೇಕೆಂಬ ಹಂಬಲವಿದ್ದಾಗ ಮಾತ್ರ ಅಲ್ಲಿ ಅತ್ಯುತ್ತಮ ಯೋಜನೆಗಳು ಹುಟ್ಟಿಕೊಳ್ಳುತ್ತವೆ. ಉತ್ತಮ ಸಂಘ-ಸಂಸ್ಥೆಗಳು ವ್ಯಕ್ತಿತ್ವ ರೂಪಿಸುವ ಕೆಲಸವನ್ನು ಮಾಡುತ್ತವೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಸುರಭಿ ರಿ. ಬೈಂದೂರು ಹಾಗೂ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಆಶ್ರಯದಲ್ಲಿ ಫೆ.೮ರಿಂದ ಜರುಗಲಿರುವ ಶಿಶಿರ ನಾಟಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಕಳೆದ ೧೯ ವರ್ಷಗಳಿಂದ ಸುರಭಿ ಸಂಸ್ಥೆಯು ಬೈಂದೂರಿಗೆ ವಿಭಿನ್ನ ಕಾರ್ಯಕ್ರಮಗಳನ್ನು ನೀಡಿ ಜನಮಾನಸದಲ್ಲಿ ಗುರುತಿಸಿಕೊಂಡಿರುವುದಲ್ಲದೇ ಬೈಂದೂರಿನ ಹೆಸರನ್ನು ಎಲ್ಲೆಡೆಯೂ ಪಸರಿಸುವಲ್ಲಿ ತನ್ನದೇ ಆದ ಕೊಡುಗೆ ನೀಡಿದೆ ಎಂದರು. ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ಜಿ. ತಿಮ್ಮಪ್ಪಯ್ಯ ಮಯ್ಯಾಡಿ, ಜೊತೆ ಕಾರ್ಯದರ್ಶಿ ಅಬ್ದುಲ್ ರವೂಫ್, ನಿರ್ದೇಶಕ ಸುಧಾಕರ ಪಿ. ಬೈಂದೂರು, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಗತ್ತು ಸ್ವರ್ಧಾತ್ಮಕ ಸಾಗುತ್ತಿದ್ದು, ಯುವಜನತೆ ಹೊಸ ಸಾಧ್ಯತೆಗಳಿಗೆ ತೆರೆದುಕೊಂಡು ಗಟ್ಟಿಯಾಗಿ ನಿಲ್ಲುವ, ಬದುಕಿನಲ್ಲಿ ಗೆಲ್ಲವ ವಿಶ್ವಾಸ ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಬಸ್ರೂರು ಶಾರದಾ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪಾಂಡುರಂಗ ಹೇಳಿದರು. ಅವರು ನೆಹರು ಯುವ ಕೇಂದ್ರ ಉಡುಪಿ ಹಾಗೂ ಮೂಕಾಂಬಿಕಾ ಯುತ್ ಕ್ಲಬ್ ಬೈಂದೂರು ಆಶ್ರಯದಲ್ಲಿ ಬೈಂದೂರಿನ ಮೂಕಾಂಬಿಕಾ ಕಾಂಪ್ಲೆಕ್ಸ್ ಸಭಾಭವನದಲ್ಲಿ ಸೋಮವಾರ ಜರುಗಿದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಎಲ್ಲರಿಗೂ ಬದುಕಿನಲ್ಲಿ ಸಂತೋಷದ ದಿನಗಳನ್ನು ಕಾಣುವ ಕಾತುರ ಇರುತ್ತದೆ. ಆದರೆ ಕಷ್ಟಪಡಲು ಯಾರೂ ತಯಾರಿರುವುದಿಲ್ಲ. ಪರಿಶ್ರಮವಿಲ್ಲದೇ ಯಶಸ್ಸು ಪಡೆಯುವುದು ಅಸಾಧ್ಯ ಎಂದ ಅವರು. ಯುವಜನರಲ್ಲಿ ಮೊಬೈಲ್ ಅತಿಯಾದ ಬಳಕೆಯಿಂದಾಗಿ ಮಾನವ ಸಂಬಂಧಗಳು ದೂರವಾಗುತ್ತಿವೆ. ನಾನು ಎಂಬ ಅಹಂ ಭಾವವೂ ಆವರಿಸಿಕೊಳ್ಳುತ್ತಿದೆ. ಇದನ್ನು ಮೆಟ್ಟಿ ನಿಂತಾಗಲೇ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದರು. ಮೂಕಾಂಬಿಕಾ ಯುತ್ ಕ್ಲಬ್ ಅಧ್ಯಕ್ಷ ಭಾಸ್ಕರ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರದ ಸ್ವಯಂಸೇವಕ ಸುನಿಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೆಹರು ಯುವ ಕೇಂದ್ರ ಉಡುಪಿ ಹಾಗೂ ಸುರಭಿ ರಿ. ಬೈಂದೂರು ಸಂಸ್ಥೆಯ ಆಶ್ರಯದಲ್ಲಿ ಗುರುವಾರ ಇಲ್ಲಿನ ರೋಟರಿ ಭವನದಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೈಂದೂರು ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಮಾತನಾಡಿ ಮಹತ್ಮಾ ಗಾಂಧಿಯವರ ಸಿದ್ಧಾಂತವನ್ನು ಆಚರಣೆ ತರುವ ಕೆಲಸವಾದರೆ ಅದುವೇ ಅವರಿಗೆ ನೀಡಬಹುದಾದ ನಿಜವಾದ ಗೌರವ ಎಂದರು. ಎಲ್ಲಾ ಧರ್ಮಗಳ ಆಶಯ ಒಂದೇ ಆಗಿದ್ದು, ಮನುಷ್ಯ ವರ್ಗವನ್ನು ಗೌರವಿಸಿ ಬದುಕಬೇಕು ಎಂಬ ಭಾವನೆ ಇದ್ದರೆ ಮಾತ್ರ ಮನುಷ್ಯನ ಬದುಕು ಉತ್ತಮವಾಗಲು ಹಾಗೂ ಭಾವೈಕ್ಯತೆ ಮೂಡಲು ಸಾಧ್ಯವಿದೆ ಎಂದರು ಈ ಸಂದರ್ಭ ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹತ್ಮಾ ಗಾಂಧೀಜಿ ಅವರನ್ನು ಸ್ಮರಿಸಿ ಬಳಿಕ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ನೆಹರು…
