Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯಚಿತ್ರಗಾರರ ಮೇಲೆ ಹರಿಹಾಯುವ ಪ್ರವೃತ್ತಿ ಹೆಚ್ಚುತ್ತಿದೆ ಆದರೆ ಮಾಡುವ ಕೆಲಸದಲ್ಲಿ ಬದ್ಧತೆ ಇದ್ದರೆ ಅಂತಹ ಶಕ್ತಿಗಳಿಗೆ ಹೆದರುವ ಅಗತ್ಯವೇ ಇಲ್ಲ ಎಂದು ಸಿನೆಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದರು. ಅವರು ಶನಿವಾರ ಕುಂದಾಪುರದ ಕಲಾಮಂದಿರದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರದ ನೇತೃತ್ವದಲ್ಲಿ ನಡೆದ ನಾಲ್ಕು ದಿನಗಳ ಕಾರ್ಟೂನು ಹಬ್ಬ ಉದ್ಘಾಟಿಸಿ ಮಾತನಾಡಿ ಸಮಾಜವನ್ನು ವಿಡಂಬನಾ ದೃಷ್ಟಿಯಿಂದ ನೋಡಲು ಸಾಧ್ಯವಾದರೆ ಮಾತ್ರ ಉತ್ತಮ ಕಾರ್ಟೂನಿಷ್ಠ್ ಆಗಲು ಸಾಧ್ಯ. ಅದು ರಾಜಕೀಯ ಕಾರಣಗಳಿಂದಾಗಿ ವಿವಾದಕ್ಕೊಳಗಾದರೇ, ಅದಕ್ಕೆ ಪ್ರತಿಕ್ರಿಯಿಸುತ್ತಾ ಕೂರದೇ ಮುಂದೆ ಸಾಗುವುದು ಒಳಿತು ಎಂದರು. ಸಿನೆಮಾಗಳಲ್ಲಿ ನಮ್ಮ ಸುತ್ತಮುತ್ತಲಿನ ಕಥೆಯನ್ನೇ ಹೇಳಲು ಹೊರಟಾಗ ಅದರಲ್ಲಿನ ಕಥಾವಸ್ತು ಗಟ್ಟಿಯಾಗುತ್ತದೆ, ಜನರಿಗೂ ಹತ್ತಿರವಾಗುತ್ತದೆ. ಹಾಗೆಯೇ ಭಾರತೀಯ ಶಿಕ್ಷಣ ಪದ್ಧತಿಯನ್ನು ಅಳವಡಿಸಿಕೊಂಡಾಗ ನಾವು ಗಟ್ಟಿಯಾಗಲು, ನಮ್ಮತನ ಉಳಿಸಿಕೊಳ್ಳಲು ಸಾಧ್ಯವಿದೆ. ಬ್ರಿಟೀಷರ ಕಾಲದ ಗುಮಾಸ್ತವಾಗುವ ಶಿಕ್ಷಣ ಬದಲಾಗಬೇಕಿದೆ ಎಂದರು. ರಿಷಬ್ ಶೆಟ್ಟಿ ಅವರಿಗೆ ಕುಂದಾಪುರ ಸರಕಾರಿ ಶಾಲೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಾಂಧೀಜಿಯವರ ಚಿಂತನೆ ಬ್ರಿಟೀಷರಿಂದ ಸ್ವಾತಂತ್ರ್ಯ ಪಡೆಯುವುದಕ್ಕಷ್ಟೇ ಸೀಮಿತವಾಗಿರದೇ ಭಾರತೀಯರ ಆತ್ಮ ವಿಕಾಸ ಹಾಗೂ ಸ್ವರಾಜ್ ಕಲ್ಪನೆಯನ್ನು ಎಚ್ಚರಿಸುವುದೂ ಆಗಿತ್ತು. ನಮ್ಮೊಳಗಿನ ಸ್ವಾತಂತ್ರ್ಯ ಜಾಗೃತಗೊಳ್ಳಲು ಆತ್ಮ ವಿಕಾಸ ಅಗತ್ಯವೆಂಬುದನ್ನು ಅರಿತಿದ್ದ ಗಾಂಧಿ, ಭಾರತೀಯ ಶಿಕ್ಷಣ ಪದ್ದತಿಯಿಂದ ಅದು ಸಾಕಾರಗೊಳ್ಳುತ್ತದೆ ಎಂಬುದನ್ನೂ ಪ್ರತಿಪಾದಿಸಿದ್ದರು ಎಂದು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಹೇಳಿದರು. ಅವರು ಶನಿವಾರ ಕುಂದಾಪುರದ ಕಲಾಮಂದಿರದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರದ ನೇತೃತ್ವದಲ್ಲಿ ನಡೆದ ನಾಲ್ಕು ದಿನಗಳ ಕಾರ್ಟೂನು ಹಬ್ಬ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ 1915ರಲ್ಲಿ ದಕ್ಷಿಣ ಆಫ್ರಿಕಾದಿಂದ ಮರಳಿದಾಗ ಗಾಂಧೀಜಿ ನೋಡಿದ ಭಾರತ ಭಿನ್ನವಾಗಿತ್ತು. ಅಸ್ಪಶ್ಯತೆ ನಿವಾರಣೆ, ಮಹಿಳಾ ಸಬಲೀಕರಣ ಹಾಗೂ ಕೋಮು ಸೌಹಾರ್ದತೆಯನ್ನು ಕಾಪಾಡುವ ಬಗೆಗೆ ಅವರು ಒತ್ತು ನೀಡಿದ್ದರು. ಸ್ವಾತಂತ್ರ್ಯ ಚಳುವಳಿಯೊಂದಿಗೆ ದೇಶದ ಆಂತರಿಕ ಸ್ವಾತಂತ್ರ್ಯದ ಸಂಕೊಲೆಗಳ ವಿರುದ್ಧ ಹೋರಾಟ ಆರಂಭಿಸಿದ್ದರು. ಮಧ್ಯರಾತ್ರಿಯಲ್ಲಿ ಮಹಿಳೆ ಧೈರ್ಯವಾಗಿ ರಸ್ತೆಯಲ್ಲಿ ತಿರುಗುವಂತಾದರೇ ಅಂದೇ ದೇಶಕ್ಕೆ ನಿಜವಾಗಿಯೂ ಸ್ವಾತಂತ್ರ್ಯ ದೊರೆತಂತೆ ಎಂದಿದ್ದ ಗಾಂಧಿಜಿಯವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ, ಉಡುಪಿ ಹಾಗೂ ಸಹಕಾರ ಇಲಾಖೆ ಜಂಟಿಯಾಗಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಿದ್ದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ 2019ರ ಕಾರ್ಯಕ್ರಮದಲ್ಲಿ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಕುಂದಾಪುರ ಈ ಸಂಸ್ಥೆಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಜಾನ್ಸನ್ ಡಿಅಲ್ಮೇಡಾ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಸ್ಕಲ್ ಡಿಸೋಜಾ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಉಡುಪಿ ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಎನ್. ಗಂಗಣ್ಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ನಿರ್ದೇಶಕ ಎಸ್. ರಾಜು ಪೂಜಾರಿ, ದಕ್ಷಿಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಅಧ್ಯಕ್ಷರ ಕಚೇರಿಯಲ್ಲಿ ಬುಧವಾರ ನಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು. ಈ ಸಂದರ್ಭ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ ಹೊಸ ಮರಳು ನೀತಿಗೆ ಅನುಸರಿಸುತ್ತಾ ಕುಳಿತರೆ ಮತ್ತೆ ಮಳೆಗಾಲ ಆರಂಭವಾಗುತ್ತದೆ. ಬಡವರಿಗೆ ಮರಳು ಅವಶ್ಯವಿದ್ದು, ಮರಳು ಎಲ್ಲರಿಗೂ ಸುಲಭ ಬೆಲೆಯಲ್ಲಿ ಸಿಗಬೇಕು. ಮರಳು ದಿಬ್ಬ ತೆರವು ಮಾಡಲು ಹೊಸ ಮರಳು ನೀತಿಗೆ ಕಾಯಿದೆ ವಾರಾಹಿ ನದಿಯಲ್ಲಿ ಬಾಕಿಯಾದ ಮರಳು ದಿಬ್ಬ ನಿರ್ಧಿಷ್ಟ ಕಾಲಾವಕಾಶದಲ್ಲಿ ತೆರವು ಮಾಡಲು ನಿರ್ಧಿಷ್ಠ ಸಮಯದಲ್ಲಿ ತೆರೆವು ಮಾಡಲು ಟೆಂಡರ್ ಕರೆಯುವಂತೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಹಾಯಕ ನಿರ್ದೇಶಕ ರಾಮ್‌ಜಿ ನಾಯ್ಕ್, ವಾರಾಹಿ ಹಾಗೂ ಹಾಲಾಡಿ ನದಿಯಲ್ಲಿ ಮರಳು ತೆಗೆಯುವ ೯ ದಿಬ್ಬ ಗುರುತಿಸಿದ್ದು, ಜಿಲ್ಲಾಧಿಕಾರಿ ಜೊತೆ ಮಾತನಾಡಿ ಟೆಂಡರ್ ಪ್ರಕ್ರಿಯೆಗೆ ಚಾಲನ ನೀಡಲಾಗುತ್ತದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಮರಳು ವಿತರಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಏರಿಕೆ ಮಾಡುವ ಸಲುವಾಗಿ ಕಿಂಡಿ ಅಣೆಕಟ್ಟುಗಳನ್ನು ಗುರುತಿಸಿ ಹೂಳೆತ್ತುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶೀಘ್ರವೇ ಗ್ರಾಪಂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಹೇಳಿದರು. ಕುಂದಾಪುರ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕಳೆದ ವರ್ಷ ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿ ಕೆಲಸಗಳಿಗೆ ೭೦ ಕೋಟಿ ರೂ.ಅನುದಾನ ತಂದಿದ್ದು, ಪ್ರಸಕ್ತ ೩೦೦ ಕೋಟಿ ಅನುದಾನ ತಂದಿದ್ದೇನೆ. ಅಭಿವೃದ್ದಿ ಕಾರ್ಯ ನಡೆಯಬೇಕಿದ್ದರೆ ಮರಳು ಪ್ರಮುಖವಾಗಿ ಬೇಕಾಗುತ್ತದೆ. ಹೀಗಾಗಿ ಅಂತರ್ಜಲಮಟ್ಟ ಹೆಚ್ಚಿಸಲು ಕಿಂಡಿ ಅಣೆಕಟ್ಟುಗಳಲ್ಲಿ ತೆಗೆದಿರುವ ಹೂಳು ಅಭಿವೃದ್ದಿ ಕಾಮಗಾರಿಗಳಿಗೆ ಬಳಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ಹೂಳೆತ್ತಲು ಪಂಚಾಯಿತಿ ಮೂಲಕ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಕಾಮಗಾರಿಗೆ ಉಪಯೋಗಿಸಬಹುದಾದದ ಹೂಳು ಯಾರ್ಡ್‌ನಲ್ಲಿ ಸಂಗ್ರಹಿಸಿ ಅಲ್ಲಿಂದ ಕಡಿಮೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುತ್ತಿರುವ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿಗೆ ಸಹಕಾರಿ ಧುರೀಣ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಭಾಜನರಾಗಿದ್ದು ಅವರು ಬುಧವಾರ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಂಯುಕ್ತ ಸಹಕಾರಿ ನೇತೃತ್ವದಲ್ಲಿ ನಡೆದ ೬೬ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಸಂಯುಕ್ತ ಸಹಕಾರಿ ಅಧ್ಯಕ್ಷರು, ನಿರ್ದೇಶಕರು, ವಿವಿಧ ಸಹಕಾರಿಗಳ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ: ► ಎಸ್. ರಾಜು ಪೂಜಾರಿ ಅವರಿಗೆ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿ – https://kundapraa.com/?p=33723 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಘದ ಎಲ್ಲಾ ಸದಸ್ಯರಿಗೂ ಮತದಾನದ ಅವಕಾಶ ದೊರೆತರೆ ಸಹಕಾರಿ ವ್ಯವಸ್ಥೆ ಉತ್ತುಂಗಕ್ಕೆ ತಲುಪುತ್ತದೆ. ಸಹಕಾರಿ ಸಂಘಗಳು ಪ್ರತಿ ಗ್ರಾಮದಲ್ಲಿಯೂ ತನ್ನ ಸೇವೆಯನ್ನು ವಿಸ್ತರಿಸಿದರೆ ರೈತರಿಗೆ ಮತ್ತಷ್ಟು ಅನುಕೂಲಕರವಾಗಲಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಬುಧವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರುಗಳ ಸಂಯುಕ್ತ ಆಶ್ರಯದಲ್ಲಿ ಖಂಬದಕೋಣೆ ಕರ್ನಾಟಕ ಖಾವಿ ಯಾನೆ ಹರಿಕಾಂತ ಮಹಾಜನ ಸಭಾಂಗಣದಲ್ಲಿ ಜರುಗಿದ ೬೬ನೇ ಸಹಕಾರಿ ಸಪ್ತಾಹ ಸಮಾರೋಪ ಸಮಾರಂಭಕ್ಕೂ ಮುನ್ನ ಸಂಘದ ಖಂಬದಕೋಣೆ ಶಾಖೆಯಲ್ಲಿ ಆರಂಭಗೊಂಡ ರೈತಸಿರಿ ಸೇವಾ ಕೇಂದ್ರವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ ಮಾತನಾಡಿ ಗದುಗಿನ ಸಿದ್ಧನಗೌಡರು, ಮೊಳಹಳ್ಳಿ ಶಿವರಾಯರು ಅವರಂತಹ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದ ದುಷ್ಟ ಶಕ್ತಿಗಳ ವಿರುದ್ಧ ಹೋರಾಡಿ, ಪ್ರಾಣವನ್ನೇ ಅರ್ಪಿಸಿದ ಇಂದಿರಾ ಗಾಂಧಿ ಅವರ ಆದರ್ಶಗಳು ಇಂದಿಗೂ ಪ್ರಸ್ತುತ ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಇಂದಿರಾಗಾಂಧಿಯವರ ೧೦೨ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿ, ಶ್ರೀಮತಿ ಇಂದಿರಾ ಗಾಂಧಿ ದೇಶವನ್ನು ಬಲಿಷ್ಟಗೊಳಿಸಿ, ಭಾರತದ ಕೀರ್ತಿಯನ್ನು ವಿಶ್ವಕ್ಕೆ ಪಸರಿಸಿದ ಧೀಮಂತ ಮಹಿಳೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಮಾಜಿ ಬ್ಲಾಕ್ ಅಧ್ಯಕ್ಷ ವಾಸುದೇವ ಯಡಿಯಾಳ, ಪದಾಧಿಕಾರಿಗಳಾದ ಪಿ.ಎಲ್.ಜೋಸ್, ಮೋಹನ ಪೂಜಾರಿ, ನರಸಿಂಹ ದೇವಾಡಿಗ, ನಾಗರಾಜ್ ಗಾಣಿಗ, ಮಂಜುನಾಥ ಪೂಜಾರಿ ತಗ್ಗರ್ಸೆ, ಮಾಣಿಕ್ಯ ಹೋಬಳಿದಾರ್, ತಾಲೂಕು ಪಂಚಾಯತ್ ಸದಸ್ಯರುಗಳಾದ ಪ್ರಮೀಳಾ ದೇವಾಡಿಗ, ಜಗದೀಶ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೌಹಾರ್ದ ಸಹಕಾರಿಗಳ ಮಾತೃ ಸಂಸ್ಥೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನೀಡುತ್ತಿರುವ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿಗೆ ಸಹಕಾರಿ ಧುರೀಣ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಆಯ್ಕೆಯಾಗಿದ್ದಾರೆ. ಮೂರು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ಅವಿರತರವಾಗಿ ತೊಡಗಿಸಿಕೊಂಡಿರುವ ಎಸ್. ರಾಜು ಪೂಜಾರಿ ಅವರ ಸಾಧನೆಗಾಗಿ 2019ನೇ ಸಾಲಿನ ಶ್ರೇಷ್ಠ ಸಹಕಾರಿ ಪ್ರಶಸ್ತಿ ನೀಡಲಾಗುತ್ತಿದ್ದು, ನ.20ರ ಬುಧವಾರ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಂಯುಕ್ತ ಸಹಕಾರಿ ನೇತೃತ್ವದಲ್ಲಿ ನಡೆಯುತ್ತಿರುವ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪುರಸ್ಕರಿಸಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ. ಸಹಕಾರಿ ಧುರೀಣ: ರಾಜು ಪೂಜಾರಿ ಅವರು ವಿವಿಧ ಸಹಕಾರಿಗಳ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ನಿರ್ದೇಶಕರಾಗಿ ತೊಡಗಿಸಿಕೊಂಡು ಜನಸಾಮಾನ್ಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸುವತ್ತ ದಿಟ್ಟ ಹೆಜ್ಜೆಯಿಟ್ಟವರು. ಕಳೆದ 10 ವರ್ಷಗಳಿಂದ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ನ ಅಧ್ಯಕ್ಷರಾಗಿ ಸಂಸ್ಥೆಯನ್ನು ಮಾದರಿಯಾಗಿ ರೂಪಿಸಿದ ಹೆಗ್ಗಳಿಕೆ ಅವರದ್ದು. 25ವರ್ಷಗಳಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಪೇಟೆಯಲ್ಲಿ ತನ್ನ ಹಾಡು, ವಿಭಿನ್ನ ಸಂಗೀತದ ಪ್ರಸ್ತುತಿಯ ಮೂಲಕವೇ ಗುರುತಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಯುವಕರ ಮೆಚ್ಚುಗೆಗೆ ಪಾತ್ರವಾಗಿದ್ದ ವೈಕುಂಠ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯ ಹಾಗೂ ವಿಪರೀತ ಕುಡಿತದ ಗೀಳಿಗೆ ಒಳಗಾಗಿದ್ದ ವೈಕುಂಟ ಅನಾರೋಗ್ಯದಿಂದ ಕುಂದಾಪುರದ ಶಾಸ್ತ್ರೀವೃತ್ತದ ಬಳಿಯೇ ಬಿದ್ದಿದ್ದ ಆತನನ್ನು ಸಾರ್ವಜನಿಕರು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆ ಸ್ಪಂದಿಸದೇ ಕೊನೆಯುಸಿರೆಳಿದಿದ್ದಾನೆ. ತನ್ನ ಸಿನೆಮಾ, ಜನಪದ ಹಾಡು ಹಾಗೂ ಹಾಡಿಗೆ ತಕ್ಕಂತೆ ಕೈಗೆ ಸಿಕ್ಕ ಪರಿಕಗಳಿಂದಲೇ ರಿದಂ ನೀಡುತ್ತಾ ಕುಂದಾಪುರದಲ್ಲಿ ಪ್ರಸಿದ್ಧ ಪಡೆದಿದ್ದ ವೈಕುಂಠ ಸಾಮಾಜಿಕ ಜಾಲತಾಣಗಳಿಂದಾಗಿ ಮತ್ತಷ್ಟು ಪ್ರಸಿದ್ಧಿ ಪಡೆದಿದ್ದ. ತನ್ನ ಕುಟುಂಬದಿಂದ ದೂರ ಉಳಿದಿದ್ದ ವೈಕುಂಠ ಕ್ರಮೇಣ ಹಾಡಿಗಾಗಿ ಪಡೆದ ಹಣದಿಂದ ವಿಪರೀತ ಕುಡಿತದ ಚಟಕ್ಕೆ ಒಳಗಾಗಿದ್ದ. ಆತ ಅನಾರೋಗ್ಯಕ್ಕೆ ಒಳಗಾದಾಗಲೇ ಜಾಲತಾಣಗಳನ್ನು ಆತನನ್ನು ಮನೋರಂಜನೆಯ ವಸ್ತುವಾಗಿ ಉಪಯೋಗಿಸಿಕೊಂಡವರೂ ಕೂಡ ಸ್ಪಂದಿಸದಿದ್ದದು ದುರಂತ.

Read More