Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಶಕಗಳಿಂದ ತಮ್ಮ ಉನ್ನತ ಸಂಸ್ಕಾರ, ಸಜ್ಜನಿಕೆ, ಸ್ನೇಹಶೀಲತ್ವಕ್ಕೆ ಪಾತ್ರರಾದ ಬರೆಗುಂಡಿ ಶ್ರೀನಿವಾಸ ಚಾತ್ರ (76 ) ಆನಾರೋಗ್ಯದ ಕಾರಣದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಳದ ಮೊಕ್ತೇಸರರರಾಗಿದ್ದರು. ದೀರ್ಘಕಾಲದಿಂದ ಕೆಲ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಅಗತ್ಯದ ಕಾಯಕ-ಕರ್ಮಗಳು ಯಥಾವತ್ತಾಗಿ ನೇರವೇರುವಂತೆ ನೋಡಿಕೊಂಡಿದ್ದರು. ಮೃತರು ಪತ್ನಿ, ನಾಲ್ವರು ಪುತ್ರರು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎಂ.ಕಾಮ್ ಜನರಲ್ ಹಾಗೂ ಐಬಿಎಮ್ ವಿಭಾಗದ ವತಿಯಿಂದ ತೃತೀಯ ವರ್ಷದ ಬಿ.ಕಾಂ. ಹಾಗೂ ಬಿಬಿಎ ವಿದ್ಯಾರ್ಥಿಗಳಿಗಾಗಿ ನಡೆದ ರಾಷ್ಟ್ರೀಯ ಮಟ್ಟದ ನಾಲೆಜ್ ಕ್ವಿಝ್ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಭರತ್ ಗಜಾನನ ಹೆಗ್ಡೆ ಪ್ರಥಮ ಬಹುಮಾನ ಪಡೆದಿದ್ದಾರೆ, ದ್ವಿತೀಯ ಸ್ಥಾನವನ್ನು ಮಣಿಪಾಲದ ಉಡುಪಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಟೂರಿಸಮ್ ಸಯನ್ಸ್‌ನ ಸುಮುಖ ಕೆ, ತೃತೀಯ ಸ್ಥಾನವನ್ನು ಆಳ್ವಾಸ್ ಕಾಲೇಜಿನ ಸೌಜನ್ಯ ಜೈನ್ ಪಡೆದಿದ್ದಾರೆ. ಕ್ವಿಝ್ ಸ್ಪರ್ಧೆಗೆ ವಿವಿಧ ಕಾಲೇಜುಗಳ 250 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ವಿಭಾಗ ಸಂಯೋಜಕಿ ರೇಖಾ ಶೆಟ್ಟಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಅಭಿನಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಗುಜ್ಜಾಡಿಯ ಪತ್ರಿಕಾ ವಿತರಕ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು. ರೋಟರಿ ಹಿರಿಯ ಸದಸ್ಯರಾದ ಜನಾದನ ಪೂಜಾರಿ, ವಾಸುದೇವ ಶೇರುಗಾರ್ ಮತ್ತು ರೋಟರಿ ಸದಸ್ಯರು ಚಂದ್ರಶೇಖರ್ ಅವರನ್ನು ಸನ್ಮಾನಿಸಿದರು. ರೋಟರಿ ಸದಸ್ಯ ವಿಜಯ್ ಪೂಜಾರಿ ಉಪಸ್ಥಿತರಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ನ ಅಧ್ಯಕ್ಷ ರಾಜೇಶ್ ಎಂ. ಜಿ. ಸ್ವಾಗತಿಸಿದರು. ವಲಯ ಸೇನಾನಿ ಕೆ. ರಾಮನಾಥ ನಾಯಕ್ ಪ್ರಾಸ್ತಾವಿಕ ಮಾತನಾಡಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ನಡೆದಂತಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ ‘ಜನರಲ್ ಕೆ ಎಸ್ ತಿಮ್ಮಯ್ಯ’ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರಿಂದ ಪಡೆಯಬಹುದಾಗಿದೆಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಸೆ.04: ಇಲ್ಲಿನ ಶ್ರೀ ಮೂಕಾಂಬಿಕಾ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾಧಿಗಳು ಇಂದಿನಿಂದ ಆಧಾರ್ ಕಾರ್ಡ್ ಹೊಂದಿರುವುದು ಹಾಗೂ ಕೇರಳ ರಾಜ್ಯದ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ 19 RTPCR ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋವಿಡ್ 19 ಹಿನ್ನಲೆಯಲ್ಲಿ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಅವರ ಆದೇಶದಲ್ಲಿ ತಿಳಿಸಿರುವ ಸೂಚನೆ ಮೇರೆಗೆ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದಲ್ಲಿ ಸೆ.4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದ ವರೆಗೆ ದೇವಸ್ಥಾನದ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾಧಿಗಳ ಆಧರ್ ಕಾರ್ಡ್ ಪರಿಶೀಲಿಸಿ ಹೆಸರು, ಊರು, ಮೊಬೈಲ್ ಸಂಖ್ಯೆಯನ್ನು ದಾಖಲಿಸಲು ಹಾಗೂ ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ 19 RTPCR ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ಆದೇಶಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಜಿಲ್ಲಾ ಪ್ರಾಣಿ ದಯಾ ಸಂಘದಿಂದ ಮುಂದಿನ 2 ವರ್ಷಗಳ ಅವಧಿಗೆ ಪ್ರಾಣಿ ಕಲ್ಯಾಣ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು Animal Welfare Warden ರನ್ನು ನೇಮಕಾತಿ ಮಾಡುವ ಕುರಿತು ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕಾರ್ಯ ನಿರ್ವಹಿಸಲು ಆಸಕ್ತಿಯುಳ್ಳವರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಪಶು ಪಾಲನಾ ಇಲಾಖೆ ಹಾಗೂ ದೂರವಾಣಿ ಸಂಖ್ಯೆ: 0820-2534024 ನ್ನು ಸಂಪರ್ಕಿಸಬಹುದಾಗಿದೆಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪೌಢಶಾಲಾ ವಿಭಾಗದ ಒಟ್ಟು 17 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ದೊರೆತಿದ್ದು, ಸೆ.5ರಂದು ಬೆಳಿಗ್ಗೆ 9.30ಕ್ಕೆ ಸೈಂಟ್ ಸಿಸಿಲಿ ಪೌಢಶಾಲೆಯಲ್ಲಿ ಜಿಲ್ಲಾಡಳಿತದಿಂದ ಶಿಕ್ಷಕರ ದಿನಾಚರಣೆ ಸಂದರ್ಭ ಪ್ರದಾನ ಮಾಡಾಲಾಗುವುದು ಎಂದು ಡಿಡಿಪಿಐ ಎನ್.ಎಚ್. ನಾಗೂರ ತಿಳಿಸಿದ್ದಾರೆ. ಕಿರಿಯ ಪ್ರಾಥಮಿಕ ವಿಭಾಗ:ಶಾಂತ ಪೈ, ಸಹ ಶಿಕ್ಷಕಿ, ಯಡ್ತಾಡಿ ಶಾಲೆ (ಬ್ರಹ್ಮಾವರ ವಲಯ), ಶೇಖರ ಗಾಣಿಗ, ಸಹಶಿಕ್ಷಕ, ಕಿಸ್ಮತಿ ಸರಕಾರಿ ಶಾಲೆ(ಬೈಂದೂರು ವಲಯ), ಮಂಜುನಾಥ ಶೆಟ್ಟಿ, ಸಹಶಿಕ್ಷಕ ಕುಚ್ಚೂರು ಸರಕಾರಿ ಶಾಲೆ (ಕಾರ್ಕಳ ವಲಯ) ಸುರೇಶ್ ಶೆಟ್ಟಿ, ಸಹ ಶಿಕ್ಷಕ, ಕೊಂಜಾಡಿ ಸರಕಾರಿ ಶಾಲೆ (ಕುಂದಾಪುರ ವಲಯ), ರೇಷ್ಮಾ ಎಂ.ಎನ್., ಸಹಶಿಕ್ಷಕಿ, ಕುದಿ ಸರಕಾರಿ ಶಾಲೆ (ಉಡುಪಿ ವಲಯ) ಹಿರಿಯ ಪ್ರಾಥಮಿಕ ವಿಭಾಗ:ದಿನಕರ ಶೆಟ್ಟಿ, ಮುಳ್ಯ ಶಿಕ್ಷಕ, ಬಡಾನಿಡಿಯೂರು ಸರಕಾರಿ ಶಾಲೆ(ಬ್ರಹ್ಮಾವರ ವಲಯ), ಚಂದ್ರ ನಾರಾಯಣ ಬಿಲ್ಲವ, ಸಹ ಶಿಕ್ಷಕ, ಶಿರೂರು ಸರಕಾರಿ ಶಾಲೆ (ಬೈಂದೂರು ವಲಯ), ನರೇಂದ್ರ ಕಾಮತ್ ದೈಹಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲಾ ವತಿಯಿಂದ, ಕೋವಿಡ್- 19 ಸಂದರ್ಭದಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಕ್ರಿಯಾತ್ಮಕವಾಗಿ ತೊಡಗಿಸಿಕೊಂಡ ರಾಘವೇಂದ್ರ ಡಿ. ಅವರು ಜಿಲ್ಲಾಮಟ್ಟದ ಅತ್ಯುತ್ತಮ ಸಮೂಹ ಸಂಪನ್ಮೂಲ ವ್ಯಕ್ತಿ ( CRP ) ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರು ಬೈಂದೂರು ಶೈಕ್ಷಣಿಕ ವಲಯದ ಅರೆಶಿರೂರು, ಆಜ್ರಿ ಮಾನಂಜೆ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲಾಮಟ್ಟದ ಅತ್ಯುತ್ತಮ ಸಮೂಹ ಸಂಪನ್ಮೂಲ ವ್ಯಕ್ತಿ ( CRP ) ಪ್ರಶಸ್ತಿ ಪತ್ರ ವಿತರಣೆ ಹಾಗೂ ಗುರುವಂದನಾ ಕಾರ್ಯಕ್ರಮವು ಶಿಕ್ಷಕರ ದಿನಾಚರಣೆಯ ಅಂಗವಾಗಿ ಎಸ್ ಡಿ ಎಂ ಸಿ ಸಮನ್ವಯ ವೇದಿಕೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಮತ್ತು ಕಾನೂನು ಸೇವಾ ಸಮಿತಿ ಕುಂದಾಪುರ ತಾಲೂಕು ಮತ್ತು ರೋಟರಿ ಮಿಡ್ ಟೌನ್ ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಾಳೆ ಬೆಳಿಗ್ಗೆ 10 .30ಕ್ಕೆ ಕುಂದಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಜೈವಿಕ ಸಂಶೋಧನಾ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಅಂತಾರಾಷ್ಟ್ರೀಯ ಮಟ್ಟದ ಮೂರು ದಿನದ ವೆಬಿನಾರ್ ನಡೆಯಿತು. ವೆಬಿನಾರ್‌ನ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ, ಕೆ ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಸಹಾಯಕ ಪ್ರಾಧ್ಯಾಪಕಿ ಡಾ. ರೇಷ್ಮಾ ಶೆಟ್ಟಿ, ಭೋಪಾಲ್ ಐಐಎಸ್ ಇಆರ್ ನ ಸಹಾಯಕ ಪ್ರಾಧ್ಯಾಪಕಿ ಡಾ. ವಿನಿತ ಗೌಡ, ಆಳ್ವಾಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಬೆಂಗಳೂರಿನ ಸಿಂಜಿನ್ ಇಂಟರ್ನ್ಯಾಷನಲ್ ಲಿಮಿಟೆಡ್, ಬಯೋಕಾನ್ ಪಾರ್ಕ್ನ ರಿಸರ್ಚ್ ಅಸೋಸಿಯೇಟ್ ಮನೀಶ್ ಕೆ. ಎಸ್, ಜಪಾನ್ ನ ಯುನಿವರ್ಸಿಟಿ ಆಫ್ ಎನ್ವಿರೋನ್ಮೆಂಟಲ್ ಹಾಗೂ ಆಕ್ಯುಪೇಶನಲ್ ಹೆಲ್ತ್ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಮಹೇಶ್ ಪ್ರಸಾದ್ ಬೇಕಲ್, ಕುವೈತ್ ನ ದಾಸ್ ಮನ್ ಡಯಾಬಿಟಿಸ್ ಇನ್ಸ್ಟಿಟ್ಯೂಟ್ ನ ರಿಸರ್ಚ್ ಅಸೋಸಿಯೇಟ್ ಪ್ರಶಾಂತ್‌ಹೆಬ್ಬಾರ್ ಕೆ ವಿದ್ಯಾರ್ಥಿಗಳಿಗೆ ಜೈವಿಕ ವಿಜ್ಞಾನ ಸಂಶೋಧನೆಗೆ ಅಗತ್ಯವಿರುವ ಮಾಹಿತಿ ಹಾಗೂ ವಿವಿಧ ಸಂಶೋಧನಾ ವಿಷಯಗಳ ಕುರಿತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಿಲಾಗ್ರೀಸ್ ಕಾಲೇಜು ಹಂಪನಕಟ್ಟೆ, ಮಂಗಳೂರು ಇದರ ದಶಮಾನೋತ್ಸವದ ಅಂಗವಾಗಿ ಲಲಿತ-ಕಲಾ ಘಟಕದ ವತಿಯಿಂದ ಆಯೋಜಿಸಿದ ಕಾಮಿಕ್ ಸ್ಟ್ರಿಪ್ ಸ್ಪರ್ಧೆಯಲ್ಲಿ ಕೋಡಿ ಬ್ಯಾರೀಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿನಿ ಶಮಾ ಮುಸ್ಕಾನ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಅವರ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ನಿರ್ದೇಶಕರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

Read More