ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೆಪಿ ಪಕ್ಷ ಗ್ರಾಮ ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಗ್ರಾಮದಲ್ಲಿಯೂ ಜನಸೇವೆಯಲ್ಲಿ ತೊಡಗಿಕೊಳ್ಳುವ ಅಭ್ಯರ್ಥಿಗಳು ಆಯ್ಕೆಯಾಗಬೇಕು ಎಂಬ ಆಶಯವನ್ನು ಹೊಂದಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಸಿದ್ದಾಪುರ ಬಿಜೆಪಿ ಕಛೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಗ್ರಾಮ ಪಂಚಾಯತ್ ಸದಸ್ಯರಿಗೆ ವಿಶೇಷ ಅಧಿಕಾರವಿದ್ದು, ಜನಸಾಮಾನ್ಯರಿಗೆ ನ್ಯಾಯ ಒದಗಿಸಲು ಅವರಿಗೆ ಹೆಚ್ಚಿನ ಅವಕಾಶವಿದೆ. ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಮತದಾರರಿದ್ದು, ಕೇಂದ್ರ, ರಾಜ್ಯ ಸರಕಾರಗಳ ಜನಪರ ಕಾರ್ಯಗಳು ಹಾಗೂ ಅದನ್ನು ಗ್ರಾಮಮಟ್ಟದ ತನಕ ತಲುಪಿಸುವ ಅಭ್ಯರ್ಥಿಯನ್ನೇ ಆಯ್ಕೆಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು. ರೈತರ ವೇಷತೊಟ್ಟು ಕೆಲವು ಹಿತಾಸಕ್ತಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರನಾಳಿಕೆಯಲ್ಲಿ ರೈತ ಮಸೂದೆಯ ಬಗ್ಗೆ ಹೇಳಿಕೊಂಡಿದ್ದ ಕಾಂಗ್ರೆಸ್ ಪಕ್ಷ ಇಂದು ವಿರೋಧ ವ್ಯಕ್ತಪಡಿಸುತ್ತಿದೆ. ಬಿಜೆಪಿ ಸರಕಾರ ಏಕಾಏಕಿ ರೈತ ಮಸೂದೆಯನ್ನು ಜಾರಿಗೆ ತಂದಿಲ್ಲ. ಬದಲಾಗಿ ಹಲವು ಹಂತಗಳಲ್ಲಿ ಚರ್ಚಿಸಿ, ರೈತರ ಆದಾಯ ದ್ವಿಗುಣಗೊಳ್ಳುವ ಖಾತ್ರಿಯಾದ ಬಳಿಕವಷ್ಟೇ ಮಸೂದೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ತಾಲೂಕಿನ 15 ಗ್ರಾಮ ಪಂಚಾಯತಿಗಳಿಗೆ ನಡೆಯುತ್ತಿರುವ ಚುನಾವಣೆ 128 ಮತಗಟ್ಟೆಗಳಲ್ಲಿ ಸುಗಮವಾಗಿ ನಡೆಯುತ್ತಿದ್ದು, ಪೇಟೆಗಿಂತ ಗ್ರಾಮೀಣ ಪ್ರದೇಶಗಳಲ್ಲಿಯೇ ಹೆಚ್ಚಿನ ಮತದಾನ ನಡೆಯುತ್ತಿರುವುದು ಕಂಡುಬಂತು. ಹಿರಿಯ ನಾಗರಿಕರು, ವಿಕಲಚೇತನರು ಹೆಚ್ಚು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು, ಮಧ್ಯಾಹ್ನ 3 ಗಂಟೆಯ ತನಕ ಒಟ್ಟು ಶೇ57.18 ರಷ್ಟು ಮತದಾನವಾಗಿದೆ. ಬೈಂದೂರು ತಾಲೂಕಿನಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯ ತನಕ ಶೇ.11.49 ಮತದಾನವಾಗಿದ್ದರೇ, 11 ಗಂಟೆಯ ತನಕ ಶೇ. 28.49, ಮಧ್ಯಾಹ್ನ 1 ಗಂಟೆಯ ತನಕ ಶೇ.46.53 ಹಾಗೂ 3 ಗಂಟೆಯ ಒಟ್ಟು ಶೇ.57.18 ಮತದಾನವಾಗಿದೆ. ಮತ ಕೇಂದ್ರಗಳಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲನೆ ಮಾಡಲಾಗುತ್ತಿದ್ದು, ಮತದಾನಕ್ಕೂ ಮುನ್ನ ಸ್ಯಾನಿಟೈಜ್, ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿದೆ. ಎಸ್ಪಿ, ಡಿವೈಎಸ್ಪಿ, ಸಿಪಿಐ ನೇತೃತ್ವದಲ್ಲಿ ಮತದಾನ ಕೇಂದ್ರಗಳಲ್ಲಿ ಬಂದೋವಸ್ತ್ ಏರ್ಪಡಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ವತ್ತಿನೆಣೆ ಗುಡ್ಡದಲ್ಲಿ ಬೆಂಕಿ ಅವಘಡದಿಂದಾಗಿ ಸುಮಾರು ಒಂದು ಎಕೆರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳ ಅವಾಂತರದಿಂದಾಗಿ ವತ್ತಿನೆಣೆ ಪ್ರದೇಶದ ಒಣ ಹುಲ್ಲು ಇರುವ ಜಾಗಕ್ಕೆ ಬೆಂಕಿ ತಗಲಿಸಿದ್ದಾಳೆ. ಶಿರೂರು, ಬೈಂದೂರು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಕೆಲವು ಭಾಗಗಳಲ್ಲಿ ಬೆಂಕಿ ಹಚ್ಚುವ ಅಭ್ಯಾಸದಿಂದಾಗಿ ಅರಣ್ಯ ಇಲಾಖೆಗಳಿಗೆ ಸಮಸ್ಯೆಯಾಗಿ ಕಾಡುತ್ತಿದೆ. ತಕ್ಷಣ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಿಂದಿಸುವಲ್ಲಿ ಯಶಸ್ವಿಯಾಗಿದ್ದು ಯಾವುದೇ ಮರ ಗಿಡಗಳಿಗೆ, ಅರಣ್ಯ ಪ್ರದೇಶಕ್ಕೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೈಗಾರಿಕೋದ್ಯಮಿ ಶಿಕ್ಷಣ ಶಿಲ್ಪಿ, ಪದ್ಮಭೂಷಣ ಡಾ ಆರ್. ಎನ್. ಶೆಟ್ಟಿ ಅವರ ನಿಧನಕ್ಕೆ ಸಂತಾಪ ಸಭೆ, ನುಡಿನಮನ ಕಾರ್ಯಕ್ರಮ ಬೈಂದೂರು ಬಂಟರ ಭವನದಲ್ಲಿ ಜರುಗಿತು. ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ, ಸಂಘದ ಗೌರವ ಅಧ್ಯಕ್ಷ ಡಾ. ಸುಧಾಕರ ಹೆಗ್ಡೆ , ಬೈಂದೂರು ಬಂಟರ ಸಂಘದ ಅಧ್ಯಕ್ಷ ಕೆ. ವಿಠಲ ಶೆಟ್ಟಿ, ಹುಬ್ಬಳ್ಳಿ, ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಸಾಲ್ಗದ್ದೆ, ಬೈಂದೂರು ಸುರಭಿ ಕಲಾ ಸಂಸ್ಥೆಯ ನಿರ್ದೇಶಕ ಸುಧಾಕರ ಪಿ ಬೈಂದೂರು, ಉದ್ಯಮಿ ಬಾಡ ಪ್ರವೀಣ್ ಚಂದ್ರ ಶೆಟ್ಟಿ, ಶಿರೂರು ಬಂಟರ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ನುಡಿನಮನ ಸಲ್ಲಿಸಿದರು. ವಸಂತ ಹೆಗ್ಡೆ ಕಳವಾಡಿ ಪ್ರಸ್ತಾವನೆಗೈದರು. ಸಾಲ್ಗದ್ದೆ ಶಶಿಧರ ಶೆಟ್ಟಿ ಸ್ವಾಗತಿಸಿ, ಸಂಘದ ಕಾರ್ಯದರ್ಶಿ ಎನ್. ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪ್ರದೀಪ ಕುಮಾರ್ ಶೆಟ್ಟಿ ಕಾರಿಕಟ್ಟೆ ಧನ್ಯವಾದಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಟೌನ್ ಸೌಹಾರ್ದ ಸಹಕಾರಿಯ 100ನೇ ಸಾಮಾನ್ಯ ಸಭೆಯು ಇಲ್ಲಿನ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಜರುಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರಿಯ ಅಧ್ಯಕ್ಷ ಎಚ್. ಗಣೇಶ್ ಕಾಮತ್, ಆರ್ಥಿಕ ಹಿಂಜರಿತ ಹಾಗೂ ಕೋವಿಡ್-19 ಪರಿಣಾಮದ ಹೊರತಾಗಿಯೂ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯು 2019-209ನೇ ಸಾಲಿನಲ್ಲಿ 74.62 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಶತಮಾನೋತ್ಸವ ವರ್ಷದಲ್ಲಿ ಸದಸ್ಯರಿಗೆ ಶೇ. 17 ಪಾಲು ಮುನಾಫೆ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಸಹಕಾರಿಯು ಪ್ರಸಕ್ತ ಸಾಲಿನಲ್ಲಿ 113.71 ಕೋಟಿ ವಹಿವಾಟು ದಾಖಲಿಸಿದ್ದು, ದುಡಿಯುವ ಬಂಡವಾಳ 53.70 ಕೋಟಿ ರೂ ಮತ್ತು 44.49 ಕೋಟಿ ರೂ. ಠೇವಣಿ ಹೊಂದಿದೆ. ವಿವಿಧ ಸಹಕಾರಿ ಬ್ಯಾಂಕ್ಗಳಲ್ಲಿ 19.53 ಕೋಟಿ ಹೂಡಿಕೆ ಮಾಡಲಾಗಿದೆ ಎಂದು ಹೇಳಿದರು. ತಂತ್ರಜ್ಞಾನಕ್ಕೆ ಹೊಂದಿಕೊಂಡು ಸಹಕಾರಿಯ ಎಲ್ಲಾ ಶಾಖೆಗಳಲ್ಲಿ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸದಸ್ಯರಿಗಾಗಿ ಸ್ವಸಹಾಯ ಗುಂಪುಗಳ ರಚನೆ ಮತ್ತು ಸ್ವ ಉದ್ಯೋಗಕ್ಕೆ ಪ್ರೇರಣೆ ನೀಡುವುದು. ಸ್ವಸಹಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ನಾಗೂರಿನ ಕೆಎಎಸ್ ಆಡಿಟೋರಿಯಮ್ನಲ್ಲಿ ಕನ್ನಡ ಜಾನಪದ ಪರಿಷತ್ತಿನ ಬೈಂದೂರು ತಾಲ್ಲೂಕು ಘಟಕದ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿ, ಜಾನಪದ ಮೂಲೆಗುಂಪಾದರೆ ಮಾನವ ಜನಾಂಗ ಮೂಲೆಗುಂಪಾಗುತ್ತದೆ. ಕನ್ನಡ ಜಾನಪದ ಪರಿಷತ್ತು ಕರ್ನಾಟಕದ ಸಮೃದ್ಧ ಜಾನಪದದ ಕುರಿತು ಕ್ಷೇತ್ರಕಾರ್ಯ ಮತ್ತು ದಾಖಲೀಕರಣ ನಡೆಸಿ ಅದನ್ನು ರಕ್ಷಿಸುವ ಗುರಿ ಹೊಂದಿದೆ ರಾಜ್ಯ ಸರ್ಕಾರದ ಎಲ್ಲ ಅಕಾಡೆಮಿಗಳು ಬೆಂಗಳೂರಿಗೆ ಸೀಮಿತವಾಗುತ್ತಿವೆ. ಸರ್ಕಾರ ಜಾನಪದ ಪ್ರಾಧಿಕಾರ ಸ್ಥಾಪಿಸಿ, ನಾಲ್ಕು ಪ್ರಾದೇಶಿಕ ವಿಭಾಗಗಳಾಗಿ ಮಾಡಿ ಅಲ್ಲಿಗೆ ಜಾನಪದದ ಉದ್ದೇಶಕ್ಕೆ ದುಡಿಯುವವರನ್ನು ನೇಮಕ ಮಾಡಬೇಕು ಎಂಬ ಬೇಡಿಕೆ ಇಡಲಾಗಿದೆ ಎಂದು ಹೇಳಿದರು. ಈ ವರೆಗೆ ಐದು ಜಾನಪದ ಮಹಾಕಾವ್ಯಗಳನ್ನು ಗುರುತಿಸಲಾಗಿದೆ. ಇನ್ನು ಹಲವು ಖಂಡಕಾವ್ಯಗಳಿವೆ. ಎಲ್ಲವುಗಳ ಅಧ್ಯಯನ ಮತ್ತು ದಾಖಲಾತಿ ಆಗಬೇಕು. ಅಜ್ಞಾತರಾಗಿರುವ ಜಾನಪದ ಕಲಾವಿದರನ್ನು ಬೆಳಕಿಗೆ ತರಬೇಕು. ಅದಕ್ಕಾಗಿ ಪರಿಷತ್ತಿನ ತಾಲ್ಲೂಕು, ಹೋಬಳಿ ಘಟಕಗಳನ್ನು ರಚಿಸಲಾಗುತ್ತಿದೆ. ಮುಂದೆ ಗ್ರಾಮ ಘಟಕಗಳನ್ನೂ ಸ್ಥಾಪಿಸಲಾಗುವುದು ಎಂದು ಹೇಳಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಚುನಾವಣಾ ಪ್ರಚಾರಕ್ಕಾಗಿ ಅಭ್ಯರ್ಥಿಗಳು ವಿವಿಧ ಪ್ರಚಾರ ತಂತ್ರಗಳನ್ನು ಅನುಸರಿಸುವುದು ಸಾಮಾನ್ಯ. ಹೀಗೆ ಕೊಂಬು ಕಹಳೆಯನ್ನು ಚುನಾವಣಾ ಚಿಹ್ನೆಯಾಗಿ ಪಡೆದಿದ್ದ ಅಭ್ಯರ್ಥಿಯೊರ್ವರು ಕಹಳೆಯ ಮೂಲಕವೇ ತಮ್ಮ ವಾರ್ಡಿನಲ್ಲಿ ಪ್ರಚಾರ ನಡೆಸಿ ಮತದಾರರ ಗಮನ ಸೆಳೆದಿದ್ದಾರೆ. ತಾಲೂಕಿನ ಬಿಜೂರು ಗ್ರಾಮ ಪಂಚಾಯತ್ 1ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಸತೀಶ್ ಶೆಟ್ಟಿ ಎಂಬುವರು ಕೊಂಬು ಕಹಳೆಯೊಂದಿಗೆ ಪ್ರಚಾರಕ್ಕೆ ತೆರಳಿ ಗಮನ ಸೆಳೆದಿದ್ದು ಈ ಚಿತ್ರವೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸತೀಶ್ ಶೆಟ್ಟಿಯವರು ಈ ಹಿಂದೆ ಎರಡು ಬಾರಿ ಬಿಜೂರು ಗ್ರಾಮ ಪಂಚಾಯತ್ ಸದಸ್ಯರಾಗಿ ಒಮ್ಮೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಣಾಜೆಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ 41ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಪ್ರೊ. ಕರುಣಾಕರ್ ಎ. ಕೋಟೆಗಾರ್ ಅವರು ತಯಾರಿಸಿದ ‘ರಾಷ್ಟ್ರೀಯ ಶಿಕ್ಷಣ ನೀತಿ- 2020’ ವೀಡಿಯೊ ಸರಣಿಯನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಆನ್ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಕರುಣಾಕರ್ ಅವರನ್ನು ವಿವಿ ವತಿಯಿಂದ ಸನ್ಮಾನಿಸಲಾಯಿತು. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕೈಗಾ ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಆರ್. ಸತ್ಯನಾರಾಯಣ ಅತಿಥಿಗಳಾಗಿದ್ದರು. ಕುಲಸಚಿವ ರಾಜು ಮೊಗವೀರ ಸ್ವಾಗತಿಸಿದರು. ಪ್ರೊ. ರವಿಶಂಕರ ರಾವ್ ಮತ್ತು ಡಾ. ಧನಂಜಯ ಕುಂಬ್ಳೆ ನಿರೂಪಿಸಿದರು. ಹಣಕಾಸು ಅಧಿಕಾರಿ ಪ್ರೊ. ಬಿ. ನಾರಾಯಣ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಂಚಾಯತ್ರಾಜ್ ವ್ಯವಸ್ಥೆಯೆಂಬುದು ಆಳಿಸಿಕೊಳ್ಳುವವರ ಆಡಳಿತವಾಗಿದ್ದು, ಗ್ರಾಮ ಸರಕಾರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸುವ ವಿಶ್ವಾಸವಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಅವರು ಸೋಮವಾರ ಬೈಂದೂರಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಉಡುಪಿ ಜಿಲ್ಲೆಯಲ್ಲಿ 154 ಗ್ರಾಮ ಪಂಚಾಯತ್ನಲ್ಲಿ ಚುನಾವಣೆ ನಡೆಯಲಿದೆ. ಬೈಂದೂರು ವಿಧಾನಸಭಾ ವ್ಯಾಪ್ತಿಯ 39 ಪಂಚಾಯತಿಯಲ್ಲಿಯೂ ಬಿಜೆಪಿ ಮೇಲುಗೈ ಸಾಧಿಸುವುದು ನಿಶ್ಚಿತ. ಗ್ರಾಮ ಮಟ್ಟದಲ್ಲಿ ಪಾರದರ್ಶಕ ಆಡಳಿತ ನೀಡಲು ಬದ್ಧರಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಅವಕಾಶ ನೀಡುವಂತೆ ಮತದಾರರಿಗೆ ಮನವಿ ಮಾಡಿದರು. ಈ ಸಂದರ್ಭ ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ, ಉಪಾಧ್ಯಕ್ಷೆ ಮಾಲಿನಿ ಕೆ., ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಪುಪ್ಪರಾಜ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಶೆಟ್ಟಿ ತಗ್ಗರ್ಸೆ, ಜಿಲ್ಲಾ ಬಿಜೆಪಿಯ ಸದಾನಂದ ಉಪ್ಪಿನಕುದ್ರು, ಬೈಂದೂರು ಬಿಜೆಪಿ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ಬೆಸ್ಕೂರು, ಪ್ರಕಾಶ್ ಜೆಡ್ಡು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಡಿ.22ರಂದು ತಾಲೂಕಿನ 15 ಗ್ರಾಮ ಪಂಚಾಯತಿಗಳಿಗೆ ನಡೆಯಲಿರುವ ಚುನಾವಣೆಗೆ ಸರ್ವ ಸಿದ್ಧತೆಗಳ ನಡೆದಿದ್ದು, 128 ಮತಗಟ್ಟೆಗಳಲ್ಲಿ ನಡೆಯಲಿರುವ ಚುನಾವಣೆಗೆ ಪೂರ್ವಭಾವಿಯಾಗಿ ಸೋಮವಾರ ಮಸ್ಟರಿಂಗ್ ಕಾರ್ಯ ನಡೆದಿದೆ. ಮಂಗಳವಾರ ನಡೆಯಲಿರುವ ಮತದಾನ ಪ್ರಕ್ರಿಯೆಗೆ 616 ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 128 ಡಿ ಗ್ರೂಫ್ ನೌಕರರು ಇರಲಿದ್ದು ಕೊರೋನಾ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ಸುರಕ್ಷಿತ ಕಿಟ್ಗಳನ್ನು ಚುನಾವಣಾ ಆಯೋಗ ಸರಬರಾಜು ಮಾಡಿದೆ. ಸರತಿ ಸಾಲಿನಲ್ಲಿ ಅಂತರ ಕಾಯ್ದುಕೊಂಡು ಮತ ಚಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಥರ್ಮಲ್ ಸ್ಕ್ಯಾನರ್ ಮೂಲಕ ಮತದಾರರನ್ನು ಪರೀಕ್ಷಿಸಲು ಅಂಗನವಾಡಿ ಕಾರ್ಯಕರ್ತೆಯರನ್ನು ನೇಮಿಸಲಾಗಿದೆ. ಅಧಿಕಾರಿಗಳು ಮಸ್ಟರಿಂಗ್ ಮುಗಿಸಿ ಮತಗಟ್ಟೆಗಳಿಗೆ ತೆರಳಲು ಒಟ್ಟು 33 ಸರಕಾರಿ ಬಸ್ ವ್ಯವಸ್ಥೆ ಮಾಡಲಾಗಿತ್ತು. 88,659 ಮತದಾರರು: ಬೈಂದೂರು ತಾಲೂಕಿನಲ್ಲಿ ಒಟ್ಟು 128 ಮತಗಟ್ಟೆಗಳಿದ್ದು 88,659 ಮತದಾರರಿದ್ದಾರೆ. ಅವರಲ್ಲಿ 45,284 ಮಹಿಳಾ ಮತದಾರರು, 43,374 ಪುರುಷ ಮತದಾರರು ಹಾಗೂ ಒಬ್ಬರು ಇತರ…
