ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಏರಿಕೆ ಮಾಡುವ ಸಲುವಾಗಿ ಕಿಂಡಿ ಅಣೆಕಟ್ಟುಗಳನ್ನು ಗುರುತಿಸಿ ಹೂಳೆತ್ತುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶೀಘ್ರವೇ ಗ್ರಾಪಂ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ ಹೇಳಿದರು. ಕುಂದಾಪುರ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕಳೆದ ವರ್ಷ ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿ ಕೆಲಸಗಳಿಗೆ ೭೦ ಕೋಟಿ ರೂ.ಅನುದಾನ ತಂದಿದ್ದು, ಪ್ರಸಕ್ತ ೩೦೦ ಕೋಟಿ ಅನುದಾನ ತಂದಿದ್ದೇನೆ. ಅಭಿವೃದ್ದಿ ಕಾರ್ಯ ನಡೆಯಬೇಕಿದ್ದರೆ ಮರಳು ಪ್ರಮುಖವಾಗಿ ಬೇಕಾಗುತ್ತದೆ. ಹೀಗಾಗಿ ಅಂತರ್ಜಲಮಟ್ಟ ಹೆಚ್ಚಿಸಲು ಕಿಂಡಿ ಅಣೆಕಟ್ಟುಗಳಲ್ಲಿ ತೆಗೆದಿರುವ ಹೂಳು ಅಭಿವೃದ್ದಿ ಕಾಮಗಾರಿಗಳಿಗೆ ಬಳಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ಹೂಳೆತ್ತಲು ಪಂಚಾಯಿತಿ ಮೂಲಕ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಕಾಮಗಾರಿಗೆ ಉಪಯೋಗಿಸಬಹುದಾದದ ಹೂಳು ಯಾರ್ಡ್‌ನಲ್ಲಿ ಸಂಗ್ರಹಿಸಿ ಅಲ್ಲಿಂದ ಕಡಿಮೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುತ್ತಿರುವ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿಗೆ ಸಹಕಾರಿ ಧುರೀಣ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಭಾಜನರಾಗಿದ್ದು ಅವರು ಬುಧವಾರ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಂಯುಕ್ತ ಸಹಕಾರಿ ನೇತೃತ್ವದಲ್ಲಿ ನಡೆದ ೬೬ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಸಂಯುಕ್ತ ಸಹಕಾರಿ ಅಧ್ಯಕ್ಷರು, ನಿರ್ದೇಶಕರು, ವಿವಿಧ ಸಹಕಾರಿಗಳ ಪ್ರಮುಖರು ಉಪಸ್ಥಿತರಿದ್ದರು. ಇದನ್ನೂ ಓದಿ: ► ಎಸ್. ರಾಜು ಪೂಜಾರಿ ಅವರಿಗೆ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿ – https://kundapraa.com/?p=33723 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಘದ ಎಲ್ಲಾ ಸದಸ್ಯರಿಗೂ ಮತದಾನದ ಅವಕಾಶ ದೊರೆತರೆ ಸಹಕಾರಿ ವ್ಯವಸ್ಥೆ ಉತ್ತುಂಗಕ್ಕೆ ತಲುಪುತ್ತದೆ. ಸಹಕಾರಿ ಸಂಘಗಳು ಪ್ರತಿ ಗ್ರಾಮದಲ್ಲಿಯೂ ತನ್ನ ಸೇವೆಯನ್ನು ವಿಸ್ತರಿಸಿದರೆ ರೈತರಿಗೆ ಮತ್ತಷ್ಟು ಅನುಕೂಲಕರವಾಗಲಿದೆ ಎಂದು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಬುಧವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರುಗಳ ಸಂಯುಕ್ತ ಆಶ್ರಯದಲ್ಲಿ ಖಂಬದಕೋಣೆ ಕರ್ನಾಟಕ ಖಾವಿ ಯಾನೆ ಹರಿಕಾಂತ ಮಹಾಜನ ಸಭಾಂಗಣದಲ್ಲಿ ಜರುಗಿದ ೬೬ನೇ ಸಹಕಾರಿ ಸಪ್ತಾಹ ಸಮಾರೋಪ ಸಮಾರಂಭಕ್ಕೂ ಮುನ್ನ ಸಂಘದ ಖಂಬದಕೋಣೆ ಶಾಖೆಯಲ್ಲಿ ಆರಂಭಗೊಂಡ ರೈತಸಿರಿ ಸೇವಾ ಕೇಂದ್ರವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. ಸಮಾರಂಭವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರಕುಮಾರ್ ಮಾತನಾಡಿ ಗದುಗಿನ ಸಿದ್ಧನಗೌಡರು, ಮೊಳಹಳ್ಳಿ ಶಿವರಾಯರು ಅವರಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದ ದುಷ್ಟ ಶಕ್ತಿಗಳ ವಿರುದ್ಧ ಹೋರಾಡಿ, ಪ್ರಾಣವನ್ನೇ ಅರ್ಪಿಸಿದ ಇಂದಿರಾ ಗಾಂಧಿ ಅವರ ಆದರ್ಶಗಳು ಇಂದಿಗೂ ಪ್ರಸ್ತುತ ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಇಂದಿರಾಗಾಂಧಿಯವರ ೧೦೨ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿ, ಶ್ರೀಮತಿ ಇಂದಿರಾ ಗಾಂಧಿ ದೇಶವನ್ನು ಬಲಿಷ್ಟಗೊಳಿಸಿ, ಭಾರತದ ಕೀರ್ತಿಯನ್ನು ವಿಶ್ವಕ್ಕೆ ಪಸರಿಸಿದ ಧೀಮಂತ ಮಹಿಳೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಮಾಜಿ ಬ್ಲಾಕ್ ಅಧ್ಯಕ್ಷ ವಾಸುದೇವ ಯಡಿಯಾಳ, ಪದಾಧಿಕಾರಿಗಳಾದ ಪಿ.ಎಲ್.ಜೋಸ್, ಮೋಹನ ಪೂಜಾರಿ, ನರಸಿಂಹ ದೇವಾಡಿಗ, ನಾಗರಾಜ್ ಗಾಣಿಗ, ಮಂಜುನಾಥ ಪೂಜಾರಿ ತಗ್ಗರ್ಸೆ, ಮಾಣಿಕ್ಯ ಹೋಬಳಿದಾರ್, ತಾಲೂಕು ಪಂಚಾಯತ್ ಸದಸ್ಯರುಗಳಾದ ಪ್ರಮೀಳಾ ದೇವಾಡಿಗ, ಜಗದೀಶ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೌಹಾರ್ದ ಸಹಕಾರಿಗಳ ಮಾತೃ ಸಂಸ್ಥೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನೀಡುತ್ತಿರುವ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿಗೆ ಸಹಕಾರಿ ಧುರೀಣ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಆಯ್ಕೆಯಾಗಿದ್ದಾರೆ. ಮೂರು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ಅವಿರತರವಾಗಿ ತೊಡಗಿಸಿಕೊಂಡಿರುವ ಎಸ್. ರಾಜು ಪೂಜಾರಿ ಅವರ ಸಾಧನೆಗಾಗಿ 2019ನೇ ಸಾಲಿನ ಶ್ರೇಷ್ಠ ಸಹಕಾರಿ ಪ್ರಶಸ್ತಿ ನೀಡಲಾಗುತ್ತಿದ್ದು, ನ.20ರ ಬುಧವಾರ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಂಯುಕ್ತ ಸಹಕಾರಿ ನೇತೃತ್ವದಲ್ಲಿ ನಡೆಯುತ್ತಿರುವ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪುರಸ್ಕರಿಸಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ. ಸಹಕಾರಿ ಧುರೀಣ: ರಾಜು ಪೂಜಾರಿ ಅವರು ವಿವಿಧ ಸಹಕಾರಿಗಳ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ, ನಿರ್ದೇಶಕರಾಗಿ ತೊಡಗಿಸಿಕೊಂಡು ಜನಸಾಮಾನ್ಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸುವತ್ತ ದಿಟ್ಟ ಹೆಜ್ಜೆಯಿಟ್ಟವರು. ಕಳೆದ 10 ವರ್ಷಗಳಿಂದ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ನ ಅಧ್ಯಕ್ಷರಾಗಿ ಸಂಸ್ಥೆಯನ್ನು ಮಾದರಿಯಾಗಿ ರೂಪಿಸಿದ ಹೆಗ್ಗಳಿಕೆ ಅವರದ್ದು. 25ವರ್ಷಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಪೇಟೆಯಲ್ಲಿ ತನ್ನ ಹಾಡು, ವಿಭಿನ್ನ ಸಂಗೀತದ ಪ್ರಸ್ತುತಿಯ ಮೂಲಕವೇ ಗುರುತಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಯುವಕರ ಮೆಚ್ಚುಗೆಗೆ ಪಾತ್ರವಾಗಿದ್ದ ವೈಕುಂಠ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯ ಹಾಗೂ ವಿಪರೀತ ಕುಡಿತದ ಗೀಳಿಗೆ ಒಳಗಾಗಿದ್ದ ವೈಕುಂಟ ಅನಾರೋಗ್ಯದಿಂದ ಕುಂದಾಪುರದ ಶಾಸ್ತ್ರೀವೃತ್ತದ ಬಳಿಯೇ ಬಿದ್ದಿದ್ದ ಆತನನ್ನು ಸಾರ್ವಜನಿಕರು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆ ಸ್ಪಂದಿಸದೇ ಕೊನೆಯುಸಿರೆಳಿದಿದ್ದಾನೆ. ತನ್ನ ಸಿನೆಮಾ, ಜನಪದ ಹಾಡು ಹಾಗೂ ಹಾಡಿಗೆ ತಕ್ಕಂತೆ ಕೈಗೆ ಸಿಕ್ಕ ಪರಿಕಗಳಿಂದಲೇ ರಿದಂ ನೀಡುತ್ತಾ ಕುಂದಾಪುರದಲ್ಲಿ ಪ್ರಸಿದ್ಧ ಪಡೆದಿದ್ದ ವೈಕುಂಠ ಸಾಮಾಜಿಕ ಜಾಲತಾಣಗಳಿಂದಾಗಿ ಮತ್ತಷ್ಟು ಪ್ರಸಿದ್ಧಿ ಪಡೆದಿದ್ದ. ತನ್ನ ಕುಟುಂಬದಿಂದ ದೂರ ಉಳಿದಿದ್ದ ವೈಕುಂಠ ಕ್ರಮೇಣ ಹಾಡಿಗಾಗಿ ಪಡೆದ ಹಣದಿಂದ ವಿಪರೀತ ಕುಡಿತದ ಚಟಕ್ಕೆ ಒಳಗಾಗಿದ್ದ. ಆತ ಅನಾರೋಗ್ಯಕ್ಕೆ ಒಳಗಾದಾಗಲೇ ಜಾಲತಾಣಗಳನ್ನು ಆತನನ್ನು ಮನೋರಂಜನೆಯ ವಸ್ತುವಾಗಿ ಉಪಯೋಗಿಸಿಕೊಂಡವರೂ ಕೂಡ ಸ್ಪಂದಿಸದಿದ್ದದು ದುರಂತ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ, ಉಡುಪಿ ಹಾಗೂ ಸಹಕಾರ ಇಲಾಖೆ ಜಂಟಿಯಾಗಿ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಿದ್ದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ 2019ರ ಕಾರ್ಯಕ್ರಮದಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಈ ಸಂಸ್ಥೆಗೆ ಉತ್ತಮ ಸಹಕಾರ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಪ್ಪುಂದ ಮೂರ್ತೇದಾರರ ಸೇವಾ ಸಹಕಾರಿ ಸಂಘದ ಪರವಾಗಿ ಅಧ್ಯಕ್ಷ ಮೋಹನ ಪೂಜಾರಿ ಉಪ್ಪುಂದ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಎಚ್. ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭ ಉಡುಪಿ ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಎನ್. ಗಂಗಣ್ಣ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ…
ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಒಂದೇ ನೋಟಕ್ಕೆ ಮನತುಂಬಿದ ನಗು ಇಲ್ಲವೇ ಸೆಡವು. ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿ ಗೊಂದು ಚಾಟಿ. ಜನಸಾಮಾನ್ಯರಿಗೆ ನಗುವಿನ ಚಟಾಕಿ. ವಾಸ್ತವದ ಅನಾವರಣ. ನೂರು ಪದಗಳಲ್ಲಿ ಹೇಳಬಹುದಾದದ್ದನ್ನು ಒಂದು ರೇಖೆಯಲ್ಲಿ ಹೇಳಿ ಮುಗಿಸುವ ಛಾತಿ. ಇಂತಹ ಕಾರ್ಟೂನಿಷ್ಠ ರನ್ನು ಕಾರ್ಟೂನಿಷ್ಠರ ತವರು, ಕುಂದಾಪುರದಲ್ಲಿ ಒಗ್ಗೂಡಿಸಿ ಕಳೆದ ಐದು ವರ್ಷಗಳಿಂದ ಆಯೋಜಿಸುತ್ತಿರುವ ಕಾರ್ಟೂನು ಹಬ್ಬ, ಈ ಭಾರಿ ನ.23ರಿಂದ ನ.26ರ ತನಕ ನಡೆಯಲಿದೆ. ಖ್ಯಾತ ವ್ಯಂಗ್ಯಚಿತ್ರಕಾರ ಕುಂದಾಪುರದ ಸತೀಶ್ ಆಚಾರ್ಯರ ಅವರ ಸಾರಥ್ಯದಲ್ಲಿ ವಿಭಿನ್ನ ಐಡಿಯಾಸ್ ಹಾಗೂ ಕಾರ್ಟೂನು ಕುಂದಾಪ್ರ ತಂಡದ ಕಾರ್ಟೂನಿಷ್ಠರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಟೂನು ಹಬ್ಬ ಹತ್ತಾರು ವಿಶೇಷತೆಗಳೊಂದಿಗೆ ರಂಗು ರಂಗಾಗಿ ನಡೆಯುತ್ತಿದ್ದು ನಾಲ್ಕು ದಿನಗಳ ಕಾಲ ಕುಂದಾಪುರದ ಕಲಾಮಂದಿರದಲ್ಲಿ ಜರುಗಲಿದೆ. ಹಬ್ಬದಲ್ಲಿ ಕಾರ್ಟೂನು ಪ್ರದರ್ಶನ, ಸ್ಕೂಲ್ ಟೂನ್ ಚಾಂಪಿಯನ್ಶಿಪ್ ಕಾರ್ಟೂನು ಸ್ವರ್ಧೆ, ಲೈವ್ ಕ್ಯಾರಿಕೇಚರಿಂಗ್, ಎಡಿಟೂನ್ಸ್, ಮಾಸ್ಟರ್ ಸ್ಟ್ರೋಕ್, ನಿತ್ಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಕೆಲವು ದಿನಗಳ ಹಿಂದೆ ರಕ್ತದ ಕ್ಯಾನ್ಸರ್’ನಿಂದಾಗಿ ಮೂಳೆ ಮಜ್ಜೆಯ ಕಸಿ ಚಿಕಿತ್ಸೆಗೆ ಒಳಗಾಗಿದ್ದ ಬೈಂದೂರು ತಾಲೂಕಿನ ಕಳವಾಡಿ ನಿವಾಸಿ ಸಂಜೀವ ದೇವಾಡಿಗರ ಪುತ್ರ ಸುಜನ್ ದೇವಾಡಿಗ (17) ಬೆಂಗಳೂರಿನ ಆಸ್ಪತ್ರೆಯಲ್ಲಿ ಭಾನುವಾರ ಚಿಕಿತ್ಸೆ ಫಲಿಸದೆ ನಿಧನರಾದರು. ಬ್ಲಡ್ ಕ್ಯಾನ್ಸರ್’ಗೆ ತುತ್ತಾಗಿದ್ದ ಸುಜನ್ ದೇವಾಡಿಗ ಅವರನ್ನು ಉಳಿಸಿಕೊಳ್ಳುವ ಸಲುವಾಗಿ ಅವರ ಕುಟುಂಬ ಇನ್ನಿಲ್ಲದ ಪ್ರಯತ್ನ ನಡೆಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕುಟುಂಬಕ್ಕೆ ಉಂಟಾದ ಆರ್ಥಿಕ ಅಡಚಣೆಯ ಬಗ್ಗೆ ತಿಳಿದುಬಂದಾಗ ನೂರಾರು ಮಂದಿ ಸ್ಪಂದಿಸಿದ್ದರಲ್ಲದೇ, ಚಿಕಿತ್ಸೆಯನ್ನೂ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಜನ್ ದೇವಾಡಿಗ ಮೃತರಾಗಿದ್ದಾರೆ. ಮೃತರು ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದು, ಅವರ ನೆರಳಕಟ್ಟೆಯ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಂಗಳೂರಿನ ಖ್ಯಾತ ಜ್ಯೋತಿಷಿ ಡಾ. ಮಹೇಂದ್ರ ಭಟ್ ಅವರಿಗೆ ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ಜೆಸಿಐ ಬೈಂದೂರು ಸಿಟಿ ಆಯೋಜಿಸಿದ ಜೇಸಿ ಸಂಭ್ರಮ-2019ರ ಕಾರ್ಯಕ್ರಮದಲ್ಲಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಖ್ಯಾತ ಜ್ಯೋತಿಷಿ ಡಾ. ಮಹೇಂದ್ರ ಭಟ್: ಡಾ. ಮಹೇಂದ್ರ ಭಟ್ ಅವರು ಮೂಲತಃ ಬೈಂದೂರು ತಾಲೂಕಿನ ಯಡ್ತರೆ ರಾಹುತನಕಟ್ಟೆಯವರಾಗಿದ್ದು, ಬಾಲ್ಯದಿಂದಲೇ ಅಜ್ಜನಾದ ದಿ. ವಾಸುದೇವ ಭಟ್ ಅವರಿಂದ ಜ್ಯೋತಿಷ್ಯ ಅಭ್ಯಾಸ ಮಾಡಿದ್ದರು. ಪಿಯುಸಿ ತನಕದ ಶಿಕ್ಷಣವನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಯೂ, ಪದವಿ ಶಿಕ್ಷಣವನ್ನು ಭಟ್ಕಳದ ಅಂಜುಮಾನ್ ಕಾಲೇಜಿನಲ್ಲಿಯೂ, ಎಂಬಿಎ ಪದವಿಯನ್ನು ಸಿಕ್ಕಿಂ ಮಣಿಪಾಲ್ ಒಪನ್ ಯುನಿವರ್ಸಿಟಿಯಲ್ಲಿಯೂ ಹಾಗೂ ಬೆಂಗಳೂರಿನ ಇಂದಿಯಾ ಪ್ರಿಯದರ್ಶಿನಿ ಕಾಲೇಜ್ ಆಫ್ ಲಾ ಇಲ್ಲಿ ಎಲ್‌ಎಲ್‌ಬಿ ಪದವಿಯನ್ನು ಪಡೆದಿದ್ದಾರೆ. ಜ್ಯೋತಿಷ್ಯಶಾಸ್ತ್ರದಲ್ಲಿ ಆಸಕ್ತರಾಗಿದ್ದ ಮಹೇಂದ್ರ ಭಟ್ ಅವರು ಜ್ಯೋತಿಷ್ಯದಲ್ಲಿ ಬಿ.ಎ ಪದವಿ ಪಡೆದಿರುವುದಲ್ಲದೇ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರದ ಕುರಿತಾಗಿಯೂ ಅಧ್ಯಯನ ನಡೆಸಿದ್ದಾರೆ. ಲಾಯಲ್ ಅಕಾಡೆಮಿ ಆಫ್ ಗ್ಲೋಬಲ್ ಪೀಸ್ ಸಂಸ್ಥೆಯಿಂದ…
