ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನ್ಯಾಯಾಲಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಮತ್ತು ವಕೀಲರ ಸಂಘದ ಕಟ್ಟಡದ ಉದ್ಘಾಟನೆಯನ್ನು ಶನಿವಾರ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ನೆರವೇರಿಸಿದರು. ಬಳಿಕ ಅವರು ಮಾತನಾಡಿ ಸಮಸ್ಯೆ ಕಾಣಿಸಿಕೊಂಡಾಗ ಪರಿಹಾರವನ್ನು ಹುಡುಕಿಕೊಂಡು ನ್ಯಾಯಾಲಯಕ್ಕೆ ಬರುವವರಿಗೆ ಕಡಿಮೆ ಖರ್ಚಿನಲ್ಲಿ ನ್ಯಾಯವನ್ನು ಒದಗಿಸುವ ಹೊಣೆಗಾರಿಕೆಯನ್ನು ಸಂತೋಷದಿಂದ ನಿಭಾಯಿಸಬೇಕು ಎಂದು ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅಭಿಪ್ರಾಯ ವ್ಯಕ್ತಪಡಿಸಿದರು. ಕುಂದಾಪುರ ನಗರದ ಸಣ್ಣ ಜಾಗದಲ್ಲಿ ಸುಂದರವಾದ ನ್ಯಾಯಾಲಯ ಕಟ್ಟಡ ಎದ್ದು ನಿಂತಿದೆ. ಈ ಸೌಲಭ್ಯಗಳ ಸದುದ್ದೇಶವಾಗಬೇಕಾದರೆ ವಕೀಲರ ಹಾಗೂ ಕಕ್ಷಕಿದಾರರ ಪಾತ್ರವೂ ಅತಿ ಮುಖ್ಯವಾಗಿದೆ. ಕುಂದಾಪುರ ಪರಿಸರದಲ್ಲಿ ಹೇಳಿಕೊಳ್ಳುವಂತಾ ಐಟಿ/ಬಿಟಿ ಅಥವಾ ಕಾರ್ಪೋರೇಟ್ ಪ್ರಕರಣಗಳು ದಾಖಲಾಗುವುದಿಲ್ಲ. ಬಹುತೇಕ ಕೃಷಿ, ಜಮೀನು, ಮೋಟಾರ್ ಕಾಯಿದೆ ಹಾಗೂ ಗ್ರಹಚಾರ ಕೆಟ್ಟಾಗ ಬರುವ ಅಪರಾಧ ಪ್ರಕರಣಗಳು ದಾಖಲಾಗುತ್ತದೆ. ಅಪಘಾತ ಪ್ರಕರಣಗಳನ್ನು ಪರ್ಸೆಂಟೇಜ್ ಆಧಾರದಲ್ಲಿ ನಡೆಸಬೇಡಿ ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಉಚ್ಛ ನ್ಯಾಯಾಲಯದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ,ಫೆ.18: ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಅಧಿಕ ದಿನಗಳಿಂದ ತೆರಿಗೆ ಪಾವತಿಸದೇ ಹೊರರಾಜ್ಯದ ವಾಹನಗಳು ಓಡಾಡುತ್ತಿರುವುದು ಕಂಡುಬಂದಿದ್ದು, ಹೊರ ರಾಜ್ಯದ ಮೋಟಾರು ವಾಹನ ಮಾಲೀಕರು ಈ ಪ್ರಕಟಣೆಯ ಒಂದು ವಾರದ ಒಳಗೆ ತಮ್ಮ ವಾಹನಗಳಿಗೆ ರಾಜ್ಯದ ತೆರಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಪಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೊರರಾಜ್ಯದ ವಾಹನಗಳು ತೆರಿಗೆ ಪಾವತಿಸದೇ ಜಿಲ್ಲೆಯಲ್ಲಿ ಸಂಚರಿಸುತ್ತಿರುವುದು ಕಂಡುಬಂದಲ್ಲಿ ತಪಾಸಣೆ ವೇಳೆ ವಾಹನವನ್ನು ಮುಟ್ಟುಗೋಲು ಹಾಕಲಾಗುವುದು. ಹೊರರಾಜ್ಯದ ವಾಹನಗಳಿಗೆ ಬಿ.ಹೆಚ್ ಸೀರಿಸ್ ಸಂಖ್ಯೆಯನ್ನು ಪಡೆಯಲು ಇಚ್ಛಿಸುವ ಕೇಂದ್ರ ಸರ್ಕಾರಿ ನೌಕರರು, ತಮ್ಮ ಹೊಸ ವಾಹನದ ನೋಂದಣಿಯ ಸಮಯದಲ್ಲಿ ವಿಳಾಸ ಪುರಾವೆ, ತತ್ ಸಂಬಂಧ ಉದ್ಯೋಗ ಖಾತರಿ ಪತ್ರದ ಪ್ರತಿ, ಸಂಬಂಧಪಟ್ಟ ಇಲಾಖೆಯ ಸೇವಾ ಗುರುತಿನ ಚೀಟಿ, ಮೇಲಾಧಿಕಾರಿಗಳ ಪ್ರಮಾಣ ಪತ್ರ ಹಾಗೂ ರಹವಾಸಿ ಪ್ರಮಾಣ ಪತ್ರ ಹಾಜರುಪಡಿಸಿ, ಏಕರೂಪದ ತೆರಿಗೆಯನ್ನು ಪಾವತಿಸಲು ಅವಕಾಶವಿರುತ್ತದೆ. ಹೊರರಾಜ್ಯದ ವಾಹನಗಳು ರಾಜ್ಯಕ್ಕೆ ವಲಸೆ ಬಂದಾಗ ಇನ್ವಾಯ್ಸ್ ಅಥವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೂತನ ನ್ಯಾಯಾಲಯ ಕಟ್ಟಡ ಮತ್ತು ವಕೀಲರ ಸಂಘದ ಕಟ್ಟಡ ಶನಿವಾರ ಮಧ್ಯಾನ್ನ 2ಕ್ಕೆ ಸರ್ವೋಚ್ಚ ನ್ಯಾಯಾಲಯ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಉದ್ಘಾಟಿಸಲಿದ್ದಾರೆ ಎಂದು ಬಾರ್ ಅಸೋಸಿಯೇಷನ್ ಅಧ್ಯಕ್ಷ ನಿರಂಜನ್ ಹೆಗ್ಡೆ ಸಳ್ವಾಡಿ ಹೇಳಿದರು. ವಕೀಲರ ಸಂಘದ ಕಾರ್ಯದರ್ಶಿ ಎಚ್. ಪ್ರಮೋದ್ ಹಂದೆ ಮಾತನಾಡಿ, ನೂತನ ನ್ಯಾಯಾಲಯ ಕಟ್ಟಡ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ವಹಿಸಲಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ರಂಗಸ್ವಾಮಿ ನಟರಾಜ್, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾದುಸ್ವಾಮಿ, ಲೋಕೋಪಯೋಗಿ ಇಲಾಖಾ ಸಚಿವ ಸಿ ಸಿ ಪಾಟೀಲ್, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜ್ಯ ಉಚ್ಚ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿ ಟಿ ಜಿ ಶಿವಶಂಕರೇ ಗೌಡ ಮತ್ತು ಕಾನೂನು ಇಲಾಖಾ ಪ್ರಧಾನ ಕಾರ್ಯದರ್ಶಿ ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾ.3ರಿಂದ ಬೆಂಗಳೂರಿನಲ್ಲಿ ಆರಂಭಗೊಳ್ಳುಲಿರುವ 13ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಭಾರತೀಯ ಸಿನಿಮಾ ಸ್ಪರ್ಧೆಗೆ ಮಾಲ್ವಿಕ ಮೋಶನ್ ಪಿಚ್ಚರ್ಸ್ ನಿರ್ಮಾಣದ, ಗುಲ್ವಾಡಿ ಟಾಕೀಸ್ ಅರ್ಪಿಸುವ ರೊನಾಲ್ಡ್ ಲೋಬೊ ಮತ್ತು ಯಾಕೂಬ್ ಖಾದರ್ ಗುಲ್ವಾಡಿ ನಿರ್ದೇಶನದ ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಕಥೆ ಹೊಂದಿರುವ ‘ಆ 90 ದಿನಗಳು’ ಸಿನಿಮಾ ಆಯ್ಕೆಯಾಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ಧಗೊಂಡಿರುವ ‘ಆ 90 ದಿನಗಳು’ ಸಿನೆಮಾದಲ್ಲಿ ದೊಡ್ಡ ತಾರಾಗಣವಿದೆ. ಖ್ಯಾತ ನ್ಯಾಯವಾದಿ ರವಿಕಿರಣ್ ಮುರುಡೇಶ್ವರ ಅವರ ಪುತ್ರ ರತಿಕ್ ಮುರ್ಡೇಶ್ವರ್ ನಾಯಕ ನಟನಾಗಿ ಕಾಣಿಸಿಕೊಂಡಿದ್ದು, ಹಿರಿಯ ನಟಿ ಭವ್ಯ, ರಾಧ ಭಗವತಿ, ಕೃತಿಕ ದಯಾನಂದ್, ಜೋ ಸೈಮನ್, ಪ್ರದೀಪ್ ಪೂಜಾರಿ, ಅಮೀರ್ ಹಂಝ, ಪಕೀರ್ ಸಲಾಂ, ರವಿಕಿರಣ್ ಮುರ್ಡೇಶ್ವರ ಸೇರಿದಂತೆ ಹಲವು ಸ್ಥಳೀಯ ಪ್ರತಿಭೆಗಳು ಅಭಿನಯಿಸಿದ್ದಾರೆ. ಗಿರೀಶ ಶೆಟ್ಟಿಗಾರ್, ನವೀನ ವಿಲಿಯಮ್ಸ್ ಬರ್ಬೋಜ ಸಹ ನಿರ್ಮಾಪಕರಾಗಿದ್ದು, ತಾಂತ್ರಿಕ ನಿರ್ದೇಶನವನ್ನು ಬಿ. ಶಿವಾನಂದ್, ಛಾಯಾಗ್ರಹಣವನ್ನು ಪಿವಿಆರ್ ಸ್ವಾಮಿ, ಗೂಗಾರ ದೊಡ್ಡಿ, ಸಂಗೀತವನ್ನು ಕೃಷ್ಣ ಬಸ್ರೂರು, ಸಂಕಲನವನ್ನು ನಾಗೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಕೇಂದ್ರ ಸರಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಯುವ ಸಂಸತ್ತು ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಯುವ ಜನರಿಂದ ಯುವ ಸಂಸತ್ತು ಕಾರ್ಯಕ್ರಮವನ್ನು ಆಯೋಜಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಕಾರ್ಯಕ್ರಮ ಉಡುಪಿ ನೊಡೆಲ್ ಕೇಂದ್ರದ ಅಡಿಯಲ್ಲಿ – ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳು ಬರಲಿದ್ದು, ಆಯಾ ಜಿಲ್ಲೆಗಳಲ್ಲಿ ಭಾಗವಹಿಸುವ ಯುವ ಪ್ರತಿಭೆಗಳಿಗೆ ಆಯಾ ಜಿಲ್ಲಾ ಮಟ್ಟದಲ್ಲಿಯೇ ಸ್ಕ್ರೀನಿಂಗ್ ಮಾಡಿ ಜಿಲ್ಲೆಯಿಂದ ಆಯ್ಕೆಯಾದ ಅತ್ಯುತ್ತಮ ಅಭ್ಯರ್ಥಿಗಳನ್ನು ಉಡುಪಿಯಿಂದ ಆನ್ಲೈನ್ ಮೂಲಕ ಫೆಬ್ರವರಿ 23 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ತಮ್ಮ ಜಿಲ್ಲೆಗಳನ್ನು ಪ್ರತಿನಿಧಿಸುವರು. ಪ್ರತೀ ಜಿಲ್ಲೆಯಿಂದ ಇಬ್ಬರು ಅತ್ಯುತ್ತಮ ಅಭ್ಯರ್ಥಿಗಳ ಆಯ್ಕೆಯನ್ನು ಉಡುಪಿಯಲ್ಲಿ ನಡೆಸಿ ಅವರ ಹೆಸರನ್ನು ರಾಜ್ಯ ಮಟ್ಟಕ್ಕೆ ಶಿಫಾರಸು ಮಾಡಲಾಗುವುದು. ಈ ಕಾರ್ಯಕ್ರಮವು (ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ) ಜಿಲ್ಲಾ ಮಟ್ಟದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ಸಂಬAಧಪಟ್ಟ ತಹಶೀಲ್ದಾರಿಗೆ ದೂರು ನೀಡುವಂತೆ ಉಡುಪಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಕ.ರಾ.ರ.ಸಾ. ನಿಗಮವು ಮಂಗಳೂರಿನಿಂದ ರಾಯಚೂರಿಗೆ ವಯಾ ಉಡುಪಿ – ಮಣಿಪಾಲ – ಕುಂದಾಪುರ – ಸಿದ್ಧಾಪುರ – ಮಾಸ್ತಿಕಟ್ಟೆ – ನಗರ – ಹೊಸನಗರ – ರಿಪ್ಪನ್ಪೇಟೆ – ಆಯನೂರು –ಶಿವಮೊಗ್ಗ – ಹೊನ್ನಾಳಿ – ಹರಿಹರ – ಹರಪನಹಳ್ಳಿ – ಹಗರಿಬೊಮ್ಮನಹಳ್ಳಿ – ಹೊಸಪೇಟೆ – ಗಂಗಾವತಿ – ಸಿಂಧನೂರು – ಮಾನ್ವಿ ಮಾರ್ಗವಾಗಿ ಹೊಸ ರಾಜಹಂಸ ಸಾರಿಗೆ ಕಾರ್ಯಾಚರಣೆಯನ್ನು ಫೆ.25 ರಿಂದ ಪ್ರಾರಂಭಿಸಲಾಗುತ್ತದೆ. ಈ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 05:30ಕ್ಕೆ ರಾಯಚೂರು ತಲುಪುತ್ತದೆ. ಮರು ಪ್ರಯಾಣದಲ್ಲಿ ರಾಯಚೂರಿನಿಂದ ಸಂಜೆ 5 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 06.45 ಕ್ಕೆ ಮಂಗಳೂರಿಗೆ ತಲುಪುವುದು. ಸದರಿ ಸಾರಿಗೆಯಲ್ಲಿ ಮಂಗಳೂರಿನಿಂದ ರಾಯಚೂರಿಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 850 ರೂ. ಇದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ. ಸಾರ್ವಜನಿಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.17: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಗೆ ಒಳಪಡುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪಜಾತಿಗಳು ಹೊರತುಪಡಿಸಿ) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 1 ರಿಂದ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ನೀರಾವರಿ ಸೌಲಭ್ಯ ಹೊಂದಿರದ, ವಾರ್ಷಿಕ ಆದಾಯ 40,000 ರೂ. ಒಳಗಿರುವ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.dbcdc.kanataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574882…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಧ್ವಜ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವದ ಅಂಗವಾಗಿ ಬುಧವಾರ ಮನ್ಮಹಾರಥೋತ್ಸವ ಸಂಭ್ರಮದಿಂದ ಜರುಗಿತು. ಬೆಳಿಗ್ಗೆ ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳು ಆರಂಭಗೊಂಡವು. ತಂತ್ರಿಗಳು ಧಾರ್ಮಿಕ ವಿಧಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಬ್ಬದ ಅಂಗವಾಗಿ ಕುಂದಾಪುರ ಡಿವೈಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಎನ್ಸಿಸಿ ಭೂದಳ ಹಾಗೂ ಎನ್ಎಸ್ಎಸ್ ಘಟಕವು ಮಂಗಳೂರಿನ ವೆನ್ಲಾಕ್ ಆಸ್ಪçತ್ರೆಯ ರಕ್ತನಿಧಿ ಕೇಂದ್ರ, ಆಳ್ವಾಸ್ ರೋಟರಿ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಕಾಲೇಜಿನ ಕಾಮಾರ್ಸ ಸೆಮಿನಾರ್ ಹಾಲ್ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವೆನ್ಲಾಕ್ ಆಸ್ಪತ್ರೆಯ ಪ್ರಾದೇಶಿಕ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ ಶರತ್ ಕುಮಾರ್ ರಾವ್ ಜೆ. ಮಾತನಾಡಿ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮನಸ್ಥಿತಿಯುಳ್ಳವರಿಂದಾಗಿ ಸಮಾಜದಲ್ಲಿಂದು ತುರ್ತು ರಕ್ತ ಅನಿವಾರ್ಯವಾದಾಗ ಸೂಕ್ತ ಸಮಯದಲ್ಲಿ ರಕ್ತದ ಪೂರೈಕೆ ಸಾದ್ಯವಾಗುತ್ತಿದೆ. ಇಂತಹವರ ಸಂಖ್ಯೆ ಸಮಾಜದಲ್ಲಿ ದ್ವಿಗುಣವಾಗುತ್ತಾ ಸಾಗಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತಾನಾಡಿ, ಸಮಾಜದಲ್ಲಿ ನಮ್ಮ ಹೆಸರು ಶಾಶ್ವತವಾಗಿ ಉಳಿಯಬೇಕೆಂದರೆ ನಾವು ವಾಸಿಸುವ ಪರಿಸರಕ್ಕೆ ನಾವೆಷ್ಟು ಕೊಡುಗೆ ನೀಡಿದ್ದೇವೆ ಎಂಬುದನ್ನು ಅವಲಂಭಿಸಿರುತ್ತದೆಯೇ ಹೊರತು ವೈಯಕ್ತಿಕ ಲಾಭಕ್ಕಾಗಿ ಮಾಡಿದ ಕೆಲಸಗಳಿಂದಲ್ಲ ಎಂದರು. ಆಳ್ವಾಸ್ ಬೆಸ್ಟ್ ಬ್ಲಡ್ ಡೋನರ್ ಇನ್ಸ್ಟಿಟ್ಯೂಷನ್ :ಕೋವಿಡ್ ಸಂಧರ್ಭದಲ್ಲಿ ಅತೀ ಹೆಚ್ಚು…
