Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಯೂತ್ ಮಟ್ಟದಲ್ಲಿ ಸುಭದ್ರವಾಗಿದ್ದು ಹೆಚ್ಚು ಹೆಚ್ಚು ಯುವ ಸಮೂಹ ಕಾಂಗ್ರೆಸ್ ಪಕ್ಷದ ಕಾರ್ಯವೈಕರಿಯತ್ತ ಆರ್ಕಷಿತರಾಗುತ್ತಿದ್ದಾರೆ ಎಂದು ರಾಜ್ಯದ ಯೂತ್ ಕಾಂಗ್ರೆಸ್ ಅಧ್ಯಕ್ಷ ಎಚ್. ಎಸ್ ಮಂಜುನಾಥ್ ಗೌಡ ಹೇಳಿದರು. ಅವರು ಬುಧವಾರ ಕೋಟ ಬ್ಲಾಕ್ ಕಾಂಗ್ರೆಸ್ ಇಂದಿರಾ ಕಛೇರಿಯಲ್ಲಿ ಕುಂದಾಪುರ ವಿಧಾನಸಭಾ ವ್ಯಾಪ್ತಿಯ ವಿವಿಧ ಬ್ಲಾಕ್ ಮಟ್ಟದ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗೆ ಜನಸಾಮಾನ್ಯರು ನೆಮ್ಮದಿಯ ಜೀವನವನ್ನು ಕಾಣುತ್ತಿದ್ದಾರೆ. ರೈತಪರ ವಾತಾವರಣ ಸೃಷ್ಠಿಸಿದೆ ಇಂತಹ ಯೋಜನೆಗಳಿಂದ ಕಂಗೆಟ್ಟ ಬಿಜೆಪಿ ಪಕ್ಷ ಹಿಂದೂ ಮುಸ್ಲಿಂ ಗಲಭೆ ಸೃಷ್ಠಿಸಿ ಕೊಳಕು ರಾಜಕಾರಣ ಮಾಡುತ್ತಿದೆ. ಓಟು ಚೋರಿ ಮೂಲಕ ತಮ್ಮ ಆಡಳಿತವನ್ನು ಕೇಂದ್ರದ ಬಿಜೆಪಿ ಸರಕಾರ ಭದ್ರಪಡಿಸಿಕೊಳ್ಳುತ್ತಿದೆ. ಇದು ನಾಚಿಕೆಗೆಡಿನ ವಿಚಾರವಾಗಿದೆ. ಒಟ್ಟು ದೇಶದ ವ್ಯವಸ್ಥೆಯನ್ನು ಬುಡಮೇಲು ಮಾಡುವ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ವೇಗವಾಗಿ ಜನಸಾಮಾನ್ಯರನ್ನು ತಲುಪುತ್ತಿದೆ ಎಂದರು. ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು: ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿಯಿಂದ ಉಂಟಾಗುವ ಅಮೀಬಿಕ್ ಮೆನಿಂಗೊ ಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ.  ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ. 1. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು. 2. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ 3. ನೇಗ್ಲೇರಿಯಾ ಫೌಲರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮತ್ತು ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿ ವೃಕ್ಷ ದೇವತೆ ಸಾಲು ಮರದ ತಿಮ್ಮಕ್ಕನವರಿಗೆ ನುಡಿ-ನಮನ ಎಂಬ ಬಹಳ ವೈಶಿಷ್ಟಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಮಾತನಾಡಿ, ಸಾಲು ಮರದ ತಿಮ್ಮಕ್ಕ ಅಕ್ಷರಭ್ಯಾಸ ಮಾಡದಿದ್ದರೂ, ಪ್ರಕೃತಿ ಬಗೆಗಿನ ಅವರ ಕಾಳಜಿ ಅವಿಸ್ಮರಣೀಯ. ಹೆಸರು, ಪದವಿ ಹಾಗೂ ಹಣಕ್ಕಾಗಿ ಹಪಹಪಿಸುವ ಈ ಕಾಲಘಟ್ಟದಲ್ಲಿ ತಿಮ್ಮಕ್ಕರವರು ಸಹಜವಾದ ಒಂದು ಧ್ರುವತಾರೆ. ಇಂದಿನ ಎಲ್ಲರಿಗೂ ಕೀರ್ತಿ ಶೇಷರಾದ ತಿಮ್ಮಕ್ಕರವರು ಆದರ್ಶರಾಗಬೇಕು ಮತ್ತು ಅವರ ಜೀವನ ಮೌಲ್ಯಗಳೆಲ್ಲವನ್ನು ಪ್ರತಿಯೊಬ್ಬರೂ ಕೂಡ ಅಳವಡಿಸಿಕೊಳ್ಳಬೇಕು ಎಂದರು. ಕೇವಲ ತನ್ನ ಲಾಭಕ್ಕಾಗಿ ಪ್ರಕೃತಿಯನ್ನು ದೋಚುತ್ತಿರುವ ಈ ಕಾಲದಲ್ಲಿ ನಿಸ್ವಾರ್ಥ ಸೇವೆಗೈದ ಅವರನ್ನು ನಾವು ಅನುದಿನವೂ ಸ್ಮರಿಸಬೇಕು ಮತ್ತು ಕನಿಷ್ಟ ಪಕ್ಷ ಒಂದು ಗಿಡವನ್ನಾದರೂ ನೆಟ್ಟು ಅದರ ಲಾಲನೆ-ಪಾಲನೆ ಮಾಡುವ ಜವಾಬ್ದಾರಿಯನ್ನೂ ಹೊರಬೇಕು ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಹೆಚ್ಚು ಭಾಷೆಗಳನ್ನು ನಾವು  ಕಲಿತಷ್ಟು ನಮ್ಮ ಜ್ಞಾನದ ಪರಿಧಿ ವಿಸ್ತಾರಗೊಳ್ಳುತ್ತಾ ಹೋಗುತ್ತದೆ. ­ಭಾಷಾ ಸಾಮರಸ್ಯದ ಮೂಲಕ ಸೌಹಾರ್ದಯುತ ಸಮಾಜ ನಿರ್ಮಾಣ ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಅಭಿಪ್ರಾಯಪಟ್ಟರು.  ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್.ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಪೂರ್ವಭಾವಿಯಾಗಿ ನಡೆದ ಭಾಷಾ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿನಿಯರಾದ ಅಮೂಲ್ಯ ಮತ್ತು ಮಾದರಿ, ಕನ್ನಡ ಭಾಷೆಯ ಮಹತ್ವದ ಕುರಿತು ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಕಾರ್ಯದರ್ಶಿ ಕಾರ್ತಿಕ್ ಬಿ. ಖಾರ್ವಿ  ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿ ಲಕ್ಷ್ಮಿನಿಮಿತ ಉಪಸ್ಥಿತರಿದ್ದರು. ಎಸ್‌. ವಿ ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ  ಪ್ರಾಸ್ತಾವಿಕ ಮಾತುಗಳನ್ನಾಡಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಲೋಕಾಯುಕ್ತ ಡಿವೈಎಸ್ಪಿ ವಿ. ಎಸ್. ಹಾಲಮೂರ್ತಿ ರಾವ್  ಅವರ ನೇತೃತ್ವದಲ್ಲಿ ಅಹವಾಲು ಸ್ವೀಕಾರ ಹಾಗೂ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಿತು. ಈ ವೇಳೆ ಐದು ದೂರು ಅರ್ಜಿಯನ್ನು ಲೋಕಾಯುಕ್ತ ಕಾಯಿದೆಯಡಿ ನೋಂದಣಿ ಮಾಡಿಕೊಳ್ಳಲಾಯಿತು. ಆರು ದೂರು ಅರ್ಜಿಯನ್ನು ಸ್ವೀಕರಿಸಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಾಲಾವಕಾಶ ನೀಡಿ ಕೂಡಲೇ ಬಗೆಹರಿಸುವಂತೆ ಸೂಚನೆ ನೀಡಲಾಯಿತು. ಈ ವೇಳೆ ಇನ್ಸ್ಪೆಕ್ಟರ್ ಮಂಜುನಾಥ್, ಬೈಂದೂರು ತಹಸಿಲ್ದಾರ್ ರಾಮಚಂದ್ರಪ್ಪ ಹಾಗೂ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ, ಚೇತನಾ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ.ನಂ-204, ಮಣಿಪಾಲ ದೂ.ಸಂಖ್ಯೆ : 0820-2574978 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಆತಿಥ್ಯದಲ್ಲಿ ಮೂರು ದಿನಗಳ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ 23ನೇ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ವಾರ್ಷಿಕ ಅಥ್ಲೆಟಿಕ್ ಕ್ರೀಡಾಕೂಟ 2025-26  ಸ್ವರಾಜ್ ಮೈದಾನದಲ್ಲಿ ಉದ್ಘಾಟನೆಗೊಂಡಿತು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕ್ರೀಡಾ ವಿಭಾಗದ ಕುಲಸಚಿವ ಡಾ. ವಸಂತ ಶೆಟ್ಟಿ ಮಾತನಾಡಿ, ಸಶಕ್ತ ಭಾರತವನ್ನು ಸಶಕ್ತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ನಿರ್ಮಾಣವಾಗಬೇಕೆಂದು ನಮ್ಮ ಕುಲಪತಿಗಳಾದ ಡಾ ಭಗವಾನ್ ಬಿ.ಸಿ ಅವರ ಕನಸು. ಆ ನೆಲೆಯಲ್ಲಿ ಈ ಕ್ರೀಡಾಕೂಟವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಸಹಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ದೀಪನಕ್ಕೆ ನೀಡುವ ಪ್ರೋತ್ಸಾಹವನ್ನು ಸಾಕ್ಷೀಕರಿಸುತ್ತದೆ. ಕ್ರೀಡೆ ಎನ್ನುವುದು ಕೇವಲ ಶಕ್ತಿ ಅಥವಾ ಕೌಶಲ್ಯದ ಸ್ಪರ್ಧೆಯಲ್ಲ. ಅದು ಮೌಲ್ಯಗಳ ಶಿಕ್ಷಣವಾಗಿದೆ. ಕ್ರೀಡೆ ವಿದ್ಯಾರ್ಥಿಗಳಲ್ಲಿ ಸೋಲು-ಗೆಲುವಿನ ನಡುವೆಯೂ ನಿಲ್ಲುವ ಸ್ಥೈರ್ಯ ಕಲಿಸುತ್ತದೆ. ವಿಶ್ವವಿದ್ಯಾಲಯಗಳು ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಬೈಂದೂರು, ವಾಕ್ ಶ್ರವಣ ವಿಭಾಗ ಯನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯಲ್ಲಿ ಶ್ರವಣ ತಪಾಸಣೆ ಮತ್ತು ಆಟೋಟ ಸ್ಪರ್ಧೆ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರವೀಂದ್ರ ಹೆಚ್. ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ರೋಟರಿ ಪೂರ್ವಾಧ್ಯಕ್ಷರಾದ ಪ್ರಕಾಶ್ ಭಟ್ ಉಪ್ಪುಂದ, ಯನೆಪೋಯ ಕಾಲೇಜಿನ ಶ್ರವಣ ತಜ್ಞರು ಪ್ರತೀಕ್ಷಾ, ಪಾಲಕರ ಸಂಘದ ಅಧ್ಯಕ್ಷರಾದ ಶ್ರೀಲತಾ ಜೆ. ಶೆಟ್ಟಿ, ಕ್ಲಿನಿಕಲ್ ಮೇಲ್ವಿಚಾರಕರಾದ ರಚನಾ, ಪ್ರಣೀತಾ ಉಪಸ್ಥಿತರಿದ್ದರು. ಶಿಕ್ಷಕಿ ಪ್ರಮಿಳಾ ಕಾರ್ಯಕ್ರಮ ಸ್ವಾಗತಿಸಿ, ವಂದನಾರ್ಪಣೆ ಗೈದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಹಕಾರ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆ ಮತ್ತು ಆರ್ಥಿಕ ಸ್ಥಿರತೆ ಸಾಧಿಸಿರುವ ಹಿನ್ನೆಲೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪ್ರದಾನ ಮಾಡಲಾದ ‘ಸಹಕಾರ ಮಾಣಿಕ್ಯ’ ಪ್ರಶಸ್ತಿ ಲಭಿಸಿದೆ. 67 ವರ್ಷಗಳ ಸೇವೆಯ ಇತಿಹಾಸ ಹೊಂದಿರುವ ಸಂಘವು 68ನೇ ವರ್ಷಕ್ಕೆ ಪ್ರವೇಶಿಸುತ್ತಿದ್ದು, 302 ಕೋಟಿ ರೂ. ಠೇವಣಿ, 251 ಕೋಟಿ ರೂ. ಸಾಲ ವಿತರಣೆ ಹಾಗೂ1386 ಕೋಟಿ ರೂ. ವಾರ್ಷಿಕ ವಹಿವಾಟು ದಾಖಲಿಸಿದೆ. ಸಂಸ್ಥೆ ಸತತ 16 ವರ್ಷಗಳ ಕಾಲ ‘ಅ’ ತರಗತಿ ಆಡಿಟ್ ವರ್ಗೀಕರಣ ಪಡೆಯುತ್ತಿರುವುದು ಅದರ ಪರಿಣಾಮಕಾರಿ ಆಡಳಿತ ಮತ್ತು ಜನನಂಬಿಕೆಯ ಸಂಕೇತವಾಗಿದೆ. 2024-25ನೇ ಸಾಲಿನಲ್ಲಿ ಸಂಸ್ಥೆ ಶೇ. 98.53 ರಷ್ಟು ಸಾಲ ವಸೂಲಾತಿ ಮತ್ತು 5.83 ಕೋಟಿ ರೂಪಾಯಿ ಲಾಭ ಸಾಧಿಸಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ಸಹಕಾರಿ ಸಂಸ್ಥೆಯಾಗಿ ಅನುಷ್ಠಾನಗೊಳಿಸಿರುವ ವಿಶೇಷತೆ ಸಂಸ್ಥೆಗೆ ಸೇರಿದೆ. ರೈತರಿಗಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಉತ್ತಮವಾಗಿ ಅನುಭವಿಸಿ, ಶಿಕ್ಷಣ ಸೇರಿದಂತೆ ಮತ್ತಿತರ ಬಗ್ಗೆ ಜ್ಞಾನ ಹೊಂದಿ, ವಿಕಸನ ಹೊಂದಲು ಅನುಕೂಲವಾಗುವಂತೆ ಸರಕಾರ ಅನೇಕ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದೆ. ಇವುಗಳು ಸಮರ್ಪಕವಾಗಿ ಅನುಷ್ಠಾನವಾದಾಗ ಮಾತ್ರ ಮಕ್ಕಳ ಅಭಿವೃದ್ದಿ ಸಾಧ್ಯ ಇದಕ್ಕೆ ಒತ್ತು ನೀಡಬೇಕು ಎಂದರು. ಜಿಲ್ಲೆಯಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕಳೆದ ಸಭೆಯಲ್ಲಿ ತೀಮಾನಿಸಲಾಗಿತ್ತು. ಆದರೂ ಇವರೆಗೂ ಅದಕ್ಕೆ ಸ್ಪಂದನೆ ಸಿಕ್ಕಿಲ್ಲ. ಸರಕಾರಕ್ಕೆ ಮತ್ತೊಮ್ಮೆ…

Read More