Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜು ಕಳೆದ 26 ವರ್ಷಗಳಿಂದ ಕಲಿಕೆಗೆ ಮತ್ತು ಫಲಿತಾಂಶಕ್ಕೆ ಒತ್ತು ನೀಡುವ ಮೂಲಕ ಇದುವರೆಗ 63 ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಗೆ ವಿಧ್ಯಾಭ್ಯಾಸ ನೀಡಿದ ಹೆಗ್ಗಳಿಕೆ ಪಡೆದಿದೆ. ಈಗಾಗಲೇ ಸಂಸ್ಥೆಯಲ್ಲಿ  2025-26ನೇ ಸಾಲಿನ  ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗದ  ಪಿಯು ಪ್ರವೇಶಾತಿ ಆರಂಭಗೊಂಡಿದ್ದು,  ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ತಿಂಗಳ ಮೊದಲ ವಾರದಲ್ಲಿ ಬರುವ ನಿರೀಕ್ಷೆಯಿದೆ.   ವಿದ್ಯಾರ್ಥಿಗಳು ತಮ್ಮ 9ನೇ ತರಗತಿ  ಅಥವಾ ಪ್ರಿಪರೇಟರಿ ಪರೀಕ್ಷಾ ಅಂಕಗಳ ಆಧಾರದ ಮೇಲೆ  ಕಾಲೇಜಿನಲ್ಲಿ  ತಮ್ಮ ಸೀಟುಗಳನ್ನು ಕಾಯ್ದಿರಿಸಬಹುದು.ಹತ್ತನೇ ತರಗತಿಯ ನಂತರದ ಎರಡು ವರ್ಷಗಳು, ವಿದ್ಯಾರ್ಥಿ ಜೀವನದ ಪ್ರಮುಖ ಕಾಲಘಟ್ಟ. ಈ ಎರಡು ವರ್ಷಗಳಲ್ಲಿ ವಿದ್ಯಾರ್ಥಿಗಳು ತಮ್ಮ ಓದಿನ ಕಡೆಗೆ ಹಾಗೂ ಅಂಕಗಳಿಸುವ ಕಡೆಗೆ ಹೆಚ್ಚು ಒತ್ತು ಕೊಟ್ಟು ಕಲಿಯಬೇಕಾಗುತ್ತದೆ. ಅವರ ಜೀವನದ ಗುರಿ ಸಾಧನೆಯು  ಪಿಯುಸಿಯಲ್ಲಿ ಅವರು ಪಡೆಯುವ ಅಂಕಗಳ ಮೇಲೆ  ನಿರ್ಧಾರಿತವಾಗಿರುತ್ತದೆ. ಹೆತ್ತವರು ಸಾಧಾರಣವಾಗಿ ಮಕ್ಕಳನ್ನು ಇತರ ಚಟುವಟಿಕೆಗಳಿಂದ ಮುಕ್ತಗೊಳಿಸಿ ಓದಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಶನಿವಾರ ದೇವಳದಲ್ಲಿ ಧ್ವಜಾರೋಹಣ ನೆರವೆರಿಸಲಾಯಿತು. ಈ ಸಂದರ್ಭದಲ್ಲಿ ಸೇನೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು, ದೇವಳದ ತಂತ್ರಿ ರಾಜೇಶ್ ಐತಾಳ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪರಮೇಶ್ವರ ಪಟವಾಲ್, ಪ್ರಶಾಂತ್ ಕುಮಾರ್ ಶೆಟ್ಟಿ, ಜಯರಾಮ್ ಯಡ್ತರೆ, ದೊಟ್ಟಯ್ಯ ಪೂಜಾರಿ, ಇಂದಿರಾ ಕೊಠಾರಿ, ಕೊಲ್ಲೂರು ಮೂಕಾಂವಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ ಬಾಬು ಹೆಗ್ಡೆ ತಗ್ಗರ್ಸೆ, ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಕೊಲ್ಲೂರು ದೇವಳದ ಧರ್ಮದರ್ಶಿ ಧನಾಕ್ಷೀ ವಿಶ್ವನಾಥ ಪೂಜಾರಿ ಹಾಗೂ ದೇವಳದ ಸಿಬ್ಬಂದಿಗಳು, ಊರಿನವರು ಇದ್ದರು. ಮೇ.2ರಂದು ಶ್ರೀ ದೇವರ ಮನ್ಮಹಾರಥೋತ್ಸವ ಜರುಗಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಜ್ಯೂನಿಯರ್ ಕಾಲೇಜಿನ ನಿವೃತ್ತ ಉಪನ್ಯಾಸಕ ಬೀಜಾಡಿ ಅರಸರಬೆಟ್ಟು ನಿವಾಸಿ ಕೃಷ್ಣಮೂರ್ತಿ ಪಡುವರಿ (78) ಅವರು ಶುಕ್ರವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್, ಲೈಟ್ ಹೌಸ್ ಗಂಗೊಳ್ಳಿ ಇದರ 34ನೇ ವಾರ್ಷಿಕೋತ್ಸವದ ಅಂಗವಾಗಿ ಅಖಿಲ ಕರ್ನಾಟಕ ಕೊಂಕಣ ಖಾರ್ವಿ ಕಬ್ಬಡಿ ಅಸೋಸಿಯೇಶನ್ ಮತ್ತು ಶ್ರೀ ಜಟ್ಟಿಗೇಶ್ವರ ಮಹಿಳಾ ಮಂಡಳಿ ಲೈಟ್‌ಹೌಸ್ ಗಂಗೊಳ್ಳಿ ಸಹಕಾರದೊಂದಿಗೆ ಕೊಂಕಣಿ ಖಾರ್ವಿ ಸಮಾಜ ಬಾಂಧವರಿಗಾಗಿ ಲೈಟ್‌ಹೌಸ್ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾಟದಲ್ಲಿ ಮದ್ದುಗುಡ್ಡೆ ಫ್ರೆಂಡ್ಸ್ ಕುಂದಾಪುರ ತಂಡ ಪ್ರಥಮ ಸ್ಥಾನ ಪಡೆದು ’ಶ್ರೀ ಜಟ್ಟಿಗೇಶ್ವರ ಟ್ರೋಫಿ-2025 ನ್ನು ತನ್ನದಾಗಿಸಿಕೊಂಡಿತು. ಕೋಟೆ ಜಟ್ಟಿಗೇಶ್ವರ ತಂಡ ದ್ವಿತೀಯ ಸ್ಥಾನ, ಸಹರಾ ಗಂಗೊಳ್ಳಿ ತಂಡ ತೃತೀಯ ಸ್ಥಾನ ಹಾಗೂ ನವದುರ್ಗ ಹೊನ್ನಾವರ ತಂಡ ನಾಲ್ಕನೇ ಸ್ಥಾನ ಪಡೆದುಕೊಂಡಿತು. ಸುಮಾರು 15 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಖಾರ್ವಿ, ಅತಿಥಿಯಾಗಿದ್ದ ಅಖಿಕ ಕರ್ನಾಟಕ ಕೊಂಕಣ ಖಾರ್ವಿ ಕಬ್ಬಡಿ ಅಸೋಸಿಯೇಷನ್ ಉಪಾಧ್ಯಕ್ಷ ಜಗದೀಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಿರಿಯ ದಂತ ವೈದ್ಯ ಡಾ. ಎನ್.ಪಿ. ಕಮಾಲ್ ( 93) ನಿಧನರಾಗಿದ್ದಾರೆ. ಕುಂದಾಪುರದ ಹಳೆ ಬಸ್ ನಿಲ್ದಾಣದ ವಠಾರದಲ್ಲಿ ದಂತ ವೈದ್ಯಕೀಯ ಕೇಂದ್ರ ಹಾಗೂ ಕನ್ನಡಕ ಮಳಿಗೆ ಹೊಂದಿದ್ದ ಅವರು ಹಿರಿಯ ತಲೆಮಾರಿನ ಜನಪ್ರಿಯ ವೈದ್ಯರಾಗಿದ್ದರು‌. ರೋಟರಿ ಸಂಸ್ಥೆಯಲ್ಲಿ ರೋಟರಿ ಮಾಜಿ ಅಧ್ಯಕ್ಷ ಹಾಗೂ ರೋಟರಿ ಜಿಲ್ಲಾ ಅಸಿಸ್ಟಂಟ್ ಗವರ್ನರ್ ಸೇವೆ ಸಲ್ಲಿಸಿ ಜನಾನುರಾಗಿ ಆಗಿದ್ದರು. ವಕ್ವಾಡಿಯಲ್ಲಿ ಕನ್ನಡಕ ಉತ್ಪಾದನಾ ಘಟಕವನ್ನು ಆರಂಭಿಸಿ ಬಹಳ ವರ್ಷ ನಡೆಸಿದ್ದರು. ಮೂಲತಃ ಉತ್ತರ ಕೇರಳದವರಾಗಿದ್ದು ಅನೇಕ ವರ್ಷಗಳ ಹಿಂದೆ ಕುಂದಾಪುರಕ್ಕೆ ಬಂದು ನೆಲೆಸಿದ್ದರು. ಅವರು 4 ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ನಡೆಸುವ ರಾಷ್ಟ್ರಮಟ್ಟದ ಎನ್‌ಐಎಫ್‌ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ಮೊದಲ ಹಂತದ ಪರೀಕ್ಷೆಯಲ್ಲಿ ತೇರ್ಗಡೆಯನ್ನು ಹೊಂದಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸೃಜನ್ ಆರ್ ಗುರಿಕಾರ್, ಯಶ್ಮಿತಾ ಕೆ., ಚರಣ್ ಜಿಎಂ., ಚಿನ್ಮಯಿ ಆರ್., ಹರ್ಷ ಎಸ್. ಗೌಡ, ಜೀವಿತ ಜಿ. ಆರ್., ಮಾನಸಿ ಪಿ., ನವ್ಯ ಕೆ. ಆರ್., ಪೂರ್ವಿಕ್ ಕೆ.ಸಿ., ಪ್ರಾಪ್ತಿ ಎಂ. ಗೌಡ, ರಕ್ಷಾ, ಸುಖಿ ಆರ್. ಗೌಡ, ವಿಕಾಸ್ ಡಿ. ಸಿ. ಆಯ್ಕೆಯಾಗಿದ್ದಾರೆ. ಪಿಯು ವಿದ್ಯಾರ್ಥಿಗಳು ಎದುರಿಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅತ್ಯುತ್ತಮ ತರಬೇತಿಯನ್ನು ನೀಡುತ್ತಾ ಬಂದಿದ್ದು ಎಲ್ಲಾ ವಿಭಾಗದಲ್ಲೂ ಯಶಸ್ವೀ ಫಲಿತಾಂಶ ನೀಡುತ್ತಿದೆ. ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, ಎನ್‌ಐಎಫ್‌ಟಿ ಪರೀಕ್ಷೆಯ ಸಂಯೋಜಕರಾದ ರಕ್ಷಿತ್, ಸುಮಂತ್ ದಾಮ್ಲೆ, ಶರತ್ ಅಭಿನಂದಿಸಿದ್ದಾರೆ.

Read More

ಕುಂದಾಪರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ತುಳುನಾಡು ಸರ್ವಧರ್ಮೀಯರ ನಾಡು. ಇಲ್ಲಿ ಜಾತಿ ಮತ ಪಂಥವೆಂಬ ಭೇದವಿಲ್ಲ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ನುಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ತುಳು ಸಂಘದ ಸಹಯೋಗದಲ್ಲಿ ತುಳು ಭಾಷೆ ಬದ್ಕ್ ಗೇನದ ಪೊಲಬು ತುಲಿಪು ಕಾರ್ಯಕ್ರಮ ಶುಕ್ರವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಿತು. ಶೈಕ್ಷಣಿಕ ಕ್ಷೇತ್ರಕ್ಕೆ ಯಾವ ಭಾಷೆ ಪ್ರವೇಶಿಸುತ್ತದೆಯೋ ಆ ಭಾಷೆಯ ಮೌಲ್ಯ ಮತ್ತು ವಿಸ್ತಾರಗೊಳ್ಳುತ್ತದೆ. ಇಂತಹ ಕಾರ್ಯಕ್ರಮಗಳು ತುಳು ಭಾಷೆಯನ್ನು ಇನ್ನಷ್ಟು ಶ್ರೀಮಂತಗೊಳಿಸಬಲ್ಲದು.  ತುಳುನಾಡಿನಲ್ಲಿ 160ಕ್ಕೂ ಹೆಚ್ಚಿನ ಕ್ರೀಡೆಗಳಿವೆ. ತುಳುನಾಡಿನ ಔಷದೋಪಚಾರ ವಿಶಿಷ್ಟವಾಗಿದೆ. ಪ್ರತಿಯೊಂದು ಊರಿನ ಹೆಸರಿಗೂ ಪ್ರಾಚೀನ ಇತಿಹಾಸವಿದೆ. ಇದರ ಬಗ್ಗೆ ಅಧ್ಯಯನ ಮಾಡಿ ತುಳುವನ್ನು ಸಮಗ್ರ ನೆಲೆಯಲ್ಲಿ ಕಟ್ಟುವ ಕೆಲಸವಾಗಬೇಕಿದೆ. ಸುಮಾರು 5,000 ಕ್ಕೂ ಹೆಚ್ಚಿನ ತುಳು ಪುಸ್ತಕಗಳು  ತುಳು ಸಾಹಿತ್ಯ ಅಕಾಡೆಮಿಯಲ್ಲಿ  ಲಭ್ಯವಿದೆ. ಇದರ ಮೂಲಕ ತುಳುನಾಡಿನ ಪರಂಪರೆಯನ್ನು ತಿಳಿದುಕೊಳ್ಳಬಹುದಾಗಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಹಾಗೂ ಧಾರ್ಮಿಕ ಪರಿಷತ್ತಿನ ಜಿಲ್ಲಾ ಧಾರ್ಮಿಕ ಪರಿಷತ್‌ನ ಸಭೆಯ ನಿರ್ಣಯದಂತೆ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಬ್ರಹ್ಮಾವರ ತಾಲೂಕಿನ ಮೂಡಹಡು ಗ್ರಾಮದ ಯಡಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22 ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಮೇ 5 ರ ಒಳಗಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯ ಮಾಪನದ ನಂತರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಅರಸ್ 595 ಅಂಕದೊಂದಿಗೆ ರಾಜ್ಯ ಮಟ್ಟದಲ್ಲಿ 5 ನೇ ರ್ಯಾಕ್‌ ಪಡೆದುಕೊಂಡು, ಉಡುಪಿ ಜಿಲ್ಲೆಗೆ ದ್ವಿತೀಯ, ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿ ಅವರಿಂದ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ ವಿಕ್ರಮ ಪ್ರಶಸ್ತಿಯನ್ನು ಹೆಮ್ಮಾಡಿ ಹಾಗೂ ಕಿರಿಮಂಜೇಶ್ವರದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಗಣೇಶ ಮೊಗವೀರ ಅವರಿಗೆ ಶುಕ್ರವಾರದಂದು ಉಡುಪಿ ರಾಜಾಂಗಣದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀ ಗಣೇಶ ಮೊಗವೀರ ಅವರು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಎರಡು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದು ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ಇವರ ಶಿಕ್ಷಣ ಕ್ಷೇತ್ರದ ಸಾಧನೆ ಹಾಗೂ ಸೇವೆಯನ್ನು ಪರಿಗಣಿಸಿ ಶ್ರೀ ಗಣೇಶ ಮೊಗವೀರ ಅರವಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Read More