Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಿಸ್ವಾರ್ಥ ಸೇವಾ ಟ್ರಸ್ಟ್ ಹೆಸರಿಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿದೆ, ಸಮಾಜದ ಬಡ ಹಾಗೂ ಅನಾರೋಗ್ಯ ಪೀಡಿತರ ನೆರವಿಗೆ ಧಾವಿಸುವ ಜೊತೆಗೆ ಯಾವುದೇ ಪ್ರಚಾರದ ಗೀಳು ಇಲ್ಲದೆ ಪ್ರತಿ ತಿಂಗಳು ಸಹಾಯದ ನೆರವು ನೀಡುತ್ತಿದ್ದಾರೆ ಇದೊಂದು ಶ್ರೇಷ್ಠವಾದ ಮಹತ್ಕಾರ್ಯವಾಗಿದೆ ಎಂದು ಪತ್ರಕರ್ತ ರವೀಂದ್ರ ಕೋಟ ಪ್ರಶಂಸನೀಯ ಮಾತುಗನ್ನಾಡಿದರು. ಅವರು ಕೋಟದ ನಿಸ್ವಾರ್ಥ ಸೇವಾ ಟ್ರಸ್ಟ್ ತಿಂಗಳ ಸರಣಿ ಸಹಾಯಹಸ್ತ ಯೋಜನೆಯಡಿ ಕೋಟದಲ್ಲಿ ವಾಸ್ತವ್ಯವಿರುವ ಬಡ ಕುಟುಂಬದ ವಿಜಯಲಕ್ಷ್ಮೀ ಶಾಸ್ತ್ರಿ ಅವರಿಗೆ ದಿನಸಿ ಪರಿಕರ ಹಸ್ತಾಂತರಿಸಿ ಮಾತನಾಡಿದರು. ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಕಾರ್ಯ ಭಗವಂತನಿಗೆ ಅತಿ ಹತ್ತಿರವಾದ ಕಾರ್ಯವಾಗಿದೆ ಈ ದಿಸೆಯಲ್ಲಿ ನಿಸ್ವಾರ್ಥ ಸೇವಾ ಟ್ರಸ್ಟ್ ನಂತೆ ಒಂದಿಷ್ಟು ಒಂದಿಷ್ಟು ಸಂಘಟನೆಗಳು ಕಾರ್ಯಾಚರಿಸಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಕಿ ಸವಿತಾ ವೆಂಕಟೇಶ ಉಡುಪ, ನಿಸ್ವಾರ್ಥ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪ್ರದೀಪ್ ಶೆಟ್ಟಿ ಕೋಟ, ಕಾರ್ಯದರ್ಶಿ ಪ್ರದೀಪ್ ಪೂಜಾರಿ ಕೋಟ, ಟ್ರಸ್ಟ್ ಪ್ರಮುಖರಾದ ಗೋಪಿನಾಥ್ ಕಿಣಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯ ಪೂರ್ವಭಾವಿ ಸಭೆ ನಡೆಯಿತು. ರಾಜ್ಯದ ಪ್ರತಿಷ್ಠಿತ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯು ಎ. 26 ಶನಿವಾರದಂದು ನಡೆಯಲಿದೆ. ಪೂರ್ವಭಾವಿ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ಸಹಕಾರ ಭಾರತೀಯ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಪ್ರಾತಿನಿಧ್ಯ ಕೊಟ್ಟು ಈ ಬಾರಿ ಹೊಸ ಉತ್ಸಾಹಿ ಹೈನುಗಾರರನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕೆ ಇಳಿಸಿದ್ದು. ಕುಂದಾಪುರ ಉಪವಿಭಾಗ ಕ್ಷೇತ್ರದ 7 ಸಾಮಾನ್ಯ ಸ್ಥಾನಗಳಿಗೆ ಅಭ್ಯರ್ಥಿಯಾಗಿ ಕುಂದಾಪುರ ತಾಲೂಕಿನಿಂದ ಕಾಡೂರ ಸುರೇಶ್ ಶೆಟ್ಟಿ, ಬೈಂದೂರು ತಾಲೂಕಿನಿಂದ ಸುಬ್ಬಣ್ಣಶೆಟ್ಟಿ, ಟಿ.ವಿ ಪ್ರಾಣೇಶ್ ಯಡಿಯಾಳ್, ಕಾರ್ಕಳ ತಾಲೂಕಿನಿಂದ ಕೆ. ಮೋಹನ್ ದಾಸ್ ಅಡ್ಯಾಂತಾಯ, ಹೆಬ್ರಿ ತಾಲೂಕಿನಿಂದ ಭೋಜ ಪೂಜಾರಿ, ಕಾಪುಯಿಂದ ಅಶೋಕ್ ರಾವ್, ಉಡುಪಿಯಿಂದ ಹೆರ್ಗ ದಿನಕರ್ ಶೆಟ್ಟಿ ಮತ್ತುಉಡುಪಿ ಜಿಲ್ಲೆಯ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಮ್ಮು ಕಾಶ್ಮೀರದಲ್ಲಿ ನಡೆದ ಅಖಿಲ ಭಾರತ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಉಪ್ಪಿನಕುದ್ರು ಗ್ರಾಮದ ನಾಗಶ್ರೀ 76 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಮೇ ತಿಂಗಳಲ್ಲಿ ನಡೆಯುವ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ ಗೆ ಕರ್ನಾಟಕದ ಮಹಿಳಾ ವಿಭಾಗದಿಂದ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶದ ಅವರು ಕಠಿಣ ಪರಿಶ್ರಮದಿಂದ ವೇಯ್ಟ್‌ ಲಿಫ್ಟಿಂಗ್ ಹಾಗೂ ಪವರ್ ಲಿಫ್ಟಿಂಗ್ ಸಾಧನೆ ಮಾಡಿ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದುಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದೇವಾಲಯ ಮತ್ತು ಶಾಲೆ ಊರಿನ ಎರಡು ಕಳಶವಿದ್ದಂತೆ. ಮುಖ್ಯವಾಗಿ ಶಾಲೆಗಳು ನಶಿಸಿಹೋದರೆ ಮುಂದಿನ ಪೀಳಿಗೆಗೆ ಸಮಸ್ಯೆಯಾಗಬಹುದು. ಈ ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸುಮಾರು 90 ವರ್ಷ ಇತಿಹಾಸವುಳ್ಳ ಈ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ದಾನಿಗಳಿಂದ ಸಂಗ್ರಹಿಸಿದ ಕೆಲವು ಸವಲತ್ತುಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಇಲ್ಲಿನ ಕಾಲ್ತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 90ರ ಸಂಭ್ರಮ ಹಾಗೂ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉದ್ಯಮಿ ಹೆಚ್. ಜಯಶೀಲ ಶೆಟ್ಟಿ ಸಮಾರಂಭವನ್ನು ಉದ್ಘಾಟಿಸಿ, ತಮ್ಮ ಸಂಸ್ಥೆಯಿಂದ ಕೊಡುಗೆಯಾಗಿ ನೀಡಿದ ಶಾಲಾ ವಾಹನವನ್ನು ಎಸ್‌ಡಿಎಂಸಿಗೆ ಹಸ್ತಾಂತರಿಸಿದರು. ಈ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷ ಬಟ್ನಾಡಿ ಅಣ್ಣಪ್ಪ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ತಾಪಂ ಮಾಜಿ ಸದಸ್ಯ ಎಚ್. ವಿಜಯ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಯಕ್ಷಗಾನ ಕಲೆ ಕರ್ನಾಟಕದ ಕೆಲವೇ ಜಿಲ್ಲೆಗಳಿಗೆ ಸೀಮಿತವಾದ್ದದ್ದು. ವಿದ್ಯುನ್ಮಾನ ಮಾಧ್ಯಮಗಳಿಂದಾಗಿ ಯಕ್ಷಗಾನ ಜನರಿಂದ ದೂರವಾಗುತ್ತಿದೆ ಎಂದು ಕೆಲವರು ಆಡಿಕೊಳ್ಳುತ್ತಾರೆ. ಆದರೆ ಹಿಮ್ಮೇಳ ಮತ್ತು ಅರ್ಥದಾರಿಗಳು ಮಾತ್ರ ಸಾಕಾಗುವ ಅತ್ಯಂತ ಸರಳ ರಂಗಭೂಮಿಯಾದ ತಾಳಮದ್ದಲೆಗೂ ದೊಡ್ಡ ಶ್ರೋತೃವರ್ಗ ಇರುವುದು ಜೀವಂತ ಕಲೆ ನಶಿಸದು ಎಂಬ ಭರವಸೆ ನೀಡುತ್ತದೆ ಎಂದು ನಿವೃತ್ತ ಯೋಧ ಬೈಂದೂರು ಚಂದ್ರಶೇಖರ ನಾವಡ ಹೇಳಿದರು. ಅವರು ಲಾವಣ್ಯ ಬೈಂದೂರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಯಕ್ಷಗಾನ ತಾಳಮದ್ದಳೆ ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ, ತಾಳಮದ್ದಳೆ, ಹೋವಿನಕೋಲು ಮುಂತಾದವುಗಳು ನಮ್ಮ ಪರಂಪರೆಯ ಭಾಗವಾಗಿದ್ದು ಮಹಾ ಕಾವ್ಯಗಳನ್ನು ಜನರಿಗೆ ತಲುಪಿಸುವ ಉತ್ತಮ ಮಾಧ್ಯಮವಾಗಿದೆ. ಹಿಂದಿನ ಪರಂಪರೆಯ ಪ್ರದರ್ಶನಗಳಿಗೆ ಹೋಲಿಸಿದಾಗ ಈಗನವು ಅಂತ:ಸತ್ವ ಕಲೆದುಕೊಂಡಿವೆ ಎಂಬ ಟೀಕೆ ಇದೆ. ಆದರೆ ಕಾಲದ ಆಘಾತಗಳನ್ನು ತಡೆದು ನಿಲ್ಲುವ ಶಕ್ತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನಮ್ಮ ದೇಶದಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿ ಸಮುದಾಯವಿದ್ದು, ನಾವು ಕ್ರೀಡೆಗೆ ವಿಶೇಷ ಆಸಕ್ತಿ ನೀಡಬೇಕು. ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶವಿದೆ. ದೇಶದ ಯುವಶಕ್ತಿ ರಾಷ್ಟ್ರ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ. ಆದರೆ ನಮ್ಮ ಸರ್ಕಾರ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡದೆ ಇರುವುದು ವಿದ್ಯಾರ್ಥಿಗಳ ಸಾಧನೆಗೆ ಅಡ್ಡಿಯಾಗುತ್ತಿದೆ. ಇದರಿಂದ ಜಾಗತಿಕ ಮಟ್ಟದಲ್ಲಿ ಅತ್ಯಂತ ಕಡಿಮೆ ಯುವ ಸಂಪನ್ಮೂಲ ಇರುವ ದೇಶದ ಜೊತೆಗೂ ನಮಗೂ ಹೊರಡಲು ಕಷ್ಟವಾಗುತ್ತಿದೆ ಎಂದು ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ನುಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಈಜುಕೊಳ ಆವರಣದಲ್ಲಿ ದಕ್ಷಿಣ ಕನ್ನಡ ಸ್ವಿಮ್ಮಿಂಗ್ ಅಸೋಸಿಯೇಷನ್‌ನ ಖೇಲೋ ಇಂಡಿಯಾಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ನಮ್ಮ ಜಿಲ್ಲೆಯಲ್ಲಿ ಈಜುಗಾರರಿಗೆ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಲು ಸಹಕಾರಿಯಾಗುವಂತ ವ್ಯವಸ್ಥೆ ಕಲ್ಪಿಸಬೇಕು ಎಂದರು. ದಕ್ಷಿಣ ಕನ್ನಡ ಈಜುಗಾರರ ಸಂಘದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರಮಸಂಸ್ಕೃತಿಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡಾಗ ಪರಿಪೂರ್ಣವಾದ ಸಂಸ್ಕಾರ ಪಡೆಯಲು ಸಾಧ್ಯ. ಭಾರತೀಯತೆ ಮತ್ತು ಇಲ್ಲಿನ ಸಂಸ್ಕೃತಿಗೆ ಜಗತ್ತಿನಾದ್ಯಂತ ಮಹತ್ವವಿದೆ. ಈ ಸಂಸ್ಕೃತಿ, ಸಂಪ್ರದಾಯವನ್ನು ಅನುಸರಿಸಿ ಬದುಕುವಂತಾದಾಗ ಜೀವನ ಹಸನಾಗುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಮಾಜಸೇವಕರಾದ ಬೆಂಗಳೂರಿನ ಮೈಸೂರು ಮರ್ಕಂಟೈಲ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾ| ಎಚ್.ಎಸ್. ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿರುವ ಸಾಂಪ್ರದಾಯಿಕ ದಿನದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸಂದರ್ಭ ಸಂಸ್ಥೆಯ ಆಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸಮಾಜಸೇವೆಯನ್ನೇ ಬದುಕಾಗಿಸಿಕೊಂಡು ಸಂಪ್ರದಾಯವನ್ನು ಗೌರವಿಸುವವರನ್ನು ನೋಡಿ ಕಲಿಯುವಂತಾಗಬೇಕು ಎಂದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ ಅವುಗಳ ಮೌಲ್ಯವನ್ನು ವಿದ್ಯಾರ್ಥಿಗಳು ಅರಿಯುವಂತಾದಾಗ ಶಿಕ್ಷಣ ಪರಿಪೂರ್ಣವಾಗಲು ಸಾಧ್ಯ ಎಂದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಏಪ್ರಿಲ್ 24 ರಿಂದ ಮೇ 8 ರ ವರೆಗೆ ಏಪ್ರಿಲ್-ಮೇ ಮಾಹೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಜಿಲ್ಲೆಯ ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು, ಪರೀಕ್ಷಾ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಾದಾಮೃತ ಕಲಾದೀವಿಗೆ ಎನ್ನುವ ಸಂಸ್ಥೆಯ ಮೂಲಕ ರಾಘವೇಂದ್ರ ಹೆಗಡೆ ಯಲ್ಲಾಪುರ ಅವರು ಕಳೆದ ಐದು ವರ್ಷಗಳಿಂದ ನೀಡುತ್ತಿರುವ  ದಿ. ನಗರ ಸುಬ್ರಹ್ಮಣ್ಯ ಆಚಾರ್ ಇವರ ಸ್ಮರಣಾರ್ಥ ಪ್ರಶಸ್ತಿಯನ್ನು ಖ್ಯಾತ ಭಾಗವತ ದಿ. ಪ್ರಾಚಾರ್ಯ ನಾರಣಪ್ಪ ಉಪ್ಪೂರರ ಪುತ್ರ ಮದ್ದಲೆವಾದಕ ಸುರೇಶ ಉಪ್ಪೂರು ಅವರಿಗೆ ಇತ್ತೀಚಿಗೆ ಪಾರಂಪಳ್ಳಿಯ ರಾಘವೇಂದ್ರ ಹೆಗಡೆ ಸ್ವಗೃಹದಲ್ಲಿ ಪ್ರದಾನಿಸಲಾಯಿತು. ಸಭೆಯಲ್ಲಿ ಹಂಗಾರಕಟ್ಟೆ ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್, ಆದರ್ಶ ಆಸ್ಪತ್ರೆಯ ವೈದ್ಯರಾದ ಡಾ. ಆದರ್ಶ ಹೆಬ್ಬಾರ್, ಉಪನ್ಯಾಸಕ ಪ್ರೊ. ಪವನ್ ಕಿರಣಕೆರೆ, ಕೆ. ಎಂಸಿ ವೈದ್ಯರಾದ ಡಾ. ಕೌಶಿಕ್ ಉರಾಳ್, ಕಾರ್ಯಕ್ರಮ ಸಂಯೋಜಕ ರಾಘವೇಂದ್ರ ಹೆಗಡೆ, ಪತ್ನಿ ನಮನ ಹೆಗಡೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರಸಿದ್ಧ ಕಲಾವಿದರಿಂದ ಗಾನವೈಭವ ಕಾರ್ಯಕ್ರಮ ನಡೆಯುತು. ಗಾನವೈಭವದಲ್ಲಿ ಭಾಗವತರಾದ ಸುರೇಶ ಶೆಟ್ಟಿ ಶಂಕರನಾರಾಯಣ, ಪ್ರಸನ್ ಭಟ್ ಬಾಳ್ಕಲ್, ಸುಧೀರ ಭಟ್ ಪೆರ್ಡೂರು, ಎನ್.ಜಿ ಹೆಗಡೆ ಯಲ್ಲಾಪುರ, ಶಿವಾನಂದ ಕೋಟ ಭಾಗವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪ್ರಪಂಚದ ಜ್ಞಾನವನ್ನು ಪಡೆಯಬೇಕು ಆದರೆ ಅದಕ್ಕಿಂತ ಮೊದಲು ತಂದೆ ತಾಯಿ, ಅಜ್ಜ-ಅಜ್ಜಿ  ಹಾಗೂ ನಮ್ಮ ಸುತ್ತ ಮುತ್ತಲಿನ ಚರಿತ್ರೆಗಳ ಬಗ್ಗೆ, ಆಚಾರ-ವಿಚಾರಗಳ ಬಗ್ಗೆ ಅರಿವನ್ನು ಪಡೆಯಬೇಕು ಎಂದು ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರಘುರಾಮ ದೇವಾಡಿಗ ಹೇಳಿದರು. ಅವರು ಇಲ್ಲಿನ ಸುಜ್ಞಾನ್ ಎಜುಕೇಷನಲ್ ಟ್ರಸ್ಟ್ ನ ವತಿಯಿಂದ ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾದ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು. ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಲ್ಯದಲ್ಲಿಯೇ ಹೆಚ್ಚು ಕ್ರೀಯಾಶೀಲರಾಗಲು ಮತ್ತು ಖುಷಿ- ಖುಷಿಯಿಂದ ಬಾಲ್ಯವನ್ನು ಕಳೆಯಲು ಬೇಸಿಗೆ ಶಿಬಿರಗಳು ಉತ್ತಮ ಸಹಕಾರಿಯಾಗುತ್ತದೆ. ಈ ಬೇಸಿಗೆ ಶಿಬಿರ ಮಂಥನ ಕಾರ್ಯಕ್ರಮದಲ್ಲಿ ಹೆಸರಾಂತ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸುತ್ತಿದ್ದು, ಮಕ್ಕಳಿಗೆ ತುಂಬಾ ಜ್ಙಾನವನ್ನು ಪಡೆಯಲು ಸಾದ್ಯವಾಗುತ್ತದೆ. ಮಕ್ಕಳು ಉತ್ತಮ ಶಿಕ್ಷಣದ ಜೊತೆಗೆ ಒಳ್ಳೆಯ ಸಂಸ್ಕಾರವನ್ನು ಪಡೆದು ಭವ್ಯ ಭಾರತದ ಪ್ರಜೆಗಳಾಗಬೇಕು ಎಂದರು. ಪ್ರಥಮ ದರ್ಜೆ…

Read More