ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇಬ್ಬರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯ 2023-24 ನೇ ಸಾಲಿನಲ್ಲಿ ನಡೆಸಿದ ಪದವಿ ಪರೀಕ್ಷೆಗಳಲ್ಲಿ ರ್‍ಯಾಂಕ್ ಪಡೆದು ದಾಖಲೆ ನಿರ್ಮಿಸಿರುತ್ತಾರೆ. ಕಲಾ ವಿಭಾಗದಲ್ಲಿ ಅಕ್ಷತಾ ಶೆಟ್ಟಿ 2ನೇ ರ್‍ಯಾಂಕ್ ಪಡೆದು ದಾಖಲೆ ನಿರ್ಮಿಸಿದರೆ, ನಿರ್ವಹಣಾ ವಿಭಾಗದಲ್ಲಿ ಸ್ನೇಹ ದಾಸ್ 6ನೇ ರ್‍ಯಾಂಕ್ ಪಡೆದಿರುತ್ತಾರೆ. ಹಾಲಾಡಿ ಸಮೀಪದ ಕಕ್ಕುಂಜೆಯ ಕರುಣಾಕರ್ ಶೆಟ್ಟಿ ಮತ್ತು ಮುಕಾಂಬಿಕಾ ಶೆಟ್ಟಿ ದಂಪತಿಗಳ ಪುತ್ರಿ ಅಕ್ಷತಾ ಶೆಟ್ಟಿ ತನ್ನ ಸತತವಾದ ಪ್ರಯತ್ನ ಶ್ರಮಗಳಿಂದ ಈ ಶೈಕ್ಷಣಿಕ ಸಾಧನೆಯನ್ನು ಮಾಡಿರುತ್ತಾರೆ. ಕುಟುಂಬ ನಿರ್ವಹಣೆಗೆ ತಾಯಿ ಗೇರು ಬೀಜ ಸುಲಿಯುವ ಕೆಲಸ ಮಾಡುತ್ತಾರೆ. ಸಾಯಿಬ್ರಕಟ್ಟೆಯ ರಿಕ್ಷಾ ಚಾಲಕ ಮಂಜುನಾಥ್ ದಾಸ್ ಮತ್ತು ಅಂಗನವಾಡಿ ಕಾರ್ಯಕರ್ತೆ ವತ್ಸಲಾ ದಾಸ್ ಅವರ ಪುತ್ರಿ ಸ್ನೇಹದಾಸ್ ಬಿಬಿಎ ಪದವಿಯಲ್ಲಿ 6ನೇ ರ್‍ಯಾಂಕ್ ಪಡೆದು ಕಾಲೇಜಿಗೆ ಮತ್ತು ಊರಿಗೆ ಗೌರವವನ್ನು ತಂದಿರುತ್ತಾರೆ. 20 ವರ್ಷಗಳ ನಂತರ ಪದವಿಯಲ್ಲಿ ಎರಡು ರ್‍ಯಾಂಕ್ ಪಡೆದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಪೇಸ್ ಮೀಡಿಯಾ ಡಿಸಿಎಕ್ಸ್ ಸಿಸ್ಟಮ್ಸ್ ಲಿಮಿಟೆಡ್ ಅರ್ಷಿಸುವ, ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ದಾನ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಂತ್ರಾಲಯ, ಪರಮಪೂಜ್ಯ ಶ್ರೀ 1008 ಶ್ರೀ ಮತ್ಸುಬುಧೇಂದ್ರ ತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2025ನ್ನು ಪ್ರಶಸ್ತಿಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ಕ್‌ನ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಗಣೇಶ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿತ್ತು. ಅವರು ಶಿಕ್ಷಣ ಕ್ಷೇತ್ರದಲ್ಲಿ ಇದುವರೆಗೆ ಸಲ್ಲಿಸಿದ ಸೇವೆ ಹಾಗೂ ಕೊಡುಗೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು. ಇತ್ತೀಚಿಗೆ ಮಂತ್ರಾಲಯದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಮಂತ್ರಾಲಯ ಸ್ವಾಮೀಜಿ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ’ಮಹಿಳೆ ಇಲ್ಲದೇ ಪ್ರಕೃತಿ ಇಲ್ಲ. ’ಶಕ್ತಿ’ಇಲ್ಲದೆ ಶಿವನೂ ನಿಶ್ಶಕ್ತ. ಶೋಷಣೆ ಮೆಟ್ಟಿ ನಿಲ್ಲುವವಳೇ ನಿಜವಾದ ’ಹೆಣ್ಣು’. ಹೆಣ್ಣಿಗೆ ವಿದ್ಯೆಯೇ ಸೌಂದರ್ಯ, ತೇಜಸ್ಸುʼ ಎಂದು ಹಿರಿಯ ರಂಗಕರ್ಮಿ, ಬೆಳ್ಳಿತೆರೆ ಮತ್ತು ಕಿರುತೆರೆ ನಟಿ ಗಿರಿಜಾ ಲೋಕೇಶ್ ಹೇಳಿದರು. ಅವರು ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣ (ಕೃಷಿಸಿರಿ) ವೇದಿಕೆಯಲ್ಲಿ ಶನಿವಾರ ಆಳ್ವಾಸ್ ಮಹಿಳಾ ವೇದಿಕೆ ’ಸಕ್ಷಮ’ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡರ ಸ್ಮರಣೆಯಲ್ಲಿ ಆಯೋಜಿಸಿದ ’ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2025’ ಅನ್ನು ಉದ್ಘಾಟಿಸಿ ಮಾತನಾಡಿದರು. ʼಮಹಿಳೆ ಇಲ್ಲದೇ ಪ್ರಕೃತಿಯ ಇಲ್ಲ. ಆದರೆ ಹಿಂದೆ ಪುರಷನೂ ಬೇಕು ಎಂಬುದು ಗುಟ್ಟು’ ಎಂದು ನಸುನಕ್ಕ ಅವರು, ’ವಿದ್ಯೆ- ವಿನಯ ಇಲ್ಲದವರಿಗೆ ಮೇಕಪ್ ಹೆಚ್ಚು ಬೇಕು’ ಎಂದು ಚಟಾಕಿ ಹಾರಿಸಿದರು. ʼಅಮ್ಮ ಹೊಡೆದು ತಿದ್ದಿ ತೀಡಿದಾಗ ಗೊತ್ತಾಗಲಿಲ್ಲ. ಈಗ ಅದರ ಫಲ ಅನುಭವಿಸುತ್ತಿದ್ದೇನೆ. ಅಮ್ಮನ ಋಣ ಹೇಗೆ ತೀರಿಸಲಿ’ಎಂದು ಭಾವುಕರಾದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ:8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಐಟಿಐ ಬಿದ್ಕಲ್ ಕಟ್ಟೆ ಕುಂದಾಪುರ, ಟೋಯೋಟಾ ಕಿರ್ಲೋ ಸ್ಕರ್ ಸಂಸ್ಥೆ ಮತ್ತು ಕೋಟ ಪೋಲಿಸ್ ಅವರ ಸಹಯೋಗದೊಂದಿಗೆ ಕೈಗಾರಿಕೆ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ಜಾಥಾವನ್ನು ನಡೆಸಲಾಯಿತು. ಪ್ರಾಚಾರ್ಯ ಗಂಗಾಧರಪ್ಪ ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಲಾಯಿತು. ತರಬೇತಿ ಅಧಿಕಾರಿ ಸತೀಶ ಎಸ್. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಟ ಪೋಲಿಸ್ ಠಾಣೆಯ ಎಎಸ್‌ಐ ಗೋಪಾಲ ಪೂಜಾರಿ, ಟೋಯೋಟಾ ಸಂಸ್ಥೆಯ ಭಾಸ್ಕರ್ ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಸ್ಥೆಯ ಸಿಬ್ಬಂದಿ ಯಶಸ್ವಿಯಾಗಿ ಕಾರ್ಯಕ್ರಮ ಸಂಯೋಜಿಸಿದ್ದರು. ಈ ಸಂದರ್ಭದಲ್ಲಿ ತರಬೇತಿದಾರರಿಗೆ ಹಾಗೂ ಸಾರ್ವಜನಿಕರಿಗೆ ಸುರಕ್ಷ ನಿಯಮಗಳ ಮಾಹಿತಿ ನೀಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಪ್ರಥಮ ಮತ್ತು ದ್ವಿತೀಯ ಎಂ.ಬಿ.ಎ ಪದವಿ ವಿದ್ಯಾರ್ಥಿಗಳಿಗೆ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಇತ್ತೀಚಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಮಹಿಳಾ ಸಬಲೀಕರಣ ಕುರಿತು ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಿದರು ಮತ್ತು ಸಮಾಜದಲ್ಲಿ ಪುರುಷರಷ್ಟೇ ಮಹಿಳೆಯರಿಗೂ ಸಮಾನ ಹಕ್ಕು ಇರಬೇಕೆಂದು ಒತ್ತಿ ಹೇಳಿದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲಾರದ ಡಾ. ಅಬ್ದುಲ್ ಕರೀಂ, ಕ್ರಿಪಾ ಎಂ. ಎಂ (ಅಸಿಸ್ಟೆಂಟ್ ಡೈರೆಕ್ಟರ್ ಫೀಲ್ಡ್ ಪ್ರೋಗ್ರಾಮ್ ನಮ್ಮ ಭೂಮಿ), ನಮ್ಮ ಭೂಮಿಯ ಸುರೇಶ, ಆಶಾ, ಎಂ. ಬಿ. ಎ. ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ, ಎಂಬಿಎ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಎಂ.ಬಿ.ಎ ವಿದ್ಯಾರ್ಥಿನಿ ಗೌತಮಿ ನಿರೂಪಣೆ ಮತ್ತು ವಂದನಾರ್ಪಣೆ ಮಾಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 2024-25ರ ಸಾಲಿನಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಇಲ್ಲಿಯ ಶಿಕ್ಷಕರಾದ ಅಶೋಕ್ ತೆಕ್ಕಟ್ಟೆ, ಮುಖ್ಯ ಅತಿಥಿಗಳಾಗಿ ಆಗಮಿಸಿ ಶೇ. 8೦ ಮತ್ತು ಶೇ.90 ಕ್ಕಿಂತಲೂ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಫಲಕ ನೀಡಿ, ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹಾಗೂ ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸ್ವಾಗತಿಸಿ, ಸಹಶಿಕ್ಷಕಿ ಮಹಿಮಾ ನಿರೂಪಿಸಿ, ವಿದ್ಯಾರ್ಥಿ ಹರಿದಾಸ್ ಆರ್. ಮಲ್ಯ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗುತ್ತಿದೆ. ಕಾಮಗಾರಿ ವೇಗವನ್ನು ಹೆಚ್ಚಿಸಲು, ನಿರಂತರ ಅನುಸರಣೆ ಮಾಡಿದರೂ ಸಹ ಕುಂಠಿತಗೊಳ್ಳುತ್ತಿದೆ. ಕಾಮಗಾರಿಯನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದ್ರಾಳಿ ರೈಲ್ವೇ ಮೇಲ್ಸುತುವೆ ಸೇತುವೆ ಕಾಮಗಾರಿಯು 2018 ರಿಂದಲೇ ಪ್ರಾರಂಭವಾದರೂ ಈವರೆಗೂ ಸಹ ಪೂರ್ಣಗೊಂಡಿಲ್ಲ. ಇದರಿಂದಾಗಿ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಡಾಗುವುದರ ಜೊತೆಗೆ ಅನೇಕ ಅಪಘಾತಗಳು, ಸಾವು ನೋವುಗಳು ಆಗಿವೆ. ಸಾರ್ವಜನಿಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲವುಗಳಿಗೂ ಜಿಲ್ಲಾಡಳಿತ ಉತ್ತರ ನೀಡಬೇಕು. ಆದರೆ, ಕಾಮಗಾರಿಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಸಾಗದೇ ಪೂರ್ಣಗೊಂಡಿರುವುದಿಲ್ಲ. ಕಳೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ ರಾಜಸ್ಥಾನ್, ತಮಿಳುನಾಡು, ಗುಜರಾತ್, ಉತ್ತರ ಪ್ರದೇಶ್ ಮತ್ತು ಹರಿಯಾಣದ ವಿವಿಧೆಡೆ ಏರ್‌ಕ್ರಾಪ್ಟ್ ಡಿವಿಷನ್, ಹೆಚ್‌ಏಎಲ್ ಮೂಲಕ ನಾನ್ ಎಕ್ಸಿಕ್ಯೂಟಿವ್ ಕೇಡರ್‌ನಲ್ಲಿ 4 ವರ್ಷಗಳ ಅವಧಿಗೆ ಅಧಿಕಾರಾವಧಿ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಐ.ಟಿ.ಐ ಮತ್ತು ಡಿಪ್ಲೋಮಾ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 90 ಹುದ್ದೆಗಳು ಖಾಲಿ ಇದ್ದು, ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಅರ್ಜಿ ಸಲ್ಲಿಸಲು ಮಾರ್ಚ್ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಹಿನ ಮಾಹಿತಿಗಾಗಿ ವೆಬ್‌ಸೈಟ್ hr_ac@hal- india.co.in ಅಥವಾ ಸಹಾಯವಾಣಿ ಸಂಖ್ಯೆ: 0820-2574869 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್‌ನ ಆಶ್ರಯದಲ್ಲಿ ತಾಲೂಕಿನ ಆನಗಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ರೋಟರಾಕ್ಟ್ ಕ್ಲಬ್‌ನ ಸ್ವಯಂಸೇವಕರು ಆರೋಗ್ಯಕರ ಆಹಾರ ಅಭ್ಯಾಸಗಳ ಮಹತ್ವ, ತಂತ್ರಜ್ಞಾನದ ಸರಿಯಾದ ಬಳಕೆ, ಸ್ವಚ್ಛತೆ ಮತ್ತು ಹೈಜೀನ್ ಹಾಗೂ ರಸ್ತೆ ಸುರಕ್ಷತೆ ಕುರಿತಂತೆ ಬೋಧನೋಪಕರಣಗಳ ಸಹಾಯದಿಂದ ಮಕ್ಕಳಿಗೆ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳಿಗೆ ನೈತಿಕತೆ ಮತ್ತು ಮೌಲ್ಯಗಳ ಕುರಿತು ಪ್ರೇರಣೆ ನೀಡಲಾಯಿತು. ಹಲವು ಸಾಂಪ್ರದಾಯಿಕ ಆಟಗಳನ್ನು ನಡೆಸಲಾಯಿತು. ಸ್ವಯಂಸೇವಕರು ಮಕ್ಕಳಿಗೆ ನೋಟು ಪುಸ್ತಕ, ಪೆನ್ನು, ಹಣ್ಣುಗಳನ್ನು ವಿತರಿಸಿದರು. ಇದೇ ಸಂದರ್ಭ ಶಾಲೆಗೆ ಗೋಡೆಯ ಗಡಿಯಾರವನ್ನು ನೀಡಲಾಯಿತು. ಈ ಸೇವಾ ಕಾರ್ಯಕ್ರಮದ ಮೂಲಕ ಸ್ವಯಂಸೇವಕರು ಸೇವೆ ಸಲ್ಲಿಸುವ ಸಂಸ್ಕೃತಿ, ಆರೈಕೆ ಮತ್ತು ಹಂಚಿಕೊಳ್ಳುವ ಮಹತ್ವವನ್ನು ತಿಳಿಯುವ ಅವಕಾಶವನ್ನು ಪಡೆದರು. ಈ ಸಂದರ್ಭದಲ್ಲಿ ಕಾಲೇಜಿನ ರೋಟರಾಕ್ಟ್ ಕ್ಲಬ್‌ನ ಸಂಯೋಜಕರುಗಳಾದ ಸತೀಶ್ ಶೆಟ್ಟಿ ಹೆಸ್ಕತ್ತೂರು ಮತ್ತು ಅವಿತಾ ಕೊರೆಯಾ ಉಪಸ್ಥಿತರಿದ್ದರು.
