ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಡಿಕನ್ಯಾಣ ಶ್ರೀ ಶನೀಶ್ವರ ದೇವಸ್ಥಾನದ ವಠಾರದಲ್ಲಿ ಇದೇ ಬರುವ ಡಿ.21ರಂದು ನಡೆಯಲಿರುವ ತಿರುಮಲ ತಿರುಪತಿ ದಾಸ ಸಾಹಿತ್ಯ ಪ್ರಾಜೆಕ್ಟಿನ ನೇತೃತ್ವದಲ್ಲಿ ಶ್ರೀ ದೇವಿ ಭೂದೇವಿ ಸಹಿತ ಶ್ರೀನಿವಾಸ ದೇವರಿಗೆ ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ ಪುಷ್ಭರಥಕ್ಕೆ ಭಜನಾ ಗುರುಗಳಾದ ವೀಣಾ ಪ್ರಸನ್ನ ಶಾನುಭೋಗ್ ಹಾಗೂ ತಿರುಪತಿಗೆ ಪಾದಯಾತ್ರೆಯ ತಂಡದ ಗುರುಗಳಾದ ಲಕ್ಷ್ಮೀ ನಾರಾಯಣರಾವ್ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಡಾ. ಕೃಷ್ಣ ಕಾಂಚನ್, ಶಂಕರ ಕುಲಾಲ್ಗೋಪಾಲ ಪೂಜಾರಿ ಮತ್ತು ಶ್ರೀನಿವಾಸ ಭಕ್ತರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ವೆಹಿಕಲ್ ಓವರ್ ಪಾಸ್ ಕಾಮಗಾರಿ ಕೈಗೊಂಡಿದ್ದು, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳಲ್ಲಿ ಸುಗಮ ಹಾಗೂ ಸುರಕ್ಷತೆಯಿಂದ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ನಲ್ಲಿ ರೋಡ್ ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕುರಿತು ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಟಪಾಡಿ ಜಂಕ್ಷನ್ನಲ್ಲಿ ಓವರ್ ಪಾಸ್ ಕಾಮಗಾರಿಯನ್ನು ಈಗಾಗಲೇ ಕೈಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗದ ರಸ್ತೆಗಳ ಮೂಲಕ ಸಂಚರಿಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅದರನ್ವಯ ವಾಹನಗಳು ಸಂಚರಿಸುತ್ತಿದ್ದು, ಇದರಿಂದಾಗಿ ಗ್ರಾಮೀಣ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ವಾಹನಗಳ ಸಂಚಾರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ಕೆಲವು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಮುಖಂಡರುಗಳಿಂದ ದೂರುಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಕಲ ಚೇತನ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ಮಂಗಳವಾರ ನಡೆಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರಾದ ರಾಮ ಖಾರ್ವಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಂಜುನಾಥ ಗಾಣಿಗ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರಾದ ಮುತ್ತು ಮೊಗವೀರ, ಬೈಂದೂರು ಬಿ ಆರ್ ಸಿ ಸಮನ್ವಯ ಅಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ, ಬಿ ಆರ್ ಪಿ ಗಳಾದ ಮಂಜುನಾಥ ದೇವಾಡಿಗ, ರಾಜೇಶ್, ಸಿಆರ್ಪಿಗಳಾದ ಗಣೇಶ್ ಪೂಜಾರಿ, ಶೈಲಜಾ, ರವಿಚಂದ್ರ ,ನಾಗರಾಜ್ ಶೆಟ್ಟಿ, ಶಿಬಿರದ ವೈದ್ಯಾಧಿಕಾರಿಗಳಾದ ಡಾ. ನಾಗೇಶ್ ಫಿಸಿಷಿಯನ್, ಕಣ್ಣಿನ ತಜ್ಞರಾದ ಡಾ. ವಿಜಯಲಕ್ಷ್ಮಿ, ಆರ್ಥೋ ಸ್ಪೆಷಲಿಸ್ಟ್ ಡಾ. ಅರವಿಂದ ಹೆಗಡೆ, ಡಾ.ವೀಣಾ ವಾಕ್ ಮತ್ತು ಶ್ರವಣ ತಜ್ಞರು, ಆಡಿಯೋ ಲಾಜಿಸ್ಟ್ ಗಳಾದ ಶಮೀಕ್ಷಾ, ನೆಲಿಶಾ, ಗೌರಿ ಫಿಸಿಯೋಥೆರಪಿಸ್ಟ್ ಶ್ರೇಯ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್ ವೈಶಾಖ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಳಗಾವಿಯ ಸುವರ್ಣಸೌಧದಲ್ಲಿ ಕರ್ನಾಟಕ ಸರಕಾರದ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯೊಂದಿಗೆ ಕೊಡ ಮಾಡುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡದಲ್ಲಿ ಮಂಗಳವಾರ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಯನ್ನು ಧನ್ವಿ ಮರವಂತೆಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಬಾಲ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ್ ಬಬಲೇಶ್ವರ್ ಹಾಗೂ ಹಲವಾರು ಗಣ್ಯರು ಪ್ರಶಸ್ತಿ ಪ್ರದಾನ ಮಾಡಿರುತ್ತಾರೆ . ಈಕೆ ಶಿವ ಮಾಸ್ತಿ ಮನೆ ಜ್ಯೋತಿ ಚಂದ್ರಶೇಖರ್ ಅವರ ಪುತ್ರಿ. ಅವರು ಜನತಾ ಹೆಮ್ಮಾಡಿ ಇಂಡಿಪೆಂಡೆಂಟ್ ಕಾಲೇಜ್ ಅಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಹಳೆ ವಿದ್ಯಾರ್ಥಿಗಳು ಶಾಲೆಯ ಪ್ರತಿಯೊಂದು ಆಗು ಹೋಗುಗಳಿಗೆ ಸ್ಪಂದಿಸಬೇಕು, ಶಾಲೆಯೊಂದಿಗೆ ಗಟ್ಟಿಯಾಗಿ ನಿಲ್ಲಬೇಕು. ಹಳೆ ವಿದ್ಯಾರ್ಥಿಗಳು ಶಾಲೆಯೊಂದಿಗೆ ಉತ್ತಮ ಒಡನಾಟ ಇಟ್ಟಕೊಂಡರೆ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಆಧುನೀಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಗ್ರಾಮೀಣ ಪ್ರದೇಶದ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಡಬೇಕು ಎಂದು ಕೆನರಾ ಬ್ಯಾಂಕಿನ ನಿವೃತ್ತ ಡಿವಿಜನಲ್ ಮ್ಯಾನೇಜರ್ ರತ್ನಾಕರ ಗಾಣಿಗ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಭಾನುವಾರ ನಡೆದ ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ವ್ಯವಸ್ಥಾಪಕ ವಾಸು ದೇವಾಡಿಗ ಮಾತನಾಡಿ, ವಿದ್ಯಾರ್ಥಿಗಳು ಸತತ ಪರಿಶ್ರಮ ಮತ್ತು ವಿಶ್ವಾಸದಿಂದ ಸಾಧಿಸುವ ಛಲದೊಂದಿಗೆ ಉತ್ತಮ ವಿದ್ಯಾರ್ಥಿ ಜೀವನ ರೂಪಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸಾವಿತ್ರಿ ಎಸ್. ಶುಭಾಶಂಸನೆಗೈದರು. ಭಾರತ್ ಕ್ರೆಡಿಟ್ ಕೋ-ಆಪರೇಟಿವ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ಎನ್ನುವುದು ರಂಗಸಜ್ಜಿಕೆಗೆ ಮಾತ್ರ ಸೀಮಿತವಲ್ಲ. ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ ನಾಟಕಗಳಿಂದ ದೊರೆಯುತ್ತದೆ. ಜಗತ್ತಿಗೆ ಭಾರತ ದೇಶ ಪ್ರೇರಣೆಯಾಗಿದೆ. ನಾಟಕಗಳು ಜನಜಾಗ್ರತಿ ಮೂಲಕ ಸಮಾಜದಲ್ಲಿ ಬದಲಾವಣೆ ತಂದಿದೆ. ಕಲೆ ಮತ್ತು ಆಸಕ್ತಿ ಸದಾ ಕ್ರಿಯಾತ್ಮಕ ಚಿಂತನೆ ಮತ್ತು ಸಕರಾತ್ಮಕವಾದ ಪ್ರಗತಿಗೆ ದಾರಿಯಾಗಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಸುರಭಿ ರಿ. ಬೈಂದೂರು ಇದರ ಬೆಳ್ಳಿಹಬ್ಬದ ಸಂಭ್ರಮದೊಂದಿಗೆ ಇಲ್ಲಿನ ಯಡ್ತರೆ ಜೆ.ಎನ್.ಆರ್ ಕಲಾಮಂದಿರದ ಹೊರಾಂಗಣ ವೇದಿಕೆಯಲ್ಲಿ ಆಯೋಜಿಸಲಾದ 8 ದಿನಗಳ ರಾಜ್ಯ ಮಟ್ಟದ ನಾಟಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮುದ್ಯೋಡಿ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ., ಉದ್ಯಮಿ ಇರ್ಷಾದ್ ಸಾಹೇಬ್ ನಾಗೂರು, ಉದ್ಯಮಿ ಬಿಂದುಮನೆ ಕೃಷ್ಣ ಮೊಗವೀರ, ಉದ್ಯಮಿ ಕೃಷ್ಣಯ್ಯ ಮತ್ತೋಡಿ, ಕೃಷ್ಣಮೂರ್ತಿ ಉಡುಪ ಉಪಸ್ಥಿತರಿದ್ದರು. ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂತ್ ಸಂಖ್ಯೆ 61ರಿಂದ 80ರ ಸಮಗ್ರ ಮತದಾರ ಪಟ್ಟಿಯ ಕಾರ್ಯಗಾರ ಕೋಟೇಶ್ವರದ ಶಾರದ ಕಲ್ಯಾಣ ಮಂಟಪದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಅಧ್ಯಕ್ಷತೆಯಲ್ಲಿ ನೆರವೇರಿತು. ಪಕ್ಷದ ವತಿಯಿಂದ ನೇಮಕ ಮಾಡಿದ ಬಿ.ಎಲ್ಎ 2 ಇವರ ಮುಂದಿನ ದಿನದಲ್ಲಿ ಪೂರ್ಣ ಪ್ರಮಾಣದ ಕಾರ್ಯಗಾರ ಮುಗಿದ ತಕ್ಷಣ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್ಎ- 2 ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಕುಂದಾಪುರ ಬಿಜೆಪಿ ಕ್ಷೇತ್ರಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಹೇಳಿದರು. ಕಾರ್ಯಕ್ರಮದ ಬಗ್ಗೆ ಬಿಎಲ್ ಎ 01 ಇದರ ಸಂಚಾಲಕ ರಾಜೇಶ್ ಶೆಟ್ಟಿ ಶಿರೂರು ಮೂರ್ ಕೈ ಅವರು ಬೂತ್ ಮಟ್ಟದಲ್ಲಿ ಮತದಾರರ ಪರಿಷ್ಕಣಿಯ ಕಾರ್ಯದ ವಿಚಾರಧಾರೆಗಳ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆಎಸ್ ಹಾಗೂ ಬಿಎಲ್ಎ 2ನ ಸದಸ್ಯರು ಉಪಸ್ಥಿತರಿದ್ದರು. ಪ್ರಕಾಶ್ ಪೂಜಾರಿ ಬೀಜಾಡಿ ಸರ್ವರನ್ನು ಸ್ವಾಗತಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಯುವಕರ ಮಧ್ಯೆ ಹೊಡೆದಾಟ ನಡೆದು ಓರ್ವ ಕೊಲೆಯಾದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ರವಿವಾರ ತಡರಾತ್ರಿ ಸಂಭವಿಸಿದೆ. ಪಡುಕರೆ ನಿವಾಸಿ ಸಂತೋಷ್ ಮೊಗವೀರ (30) ಕೊಲೆಯಾದವರು. ರವಿವಾರ ರಾತ್ರಿ ಮದ್ಯಪಾನ ಪಾರ್ಟಿ ಮಾಡಿದ್ದ ಯುವಕರ ತಂಡವೊಂದು ಕ್ಷುಲ್ಲಕ ವಿಚಾರವಾಗಿ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ತೀವ್ರ ಹಲ್ಲೆಗೊಳಗಾದ ಸಂತೋಷ್ ಮೊಗವೀರ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರ ಸಹಕಾರದಿಂದ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಕೋಟ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಟಿ. ಹಾಗೂ ಠಾಣಾ ಎಸ್ಸೆ ಮಾಂತೇಶ್ ಜಾಭಗೌಡ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಮುದ್ಯತಾ ಪ್ರಸ್ತುತಿಯಲ್ಲಿ ಡಿಸೆಂಬರ್ 20ರಂದು ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವನ್ಷನ್ ಸೆಂಟರ್ನಲ್ಲಿ ನಡೆಯಲಿರುವ ಡಾ.ಸಿ. ಅಶ್ವಥ್ ಸ್ವರ ಸಂಯೋಜನೆಯ ಗೀತೆಗಳ ಪ್ರಸ್ತುತಿ ‘ಕುಂದಾಪುರದಲ್ಲಿ ಸತ್ಯಾವತಾರ’ಕಾರ್ಯಕ್ರಮದ ಪೋಸ್ಟರ್ ಅನಾವರಣ ಕಾರ್ಯಕ್ರಮ ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವನ್ಷನ್ ಸೆಂಟರ್ನಲ್ಲಿ ನಡೆಯಿತು. ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ. ಕುಂದರ್, ಉದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸಮುದ್ಯತಾ ಸಂಸ್ಥೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುನ್ನುಡಿ ಬರೆಯುವ ಜೊತೆಗೆ ಜನರಿಗೆ ಹೊಸತನ್ನು ಪರಿಚಯಿಸುವಲ್ಲಿಯೂ ಆಸಕ್ತಿ ವಹಿಸುತ್ತಿದೆ. ಈ ಭಾಗದ ಜನರಿಗೆ ರಾಜ್ಯಮಟ್ಟದಲ್ಲಿ ನಡೆಯುವ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯವಾದುದು. ಈ ಮೂಲಕ ಸಮುದ್ಯತಾ ಸಂಸ್ಥೆ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುತ್ತಿದೆ ಎಂದು ಹೇಳಿದರು. ಕುಂದಾಪುರ ಕಲಾಕ್ಷೇತ್ರದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಮಾತನಾಡಿ, ಸಿ.ಅಶ್ವಥ್ ಅವರು ಭಾವಗೀತೆಗಳನ್ನು ಹಾಡಲು ಆರಂಭಿಸಿದ ಬಳಿಕ ಭಾವಗೀತೆಗಳ ಬಗ್ಗೆ ಜನರ ಆಕರ್ಷಣೆ ಜಾಸ್ತಿಯಾಗತೊಡಗಿತು. ಅಶ್ವಥ್ ಅವರ ಸ್ವರದಲ್ಲಿ ಕ್ಲಿಷ್ಟವೆನಿಸುವ ಭಾವಗೀತೆಗಳು ಸುಲಲಿತವಾಗಿ, ಜೀವ ಪಡೆದುಕೊಂಡು ಜನಮನದಲ್ಲಿ ಹಾಸುಹೊಕ್ಕಾಯಿತು. ಅಂಥಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ನೀರಾವರಿ ನಿಗಮದಿಂದ ನಿರ್ವಹಿಸಲ್ಪಡುತ್ತಿರುವ ವರಾಹಿ ನೀರಾವರಿ ಯೋಜನೆಯ ಮೂಲಕ ನಿರ್ಮಾಗೊಂಡು ರೈತರಿಗೆ ವರವಾಗಿರುವ ಸೌಕೂರು ಏತ ನೀರಾವರಿ ಯೋಜನೆ ನೀರು ಹಾಯಿಸುವ ವಿದ್ಯುತ್ ಚಾಲಿತ ಪಂಪುಸೆಟ್ಗಳ ವಿದ್ಯುತ್ ಬಿಲ್ ವರಾಹಿ ನೀರಾವರಿ ಇಲಾಖೆ ಬಾಕಿ ಇಟ್ಟಿರುವ ಕಾರಣ ಮೆಸ್ಕಾಂ ಇಲಾಖೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಪ್ರಕರಣ ಶಾಶ್ವತ ಪರಿಹಾರಗೊಳ್ಳಲು ಸರ್ಕಾರ ಈ ಬಹು ಬೇಡಿಕೆಯ ಯೋಜನೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಬೇಕೆಂದು ಕುಂದಾಪುರ ತಾಲ್ಲೂಕು ರೈತ ಸಂಘದ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದರು. ಹಿಂದೆ ಬಂಗಾರಪ್ಪನವರು ಮುಖ್ಯಮಂತ್ರಿಯಾಗಿರುವಾಗ ಶಕ್ತಿ ಯೋಜನೆಯ ಮೂಲಕ ರೈತರ ಹತ್ತು ಅಶ್ವಶಕ್ತಿ ತನಕದ ಕೃಷಿ ಪಂಪುಸೆಟ್ ಗಳಿಗೆ ಉಚಿತ ವಿದ್ಯುತ್ ಸೌಲಭ್ಯ ನೀಡಿದ ಯೋಜನೆ ಇಂದಿಗೂ ರಾಜ್ಯದ ರೈತಾಪಿ ಬಂಧುಗಳಿಗೆ ವರವಾಗಿದೆ. ಇಂದಿನ ಸೌಕೂರು ಏತ ನೀರಾವರಿ ಯೋಜನೆ ಸಮಸ್ಯೆ ಶಾಶ್ವತ ಪರಿಹಾರವಾಗಬೇಕಾದರೆ ಸರ್ಕಾರ ಮೆಸ್ಕಾಂ ಇಲಾಖೆ ಮೂಲಕ ಈ ಯೋಜನೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಬೇಕು. ಇಲ್ಲದೆ…
