Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ನಾಪತ್ತೆ ಆಗಿದ್ದ ಜೆಟ್‌ ಸ್ಕೀ ರೈಡರ್ ರೋಹಿದಾಸ್ ಯಾನೆ ರವಿ (41) ಅವರ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆ ಆಗಿದೆ. ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಅವರು 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿಗೆ ಮಾಹಿತಿ ನೀಡಿ, ತದನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು. ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ ಗಂಗೊಳ್ಳಿ, ಕೆ. ಎನ್. ಡಿ. ಸಿಬ್ಬಂದಿ ನಿಶಾಂತ್ ಖಾರ್ವಿ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಮೃತ ರೊಹಿದಾಸ್ ಸಹೋದ್ಯೋಗಿಗಳು ಶವವನ್ನು ತೀರದಿಂದ ಸಾಗಿಸಲು ಸಹಕರಿಸಿದರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೂರ್‌ಕೆಲಾ, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ನಿವೃತ್ತ ಎ.ಜಿ.ಎಂ. ಬೆಂಗಳೂರಿನ ಖ್ಯಾತ ಉದ್ಯಮಿ ನೈಲಾಡಿ ದೊಡ್ಡಮನೆ ಮಂಜಯ್ಯ ಶೆಟ್ಟಿ (98) ಡಿ. 14 ರಂದು ನಿಧನರಾದರು. ಕುಂದಾಪುರದ ನೈಲಾಡಿ ಮನೆಯಲ್ಲಿದ್ದು, ಅಕ್ಕ ದಿ. ನೈಲಾಡಿ ಭವಾನಿ ಶೆಡ್ತಿ, ಬಾವ ಚಿತ್ತೂರು ಮಂಜಯ್ಯ ಶೆಟ್ಟಿ ಅವರ ಪ್ರೋತ್ಸಾಹದಿಂದ ಉನ್ನತ ವಿದ್ಯಾಭ್ಯಾಸ ಪಡೆದು ಮದ್ರಾಸ್‌ನ ಅಣ್ಣಾಮಲೈ ಯುನಿವರ್ಸಿಟಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದು ಕುಂದಾಪುರ ತಾಲೂಕಿನ ಬಂಟ್ಸ್ ಸಮಾಜದಲ್ಲಿ ಪ್ರಥಮ ಇಂಜಿನಿಯರ್ ಎಂದು ಸಾಧನೆ ಮಾಡಿದವರು. ರೂರ್‌ಕೆಲಾ ಉಕ್ಕಿನ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಎ.ಜಿ.ಎಂ. ಆಗಿ ನಿವೃತ್ತಿ ಪಡೆದು ಬೆಂಗಳೂರಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದರು. ಬ್ರಹ್ಮಾವರ ಪಡುಬೆಟ್ಟುಬೀಡು ದಿ. ರಾಮಣ್ಣ ಶೆಟ್ಟಿ ಮತ್ತು ನೈಲಾಡಿ ದೊಡ್ಡಮನೆ ಅಕ್ಕಯ್ಯ ಶೆಟ್ಟಿ ಇವರ ಪುತ್ರರಾದ ಜನಾನುರಾಗಿಯಾಗಿದ್ದರು. ಇವರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ ಇದರ ವತಿಯಿಂದ ರೋಟರಿ ಕ್ಲಬ್ ಗಂಗೊಳ್ಳಿ ಇವರ ಸಹಯೋಗದೊಂದಿಗೆ ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಗಂಗೊಳ್ಳಿಯ ಮುಖ್ಯ ಬೀದಿಯಲ್ಲಿ ಜನಜಾಗೃತಿ ಜಾಥಾ ಶನಿವಾರ ನಡೆಯಿತು. ಗಂಗೊಳ್ಳಿಯ ಪೋಸ್ಟ್ ಆಫೀಸ್ ಬಳಿಯಿಂದ ಪ್ರಾರಂಭವಾದ ಜನಜಾಗೃತಿ ಜಾಥಾ ಮುಖ್ಯರಸ್ತೆ ಮೂಲಕ ಎಸ್. ವಿ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ತನಕ ನಡೆಯಿತು. ಜಾಥಾದಲ್ಲಿ ಕರಾವಳಿ ಕಾವಲು ಪೊಲೀಸ್ ಠಾಣೆ ಸಿಬ್ಬಂದಿಗಳು, ಕೆಎನ್‌ಡಿ ಸಿಬ್ಬಂದಿಗಳು, ಎಸ್.ವಿ. ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ, ಉರ್ದು ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಕಿರಿಯ ಪ್ರಾಥಮಿಕ (ರಥಬೀದಿ) ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎಸ್.ವಿ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಟಿ. ವಿಮಲಾ ವಿ.ಪೈ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ಉಪನಿರೀಕ್ಷಕರಾದ ಸುಬ್ರಹ್ಮಣ್ಯ ಹರ್ಕೇರಿ, ಮುಕ್ತಬಾಯಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಮನ್ವಿತಾ ಎಸ್. ಈ ಬಾರಿಯ ಉಡುಪಿ ಜಿಲ್ಲಾ 10ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ಆಯ್ಕೆಯಾಗಿರುತ್ತಾಳೆ. ಈಕೆ ಚಿಕ್ಕ ವಯಸ್ಸಿನಲ್ಲೇ ಕಲೆಯಲ್ಲಿ ಆಸಕ್ತಿ ಹೊಂದಿದ್ದು ತನ್ನ 4ನೇ ವಯಸ್ಸಿಗೆ ಯಕ್ಷಗಾನ ಗೆಜ್ಜೆ ಕಟ್ಟಿ ವೇದಿಕೆ ಏರಿ ನೃತ್ಯ ಪ್ರದರ್ಶನ ನೀಡಿರುತ್ತಾಳೆ. ಭರತನಾಟ್ಯದಲ್ಲಿ ಜ್ಯೂನಿಯರ್ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಸಿನಿಯರ್ ವಿಭಾಗದಲ್ಲಿ ತರಭೇತಿ ಮುಂದುವರಿಸಿದ್ದಾಳೆ. ಭಾಷಣ ಮತ್ತು ಕಾರ್ಯಕ್ರಮ ನಿರೂಪಣೆ ಈಕೆಯ ಪ್ರೀತಿಯ ಕ್ಷೇತ್ರವಾಗಿದ್ದು ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡು ಜಿಲ್ಲಾ ಮಟ್ಟಕ್ಕೂ ಆಯ್ಕೆಯಾಗಿತ್ತಾಳೆ. ಅಲ್ಲದೇ 2023-24 ನೇ ಸಾಲಿನ ಮಕ್ಕಳ ಜಿಲ್ಲಾ ಸಾಹಿತ್ಯ ಸಮ್ಮೇಳನದ  ಉದ್ಘಾಟನಾ ಸಮಾರಂಭದ ನಿರೂಪಣೆಗೆ ಆಯ್ಕೆಯಾಗಿ ಉತ್ತಮ ನಿರೂಪಣೆಯಿಂದ ಜನಮನ ಗೆದ್ದಿದ್ದಾಳೆ. ಕುಂದಾಪುರ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನ “ತಾರ್ಕಣಿ-2024” ಪ್ರಯುಕ್ತ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿರುತ್ತಾಳೆ. ಸ್ವಾತಂತ್ರ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರೈತರನ್ನು ಉದ್ಯಮಿಗಳನ್ನಾಗಿ ಮಾಡಿ, ಅವರ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ, ಸಂಸ್ಕರಿಸಿ, ದೇಶ ಮತ್ತು ವಿದೇಶಗಳಿಗೆ ದೇಶೀಯ ಉತ್ಪನ್ನಗಳನ್ನು ರಪ್ತು ಮಾಡುವ ಮೂಲಕ ವಿದೇಶಗಳಿಗೆ ಪರಿಚಯಿಸುವ ಉದ್ಧೇಶ ಹೊಂದಿದ್ದು, ಇದಕ್ಕಾಗಿ ಕಿರು ಉದ್ಯಮಗಳನ್ನು ಸ್ಥಾಪಿಸಲು ಜಿಲ್ಲೆಯ ಉದ್ದಿಮೆದಾರರು ಮುಂದೆ ಬರಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ರೈತರ ದಿನಾಚರಣೆಯ ಅಂಗವಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಮಾಹಿತಿ ಕಾರ್ಯಾಗಾರ ಹಾಗೂ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ಆಹಾರ ಸಂಸ್ಕರಣಾ ಉದ್ದಿಮೆ ಬಲಪಡಿಸುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಸ್ಥಾಪಿಸುವುದರೊಂದಿಗೆ ಜಿಲ್ಲೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಟೈರ್ ಪಂಕ್ಚರ್ ಶಾಪ್ ಒಂದರಲ್ಲಿ ಬಸ್ಸೊಂದರ ಟೈರ್‌ಗೆ ಗಾಳಿ ತುಂಬಿಸುತ್ತಿದ್ದ ಸಂದರ್ಭ ಟೈರ್ ಸಿಡಿದು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ. ಅಬ್ದುಲ್ ರಶೀದ್ (19) ಗಂಭೀರ ಗಾಯಗೊಂಡ ಯುವಕ ಎಂದು ತಿಳಿದುಬಂದಿದೆ. ಕೋಟೇಶ್ವರದಲ್ಲಿರುವ ಟೈರ್ ಪಂಕ್ಚರ್ ಶಾಪ್ ಗೆ ಖಾಸಗಿ ಶಾಲಾ ಬಸ್ಸೊಂದರ ಟೈರ್ ಪ್ಯಾಚ್ ಗೆ ಬಂದಿತ್ತು. ಈ ವೇಳೆ ಅಬ್ದುಲ್ ರಶೀದ್ ಟೈರನ್ನು ಬಸ್ಸಿನಿಂದ ಕೆಳಗಿಳಿಸಿ ಗಾಳಿ ತುಂಬಿಸಿದ್ದಾರೆ. ಗಾಳಿ ತುಂಬಿಸಿ ರಶೀದ್ ಅಲ್ಲಿಂದ ಎದ್ದೇಳುತ್ತಿದ್ದಂತೆ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಟೈರ್ ಸಿಡಿದ ರಭಸಕ್ಕೆ ರಶೀದ್ ಗಾಳಿಯಲ್ಲಿ ಹಾರಿ ಗಿರಕಿ ಹೊಡೆದು ಬಿದ್ದಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಫೋಟದ ತೀವ್ರತೆಗೆ ಟೈರ್ ಡ್ರಮ್ ಹಾರಿ ಬಸ್ಸಿನ ಮೇಲ್ಛಾವಣಿಯ ಮೇಲೆ ಬಿದ್ದು ನೆಲಕ್ಕುರುಳಿದೆ. ಘಟನೆಯ ಎಲ್ಲಾ ದೃಶ್ಯಾವಳಿಗಳು ಸ್ಥಳೀಯ ಅಂಗಡಿಯವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಡಿ. 28 ರಂದು ನೀಡಲಾಗುವ ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಕುಂದಾಪುರದ ಗುರುಕುಲ ಪಬ್ಲಿಕ್ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿ ಸಾನಿಧ್ಯ ಸಂತೋಷ್ ನಾಯ್ಕ್ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ  ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಶುಭ ಹಾರೈಸಿ, ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಯುವ ಬಂಟರ ಸಂಘದಿಂದ 90 ರ ಸಂಭ್ರಮದಲ್ಲಿರುವ ನಾಡಿನ ಗಣ್ಯಮಾನ್ಯರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರನ್ನು ಅವರ ಸ್ವಗ್ರಹದಲ್ಲಿ ಸಂಘದ ಗೌರವಾಧ್ಯಕ್ಷರಾದ ವತ್ಸಲ ದಯಾನಂದ ಶೆಟ್ಟಿ , ಸಂಘದ ಪೋಷಕರಾದ ವಿಜಯ ಶೆಟ್ಟಿ ಸಟ್ಟಾಡಿ ಮತ್ತು ಸಂಘದ ಸ್ಥಾಪಕಾಧ್ಯಕ್ಷರು ಮತ್ತು ದಶಮ ಸಂಭ್ರಮದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರು ಸನ್ಮಾನಿಸಿ ಗೌರವಿಸಿದರು. ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸುಕೇಶ ಶೆಟ್ಟಿ ಹೊಸ್ಮಠ, ಸುನಿಲ್ ಶೆಟ್ಟಿ ಹೇರಿಕುದ್ರು, ಕೋಶಾಧಿಕಾರಿ ಭರತ ಶೆಟ್ಟಿ ಜಾಂಬೂರು, ಉಪಾಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸುರೇಶ ಶೆಟ್ಟಿ ಕಾರಿಬೈಲ್ ಜೆಡ್ಡು , ಸುಕುಮಾರ ಶೆಟ್ಟಿ ಹೇರಿಕುದ್ರು, ದಿನಕರ ಶೆಟ್ಟಿ ಹರ್ಕಾಡಿ, ಸುರೇಂದ್ರ ಶೆಟ್ಟಿ ಗುಳ್ವಾಡಿ, ರೋಷನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷರಾದ ಡಾ. ಚೇತನ ಕುಮಾರ್ ಶೆಟ್ಟಿ ಕೊವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದಶಮ ಸಂಭ್ರಮದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಆದ್ಯತಾ ಸಂಸ್ಥೆಯು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಯ್ಕೆಗಾಗಿ ನಡೆಸಿದ ಪರೀಕ್ಷೆಯಲ್ಲಿ ಡಾ. ಕೌಶಿಕ್ ಡಿ. ಎಸ್ ಕ್ರಿಟಿಕಲ್ ಕೇರ್ ಮೆಡಿಸಿನ್‌ನಲ್ಲಿ ಮೂರು ವರ್ಷಗಳ ಪದವಿಗಾಗಿ ಪ್ರಥಮ ಸ್ಥಾನದಲ್ಲಿ ಆಯ್ಕೆಯಾಗಿರುತ್ತಾರೆ. ಈ ಹಿಂದೆ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಭುವನೇಶ್ವರದಲ್ಲಿ ಎಂಡಿ ಪದವಿ ಮುಗಿಸಿ ನವದೆಹಲಿಯ ಏಮ್ಸ್‌ನಲ್ಲಿ ಸೇವೆ ಸಲ್ಲಿಸಿದ್ದರು. ಈಗ ಸಂಜಯ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ ಲಕ್ನೋದಲ್ಲಿ ಸ್ನಾತಕೋತ್ತರ ಲಕ್ನೋದಲ್ಲಿ ಕ್ರಿಟಿಕಲ್ ಕೇರ್ ಮೆಡಿಸಿನ್ ಡಿಪ್ಲೊಮಾ ಕೋರ್ಸ್‌ಗೆ ಆಯ್ಕೆಪಟ್ಟಿಯಲ್ಲಿ ಪ್ರಥಮವಾಗಿ ಆಯ್ಕೆಯಾಗಿದ್ದರು. ‌ಇವರು ನಿವೃತ್ತ ಉಪನಿರ್ದೇಶಕರಾದ ದಿವಾಕರ ಶೆಟ್ಟಿಯವರ ಪುತ್ರರಾಗಿದ್ದು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡುಗಿಳಿಯಾರಿನ ಹಳೆ ವಿದ್ಯಾರ್ಥಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಗ್ರಾಮದ ಕಯ್ಯಾಣಿ ಎಂಬಲ್ಲಿ ವಿದ್ಯುತ್ ಕಂಬದಿಂದ ಬಿದ್ದು ಶೇಡಿಮನೆ ಗ್ರಾಮದ ನಿವಾಸಿ ಲಕ್ಷ್ಮಣ(30) ಅವರು ಮೃತಪಟ್ಟಿದ್ದಾರೆ. ಕಯ್ಯಾಣಿಗೆ ಹೋಗುವ ರಸ್ತೆಯ ಬಳಿ ರಜನೀಶ್ ಹಾಗೂ ಇತರರೊಂದಿಗೆ ಹೊಸದಾಗಿ ನಿಲ್ಲಿಸಿದ ವಿದ್ಯುತ್ ಕಂಬಗಳಿಗೆ ಲೈನ್ ಕೆಲಸವನ್ನು ಮಾಡಲು ಅವರು ಕಂಬ ಹತ್ತಿದ್ದು ಶನಿವಾರ ಸಂಜೆ ಒಮ್ಮೆಲೆ ಅವರಿಗೆ ಫಿಡ್ಸ್ ಕಾಯಿಲೆ ಕಾಣಿಸಿಕೊಂಡು ಜೋರಾಗಿ ಕಿರುಚಿ ಅಂದಾಜು 21 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದಿದ್ದಾರೆ. ಕೂಡಲೆ ಇತರೆ ಕೆಲಸಗಾರರು ಉಪಚರಿಸಿ 108 ಆಂಬ್ಯುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಫಿಡ್ಸ್ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಸಹೋದರ ರಾಮ ನೀಡಿದ ದೂರಿನಂತೆ ಶಂಕರನಾರಾಯಣ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More