Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನರ್‌ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಸುರಿದು ರಸ್ತೆ, ವಿದ್ಯುತ್ ಕಂಬ ಸೇರಿದಂತೆ ಮತ್ತಿತರ ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆಯಾಗಿದ್ದು, ಅವುಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದರು. ಯಾವುದೇ ಇಲಾಖೆಗಳು ಈಗಾಗಲೇ ಆಗಿರುವ ಮನೆಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇರಿಸಿಕೊಳ್ಳಬಾರದು. ಶಾಲೆ, ಅಂಗನವಾಡಿ ಹಾಗೂ ರಸ್ತೆ ತುರ್ತು ದುರಸ್ಥಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ತ್ವರಿತಗತಿಯಲ್ಲಿ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದ ಅವರು, ತಹಶೀಲ್ದಾರರುಗಳು ಕಾಮಗಾರಿಗಳನ್ನು ಸ್ಥಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ರಾ.ಹೆ. 66ರಲ್ಲಿ ಇನ್ನೋವಾ ಕಾರಿಗೆ ಹಿಂದಿನಿಂದ ಅತೀ ವೇಗವಾಗಿ ಬಂದ ಇನ್ಸುಲೇಟ‌ರ್ ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ಕೇರಳ ಕಡೆಗೆ ಏಳು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಬುಧವಾರ ಮಧ್ನಾಹ್ನದ ವೇಳೆಗೆ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ಬರುತ್ತಿದ್ದಂತೆ ಕಾರಿನಲ್ಲಿದ್ದವರು ದೇವಸ್ಥಾನಕ್ಕೆ ತೆರಳುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಅದರಂತೆ ಚಾಲಕ ಕಾರನ್ನು ಹಿಂದಕ್ಕೆ ಚಲಾಯಿಸಿಕೊಂಡು ಬರುತ್ತಿದ್ದರು. ಈ ವೇಳೆ ಗೋವಾದಿಂದ ಕೆರಳ ಕಡೆಗೆ ಸಾಗುತ್ತಿದ್ದ ಇನ್ಸುಲೇಟರ್ ವಾಹನ ಇನ್ನೋವಾ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟರ್‌ ವಾಹನ ಪಲ್ಟಿಯಾಗಿ ಬಿದ್ದಿದೆ. ಸ್ಥಳೀಯರ ಸಹಕಾರದಿಂದ ಗಾಯಾಗಳುಗಳನ್ನು ತಕ್ಷಣ ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಗಂಭೀರ ಗಾಯಗೊಂಡ ನಾಲ್ವರನ್ನು ಮಣಿಪಾಲದ ಆಸ್ಪತ್ರೆಗೆ, ಸಣ್ಣಪುಟ್ಟ ಗಾಯಗೊಂಡವರನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿಜೂರು ಗ್ರಾಮದ ಹೊಳೆತೋಟ ಎಂಬಲ್ಲಿ ದೊಟ್ಟಮ್ಮಜ್ಜಿ ಕುಟುಂಬಕ್ಕೆ ನಿರ್ಮಿಸಿಕೊಡಲಾದ ʼಶ್ರೀ ವರಲಕ್ಷ್ಮೀ ನಿಲಯʼ ಉಚಿತ ಮನೆಯನ್ನು ಬುಧವಾರ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ನೂತನ ಗೃಹವನ್ನು ಹೊಸನಗರ ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಯೋಗೀಂದ್ರ ಸ್ವಾಮೀಜಿ ಅವರು ಉದ್ಘಾಟಿಸಿದರು. ಹೊಸದಿಗಂತದ ಸಿಇಓ ಪಿ.ಎಸ್. ಪ್ರಕಾಶ್ ಮನೆಯ ಕೀಲಿಕೈಯನ್ನು ಕುಟುಂಬಿಕರಿಗೆ ಹಸ್ತಾಂತರಿಸಿದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಪ್ರಾಸ್ತಾವಿಕ ಮಾತನಾಡಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಶೈಕ್ಷಣಿಕ, ಸಾಮಾಜಿಕ ಧಾರ್ಮಿಕ ಸೇವಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಈ ತನಕ ಒಟ್ಟು 16 ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಹೊರರಾಜ್ಯಗಳಲ್ಲಿಯೂ ಟ್ರಸ್ಟ್ ಮೂಲಕ ವಿವಿಧ ಸೇವಾ ಕಾರ್ಯವನ್ನು ಮಾಡಲಾಗುತ್ತಿದೆ. ಸೇವೆಯಲ್ಲಿಯೇ ಆತ್ಮತೃಪ್ತಿ ಇದೆ ಎಂಬುದನ್ನು ಕಂಡುಕೊಂಡಿದ್ದೇನೆ ಎಂದರು. ಈ ವೇಳೆ ನಿವೃತ್ತ ಮುಖ್ಯೋಪಧ್ಯಾಯ ವಿಶ್ವೇಶ್ವರ ಅಡಿಗ, ಬಿಜೆಪಿ ಬೈಂದೂರು ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸಮೃದ್ಧ ಜನಸೇವಾ ಚಾರಿಟೇಬಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಐಸಿಎಸ್‌ಐ (IಅSI)2024 ನವೆಂಬರ್‌ನಲ್ಲಿ ನಡೆಸಿದ ಸಿ.ಎಸ್.ಇ.ಇ.ಟಿ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಕೀರ್ತನ್ ಎಸ್. ಶೆಟ್ಟಿ (126), ಪವಿತ್ರ ಪ್ರಭು (121), ಗಗನ್ ಟಿ.ವೈ (119), ಅದಿತಿ (119), ಗ್ಲೆನಿಶಾ ಎಸ್ (115), ಯಶಸ್ ಆರ್(114), ಸೃಷ್ಟಿ ಎನ್ ಪೂಜಾರಿ (112), ಸೃಷ್ಟಿ ಅಶೋಕ್ (108), ನಿಹಾರಿಕಾ ಎಸ್.ಎಂ (106), ಚಿನ್ಮಯಿ ಹೊಳ್ಳ (104), ಪ್ರಥ್ವಿಕ್ ಶೆಟ್ಟಿ (104), ಚಂದನಾ ವೈ (100), ನಿಶಿತಾ (100), ರಾಹುಲ್ ಹೆಚ್.ಎಸ್ (100), ಶಿವಾತ್ಮಜ (100), ದೀಶ್ಮಾ (100), ಕಾವ್ಯ (100), ಸಂಜನಾ ವಿ. (100), ವೀರವರ್ಧನ್ ರೆಡ್ಡಿ(100) ಮೊದಲ ಪ್ರಯತ್ನದಲ್ಲಿ ಉತ್ತಮ ಅಂಕದೊಂದಿಗೆ  ಉತ್ತೀರ್ಣರಾಗಿದ್ದಾರೆ.ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ, ಪ್ರಾಂಶುಪಾಲರು ಡಾ. ಕುರಿಯನ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲರು ಮಹಮ್ಮದ್‍ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥಅಶೋಕ್ ಹಾಗೂ ಸಿ.ಎಸ್ ಸಂಯೋಜಕರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಬ್ರಹ್ಮಾವರ ತಾಲೂಕಿನ ನಂಚಾರು ಗ್ರಾಮದ ನಿವಾಸಿ, ಸುರೇಂದ್ರ ಅವರ ಪುತ್ರಿ ಶ್ರುತಿ (16) ಭಾನುವಾರದಂದು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಅವರು ಮಧ್ಯಾಹ್ನದ ಬಳಿಕ ತೋಟದಲ್ಲಿರುವ ತೆಂಗಿನಕಾಯಿ ಹೆಕ್ಕಲು ಹೋಗಿದ್ದರು. ಸಂಜೆಯಾದರು ಮನೆಗೆ ಬಂದಿರಲಿಲ್ಲ. ನ.18ರಂದು ಹುಡುಕಾಡಿದಾಗ ತೋಟದ ನಡುವಿನಲ್ಲಿರುವ ಆವರಣವಿಲ್ಲದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರಬಹುದೆಂದು ಹೇಳಿದರು. ಈ ಬಗ್ಗೆ ಕೋಟ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ನಡೆದ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಹರಾ ಗಂಗೊಳ್ಳಿ ತಂಡವು ವಾರಿಯರ್ಸ್‌ ಗಂಗೊಳ್ಳಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಸಮಾರಂಭದಲ್ಲಿ ಪತ್ರಕರ್ತ ಬಿ. ರಾಘವೇಂದ್ರ ಪೈ ಮತ್ತು ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರು ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. 6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್‌ನ ಮನೋಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ್ ಮತ್ತು ಎಸ್.ವಿ. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಅವರನ್ನು ಗೌರವಿಸಲಾಯಿತು. ಸಂಘದ ಸದಸ್ಯರಾದ ಲಿಪ್ಟನ್ ಒಲಿವೇರಾ, ರಾಮ ಪೂಜಾರಿ, ನಿಶಾಕಾಂತ್, ಚೇತನ್ ಆರ್ಕಾಟಿ, ಶಶಿಕಾಂತ್ ಪೂಜಾರಿ, ಕೌಶಿಕ್ ಪೂಜಾರಿ, ಪ್ರಾರ್ಥನಾ ಪೈ, ಶ್ರಾವ್ಯ, ದೀಪ್ತಿ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಎಸ್‌ಇಇಟಿ -ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು  ಪ್ರಥಮ ಹಂತದಲ್ಲಿಯೇ ಅಪ್ರತಿಮಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳಾದ ಧೀರಜ್ ಶೇಟ್, ಸುಜನ್ ಎಸ್.ಪಿ, ಅರ್ಚನ್ ಕುಮಾರ್, ಮೈತ್ರಿ, ಅಕ್ಷೋಭ್ಯ, ವಿಶ್ಮಿತಾ, ಸ್ಪಂದನ, ಶಾಶ್ವತ್ ಶೆಟ್ಟಿ, ಕೌಶಿಕ್ ಶೆಟ್ಟಿ ಸಿಎಸ್‌ ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಜನತಾ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಈ ಸಾಧನಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಕೃಷಿ ಮತ್ತು ವೈದ್ಯಕೀಯ (ಸ್ಟೀಮ್) ವಿಷಯಗಳ ಸಂವಹನಕ್ಕೆ ದಿವ್ಯಾಂಗ ವ್ಯಕ್ತಿಯ ಅತ್ಯುತ್ತಮ ಪ್ರಯತ್ನಗಳನ್ನು ಗುರುತಿಸುವ ಉದ್ದೇಶದಿಂದ ಕೆ.ಎಸ್.ಟಿ.ಎ ವಾರ್ಷಿಕ ಬಹುಮಾನ (ದಿವ್ಯಾಂಗ) ಕ್ಕೆ ಅರ್ಹರಿಂದ ಅರ್ಜಿ ಹಾಗೂ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ರ ಜನವರಿ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ,.ಉಡುಪಿ: ನವೆಂಬರ್ 19 ರಿಂದ ಡಿಸೆಂಬರ್ 10 ರವೆರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಸದರಿ ದಿನಾಚರಣೆ ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ಪ್ರತಿನಿತ್ಯ ನಿರಂತರವಾಗಿ ಶೌಚಾಲಯಗಳನ್ನು ಬಳಸುವಂತೆ ಜನಸಾಮಾನ್ಯರಿಗೆ ಪ್ರೇರೇಪಿಸುವ ಉದ್ದೇಶದಿಂದ ಪ್ರತಿವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಗುತ್ತಿದೆ ಎಂದರು. ವಿಶ್ವ ಶೌಚಾಲಯ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಪ್ರಸಕ್ತ ವರ್ಷ ನಮ್ಮ ಶೌಚಾಲಯ ನಮ್ಮ ಗೌರವ ಎಂಬ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಸ್ರೂರು  ಶ್ರೀ ಮಹಾಲಸಾ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಪುನಃ ಪ್ರತಿಷ್ಠಾ ರಜತ ಮಹೋತ್ಸವವು ಡಿ.15 ರಿಂದ ಡಿ.18ರ ತನಕ ನಡೆಯಲಿದೆ. ಡಿ.18ರಂದು ಶ್ರೀದೇವಿಗೆ ಸಹಸ್ರಾಧಿಕ ಅಷ್ಟೋತ್ತರ ಶತ ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕವು ಶ್ರೀ ಕಾಶೀ ಮಠಾಧೀಶ ಶೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದರ ಅಮೃತ ಹಸ್ತಗಳಿಂದ ನೆರವೇರಲಿದೆ. ಈ ಕುರಿತು ಗುರುವರ್ಯರು ತಮ್ಮ ಚೇಂಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳ ಮೊಕ್ಕಾಮಿನಲ್ಲಿ ನ.18ರಂದು ಆಮಂತ್ರಣ ಪತ್ರಿಕೆಯನ್ನು ವಿದ್ಯುಕ್ತವಾಗಿ ಬಿಡುಗಡೆಗೊಳಿಸಿ ಮಹೋತ್ಸವಕ್ಕೆ ಚಾಲನೆಯೊಂದಿಗೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಬಸ್ರೂರು ದೇವಾಲಯದ ಧರ್ಮದರ್ಶಿ ಮಂಡಳಿಯ  ಟಿ. ನಾರಾಯಣ ಎಂ. ಪೈ ಮಣಿಪಾಲ, ದಿನಕರ ಭಗವಂತ ಶೆಣೈ ಕುಂದಾಪುರ, ಕೆ. ಗೋಕುಲ್ ದಾಸ್ ಪೈ ಮಣಿಪಾಲ, ಎಸ್. ಗೋಪಾಲಕೃಷ್ಣ ಪೈ ಕುಂದಾಪುರ, ಡಾ. ಎಂ. ವಿಶ್ವನಾಥ ಪೈ ಉಡುಪಿ, ಎಸ್. ಪ್ರಭಾಕರ್ ಪೈ, ಬಾರ್ಕೂರು, ವೇ|  ಚೇಂಪಿ ಶ್ರೀಕಾಂತ್ ಭಟ್, ಚೇಂಪಿ ದೇವಳದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರಿನ…

Read More