ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಅಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದ ಮುರುಗಾ ಮಠದಲ್ಲಿ ನಡೆದ 19ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು 7ನೇ ರಾಜ್ಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಛಾಯಾ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕುಂದಾಪುರದ ಎಚ್ಎಮ್ಎಮ್ ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿರುವ ಕೋಡಿಯ ವಿಶ್ವನಾಥ ಮುನ್ನ ಹಾಗೂ ರಜನಿ ದಂಪತಿಯ ಪುತ್ರಿ. ಈಕೆ ಪ್ರಸನ್ನ, ಮಹಾಲಕ್ಷ್ಮೀ, ದೀಪಾ ಅವರಿಂದ ತರಬೇತಿ ಪಡೆದಿರುತ್ತಾಳೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಗ್ರಾಮೀಣ ಐ. ಟಿ ಕ್ವಿಜ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪುನೀತ್ ಆಚಾರ್ಯ, ದಿಲೀಪ್ ಡಿ.ಕೆ, ಅಬು ಸಲಾಮ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ಕಳ್ಳತನಕ್ಕೆ ವಿಫಲಯತ್ನ ನಡೆಸಿದ್ದ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಇಂದ್ರನಗರ ನಿವಾಸಿ ಮೊಹಮ್ಮದ್ ಹುಸೇನ್ (22) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಬೈಕನ್ನು ಪೊಲೀಸರು ವಶಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಬಹಳಷ್ಟು ಕಾಯಿಲೆಗಳು ಮನುಷ್ಯನನ್ನು ಕಾಡುತ್ತಿದೆ. ಪಾಶ್ಚಿಮಾತ್ಯರ ಅನುಕರಣೆಯಿಂದಾಗಿ ನಮ್ಮ ಜೀವನ ಶೈಲಿಯನ್ನು ಹಾಗೂ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಿದ್ದೇವೆ. ಇಂದಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದ್ದು, ಕಾಯಿಲೆ ರಹಿತವಾಗಿ ಆರೋಗ್ಯವಂತರಾಗಿ ಬದುಕಲು ಕಾಲ ಕಾಲಕ್ಕೆ ಆರೋಗ್ಯ ತಪಾಣೆ ಮಾಡಿಸಿಕೊಳ್ಳುತ್ತಿರಬೇಕು. ದೇಹದ ರೋಗ ನಿರೋಧಕರ ಶಕ್ತಿಯನ್ನು ವೃದ್ಧಿಸಿಕೊಳ್ಳಲು ನಮ್ಮ ಸುತ್ತಮುತ್ತಲು ದೊರೆಯುವ ಔಷಧಿ ಸಸ್ಯಗಳನ್ನು ಆಹಾರ ರೂಪದಲ್ಲಿ ಹಾಗೂ ಸಣ್ಣಪುಟ್ಟ ಕಾಯಿಲೆಗಳಿಗೆ ಮನೆ ಮದ್ದಾಗಿ ಉಪಯೋಗಿಸಬಹುದು ಎಂದು ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ ಉದ್ಯಾವರ ಇದರ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಹೇಳಿದರು. ನಾಯಕವಾಡಿ-ಗುಜ್ಜಾಡಿ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಮಹೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಉಡುಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತ್ರಾಸಿ ವಲಯ ಬೈಂದೂರು ತಾಲೂಕು ಮತ್ತು ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾವುಂದದ ರಾ.ಹೆ-66ರಲ್ಲಿ ಪಾದಾಚಾರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ನಾಯಕನಕಟ್ಟೆ ಸಮೀಪದ ಗೋಳಿಕಟ್ಟೆ ನಿವಾಸಿ ಭದ್ರ (45) ಅಪಘಾತದಲ್ಲಿ ಸಾವನಪ್ಪಿದವರು. ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ತಮ್ಮ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಭದ್ರ ಎಂಬುವವರಿಗೆ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಭದ್ರಾ ಅವರನ್ನು ಗಂಗೊಳ್ಳಿಯ ಇಬ್ರಾಹಿಂ ಅವರಿಗೆ ಕರೆ ಮಾಡಿ ಕುಂದಾಪುರಕ್ಕೆ ಕೊಂಡೊಯ್ಯಲಾಯಿತು. ಆದರೆ ಅದಾಗಲೇ ಭದ್ರ ಮೃತಪಟ್ಟಿದ್ದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗದ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಕಾರ್ಯಗಾರ- ’ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ’ ವಿಎಸ್ ಆಚಾರ್ಯ ಸಭಾಂಗಣದಲ್ಲಿ ಸಮಾರೋಪಗೊಂಡಿತು. ಸಮಾರೋಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಸಂಶೋಧನಾ ಕ್ಷೇತ್ರದ ನಾವಿನ್ಯತೆಗಳ ಕುರಿತು ತಿಳಿದುಕೊಳ್ಳಲು ಆಯೋಜಿಸಿದ ಈ ಕಾರ್ಯಗಾರವು ಹೆಚ್ಚು ಅರ್ಥಪೂರ್ಣವಾಗಬೇಕಾದರೆ, ಭಾಗವಹಿಸಿದ ಫಲಾನುಭವಿಗಳು ತಾವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಗಹನವಾಗಿ ಅಧ್ಯಯನ ನಡೆಸಿ, ಸಂಶೋಧನೆಯನ್ನು ಇನ್ನಷ್ಟು ಮೌಲ್ಯಯುತಗೊಳಿಸಬೇಕು ಎಂದರು. ಇದಕ್ಕೆಲ್ಲಾ ಪ್ರೇರಣೆ ನಮ್ಮೊಳಗೆ ಮೂಡಬೇಕಿದೆ ಎಂದರು. ಜನರು ತಾವು ನಿರ್ಮಿಸಿಕೊಂಡ ಆರಾಮವಲಯದಿಂದ ಹೊರಬರಬೇಕಿದೆ. ಮಾನವ ಸಂಪತ್ತು ಭಾರತದ ದೊಡ್ಡ ಆಸ್ತಿ. ಇದರ ಸದುಪಯೋಗವಾಗಬೇಕಿದೆ ಎಂದರು. ಮೂರು ದಿನಗಳ ಕಾರ್ಯಗಾರದಲ್ಲಿ ಲೇಖನ ಪ್ರಕಟಣೆ, ಕ್ಲಿನಿಕಲ್ ಸಂಶೋಧನೆ, ಜೌಷಧ ಸಂಶೋಧನೆ, ಸಾಹಿತ್ಯ ಸಂಶೋಧನೆ ಹಾಗೂ ಪ್ರಾಣಿ ಪ್ರಯೋಗಗಳು, ಇವೇ ಮುಂತಾದ ವಿಷಯಗಳ ಕುರಿತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಕ್ಷೇತ್ರಕ್ಕೆ ಪ್ರಾಧ್ಯಾನ್ಯತೆ ನೀಡುವುದರೊಂದಿಗೆ, ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಮರ್ಪಕವಾಗಿ ರೈತರುಗಳಿಗೆ ತಲುಪಿಸಿ, ಅವರುಗಳ ಜೀವನಮಟ್ಟವನ್ನು ಇನ್ನಷ್ಟು ಉತ್ತಮಗೊಳಿಸುವ ದೃಷ್ಠಿಯಿಂದ ಕೃಷಿ ಮೇಳವನ್ನು ಆಯೋಜಿಸಲಾಗಿದ್ದು, ರೈತರುಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಮಾಹಿತಿಗಳನ್ನು ಪಡೆದು ತಮ್ಮ ಕೃಷಿ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ದಕ್ಷಿಣ ಕನ್ನಡ, ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಟಿ. ಸಿ. ಎಸ್. ಗ್ರಾಮೀಣ ಐ. ಟಿ.ಕ್ವಿಜ್ -2024 ರ ಸ್ಪರ್ಧೆಯಲ್ಲಿ ಕೋಟೇಶ್ವರ ಯಡಾಡಿ-ಮತ್ಯಾಡಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ತನ್ಮಯ್ ರಾವ್ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರಣ್ಯ ಸಂಸ್ಥೆಯಲ್ಲಿ ಪ್ರಾಥಮಿಕ ತರಗತಿಯಿಂದಲೇ ಐ.ಟಿ. ವಿಷಯಕ್ಕೆ ಸಂಬಂಧಿಸಿದ ವಿಶೇಷ ಬೋಧನೆಯು ಮಕ್ಕಳ ಜ್ಞಾನವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಮತ್ತು ಶಾಲೆಯಲ್ಲಿನ ವಿವಿಧ ರೀತಿಯ ಪಠ್ಯೇತರ ಚಟುವಟಿಕೆಗಳು ಮಕ್ಕಳು ಕಲಿಕೆಯಲ್ಲಿ ಸ್ರಜನಶೀಲವಾಗಿ ಮತ್ತು ಆಸಕ್ತಿದಾಯಕವಾಗಿ ಕಲಿಕೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಿದೆ. ಈಗಾಗಲೇ ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟವನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಜೇತ ವಿದ್ಯಾರ್ಥಿಗೆ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿಗಳಾದ ಭರತ್ ಶೆಟ್ಟಿ, ಮುಖ್ಯ ಶಿಕ್ಷಕರಾದ ಪ್ರದೀಪ್ ಕೆ. ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಯುವ ನಾಯಕ ಶಬ್ಬೀರ್ ಬೈಂದೂರು ನೇಮಕ ಮಾಡಲಾಗಿದೆ. ಬೈಂದೂರು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಶಿಪಾರಸ್ಸಿನ ಮೇರೆಗೆ, ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಸೂಚನೆಯಂತೆ ಉಡುಪಿ ಜಿಲ್ಲಾಧ್ಯಕ್ಷ ಶರ್ಪುದ್ದೀನ್ ಶೇಕ್ ಅವರು ನೇಮಕ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತಾಲೂಕಿನ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾಟೌನ್ಶಿಪ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಇಟ್ಟುಕೊಂಡು ಮಾರಾಡಕ್ಕೆ ಯತ್ನಿಸುತ್ತಿದ್ದ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್ ಜಬ್ಬಾರ್ (27) ಎಂಬಾತನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಗಾಂಜಾ – 2 ಕೆ.ಜಿ 344 ಗ್ರಾಂ ತೂಕ, ಮೌಲ್ಯ ರೂ, 1,87,500, ಸ್ಕೂಟರ್ -1 ಅಂದಾಜು ಮೌಲ್ಯ ರೂ, 1,00,000, ನಗದು ರೂ, 5.810, ಮೊಬೈಲ್ ಪೋನ್ ಅಂದಾಜು ಮೌಲ್ಯ ರೂ. 10,000, ವೆಯಿಂಗ್ ಮಿಶನ್ 1, ರೂ, 1,000, ಚೂರಿ-1, ರೂ, 300ರನ್ನು ಸೇರಿ ಒಟ್ಟು ರೂ, 3.04,610 ಮೌಲ್ಯದ ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಳಾಗಿದೆ.. ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಪವನ್ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾರ್, ಪ್ರವೀಣ್, ವೆಂಕಟೇಶ್, ರಾಜೇಶ್, ಯತೀನ್ ಕುಮಾರ್, ಪ್ರಶಾಂತ್ ಮತ್ತು ಚರಣ್ರಾಜ್ ರವರನ್ನೊಳಗೊಂಡ ತಂಡವು ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು. ಸೆನ್ ಅಪರಾಧ…
