ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕಟ್ಟೆ ಉಳ್ತೂರಿನ ಕೆ. ಸ್ನೇಹಾ ಕುಂದಾಪುರ ಎಂಬಿಬಿಎಸ್ ಮತ್ತು ಎಂಡಿ ಪದವಿಗಳನ್ನು ಯಶಸ್ವಿಯಾಗಿ ಪೂರೈಸಿದ ಈ ಪ್ರದೇಶದ ಎಸ್ಟಿ ಸಮುದಾಯದ ಮೊದಲ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕುಂದಾಪುರದ ಕೊರಗ ಶ್ರೇಯೋಭಿವೃದ್ಧಿ ಸಮಿತಿಯ ಅಧ್ಯಕ್ಷ ವಿ. ಗಣೇಶ್ ಮತ್ತು ಜಯಶ್ರೀ ಶಡಗೇರಿ ಅವರ ಹಿರಿಯ ಪುತ್ರಿ ಸ್ನೇಹ, ಸಮರ್ಪಣೆ ಮತ್ತು ಶೈಕ್ಷಣಿಕ ಶ್ರೇಷ್ಠತೆಯ ಮೂಲಕ ಸ್ಪೂರ್ತಿದಾಯಕ ಮಾರ್ಗವನ್ನು ರೂಪಿಸಿದ್ದಾರೆ. ಅವರು ತಮ್ಮ ಆರಂಭಿಕ ಶಾಲಾ ಶಿಕ್ಷಣವನ್ನು ಅಂಕೋಲಾ ನಿರ್ಮಲ ಹೃದಯ ಶಾಲೆ ಮತ್ತು ಕುಂದಾಪುರದ ಹೋಲಿ ರೋಸರಿ ಶಾಲೆಯಲ್ಲಿ ಪೂರ್ಣಗೊಳಿಸಿದರು, ನಂತರ ಹೆಬ್ರಿಯ ಜವಾಹರ್ ನವೋದಯ ವಿದ್ಯಾಲಯಕ್ಕೆ ತೆರಳಿದರು. ಅವರು ಮೂಡಬಿದ್ರಿಯ ಆಳ್ವಾಸ್ನಲ್ಲಿ ತಮ್ಮ ಪದವಿ ಪೂರ್ವ ಶಿಕ್ಷಣವನ್ನು ಪಡೆದರು. ಸ್ನೇಹಾ ಮಂಗಳೂರಿನ ಎಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಲ್ಲಿ ಎಂಬಿಬಿಎಸ್ ಮುಗಿಸಿದರು ಮತ್ತು ನಂತರ ನವದೆಹಲಿಯ ವೈದ್ಯಕೀಯ ಕಾಲೇಜಿನಲ್ಲಿ ಹೆಚ್ಚಿನ ವೈದ್ಯಕೀಯ ಅಧ್ಯಯನವನ್ನು ಮಾಡಿದರು. ಪಿಎಚ್ಸಿ ಕೋಟಾದಲ್ಲಿ ಒಂದು ವರ್ಷದ ಸೇವೆಯನ್ನು ಪೂರ್ಣಗೊಳಿಸಿದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರು ಇಂದು ಸ್ವಾವಲಂಬಿ ಬದುಕು ಸಾಗಿಸುತ್ತಿದ್ದು, ಅವರ ಆರ್ಥಿಕ ಸ್ಥಿತಿ ಉತ್ತಮಗೊಂಡಿದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಕೋಟದ ಮಾಂಗಲ್ಯ ಮಂದಿರದಲ್ಲಿ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬ್ರಹ್ಮಾವರ ತಾಲ್ಲೂಕು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿಗೆ ಚಾಲನೆ ನೀಡಿ ಮಾತನಾಡಿದರು. ಮದ್ಯವರ್ಜನ ಶಿಬಿರ, ಮದಗಗಳ ಅಭಿವೃದ್ಧಿ ಮುಂತಾದ ಅನೇಕ ಜನಪರ ಯೋಜನೆಗಳು ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸಾಕ್ಷಿಯಾಗಿದೆ. ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಯೋಜನೆಗಳು ಮಹಿಳೆಯರಿಗಾಗಿ ಇದ್ದು, ಅದು ಅವರ ಸಬಲೀಕರಣಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. ಕೋಟ ಅಮೃತೇಶ್ವರಿ ದೇವಸ್ಥಾನದ ಅಧ್ಯಕ್ಷ ಆನಂದ ಸಿ. ಕುಂದರ್ ಮಾತನಾಡಿ, ಗಾಂಧಿಜೀಯವರ ರಾಮರಾಜ್ಯದ ಕನಸು ಇಂದು ವೀರೇಂದ್ರ ಹೆಗ್ಗಡೆ ಅವರ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಗುತ್ತಿದೆ. ಯೋಜನೆಯ ಅನೇಕ ತರಬೇತಿ, ಮಾಹಿತಿ ಕಾರ್ಯಕ್ರಮಗಳಿಂದ ಮಹಿಳೆಯರು ತಮ್ಮ ಕಾಲಮೇಲೆ ನಿಲ್ಲುವಂತಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ‘ ಜನತಾ ಶನಯ – 2K25’ ಎಂಬ ವಾರ್ಷಿಕೋತ್ಸವ ಕಾರ್ಯಕ್ರಮವು ಬಹಳ ವಿನೂತನ ಶೈಲಿಯಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಚಲನಚಿತ್ರ ನಟ ಹಾಗೂ ರಂಗಭೂಮಿ ಕಲಾವಿದರಾದ ರಘು ಪಾಂಡೇಶ್ವರ ಅವರು ಉದ್ಘಾಟಿಸಿ ಮಾತನಾಡಿ, ಮಕ್ಕಳ ಭವಿಷ್ಯದ ಕನಸು ಆರಂಭವಾಗುವುದು ಶಾಲೆಯಲ್ಲಿ ಅಂತಹ ಕನಸು ನನಸಾಗಿಸಲು ವೇದಿಕೆಯಾಗಿ ಇರುವುದು ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆ, ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾಮಾಜಿಕ ಜಾಲತಾಣಗಳು ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿದ್ದು ಈ ನಿಟ್ಟಿನಲ್ಲಿ ಪೋಷಕರು, ಶಾಲೆ ಪ್ರತಿ ಮಗುವಿಗೆ ವೈಯಕ್ತಿಕ ಗಮನ ಹರಿಸಿ ಸ್ಥೈರ್ಯ ತುಂಬಬೇಕು ಎಂದು ಬುದ್ಧಿ ಮಾತನ್ನು ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳ ಸ್ಥಾನದಲ್ಲಿದ್ದ ಕಿರಿಮಂಜೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೇಖರ್ ಖಾರ್ವಿ ಅವರು ಮಾತನಾಡಿ, ಮಕ್ಕಳ ಸಂಭ್ರಮಕ್ಕೆ ಪ್ರೋತ್ಸಾಹ ನೀಡುವ ಸಾಧನೆಗೆ ದಾರಿ ಮಾಡಿಕೊಡುವ ಸಮಾರಂಭ ವಾರ್ಷಿಕೋತ್ಸವ ಕಾರ್ಯಕ್ರಮ ಅದು ಈ ಶಾಲೆಯಲ್ಲಿ ನೂರು ಶೇಕಡದಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಹೈದರಾಬಾದ್: ಅಲ್ಲಿ ನಡೆಯುತ್ತಿರುವ ಬಿಸಿಸಿಐ 19 ವರ್ಷದೊಳಗಿನ ವನಿತೆಯರ ಏಕದಿನ ಟೂರ್ನಿಯ ಮೊದಲ ಪಂದ್ಯದಲ್ಲಿ ನಾಯಕಿ, ಕುಂದಾಪುರ ಮೂಲದ ರಚಿತಾ ಹತ್ವಾರ್ ಸಿಡಿಸಿದ ಭರ್ಜರಿ ಶತಕದ ಸಾಹಸದಿಂದ ಕರ್ನಾಟಕ ತಂಡ ವಿದರ್ಭತಂಡವನ್ನು 29 ರನ್ ಗಳಿಂದ ಮಣಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕದ ಪರ ಆರಂಭಿಕ ಆಟಗಾರ್ತಿ ರಚಿತಾ ಹತ್ವಾರ್ ಅವರು 156 ರನ್ (154 ಎಸೆತ, 21 ಬೌಂಡರಿ) ಗಳೊಂದಿಗೆ ನಾಯಕಿಯ ಆಟವನ್ನು ಆಡಿದರು. ಇವರಿಗೆ ಮೂರನೇ ಕ್ರಮಾಂಕದಲ್ಲಿ ಬಂದ ಶ್ರೇಯಾ ಸಿ. ಚೌಹಾಣ್ 57 ರನ್ (69 ಎಸೆತ, 6 ಬೌಂಡರಿ) ಉತ್ತಮ ಸಾಥ್ ನೀಡಿದರು. ನಿಗದಿತ 50 ಓವರ್ಗಳಲ್ಲಿ ಕರ್ನಾಟಕ ತಂಡ 7 ವಿಕೆಟ್ ಕಳೆದುಕೊಂಡು 284 ರನ್ ಪೇರಿಸಿತು. ವಿದರ್ಭ ಪರ ಧನಶ್ರೀ ಗುಜ್ಜರ್46 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು. ಸವಾಲಿನ ಮೊತ್ತವನ್ನು ಬೆನ್ನತ್ತಿದ ವಿದರ್ಭ ತಂಡವು ಕರ್ನಾಟಕದ ಕರಾರುವಕ್ಕಾದ ಬೌಲಿಂಗ್ ನಿಂದಾಗಿ 48.1 ಓವರ್ಗಳಲ್ಲಿಯೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 50ರ ಸರಣಿಯ ಕಾರ್ಯಕ್ರಮದ ಅಂಗವಾಗಿ ಸಾಧಕ ಕೃಷಿಕರ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಡಿ.16ರ ಮಂಗಳವಾರ ಅಪರಾಹ್ನ 4.30ಕ್ಕೆ ನಡೆಯಲಿದೆ. ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದ ಸಾಧಕ ಕೋಟತಟ್ಟು ಪಡುಕರೆ ಕೆರ್ಜಿಮನೆ ಚಂದ್ರ ಪೂಜಾರಿಗೆ ಕೃಷಿ ಪುರಸ್ಕಾರ ಅವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ವತಿಯಿಂದ ನೀಡುವ ’ಬಾಲಗೌರವ ಪ್ರಶಸ್ತಿʼಗೆ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಕುಂದಾಪುರ ತ್ರಾಸಿ ಗ್ರಾಮದ ಅನುರಾಗ ನಾಯಕ್ ಆಯ್ಕೆಯಾಗಿದ್ದಾರೆ. ಡಿ.16ರಂದು ಬೆಳಗಾವಿಯ ಸುವರ್ಣ ಸೌಧದ (ಗಾಂಧಿ ಪ್ರತಿಮೆ ಹತ್ತಿರ) ಮುಖ್ಯ ದ್ವಾರದ ಬಳಿ ಇರುವ ಸಭಾಭವನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ವಿಕಲಚೇತನ ಪ್ರತಿಭೆಯಾಗಿರುವ ಅನುರಾಗ್ ನಾಯಕ್ ಸಂಗೀತ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಕೋಟ ಶಿವರಾಮ ಕಾರಂತ ಬಾಲಪ್ರತಿಭೆ ಪುರಸ್ಕಾರ ಸಹಿತ ಅನೇಕ ಪ್ರಶಸ್ತಿಯನ್ನು ಹಾಗೂ ಸಮ್ಮಾನಗಳನ್ನು ಪಡೆದುಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪುರಸಭೆಯ ನೆನೆಗುದಿಗೆ ಬಿದ್ದಿರುವ ಒಳಚರಂಡಿ ಯೋಜನೆಯ ಕಾಯಕಲ್ಪಕ್ಕೆ ನಗರಾಭಿವೃದ್ಧಿ ಸಚಿವರು ಹೆಚ್ಚುವರಿ ಅನುದಾನವನ್ನು ನೀಡುವ ಭರವಸೆಯನ್ನು ನೀಡಿರುವುದು ಅತ್ಯಂತ ಸಂತೋಷದ ವಿಚಾರವೆಂದು ಕುಂದಾಪುರ ತಾಲ್ಲೂಕು ರೈತ ಸಂಘದ ಮುಖಂಡ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ. ಆದರೆ ಈಗಾಗಲೇ ಬಹು ನಿರೀಕ್ಷೆಯ ಒಳಚರಂಡಿ ಯೋಜನೆಯು ನಿಗದಿತ ಅವಧಿಯಲ್ಲಿ ಮುಗಿಯದೆ ಇರಲು ಕಾರಣ ವೆಟ್ ವೆಲ್ ಮತ್ತು ಎಸ್ ಟಿ ಪಿ ನಿರ್ಮಾಣಕ್ಕೆ ಸೂಕ್ತ ಸ್ಥಳವನ್ನು ಗುರುತಿಸಿ ಅದು ಖಾಸಗಿ ಸ್ಥಳವಾಗಿದ್ದರೆ ಅದನ್ನು ಖರೀದಿ ಮಾಡಿಯೋ ಇಲ್ಲಾ ಭೂ ಸ್ವಾದಿನ ಪ್ರಕ್ರಿಯೆಗಳಾದ 4(1) ಹಾಗೂ 6(1) ಪ್ರಕಿಯೆಗಳನ್ನು ಮಾಡದೆ ಇದ್ದದ್ದು ಈ ಮಹತ್ವದ ಯೋಜನೆ ಹಿನ್ನಡೆಗೆ ಕಾರಣ. ಅದರ ಜೊತೆ ಇಂದೂ ಕೂಡ ವೆಟ್ ವೆಲ್ ಮತ್ತು ಎಸ್ ಟಿ ಪಿ ನಿರ್ಮಾಣಕ್ಕೆ ಸ್ಥಳ ಗುರುತಿಸಿದ ಭಾಗದ ಸಾರ್ವಜನಿಕರ ವಿರೋಧವಿರುವುದು ಜಿಲ್ಲಾಡಳಿತ ಹಾಗೂ ಸಂಬಂಧ ಪಟ್ಟ ಜನಪ್ರತಿನಿದಿನಗಳಿಗೆ ಹಾಗೂ ಪುರಸಭಾ ಆಡಳಿತಕ್ಕೆ ತಿಳಿದ ವಿಚಾರ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮಾವಿನಕಟ್ಟೆ ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಅಂಪಾರು ಸಂಜಯ್ ಗಾಂಧಿ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಅಂಪಾರು ದೀಪ ಬೆಳಗಿಸುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯೋಪಾಧ್ಯಾಯನಿ ಬೇಬಿ ಶೆಟ್ಟಿ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಕುಶಲ ಶೆಟ್ಟಿ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಉದ್ಯಮಿಗಳಾದ ಹಾಜಿ ಜಿ.ಎಂ. ಚೆರಿಯಬ್ಬ ಸಾಹೇಬ್ ಕ್ರೀಡಾ ಧ್ವಜಾರೋಹಣ ನೆರವೇರಿಸದರು. ಗ್ರಾಮ ಪಂಚಾಯತ್ ಸದಸ್ಯರಾದ ಸುರೇಂದ್ರ ಶೆಟ್ಟಿ ಗುಲ್ವಾಡಿ ಮತ್ತು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂತೋಷ ಪೂಜಾರಿ, ಕ್ರೀಡಾ ಜ್ಯೋತಿ ಬೆಳಗಿಸಿದರು. ಬೈಂದೂರು ವಲಯದ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಪದವಿ ಪೂರ್ವ ಕಾಲೇಜು ಕ್ರೀಡಾ ಸಂಚಾಲಕ ಸುಕೇಶೆಟ್ಟಿ, ಸಿ.ಆರ್.ಪಿ ರವಿಚಂದ್ರ, ನೆರಳಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ನಾರಾಯಣ ಕೊಠಾರಿ, ಮಾವಿನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುರೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೋಷಕರು ತಮ್ಮ ಮಕ್ಕಳನ್ನು ದೈಹಿಕ ಆರೋಗ್ಯದ ಜೊತೆ ಬುದ್ಧಿಮತ್ತೆಯ ಬಗ್ಗೆ ಕಾಳಜಿ ವಹಿಸಬೇಕು. ಮಕ್ಕಳ ವರ್ತನೆ, ಬಾಲ್ಯದಿಂದ ಪ್ರೌಢವಸ್ಥೆಯ ಬದಲಾವಣೆ, ಕಲಿಕೆಮಟ್ಟ, ದೈಹಿಕ ನ್ಯೂನ್ಯತೆ ಮತ್ತು ಆರೋಗ್ಯದ ಬಗ್ಗೆ ಸದಾ ನಿಗಾ ವಹಿಸಬೇಕು. ಮಕ್ಕಳೊಂದಿಗೆ ಅಗಾಗ ಸಮಾಲೋಚನೆ ನಡೆಸಿ ಸಾಂದರ್ಬಿಕ ಮಾಹಿತಿ ಸಲಹೆಯನ್ನು ನೀಡಬೇಕು. ಮೊಬೈಲ್ ಬಳಕೆಯ ದುಷ್ಪರಿಣಾಮದ ಬಗ್ಗೆ ತಿಳಿಸಬೇಕು, ದುಶ್ಚಟಗಳಿಂದ ದೂರವಿದ್ದು, ಓದು ಹಾಗೂ ಕ್ರೀಡೆಯ ಬಗ್ಗೆ ಹೆಚ್ಚು ಗಮನಹರಿಸುವಂತೆ ತಿಳಿಸಬೇಕು ಎಂದು ಪ್ರಸಿದ್ಧ ಮನೋವೈದ್ಯರಾದ ಡಾ. ಪಿ.ವಿ. ಭಂಡಾರಿ ಪೋಷಕರಿಗೆ ಕಿವಿಮಾತು ಹೇಳಿದರು. ಅವರು ಇಲ್ಲಿನ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶೇಷ ಪೋಷಕರ ಸಭೆಯಲ್ಲಿ ವಿಶೇಷ ಉಪನ್ಯಾಸ ನೀಡಿದರು. ಶಾಲೆಯ ಹಿರಿಯ ಮುಖ್ಯೋಪಾಧ್ಯಾಯರಾದ ಶಂಕರ್ ಅವರು ಶಾಲಾ ಶೈಕ್ಷಣಿಕ ಚಟುವಟಿಕೆಗಳು ಮತ್ತು ಶಾಲಾ ಅಭಿವೃದ್ಧಿಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳು, ಪೋಷಕರು, ದಾನಿಗಳು, ಶ್ರೀ ಮೂಕಾಂಬಿಕ ಚಾರಿಟೇಬಲ್ ಟ್ರಸ್ಟ್ ಪಾತ್ರ ಬಗ್ಗೆ ವಿವರಿಸಿದರು. ಸಭೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮಸ್ಕತ್: ಓಮಾನ್ ದೇಶದ ಮಸ್ಕತ್ ನಲ್ಲಿ ಕನ್ನಡ ಸಂಘ ಮಸ್ಕತ್ ಆಯೋಜಿಸಿದ್ದ ಮೂರನೇ ‘ವಿಶ್ವ ಕನ್ನಡ ಹಬ್ಬ’ ದಲ್ಲಿ ಕುವೈತ್ ನಿಂದ ಆಗಮಿಸಿದ ಸುರೇಶ್ ರಾವ್ ನೇರಂಬಳ್ಳಿ ಅವರಿಗೆ, ಕನ್ನಡ ಸೇವೆ ಹಾಗೂ ಸಾಮಾಜಿಕ ಸೇವೆಗಾಗಿ ವಿಶ್ವ ಮಾನ್ಯ ಬಿರುದಿನಿಂದ ಪ್ರಶಸ್ತಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಮ್ಮೇಳನದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್, ಸರ್ವಾಧ್ಯಕ್ಷರಾದ ನಾಡೋಜ ಷಡಕ್ಷರಿ, ನಟಿ ಸುಧಾರಾಣಿ, ನೆನಪಿರಲಿ ಖ್ಯಾತಿಯ ಪ್ರೇಮ್, ನಾಗೇಂದ್ರ ಪ್ರಸಾದ್, ಸು ಫ್ರಮ್ ಸು ಖ್ಯಾತಿಯ ರವಿಯಣ್ಣ, ಕಾಂತಾರ ಖ್ಯಾತಿಯ ಪ್ರಕಾಶ್ ತೂಮಿನಾಡು ರಂತಹ ಹಲವಾರು ಚಲನಚಿತ್ರ ತಾರೆಯರು, ಮೂರನೇ ‘ವಿಶ್ವ ಕನ್ನಡ ಹಬ್ಬ’ ದಲ್ಲಿ ಭಾಗವಹಿಸಿದ್ದರು. ಅದೇ ರೀತಿ ಅನೇಕ ಸಾಹಿತಿಗಳು, ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ಹಲವಾರು ಪತ್ರಕರ್ತ ಮಿತ್ರರು, ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವ ರಹೀಂ ಖಾನ್ ಮತ್ತು ವೆಂಕಟೇಶ್ ಮಾಜಿ ಶಾಸಕ ಮೊಯಿದ್ದೀನ್ ಬಾವ ಕನ್ನಡ ಸಂಘ ಮಸ್ಕತ್ ನ ಅಧ್ಯಕ್ಷರಾದ ಮಂಜುನಾಥ್,…
