ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಳೆದ ಐದು ವರ್ಷಗಳಲ್ಲಿ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಪಿ.ಯು.ಸಿ ಯಿಂದ ಸ್ನಾತಕೋತ್ತರ ಪದವಿ (ವೃತ್ತಿಪರ ಕೋರ್ಸ್ಗಳನ್ನೊಳಗೊಂಡಂತೆ) ವ್ಯಾಸಂಗ ಮಾಡುತ್ತಿರುವ ಕೇಂದ್ರ, ರಾಜ್ಯ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ-ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳಾಗಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು ಉಡುಪಿ ದೂ. ಸಂ: 0820-2521324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ :0820-2521324 ಅಥವಾ ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.23: ನಾವುಂದ ಗ್ರಾಮದ ಪಾಲ್ಮ್ ಗ್ರೋವ್ ಕಾಂಪ್ಲೆಕ್ಸ್ ನಲ್ಲಿದ್ದ ಶ್ರೀ ವಿನಾಯಕ ಟೈಲರ್, ಬಟ್ಟೆ ಹಾಗೂ ಸ್ಟೇಶನರಿ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಸಂಪೂರ್ಣ ಸುಟ್ಟು ಹೋದ ಘಟನೆ ಮಧ್ಯಾಹ್ನ ನಡೆದಿದೆ. ನಾವುಂದದ ಪ್ರತಿಭಾ ವಿಜೇಂದ್ರ ಅರೆಹೊಳೆ ಎಂಬವವರು ಟೈಲರಿಂಗ್ ಜೊತೆಯಲ್ಲಿ ಬಟ್ಟೆ ಹಾಗೂ ಸ್ಟೇಶನರಿಯೊಂದಿಗೆ ಅಂಗಡಿ ನಡೆಸಿಕೊಂಡಿದ್ದರು. ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಶನರಿ ವಸ್ತುಗಳು, ಕಪಾಟು, ಫ್ಯಾನ್ಸಿ ಐಟಂಗಳು, ಹಾಗೂ ಕೌಂಟರ್ನಲ್ಲಿ ಸುಮಾರು 5000 ನಗದು ಇಡಲಾಗಿತ್ತು. ಅಂಗಡಿ ಮಾಲಕಿ ಪ್ರತಿಭಾ ವಿಜೇಂದ್ರ ಅವರು ಮಧ್ಯಾಹ್ನ 12.00ರವರೆಗೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ನಂತರ ದೇವಸ್ಥಾನಕ್ಕೆ ತೆರಳಿದ್ದರು. ಸುಮಾರು 12.45ರ ಹೊತ್ತಿಗೆ ಹೊಗೆ ತುಂಬಿಕೊಂಡದ್ದನ್ನು ಆಸುಪಾಸಿನ ಅಂಗಡಿಯವರು ಹಾಗೂ ಸ್ಥಳೀಯರು ನೋಡಿ ಅಗ್ನಿಶಾಮಕ ಹಾಗೂ ಪೋಲೀಸರಿಗೆ ಫೋನ್ ಮಾಡಿದ್ದರು. ಅಗ್ನಿ ಶಾಮಕದವರು ಆಗಮಿಸಿ ಬೆಂಕಿ ನಂದಿಸುವ ಹೊತ್ತಿಗೆ ಸಂಪೂರ್ಣ ಸುಟ್ಟು ಹೋಗಿದ್ದು ಅಂದಾಜು 3 ಲಕ್ಷಕ್ಕೂ ಮಿಕ್ಕಿ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನಾ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಮಹಿಳೆಯರು/ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಸೇವಾಸಿಂಧು ಪೋರ್ಟಲ್ನಲ್ಲಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಆಗಸ್ಟ್ 27 ರಂದು ನಡೆಯುವ ಪೂರ್ವಭಾವಿ ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷೆಯನ್ನು ನಡೆಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ನಡೆಯುವ ಪೂರ್ವಭಾವಿ ಪರೀಕ್ಷೆಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2023 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗಳು ಆಗಸ್ಟ್ 27 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2 ರಿಂದ ಸಂಜೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಾರಾಪತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿರೂರು ಕ್ಲಸ್ಟ್ರ್ ಮಟ್ಟದ ಪ್ರತಿಭಾ ಕಾರಂಜಿ 2024-25 ಗುರುವಾರದಂದು ಚಂದ್ರಕಾಂತ ಕಲಾವೇದಿಕೆಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೈಂದೂರು ತಹಸಿಲ್ದಾರ ಪ್ರದೀಪ್ ಅವರು ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆ ಹೊರಬರುವ ಒಂದು ವೇದಿಕೆಯಾಗಿದ್ದು ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ನಿವೃತ್ತಿ ಅಂಚಿನಲ್ಲಿರುವ ಆನಂದ್ ಗಾಣಿಗ ಹಾಗೂ ಶಾಲೆಯಿಂದ ವರ್ಗಾವಣೆ ಹೊಂದಿ ಶಿರೂರು ಸಮೂಹ ಸಂಪನ್ಮೂಲ ಹುದ್ದೆಗೆ ಆಯ್ಕೆಗೊಂಡ ಗಣೇಶ್ ಪೂಜಾರಿ ಅವರನ್ನು ಎಸ್ಡಿಎಮ್ಸಿ , ಹಳೆವಿದ್ಯಾರ್ಥಿಸಂಘ, ಶಿಕ್ಷಕರರು ಹಾಗೂ ಊರ ಗ್ರಾಮಸ್ಥರ ಪರವಾಗಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಉದ್ಯಮಿ ಕೇಶವ ಪೂಜಾರಿ, ಸದಾಶಿವ ಡಿ. ಎಸ್ಡಿಎಮ್ಸಿ ಅಧ್ಯಕ್ಷ ಕೃಷ್ಣ ಖಾರ್ವಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ಖಾರ್ವಿ, ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ , ಕ್ಷೇತ್ರ ಸಮನ್ವಯ ಅಧಿಕಾರಿ ಪ್ರದೀಪ್, ನೋಡೆಲ್ ಅಧಿಕಾರಿ ಸತ್ಯನ ಕೊಡೇರಿ, ಗಣಪತಿ ಹೋಬಳಿದಾರ್ …
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರೋಟರಿ ಕ್ಲಬ್ ಕುಂದಾಪುರದ ಅಗಸ್ಟ್ ತಿಂಗಳ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಅಂಗವಾಗಿ ಪ್ರಪ್ರಥಮ ಬಾರಿ ಸದಸ್ಯರಿಂದ ಭೀಷ್ಮ ವಿಜಯ ಪೌರಾಣಿಕ ಯಕ್ಷಗಾನ ಪ್ರದರ್ಶನ ಬಹಳ ಅದ್ದೂರಿಯಾಗಿ ನಡೆದು ಪ್ರೇಕ್ಷಕರ ಮನಸೂರೆಗೊಂಡಿತು. ಹಿಮ್ಮೇಳದಲ್ಲಿ ಭಾಗವತರಾಗಿ ಪ್ರಸನ್ನ ಭಟ್ ಬಾಳ್ಕಲ್. ಮಧುಕರ್ ಹೆಗ್ಡೆ. ಡಾ. ಹರಿಪ್ರಸಾದ್, ಚಂಡೆಯಲ್ಲಿ ಗಣೇಶ್ ಶೆಟ್ಟಿ, ಮದ್ದಲೆಯಲ್ಲಿ ಭರತ್ ಚಂದನ್ ಗಮನ ಸೆಳೆದರು. ಭೀಷ್ಮನಾಗಿ ಕೊಡ್ಲಾಡಿ ಸುಭಾಷ್ಚಂದ್ರ ಶೆಟ್ಟಿ ಪಾತ್ರದ ಗತ್ತು, ಸ್ವರಭಾರದಿಂದ ಪ್ರೇಕ್ಷಕರ ಮೆಚ್ಚುಗೆ ಗಳಿಸಿದರು. ಖ್ಯಾತ ಯಕ್ಷಗಾನ ಮತ್ತು ಕಿರುತೆರೆ ಕಲಾವಿದೆ ನಾಗಶ್ರೀ ಜಿ. ಎಸ್. ವಿಷೇಷ ಅತಿಥಿಯಾಗಿ ಅಂಬೆಯ ಪಾತ್ರದಲ್ಲಿ ತನ್ನ ಅದ್ಬುತ ನಾಟ್ಯ ಮತ್ತು ಅಭಿನಯದ ಮೂಲಕ ಪ್ರೇಕ್ಷಕರ ಕರತಾಡನಕ್ಕೆ ಭಾಜನರಾದರು. ಸಾಲ್ವನಾಗಿ ಸಿಡಿಲಬ್ಬರದಿಂದ ಕೊಡ್ಲಾಡಿ ಅಶೋಕ್ ಶೆಟ್ಟಿ ಗಮನಸೆಳೆದರು. ಪರಶುರಾಮನಾಗಿ ಡಾ. ರಾಜಾರಾಮ್ ಶೆಟ್ಟಿ, ಪ್ರತಾಪಸೇನನಾಗಿ ವಕೀಲರಾದ ರಾಘವೇಂದ್ರ ಚರಣ್ ನಾವಡ, ವೃದ್ದ ಬ್ರಾಹ್ಮಣ ಮತ್ತು ದೇಶಾಧಿಪಾಲ ಭಣ್ಣದ ವೇಷದಲ್ಲಿ ರಾಘವೇಂದ್ರ ಗೋಪಾಡಿ, ದೇಶಾಧಿಪಾಲರಾಗಿ ವೆಂಕಟೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರಂಪರೆಯಿಂದ ಬಂದ ಹೈನುಗಾರಿಕೆ ಕಸುಬನ್ನು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಯುವಜನತೆಯ ಮೇಲಿದೆ. ಹೈನುಗಾರಿಕೆಯನ್ನು ಲಾಭದಾಯಕ ಉದ್ಯಮವನ್ನಾಗಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಬಗೆಯ ಮೌಲ್ಯವರ್ಧಿತ ನಂದಿನಿ ಉತ್ಪನ್ನಗಳ ಮಾರಾಟ, ಪ್ರೋತ್ಸಾಹಧನ, ಗರಿಷ್ಠ ಲಾಭದ ವರ್ಗವಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹೇಳಿದರು. ಅವರು ಗುರುವಾರ ಇಲ್ಲಿನ ಮಿನಿ ವಿಧಾನಸೌಧದ ಆವರಣದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟಿಸಿ ಮಾತನಾಡಿ ಅವಿಭಜಿತ ದ.ಕ ಜಿಲ್ಲೆಯಲ್ಲಿ 732 ಹಾಲು ಉತ್ಪಾದಕರ ಸಂಘಗಳಿದ್ದು, ರೈತರು ಹೈನುಗಾರಿಕೆಯ ಮೂಲಕ ನೀಡುವ ಹಾಲನ್ನು ಸಂಸ್ಕರಿಸಿ ನಂದಿನಿ ಬ್ರ್ಯಾಂಡ್ ಮೂಲಕ ಮಾರಾಟ ಮಾಡಲಾಗುತ್ತಿದೆ. 150ಕ್ಕೂ ಹೆಚ್ಚಿನ ಉತ್ಪನ್ನಗಳನ್ನು ತಯಾರಿಸಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ 1.38ಲೀ ಹಾಲು, 1 ಸಾವಿರ ಲೀ ತುಪ್ಪ, 28…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಏಕತೆಗೆ ಧಕ್ಕೆ ಆಗುವಂತೆ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿದ ರಾಜ್ಯದಲ್ಲಿ ದಂಗೆ ಎಬ್ಬಿಸಲು ಪ್ರೇರೇಪಿಸಿದ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಅಗ್ರಹಿಸಿ ಕುಂದಾಪುರ ಡಿವೈಎಸ್ಪಿ ಅವರ ಕಛೇರಿಯಲ್ಲಿ ಹಾಗೂ ವೃತ್ತ ನೀರಿಕ್ಷಕರ ಕಛೇರಿ ಬೈಂದೂರಿನಲ್ಲಿ ಬೈಂದೂರು ಮಂಡಲದ ಯುವ ಮೋರ್ಚಾದ ಅಧ್ಯಕ್ಷರಾದ ಗಜೇಂದ್ರ ಎಸ್. ಬೇಲೆಮನೆ ಅವರ ನೇತೃತ್ವದಲ್ಲಿ ದೂರನ್ನು ಕೊಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲದ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಕುಂದಾಪುರ ಮಂಡಲದ ಮಾಜಿ ಅಧ್ಯಕ್ಷರಾದ ಶಂಕರ ಅಂಕದ ಕಟ್ಟೆ, ಬೈಂದೂರು ಬಿಜೆಪಿ ಪ್ರಮುಖರಾದ ಕರಣ್ ಪೂಜಾರಿ, ತಲ್ಲೂರು ಪಂಚಾಯತ್ ಅಧ್ಯಕ್ಷರಾದ ಗಿರೀಶ್ ನಾಯ್ಕ್, ಸುರೇಂದ್ರ ಕಾಂಚನ್ ಬೈಂದೂರು ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರದೀಪ್ ಉಪ್ಪುಂದ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಪ್ರಸಾದ್ ಬೈಂದೂರು, ಕಾರ್ಯದರ್ಶಿಯಾದ ಲಕ್ಷ್ಮಿ ರಾಜ ತಲ್ಲೂರು, ರವೀಂದ್ರ ಶೆಟ್ಟಿ, ರವೀಂದ್ರ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದ ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. 2023-24ನೇ ಮಹಾಸಭೆ ಬುಧವಾರ ಹೋಟೆಲ್ ಪರಿಚಯದ ದೇವಕಿ ಸಭಾಭವನದಲ್ಲಿ ನಡೆದಿದೆ. ಸಂಘದ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ಸಹಕಾರಿಯು ರೂಪಾಯಿ 20.44 ಲಾಭಗಳಿಸಿದ್ದು ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲಾಗುತ್ತಿದೆ. ಪ್ರಧಾನ ಕಚೇರಿ ಉಪ್ಪುಂದ ಹಾಗೂ ಬೈಂದೂರು ಶಾಖೆ, ತ್ರಾಸಿ ಶಾಖೆ ಉತ್ತಮ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಬೈಂದೂರು ಶಾಖೆಯ ವ್ಯವಸ್ಥಾಪಕ ನಿರ್ದೇಶಕರಾದ ಜಯರಾಮ ಶೆಟ್ಟಿ, ರಾಘವೇಂದ್ರ ಎಂ. ಪೂಜಾರಿ, ದೇವನ್ ಕೆ. ಪೂಜಾರಿ, ಮಾಲತಿ ಪೂಜಾರಿ, ಪಾರ್ವತಿ ಪೂಜಾರಿ, ಗಿರೀಶ್ ಹೊಳ್ಳ, ಮಾಚಯ್ಯ ಬಿಲ್ಲವ ಉಪಸ್ಥಿತರಿದ್ದರು. ಬೈಂದೂರು ಶಾಖೆಯ ವ್ಯವಸ್ಥಾಪಕ ನಾಗರಾಜ್ ಪಿ. ವಾರ್ಷಿಕ ವರದಿ ವಾಚಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಆರ್. ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ನಿರ್ದೇಶಕರಾದ ಜಯರಾಮ್ ಶೆಟ್ಟಿ ಅವರು ಸ್ವಾಗತಿಸಿದರು. ತ್ರಾಸಿ ಶಾಖಾ ವ್ಯವಸ್ಥಾಪಕ ಪ್ರವೀಣ್ ಆಚಾರ್ಯ ವಂದಿಸಿದರು.
