ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಕೊಂಚ ತಣ್ಣಗಾಗಿದ್ದ ಮಳೆಯ ಪ್ರಭಾವ ಮತ್ತೆ ಮರುಕಳಿಸಿದ್ದು, ಗುರುವಾರ ಮುಂಜಾನೆ ಗಾಳಿ ಸಹಿತ ಭಾರಿ ಮಳೆಯಾಗಿದೆ. ಗಾಳಿ ಮಳೆಗೆ ಮನೆ, ಕೃಷಿ, ತೋಟಹಾಗೂ ಆಸ್ತಿಪಾಸ್ತಿಗಳು ಅಪಾರ ಹಾನಿಯಾಗಿದೆ. ಕುಂದಾಪುರ, ಬೈಂದೂರು, ಹೆಬ್ರಿ ಹಾಗೂ ಬ್ರಹ್ಮಾವರ ತಾಲೂಕಿನಲ್ಲಿ ಗಾಳಿಮಳೆಗೆ ಜನಜೀವನ ತಲ್ಲಣಿಸಿದೆ. ಜುಲೈ 25ರಿಂದ 27ರ ತನಕ ಸಮುದ್ರದಲ್ಲಿ ಭಾರಿ ಗಾಳಿಯ ಜೊತೆಗೆ ಮಳೆಯೂ ಇರಲಿದೆ. ಮೀನುಗಾರಿಕೆಗೆ ತೆರಳದಂತೆ ಎಚ್ಚರಿಸಲಾಗಿದೆ. ಗಾಳಿ ಹಾಗೂ ಮರ ಬಿದ್ದು, ಹಲವು ಮನೆಗಳಿಗೆ ಹಾನಿಯಾಗಿದ್ದು, ರೂ.30ಲಕ್ಷಕ್ಕೂ ಅಧಿಕ ನಷ್ಟ ಅಂದಾಜಿಸಲಾಗಿದೆ. ಕೃಷಿ ತೋಟಗಳಿಗೆ ರೂ.4 ಲಕ್ಷಕ್ಕೂ ಅಧಿಕ ಹಾನಿಯನ್ನು ಅಂದಾಜಿಸಲಾಗಿದೆ. ಅಲ್ಲಲ್ಲಿ ಮೆಸ್ಕಾಂ ಕಂಬಗಳು ನೆಲಕ್ಕುರುಳಿದ ಪರಿಣಾಮ ಹಲವೆಡೆ ವಿದ್ಯುತ್ ಸಂಪರ್ಕ ವ್ಯತ್ಯಗೊಂಡಿದೆ. ಅಧಿಕ ಮಳೆಯ ಹಿನ್ನೆಲೆಯಲ್ಲಿ ಗುರುವಾರ ಶಾಲೆಗಳಿಗೆ ರಜೆ ನೀಡಲಾಗಿತ್ತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಿಕೆಯ ಜೊತೆ ಜೊತೆಗೆ ಮಕ್ಕಳನ್ನು ಸಂಸ್ಕಾರದ ಮೌಲ್ಯಗಳೊಂದಿಗೆ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೆತ್ತವರು ಮತ್ತು ಶಿಕ್ಷಕರ ಜವಾಬ್ದಾರಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಂದಾಪುರದ ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ. ಉಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಮೂರನೇ ವಾರ್ಷಿಕ ಮಹಾ ಸಭೆ , ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರದ ಅಂಗವಾಗಿ ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಕ್ರಮವಾಗಿ ಎಂಟು ಒಂಬತ್ತು ಹತ್ತನೇ ಸ್ಥಾನವನ್ನು ಗಳಿಸಿದ ಹರ್ಷಿತಾ ಎಸ್. ಪೂಜಾರಿ, ನೇಹಾ ಎಸ್ ಕೊಡೇರಿ ಮತ್ತು ಇಂಚರ ಆರ್. ದೇವಾಡಿಗ ಹಾಗೂ ಉತ್ತಮ ಸಾಧನೆ ಮಾಡಿದ ಸನ್ನಿಧಿ ಹೊಳ್ಳ, ದೀಕ್ಷಾ ಪೂಜಾರಿ, ಎಸ್ ಎಸ್ ಎಲ್ ಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ‘ಸಪ್ತಸ್ವರ’ ವೇದಿಕೆಯಲ್ಲಿ “ಕಾನೂನು ಅರಿವು” ಮಾಹಿತಿ ಕಾರ್ಯಕ್ರಮ ಮಂಗಳವಾರದಂದು ಜರುಗಿತು. ಮಾಹಿತಿ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸುಬ್ರಹ್ಮಣ್ಯ ಎಚ್, ಪೊಲೀಸ್ ಉಪನಿರೀಕ್ಷಕರು, ಕಾರ್ಕಳ ಇವರು ‘ ಶಿಕ್ಷಣ ಪಡೆದಾಗ ಜ್ಞಾನ ಮೂಡುತ್ತದೆ. ಆಗ ಸಮಾಜದಲ್ಲಿ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕಲು ಸಾಧ್ಯ’ ಎಂದರು. ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ಸಂತೋಷ್ ಅವರು ಮಾತನಾಡಿ ‘ ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅತ್ಯಗತ್ಯವಾಗಿದೆ ‘ ಎಂದರು. ಸಭಾಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ‘ ಜೀವಿಸಲು ಗಾಳಿ, ನೀರು, ಆಹಾರ ಎಷ್ಟು ಅಗತ್ಯವೋ ಸಮಾಜದಲ್ಲಿ ಬದುಕಬೇಕಾದರೆ ಕಾನೂನಿನ ಅರಿವು ಅಷ್ಟೇ ಅವಶ್ಯಕವಾಗಿದೆ ‘ ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪೊಲೀಸ್ ಇಲಾಖೆಯ ರವೀಂದ್ರ ಹಾಗೂ ಘನಶ್ಯಾಮ್ ಇನ್ನಿತರರು ಉಪಸ್ಥಿತರಿದ್ದರು. ‘ಕಾನೂನು ಅರಿವು’ ಮಾಹಿತಿ ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು, ವಸತಿ ನಿಲಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಶಯದೇವಿಸುತೆ ಮರವಂತೆ (ಜ್ಯೋತಿ ಜೀವನ್ ಸ್ವರೂಪ್) ಅವರನ್ನು ನೇಮಕ ಮಾಡಲಾಗಿದೆ. ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಡಾ. ಎನ್. ಬಾಲಾಜಿ ಅವರು ನೇಮಕ ಮಾಡಿದ್ದಾರೆ. ಅವರು ಆಧ್ಯಾತ್ಮಿಕ ಚಿಂತಕರಾಗಿ, ಸಂಗೀತ-ಸಾಹಿತ್ಯ ಕಲಾ ಲೋಕದಲ್ಲಿ, ಯಕ್ಷಗಾನ ಕ್ಷೇತ್ರದಲ್ಲಿ, ವಿವಿಧ ಪತ್ರಿಕೋದ್ಯಮ ಹಾಗೂ ಹಲವಾರು ಮಾಧ್ಯಮ ವಾಹಿನಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಕಲಾಪ್ರತಿಭೆಗೆ ಹಲವು ಪ್ರಶಸ್ತಿಗಳು ಸಂದಿವೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಇದರ ನೂತನ ಅಧ್ಯಕ್ಷರಾಗಿ ಕತಾರ್ ನಿವಾಸಿ ಸುಬ್ರಹ್ಮಣ್ಯ ಹೆಬ್ಬಾಗಿಲು ಆಯ್ಕೆಯಾಗಿದ್ದಾರೆ. ಸಂಸ್ಥೆಯ ಮಹಾಪೋಷಕರಾಗಿ ವರದರಾಜ್ ಎಂ. ಶೆಟ್ಟಿ, ಪೋಷಕರಾಗಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ಮಣೆಗಾರ್ ಮೀರಾನ್ ಸಾಹೇಬ್ ಅವರು ಮುಂದುವರಿಯಲಿದ್ದಾರೆ. ಸ್ಥಾಪಕ ಅಧ್ಯಕ್ಷರಾದ ಸದನ್ ದಾಸ್ ಅವರು ಮುಖ್ಯ ಸಲಹೆಗಾರರಾಗಿ, ದಿನೇಶ್ ದೇವಾಡಿಗ ಹಾಗೂ ಸುಜಿತ್ ಕುಮಾರ್ ಶೆಟ್ಟಿ ಅವರು ಉಪಾಧ್ಯಕ್ಷರಾಗಿ, ಸುಧಾಕರ ಪೂಜಾರಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಒಂದೂವರೆ ದಶಕಕ್ಕೂ ಹೆಚ್ಚು ಕಾಲ ಕತಾರ್ ದೇಶದಲ್ಲಿ ನೆಲೆಸಿ, ತಮ್ಮ ಸಮಾಜ ಸೇವೆಯಿಂದ ಕತಾರ್ ಕನ್ನಡಿಗ ಸಮುದಾಯ ಹಾಗೂ ಇಡೀ ಭಾರತೀಯ ಸಮುದಾಯದಲ್ಲಿ ತಮ್ಮದೇ ಆದ ಹೆಸರು ಗಳಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಕಾರ್ಯದ ಜೊತೆಗೆ, ಭಾರತೀಯ ಸಾಂಸ್ಕೃತಿಕ ಕೇಂದ್ರ ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಹವರ್ತಿ ಸಂಸ್ಥೆಗಳು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ತಮ್ಮ ಸಾಂಸ್ಕೃತಿಕ ಸೇವೆಗಳಿಗೆ ಹೆಸರುವಾಸಿಯಾಗಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿಯೂ ಸಹ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಹೆಚ್ಚಿನ ಮಾನವ ಜೀವ ಹಾನಿ ಹಾಗೂ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಸೂನ್ ಮುಂಗಾರು ಮಳೆಯು ಆಗಸ್ಟ್ ಕೊನೆಯವರೆಗೂ ಬರಲಿದೆ, ನೆರೆ-ಪ್ರವಾಹವು ಯಾವಾಗ ಬೇಕಾದರೂ ಉಂಟಾಗುವ ಸಾಧ್ಯತೆಗಳಿರುತ್ತವೆ. ಇವುಗಳ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು. ನಗರ ಹಾಗೂ ಗ್ರಾಮೀಣ ಭಾಗದ ತಗ್ಗು ಪ್ರದೇಶಗಳಲ್ಲಿ ಮಳೆಯ ನೀರು ನುಗ್ಗಿ ನೆರೆ ಉಂಟಾಗುವ ಸಾಧ್ಯತೆಗಳಿರುವ ವ್ಯಾಪ್ತಿಯಲ್ಲಿ ಜನಸಂಖ್ಯೆ, ಕುಟುಂಬಗಳನ್ನು ತಕ್ಷಣದಲ್ಲಿಯೇ ಬೇರೆಡೆಗೆ ವರ್ಗಾಯಿಸುವುದು ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಯೋಜನೆಗಳನ್ನು ರೂಪಿಸಿಕೊಂಡು, ಸಮಸ್ಯೆಯಾದಲ್ಲಿ ಕೂಡಲೇ ನೆರವಿಗೆ ಧಾವಿಸಬೇಕು ಎಂದರು. ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ವಾಡಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.4: ಭಾರಿ ಮಳೆ ಹಿನ್ನೆಲೆಯಲ್ಲಿ ಬೈಂದೂರು, ಕುಂದಾಪು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜು ತನಕದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಾಗುತ್ತಿರುವುದರಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಆಯಾ ತಾಲೂಕುಗಳ ತಹಶಿಲ್ದಾರರು ರಜೆ ಘೋಷಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಅವಕಾಶಗಳನ್ನು ಪ್ರೀತಿಸುವಂತಾಗಬೇಕು ಮತ್ತು ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅವಕಾಶದೊಂದಿಗೆ ಅಭಿವೃದ್ಧಿ ಹೊಂದಿದಾಗ ಹೆತ್ತವರು, ಗುರುಗಳು ಮತ್ತು ಸಮಾಜದ ಕಾಳಜಿ ವಹಿಸಬೇಕು. ಆ ಮೂಲಕ ಪಡೆದ ಪದವಿಗೆ ಗೌರವ ದೊರೆಯುವಂತಾಗಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಪತಿ ಪ್ರೊ| ಹೇಮಂತ್ ಕುಮಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಐಕ್ಯೂಎಸಿ ಸಂಯೋಜಿಸಿದ ‘ಗ್ರಾಜುಯೇಷನ್ ಡೇ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಸುಕುಮಾರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಬೇಕಾದರೆ ಶಿಕ್ಷಣವೇ ಮುಖ್ಯ. ಪದವಿ ಪೂರೈಸಿದ ನಂತರ ಉದ್ಯೋಗದೊಂದಿಗೆ ಸಾಮಾಜಿಕ ಕಾಳಜಿಯೊಂದಿಗೆ ವಿದ್ಯಾರ್ಥಿಗಳು ಬದುಕು ರೂಪಿಸಿಕೊಳ್ಳುವಂತಾಗಬೇಕು ಎಂದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಇನ್ನಿತರರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಪ್ರಾಸ್ತಾವಿಸಿ, ಉಪಪ್ರಾಂಶುಪಾಲರಾದ ಡಾ|…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ ನೋಂದಣಿ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. 2022-23ನೇ ಹಾಗೂ ಅನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವವರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ಪದವೀಧರ ನಿರುದ್ಯೋಗಿಗಳಿಗೆ ರೂ 3,000 ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ ರೂ.1,500 ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು. ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ:ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳ 25ನೇ ತಾರೀಕಿನ ಒಳಗಾಗಿ ಆನ್‌ಲೈನ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ. ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತು. ಶಿರಿಯಾರ ಗೋಪಾಲ್ ಕೃಷ್ಣ ಶೆಟ್ಟಿ ಅವರು ಪ್ರಸ್ತುತ ಕಾನೂನು ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು. ರೋಟರಿ ಸಂಸ್ಥೆಯ ಅಧ್ಯಕ್ಷರಾದ ಲಿಯಾ ಕತ್ ಅಲಿ, ರೋಟರಿ ಸಂಸ್ಥೆಯ ಅಸಿಸ್ಟೆಂಟ್ ಗವರ್ನರ್ ಡಾ. ಬಿ. ಆರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.
