Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಸಂಸ್ಥೆ, ಪಿ.ಜಿ.ಡಿ.ಎಚ್.ಪಿ.ಇ ವಿಭಾಗ  ಬೆಂಗಳೂರು, ತಾಲೂಕು ಆರೋಗ್ಯ ಅಧಿಕಾರಿ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೇಶ್ವರ , ರೋಟರಿ ಕ್ಲಬ್ ಕೋಟೇಶ್ವರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಬಡಾಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಹೊಸಬಡಾಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 0-6 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಅಪೌಪ್ಠಿಕತೆಯ ಕುರಿತು ಮಾಹಿತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ .ಪಿ ಗಡಾದ್ ಉದ್ಘಾಟಿಸಿದರು. ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು. ರಾಜ್ಯ ಆರೋಗ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ತೃತೀಯ ಪುಣ್ಯತಿಥಿ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಪುರೋಹಿತರಾದ ಜಿ. ವಿಠಲದಾಸ ಭಟ್ ಧಾರ್ಮಿಕ ವಿಧಿವಿಧಾನ ನೆರವೇರಿಸಿ ಗುರು ಗುಣಗಾನ ಮಾಡಿದರು. ಗಂಗೊಳ್ಳಿಯ ಜಿಎಸ್‌ಬಿ ಸಮಾಜದ ಹತ್ತು ಸಮಸ್ತರು ಹಾಗೂ ಜಿ. ಕೃಷ್ಣಾನಂದ ಆಚಾರ್ಯ ಸ್ಮರಣಾರ್ಥ ಮಕ್ಕಳು ಶ್ರೀಮದ್ ವಿದ್ಯಾಧಿರಾಜ ತೀರ್ಥ ವಡೇರ ಸ್ವಾಮೀಜಿಯವರ ತೃತೀಯ ಪುಣ್ಯತಿಥಿ ಕಾರ್ಯಕ್ರಮ ಸೇವೆಯನ್ನು ಸಮರ್ಪಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಎನ್. ಸದಾಶಿವ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಜಿ. ವೇದವ್ಯಾಸ ಕೆ. ಆಚಾರ್ಯ, ಜಿ. ವೆಂಕಟೇಶ ನಾಯಕ್, ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ, ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಪುರೋಹಿತರು, ಊರಿನ ಹತ್ತು ಸಮಸ್ತರು, ಸೇವಾದಾರ ಕುಟುಂಬಸ್ಥರು, ಸಮಾಜಬಾಂಧವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪತ್ನಿಯೊಂದಿಗೆ ರಿಕ್ಷಾದಲ್ಲಿ ಮನೆಗೆ ತೆರಳುತ್ತಿದ್ದ ಪತಿಯು, ಕಂಡ್ಲೂರು ಸೇತುವೆ ಬಳಿ ಏಕಾಏಕಿ ಹೊಳೆಗೆ ಹಾರಿದ ಘಟನೆ ಮಂಗಳವಾರ ನಡೆದಿದೆ. ಕಾಳಾವರ ಗ್ರಾಮದ ನಿವಾಸಿ ಹರೀಶ್ ಬೋವಿ (40) ನಾಪತ್ತೆಯಾದ ವ್ಯಕ್ತಿ. ಛಾಯಾಗ್ರಾಹಕ ವೃತ್ತಿ ಮಾಡಿಕೊಂಡಿದ್ದ ಹರೀಶ್ ಅವರು ಪ್ರೀತಿಸಿ ಮದುವೆಯಾಗಿದ್ದು, ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಇತ್ತೀಚಿಗೆ ಗಂಭೀರವಾಗಿರುತ್ತಿದ್ದ ಅವರು ಮಂಗಳವಾರ ಬೆಳಿಗ್ಗೆ ಪತ್ನಿಯೊಂದಿಗೆ ಜಗಳವಾಡಿದ್ದು, ಈ ವೇಳೆ ಮಕ್ಕಳನ್ನು ಬಾವಿಗೆ ದೂಡಲೆತ್ನಿಸಿದ್ದರು ಎನ್ನಲಾಗಿದೆ. ಇದರಿಂದ ಆತಂಕಗೊಂಡಿದ್ದ ಅವರ ಪತ್ನಿ ಕಂಡ್ಲೂರು ಠಾಣೆಗೆ ದೂರು ನೀಡಿದ್ದರು. ಪೊಲೀಸರು ಗಂಡ ಹೆಂಡತಿಯನ್ನು ಠಾಣೆಗೆ ಕರೆಯಿಸಿ ಸಮಾಲೋಚನೆ ನಡೆಸಿ ಬಳಿಕ ಆಟೋದಲ್ಲಿ ಮನೆಗೆ ಕಳಿಸಿದ್ದರು. ಠಾಣೆಯಿಂದ ಹಿಂದಿರುವ ವೇಳೆ ಕಂಡ್ಲೂರು ಸೇತುವೆ ಸಮೀಪ ಆಟೋ ಚಾಲಕನಿಗೆ ರಿಕ್ಷಾ ನಿಧಾನಿಸುವಂತೆ ತಿಳಿಸಿದ ಹರೀಶ್, ತಕ್ಷಣ ವಾರಾಹಿ ಹೊಳೆಗೆ ಸೇತುವೆಯಿಂದ ಹಾರಿದ್ದಾರೆ. ►► ಪುನರ್ವಸು ಮಳೆಯಬ್ಬರ: ಕೋಟ, ಬೈಂದೂರು ಭಾಗದಲ್ಲಿ ನೆರೆ. ಕುಂದಾಪುರದ ವಿವಿಧೆಡೆ ಅಪಾರ ಹಾನಿ – https://kundapraa.com/?p=74390 . ಮಾಹಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿರಂತರವಾಗಿ ದಿನಗಳಿಂದ ಸುರಿಯುತ್ತಿರುವ ಪುನರ್ವಸು ಮಳೆಗೆ ಕರಾವಳಿಯ ಜನಜೀವನ ತಲ್ಲಣಿಸಿದೆ. ಜಿಲ್ಲೆಯ ಕೋಟ, ಬನ್ನಾಡಿ, ಬಸ್ರೂರು ಕಂಡ್ಲೂರು, ನಾವುಂದ ಸೇರಿದಂತೆ ವಿವಿಧ ಭಾಗಗಳಲ್ಲಿ ಗಾಳಿ ಸಹಿತ ಮಳೆ, ನೆರೆಯಬ್ಬರಕ್ಕೆ ಕೃಷಿ ಹಾಗೂ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಕೋಟ ಸಮೀಪದ ಬನ್ನಾಡಿ, ಗಿಳಿಯಾರು, ತೆಕ್ಕಟ್ಟೆ ಪ್ರದೇಶ ಜಲಾವೃತವಾಗಿದೆ. ಕೋಟ – ಸಾಯಿಬ್ರಕಟ್ಟೆ ಸಂಪರ್ಕ ರಸ್ತೆ ಕಡಿತವಾಗಿದೆ. ತೆಕ್ಕಟೆ, ಕೋಟೇಶ್ವರ ಭಾಗದಲ್ಲಿಯೂ ನೆರೆಯಬ್ಬರ ಹೆಚ್ಚಿದೆ. ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಳದ ಹೊರಪೌಳಿಗೂ ನೆರೆ ನೀರು ನುಗ್ಗಿದೆ. ನಾವುಂದದ ಸಾಲ್ಬುಡ, ಕಂಡ್ಲೂರು ಭಾಗದಲ್ಲಿ ಸೌಪರ್ಣಾಕಾ ಹಾಗೂ ವರಾಹಿ ನದಿ ತುಂಬಿ ಹರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ನೂರಾರು ಎಕರೆ ಕೃಷಿಭೂಮಿ, ಮನೆಗಳು ಜಲಾವೃತಗೊಂಡಿದ್ದು, ಅಲ್ಲಿನ ವಾಸಿಗಳು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಹಾಲಾಡಿ ಸಮೀಪ ಸೇತುವೆ ಸಂಪರ್ಕ ಕಡಿತಗೊಂಡಿದ್ದರೇ, ಕೆಲ ಗ್ರಾಮಗಳಲ್ಲಿ ರಸ್ತೆಯ ಮೇಲೆಯೇ ನೀರು ರಭಸದಿಂದ ಹರಿದು ರಸ್ತೆ ಸಂಪರ್ಕ ಕೆಲ ಕಾಲ ಕಡಿತಗೊಂಡಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಾಲಾಡಿ ಸಮೀಪದ ಚೋರಾಡಿಯಲ್ಲಿ ಮಳೆ ನೀರಿನ ಅಬ್ಬರಕ್ಕೆ .ಹಾಲಾಡಿ ಮುದೂರು ಸಂಪರ್ಕಿಸುವ ಸೇತುವೆಯ ಸಂಪರ್ಕವೇ ಕಡಿದು ಹೋಗಿದೆ. 28 – ಹಾಲಾಡಿ ಗ್ರಾಮದ ಸೊಸೈಟಿಯಿಂದ ಹಾರ್ರಮಕ್ಕಿ ಮಾರ್ಗದ ಭರಣಿಕೊಳ್ಳಿಯ ಸೇತುವೆಯಾಗಿದ್ದು, ಈ ಭಾಗಕ್ಕೆ ಪ್ರಮುಖ ಸಂಪರ್ಕ ಮಾರ್ಗವಾಗಿತ್ತು. ಎರಡು ವರ್ಷದ ಹಿಂದೆ ಈ ಸೇತುವೆ ನಿರ್ಮಾಣ ಮಾಡಲಾಗಿತ್ತು.ನೀರಿನ ರಭಸಕ್ಕೆ ಸೇತುವೆಯ ಬಳಿ ಸಂಪರ್ಕ ಸಂಪೂರ್ಣ ಕುಸಿದು ನೀರುಪಾಲಾಗಿದೆ. ಎರಡು ಭಾಗದ ಸಂಪರ್ಕ ಕಡಿತಗೊಂಡಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಪಂ ಸಿಇಓ ಪ್ರತೀಕ್‌ ಬಾಯಲ್‌, ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್, ತಹಶಿಲ್ದಾರ್‌ ಶೋಭಾಲಕ್ಷ್ಮೀ ಮೊದಲಾದವರು ಭೇಟಿ ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ, ಉಡುಪಿ ಜಿಲ್ಲಾಸ್ಪತ್ರೆಯ ನೇತೃ ತಜ್ಞ ಡಾ. ನಿತ್ಯಾನಂದ ನಾಯಕ್, ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು. ಕಣ್ಣಿನ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಕಣ್ಣಿನ ರೋಗಗಳ ಬಗ್ಗೆ ಅರಿವು ಮೂಡಿಸಿಕೊಂಡು, ಕಾಲ ಕಾಲಕ್ಕೆ ನೇತ್ರ ತಜ್ಞರ ಮೂಲಕ ಚಿಕಿತ್ಸೆ ಪಡೆದುಕೊಳ್ಳಬೇಕಿದೆ. ಮಧುಮೇಹ, ಬಿಪಿ ಮೊದಲಾದ ಕಾಯಿಲೆ ಇದ್ದವರು ಕಣ್ಣಿನ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕು ಎಂದರು. ನೇತ್ರ ತಜ್ಞ ಡಾ. ಶಮಿತ್, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರಾದ ಬಿ.ರಾಘವೇಂದ್ರ ಪೈ ಮತ್ತು ಲಲಿತಾ ಖಾರ್ವಿ ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆ ಕಲ್ಪನಾ ಶೇರುಗಾರ್ ಸ್ವಾಗತಿಸಿದರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಚಿತ್ರನಟ ಡಾ. ರಮೇಶ್ ಅರವಿಂದ್ ಪ್ರಾಯೋಜಿತ ಉದಯೋನ್ಮುಖ ಸಾಧಕರಿಕೆ ನೀಡುವ ದತ್ತಿ ಪುರಸ್ಕಾರಕ್ಕೆ ಇಬ್ಬರು ಸಾಧಕರು ಆಯ್ಕೆ ಆಗಿದ್ದಾರೆ. ರೂಬಿಕ್ ಕ್ಯುಬ್ ಗಿನ್ನಿಸ್ ದಾಖಲೆಗಾರ ನಾವೀನ್ಯ ರೂಪಕ ಪ್ರತೀಕ ಪೃಥ್ವೀಶ್ ಕೆ. ಚೇರ್ಕಾಡಿ ಹಾಗೂ ಕಿರುಚಿತ್ರಗಳ ನಿರ್ದೇಶಕ, ನಿರ್ಮಾಪಕ, ಚಿತ್ರಕಥೆ-ಸಂಭಾಷಣೆಗಾರ, ಸಾಹಿತಿ ರವೀಂದ್ರ ಶೆಟ್ಟಿ ತಂತ್ರಾಡಿ ಅವರನ್ನು ಆಯ್ಕೆ ಮಾಡಲಾಗಿದ್ದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜುಲೈ 21 ರಂದು ಸಂಜೆ 5 ಗಂಟೆಗೆ ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಸಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ’ಜರ್ನಿಯಿಸಂ’ ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸಮಾಜದಲ್ಲಿ ಪತ್ರಿಕೋದ್ಯಮದ ಪಾತ್ರ ಬಹುಮುಖ್ಯ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗರೂಕರಾಗಿ ಕಾರ್ಯನಿರ್ವಹಿಸಬೇಕು ಎಂದರು. ಕಲಿಕೆಯ ಕುರಿತು ಹುಮ್ಮಸ್ಸಿರಲಿ. ಆಲಸ್ಯ ಬೇಡ. ಶೈಕ್ಷಣಿಕವಾಗಿ ನೀವು ಮಾಡುವ ಕಾರ್ಯಗಳು ಕಲಿಕೆಗೆ ಸಹಕಾರಿಯೇ ಹೊರತು ಹೊರೆಯಲ್ಲ ಎಂದರು. ವ್ಯಕ್ತಿ ಎಂದಿಗೂ ಶಾಶ್ವತವಲ್ಲ ಬದಲಿಗೆ ವ್ಯಕ್ತಿತ್ವ ಮಾತ್ರ ಶಾಶ್ವತ ಆದ್ದರಿಂದ ವಿದ್ಯಾರ್ಥಿಗಳು ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಸಗಳಿಂದ ದೂರವಿರಿ ಎಂದು ಕಿವಿಮಾತು ಹೇಳಿದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗದಿಂದ ತೇರ್ಗಡೆಯಾದ ಹಲವಾರು ವಿದ್ಯಾರ್ಥಿಗಳು ಪತ್ರಿಕೋದ್ಯಮದಲ್ಲಿ ಉತ್ತಮ ಹೆಸರು ಮಾಡಿದ್ದಾರೆ. ಸಮಾಜದಲ್ಲಿ ವೈದ್ಯರು ಜಾತಿ, ಧರ್ಮ, ಲಿಂಗ ಮತ್ತಿತರ ತಾರತಮ್ಯ ಇಲ್ಲದೆ ಕಾರ್ಯ ನಿರ್ವಹಿಸುವುದು ಹೇಗೆ ಅಗತ್ಯವೋ ಹಾಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ : 2024 ಮೇ ನಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ವಿಘ್ನೇಶ್ ಎಸ್. ಬಿ, ಶ್ರದ್ಧಾ ಬಿ. ಸಾಲಿಯಾನ್, ರಕ್ಷಿತಾ, ಪಂಚಮಿ ಕಿಣಿ, ವಂದನಾ ಪೈ, ಶ್ರೀನಿವಾಸ್ ಮಲ್ಯ, ಶೀತಲ್ ಬಾಳಿಗಾ ತೇರ್ಗಡೆ ಹೊಂದಿರುತ್ತಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.15: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 16ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಜಿಲ್ಲೆಯಲ್ಲಿ ಅಧಿಕ ಮಳೆಯಾಗುತ್ತಿದ್ದು, ಜುಲೈ 16ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Read More